ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ



ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಎಲ್ಲಾ ಆಯಾಮಗಳ ಅಭಿವೃದ್ಧಿಯ ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯುಳ್ಳ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ವಿಶೇಷವಾಗಿ 2047ಕ್ಕೆ ‘ವಿಕಸಿತ ಭಾರತ’ ಗುರಿಯೊಂದಿಗೆ ಮುಂದುವರಿಯುತ್ತಿರುವ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿರುವ ಬಜೆಟ್ ಇದಾಗಿದೆ.

ಸಮರ್ಥನೀಯ ಆರ್ಥಿಕ ಪ್ರಗತಿಯೊಂದಿಗೆ ಜನರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ತತ್ವದಡಿ ರೂಪಿಸಿರುವ ಜನಸ್ನೇಹಿ ಕೇಂದ್ರ ಬಜೆಟ್ ನಲ್ಲಿ ಜವಳಿ ಉದ್ಯಮ, ಔಷಧ ಉದ್ಯಮ, ಸಣ್ಣ ಉದ್ದಿಮೆದಾರರ ರಫ್ತುಗಳಿಗೆ ಹೆಚ್ಚಿನ ಪ್ರೋತ್ಸಾಹ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು, ಆದಾಯ ತೆರಿಗೆ ಸರಳೀಕೃತ ಪದ್ಧತಿ ಅಳವಡಿಕೆ, ಉದ್ಯೋಗ ಸೃಷ್ಟಿಯ ಜೊತೆಗೆ ಮೂಲ ಸೌಕರ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಒಟ್ಟಾರೆಯಾಗಿ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ‘ವಿಕಸಿತ ಭಾರತ ಬಜೆಟ್’ ಇದಾಗಿದೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇಡಿನ ರಾಜಕಾರಣ ಮತ್ತು ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಮಹಾತ್ಮ ಗಾಂಧಿ ಹೆಸರು ದುರ್ಬಳಕೆ : ಕುತ್ಯಾರು ನವೀನ್ ಶೆಟ್ಟಿ




ದೇಶದ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮ ಗಾಂಧಿ ಅವರ ಮಾತನ್ನೇ ಪಾಲಿಸದ ಕಾಂಗ್ರೆಸಿಗರು ಸ್ವಾತಂತ್ರ್ಯ ದೊರೆತ 79 ವರ್ಷಗಳ ಬಳಿಕವೂ ಕೇವಲ ಸೇಡಿನ ರಾಜಕಾರಣ ಮತ್ತು ವೋಟ್ ಬ್ಯಾಂಕ್ ಗಾಗಿ ಮಾತ್ರ ಮಹಾತ್ಮ ಗಾಂಧಿ ಅವರ ಹೆಸರನ್ನು ದುರ್ಬಳಕೆ ಮಾಡುತ್ತಿರುವುದು ವಿಷಾದನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಮಹಾತ್ಮ ಗಾಂಧಿ ಅವರ ರಾಮರಾಜ್ಯದ ಪರಿಕಲ್ಪನೆಯೊಂದಿಗೆ ಬಡತನ ಮುಕ್ತ ಸ್ವಾವಲಂಬಿ ಗ್ರಾಮ ನಿರ್ಮಾಣದ ಚಿಂತನೆಯೊಂದಿಗೆ ಬಡವರ, ರೈತರ ಮತ್ತು ಮಹಿಳಾ ಸಬಲೀಕರಣದ ಸಹಿತ ದುಡಿಯುವ ಕೈಗಳಿಗೆ ಉದ್ಯೋಗ ಮತ್ತು ಸುಧಾರಿತ ಆದಾಯ ನೀಡುವ ಜೊತೆಗೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿರುವ ‘ವಿಬಿ-ಜಿ ರಾಮ್ ಜಿ’ ಯೋಜನೆಯಲ್ಲಿರುವ ಮಹಾತ್ಮ ಗಾಂಧಿ ಅವರಿಗೆ ಪ್ರಿಯವಾದ ‘ರಾಮ್’ ಹೆಸರನ್ನು ಕಾಂಗ್ರೆಸಿಗರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿಯೇ ಇಂತಹ ಉದಾತ್ತ ಯೋಜನೆಯನ್ನು ಯಾವುದೇ ಮೌಲ್ಯಯುತ ಕಾರಣವಿಲ್ಲದೆ ಕಾಂಗ್ರೆಸ್ ವಿರೋಧಿಸುತ್ತಿದೆ.

ಹಳ್ಳಿಗಳ ಅಭಿವೃದ್ಧಿಗೆ ಯಾವುದೇ ಪರಿಣಾಮಕಾರಿ ಯೋಜನೆಗಳನ್ನು ರೂಪಿಸಲು ವಿಫಲವಾಗಿರುವ ಕಾಂಗ್ರೆಸ್ ಈ ಹಿಂದೆ ‘ರೋಜ್‌ಗಾರ್‌’ ಯೋಜನೆಯನ್ನು ‘ನರೇಗಾ’ ಎಂದು ಪುನರ್ ನಾಮಕರಣ ಮಾಡಿದೆ. ಬಳಿಕ ಅದನ್ನು ‘ಮನ್ರೇಗಾ’ ಎಂದು ಬದಲಾವಣೆ ಮಾಡಿದೆ. ಕಾಂಗ್ರೆಸ್ ಅದೆಷ್ಟು ಯೋಜನೆಗಳಿಗೆ ನೆಹರೂ ಕುಟುಂಬದ ಹೆಸರನ್ನೇ ಇರಿಸಿದೆ ಎಂಬುದು ಜಗಜ್ಜಾಹೀರಾಗಿದೆ.

ಗ್ರಾಮಾಭಿವೃದ್ಧಿಯ ದೂರದರ್ಶಿತ್ವದ ಚಿಂತನೆಯನ್ನು ಹೊಂದಿರುವ ‘ವಿಬಿ-ಜಿ ರಾಮ್‌ ಜಿ’ ಯೋಜನೆಯಡಿ ಗ್ರಾಮ ಪಂಚಾಯತ್‌ಗಳೇ ಅಭಿವೃದ್ಧಿ ಯೋಜನೆಯನ್ನು ರೂಪಿಸುತ್ತವೆ. ತಂತ್ರಜ್ಞಾನವನ್ನು ಬಳಸಿ ಭ್ರಷ್ಟಾಚಾರಕ್ಕೆ ತಡೆ ಹಾಕಲಾಗುತ್ತದೆ. ಈ ಹಿಂದೆ ಇದ್ದ ವಾರ್ಷಿಕ 100 ದಿನಗಳ ಕೆಲಸವನ್ನು ಇದೀಗ 125 ದಿನಗಳಿಗೆ ವಿಸ್ತರಿಸಲಾಗಿದೆ. ದಿನದ ಕೂಲಿಯನ್ನು (ಸಂಬಳ) ರೂ.174 ರಿಂದ ರೂ.370ಕ್ಕೆ ಏರಿಸಲಾಗಿದೆ. ಪ್ರತಿ ವ್ಯಕ್ತಿಗೆ ಈ ಹಿಂದೆ ಇದ್ದ ವಾರ್ಷಿಕ ಗರಿಷ್ಠ ಮಿತಿಯನ್ನು ರೂ.17,400 ರಿoದ ರೂ.46,250ಕ್ಕೆ ಏರಿಸಲಾಗಿದೆ.

ಇಂತಹ ಉದಾತ್ತ ಯೋಜನೆ ಜಾರಿಯಾದರೆ ಬಿಜೆಪಿ ಜನಪ್ರಿಯತೆ ಇನ್ನಷ್ಟು ಹೆಚ್ಚುತ್ತದೆ ಹಾಗೂ ತ್ರಿಸ್ತರ ಸರಕಾರಗಳಲ್ಲಿ ಒಂದಾಗಿರುವ ಗ್ರಾಮ ಪಂಚಾಯತ್ ಮಟ್ಟದಲ್ಲಿ ‘ವಿಬಿ-ಜಿ ರಾಮ್‌ ಜಿ’ ಯೋಜನೆಯಿಂದ ಅಭಿವೃದ್ಧಿಯ ಹೊಸ ಶಖೆ ಪ್ರಾರಂಭವಾಗಲಿದೆ ಎಂಬುದನ್ನು ಮನಗಂಡಿರುವ ಕಾಂಗ್ರೆಸ್ ನಿರಂತರ ಅಪಪ್ರಚಾರದ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿರುವುದು ಖಂಡನೀಯ. ಜನ ವಿರೋಧಿ, ಅಭಿವೃದ್ಧಿ ವಿರೋಧಿ ನೀತಿಗಳಿಂದ ದೇಶದೆಲ್ಲೆಡೆ ತಿರಸ್ಕೃತಗೊಂಡಿರುವ ಕಾಂಗ್ರೆಸ್ ಗೆ ಜನತೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : 66ನೇ ಭಜನಾ ಮಂಗಲೋತ್ಸವದ ಪೂರ್ವಭಾವಿ ಭಜನಾ ಸಪ್ತಾಹಕ್ಕೆ ಚಾಲನೆ




ಉಡುಪಿ: ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದ 66ನೇ ಭಜನಾ ಮಂಗಲೋತ್ಸವದ ಪೂರ್ವಭಾವಿಯಾಗಿ ನಡೆದ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಶಿವದಾಸ್ ಪಿ. ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ.ಮುದ್ದಣ್ಣ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ದಯಾನಂದ ಎ., ಪ್ರಧಾನ ಕಾರ್ಯದರ್ಶಿ ರಾಜೇಶ್, ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಗೌರವ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ, ಮಹಿಳಾ ಘಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಚಾಲಕಿ ಗೋಧಾವರಿ ಎಮ್. ಸುವರ್ಣ, ಸಂಘದ ಆಡಳಿತ ಸಮಿತಿ ಸದಸ್ಯರಾದ ಸುಧಾಕರ್ ಎ., ರಮೇಶ್ ಕೋಟ್ಯಾನ್, ಕುಶಲ್ ಕುಮಾರ್ ಎ., ಲಕ್ಷ್ಮಣ ಪೂಜಾರಿ, ಗುರುರಾಜ್ ಪೂಜಾರಿ, ನಿತಿನ್ ಕುಮಾರ್, ಜನಾರ್ಧನ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿ ಸಂಚಲ ಶಶಿಕಾಂತ್, ಸಮಿತಿ ಸದಸ್ಯರಾದ ವಿಜಯಲಕ್ಷ್ಮಿ ಎಸ್. ಕುಮಾರ್, ಕಲ್ಯಾಣಿ ಆನಂದ, ಅರ್ಚಕರಾದ ಅವಿನಾಶ್ ಪೂಜಾರಿ,  ಜೀವನ್, ಅದಿತ್ ಹಾಗೂ ರಾಜು ಕಡೆಕಾರ್, ಗಂಗಾಧರ್, ರಿದೀಶ್, ಅದೀಶ್ ಕಪ್ಪೆಟ್ಟು ಸಹಿತ ಸಂಘದ ಮತ್ತು ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

ರಾಜ್ಯಪಾಲರ ವಿರುದ್ಧ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರ ಗೂoಡಾಗಿರಿ ಖಂಡನೀಯ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ




ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣಕ್ಕಾಗಿಯೇ ಕಾಂಗ್ರೆಸ್ ಸರಕಾರ ಕರೆದಿರುವ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರು ನಡೆಸಿರುವ ಗೂoಡಾಗಿರಿ ಖಂಡನೀಯ. ಈ ಹೀನಾಯ ಘಟನೆ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ಸಂವಿಧಾನ ವಿರೋಧಿ ನಡೆಯಿಂದ ರಾಜ್ಯಪಾಲರನ್ನು ಅವಮಾನಿಸಿರುವ ಕಾಂಗ್ರೆಸ್ ಸಚಿವರು ಮತ್ತು ಶಾಸಕರ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಸದನದಲ್ಲಿ ರಾಜ್ಯಪಾಲರ ವಿರುದ್ಧವೇ ಗೂಂಡಾ ವರ್ತನೆ ಪ್ರದರ್ಶಿಸುವ ಮೂಲಕ ಕಾಂಗ್ರೆಸಿಗರು ಸಂವಿಧಾನದ ಆಶಯಗಳಿಗೆ ಘನ ಘೋರ ಅಪಚಾರವೆಸಗಿದ್ದಾರೆ.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬಡವರ ಪರವಾದ ಸುಧಾರಿತ ಕೇಂದ್ರ ಸರಕಾರದ ಯೋಜನೆಯನ್ನು ವಿರೋಧಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ ಗೂಂಡಾಗಿರಿಯ ಮೂಲಕ ಅಧಿವೇಶನದ ಘನತೆಯನ್ನು ಹಾಳು ಮಾಡಿರುವುದು ಅಕ್ಷಮ್ಯ.

125 ದಿನಗಳ ಉದ್ಯೋಗ ಖಾತರಿ ಎಂಬುದು ಸಂಸತ್ತಿನ ಕಾನೂನು. 60:40 ಅನುಪಾತವು ರಾಜ್ಯದ ಮೇಲೆ ಹೊರೆಯಲ್ಲ, ಬದಲಾಗಿ ಹಳ್ಳಿಯ ಅಭಿವೃದ್ಧಿಗೆ ಮಾಡುವ ಹೂಡಿಕೆಯಾಗಿದೆ.

ಕಾಂಗ್ರೆಸ್ಸಿಗರು ‘ರೋಜ್‌ಗಾರ್‌’ ಯೋಜನೆಯನ್ನು ‘ನರೇಗಾ’ ಎಂದು ಬದಲಾಯಿಸಿ, ನಂತರ ಅದನ್ನು ‘ಮನ್ರೇಗಾ’ ಎಂದು ಪುನರ್ ನಾಮಕರಣ ಮಾಡಿದ್ದರು. ‘ವಿಬಿ-ಜಿ ರಾಮ್‌ ಜಿ’ ಯೋಜನೆಯಡಿ ‘ವಿಕಸಿತ ಗ್ರಾಮ ಪಂಚಾಯತ್ ಪ್ಲಾನ್’ ಮೂಲಕ ಪಂಚಾಯತ್‌ಗಳೇ ಅಭಿವೃದ್ಧಿ ಯೋಜನೆಗಳನ್ನು ರೂಪಿಸುತ್ತವೆ. ತಂತ್ರಜ್ಞಾನ ಬಳಸಿ ಭ್ರಷ್ಟಾಚಾರಕ್ಕೆ ತಡೆ ಹಾಕಲಾಗುತ್ತದೆ.  

ಕಾಂಗ್ರೆಸ್ ಕೇವಲ ರಾಜಕೀಯ ದುರುದ್ದೇಶದಿಂದ ಇಂತಹ ಉದಾತ್ತ ಯೋಜನೆಯನ್ನು ವಿರೋಧಿಸುವ ಜೊತೆಗೆ ಬಡತನ ಮುಕ್ತ ಮತ್ತು ಸ್ವಾವಲಂಬಿ ಗ್ರಾಮಗಳನ್ನು ನಿರ್ಮಿಸುವ ದಿಕ್ಕಿನಲ್ಲಿ ಸದಾ ಅಡ್ಡಗಾಲು ಹಾಕುತ್ತಿರುವುದು ಜನಜನಿತವಾಗಿದೆ. ರಾಜ್ಯದ ಜನತೆ ಕಾಂಗ್ರೆಸ್ಸಿನ ಅಭಿವೃದ್ಧಿ ವಿರೋಧಿ, ಜನ ವಿರೋಧಿ ನೀತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಕಾಂಗ್ರೆಸ್ಸಿಗೆ ಸೂಕ್ತ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಗವಾಧ್ವಜ ವಿವಾದ ಸೃಷ್ಟಿಸಿ ರಾಜಕೀಯ ಒತ್ತಡ ಹೇರಿ ಮಹಿಳಾ ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾದ ಹಿಂದೂ ವಿರೋಧಿ ಕಾಂಗ್ರೆಸ್ : ನೀತಾ ಪ್ರಭು ಆಕ್ರೋಶ




ಪರ್ಯಾಯ ಮಹೋತ್ಸವದ ಮೆರವಣಿಗೆಗೆ ಕೇಸರಿ ಧ್ವಜದ ಮೂಲಕ ಚಾಲನೆ ನೀಡಿದ್ದಾರೆ ಎಂಬ ಏಕೈಕ ಕಾರಣಕ್ಕೆ ಉಡುಪಿ ಜಿಲ್ಲೆ ಕಂಡ ಓರ್ವ ದಕ್ಷ ಮಹಿಳಾ ಜಿಲ್ಲಾಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ರಾಜಕೀಯ ಒತ್ತಡ ಹೇರಿ ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷದ ನಡೆ ಖಂಡನೀಯ ಎಂದು ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರೇ ಉಸ್ತುವಾರಿಯಾಗಿರುವ ಉಡುಪಿ ಜಿಲ್ಲೆಯ ಮಹಿಳಾ ಜಿಲ್ಲಾಧಿಕಾರಿಗಳಿಗೆ ಕಾಂಗ್ರೆಸ್ ಪಕ್ಷ ಈ ರೀತಿ ಮಾನಸಿಕ ಸ್ಥೈರ್ಯ ಕುಗ್ಗಿಸಲು ಮುಂದಾದರೆ ಇತರ ಜಿಲ್ಲೆಗಳ ಮಹಿಳಾ ಅಧಿಕಾರಿಗಳ ಅಸಹಾಯಕತೆ ಎಷ್ಟಿರಬಹುದು ಎಂಬ ಬಗ್ಗೆ ಕನಿಕರ ಮೂಡುತ್ತಿದೆ.

ಉಡುಪಿ ಜಿಲ್ಲೆಯ ಜವಾಬ್ದಾರಿ ವಹಿಸಿಕೊಂಡ ಕೇವಲ 6 ತಿಂಗಳಲ್ಲಿ ಅತ್ಯಂತ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿ, ಪಾರದರ್ಶಕ ಆಡಳಿತ ನೀಡುತ್ತಿರುವ ಜೊತೆಗೆ ಲಕ್ಷಾಂತರ ಮಂದಿ ಭಾಗವಹಿಸಿದ ಕರಾವಳಿ ಕರ್ನಾಟಕದ ನಾಡಹಬ್ಬ ಎಂದೇ ಬಿಂಬತವಾಗಿರುವ ಪರ್ಯಾಯ ಮಹೋತ್ಸವದ ಸಿದ್ಧತೆಗೆ ಸಮರೋಪಾದಿಯಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸಿದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಮೂಲಕ ಕಾಂಗ್ರೆಸ್ ಪಕ್ಷ ತಮ್ಮ ರಾಜಕೀಯ ದಿವಾಳಿತನವನ್ನು ಮೆರೆದಿದೆ.

ಉಡುಪಿ ಪರ್ಯಾಯೋತ್ಸವದ ಹಿನ್ನಲೆಯಲ್ಲಿ ನಗರದ ಮೂಲ ಸೌಕರ್ಯ ಅಭಿವೃದ್ಧಿಗಾಗಿ ಕಳೆದ ಎರಡು ಪರ್ಯಾಯ ಮಹೋತ್ಸವದ ಅವಧಿಯಲ್ಲೂ ಬಿಡಿಗಾಸು ನೀಡದ ರಾಜ್ಯ ಕಾಂಗ್ರೆಸ್ ಸರ್ಕಾರ, ತಮ್ಮ ವೈಫಲ್ಯವನ್ನು ಮರೆಮಾಚಲು ಕೇಸರಿ ಧ್ವಜ ವಿವಾದವನ್ನು ಸೃಷ್ಟಿಸಿ ಜಿಲ್ಲಾಧಿಕಾರಿಗಳನ್ನು ಟಾರ್ಗೆಟ್ ಮಾಡಲು ಮುಂದಾಗಿರುವುದು ನಾಚಿಕೆಗೇಡು.

ಬಿಜೆಪಿ ಉಡುಪಿ ಮಹಿಳಾ ಮೋರ್ಚಾ ಜಿಲ್ಲೆಯ ಮಹಿಳಾ ಜಿಲ್ಲಾಧಿಕಾರಿಗಳ ಬೆಂಬಲಕ್ಕೆ ಸದಾ ಜೊತೆ ನಿಲ್ಲಲಿದೆ. ಬಿಟ್ಟಿ ಭಾಗ್ಯಗಳ ಮೂಲಕ ದಿವಾಳಿ ಹಂತಕ್ಕೆ ತಲುಪಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹಿಳಾ ವಿರೋಧಿ ನೀತಿಯನ್ನು ಬಿಜೆಪಿ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುವುದಾಗಿ ನೀತಾ ಪ್ರಭು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ : ಕುತ್ಯಾರು ನವೀನ್ ಶೆಟ್ಟಿ




ಉಡುಪಿ: ಪರ್ಯಾಯ ಮಹೋತ್ಸವದ ಶೋಭಾಯಾತ್ರೆಗೆ ಉಡುಪಿ ಶ್ರೀ ಕೃಷ್ಣ ಮಠದ ಯತಿಗಳ ಉಪಸ್ಥಿತಿಯಲ್ಲಿ ಭಗವಾಧ್ವಜವನ್ನು ಹಾರಿಸಿ ಚಾಲನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಕಾಂಗ್ರೆಸ್ ಮಾಡಿರುವ ಮನವಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾದರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ಉಡುಪಿ ಜಿಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಸದಾ ಹಿಂದೂ ವಿರೋಧಿ ನೀತಿಗಳ ಮೂಲಕ ಮತೀಯ ಶಕ್ತಿಗಳ ಓಲೈಕೆಗಾಗಿ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರಕಾರ ಇದುವರೆಗೆ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದು, ಇದೀಗ ಪರ್ಯಾಯೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಭಗವಾಧ್ವಜ ಹಾರಿಸಿದ ವಿಚಾರವನ್ನು ವಿವಾದವಾಗಿ ಸೃಷ್ಟಿಸಿ ಉಡುಪಿ ಜಿಲ್ಲಾಧಿಕಾರಿಗಳನ್ನು ಟಾರ್ಗೆಟ್ ಮಾಡುವ ಮೂಲಕ ಮತೀಯ ಶಕ್ತಿಗಳನ್ನು ಖುಷಿ ಪಡಿಸಲು ಮುಂದಾಗಿರುವುದು ದುರಂತ.

ಈ ಎಲ್ಲಾ ಬೆಳವಣಿಗೆಗಳಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಬಗ್ಗೆ ತೋರಿದ ನಿರ್ಲಕ್ಷ್ಯ ಧೋರಣೆಯೇ ಮುಖ್ಯ ಕಾರಣ. ಕಳೆದ ಹಲವು ದಶಕಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಸರ್ಕಾರದ ಪ್ರತಿನಿಧಿಗಳು ಉಡುಪಿಯ ಪರ್ಯಾಯೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡುವುದು ಸಂಪ್ರದಾಯವಾಗಿದೆ. ಉಡುಪಿ ಜಿಲ್ಲೆಗೆ ಅತಿಥಿಯಂತೆ ಭೇಟಿ ನೀಡುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಬಾರಿಯ ಪರ್ಯಾಯ ಮಹೋತ್ಸವದ ಬಗ್ಗೆ ಒಂದೇ ಒಂದು ಪೂರ್ವ ಸಿದ್ಧತಾ ಸಭೆಯನ್ನೂ ನಡೆಸಿಲ್ಲ. ಅಲ್ಲದೆ ಕರಾವಳಿ ಕರ್ನಾಟಕದ ನಾಡಹಬ್ಬ ಎನಿಸಿರುವ ಉಡುಪಿ ಪರ್ಯಾಯ ಮಹೋತ್ಸವ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡು ಉಡುಪಿ ಜಿಲ್ಲೆಯ ಸಮಸ್ತ ಜನತೆಗೆ ಅಪಮಾನ ಮಾಡಿರುವುದು ವಾಸ್ತವ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಸ್ವತಃ ಆಗಮಿಸಿ ಪರ್ಯಾಯೋತ್ಸವದ ವೈಭವದ ಶೋಭಾಯಾತ್ರೆಗೆ ಭಗವಾಧ್ವಜವನ್ನು ಹಾರಿಸಿ ಚಾಲನೆ ನೀಡಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಅವರ ರಾಜೀನಾಮೆಯನ್ನು ಕೇಳುವ ತಾಕತ್ತು ಇದೆಯೇ? ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಜಿಲ್ಲಾಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹಿಸುವ ಮೂಲಕ ಬೌದ್ಧಿಕ ದಿವಾಳಿತನವನ್ನು ಪ್ರದರ್ಶಿಸಿದ ಕಾಂಗ್ರೆಸ್, ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ.

ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಅನುದಾನವನ್ನು ನೀಡದೆ ಮಲತಾಯಿ ಧೋರಣೆ ಅನುಸರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಧಾರ್ಮಿಕ ಕಾರ್ಯಕ್ರಮದಲ್ಲಿ ಕ್ಷುಲ್ಲಕ ರಾಜಕೀಯ ಲಾಭ ಪಡೆಯಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ಜಗದ್ವಿಖ್ಯಾತ ಉಡುಪಿ ಪರ್ಯಾಯೋತ್ಸವ ಕಾರ್ಯಕ್ರಮದಲ್ಲೂ ಅನಗತ್ಯ ವಿವಾದ ಸೃಷ್ಟಿಸುವ ಮೂಲಕ ಲಕ್ಷಾಂತರ ಭಕ್ತ ಸಮೂಹದ ಧಾರ್ಮಿಕ ನಂಬಿಕೆಗೆ ಘಾಸಿಯನ್ನುoಟುಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ  ಹಿಂದೂ ಧರ್ಮದ ಭಗವಾಧ್ವಜದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಹಾಗೂ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಪದಾಧಿಕಾರಿಗಳನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸುವಂತೆ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ಉದ್ಯಾವರ ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ




ಉಡುಪಿ: ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆ ಉದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಂಬಲಪಾಡಿ ವಲಯದ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು.

ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜಾನ್ ಎಮ್. ಡಿ’ಸೋಜಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ ಅವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಅವರು ದುಶ್ಚಟಗಳ ದುಷ್ಪರಿಣಾಮಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ, ತಾಲೂಕು ಸಮಿತಿ ಸದಸ್ಯ ಪ್ರತಾಪ್ ಕುಮಾರ್ ಉದ್ಯಾವರ, ಯೋಜನೆಯ ತಾಲೂಕು ಕೃಷಿ ಅಧಿಕಾರಿ ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಪ್ರದೀಪ್ ಅವರು ಸ್ವಾಗತಿಸಿ, ಪ್ರಸನ್ನ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಯೋಜನೆಯ ಸೇವಾ ಪ್ರತಿನಿಧಿ ಜಯಶ್ರೀ ವಂದಿಸಿದರು.

ಗೃಹಲಕ್ಷ್ಮೀ ಹಣ ವಂಚಿಸಿದ ರಾಜ್ಯ ಸರ್ಕಾರದ ವಿರುದ್ಧವೂ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ನಡೆಸಲಿ : ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ನಗರಾಧ್ಯಕ್ಷೆ ನೀತಾ ಪ್ರಭು




ಉಡುಪಿ: ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ದುರುದ್ದೇಶದಿಂದ ಆಧಾರ ರಹಿತ ಮತ ಚೋರಿ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರಿಗೆ ಮಹಿಳೆಯರ ಬಗ್ಗೆ ಕಿಂಚಿತ್ ಕಾಳಜಿ ಇದ್ದರೆ ಗೃಹಲಕ್ಷ್ಮೀ ಯೋಜನೆಯ 2 ತಿಂಗಳ ಹಣವನ್ನು ಫಲಾನುಭವಿಗಳಿಗೆ ನೀಡದೆ ರಾಜ್ಯದ ಮಹಿಳೆಯರಿಗೆ ವಂಚಿಸಿದ ರಾಜ್ಯ ಸರಕಾರದ ವಿರುದ್ಧವೂ ಪ್ರತಿಭಟನೆ ನಡೆಸಲಿ ಎಂದು ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಹೇಳಿದ್ದಾರೆ.

ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಸಭಾ ಅಧಿವೇಶನದಲ್ಲಿ ಗೃಹಲಕ್ಷ್ಮೀ ಯೋಜನೆಯ ಬಗ್ಗೆ ತಪ್ಪು ಮಾಹಿತಿ ನೀಡಿ ರಾಜ್ಯದ ಜನತೆಗೆ ಮೋಸ ಮಾಡಿದ್ದಾರೆ. ಸುಮಾರು 5 ಸಾವಿರ ಕೋಟಿ ಹಣ ದುರ್ಬಳಕೆ ಮಾಡಿದ ಆರೋಪ ಸಚಿವರ ಮೇಲಿದ್ದರೂ ಈ ಬಗ್ಗೆ ಮಹಿಳಾ ಕಾಂಗ್ರೆಸ್ ಜಾಣ ಮೌನ ವಹಿಸಿದೆ. ರಾಜ್ಯದ ಗೃಹ ಸಚಿವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ವಿಪರೀತ ಮದ್ಯ ಸೇವಿಸಿದ ವ್ಯಕ್ತಿಯನ್ನು ಪೋಲಿಸ್ ವಾಹನದಲ್ಲಿ ಮನೆಗೆ ಕರೆದೊಯ್ಯಲು ಸರ್ಕಾರ ಮುಂದಾಗಿದೆ ಎಂಬ ಹೇಳಿಕೆ ನೀಡುವ ಮೂಲಕ ರಾಜ್ಯ ಸರ್ಕಾರ ಮದ್ಯಪಾನಿಗಳಿಗೆ ಉತ್ತೇಜನ ನೀಡುತ್ತಿರುವುದನ್ನು ಸಾಬೀತುಪಡಿಸಿರುವುದು ದುರದೃಷ್ಟಕರ.

ಪಾನ ನಿಷೇಧದ ವಿರುದ್ಧ ಸಮರ ಸಾರಿದ್ದ ಮಹಾತ್ಮಾ ಗಾಂಧಿ ಅವರ ಕಟ್ಟೆಯಲ್ಲಿ ಕುಳಿತು ಪ್ರತಿಭಟನೆ ನಡೆಸುವ ಮಹಿಳಾ ಕಾಂಗ್ರೆಸ್ ನಾಯಕಿಯರು ರಾಜ್ಯ ಗೃಹ ಸಚಿವರ ಮದ್ಯಪಾನಕ್ಕೆ ಪ್ರೇರಣೆ ನೀಡುವ ಹೇಳಿಕೆಯನ್ನು ಖಂಡಿಸುವ ಧೈರ್ಯ ತೋರದಿರುವುದು ವಿಷಾದನೀಯ.

ಮಹಿಳಾ ಕಾಂಗ್ರೆಸ್ ಪುಡಾರಿಗಳಿಗೆ ಬಿಜೆಪಿ ಪಕ್ಷವನ್ನು ಟೀಕಿಸುವುದೇ ಪ್ರಥಮ ಆದ್ಯತೆಯ ಚಟವಾಗಿದ್ದು, ಉಡುಪಿಯ ಪ್ರಜ್ಞಾವಂತ ಜನತೆ ಮುಂದಿನ ದಿನಗಳಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನೀತಾ ಪ್ರಭು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಂದ ಸಚ್ಚರಿಪೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ನ 129ನೇ ಅವೃತ್ತಿ ವೀಕ್ಷಣೆ




ಕಾರ್ಕಳ:  ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮವು ಕೇವಲ ಭಾಷಣವಲ್ಲ, ಅದು ದೇಶದ ಕಟ್ಟ ಕಡೆಯ ವ್ಯಕ್ತಿಯ ಸಾಧನೆಯನ್ನು ಗುರುತಿಸುವ ಮತ್ತು ಜನಸಾಮಾನ್ಯರಲ್ಲಿ ದೇಶ ಪ್ರೇಮವನ್ನು ಜಾಗೃತಗೊಳಿಸುವ ಶಕ್ತಿಯಾಗಿದೆ. ಇಡೀ ದೇಶದ ಜನರ ಆರೋಗ್ಯದ ಬಗ್ಗೆ ಕಾಳಜಿಯ ವಿಚಾರವಾಗಿಯೂ ಮೋದಿ ಅವರು ಮಾತನಾಡಿದ್ದಾರೆ. ಇಂತಹ ಪ್ರಧಾನಿಯನ್ನು ಪಡೆದ ನಾವು ಪುಣ್ಯವಂತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು.

ಕಾರ್ಕಳ ತಾಲೂಕು ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮದ 129ನೇ ಆವೃತ್ತಿಯ ನೇರ ಪ್ರಸಾರವನ್ನು ವೀಕ್ಷಿಸಿದ ಬಳಿಕ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ರಾಜಕೀಯ ರಹಿತವಾಗಿ ದೇಶದ ವಿವಿಧ ಮೂಲೆಗಳಲ್ಲಿರುವ ಅನಾಮಧೇಯ ಸಾಧಕರನ್ನು ಮೋದಿ ಅವರು ಇಡೀ ಜಗತ್ತಿಗೆ ಪರಿಚಯಿಸುತ್ತಿದ್ದಾರೆ. ಇದು ಯುವ ಪೀಳಿಗೆಗೆ ದೊಡ್ಡ ಸ್ಫೂರ್ತಿ. ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ರಾಷ್ಟ್ರಚಿಂತನೆ ಬೆಳೆಯಲು ಇಂತಹ ಕಾರ್ಯಕ್ರಮಗಳಿಂದ ಸಾಧ್ಯವಾಗುತ್ತದೆ ಎಂದರು.

ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ,
ದೇಶದ ಹಳ್ಳಿ ಹಳ್ಳಿಗಳಲ್ಲಿರುವ ಸಂಸ್ಕೃತಿ, ಕಲೆ ಮತ್ತು ದೇಶಿಯ ಉತ್ಪನ್ನಗಳಿಗೆ ‘ಮನ್ ಕೀ ಬಾತ್’ ಮೂಲಕ ಹೊಸ ಆಯಾಮ ಸಿಕ್ಕಿದೆ. ಜನರಲ್ಲಿ ಸ್ವದೇಶಿ ವಸ್ತುಗಳ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಇದು ಸಹಕಾರಿಯಾಗಿದೆ. ಇಂದಿನ ಯುವ ಪೀಳಿಗೆಗೆ ಮೋದಿ ಅವರ ಮಾತುಗಳು ಮಾರ್ಗದರ್ಶಕವಾಗಿವೆ. ಶಾಲಾ ಹಂತದಲ್ಲಿಯೇ ಮಕ್ಕಳು ಇಂತಹ ಕಾರ್ಯಕ್ರಮಗಳನ್ನು ಆಲಿಸುವುದರಿಂದ ಅವರಲ್ಲಿ ಸಮಾಜಮುಖಿ ಚಿಂತನೆ ಬೆಳೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಕಾರ್ಕಳ ಮಂಡಲಾಧ್ಯಕ್ಷ ನವೀನ್ ನಾಯಕ್, ಪಕ್ಷದ ಪ್ರಮುಖರಾದ ಕೆ.ಉದಯ ಕುಮಾರ್ ಶೆಟ್ಡಿ, ಮಹಾವೀರ ಹೆಗ್ಡೆ, ಶಿಲ್ಪಾ ಜಿ. ಸುವರ್ಣ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಬೋಳ ಸತೀಶ್ ಪೂಜಾರಿ, ವಿನಯ ಡಿ. ಬಂಗೇರ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಸಾಮಾಜಿಕ ಸಂಘಟನೆಗಳ ಪ್ರಮುಖರು, ವಿದ್ಯಾರ್ಥಿಗಳು, ಶಿಕ್ಷಕ ವೃಂದ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಸರ್ವಿಸ್ ರಸ್ತೆ ಅಗಲೀಕರಣ ಸಹಿತ ವಿವಿಧ ಬೇಡಿಕೆಗಳೊಂದಿಗೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ ಸಲ್ಲಿಕೆ




ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಯ ಅಗಲೀಕರಣ ಮತ್ತು ಸಂಬಂಧಿತ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆ ಇದರ ವತಿಯಿಂದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಮನವಿ ಸಲ್ಲಿಸಲಾಯಿತು.

ರಾ.ಹೆ.66 ಅಂಬಲಪಾಡಿ ಇದರ ಅಗಲ ಕಿರಿದಾಗಿರುವ ಸರ್ವಿಸ್ ರಸ್ತೆಯನ್ನು ಮಳೆ ನೀರು ಹರಿಯುವ ಚರಂಡಿ ಸಹಿತ ಅಗಲೀಕರಣಗೊಳಿಸುವಂತೆ, ರಾ.ಹೆ.66 ಅಂಬಲಪಾಡಿ ಅಂಡರ್ ಪಾಸ್ ನ ಪೂರ್ವ ಮತ್ತು ಪಶ್ಚಿಮ ಭಾಗದಲ್ಲಿ ಉಡುಪಿ ನಗರವನ್ನು ಸಂಪರ್ಕಿಸುವ ಉಡುಪಿ ನಗರಸಭೆಯ ಸ್ವಾಧೀನದಲ್ಲಿರುವ ರಸ್ತೆಯನ್ನು ಅಂಡರ್ ಪಾಸ್ ದ್ವಾರಕ್ಕೆ ಸಮನಾಗಿ ರಾ.ಹೆ.66ರ ಪ್ಯಾಕೇಜ್ ರಸ್ತೆಯಾಗಿ ಅಗಲೀಕರಣಗೊಳಿಸುವ ಪ್ರಕ್ರಿಯೆಯನ್ನು ಪ್ರಸಕ್ತ ಪ್ರಗತಿಯಲ್ಲಿರುವ ಅಂಬಲಪಾಡಿ ರಾ.ಹೆ.66ರ ಕಾಮಗಾರಿಯ ಜೊತೆಗೆ ಕಾರ್ಯಗತಗೊಳಿಸುವಂತೆ, ರಾ.ಹೆ.66 ಅಂಬಲಪಾಡಿ ಅಂಡರ್ ಪಾಸ್ ನ ಜಂಕ್ಷನ್ ರಸ್ತೆಯನ್ನು ರಾ.ಹೆ. ಪ್ರಾಧಿಕಾರದ ನಿಯಮದಂತೆ ಅಂಡರ್ ಪಾಸ್ ಮಧ್ಯದಿಂದ 30 ಮೀಟರ್ ವಿಸ್ತೀರ್ಣದ ಸುತ್ತಳತೆಯಲ್ಲಿ ಅಗಲೀಕರಣಗೊಳಿಸಿ ಲಘು ಮತ್ತು ಘನ ವಾಹನಗಳ ಸುಗಮ, ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಹಾಗೂ ರಾ.ಹೆ.66 ಅಂಬಲಪಾಡಿ ಅಂಡರ್ ಪಾಸ್ ವಿನ್ಯಾಸದಲ್ಲಿರುವಂತೆ ಫೂಟ್ ಪಾತ್ ನಲ್ಲಿ ಸುರಕ್ಷಿತ ಜನ ಸಂಚಾರಕ್ಕಾಗಿ ಸರ್ವಿಸ್ ರಸ್ತೆಗೆ ಟ್ರಾಫಿಕ್ ಸಿಗ್ನಲ್ ಅಳವಡಿಸುವಂತೆ ಮನವಿಯಲ್ಲಿ ಉಲ್ಲೇಖಿಸಿರುವ ಬಗ್ಗೆ ವಿಸ್ತೃತ ವಿಚಾರ ವಿನಿಮಯ ನಡೆಸಲಾಯಿತು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಸದ ಕೋಟ ಅವರು ಮನವಿಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಗರಿ ಅವರಿಗೆ ಸಲ್ಲಿಸಿ ಮನವಿಯಲ್ಲಿ ಉಲ್ಲೇಖಿಸಿರುವ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.

ಜಿಲ್ಲೆಯಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿಯ ಕುರಿತು ಸಂಸದರಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತರಕ್ಷಣಾ ವೇದಿಕೆ ಸಂಚಾಲಕ ಭಾಸ್ಕರ್ ಶೆಟ್ಟಿ ಕಡೆಕಾರು, ಕಾರ್ಯಕಾರಿ ಸಮಿತಿ ಸದಸ್ಯರಾದ ಅಂಬಲಪಾಡಿ ವಾರ್ಡ್ ನಿಕಟಪೂರ್ವ ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಶ್ರೀಕಾಂತ್ ಶೆಟ್ಟಿ ಅಂಬಲಪಾಡಿ ಮತ್ತಿತರರು ಉಪಸ್ಥಿತರಿದ್ದರು.

Design a site like this with WordPress.com
Get started