ಪ್ರಿಯಾಂಕ್ ಖರ್ಗೆ ಮೊದಲು ಸಂವಿಧಾನ ಸರಿಯಾಗಿ ಅಧ್ಯಯನ ಮಾಡಲಿ ಆಮೇಲೆ ಬಜರಂಗದಳ ನಿಷೇಧಿಸುವ ಕುರಿತು ಮಾತನಾಡಲಿ – ಶ್ರೀಕಾಂತ ನಾಯಕ್

ಕಾಪು: ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕ್ ಖರ್ಗೆ, ಪಕ್ಷ ಚುನಾವಣೆ ಗೆದ್ದ ಅಮಲಿನಲ್ಲಿ ಬಜರಂಗ ದಳದ ಒಟ್ಟಿಗೆ ಆರ್ ಎಸ್ ಎಸ್ ನ್ನೂ ಬ್ಯಾನ್ ಮಾಡುತ್ತೇವೆ ಎನ್ನುವ ಮೂರ್ಖತನದ ಹೇಳಿಕೆ ನೀಡಿದ್ದು ಇದು ಖಂಡನೀಯ. ಇವೆರಡನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಇದಯೇ ಎನ್ನುವುದನ್ನು ಮೊದಲಿಗೆ ಸರಿಯಾಗಿ ಅಧ್ಯಯನ ಮಾಡಿ ಆ ನಂತರ ಹೇಳಿಕೆ ಕೊಡಲಿ. ಜವಾಬ್ದಾರಿಯುತ ಶಾಸಕರಾಗಿ ಇಷ್ಟೂ ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲವೇ ಇವರಿಗೆ? ಅಲ್ಲದೆ ಆರ್ ಎಸ್ ಎಸ್, ಬಜರಂಗದಳ ಎಂದಿಗೂ ದೇಶವಿರೋಧಿ ಚಟುವಟಿಕೆ ಮಾಡಿಲ್ಲ. ಭಯೋತ್ಪಾದನೆ ಮಾಡಿಲ್ಲ. ದೇಶ ಮೊದಲು ಎನ್ನುವ ಚಿಂತನೆಗಳೊಂದಿಗೆ ಸಮಾಜದ ಸಂಘಟನೆ ಮಾಡುತ್ತಿರುವ ದೇಶಪ್ರೇಮಿ ಸಂಘಟನೆಗಳು ಇವು. ದೇಶಪ್ರೇಮ ಮಾಡುವುದೇ ಅಪರಾಧವಾದರೆ ನಿಷೇಧ ಮಾಡುವ ಪ್ರಯತ್ನ ಮಾಡಿ ನೋಡಲಿ. ಆವಾಗ ತಿಳಿಯುತ್ತೆ ಇವರಿಗೆ ಹಿಂದೂ ಸಮಾಜದ ಶಕ್ತಿ ಸಾಮರ್ಥ್ಯದ ಬಗ್ಗೆ.

ಸುಮ್ಮನೆ ಕೊಡಲಾಗದ ಗ್ಯಾರಂಟಿಗಳನ್ನು ಹೇಳಿಕೊಂಡು ಚುನಾವಣೆ ಗೆದ್ದು ಇದೀಗ ಆ ಭರವಸೆಗಳನ್ನು ಈಡೇರಿಸಲಾಗದೆ ಬೇರೆ ಕಡೆ ವಿಷಯಾಂತರಿಸಿದರೆ ಜನ ಇದನ್ನು ಮರೆತಾರು ಎನ್ನುವ ಆಲೋಚನೆಯಲ್ಲಿ ಇಂತಹ ಹೇಳಿಕೆ ನೀಡುತ್ತಿದ್ದಾರೆ.‌ ಇದೆಲ್ಲವನ್ನು ಜನ ಗಮನಿಸುತ್ತಿದ್ದಾರೆ. ಮೊದಲ ಸಂಪುಟದಲ್ಲಿಯೇ ಎಲ್ಲ ಗ್ಯಾರಂಟಿಗಳನ್ನು ನೀಡುತ್ತೇವೆ, 24 ಗಂಟೆಯೊಳಗೆ ಹಾಗೆ ಹೀಗೆ ಎಂದು ಪುಂಗಿ ಬಾರಿಸಿ ಇದೀಗ ನುಣುಚಿಕೊಳ್ಳುವ ಪ್ರಯತ್ನ ಬೇಡ. ಅಧಿಕಾರಕ್ಕಾಗಿ, ಮಂತ್ರಿಗಿರಿಗಾಗಿ ನಿಮ್ಮ ಕಚ್ಚಾಟ, ದೊಂಬರಾಟ ನೋಡಿ ಜನ ನಗುತ್ತಿದ್ದಾರೆ. ಮೊದಲು ಹೇಳಿದುದನ್ನು ಮಾಡಿ ತೋರಿಸಿ. ಅದನ್ನು ಮಾಡದೆ ಭಾವನೆಗಳ ಮೇಲೆ ಚೆಲ್ಲಾಟವಾಡಿದರೆ ಪರಿಣಾಮ ಗಂಭೀರವಾದೀತು ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಲೆವೂರು: ರಾಂಪುರದ ಮನೆಯೊಂದರ ಬಾವಿಗೆ ಬಿದ್ದ ಕರುವಿನ ರಕ್ಷಣೆ

ಅಲೆವೂರು: ರಾಂಪುರದ ಮನೆಯೊಂದರ ಬಾವಿಗೆ ಬಿದ್ದ ಕರುವಿನ ರಕ್ಷಣೆ
ಸ್ಥಳೀಯರಿಂದ ಹಾಗೂ ಅಗ್ನಿಶಾಮಕ ದಳದಿಂದ ರಕ್ಷಣೆ ಆಪತ್ಬಾಂಧವರಾದ ಅಶೋಕ್ ಶೆಟ್ಟಿ ದೆಂದೂರು ಕಟ್ಟೆ ಹಾಗೂ ಸ್ಥಳೀಯರ ಸಮಯೋಚಿತ ಕಾರ್ಯಚರಣೆಗೆ‌ ಸರ್ವತೃ ಶ್ಲಾಘನೆ

ಮೇ 25: ಉಡುಪಿ ಜಿಲ್ಲೆಯ ನೂತನ ಶಾಸಕರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ: ಕುಯಿಲಾಡಿ



ಉಡುಪಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ.

ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ನೂತನ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ, ಕಿರಣ್ ಕುಮಾರ್ ಕೊಡ್ಗಿ ಕುಂದಾಪುರ ಮತ್ತು ಗುರುರಾಜ್ ಶೆಟ್ಟಿ ಗಂಟಿಹೊಳಿ ಬೈಂದೂರು ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದಿಸುವ ಜೊತೆಗೆ ಸಮಸ್ತ ಕಾರ್ಯಕರ್ತ ಬಂಧುಗಳು ಹಾಗೂ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುವ ‘ಅಭಿನಂದನಾ ಸಮಾರಂಭ’ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತ ಬಂಧುಗಳು, ಜನಪ್ರತಿನಿಧಿಗಳು ಮತ್ತು ಪಕ್ಷದ ಹಿತೈಷಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ


ಉಡುಪಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆ ಸಲ್ಲಿಸುತ್ತಿದ್ದ ಅಶೋಕ್ ಪರ್ಕಳ(54 ವರ್ಷ) ಇವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಸಂಘದ ಪ್ರಚಾರಕರಾಗಿ ಮಣಿಪುರ ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ, ಪ್ರಸ್ತುತ ಸಂಘದ ಉಡುಪಿ ಜಿಲ್ಲೆಯ ಧರ್ಮ ಜಾಗರಣಾ ಇದರ ಜವಾಬ್ದಾರಿ ನಿರ್ವಹಿಸುತ್ತಿದ್ದ ಅಶೋಕ್ ಪರ್ಕಳ ರವರು ಸರಳ ಸಜ್ಜನಿಕೆ ಹಾಗೂ ಸದಾ ಚುರುಕಿನ ವ್ಯಕ್ತಿತ್ವ ಹೊಂದಿದ್ದರು. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿಯ ಮಾಜಿ ಶಾಸಕ ಯು.ಆರ್. ಸಭಾಪತಿ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ



ಉಡುಪಿ: ಉಡುಪಿ ಜಿಲ್ಲೆಯ ಪ್ರಬುದ್ಧ ರಾಜಕಾರಿಣಿಗಳಲ್ಲೊಬ್ಬರು, ನೇರ ನಡೆ ನುಡಿಯ ಮಾಜಿ ಶಾಸಕ ಯು.ಆರ್. ಸಭಾಪತಿ ಯವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ಸೂಚಿಸಿದೆ.

ನೂತನ ಉಡುಪಿ ಜಿಲ್ಲೆ ರಚನೆಯ ಸಂದರ್ಭದಲ್ಲಿ ಜಿಲ್ಲೆಯ ಇತರ ಹಿರಿಯ ರಾಜಕೀಯ ಮುತ್ಸದ್ಧಿಗಳ ಸಹಿತ ಮಾಜಿ ಶಾಸಕ ಯು.ಆರ್. ಸಭಾಪತಿಯವರ ಶ್ರಮ ಸ್ಮರಣೀಯ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2ಸಾವಿರ ರೂಪಾಯಿ ನೋಟ್ ಗಳನ್ನು ಚಲಾವಣೆಗೆ ಸ್ಥಗಿತಗೊಳಿಸಿದ RBI : ಸೆ.30ರವರೆಗೆ ಬ್ಯಾಂಕ್ ಗಳಲ್ಲಿ ಬದಲಾಯಿಸಲು ಅವಕಾಶ

ನವದೆಹಲಿ: 2 ಸಾವಿರ ರೂ. ನೋಟುಗಳ ಚಲಾವಣೆಯನ್ನು ಆರ್ ಬಿ ಐ ಹಿಂದಕ್ಕೆ ಪಡೆದಿದೆ.

ದೇಶದಲ್ಲಿ 2 ಸಾವಿರ ರೂ. ನೋಟುಗಳ ಚಲಾವಣೆಯನ್ನು ಸ್ಥಗಿತಗೊಳಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತೀರ್ಮಾನಿಸಿದೆ.ಬ್ಯಾಂಕ್ ಗಳಲ್ಲಿ 2000 ರೂ.ನ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಸೆಪ್ಟಂಬರ್30ರೊಳಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಒಮ್ಮೆಗೆ 20 ಸಾವಿರ ರೂ.ವರೆಗೆ ಮಾತ್ರ ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದೆ

ಜಿಲ್ಲೆಯ ಐದೂ ಸ್ಥಾನಗಳ ಗೆಲುವು ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ: ಕುಯಿಲಾಡಿ


ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳ ಭರ್ಜರಿ ಗೆಲುವು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಾರ್ಯ ತಂಡ ಮತ್ತು ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಜೆಪಿಯನ್ನು ಬೆಂಬಲಿಸಿ ಮಗದೊಮ್ಮೆ ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಜನತೆ ಅಭಿವೃದ್ಧಿ ಮತ್ತು ಹಿಂದುತ್ವದ ಪರ ವಿಶ್ವಾಸದ ಮುದ್ರೆ ಒತ್ತಿದ್ದಾರೆ. ಈ ಗೆಲುವು ಪಕ್ಷದ ಕಾರ್ಯಕರ್ತರ ಗೆಲುವು. ಈ ವಿಜಯ ಯಾತ್ರೆ ಮುಂಬರಲಿರುವ ಲೋಕ ಸಭೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸಹಿತ ಎಲ್ಲಾ ಸ್ತರದ ಚುನಾವಣೆಗಳಲ್ಲಿಯೂ ಮುಂದುವರಿದು ಮೇಳೈಸಲಿದೆ ಎಂದು ಕುಯಿಲಾಡಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿಯ ನೂತನ ಶಾಸಕ ಯಶ್ಪಾಲ್ ಎ. ಸುವರ್ಣ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರು ವಿಸ್ತ್ರತವಾಗಿ ಮಾತನಾಡಿ ಉಡುಪಿ ಜಿಲ್ಲೆಯನ್ನು ಮಗದೊಮ್ಮೆ ಪರಿಪೂರ್ಣ ಬಿಜೆಪಿ ಜಿಲ್ಲೆಯನ್ನಾಗಿಸಿದ ಮತದಾರ ಬಾಂಧವರಿಗೆ ಮತ್ತು ಪಕ್ಷದ ಗೆಲುವಿಗೆ ಹಗಲಿರುಳು ಶ್ರಮಿಸಿರುವ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಪಕ್ಷದ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ವಿವಿಧ ವಿಭಾಗಗಳ ಸಂಚಾಲಕರು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ವಿಧಾನಸಭಾ ಚುನಾವಣೆಯ ಯಶಸ್ವೀ ನಿರ್ವಹಣೆ ಹಾಗೂ ಭರ್ಜರಿ ವಿಜಯದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಜಿಲ್ಲಾಧ್ಯಕ್ಷರು ಮತ್ತು ಇಡೀ ತಂಡವನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಹಾಗೂ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ವಿವಿಧ ವಿಭಾಗಗಳ ಸಂಚಾಲಕರು ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಕಾಂಗ್ರೆಸ್ ನ ಸರಣಿ ಕೊಲೆಯ ಟ್ರೇಲರ್ ಕಾಂಗ್ರೆಸ್ ಆಡಳಿತದ ಕಾರ್ಯವೈಖರಿಯ ಸೂಚನೆಯೇ ಇದು?ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗ ಸಂಚಾಲಕ್ ಶ್ರೀನಿಧಿ ಹೆಗ್ಡೆ ಪ್ರಶ್ನೆ



ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ ದೊರಕುತ್ತಿದಂತೆ ಮತಾಂಧ ಜಿಹಾದಿಗಳು ಮತ್ತು ಕಾಂಗ್ರೆಸ್ ಕೃಪಾಕಟಾಕ್ಷ ಹೊಂದಿರುವ ಬೆಂಬಲಿಗರು ತಮ್ಮ ರಾಕ್ಷಸಿ ನಡೆ ಆರಂಭಿಸಿದ್ದಾರೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆಯಬಹುದಾದ ದುಷ್ಕೃತ್ಯಗಳ ಸರಮಾಲೆಯ ಟ್ರೇಲರ್ ಇದಾಗಿದ್ದು ಇನ್ನೆಷ್ಟು ಸರಣಿ ಕೊಲೆಗಳು ನಡೆಯುವ ಆತಂಕ ಎದುರಾಗಿದೆ.

ಮತ ಎಣಿಕೆ ಕಾರ್ಯ ಮುಕ್ತಾಯವಾಗುತ್ತಿದ್ದಂತೆ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಆಗಿದೆ. ಯಾದಗಿರಿಯಲ್ಲೂ ದ್ವೇಷಕ್ಕೆ ಬಿಜೆಪಿ ಕಾರ್ಯಕರ್ತ ಬಲಿಯಾಗಿದ್ದಾನೆ. ಹೊನ್ನಾವರದಲ್ಲಿ ಪ್ರಚಾರಕ್ಕೆ ಬಿಜೆಪಿ ಅಭ್ಯರ್ಥಿಗೆ ವಾಹನ ನೀಡಿದ್ದಕ್ಕೆ ಕಾಂಗ್ರೆಸ್ ಪಕ್ಷದ ವಿಜಯೋತ್ಸವದ ಸಂದರ್ಭ ವಾಹನಕ್ಕೆ ಕಾಂಗ್ರೆಸ್ ಬೆಂಬಲಿಗರು ಬೆಂಕಿ ಹಚ್ಚಿ ರಾಕ್ಷಸೀಯ ಕೃತ್ಯ ಮೆರೆದಿದ್ದಾರೆ.

ಇದೆಲ್ಲ ಕಾಂಗ್ರೆಸ್ಸ್ ಪಕ್ಷದ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿ., ಈವರೆಗೆ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಈ ಹತ್ಯೆಗಳನ್ನು ವಿರೋಧಿಸದೆ ಇರುವುದು ಇವರ ವೋಟ್ ಬ್ಯಾಂಕ್ ರಾಜಕಾರಣ ಕಾರಣಕ್ಕಾಗಿ ಎಂಬುದು ಸ್ಪಷ್ಟವಾಗಿದೆ.

ದ್ವೇಷ ಬಿಟ್ಟು ಪ್ರೀತಿಗೆ ಜನ ಮತ ಹಾಕಿದ್ದಾರೆ ಎಂದು ಹೇಳುವ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಉಂಟಾಗಿರುವ ಹತ್ಯೆಗಳ ಬಗ್ಗೆ ಏಕೆ ಮೌನವಾಗಿದ್ದಾರೆ? ಇಂತಹ ದ್ವೇಷ ರಾಜಕಾರಣವನ್ನು ನಿಲ್ಲಿಸಬೇಕು. ಸರಣಿ ಹತ್ಯೆಯ ಕೃತ್ಯವನ್ನು ಬೆಂಬಲಿಸಿದ್ದೇ ಆದರೆ ಮುಂದೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ.

ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತ ವಿದ್ಯಾರ್ಥಿನಿ ದೃಶ್ಯ ಶೆಟ್ಟಿಯವರಿಗೆ ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದಿಂದ ಗೌರವಾರ್ಪಣೆ



ಉಡುಪಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 96.5% ಅಂಕ ಗಳಿಸಿರುವ ಸೈಂಟ್ ಸಿಸಿಲಿ ಹೈಸ್ಕೂಲ್ ಉಡುಪಿ ಇದರ ಪ್ರತಿಭಾನ್ವಿತ ವಿದ್ಯಾರ್ಥಿನಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಯೋಗೀಶ್ ಶೆಟ್ಟಿಯವರ ಸುಪುತ್ರಿ ಕು! ದೃಶ್ಯ ಶೆಟ್ಟಿ ಅಂಬಲಪಾಡಿ ಇವರನ್ನು ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದ ವತಿಯಿಂದ ಅವರ ನಿವಾಸದಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಅಂಬಲಪಾಡಿ-ಕಡೆಕಾರ್ ಮಹಾಶಕ್ತಿ ಕೇಂದ್ರದ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಹರೀಶ್ ಆಚಾರ್ಯ, ಬಿಜೆಪಿ ಉಡುಪಿ ನಗರ ಕಾರ್ಯದರ್ಶಿ ದಯಾಶಿನಿ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಭಾಸ್ಕರ್, ಬಿಜೆಪಿ ಅಂಬಲಪಾಡಿ ಬೂತ್ 178ರ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಹಾಗೂ ಪಾಂಡುರಂಗ ಪಂದುಬೆಟ್ಟು, ದ್ರುವ ಶೆಟ್ಟಿ, ಸುಂದರಿ ಶೆಡ್ತಿ ಉಪಸ್ಥಿತರಿದ್ದರು.

ಕಾಂಗ್ರೆಸ್ಸಿನ ಆರನೇ ಗ್ಯಾರಂಟಿ ರಿಲೀಸ್; ಇತರ ಗ್ಯಾರಂಟಿಗಳಿಗೆ ಷರತ್ತುಗಳು: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗೆದ್ದ ಒಂದೇ ದಿನದಲ್ಲಿ ಕಾಂಗ್ರೆಸ್ಸಿನಿಂದ ಆರನೇ ಗ್ಯಾರಂಟಿ ರಿಲೀಸ್ ಆಗಿದೆ. ಇದರನ್ವಯ ರಾಜ್ಯದಲ್ಲಿ ಮೊದಲ ಹತ್ಯೆ, ಅಲ್ಲಲ್ಲಿ ಹಿಂಸೆ, ದೇಶದ್ರೋಹದ ಪ್ರಕರಣಗಳು, ದೇಶ ವಿರೋಧಿ ಘೋಷಣೆ, ಪಾಕಿಸ್ತಾನ ಪರ ಘೋಷಣೆ, ಬಾವುಟ ವಿವಾದ ಇತ್ಯಾದಿಗಳು ಪ್ರಾರಂಭಗೊಂಡಿದ್ದು, ಕ್ರಮೇಣ ವಿಪರೀತ ಹಂತವನ್ನು ತಲುಪಲಿದೆ. ಭಾರತೀಯ ಜನತಾ ಪಾರ್ಟಿ ಇಂತಹ ಕುಕೃತ್ಯವನ್ನು ಸಹಿಸುವುದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಅಧಿಕಾರ ಪಡೆಯುವ ಏಕೈಕ ಉದ್ದೇಶದಿಂದ ಜನರನ್ನು ಮರುಳುಗೊಳಿಸಲು ಘೋಷಿಸಿರುವ ಐದು ಗ್ಯಾರಂಟಿಗಳ ಬಗ್ಗೆ ಹೊಸ ಷರತ್ತುಗಳನ್ನು ವಿಧಿಸುತ್ತಿರುವ ಮೂಲಕ ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡ್ ಗಳ ನಿಜ ಬಣ್ಣ ಬಯಲಾಗಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Design a site like this with WordPress.com
Get started