ಕಾಪು: ಉದ್ಯಾವರ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಚುನಾವಣಾ ಪೂರ್ವಬಾವಿ ಸಭೆಯು ಸೌಂದರ್ಯ ಸಭಾಂಗಣ ದಲ್ಲಿ ನಡೆಯಿತು. ಬೂತ್ ಗಳಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ವಿಸ್ತಾರವಾಗಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರದಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಉದ್ಯಾವರ ಉಸ್ತುವಾರಿ ನವೀನ್ ಎಸ್ ಕೆ, ಜಿಲ್ಲಾ ಪ್ರಕೋಷ್ಟಗಳ ಸಂಚಾಲಕ ವಿಜಯ ಕುಮಾರ್ ಉದ್ಯಾವರ ವಿಸ್ತರಕ್ ದಿನಕರ ಪೂಜಾರಿ ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವಿ ಕೋಟ್ಯಾನ್ ಪಡುಕರೆ ,ಕಾರ್ಯದರ್ಶಿ ಅಶೋಕ್ ಕುಮಾರ್ ಅಲೆವೂರ್,ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳಾದ ಸಚಿನ್ ಬೊಲ್ಜೆ ಸತೀಶ್ ಪೂಜಾರಿ, ಪ್ರಮುಖರಾದ ಜಿತೇಂದ್ರ ಶೆಟ್ಟಿ, ವಿನೋದ್, ಬೇಬಿ ರಾಜೇಶ್, ಆಶಿಶ್ ಶೆಟ್ಟಿ, ಸುರೇಶ್ ನಾಯಕ್ , ಗ್ರಾಮ ಪಂಚಾಯ್ತ್ ಸದಸ್ಯರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿದ್ದರು.
ಉಡುಪಿ: ಬಿಜೆಪಿ ಸ್ಥಾಪನಾ ದಿನವನ್ನು ಏ.6ರಂದು ಬೆಳಿಗ್ಗೆ 9.00 ಗಂಟೆಗೆ ಜಿಲ್ಲೆಯ ಎಲ್ಲ 1,111 ಬೂತ್ ಗಳಲ್ಲಿ ಬೂತ್ ಅಧ್ಯಕ್ಷರ ಮನೆಯ ಮೇಲೆ ಪಕ್ಷದ ಧ್ವಜಾರೋಹಣವನ್ನು ನೆರವೇರಿಸಿ, ಪಕ್ಷದ ತತ್ವ ಸಿದ್ಧಾಂತ ಹಾಗೂ ಕಾರ್ಯ ಪದ್ಧತಿಗಳ ಚಿಂತನಾ ಸಭೆಯೊಂದಿಗೆ ಆಚರಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಏ.6ರ ಬೆಳಿಗ್ಗೆ 9.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ನಡೆಯಲಿದ್ದು, ಬೆಳಿಗ್ಗೆ 9.40ಕ್ಕೆ ವೆಬೆಕ್ಸ್ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನೇರ ಪ್ರಸಾರವನ್ನು ವೀಕ್ಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಏ.6, 7, 8 ಮತ್ತು 9ರಂದು ಮನೆ-ಮನೆ ಸಂಪರ್ಕ ಅಭಿಯಾನ:
ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯನ್ನು ಹೆಚ್ಚಿಸಿದೆ. ಸಾಮಾಜಿಕ ನ್ಯಾಯವನ್ನು ವಿಸ್ತರಿಸುವ ಸಲುವಾಗಿ ಒಳ ಮೀಸಲಾತಿಯನ್ನು ಘೋಷಣೆ ಮಾಡಿದೆ. ರಾಜ್ಯ ಸರಕಾರದ ಈ ಐತಿಹಾಸಿಕ ನಿರ್ಣಯದ ಬಗ್ಗೆ ಏ.6, 7, 8 ಮತ್ತು 9ರಂದು ಜಿಲ್ಲೆಯಾದ್ಯಂತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮುದಾಯದ ವಸತಿ ಕ್ಷೇತ್ರಗಳಲ್ಲಿ ಮನೆ ಮನೆ ಬೇಟಿ ಮೂಲಕ ವ್ಯಾಪಕ ಪ್ರಚಾರ ಕಾರ್ಯ ನಡೆಯಲಿದೆ.
ಏ.14 ಡಾ! ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ:
ಏ.14ರಂದು ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಎಲ್ಲ ಬೂತ್ ಗಳಲ್ಲಿ ಆಚರಿಸಲಾಗುವುದು.
ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನದ ಸ್ಮರಣೀಯ ಸ್ಥಳಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪಂಚ ತೀರ್ಥಗಳ ಹೆಸರಿನಲ್ಲಿ ಅಭಿವೃದ್ಧಿಪಡಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಮಂಡಲಗಳ ವ್ಯಾಪ್ತಿಯಲ್ಲಿರುವ ಡಾ! ಅಂಬೇಡ್ಕರ್ ರವರ ಪ್ರತಿಮೆಗಳನ್ನು ಸ್ವಚ್ಛಗೊಳಿಸಿ ಮಾಲಾರ್ಪಣೆಗೈದು, ಅವರ ವಿಚಾರಧಾರೆ ಹಾಗೂ ವೈಚಾರಿಕತೆಯ ಪ್ರಚಾರಕ್ಕೆ ಒತ್ತು ನೀಡುವ ಕಾರ್ಯಕ್ರಮಗಳು ನಡೆಯಲಿವೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು: ಕುರ್ಕಾಲು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ, ಜನಪ್ರತಿನಿಧಿಗಳ ಹಾಗೂ ಪದಾಧಿಕಾರಿಗಳ ಸಭೆ ನಡೆಯಿತು. ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಸಭೆಯಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಚುನಾವಣಾ ಪ್ರಭಾರಿ ಸುಲೋಚನಾ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ್ ಕುರ್ಕಾಲು, ಪ್ರಧಾನ ಕಾರ್ಯದರ್ಶಿ ಗುರುಕ್ರಪಾ ರಾವ್, ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ, ಮಹಿಳಾ ಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಎಸ್ ಸಿ ಮೋರ್ಚ ಅಧ್ಯಕ್ಷರಾದ ನಾಗೇಂದ್ರ, ಮುರಳೀಧರ್ ಪೈ, ಶಕ್ತಿಕೇಂದ್ರ ಪ್ರಮುಖರಾದ ಪ್ರವೀಣ್ ಶೆಟ್ಟಿ, ಸಂತೋಷ್, ನಿತಿನ್ ಸೇರಿಗಾರ್, ಪಂಚಾಯತ್ ಸದಸ್ಯರುಗಳು, ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸೂಚನೆಯಂತೆ ವಿಧಾನಸಭಾ ಅಭ್ಯರ್ಥಿಗಳ ಬಗ್ಗೆ ಮಾ.31ರಂದು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳು ಹಾಗೂ ಇತರ ಪ್ರಮುಖರ ಮಂಡಲವಾರು ಅಭಿಪ್ರಾಯದ ಮತದಾನದ ವರದಿಯನ್ನು (ಪೋಲಿಂಗ್ ರಿಪೋರ್ಟ್) ಬಿಜೆಪಿ ರಾಜ್ಯ ತಂಡ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಹಸ್ತಾಂತರಿಸಿತು.
ಈ ಸಂದರ್ಭದಲ್ಲಿ ರಾಜ್ಯ ತಂಡದ ನೇತೃತ್ವ ವಹಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ, ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ: ಭಾರತೀಯ ಜನತಾ ಪಾರ್ಟಿ ತನ್ನ ಪಕ್ಷದ ಸಂವಿಧಾನದ ಚೌಕಟ್ಟಿನೊಳಗೆ ಹಮ್ಮಿಕೊಂಡಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಳಲ್ಲಿ ಒಂದಾಗಿರುವ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಣೆ ಅಭಿಯಾನವು ರಾಜಕೀಯ ಪಕ್ಷಗಳಲ್ಲೇ ಒಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ ಹೇಳಿದರು.
ಅವರು ಮಾ.31ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣಾ ಮಂಡಲ ಶಹ ಅಭಿಪ್ರಾಯ ಸಂಗ್ರಹಣೆ ಸಭೆಯಲ್ಲಿ ರಾಜ್ಯ ತಂಡದ ನೇತೃತ್ವ ವಹಿಸಿ ಮಾತನಾಡಿದರು.
ತನ್ನ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು ಎನ್ನುವ ಬಗ್ಗೆ ಪಕ್ಷದ ಸಾಮಾನ್ಯ ಕಾರ್ಯಕರ್ತನಿಂದಲೂ ಅಭಿಪ್ರಾಯ ಸಂಗ್ರಹಣೆ ಮಾಡುವಲ್ಲಿ ಭಾರತೀಯ ಜನತಾ ಪಾರ್ಟಿ ಮೊಟ್ಟಮೊದಲನೆಯ ಸ್ಥಾನದಲ್ಲಿ ನಿಲ್ಲುತ್ತದೆ ಎಂದು ಅವರು ಹೇಳಿದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 16,000ಕ್ಕೂ ಮಿಕ್ಕಿ ಶಕ್ತಿಕೇಂದ್ರಗಳ ಅಧ್ಯಕ್ಷರ ಸಹಿತ ಮಹಾ ಶಕ್ತಿಕೇಂದ್ರ, ಮಂಡಲ, ಪ್ರಕೋಷ್ಠ, ಮೋರ್ಚಾ, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಪದಾಧಿಕಾರಿಗಳು ಹಾಗೂ ಪಕ್ಷದ ಇತರ ಪ್ರಮುಖರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ ಒಂದು ಅಥವಾ ಗರಿಷ್ಠ ಮೂರು ಮಂದಿ ಅಭ್ಯರ್ಥಿಗಳ ಹೆಸರನ್ನು ಸೂಚಿಸಲು ಅವಕಾಶ ನೀಡಲಾಗಿದೆ. ಮತದಾನ ಪ್ರಕ್ರಿಯೆಯ ಬಳಿಕ ಸೀಲ್ ಮಾಡಿದ ಬ್ಯಾಲೆಟ್ ಪೇಪರ್ ಬಾಕ್ಸ್ ಗಳನ್ನು ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಪರಿಶೀಲಿಸಲಿದ್ದಾರೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪರವರು ಮಾರ್ಗದರ್ಶನದ ಮಾತುಗಳನ್ನಾಡಿ, ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಭರ್ಜರಿ ಗೆಲುವಿಗೆ ಪಕ್ಷದ ಪ್ರಮುಖರು, ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ತಕ್ಷಣದಿಂದ ಕಾರ್ಯಪ್ರವೃತ್ತರಾಗಿ ಬದ್ಧತೆ ಹಾಗೂ ಕ್ರಿಯಾಶೀಲತೆಯಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4.30ರ ತನಕ ನಡೆದ ಮಂಡಲವಾರು ಅಭಿಪ್ರಾಯ ಸಂಗ್ರಹಣೆಯಲ್ಲಿ ಉಡುಪಿ ನಗರ ಮತ್ತು ಗ್ರಾಮಾಂತರ, ಕಾಪು, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ಮಂಡಲಗಳ ಅಪೇಕ್ಷಿತ ಪದಾಧಿಕಾರಿಗಳ ಮತದಾನ ಪ್ರಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಮಾಜಿ ಸಚಿವರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಮ್. ಸುಕುಮಾರ್ ಶೆಟ್ಟಿ, ವಿಧಾನಸಭಾ ಕ್ಷೇತ್ರವಾರು ಚುನಾವಣಾ ಉಸ್ತುವಾರಿಗಳಾದ ಗಣೇಶ್ ಹೊಸಬೆಟ್ಟು (ಉಡುಪಿ), ಸುಲೋಚನಾ ಭಟ್ (ಕಾಪು), ಶ್ಯಾಮಲಾ ಎಸ್. ಕುಂದರ್ (ಕುಂದಾಪುರ), ಯಶ್ಪಾಲ್ ಎ. ಸುವರ್ಣ (ಬೈಂದೂರು) ಹಾಗೂ ಮಂಡಲಗಳ ಅಧ್ಯಕ್ಷರುಗಳಾದ ಮಹೇಶ್ ಠಾಕೂರ್ ಉಡುಪಿ, ವೀಣಾ ನಾಯ್ಕ್ ಉಡುಪಿ ಗ್ರಾಮಾಂತರ, ಶ್ರೀಕಾಂತ್ ನಾಯಕ್ ಕಾಪು, ಶಂಕರ ಅಂಕದಕಟ್ಟೆ ಕುಂದಾಪುರ, ಮಹಾವೀರ ಹೆಗ್ಡೆ ಕಾರ್ಕಳ, ದೀಪಕ್ ಕುಮಾರ್ ಶೆಟ್ಟಿ ಬೈಂದೂರು ಹಾಗೂ ಬಿಜೆಪಿ ರಾಷ್ಟ್ರೀಯ, ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಪದಾಧಿಕಾರಿಗಳು, ಮಾಜಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ ಮತ್ತು ಸದಾನಂದ ಉಪ್ಪಿನಕುದ್ರು ವಿವಿಧ ಮಂಡಲಗಳ ಅಭಿಪ್ರಾಯ ಸಂಗ್ರಹಣೆಯ ಮತದಾನ ಪ್ರಕ್ರಿಯೆಯನ್ನು ನಿರ್ವಹಿಸಿದರು.
ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಶ್ರೀರಾಮ ನವಮಿಯನ್ನು ಆಚರಿಸಲಾಯಿತು.
ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತು ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಡುಪಿ: ಮೇ 10ರಂದು ಕರ್ನಾಟಕ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಜಿಲ್ಲೆಯ ಐದು ಸ್ಥಾನಗಳ ಸಹಿತ ರಾಜ್ಯದಲ್ಲಿ 150ಕ್ಕೂ ಹೆಚ್ಚಿನ ಸ್ಥಾನಗಳ ಗೆಲುವು ಖಚಿತ; ಉಚಿತ ಪೊಳ್ಳು ಭಾಗ್ಯಗಳ ಆಮಿಷ ಒಡ್ಡಿರುವ ಭ್ರಷ್ಟ ಕಾಂಗ್ರೆಸ್ಸಿಗೆ ಸೋಲು ಖಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಐತಿಹಾಸಿಕ ಮೀಸಲಾತಿ ಮತ್ತು ಒಳ ಮೀಸಲಾತಿ ಘೋಷಣೆಯ ಸಹಿತ ವಿವಿಧ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹಾಗೂ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳು, ಅಭಿವೃದ್ಧಿ ಕೆಲಸ ಕಾರ್ಯಗಳು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಾಲಿಗೆ ವರದಾನವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಭ್ರಷ್ಟಾಚಾರದ ಗಂಗೋತ್ರಿ ಎಂದೇ ಪ್ರಚಲಿತವಾಗಿರುವ ಕಾಂಗ್ರೆಸ್ ತನ್ನ ಸ್ವಯಂಕೃತ ದೇಶ ವಿರೋಧಿ, ಹಿಂದೂ ವಿರೋಧಿ ನೀತಿಗಳಿಂದ ಪ್ರಸಕ್ತ ಚುನಾವಣೆಯಲ್ಲಿ ಹೀನಾಯವಾಗಿ ಸೋತು ರಾಜ್ಯದಲ್ಲೂ ಮೂಲೆಗುಂಪಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಪೂರ್ವಸಿದ್ಧತೆಗಳ ಅಂಗವಾಗಿ ಜಿಲ್ಲೆಯಾದ್ಯಂತ ನಡೆದಂತಹ ಬೂತ್ ವಿಜಯ ಅಭಿಯಾನ, ವಿಜಯ ಸಂಕಲ್ಪ ಅಭಿಯಾನ, ವಿಜಯ ಸಂಕಲ್ಪ ಯಾತ್ರೆ ಮುಂತಾದ ಅರ್ಥಪೂರ್ಣ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿರುವ ಬೃಹತ್ ಜನ ಸಮೂಹ ವಿಧಾನಸಭಾ ಚುನಾವಣೆಯ ಭರ್ಜರಿ ವಿಜಯದ ಸಂಕಲ್ಪಕ್ಕೆ ಶಕ್ತಿ ತುಂಬಿದೆ ಎಂದಿದ್ದಾರೆ.
ಅತ್ಯಂತ ವಿಶ್ವಾಸದಿಂದ ಸಂಘಟಿತ ಪ್ರಯತ್ನದ ಮೂಲಕ ವಿಧಾನಸಭಾ ಚುನಾವಣೆಯನ್ನು ಸಮರ್ಪಕ ರೀತಿಯಲ್ಲಿ ಎದುರಿಸಲು ಜಿಲ್ಲಾ ಬಿಜೆಪಿ ಸರ್ವಸನ್ನದ್ಧವಾಗಿದೆ. ಪಕ್ಷ ಘೋಷಿಸುವ ಅಭ್ಯರ್ಥಿಗಳ ದೊಡ್ಡ ಅಂತರದ ಗೆಲುವಿಗೆ ಸಮಸ್ತ ಕಾರ್ಯಕರ್ತ ಬಂಧುಗಳು ಅತ್ಯಂತ ಬದ್ಧತೆ ಮತ್ತು ಕ್ರಿಯಾಶೀಲತೆಯಿಂದ ಕೈಜೋಡಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯು ಇದೇ ಬರುವ 10 ಮೇ 2023ರಂದು ನಡೆಯಲಿದೆ ಎಂದು ಚುನಾವಣಾ ಆಯೋಗವು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.
ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು
ಮೇ 10ರಂದು ಮತದಾನ ನಡೆಸಿ ಮೇ13ರಂದೇ ಫಲಿತಾಂಶ ಘೋಷಣೆಯಾಗಲಿದೆ. ಎಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಕರ್ನಾಟಕದಲ್ಲಿ ಈ ಬಾರಿ ಒಟ್ಟು 5.22 ಕೋಟಿ ಮತದಾರರಿದ್ದಾರೆ. ಇದರಲ್ಲಿ 2 ಕೋಟಿ 59 ಲಕ್ಷ ಮಹಿಳಾ ಮತದಾರರು
, 2 ಕೋಟಿ 62 ಲಕ್ಷ ಪುರುಷ ಮತದಾರರಿದ್ದಾರೆ. ರಾಜ್ಯದಲ್ಲಿ ಒಟ್ಟು 58, 282 ಮತಗಟ್ಟೆ ಸ್ಥಾಪಿಸಲಾಗುವುದು. ನಗರಪ್ರದೇಶದಲ್ಲಿ 24,063 ಮತಗಟ್ಟೆ ಸ್ಥಾಪನೆ, ಗ್ರಾಮೀಣ ಪ್ರದೇಶದಲ್ಲಿ 34,219 ಮತಗಟ್ಟೆ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ
ಉಡುಪಿ: ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಇದೆ ಎಂದು ಲಂಡನ್ ವಿಶ್ವವಿದ್ಯಾನಿಲಯದಲ್ಲಿ ಹೇಳಿಕೆ ನೀಡಿ ದೇಶದ ಮಾನ ಹರಾಜು ಹಾಕಿದ್ದ ಮಾಜಿ ಸಂಸದ ಹಾಗೂ ಕಾಂಗ್ರೆಸ್ಸಿನ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ‘ಎಲ್ಲಾ ಕಳ್ಳರ ಹೆಸರೆಲ್ಲಾ ಮೋದಿ ಎಂದೇ ಇರುತ್ತದೆ ಏಕೆ’ ಎಂದು ಕೋಲಾರದಲ್ಲಿ 2019ರಲ್ಲಿ ನೀಡಿದ್ದ ಹೇಳಿಕೆಗೆ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ 2 ವರ್ಷಗಳ ಜೈಲುವಾಸ ಶಿಕ್ಷೆಯನ್ನು ವಿಧಿಸಿರುವುದು ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ‘ಜನಪ್ರತಿನಿಧಿಗಳ ಕಾಯ್ದೆ 1951’ರ ಪ್ರಕಾರ ರಾಹುಲ್ ಗಾಂಧಿಯವರ ಸಂಸತ್ ಸದಸ್ಯತನ ಅನರ್ಹತೆಗೊಂಡಿರುವುದು ಪ್ರಜಾಪ್ರಭುತ್ವಕ್ಕೆ ಸಂದ ಗೌರವ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಈ ಪ್ರಕ್ರಿಯೆ ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ನಿಟ್ಟಿನಲ್ಲಿ ಹೊಸ ಕ್ರಾಂತಿ ಮೂಡಿಸಿದೆ. ರಾಹುಲ್ ಗಾಂಧಿಯವರಿಗೆ 2 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿರುವುದು ‘ಪ್ರಧಾನಿ ನರೇಂದ್ರ ಮೋದಿ’ಯವರನ್ನು ಬೈದಿದ್ದಕ್ಕಾಗಿ ಅಲ್ಲ; ಬದಲಿಗೆ ಹಿಂದುಳಿದ ವರ್ಗಕ್ಕೆ ಸೇರಿದ ‘ಮೋದಿ ಎಂಬ ಉಪನಾಮ ಹೊಂದಿರುವ ಎಲ್ಲರನ್ನೂ ಬೈದು ಅವಮಾನಿಸಿದ್ದಕ್ಕಾಗಿ’ ಎಂಬುದು ಇಲ್ಲಿ ಗಮನಾರ್ಹ ಅಂಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ತನ್ನ ಅಧಿಕಾರಾವಧಿಯಲ್ಲಿ ನಿರಂತರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಾ ಬಂದಿದ್ದ ಕಾಂಗ್ರೆಸ್ ಕನಿಷ್ಠ ನ್ಯಾಯಾಲಯದ ಆದೇಶವನ್ನು ಗೌರವಿಸುವಂತಹ ಮಾನಸಿಕತೆಯನ್ನು ರೂಡಿಸಿಕೊಳ್ಳದಿರುವುದು ವಿಷಾದನೀಯ. 1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಚುನಾವಣಾ ಅಕ್ರಮಗಳ ವಿರುದ್ಧ ಅಲಹಾಬಾದ್ ನ್ಯಾಯಾಲಯ ತೀರ್ಪು ನೀಡಿದಾಗ ಅಧಿಕಾರ ದುರುಪಯೋಗಪಡಿಸಿಕೊಂಡು ದೇಶದಾದ್ಯಂತ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪ್ರಸ್ತುತ ನ್ಯಾಯಾಲಯದ ಆದೇಶವನ್ನು ಗೌರವಿಸಿ ಪಾಲನೆ ಮಾಡುವಂತಹ ಸೌಜನ್ಯತೆ ಹೊಂದುವುದು ಇಂದಿನ ಅಗತ್ಯತೆಯಾಗಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು: ಬಿಜೆಪಿ ಕಾಪು ಮಂಡಲದ ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿಯ ಇತಿಹಾಸದ ಬಗ್ಗೆ, ಪ್ರಸ್ತುತ ಬಿಜೆಪಿ ಆಡಳಿತದ ಬಗ್ಗೆ ಹಾಗೂ ಮುಂದೆ ಬಿಜೆಪಿ ಚುನಾವಣೆ ಗೆಲ್ಲುವ ಅನಿವಾರ್ಯತೆಯ ಬಗ್ಗೆ ವಿಸ್ತಾರವಾದ ಮಾಹಿತಿ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮಾತನಾಡಿ ಪಕ್ಷದ ಗೆಲುವಿಗೆ ಶ್ರಮಿಸಲು ಕರೆ ನೀಡಿದರು. ಬೂತ್ ಅಧ್ಯಕ್ಷರಾದ ರಂಜಿತ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಗುರುಕ್ರಪಾ ರಾವ್, ಪಂಚಾಯತ್ ಸದಸ್ಯರಾದ ಕವಿತಾ , ಪಕ್ಷದ ಪ್ರಮುಖರಾದ ಗಂಗಾಧರ್ ಸುವರ್ಣ, ಮುರಳೀಧರ ಪೈ, ಇಂದುಶೇಖರ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಕ್ತಿ ಕೇಂದ್ರ ಪ್ರಮುಖ್ ಸಂತೋಷ್ ಸ್ವಾಗತಿಸಿ ಕಾರ್ಯಕ್ರಮ ನಡೆಸಿದರು.