Design a site like this with WordPress.com
Get started

ಉಡುಪಿ ತಾಲೂಕಿನ ಉಪ್ಪೂರು ವಲಯದಲ್ಲಿ ಶ್ರೀ ಶಿವ ಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

News by: ಜನತಾಲೋಕವಾಣಿನ್ಯೂಸ್

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ)ಉಡುಪಿ ತಾಲೂಕಿನ ಉಪ್ಪೂರು ವಲಯದ ಹಾವಂಜೆ ಕಾರ್ಯಕ್ಷೇತ್ರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಶ್ರೀ ಶಿವಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಅಜಿತ್ ಗೋಳಿಕಟ್ಟೆ ವಹಿಸಿಕೊಂಡಿದ್ದರು,

ಶಿವಪಂಚಾಕ್ಷರಿ ಮಂತ್ರ ಪಠಣದ ಮಹತ್ವದ ಬಗ್ಗೆ ಹಾಗೂ ಧಾರ್ಮಿಕ ಆಚರಣೆಗಳ ಮಹತ್ವದ ಬಗ್ಗೆ ಶ್ರೀ ಹರಿಪ್ರಸಾದ್ ಭಟ್ ಹೆರ್ಗ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಲ್ವಾರ್ಚನೆ ಯನ್ನು ಶ್ರೀ ವೇದಮೂರ್ತಿ ಜಯರಾಮ ತಂತ್ರಿ ಹೆರ್ಗ ಇವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಹಿರಿಯ ನಿರ್ದೇಶಕರಾದ ಶ್ರೀ ಶಿವರಾಯ ಪ್ರಭುರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವ ಸಬಲೀಕರಣದ ಬಗ್ಗೆ ಹಾಗೂ ಕಾರ್ಯಕ್ರಮದ ಮಹತ್ವದ ಬಗ್ಗೆ ಮಾಹಿತಿ ನೀಡಿದರು

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸುರೇಶ್ ಬಿ ಶೆಟ್ಟಿ, ಪೂಜಾ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಹೆಚ್. ನಾಗರಾಜ್ ಹೆಗ್ಡೆ, , ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರಾಮು ಎಂ, ಉಪ್ಪೂರು ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ರಾಜು ಪೂಜಾರಿ, ಉಪ್ಪೂರು ವಲಯ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಮಮತಾ,ಹಾವಂಜೆ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಮಮತಾ ಶೆಟ್ಟಿ , ಕೀಳಂಜೆ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಸಂಪಾ, ವಲಯದ ಸೇವಾಪ್ರತಿನಿಧಿಗಳಾದ ಶ್ರೀಮತಿ ಶಶಿಕಲಾ, ಶ್ರೀಮತಿ ಪ್ರಮೋದ, ಶ್ರೀಮತಿ ವಿಜಯಲಕ್ಷ್ಮೀ, ಶ್ರೀಮತಿ ಶ್ಯಾಮಲಾ, ಕುಮಾರಿ ಶ್ವೇತಾ, ಒಕ್ಕೂಟ ಪದಾಧಿಕಾರಿಗಳಾದ ಉದಯ್ ಶೆಟ್ಟಿ, ವಲಯದ ಒಕ್ಕೂಟ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು, ವಲಯ ಮೇಲ್ವಿಚಾರಕರಾದ ರಮೇಶ್ಎನ್ ಸ್ವಾಗತಿಸಿದರು, ಹಾವಂಜೆ ಸೇವಾಪ್ರತಿನಿಧಿ ಕುಮಾರಿ ವಿದ್ಯಾ ಧನ್ಯವಾದಗೈದರು ಹಾಗೂ ಶ್ರೀ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು

ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

News by: ಜನತಾಲೋಕವಾಣಿನ್ಯೂಸ್

ಕಾಪು: ಕಾಪು ಮಂಡಲದ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ವಿಶೇಷ ಕಾರ್ಯಕಾರಿಣಿ ಸಭೆ ಇಂದು ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾರ್ಯಕಾರಿಣಿಯ ಮಹತ್ವ ವಿವರಿಸಿ ಕಳೆದ ಮೂರು ತಿಂಗಳ ಕಾರ್ಯಕ್ರಮಗಳ ಬಗ್ಗೆ ಅವಲೋಕನ ನಡೆಸಿದರು. ಮುಂಬರುವ ಚುನಾವಣೆಯಲ್ಲಿ ಕಾಪು ಕ್ಷೇತ್ರದಲ್ಲಿ ಭಾರತೀಯ ಜನತಾಪಾರ್ಟಿಯ ವಿಜಯ ಪತಾಕೆ ಹಾರಿಸಲು ಸಿಧ್ಧರಾಗಲು ಕರೆ ನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ‌ ಸುರೇಶ್ ನಾಯಕ್ ಉದ್ಘಾಟನೆ ಮಾಡಿ ಪಕ಼್ಷದ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿವರು ಮಾತನಾಡಿ ಅಭಿವೃದ್ಧಿ ಕಾರ್ಯಕ್ರಮಗಳ‌ ಬಗ್ಗೆ ಮಾಹಿತಿ ನೀಡಿ ಮುಂದಿನ ಚುನಾವಣೆಗೆ ಕಾರ್ಯಕರ್ತರು‌ ಸಜ್ಜಾಗುವಂತೆ ಕರೆ ನೀಡಿದರು. ರಾಜ್ಯ‌ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಪಕ್ಷ ಸಂಘಟನೆಯ ಬಗ್ಗೆ ಕಾರ್ಯಕರ್ತರು ಮುಂದಿನ ದಿನಗಳಲ್ಲಿ‌ವಿಶೇಷ ಒತ್ತು ನೀಡಲು ಕರೆ ನೀಡಿದರು. ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ‌ ಹೆಗ್ಡೆ, ಅನಿಲ್ ಶೆಟ್ಟಿ ಉಪಸ್ಥಿತರಿದ್ದರು. ಮಂಡಲ ಪ್ರಭಾರಿಗಳಾದ ರವೀಂದ್ರ ಮಡಿವಾಳ್ ರವರು ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.  ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ ಸಮಾರೋಪ‌ ಮಾತನಾಡಿದರು. ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ ನಿರೂಪಿಸಿದರು. ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ ಸ್ವಾಗತಿಸಿದರೆ ಮಂಡಲ ಉಪಾಧ್ಯಕ್ಷರಾದ  ಚಂದ್ರಶೇಖರ ಕೋಟ್ಯಾನ್ ಧನ್ಯವಾದ ಸಮರ್ಪಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಟಲಿಯ ರೋಮ್ ನಗರದಲ್ಲಿ ನಡೆದ ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಉದ್ಘಾಟನೆಯಲ್ಲಿ ಭಾಗಿ

News by: ಜನತಾಲೋಕವಾಣಿನ್ಯೂಸ್


ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಡಿ.6ರಂದು ಇಟಲಿಯ ರೋಮ್ ನಗರದಲ್ಲಿ ನಡೆದ ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.ಪ್ರಧಾನಿ ನರೇಂದ್ರ ಮೋದಿ ಸರಕಾರದ ಪ್ರಸ್ತಾವನೆಯಂತೆ, ವಿಶ್ವ ಸಂಸ್ಥೆಯು 2023ನೇ ವರ್ಷವನ್ನು ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ ಎಂದು ಘೋಷಿಸಿತ್ತು.

‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಔಪಚಾರಿಕ ಉದ್ಘಾಟನೆಯು ಡಿ.6, 2022ರಂದು ಇಟಲಿಯ ರೋಮ್ ನಗರದಲ್ಲಿ ನಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ಅಂತರಾಷ್ಟ್ರೀಯ ಆಹಾರ ಮತ್ತು ಕೃಷಿ ಸಂಸ್ಥೆ (ಫುಡ್ ಅಂಡ್ ಅಗ್ರಿಕಲ್ಚರ್ ಒರ್ಗನೈಝೇಶನ್ – FAO) ಡೈರೆಕ್ಟರ್ ಜನರಲ್ ಕ್ಯೂ ಡೊಂಗ್ಯು ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.

ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಅಲೆವೂರಿನ ಯುವಕ ಚಿದಾನಂದ ಆಯ್ಕೆ:ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಂದ ಗೌರವಾರ್ಪಣೆ

News by: ಜನತಾಲೋಕವಾಣಿನ್ಯೂಸ್

ಕಾಪು: ಮೋದೀಜಿ ಸರಕಾರದ ನೂತನ ಯೋಜನೆಯಾದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಆಯ್ಕೆಯಾದ ಅಲೆವೂರಿನ ಯುವಕ ಚಿದಾನಂದ ಇವರನ್ನು, ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಮನೆಗೆ ತೆರಳಿ ಗೌರವಾರ್ಪಣೆ ಮಾಡಿದರು. ಜಿಲ್ಲೆಯಲ್ಲಿ ಕೇವಲ 2 ಜನ ಅಗ್ನಿವೀರರಾಗಿ ಆಯ್ಕೆಯಾಗಿದ್ದು ,ಮಾನ್ಯ ಶಾಸಕರು ಸೈನಿಕರ ಬಗ್ಗೆ ಹೆಮ್ಮೆಯ ನುಡಿಗಳನ್ನಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೊರಂಗ್ರಪಾಡಿ ಸಿಎ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಸೇರಿಗಾರ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಪಂಚಾಯತ್ ಸದಸ್ಯರು, ಮಾಜಿ ಅಧ್ಯಕ್ಷರಾದ ಶಶಿಕಲಾ ಶೆಟ್ಟಿ, ಶಕ್ತಿಕೇಂದ್ರ ಪ್ರಮುಖರುಗಳಾದ ಆಶೀಶ್ ಶೆಟ್ಟಿ, ಶೇಖರ ಆಚಾರ್ಯ, ಕಾರ್ಯಕರ್ತರುಗಳಾದ ಸುರೇಶ್ ನಾಯಕ್, ಹನಮಪ್ಪ ಮಾದರ ಗುರುಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಅರುಣ್ ಆಚಾರ್ಯ ಇವರ ಮುತುವರ್ಜಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಚಿದಾನಂದ ರವರ ತಂದೆ ರಮೇಶ್ ತಾಯಿ ರಂಗವ್ವ ಮತ್ತು ಸಹೋದರ ಉಪಸ್ಥಿತರಿದ್ದರು.

ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ – ಎನ್. ರವಿಕುಮಾರ್

News by: ಜನತಾಲೋಕವಾಣಿನ್ಯೂಸ್

ಬೆಂಗಳೂರು: ಗುಜರಾತ್ ನಲ್ಲಿ 27 ವರ್ಷಗಳಿಂದ ಆಡಳಿತದಲ್ಲಿರುವ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಎಂದರೆ ಅಭಿವೃದ್ಧಿ, ಬಿಜೆಪಿ ಎಂದರೆ ರೈತಪರ, ಸ್ವಚ್ಛ ಭಾರತ ಎಂದರೆ ಬಿಜೆಪಿ, ಮೂಲಸೌಕರ್ಯ, ರಸ್ತೆಗಳ ನಿರ್ಮಾಣ ಎಂದರೆ ಬಿಜೆಪಿ, ಬಿಜೆಪಿ ಎಂದರೆ ಇಡೀ ದೇಶಕ್ಕೇ ಗೌರವ, ಗೌರವಯುತ ಪಾರ್ಟಿ ಎಂದರೆ ಬಿಜೆಪಿ – ಹೀಗೆ ಭಾರತೀಯ ಜನತಾ ಪಾರ್ಟಿ ದೇಶದ 130 ಕೋಟಿ ಜನರು ದೇಶದ ಕುರಿತು ಹೆಮ್ಮೆ ಪಡುವ ರೀತಿಯಲ್ಲಿ ಕೇಂದ್ರ – ವಿವಿಧ ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿದೆ ಎಂದು ತಿಳಿಸಿದರು.

ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ ಮಾಡಲಿದೆ. ಮತ್ತೆ ಅಧಿಕಾರಕ್ಕೆ ಏರಲಿದೆ. ಬೊಮ್ಮಾಯಿ – ಯಡಿಯೂರಪ್ಪ ಅವರ ಜೋಡಿಯು ಈ ಮೋಡಿ ಮಾಡುವುದು ಖಚಿತ ಎಂದು ಅವರು ನುಡಿದರು.

ಎಸ್‍ಸಿ, ಎಸ್‍ಟಿ ಮೀಸಲಾತಿಯನ್ನು ನಮ್ಮ ಸರಕಾರ ಹೆಚ್ಚಿಸಿದೆ. 55 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ನೀಡಲಾಗಿದೆ. ರೈತರ ಮಕ್ಕಳಿಗೆ, ನೇಕಾರರ ಮಕ್ಕಳಿಗೆ, ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಸ್ಕಾಲರ್‍ಶಿಪ್ ಕೊಡುತ್ತಿದ್ದಾರೆ. ಪ್ರವಾಹ ಪೀಡಿತರ ಪರಿಹಾರ ಹೆಚ್ಚಿಸಲಾಗಿದೆ ಎಂದು ನುಡಿದರು.

ಹಸು, ಎತ್ತು, ಮೇಕೆ ಕಳಕೊಂಡವರಿಗೆ ಪರಿಹಾರವನ್ನೂ ನಮ್ಮ ಸರಕಾರ ಕೊಡುತ್ತಿದೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಅಭಿವೃದ್ಧಿಯ ಪರ್ವ ನಡೆಯುತ್ತಿದೆ ಎಂದು ಅವರು ವಿಶ್ಲೇಷಿಸಿದರು.

ಕಾಂಗ್ರೆಸ್ ಪಕ್ಷದವರು ಸುಮ್ಮನೆ ಬೊಗಳೆ ಬಿಟ್ಟುಕೊಂಡು ಓಡಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಬರಿಯ ಭಾಷಣ ಮಾಡಿಕೊಂಡು ಓಡಾಡುತ್ತಿದ್ದಾರೆ. ಅವರೇನೂ ಜನ ಸೇರಿಸಬೇಕಿಲ್ಲ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದಿಂದ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪರಿನಿರ್ವಾಣ ದಿನಾಚರಣೆ

News by: ಜನತಾಲೋಕವಾಣಿನ್ಯೂಸ್

ಉಡುಪಿ: ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ 66ನೇ ಪರಿನಿರ್ವಾಣ ದಿನವನ್ನು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು.

ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ಆನಂದ ಮಟಪಾಡಿ, ಪ್ರಮುಖರಾದ ಹರಿದಾಸ್ ಕೆಮ್ಮಣ್ಣು, ಚಂದ್ರಶೇಖರ ಪ್ರಭು ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಡಿ.ಬಿ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ; ಸದಾನಂದ ಕೈಪುಂಜಾಲು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಬಾಬಾ ಸಾಹೇಬ್ ಡಾ|| ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ”

News by: ಜನತಾಲೋಕವಾಣಿನ್ಯೂಸ್

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಂಗಳವಾರ ರಾಜ್ಯ ಎಸ್‍ಸಿ ಮತ್ತು ಎಸ್‍ಟಿ ಮೋರ್ಚಾಗಳ ಸಹಯೋಗದೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ” ನಡೆಯಿತು.

ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಎಸ್‍ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹ ನಾಯಕ ಅವರು ಭಾಗವಹಿಸಿ ಮಾತನಾಡಿ, ಸಂವಿಧಾನ ಕರ್ತೃ ಡಾ! ಬಿ.ಆರ್. ಅಂಬೇಡ್ಕರ್ ಅವರು ಮಹಾನ್ ನಾಯಕತ್ವ ಹೊಂದಿದ್ದರು. ಅವರ ಶ್ರೇಷ್ಠ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಂ.ಬಿ. ಭಾನುಪ್ರಕಾಶ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಪಕ್ಷದ ಮುಖಂಡರು, ಕಾರ್ಯಕರ್ತರು, ಕಾರ್ಯಾಲಯದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ

ಡಿ.18 ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ: ಜಿಲ್ಲಾ ಪ್ರಕೋಷ್ಠಗಳ ಪೂರ್ವಭಾವಿ ಸಭೆ

News by: ಜನತಾಲೋಕವಾಣಿನ್ಯೂಸ್

ಉಡುಪಿ: ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಡಿ.18ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶದ ಕುರಿತು ಉಡುಪಿ ಜಿಲ್ಲಾ ಪ್ರಕೋಷ್ಠಗಳ ಪೂರ್ವಭಾವಿ ಸಭೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಪ್ರಕೋಷ್ಠಗಳ ಜಿಲ್ಲಾ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಮಾತನಾಡಿ ಚುನಾವಣಾ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ಡಿ.18ರಂದು ನಡೆಯುವ ಪ್ರಕೋಷ್ಠಗಳ ರಾಜ್ಯ ಮಟ್ಟದ ಸಮಾವೇಶವು ಅತ್ಯಂತ ಮಹತ್ವಪೂರ್ಣವಾಗಿದ್ದು ಜಿಲ್ಲೆಯ ಎಲ್ಲಾ 22 ಪ್ರಕೋಷ್ಠಗಳ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು, ಸಮಿತಿ ಸದಸ್ಯರು ಗರಿಷ್ಠ ಸಂಖ್ಯೆಯಲ್ಲಿ ಅಪೇಕ್ಷಿತರಾಗಿ ಭಾಗವಹಿಸುವ ಮೂಲಕ ಸಮಾವೇಶದ ಯಶಸ್ಸಿಗೆ ಕೈಜೋಡಿಸಬೇಕು ಎಂದರು.

ಫಲಾನುಭವಿಗಳ ಪ್ರಕೋಷ್ಠದ ಜಿಲ್ಲಾ ಸಂಚಾಲಕ ದಿಲ್ಲೇಶ್ ಶೆಟ್ಟಿ ಮಾತನಾಡಿ ಉಡುಪಿ ಜಿಲ್ಲಾ ವ್ಯಾಪ್ತಿಯ ಫಲಾನುಭವಿಗಳ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಬೂತ್ ಮಟ್ಟದಲ್ಲಿ ನಡೆಯಲಿರುವ ಫಲಾನುಭವಿಗಳ ಸಭೆ ಸಹಿತ ಬೂತ್ ಸಮಿತಿ ಸಮಾವೇಶಕ್ಕೆ ಈ ಮಾಹಿತಿ ಪೂರಕವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಫಲಾನುಭವಿಗಳ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಅವಿನಾಶ್ ಶೆಟ್ಟಿಗಾರ್ ಹಾಗೂ ವಿವಿಧ ಪ್ರಕೋಷ್ಠಗಳ ಜಿಲ್ಲಾ ಸಂಚಾಲಕರು, ಜಿಲ್ಲಾ ಸಹ ಸಂಚಾಲಕರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ: ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ ಅಭಿಪ್ರಾಯ

News by: ಜನತಾಲೋಕವಾಣಿನ್ಯೂಸ್

ಬೆಂಗಳೂರು: ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು.

ಅವರು ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಡಿ.3ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದರು.

ದೇಶವನ್ನು ರಕ್ಷಿಸುವ ಹಾಗೂ ಜನರನ್ನು ಬದುಕಿಸಿದ ವಿಚಾರದಲ್ಲಿ ಮೋದಿಜಿ ಅವರು ಶ್ರೀಮನ್ನಾರಾಯಣ ಎಂದು ಪ್ರಶ್ನೆಗೆ ಉತ್ತರಿಸಿದರು. ಜನರ ಪಾಲಿಗೆ ಅವರು ಕಲ್ಪವೃಕ್ಷ, ಕಾಮಧೇನು ಎಂದು ಅವರು ತಿಳಿಸಿದರು.

ದತ್ತಪೀಠದ ವಿಚಾರದಲ್ಲಿ ನಮ್ಮ ಸರಕಾರ, ನಮ್ಮ ಪಕ್ಷ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. 10 ದಿನಗಳ ಹಿಂದೆ ನ್ಯಾಯಾಲಯದ ಆದೇಶ, ಅದರ ಅನುಗುಣವಾಗಿ ಸಂಪುಟ ಉಪ ಸಮಿತಿ ತೆಗೆದುಕೊಂಡ ನಿರ್ಣಯದ ಶಿಫಾರಸುಗಳನ್ನು ಅಂಗೀಕರಿಸಿ ಸರಕಾರವು ಆಡಳಿತ ಮಂಡಳಿ ರಚಿಸಿದೆ. ಹಿಂದೂ ಅರ್ಚಕರ ನೇಮಕಕ್ಕಿದ್ದ ಅಡೆತಡೆ ಈಗ ನಿವಾರಣೆಯಾಗಿದೆ; ಹಿಂದೂ ಅರ್ಚಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಾರಿಯ ದತ್ತ ಜಯಂತಿ 4-5 ದಶಕಗಳ ಹೋರಾಟ ಈಡೇರಿದ ಸಂತೃಪ್ತಿಯ ಜಯಂತಿ ಆಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಉಪಸಮಿತಿಗೆ ಧನ್ಯವಾದಗಳು ಎಂದು ತಿಳಿಸಿದರು.

ಸರಕಾರಿ ದಾಖಲೆಗಳ ಪ್ರಕಾರ ಉಳುವವನೇ ಹೊಲದೊಡೆಯ ಮಸೂದೆಗೆ ಮುಂಚೆ ದತ್ತಾತ್ರೇಯ ದೇವರ ಹೆಸರಿನಲ್ಲಿ 1,861 ಎಕರೆ ಜಾಗ ಇತ್ತು. ಕಾಂಗ್ರೆಸ್ ಆಡಳಿತವಿದ್ದಾಗ ದತ್ತಾತ್ರೇಯ ದೇವರ ಹೆಸರಿನ ಜಮೀನನ್ನು ಗೇಣಿದಾರರೂ ಅಲ್ಲದವರಿಗೆ ಕಾಂಗ್ರೆಸ್ ಮುಖಂಡರು ಅಕ್ರಮವಾಗಿ ಮಂಜೂರು ಮಾಡಿದ್ದರೆಂದು ಮಾಹಿತಿ ಮೇಲ್ನೋಟಕ್ಕೆ ಲಭಿಸಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಕ್ರಮ ಮಂಜೂರಾತಿ ರದ್ದು ಮಾಡಲು ಆಗ್ರಹಿಸುತ್ತೇನೆ ಎಂದರು.

ಕಾಂಗ್ರೆಸ್ ವಿರೋಧದ ಹಿಂದೆ ಮತೀಯ ಓಲೈಕೆ ಜೊತೆಗೇ ದತ್ತಾತ್ರೇಯ ದೇವರ ಹೆಸರಿನಲ್ಲಿದ್ದ ಆಸ್ತಿ ಹೊಡೆಯುವ ಸಂಚು ಇತ್ತು. ಮತ್ತೆ ದತ್ತಾತ್ರೇಯ ದೇವರ ಹೆಸರಿಗೆ ಜಮೀನು ಕಾಯ್ದಿರಿಸಲು ಒತ್ತಾಯ ಮಾಡುವುದಾಗಿ ತಿಳಿಸಿದರು.

ಈ ಸಮಗ್ರ ತನಿಖೆಗಾಗಿ ರಾಜ್ಯ ಮಟ್ಟದ ಅಧಿಕಾರಿಗಳ ತಂಡ ರಚಿಸಲು ವಿನಂತಿಸಿದರು. ಹಿಂದೆ ಸುಪ್ರೀಂ ಕೋರ್ಟ್ ದತ್ತ ಪೀಠದ ವಿಚಾರದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನು ಸರಕಾರಕ್ಕೆ ವಹಿಸಿತ್ತು. ಆದರೆ, ಸಿದ್ದರಾಮಯ್ಯ ಸರಕಾರವು ಸುಪ್ರೀಂ ಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿ ಇದು ಸೂಕ್ಷ್ಮ ವಿಚಾರ ಎಂದಿದ್ದರು. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ನೀತಿ ಅನುಸರಿಸಿದ್ದರು. ಸತ್ಯಾಸತ್ಯತೆ ಪರಿಶೀಲಿಸದೆ ಕ್ರಮ ಕೈಗೊಂಡಿದ್ದರು. ಹಿಂದೂ ಅರ್ಚಕರ ನೇಮಕಾತಿ ತಿರಸ್ಕರಿಸಿದ ಸಿದ್ದರಾಮಯ್ಯ ಅವರದು ಯಾವ ಸೀಮೆ ಜಸ್ಟಿಸ್, ಇನ್‍ಸಾನಿಯತ್ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಸಾರ್ವಜನಿಕ ಕ್ಷಮೆ ಕೇಳಬೇಕು. ಹಿಂದೂಗಳನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡುವ ಕಾಲ ಮುಗಿದಿದೆ. ನಿಮ್ಮ ಓಲೈಕೆ ನೀತಿಯ ಪರಮಾವಧಿ ಅದಾಗಿತ್ತು. ಇದಕ್ಕಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಆರ್ಥಿಕ ಬೆಳವಣಿಗೆ, ಮೂಲಸೌಕರ್ಯ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ ಎಂದ ಅವರು, ಕಾಂಗ್ರೆಸ್ – ಕಮ್ಯೂನಿಸ್ಟ್ ಪಕ್ಷಗಳು ತಮ್ಮ ನೀತಿಯ ಬಗ್ಗೆ ಅವಲೋಕನ ಮಾಡಬೇಕು ಎಂದು ಕಿವಿಮಾತು ಹೇಳಿದರು.

*ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲುವು*:

ಗುಜರಾತ್‍ನಲ್ಲಿ ಒಂದೂವರೆ ತಿಂಗಳ ಕಾಲ ಚುನಾವಣೆ ಕೆಲಸ ಮಾಡಿದ್ದು, ಅಲ್ಲಿ ಬಿಜೆಪಿ ಪರವಾದ ಅಲೆ ಇದೆ. ಮೋದಿಯವರು ಜನರ ಹೃದಯ ಗೆದ್ದಿದ್ದಾರೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ. ಹಿಮಾಚಲ ಪ್ರದೇಶದಲ್ಲೂ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಸರಕಾರಾತ್ಮಕ ಬದಲಾವಣೆ, ಅಭಿವೃದ್ಧಿಯ ವೇಗದ ವಿಚಾರದಲ್ಲಿ ಕಾಂಗ್ರೆಸ್ – ಕಮ್ಯೂನಿಸ್ಟ್ ಪಕ್ಷದ ಸರಕಾರಗಳು ಬಿಜೆಪಿ ಸರಕಾರಗಳಿಗೆ ಸರಿಸಾಟಿಯಲ್ಲ ಎಂದು ವಿಶ್ಲೇಷಿಸಿದರು.

ಗುಜರಾತ್ ನಲ್ಲಿ ಟೀಕಿಸುವ ಯಾವುದೇ ಸರಕಿಲ್ಲದೆ ಜನರ ಹೃದಯ ಸಾಮ್ರಾಟರಾದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾವಣ ಎಂದಿದ್ದಾರೆ. ರಾಮ ಮಂದಿರ ನಿರ್ಮಿಸುವವರು ರಾವಣ ಆಗುವುದು ಹೇಗೆ? ದಿನಕ್ಕೊಂದು ಬಣ್ಣ ಬದಲಿಸುವವರು, ರಾಮನನ್ನು ಕಾಲ್ಪನಿಕ ವ್ಯಕ್ತಿ ಎಂದು ಅಫಿದವಿಟ್ ಕೊಟ್ಟ ಕಾಂಗ್ರೆಸ್ ಪಕ್ಷ ರಾವಣ ಮನಸ್ಥಿತಿ ಹೊಂದಿದೆ. ಕರಸೇವಕರ ಮೇಲೆ ಗೋಲಿಬಾರ್ ಮಾಡಿ ಹತ್ಯೆ ಮಾಡಿದವರು, ಗೋದ್ರಾ ಹತ್ಯಾಕಾಂಡ ಮಾಡಿದವರು, ಅದನ್ನು ಬೆಂಬಲಿಸಿದವರು ರಾವಣನ ಬೆಂಬಲಿಗರು ಎಂದು ಆಕ್ಷೇಪಿಸಿದರು.

2022ರ ಗುಜರಾತ್ ಫಲಿತಾಂಶ 2024ರ ಲೋಕಸಭಾ ಚುನಾವಣಾ ಫಲಿತಾಂಶದ ದಿಕ್ಸೂಚಿ ಎಂದು ವಿಶ್ಲೇಷಿಸಿದ ಅವರು, ರಾಜಕೀಯ ನಿಮಿತ್ತಂ ಬಹುಕೃತ ವೇಷಂ ಎಂಬುದು ರಾಹುಲ್ ಗಾಂಧಿ ಅವರಿಗೆ ಸರಿಹೊಂದುತ್ತದೆ. ರಾಹುಲ್ ಅವರು ಕೇಸರಿ ಶಾಲು ಧರಿಸಿದ ವೇಷದ ಬಗ್ಗೆ ಸಿದ್ದರಾಮಯ್ಯರಿಗೆ ಏನೆನಿಸುತ್ತದೆ ಎಂದು ಅಣಿಮುತ್ತು ಹೊರಡಿಸಬೇಕಿದೆ ಎಂದು ಪ್ರಶ್ನಿಸಿದರು. ರಾಹುಲ್ ಕೇಸರಿ ಶಾಲು ಧರಿಸಿದ್ದನ್ನು ಗಮನಿಸಿ ಸಿದ್ದರಾಮಯ್ಯರು ಊಸರವಳ್ಳಿ ಎನ್ನುತ್ತೀರಾ? ರಾಜಕೀಯ ನಿಮಿತ್ತಂ ಬಹುಕೃತ ವೇಷಂ ಎನ್ನುವಿರಾ? ಎಂದು ಕೇಳಿದರು.

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಾಕಿದವರು ಇವರ ದೃಷ್ಟಿಯಲ್ಲಿ ಸೆಕ್ಯುಲರ್‍ಗಳು. ದಾವೂದ್ ಇಬ್ರಾಹಿಂ ಕೂಡ ಇವರಿಗೆ ಸೆಕ್ಯುಲರ್ ಆದಾರು. ನಾನು ಹುಟ್ಟಿದ ಮೂಲ ಸನಾತನ ಧರ್ಮದಲ್ಲೇ ಇರುವವ ಎಂದು ನುಡಿದರು.
ಕಮ್ಯುನಲ್ ಯಾರು? ಸೆಕ್ಯುಲರ್ ಯಾರೆಂದು ಗೊತ್ತಾಗಲಿದೆ. ಆರೆಸ್ಸೆಸ್ ನಿಮಗೆ ಕಮ್ಯುನಲ್; ಬಾಂಬ್ ಹಾಕುವವರು ಸೆಕ್ಯುಲರ್‍ಗಳು. ಸಮಾಜವಾದಿ ಮಜಾವಾದಿ ಆದುದನ್ನು ಇಲ್ಲಿನ ಜನತೆ ನೋಡಿದ್ದಾರೆ. ಇವರ ಜಾತ್ಯತೀತತೆ ಜನರಿಗೆ ತಿಳಿದಿದೆ. ಮಜಾವಾದಿ ಕುಟುಂಬ ವ್ಯಾಮೋಹಿ ಎಂದು ಕರೆಸಿಕೊಳ್ಳುವಷ್ಟೇ ಅರ್ಹತೆ ಇವರದು ಎಂದರು.

ಅಹಿಂದ ಇವರಿಗೆ ಇನ್ನೊಬ್ಬರನ್ನು ಮುಗಿಸಲು ಅಸ್ತ್ರವಾಗಿದೆ. ಕಾಂಗ್ರೆಸ್ಸಿಗರ 3 ತಲೆಮಾರು, 4 ತಲೆಮಾರಿಗೆ ಆಗುವಷ್ಟು ಸಂಪತ್ತು ಮಾಡಿಕೊಂಡಿದ್ದಾರೆ ಎಂದು ಅವರದೇ ಪಕ್ಷದ ರಮೇಶ್‍ಕುಮಾರ್ ಹೇಳಿದ್ದಾರೆ. ದಲಿತ ಮುಖ್ಯಮಂತ್ರಿ ಆಗಬೇಕಿದ್ದ ಡಾ! ಪರಮೇಶ್ವರ್ ಅವರನ್ನು ಸೋಲಿಸಿದ್ದು ಎಲ್ಲರಿಗೂ ಗೊತ್ತಿದೆ. ಮೋಟಮ್ಮ ಆತ್ಮಕಥನದಲ್ಲೂ ಸಿದ್ದರಾಮಯ್ಯರ ರಾಜಕೀಯ ತಂತ್ರವನ್ನು ಬಿಡಿಸಿಟ್ಟಿದ್ದಾರೆ. ಹಿಂದೂವಾದವೇ ಕೋಮುವಾದ ಎಂದಾದರೆ ಆ ಸನಾತನ ಧರ್ಮವನ್ನು ಬೆಂಬಲಿಸುವವ ನಾನು ಎಂದು ತಿಳಿಸಿದರು.

ರೌಡಿಲಿಸ್ಟಿನಲ್ಲಿ ಇದ್ದವರೆಲ್ಲ ರೌಡಿ ಎಂದು ಹೇಳಲಾಗದು. ರಾಜಕೀಯ ಕಾರಣಕ್ಕೆ ನನ್ನ ಹೆಸರೂ ರೌಡಿ ಲಿಸ್ಟಿನಲ್ಲಿತ್ತು. ನಮ್ಮ ಪಕ್ಷದ ಕಾರ್ಯಕರ್ತರೂ ರೌಡಿ ಲಿಸ್ಟಿನಲ್ಲಿದ್ದರು. ಹೋರಾಟ ಮಾಡುವುದೇ ರೌಡಿಸಂ ಎಂಬ ಭಾವನೆ ಕಾಂಗ್ರೆಸ್ಸಿನವರದಾಗಿತ್ತು. ರೌಡಿಗಳ ಸೇರ್ಪಡೆ ವಿಚಾರದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು ತಮ್ಮ ಸ್ಪಷ್ಟನೆ ನೀಡಿದ್ದಾರೆ ಎಂದು ಈ ಕುರಿತ ಪ್ರಶ್ನೆಗೆ ಸಿ.ಟಿ. ರವಿ ಅವರು ಉತ್ತರ ಕೊಟ್ಟರು.

ಸಿಎಂ ಆಗಿದ್ದ ದೇವರಾಜ ಅರಸು ಅವರು ತಮ್ಮ ಚೇಂಬರ್‍ನಲ್ಲಿ ನಟೋರಿಯಸ್ ರೌಡಿಗಳ ಜೊತೆ ಸಭೆ ನಡೆಸಿದ್ದರು. ಅಂಥ ಕೆಲಸ ನಾವು ಮಾಡುವುದಿಲ್ಲ. ಸಂಜಯ್ ಬ್ರಿಗೇಡ್ ಸೇರಲು ಗೂಂಡಾಗಿರಿ ಅರ್ಹತೆಯಾಗಿತ್ತು. ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ನಲಪಾಡ್‍ಗೆ ಇದೇ ಕಾರಣಕ್ಕೇ ನೀಡಿದ್ದಾರೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ನಮ್ಮದು ಮಾಸ್ ಪಾರ್ಟಿ. ನಮ್ಮ ಪಕ್ಷದ ನೀತಿ-ನಿಯತ್ತು ಬದಲಾಗಿಲ್ಲ. ತಂತ್ರಗಾರಿಕೆ ಬದಲಾಗಿದೆ; ಪ್ರವಾಹದಲ್ಲಿ ಕಸಕಡ್ಡಿಯೂ ಬರುತ್ತದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

ನಾನು ಡಿ.ಕೆ. ಶಿವಕುಮಾರ್ ಅವರನ್ನು ರೌಡಿ, ಮಾಜಿ ರೌಡಿ ಎನ್ನುವುದಿಲ್ಲ. ‘ಆ ದಿನಗಳು’ ಅದನ್ನು ಹೇಳಿವೆ ಎಂದು ತಿಳಿಸಿದರು.

ಅಭಿವೃದ್ಧಿ, ರಾಷ್ಟ್ರವಾದ ನಮ್ಮ ಅಜೆಂಡ. ಈ ವಿಷಯದಲ್ಲಿ ಹೊಂದಾಣಿಕೆ ಇಲ್ಲ. ಏಕರೂಪ ನಾಗರಿಕ ಸಂಹಿತೆಯ ವಿಚಾರದಲ್ಲಿ ಬೊಮ್ಮಾಯಿಯವರ ನಿಲುವನ್ನು ಸ್ವಾಗತಿಸುತ್ತೇನೆ. ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲು ಸಂವಿಧಾನಕರ್ತೃ ಹೇಳಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ – ಜೆಡಿಎಸ್ ನಿಲುವೇನು ಎಂದು ಪ್ರಶ್ನೆಯನ್ನು ಮುಂದಿಟ್ಟರು.
ಬಿಜೆಪಿ ಯಾವುದೇ ಬಗೆಯ ಅಸ್ಪ್ರಶ್ಯತೆಯನ್ನು ಬೆಂಬಲಿಸುವುದಿಲ್ಲ; ಅಸ್ಪ್ರಶ್ಯತೆಗೆ ನಮ್ಮಲ್ಲಿ ಜಾಗ ಇಲ್ಲ. ಜಾತಿ ರಾಜಕಾರಣ ಇದ್ದಾಗ ದಲಿತ ದೌರ್ಜನ್ಯ ಹೆಚ್ಚಾಗಿರುತ್ತದೆ. ಹಿಂದುತ್ವ ಇದ್ದಲ್ಲಿ ಇದಕ್ಕೆ ತದ್ವಿರುದ್ಧ ಸ್ಥಿತಿ ಇದೆ ಎಂದು ನುಡಿದರು.

ಗಡಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕಿದೆ. ಭಾಷೆ ಬೇರೆಬೇರೆ ಇದ್ದರೂ ಭಾಷೆಯ ಒಳಗೂ ಸಂಬಂಧಗಳಿವೆ. ಸಂಬಂಧ ಗಟ್ಟಿ ಮಾಡಬೇಕು; ಸಂಘರ್ಷ ಹುಟ್ಟು ಹಾಕುವುದಲ್ಲ ಎಂದು ತಿಳಿಸಿದರು. ಅವರೂ ಬಹುದೇವತಾರಾಧನೆ, ಪ್ರಕೃತಿ ಆರಾಧಿಸುವವರು. ಆದರೆ, ಗಡಿ ವಿಚಾರವನ್ನು ಕಗ್ಗಂಟಾಗಿ ಪರಿವರ್ತಿಸಿದ್ದಾರೆ. ಆ ಕಗ್ಗಂಟನ್ನು ಒಂದೊಂದಾಗಿ ಬಿಡಿಸಬೇಕಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಜನಸಂಕಲ್ಪ ಯಾತ್ರೆ ಬಳಿಕ ವಿಜಯಸಂಕಲ್ಪ ಯಾತ್ರೆ ನಡೆಸಲಾಗುವುದು. 150 ಪ್ಲಸ್ ಶಾಸಕರ ಸ್ಥಾನ ಗೆಲ್ಲಲು ಎಲ್ಲ ತಂತ್ರಗಾರಿಕೆ ಮತ್ತು ಪ್ರಯತ್ನವನ್ನು ಮಾಡಲಾಗುವುದು ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮ, ಕಲ್ಬುರ್ಗಿ ಗ್ರಾಮಾಂತರ ಶಾಸಕ ಬಸವರಾಜ ಮತ್ತಿಮೋಡ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
*ಬಿಜೆಪಿ ಕರ್ನಾಟಕ*

ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಗೌರವ ಸನ್ಮಾನ

News by: ಜನತಾಲೋಕವಾಣಿನ್ಯೂಸ್

ಉಡಪಿ: ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರನ್ನು ಶ್ರೀ ಬಬ್ಬು ಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಆಡಳಿತ ಸಮಿತಿ, ಹತ್ತು ಸಮಸ್ತರು ಮತ್ತು ಗ್ರಾಮಸ್ಥರ ಪರವಾಗಿ ಕೊಡಿ ತಿಂಗಳ ಹರಕೆ ಸೇವೆಯ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಪಠೇಲರ ಮನೆ ಎ.ಜಯಕರ ಶೆಟ್ಟಿಯವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ಭರತ್ ರಾಜ್ ಕೆ.ಎನ್., ಹತ್ತು ಸಮಸ್ತರ ಗುರಿಕಾರ ದೇವದಾಸ್, ಸಮಿತಿಯ ಜತೆ ಕಾರ್ಯದರ್ಶಿಗಳಾದ ಯೋಗೀಶ್ ಶೆಟ್ಟಿ, ಲಕ್ಷ್ಮಣ ಪೂಜಾರಿ, ಸುನಿಲ್ ಕುಮಾರ್, ಜತೆ ಕೋಶಾಧಿಕಾರಿಗಳಾದ ಪಠೇಲರ ಮನೆ ಶರತ್ ಶೆಟ್ಟಿ, ಕೃಷ್ಣ ಅಂಬಲಪಾಡಿ, ಪ್ರಮುಖರಾದ ಪಠೇಲರ ಮನೆ ಮೋಹನ್ ಶೆಟ್ಟಿ ಮತ್ತು ಭರತ್ ಶೆಟ್ಟಿ, ಜಯರಾಮ ಶೆಟ್ಟಿ, ಸುಧಾಕರ ಎ., ರಮೇಶ್ ಕೋಟ್ಯಾನ್, ಶಿವಾಜಿ ಸನಿಲ್, ರಾಜಗೋಪಾಲ್, ಸುಂದರ ಮಾಸ್ತರ್, ಹೊನ್ನಯ್ಯ, ವಿಠ್ಠಲ, ಶಿವಾನಂದ, ಶ್ರೀಧರ, ಶ್ವೇತರಾಜ್, ಅನಿಲ್ ರಾಜ್ ಹಾಗೂ ಸಮಿತಿ ಸದಸ್ಯರು, ಹತ್ತು ಸಮಸ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.