ಉಡುಪಿ: ಕರಾವಳಿ ಕರ್ನಾಟಕದ ಬಿಜೆಪಿಯ ಭದ್ರ ಕೋಟೆ ಎನಿಸಿರುವ ಉಡುಪಿ ಜಿಲ್ಲೆಯ ಗ್ರೌಂಡ್ ರಿಪೋರ್ಟ್ ಬಗ್ಗೆ ಎಳ್ಳಷ್ಟೂ ಅರಿವಿಲ್ಲದ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ವೃಥಾ ಪ್ರಲಾಪದಲ್ಲಿ ತೊಡಗಿರುವುದು ಹಾಸ್ಯಾಸ್ಪದ. ‘ವ್ಯಕ್ತಿಗಿಂತ ಪಕ್ಷ ಮೇಲು’ ಎಂಬ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇರಿಸಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಂಘಟಿತ ಪರಿಶ್ರಮದಿಂದ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪಕ್ಷದ ಚೌಕಟ್ಟಿನೊಳಗೆ ಯಾವುದೇ ರೀತಿಯ ಗೊಂದಲವಿಲ್ಲ. ಕಾರ್ಯಕರ್ತರಲ್ಲಿದ್ದ ಸಣ್ಣ ಪುಟ್ಟ ಅಸಮಾಧಾನವನ್ನು ಬಗೆಹರಿಸಲಾಗಿದೆ. ಉಡುಪಿ ಜಿಲ್ಲೆಯ ಪರಿಸ್ಥಿತಿಯನ್ನು ಕಾಂಗ್ರೆಸ್ ತನ್ನ ದೃಷ್ಟಿಕೋನದಲ್ಲಿ ಅವಲೋಕಿಸುವುದು ವ್ಯರ್ಥ. ಬಂಡಾಯ, ಬಿನ್ನಮತ, ಅಸಮಾಧಾನ ಎಲ್ಲವೂ ಮನೆ ಮಾಡಿರುವುದು ಕಾಂಗ್ರೆಸ್ಸಿನಲ್ಲಿ ಎಂದು ಅವರು ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಿಗೆ ಬೇಟಿ ನೀಡಿ ಹಾಲಿ ಶಾಸಕರು ಮತ್ತು ಕಾರ್ಯಕರ್ತರಲ್ಲಿದ್ದ ಸಣ್ಣ ಪುಟ್ಟ ಗೊಂದಲಗಳನ್ನು ನಿವಾರಿಸಿಕೊಂಡು ಬಿಜೆಪಿಯ ತಂಡ ಚುನಾವಣೆ ಎದುರಿಸಲು ಸರ್ವ ಸನ್ನದ್ಧವಾಗಿದೆ. ಸಂಘಟಿತ ಪ್ರಯತ್ನದ ಮೂಲಕ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ಭರ್ಜರಿ ಬಹುಮತದಿಂದ ಗೆಲ್ಲುವ ಮೂಲಕ ರಾಜ್ಯದಲ್ಲಿ 150 ಸ್ಥಾನಗಳ ಗೆಲುವಿಗೆ ಪೂರಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ದೇಶದ ಎಲ್ಲಾ ಆಗು ಹೋಗುಗಳಿಗೆ ಅಂಬೇಡ್ಕರ್ ರವರ ನೇತೃತ್ವದಲ್ಲಿ ರಚನೆಯಾಗಿರುವ ಸಂವಿಧಾನವೇ ಸಾಕ್ಷಿ. ಪ್ರಪಂಚದ ಬೇರೆ ಬೇರೆ ದೇಶಗಳ ಸಂವಿಧಾನವನ್ನು ಅರಿತುಕೊಂಡು ಭಾರತಕ್ಕೆ ಬೇಕಾದ ಶ್ರೇಷ್ಠ ಸಂವಿಧಾನವನ್ನು ರಚನೆ ಮಾಡಿದ ಕೀರ್ತಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಸಲ್ಲುತ್ತದೆ. ಡಾ! ಬಿ. ಆರ್. ಅಂಬೇಡ್ಕರ್ ರವರ ಉನ್ನತ ಮೌಲ್ಯಗಳು, ತತ್ವಾದರ್ಶಗಳು ಸರ್ವಕಾಲಿಕ ಸತ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆಯ ಅಧ್ಯಕ್ಷತೆಯನ್ನು ವಹಿಸಿ, ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪಕ್ಷದ ನಾಯಕರೊಂದಿಗೆ ಪುಷ್ಪಾರ್ಚನೆಗೈದು ಮಾತನಾಡಿದರು.
ದೀನ ದಲಿತರು, ಎಸ್ಸಿ, ಎಸ್ಟಿ ಸಮುದಾಯಗಳ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕಾಂಗ್ರೆಸ್ ಅಂಬೇಡ್ಕರ್ ರವರನ್ನು ಎರಡೆರಡು ಬಾರಿ ಚುನಾವಣೆಯಲ್ಲಿ ಸೋಲಿಸಿ, ಅವರ ಜೀವನದ ಕೊನೆಯ ಕ್ಷಣಗಳಲ್ಲಿ ಯಾವ ರೀತಿ ಹೀನಾಯವಾಗಿ ನಡೆಸಿಕೊಂಡಿದೆ ಎಂಬುದು ಇಂದಿಗೂ ಚರ್ಚೆಗೆ ಗ್ರಾಸವಾಗಿರುವ ವಿಚಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಂಬೇಡ್ಕರ್ ರವರ ಜೀವಿತಾವಧಿಯ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥಗಳ ಹೆಸರಿನಲ್ಲಿ ಅಭಿವೃದ್ಧಿಪಡಿಸಿ ವಿಶೇಷ ಗೌರವ ಸಲ್ಲಿಸಿದೆ. ಮಾತ್ರವಲ್ಲದೆ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಅಂಬೇಡ್ಕರ್ ರವರ ತತ್ವಾದರ್ಶಗಳ ಆಶಯದಂತೆ ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಸಾಮಾಜಿಕ ನ್ಯಾಯವನ್ನು ಒದಗಿಸಿದೆ. ಆದರೆ ಕಾಂಗ್ರೆಸ್ ಅಂಬೇಡ್ಕರ್ ರವರ ಆಶಯಗಳಿಗೆ ತಕ್ಕಂತೆ ನಡೆಯದೆ, ಕೇವಲ ರಾಜಕೀಯ ಲಾಭಕ್ಕಾಗಿ ಮಾತ್ರ ಈ ಸಮುದಾಯಗಳನ್ನು ಬಳಸಿಕೊಳ್ಳುತ್ತಾ ಬಂದಿದೆ. ಬಿಜೆಪಿ ಯಾವ ರೀತಿ ಅಂಬೇಡ್ಕರ್ ರವರನ್ನು ಗೌರವಿಸಿದೆ, ಕಾಂಗ್ರೆಸ್ ಯಾವ ರೀತಿಯಲ್ಲಿ ಅವರನ್ನು ಅವಮಾನಿಸಿದೆ ಎಂಬ ವಿಚಾರಗಳನ್ನು ಸಮಾಜದಲ್ಲಿ ಪ್ರಚಲಿತಗೊಳಿಸಿದಾಗ ಕಾಂಗ್ರೆಸ್ಸಿನ ಕುಟಿಲ ನೀತಿಯ ಅಗಾಧತೆಯ ಬಗ್ಗೆ ಅರಿವು ಮೂಡಲು ಸಾಧ್ಯ ಎಂದು ಕುಯಿಲಾಡಿ ಹೇಳಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮತ್ತು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ರವರು ಮಾತನಾಡಿ, ಅಂಬೇಡ್ಕರ್ ರವರ ಜೀವನ ಮೌಲ್ಯಗಳು ಮತ್ತು ಸಾಧನೆಗಳ ಗುಣಗಾನಗೈದರು.
ಈ ಸಂದರ್ಭದಲ್ಲಿ ಶಾಸಕ ಕೆ.ರಘುಪತಿ ಭಟ್, ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ. ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಕೋಷ್ಠಗಳ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ., ಎಸ್.ಸಿ. ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಆನಂದ ಮಟಪಾಡಿ, ಉಡುಪಿ ನಗರ ಎಸ್.ಸಿ. ಮೋರ್ಚಾ ಅಧ್ಯಕ್ಷ ಕಿರಣ್ ಕಟ್ಟೆಗುಡ್ಡೆ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಉಪಾಧ್ಯಕ್ಷ ರುಡಾಲ್ಫ್ , ನಗರಸಭೆ ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ, ಜಿಲ್ಲಾ ಪ್ರಕೋಷ್ಠಗಳ ಪ್ರಮುಖರಾದ ಡಾ! ರಾಮಚಂದ್ರ ಕಾಮತ್, ಪಾಂಡುರಂಗ ಲಾಗ್ವಾಂಕರ್, ರವಿರಾಜ್ ಸುವರ್ಣ, ಸುದೀಪ್ ಶೆಟ್ಟಿ ನಿಟ್ಟೆ, ಚಂದ್ರಶೇಖರ್ ಪ್ರಭು ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಸಚಿವ ಶಿವಮೊಗ್ಗ ಕ್ಷೇತ್ರದ ಶಾಸಕರಾದ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.ಒಂದು ಕ್ಷೇತ್ರಕ್ಕೆ ಒಂದೇ ಟಿಕೆಟ್ ನೀಡುವ ಹಿನ್ನೆಲೆಯಲ್ಲಿ ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ರಾ ಮಾಜಿ ಸಚಿವ ಈಶ್ವರಪ್ಪ? ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಈಶ್ವರಪ್ಪನವರು ಪತ್ರ ಬರೆದಿದ್ದಾರೆ.
“ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ.ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನ ಮಾನ ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು” ಎಂದು ಈಶ್ವರಪ್ಪ ಹೇಳಿದ್ದಾರೆ.
ಉಡುಪಿ: ಅಧಿಕಾರದ ಅವಧಿ ಮುಗಿಯುತ್ತಾ ಬಂದಿರುವ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಚುನಾವಣಾ ಸಂದರ್ಭದಲ್ಲಿ ನೀಡಿದ ಪೊಳ್ಳು ಭರವಸೆಯ ಗ್ಯಾರಂಟಿಯನ್ನು ಪೂರೈಸದೆ ಕೈ ಕೊಟ್ಟಿರುವ ಕಾಂಗ್ರೆಸ್ ಕರ್ನಾಟಕದಲ್ಲೂ ಅಧಿಕಾರದ ಹಗಲು ಕನಸಿನಿಂದ ನಕಲಿ ಗ್ಯಾರಂಟಿ ಕಾರ್ಡ್ ಹಂಚುತ್ತಾ ಜನರ ಕಿವಿಗೆ ಹೂ ಇಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್’ ತತ್ವದಡಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ಚುನಾವಣಾ ಸಂದರ್ಭದಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿರುವ ಜೊತೆಗೆ ನೂರಾರು ವಿನೂತನ ಜನಪರ ಯೋಜನೆಗಳನ್ನು ಜಾರಿಗೆ ತಂದಿರುವುದು ಜಗಜ್ಜಾಹೀರಾಗಿದೆ. ಆಯುಷ್ಮಾನ್ ಭಾರತ್, ಕಿಸಾನ್ ಸಮ್ಮಾನ್, ಭಾಗ್ಯಲಕ್ಷ್ಮೀ, ಸಂಧ್ಯಾ ಸುರಕ್ಷಾ, ವಿದ್ಯಾಸಿರಿ, ಬೆಳಕು ಮುಂತಾದ ನೂರಾರು ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಜೀವನಮಟ್ಟ ಸುಧಾರಣೆಗೆ ವರದಾನವಾಗಿವೆ.
ಬಿಜೆಪಿ ದೇಶ ಹಿತ ಮತ್ತು ಜನ ಹಿತದ ಕೆಲಸ ಕಾರ್ಯಗಳಲ್ಲಿ ಮಗ್ನವಾಗಿರುವುದನ್ನು ಸಹಿಸದ ಕಾಂಗ್ರೆಸ್ ಪ್ರತಿಯೊಂದು ವಿಚಾರದಲ್ಲಿ ಮೂಗು ತೂರಿಸಿ ತನ್ನ ಸುಳ್ಳಿನ ಫ್ಯಾಕ್ಟರಿ ಮೂಲಕ ಅನಾವಶ್ಯಕ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಪ್ರಜ್ಞಾವಂತ ಜನತೆ ಕಾಂಗ್ರೆಸ್ಸಿನ ಸುಳ್ಳು ಭರವಸೆಗಳ ನಕಲಿ ಗ್ಯಾರಂಟಿ ಕಾರ್ಡ್ ಹಾಗೂ ಅಪಪ್ರಚಾರದ ಬಗ್ಗೆ ಎಚ್ಚರವಹಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
‘ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸಿದಂತೆ’ ಎಂಬಂತೆ ಇಷ್ಟು ದಿನ ತನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಗೋಗರೆಯುತ್ತಿದ್ದ ಡಿ.ಕೆ. ಶಿವಕುಮಾರ್ ಹಾಗೂ ಸಿದ್ಧರಾಮಯ್ಯನವರಿಗೆ ಈಗಾಗಲೇ ಕಾಂಗ್ರೆಸ್ಸಿನ ಹೀನಾಯ ಸೋಲಿನ ಸುಳಿವು ದೊರೆತಿರುವ ಕಾರಣಕ್ಕಾಗಿ ಸೋಲಿನ ಹೊಣೆ ಹೊರುವ ಸಲುವಾಗಿ ಖರ್ಗೆಯವರ ಹೆಸರನ್ನು ಸಿ.ಎಂ. ಸ್ಥಾನಕ್ಕೆ ಎಳೆದು ತರುತ್ತಿರುವುದು ಸ್ಪಷ್ಟವಾಗುತ್ತಿದೆ.
ರಾಜಸ್ಥಾನ, ಛತ್ತೀಸ್ಗಡ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಅಧಿಕಾರದ ಅವಧಿ ಮುಗಿಯುತ್ತಾ ಬಂದರೂ ಕಾಂಗ್ರೆಸ್ ನೀಡಿರುವ ಬೋಗಸ್ ಗ್ಯಾರಂಟಿಗಳು ಮಾತ್ರ ಎಳ್ಳಷ್ಟೂ ಕಾರ್ಯಗತಗೊಳ್ಳಲಿಲ್ಲ ಎಂಬುದು ಸತ್ಯ. ಈ ಬಗ್ಗೆ ಸ್ವತಃ ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ರವರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರವರಿಗೆ ಪದೇ ಪದೇ ಬರೆದ ಪತ್ರವೂ ನಿಷ್ಪ್ರಯೋಜಕವಾಗಿರುವುದು ಜಗಜ್ಜಾಹೀರಾಗಿದೆ. ಕೇವಲ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ನಕಲಿ ಗಾಂಧಿ ಕುಟುಂಬದ ಉದ್ಧಾರದ ಗ್ಯಾರಂಟಿ ಹೊಂದಿರುವ ಮುಳುಗುತ್ತಿರುವ ಹಡಗು ಕಾಂಗ್ರೆಸ್ಸಿನ ಎಕ್ಸಫೈರಿ ಡೇಟ್ ನಿಕಟವಾಗುತ್ತಿರುವುದು ಮಾತ್ರ ನೈಜ ಗ್ಯಾರಂಟಿಯಾಗಿದೆ. ಪ್ರಬುದ್ಧ ಜನತೆ ಭ್ರಷ್ಟ ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡಿನ ಮೋಸ ಜಾಲಕ್ಕೆ ಬಲಿಯಾಗದೆ ದೇಶಹಿತ ಜನಹಿತದ ಸಹಿತ ಅಭಿವೃದ್ಧಿಯನ್ನೇ ಮೂಲಮಂತ್ರವನ್ನಾಗಿಸಿರುವ ಬಿಜೆಪಿಯನ್ನು ಬೆಂಬಲಿಸುವ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು: ಚುನಾವಣಾ ಪೂರ್ವಭಾವಿಯಾಗಿ ಅಲೆವೂರು ಪಂಚಾಯತ್ ವ್ಯಾಪ್ತಿಯ ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಸದಸ್ಯರುಗಳು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನದಲ್ಲಿ ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಸರಕಾರದ ಸಾಧನೆಗಳ ಬಗ್ಗೆ ಮಾತನಾಡಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಎಲ್ಲರೂ ಸಮಯ ನೀಡಲು ವಿನಂತಿಸಿದರು. ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್, ಶಕ್ತಿಕೇಂದ್ರ ಪ್ರಮುಖ್ ರಾದ ಆಶಿಶ್ ಶೆಟ್ಟಿ ಹಾಗೂ ಶೇಖರ ಆಚಾರ್ಯ, ಹಿರಿಯರಾದ ಹರೀಶ್ ಸೇರಿಗಾರ್, ರಾಘವೇಂದ್ರ ಭಟ್ ಮಾರ್ಪಳ್ಳಿ, ಹೇಮಂತ್ ಶೆಟ್ಟಿ, ಅಶೋಕ್ ಶೆಟ್ಟಿಗಾರ್, ಶಶಿಕಲಾ ಶೆಟ್ಟಿ, ಕೇಶವ ಶೆಟ್ಟಿಗಾರ್, ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಯಾವುದೇ ಸರಕಾರ ಬಡವರಿಗೆ ನ್ಯಾಯವನ್ನು ಕೊಡುತ್ತಿರುವಾಗ ಇಲ್ಲಿಯವರೆಗೆ ಗ್ಯಾರಂಟಿ ಕಾರ್ಡನ್ನು ಕೊಟ್ಟಿಲ್ಲ. ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎಂಬುದರ ಅರ್ಥವೇನೆಂದರೆ ಜನ ತಮ್ಮನ್ನು ನಂಬುವುದಿಲ್ಲ ಎಂಬುದಾಗಿದೆ. ಈ ಕಾರಣಕ್ಕಾಗಿ ಕಾಂಗ್ರೆಸ್ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡುಗಳಿಗೆ ಯಾವುದೇ ವಾರಂಟಿ ಇಲ್ಲ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿ ಪುರಭವನದಲ್ಲಿ ನಡೆದ ಚುನಾವಣಾ ನಿರ್ವಹಣಾ ಸಮಿತಿಯ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಜಾರಿಗೆ ತಂದಿರುವ ಭಾಗ್ಯಲಕ್ಷ್ಮೀ, ಸಂಧ್ಯಾ ಸುರಕ್ಷಾ ಮುಂತಾದ ಜನಪರ ಯೋಜನೆಗಳಿಗೆ ಯಾವುದೇ ಗ್ಯಾರಂಟಿ ಕಾರ್ಡ್ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತಂದಿರುವ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಕೇಂದ್ರದಿಂದ ರೂ.6,000/- ರಾಜ್ಯದಿಂದ ರೂ.4,000/- ನೇರ ನಗದು ವರ್ಗಾವಣೆ ಮಾಡುತ್ತಿರುವ ಬಗ್ಗೆ ಯಾವುದೇ ಗ್ಯಾರಂಟಿ ಕಾರ್ಡ್ ನೀಡಿಲ್ಲ. ಈ ಎಲ್ಲಾ ವಿಚಾರಗಳನ್ನು ಬಿಜೆಪಿ ಕಾರ್ಯಕರ್ತರು ಜನತೆಗೆ ಮನವರಿಕೆ ಮಾಡಬೇಕಾದ ಅವಶ್ಯಕತೆ ಇದೆ. ಈಡೇರಿಸಲು ಸಾಧ್ಯವಿಲ್ಲದ, ಕಾಂಗ್ರೆಸ್ಸಿನ ವಾರಂಟಿ ಇಲ್ಲದ ಗ್ಯಾರಂಟಿ ಕಾರ್ಡಿನ ವಾಸ್ತವಿಕತೆಯ ಬಗ್ಗೆ ಪಕ್ಷದ ಕಾರ್ಯಕರ್ತರು ಜನಮಾನಸದಲ್ಲಿ ಅರಿವು ಮೂಡಿಸಬೇಕು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಎಸ್.ಸಿ., ಎಸ್.ಟಿ. ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವ ಜೊತೆಗೆ ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಜಾರಿಗೆ ತಂದಿರುವ ಒಳ ಮೀಸಲಾತಿಯಿಂದ ಬಡವರ ಮಕ್ಕಳು ಕೂಡಾ ಉನ್ನತ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ನಾಂದಿ ಹಾಡಿರುವುದು ಸರಕಾರದ ಸಾಮಾಜಿಕ ನ್ಯಾಯದ ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.
ವಿಧಾನಸಭಾ ಚುನಾವಣೆಯ ನಿರ್ವಹಣೆಗಾಗಿ ಬಿಜೆಪಿ ರಾಜ್ಯಾಧ್ಯಕ್ಷರು, ಕೇಂದ್ರ ಸಚಿವರು, ಕೇಂದ್ರದ ನಾಯಕತ್ವ ಹಾಗೂ ಮಾರ್ಗದರ್ಶನದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯನ್ನು ರಚಿಸಲಾಗಿದೆ. ಸುಮಾರು 24 ಉಪ ಸಮಿತಿಗಳ ಮೂಲಕ ಜವಾಬ್ದಾರಿಯ ಹಂಚಿಕೆ ಮಾಡಲಾಗಿದೆ. ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರವಾರು ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಒಂದು ತಂಡವಾಗಿ ಕೆಲಸ ಮಾಡಬೇಕಾಗಿದೆ ಎಂದರು.
ಚುನಾವಣಾ ಪೂರ್ವ ಸಮೀಕ್ಷೆಗಳ ನಿಖರ ಅಂಕಿ ಅಂಶಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ನಿಶ್ಚಿತವಾಗಿ ಅಧಿಕಾರಕ್ಕೆ ಬರಲಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಪಕ್ಷದ ಬೂತ್, ಶಕ್ತಿಕೇಂದ್ರ, ಮಹಾ ಶಕ್ತಿಕೇಂದ್ರ, ಮಂಡಲ, ಪ್ರಕೋಷ್ಠ, ಮೋರ್ಚಾ ಹಾಗೂ ಜಿಲ್ಲಾ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಪಕ್ಷದ ಯೋಚನೆ ಯೋಜನೆ ಹಾಗೂ ಸರಕಾರದ ಸಾಧನೆಗಳನ್ನು ಮತದಾರರಿಗೆ ತಲುಪಿಸಿ, ಮಗದೊಮ್ಮೆ ಜಿಲ್ಲೆಯ ಐದೂ ಸ್ಥಾನಗಳ ಗೆಲುವಿಗೆ ಬದ್ಧತೆಯಿಂದ ಶ್ರಮಿಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಸ್ತಾವಿಕವಾಗಿ ಮಾತನಾಡಿ, ಉಡುಪಿ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರವಾರು ಚುನಾವಣಾ ನಿರ್ವಹಣಾ ಸಮಿತಿಯ ಉತ್ತಮ ತಂಡ ರಚನೆಯಾಗಿದೆ. ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ನೀಡುವ ಮಾರ್ಗದರ್ಶನದಂತೆ ತಮ್ಮ ಕ್ಷೇತ್ರದಲ್ಲಿ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು. ಚುನಾವಣೆಯ ಹೊಸ್ತಿಲಲ್ಲಿರುವ ಈ ಸಂದರ್ಭದಲ್ಲಿ ಎಲ್ಲರೂ ತಮ್ಮ ಗುರುತರವಾದ ಜವಾಬ್ದಾರಿಯನ್ನು ಅರಿತು ಸಂಘಟಿತ ಪ್ರಯತ್ನದ ಮೂಲಕ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳ ದೊಡ್ಡ ಅಂತರದ ಗೆಲುವಿಗೆ ಶ್ರಮಿಸಿ, ರಾಜ್ಯಕ್ಕೆ ಕೊಡುಗೆ ನೀಡಬೇಕು ಎಂದರು.
ಉಡುಪಿ ಜಿಲ್ಲೆ ಹಾಗೂ ಉಡುಪಿ, ಕಾರ್ಕಳ, ಕಾಪು, ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ನಿರ್ವಹಣಾ ಸಮಿತಿಯ ವಿವಿಧ 24 ವಿಭಾಗಗಳ ಪ್ರತ್ಯೇಕ ಸಭೆಗಳನ್ನು ಆಯೋಜಿಸಲಾಯಿತು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ರವರು ಸಮಾರೋಪ ಸಭೆಯನ್ನುದ್ದೇಶಿಸಿ ಮಾತನಾಡಿ ಮಾರ್ಗದರ್ಶನ ನೀಡಿದರು.
ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಚುನಾವಣಾ ನಿರ್ವಹಣಾ ಸಮಿತಿಯ ಜಿಲ್ಲಾ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರಗಳ ಚುನಾವಣಾ ನಿರ್ವಹಣಾ ಸಮಿತಿಯ ತಂಡದ ವಿವಿಧ ವಿಭಾಗಗಳ ಸಂಚಾಲಕರು, ಸಹ ಸಂಚಾಲಕರು ಹಾಗೂ ಸದಸ್ಯರು ಭಾಗವಹಿಸಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ವಂದಿಸಿದರು.
ಕಾಪು: ಚುನಾವಣಾ ಪೂರ್ವಭಾವಿಯಾಗಿ ಎಲ್ಲೂರಯ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಸದಸ್ಯರುಗಳು ಹಾಗೂ ಪಕ್ಷದ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನದಲ್ಲಿ ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಕ್ಷೇತ್ರದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಮಾತನಾಡಿ ಚುನಾವಣೆಗಾಗಿ ಎಲ್ಲರೂ ಸಮಯ ನೀಡಲು ವಿನಂತಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಹಿಂದುಳಿದ ವರ್ಗ ಮೋರ್ಚದ ಜಿಲ್ಲಾಧ್ಯಕ್ಷರಾದ ಸುರೇಂದ್ರ ಪಣಿಯೂರು, ಪಂಚಾಯತ್ ಅಧ್ಯಕ್ಷರಾದ ಯೋಗಿನಿ ಶೆಟ್ಟಿ, ಮಂಡಲ ಪ್ರಧಾನಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಉಪಸ್ಥಿತರಿದ್ದರು . ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಚಂದ್ರಶೇಖರ ಕೋಟ್ಯನ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಪ್ರಸಾದ್ ಶೆಟ್ಟಿ ಕುತ್ಯಾರು, ನಾಗೇಶ್ ಭಟ್, ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ, ಲತಾ ಆಚಾರ್ಯ, ಉಚ್ಚಿಲ, ಎಲ್ಲೂರು, ಬೆಳಪು, ಮುದರಂಗಡಿ, ಕುತ್ಯಾರು ಹಾಗೂ ಮಜೂರು ಪಂಚಾಯತ್ ನ ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಉಡುಪಿ: ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಏ.12ರಂದು ಬೆಳಿಗ್ಗೆ 10.00 ಗಂಟೆಗೆ ಕಾಪು ಉಚ್ಚಿಲ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನವನ್ನು ಯೋಜನಾಬದ್ದ ಪೂರ್ವಸಿದ್ಧತೆ ಹಾಗೂ ಸಕ್ರಿಯ ಭಾಗವಹಿಸುವಿಕೆ ಮೂಲಕ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಪಕ್ಷದ ಸಾಮಾಜಿಕ ಜಾಲತಾಣದ ಸಕ್ರಿಯ ಕಾರ್ಯಕರ್ತರಿಗೆ ಕರೆ ನೀಡಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಏ.12ರ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದ ಉಡುಪಿ ಜಿಲ್ಲಾ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಾಮಾಜಿಕ ಜಾಲತಾಣ ಇಂದು ಪಕ್ಷದ ಬೆಳವಣಿಗೆ ಹಾಗೂ ಸರಕಾರದ ಸಕಾರಾತ್ಮಕ ಅಂಶಗಳ ಪ್ರಚಾರದಲ್ಲಿ ಮಹತ್ತರ ಪಾತ್ರ ವಹಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಹಾಗೂ ಯುವ ಕಾರ್ಯಕರ್ತರು ನಿಗದಿತ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ತಮ್ಮ ಹೆಸರನ್ನು ನೊಂದಾಯಿಸಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರು ಪ್ರಧಾನ ಭಾಷಣ ಮಾಡಲಿರುವ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜ್ಯ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ವಿಕಾಸ್ ಕುಮಾರ್ ಪುತ್ತೂರು ಸಹಿತ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಪೇಕ್ಷಿತರ ಜೊತೆಗೆ ಪಕ್ಷದ ವಿಚಾರಧಾರೆಯನ್ನು ಹೊಂದಿರುವ ಯುವ ಸಮುದಾಯವನ್ನು ಡಿಜಿಟಲ್ ಕಾರ್ಯಕರ್ತರ ಸಮ್ಮೇಳನಕ್ಕೆ ಜೋಡಿಸುವಲ್ಲಿ ಸಾಮಾಜಿಕ ಜಾಲತಾಣ ವಿಭಾಗ ಹಾಗೂ ಯುವ ಮೋರ್ಚಾ ತಂಡ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು. ಸಂಘಟಿತ ಪ್ರಯತ್ನದ ಮೂಲಕ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.
ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕ ಸುದೀಪ್ ಶೆಟ್ಟಿ ನಿಟ್ಟೆ ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮತ್ತು ಮಂಡಲ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮ ವಿಭಾಗದ ಪ್ರಮುಖರು ಭಾಗವಹಿಸಿದ್ದರು.
ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರು ಏ.12ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಏ.12ರ ಬೆಳಗ್ಗೆ 10.00 ಗಂಟೆಗೆ ಕಾಪು ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗ ಮಟ್ಟದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಬಿಜೆಪಿ ಹಿರಿಯರ ಚಿಂತನೆ, ದೂರದರ್ಶಿತ್ವ ಮತ್ತು ಅವರು ಹಾಕಿ ಕೊಟ್ಟ ಮಾರ್ಗ ಇಂದು ಸರ್ವವ್ಯಾಪಿ ಆಡಳಿತದ ಮೂಲಕ ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಸ್ಥಾಪನಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಭಾರತ ಮಾತೆ ಮತ್ತು ಪಕ್ಷದ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.
ಇತರ ರಾಜಕೀಯ ಪಕ್ಷಗಳು ಕೇವಲ ಅಧಿಕಾರದ ಸ್ವಾರ್ಥ ರಾಜಕಾರಣ ಮತ್ತು ಕುಟುಂಬದ ಹಿತಕ್ಕೆ ಸೀಮಿತವಾಗಿದ್ದರೆ, ಬಿಜೆಪಿ ಅಂತ್ಯೋದಯ ಪರಿಕಲ್ಪನೆಯಡಿ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಅಭ್ಯುದಯದ ಬಗ್ಗೆ ಚಿಂತನೆ ನಡೆಸುತ್ತಿದೆ. ರಾಷ್ಟ್ರೀಯ ವಿಚಾರಧಾರೆ, ದೇಶದ ಭದ್ರತೆ ಮತ್ತು ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಮರ್ಥ ಆಡಳಿತದ ಫಲವಾಗಿ ಭಾರತ ಇಂದು ಜಗತ್ತಿನ ಐದನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಈ ಬೆಳವಣಿಗೆ ಪಕ್ಷದ ರಾಜಕೀಯ ಮೌಲ್ಯಗಳನ್ನು ಎತ್ತಿ ಹಿಡಿದಿದೆ ಎಂದರು.
ಬಿಜೆಪಿ ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ವಿಧಾನಸಭಾ ಚುನಾವಣೆಗೆ ಸುಮಾರು 1 ತಿಂಗಳ ಅವಧಿ ಬಾಕಿ ಇರುವ ಸನ್ನಿವೇಶದಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷದ ಕಾರ್ಯ ಚಟುವಟಿಕೆಗಳು ಮತ್ತು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳ ದೊಡ್ಡ ಅಂತರದ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸುವ ಮೂಲಕ ರಾಜ್ಯದಲ್ಲಿ 150ಕ್ಕೂ ಹೆಚ್ಚಿನ ಸ್ಥಾನಗಳನ್ನು ಜಯಿಸಿ ಮಗದೊಮ್ಮೆ ಬಿಜೆಪಿ ನೇತೃತ್ವದ ಸರಕಾರ ಆಡಳಿತದ ಚುಕ್ಕಾಣಿ ಹಿಡಿಯಲು ಬದ್ಧತೆಯಿಂದ ಕೈಜೋಡಿಸಬೇಕು ಎಂದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರ ಪರಿಶ್ರಮ, ತ್ಯಾಗ, ಬಲಿದಾನದ ಮೂಲಕ ವಿಶ್ವರೂಪಿಯಾಗಿ ಬೆಳೆದ ಬಿಜೆಪಿ ಇಂದು 10 ಕೋಟಿಗೂ ಮಿಕ್ಕಿ ಸದಸ್ಯರನ್ನೊಳಗೊಂಡಿರುವ ಜಗತ್ತಿನ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ. ಪಕ್ಷದ ಹಿರಿಯರ ‘ಏಕಾತ್ಮ ಮಾನವತಾವಾದ’ ತತ್ವದ ಮೂಲಕ ಬಿಜೆಪಿ ಯಾವ ಹಂತದಿಂದ ಇಂದು ಎಷ್ಟು ಎತ್ತರಕ್ಕೆ ವಿಸ್ತಾರವಾಗಿ ಬೆಳೆದಿದೆ ಎಂಬ ಅವಲೋಕನ ಮಾಡಬೇಕಿದೆ. ಸದೃಢ ಸಂಕಲ್ಪದಿಂದ ಗೆಲುವು ಸಾಧ್ಯ ಎಂಬುದನ್ನು ಬಿಜೆಪಿ ರುಜುವಾತುಪಡಿಸಿದೆ. ಬಿಜೆಪಿ ದೇಶದಲ್ಲಿ ಇನ್ನೂ ಕೆಲವು ರಾಜ್ಯಗಳನ್ನು ಗೆಲ್ಲಬೇಕಾಗಿದೆ. ಸಂಘಟಿತ ಪ್ರಯತ್ನದ ಮೂಲಕ ಮಗದೊಮ್ಮೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರದ ಆಡಳಿತದ ಸಂಕಲ್ಪದೊಂದಿಗೆ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳು, ಜಿ.ಪಂ., ತಾ.ಪಂ. ಸಹಿತ ಎಲ್ಲಾ ಸ್ತರಗಳಲ್ಲಿ ಪಕ್ಷದ ಪೂರ್ಣ ಪ್ರಮಾಣದ ಗೆಲುವಿಗೆ ಕಾರ್ಯಕರ್ತರು ಹುಮ್ಮಸ್ಸಿನಿಂದ ತೊಡಗಿಸಿಕೊಳ್ಳಬೇಕು ಎಂದರು.
ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಬಿಜೆಪಿ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ವಂದಿಸಿದರು.