ಕಾಪು: ಅಲೆವೂರು ಒಂದನೇ ವಾರ್ಡ್ ನಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಶಕ್ತಿಕೇಂದ್ರ ಉಸ್ತುವಾರಿ ದಿನಕರ್ ಬಾಬು ಚಾಲನೆ ನೀಡಿದರು. ಇಂದಿನಿಂದ ಜ.12 ನೇ ತಾರೀಕಿನವರೆಗೆ ಎಲ್ಲ ಬೂತ್ ಗಳಲ್ಲಿ ಪಕ್ಷ ಹಲವು ಕಾರ್ಯಕ್ರಮಗಳನ್ನು ನೀಡಿದ್ದು ಮುಖ್ಯವಾಗಿ ಬೂತ್ ಸಮಿತಿ ಪರಿಶೀಲನೆ, ಪೇಜ್ ಪ್ರಮುಖ್, ಮನೆ ಮನೆಗಳಿಗೆ ಭೇಟಿ ನೀಡಿ ಪಕ್ಷದ ಧ್ವಜ ಹಾಕಿಸುವುದು, ಬೂತ್ ಸಭೆಗಳನ್ನು ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡಿ ನಡೆಸುವುದು. ಈ ಎಲ್ಲ ಕಾರ್ಯಕ್ರಮಗಳನ್ನು ಮಾಡಬೇಕೆನ್ನುವ ಕರೆ ನೀಡಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾತನಾಡಿ ಭಾರತದಲ್ಲಿ ಮೋದಿ ಸರಕಾರ ಬಂದಮೇಲೆ ಆಗುತ್ತಿರುವ ಬದಲಾವಣೆಗಳು, ಅಭಿವೃದ್ಧಿ ಹಾಗೂ ಯೋಜನೆಗಳನ್ನು ವಿವರಿಸಿ ಕಾಂಗ್ರೆಸ್ ಸರಕಾರದ ದುರಾಡಳಿವನ್ನು ನೆನಪಿಸಿ ಕಾಪು ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ವಿಜಯ ಪತಾಕೆ ಹಾರಿಸುವಾಗ ಅಲೆವೂರು ಒಂದನೇ ವಾರ್ಡ್ ನ ಗರಿಷ್ಠ ಕೊಡುಗೆಯಾಗಿ ಅತೀ ಹೆಚ್ಚು ಮತಗಳನ್ನು ಬಿಜೆಪಿಗೆ ಬರುವಂತೆ ಶ್ರಮಿಸಲು ಕರೆ ನೀಡಿದರು. ಕೊರಂಗ್ರಪಾಡಿ ಶಕ್ತಿಕೇಂದ್ರ ಪ್ರಮುಖ್ ಆಶಿಶ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಸೌಮ್ಯ ನಾಯಕ್ ಕಾರ್ಯಕರ್ತರು, ಪದಾಧಿಕಾರಿಗಳು, ಮತದಾರರು ಉಪಸ್ಥಿತರಿದ್ದರು.
ಉಡುಪಿ: ಜಿಲ್ಲೆಯ 1,111 ಬೂತ್ ಗಳಲ್ಲೂ ಜ.2 ರಿಂದ ಜ.12ರ ವರೆಗೆ ನಡೆಯಲಿರುವ ಬೂತ್ ವಿಜಯ ಅಭಿಯಾನದಲ್ಲಿ ಪಕ್ಷದ ಎಲ್ಲ ಸ್ಥರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಣ್ಣ ಪುಟ್ಟ ವಿಚಾರಗಳನ್ನು ಬದಿಗಿಟ್ಟು ಬೂತ್ ವಿಜಯದ ಸಂಕಲ್ಪದೊಂದಿಗೆ ಕ್ಷೇತ್ರ ಮತ್ತು ರಾಜ್ಯವನ್ನು ಗೆಲ್ಲಲು ಸನ್ನದ್ಧರಾಗಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಬಿಜೆಪಿ ವತಿಯಿಂದ ನಡೆಯುವ ‘ಬೂತ್ ವಿಜಯ ಅಭಿಯಾನ’ವನ್ನು ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಹಿರಿಯಡ್ಕ ಕೋಟ್ನಕಟ್ಟೆಯ ಹೋಟೆಲ್ ಸುರಭಿ ಸಭಾಂಗಣದಲ್ಲಿ ಜ.2ರಂದು ಉದ್ಘಾಟಿಸಿ ಮಾತನಾಡಿದರು.
ಬೂತ್ ಗೆಲ್ಲುವ ಮೂಲಕ ರಾಜ್ಯವನ್ನು ಗೆಲ್ಲುವ ಬಿಜೆಪಿ ರಾಷ್ಟ್ರೀಯ ನಿಕಟಪೂರ್ವ ಅಧ್ಯಕ್ಷ ಅಮಿತ್ ಶಾ ಕನಸು ಮತ್ತೆ ನನಸಾಗಬೇಕು. ಕಾಪು ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿ ಕಾರ್ಯಗಳಾಗಿವೆ. ಈ ನಿಟ್ಟಿನಲ್ಲಿ ಪ್ರಚಾರದ ಅಗತ್ಯವಿದೆ. ಕಾಪು ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲುವು ಮುಂದುವರಿಸಲು ರೂಪುರೇಷೆ ರೂಪಿಸಬೇಕು ಎಂದರು.
ಪ್ರತಿ ಬೂತಿನಲ್ಲೂ ಫಲಾನುಭವಿಗಳ ಸಮಾವೇಶ, ಪ್ರತಿ ಮಂಡಲದಲ್ಲೂ ವಿವಿಧ ಮೋರ್ಚಾಗಳ ಸಮಾವೇಶ ನಡೆಸಬೇಕು. ಪ್ರತಿ ಬೂತಿನಲ್ಲೂ ಬೂತ್ ಸಮಿತಿಗಳ ಪರಿಶೀಲನೆ, ಪೇಜ್ ಪ್ರಮುಖರ ನಿಯುಕ್ತಿ, ಮತಗಟ್ಟೆಗಳ ವಾಟ್ಸಾಪ್ ಗ್ರೂಪ್ ರಚನೆ, ಕಾರ್ಯಕರ್ತರ ಮನೆಗಳ ಮೇಲೆ ಧ್ವಜಾರೋಹಣ, ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ ಮುಂತಾದ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡಿ ಬೂತ್ ಗೆಲುವಿನ ಮೂಲ ಮಂತ್ರದೊಂದಿಗೆ ಬದ್ಧತೆಯಿಂದ ಮುನ್ನಡೆಯಬೇಕು ಎಂದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಸಂಘಟನಾತ್ಮಕ, ಅಲ್ಪಸಂಖ್ಯಾತರ ಪ್ರಾಬಲ್ಯವುಳ್ಳ ಕಾಪು ಕ್ಷೇತ್ರದಲ್ಲಿ ಎಸ್ಡಿಪಿಐ ರಾಜಕೀಯವಾಗಿ ಬೆಳವಣಿಗೆ ಕಾಣುತ್ತಿದ್ದು ಸಕಾರಾತ್ಮಕ ನೆಲೆಯಲ್ಲಿ ಬೂತ್ ಬಲವರ್ಧನೆಯಾಗಬೇಕು. 3,000 ಕೋಟಿ ರೂ. ಅಭಿವೃದ್ಧಿ ಕಾಮಗಾರಿ ಕ್ಷೇತ್ರದಲ್ಲಿ ಪ್ರಗತಿಯಲ್ಲಿದೆ. ಪುತ್ತೂರಿನಿಂದ ಹೊರಬಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕಾಪು ಕ್ಷೇತ್ರದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಹೆಜಮಾಡಿ ಟೋಲ್ ಸಮಸ್ಯೆ ಬಗೆಹರಿಸಲು ವಿಧಾನಸಭೆಯಲ್ಲಿ ಭರವಸೆ ದೊರೆತಿದೆ ಎಂದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಕಾರ್ಯಕರ್ತರು, ನಾಯಕರು ಮೈಮರೆತರೆ ಮುಂದಿನ ಐದು ವರ್ಷಗಳ ಕಾಲ ಹಿಂಸೆ ಅನುಭವಿಸಬೇಕಾದೀತು ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಾಂಬೆಟ್ಟು ಉಪಸ್ಥಿತರಿದ್ದರು.
ಭಾರತ ಮಾತೆಗೆ ಪುಷ್ಪ ನಮನ ಬಳಿಕ ಶ್ಯಾಮಲಾ ಕುಂದರ್ ವಂದೇ ಮಾತರಂ ಹಾಡಿದರು. ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಬೊಮ್ಮರಬೆಟ್ಟು ಬೂತ್ 2ರ ಅಧ್ಯಕ್ಷ ಶಿಶಿರ್ ಮನೆಯಲ್ಲಿ ಬಿಜೆಪಿ ಧ್ವಜವನ್ನು ಹಾರಿಸಲಾಯಿತು.
ಉಡುಪಿ: ಪಕ್ಷದ ಸೂಚನೆಯಂತೆ ಸಂಘಟನಾತ್ಮಕವಾಗಿ ಮತಗಟ್ಟೆಗಳನ್ನು ಸಶಕ್ತಗೊಳಿಸಲು ಜ.2 ರಿಂದ 12ರ ವರೆಗೆ ಉಡುಪಿ ಜಿಲ್ಲೆಯ ಎಲ್ಲ 1,111 ಮತಗಟ್ಟೆಗಳಲ್ಲಿ ನಡೆಯಲಿರುವ ‘ಬೂತ್ ವಿಜಯ ಅಭಿಯಾನ’ದ ಮೂಲಕ ವಿಧಾನಸಭಾ ಚುನಾವಣೆಗೆ ಬಿಜೆಪಿ ರಣಕಹಳೆ ಮೊಳಗಿಸಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಡಿ.31ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಲ್ಲ ವರ್ಗಗಳ ಜನತೆಯ ಅಭ್ಯುದಯಕ್ಕೆ ಜಾರಿಗೆ ತಂದಿರುವ ವಿವಿಧ ಜನಪರ ಯೋಜನೆಗಳನ್ನು ಮನೆ ಮನೆಗಳಲ್ಲಿ ಪ್ರಚಲಿತಗೊಳಿಸುವ ಜೊತೆಗೆ ಬೂತ್ ಮಟ್ಟದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
‘ಬೂತ್ ವಿಜಯ ಅಭಿಯಾನ’ದ ಅಂಗವಾಗಿ ಜ.2ರಂದು ಜಿಲ್ಲೆಯ ಎಲ್ಲ 6 ಮಂಡಲಗಳ ವ್ಯಾಪ್ತಿಯ ಪ್ರತೀ ಬೂತ್ ಗಳ ಅಧ್ಯಕ್ಷರ ಮನೆಯಲ್ಲಿ ಪಕ್ಷದ ಪ್ರಮುಖರು ಮತ್ತು ಬೂತ್ ಸಮಿತಿಯ ಸದಸ್ಯರು ಸೇರಿ ಪಕ್ಷದ ಧ್ವಜಾರೋಹಣ ಮಾಡುವ ಜೊತೆಗೆ ಪಕ್ಷದ ಕನಿಷ್ಠ 25 ಕಾರ್ಯಕರ್ತರ ಮನೆಗಳ ಮೇಲೆ ಬಿಜೆಪಿ ಧ್ವಜವನ್ನು ಹಾರಿಸುವಂತೆ ಅವರು ಕರೆ ನೀಡಿದರು.
ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯ ಪ್ರತೀ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸಚಿವರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಜ.1 ಮತ್ತು ಜ.2ರಂದು ಬೂತ್ ಮಟ್ಟದಲ್ಲಿ ಪಕ್ಷದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಕುಯಿಲಾಡಿ ತಿಳಿಸಿದರು.
ಕಾರ್ಕಳ ಮಂಡಲ (ಜ.1ರಂದು): ಬೆಳಿಗ್ಗೆ ಗಂಟೆ 8.30ಕ್ಕೆ
ಸಚಿವರ ಕಛೇರಿ, ಕಾರ್ಕಳ ವಿ.ಸುನೀಲ್ ಕುಮಾರ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಇವರಿಂದ
ಕಾಪು ಮಂಡಲ (ಜ.2ರಂದು): ಬೆಳಿಗ್ಗೆ ಗಂಟೆ 10.00ಕ್ಕೆ
ಹಿರಿಯಡ್ಕ ಕೋಟ್ನಕಟ್ಟೆ ಸುರಭಿ ಸಭಾಂಗಣದಲ್ಲಿ ಎಸ್.ಅಂಗಾರ, ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಇವರಿಂದ
ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲ (ಜ.2ರಂದು): ಮಧ್ಯಾಹ್ನ ಗಂಟೆ 12.00ಕ್ಕೆ
ಕಲ್ಯಾಣಪುರ ಶ್ರೀ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಎಸ್.ಅಂಗಾರ, ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಇವರಿಂದ
ಕುಂದಾಪುರ ಮಂಡಲ (ಜ.2ರಂದು): ಸಂಜೆ ಗಂಟೆ 3.00ಕ್ಕೆ
ಕೋಟೇಶ್ವರ ಮತಗಟ್ಟೆ 37ರ ಅಧ್ಯಕ್ಷರ ಮನೆಯಲ್ಲಿ ಕು! ಶೋಭಾ ಕರಂದ್ಲಾಜೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವರು ಇವರಿಂದ
ಬೈಂದೂರು ಮಂಡಲ (ಜ.2ರಂದು): ಸಂಜೆ ಗಂಟೆ 4.00ಕ್ಕೆ
ತೆಗ್ಗರ್ಸೆ ಮತಗಟ್ಟೆ 27ರ ಅಧ್ಯಕ್ಷರ ಮನೆಯಲ್ಲಿ ಧ್ವಜಾರೋಹಣ ಮಂಡಲಾಧ್ಯಕ್ಷರ ಮನೆಯಲ್ಲಿ ಸಭೆ ಕು! ಶೋಭಾ ಕರಂದ್ಲಾಜೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವರು ಇವರಿಂದ
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲೆ ಮತ್ತು ಮಂಡಲಗಳ ಪದಾಧಿಕಾರಿಗಳ ಸಹಿತ ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಎಲ್ಲಾ ಸ್ತರದ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಸಕ್ರಿಯವಾಗಿ ಭಾಗವಹಿಸಿ ‘ಬೂತ್ ವಿಜಯ ಅಭಿಯಾನ’ವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಕುಯಿಲಾಡಿ ಕರೆ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ‘ಬೂತ್ ವಿಜಯ ಅಭಿಯಾನ’ದ ಜಿಲ್ಲಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಅಭಿಯಾನದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬಿ.ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಆನಂದ ಖಾರ್ವಿ, ಗೀತಾಂಜಲಿ ಎಮ್. ಸುವರ್ಣ, ಸವಿತಾ ಶಿವಾನಂದ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿಗಳಾದ ರೇಶ್ಮಾ ಉದಯ ಶೆಟ್ಟಿ, ಸುನೀತಾ ನಾಯ್ಕ್, ನಳಿನಿ ಪ್ರದೀಪ್ ರಾವ್, ಅನಿತಾ ಶ್ರೀಧರ್, ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಚಂದ್ರ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿದ್ದರು.
ಕಾಪು: ಇಂದು ದಿನಾಂಕ 24/12/2022 ಕಾಪು ಮಂಡಲ ಮಹಿಳಾಮೋರ್ಚಾದಿಂದ “ಆದರ್ಶ ಅಂಗನವಾಡಿ ಅಭಿಯಾನ ” ಕಾರ್ಯಕ್ರಮಕ್ಕೆ ಆಯ್ಕೆಯಾದ ಕುತ್ಯಾರು ಯುವಕ ಮಂಡಲದ ಬಳಿಯಲ್ಲಿರುವ ಅಂಗನವಾಡಿಯಲ್ಲಿ ಸಮಾರೋಪ ಸಮಾರಂಭ ನಡೆಯಿತು . ಪ್ರಾರಂಭದಲ್ಲಿ ಅಂಗನವಾಡಿಯ ಮಕ್ಕಳಿಗೆ ಆರೋಗ್ಯ ತಪಾಸಣಾ ನಡೆಯಿತು . ಅಂಗನವಾಡಿಯ ಸುತ್ತ ಇಂಟರ್ ಲಾಕ್ ಹಾಗು ಗೋಡೆಗೆ ಪೈಂಟ್ ನ ಅಗತ್ಯ ಇದ್ದು ಕಾಪು ಶಾಸಕರಾದ ಶ್ರೀಯುತ ಲಾಲಾಜಿ ಆರ್ ಮೆಂಡನ್ ಅವರು ಸರಕಾರದ ವತಿಯಿಂದ 2.00 ಲಕ್ಷ ಅನುದಾನವನ್ನು ಒದಗಿಸಿ ಕೊಟ್ಟರು . ಇಂದು ಅಂಗನವಾಡಿಗೆ ಅಗತ್ಯ ಇದ್ದ ಎಲ್ಲಾ ಕಾಮಗಾರಿಗಳನ್ನು ಸಂಪೂರ್ಣ ಗೊಳಿಸಿ ಹಾಗೆಯೇ ಮಕ್ಕಳಿಗೆ ಅಗತ್ಯವಿರುವ ಚಾರ್ಟ್, ಚಾಪೆ ,ಆಟಿಕೆ ಸಾಮಾನುಗಳನ್ನು ಒದಗಿಸಿ ಕಾಪು ಮಂಡಲ ಮಹಿಳಾಮೋರ್ಚಾದಿಂದ ಆದರ್ಶ ಅಂಗನವಾಡಿ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ದತ್ತು ಪಡೆದ ಕುತ್ಯಾರು ಯುವಕ ಮಂಡಲದ ಬಳಿಯಲ್ಲಿರುವ ಅಂಗನವಾಡಿಯಲ್ಲಿ ಸಮಾರೋಪ ಕಾರ್ಯಕ್ರಮವನ್ನು ನೆರವೇರಿಸಲಾಯಿತು . ಕಾಪು ಮಂಡಲದ ಮಹಿಳಾಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ ಅವರು ಸ್ವಾಗತ ಮಾಡಿದರು . ರಾಜ್ಯ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು . ದೀಪ ಬೆಳಗಿಸಿ ಕಾಪು ಶಾಸಕರಾದ ಶ್ರೀಯುತ ಲಾಲಾಜಿ ಆರ್ ಮೆಂಡನ್ ಅವರು ದತ್ತು ಪಡೆದ ಅಂಗನವಾಡಿಯನ್ನು ಮತ್ತು ವಿವಧ ಪರಿಕರಗಳನ್ನು ಹಸ್ತಾಂತರ ಮಾಡಿದರು .ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ , ನಿಕಟಪೂರ್ವ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ ಮತ್ತು ಜಿಲ್ಲಾ ಮಹಿಳಾಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ ಅವರು ಶುಭಸಂಶನೆಗೈದರು. ಕಾರ್ಯಕ್ರಮದಲ್ಲಿ ಕುತ್ಯಾರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಲತಾ ಆಚಾರ್ಯ, ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ , ಉಪಾಧ್ಯಕ್ಷರಾದ ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತ ಶೆಟ್ಟಿ , ಶಿರ್ವ ಸಿ ಎ ಬ್ಯಾಂಕಿನ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ,ಫಲಿಮಾರು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಮಕ್ಕಳ ಪೋಷಕರು , ಅಂಗನವಾಡಿಯ ಕಾರ್ಯಕರ್ತೆ ಇಂದಿರಾ ಶೆಟ್ಟಿ , ಸಹಾಯಕಿ ನಿಶಾ ಅವರು ಶಾಸಕರನ್ನು ಗೌರವಿಸಿದರು . ಉಪಸ್ಥಿತರಿದ್ದರು . ಕಾಪು ಮಂಡಲ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುರೇಖಾ ಶೈಲೇಶ್ ನಿರೂಪಣೆ ಮಾಡಿದರು , ಮಂಡಲ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ನೀತಾ ಗುರುರಾಜ್ ಅವರು ವಂದನಾರ್ಪಣೆ ಮಾಡಿದರು .
ಉಡುಪಿ: ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ನೇಮೋತ್ಸವವು ಅಂಬಲಪಾಡಿ ಪಠೇಲರ ಮನೆ ಶ್ರೀಮತಿ ಮತ್ತು ಶ್ರೀ ಭರತ್ ಶೆಟ್ಟಿಯವರ ಹರಕೆ ಸೇವೆಯಾಗಿ ಡಿ.24 ಮತ್ತು 25ರಂದು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಪರಿಸರದಲ್ಲಿ ನಡೆಯಲಿದೆ.
ಡಿ.24 ಶನಿವಾರ ಬೆಳಿಗ್ಗೆ 7.30ಕ್ಕೆ ಮಹಾಚಪ್ಪರದ ಗಜಕಂಬ ಪ್ರತಿಷ್ಠೆ, ಮಧ್ಯಾಹ್ನ 12.00ಕ್ಕೆ ಮಹಾಚಪ್ಪರದ ಆರೋಹಣ, ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಮಹಾ ಅನ್ನ ಸಂತರ್ಪಣೆ, ಸಂಜೆ 5.00ಕ್ಕೆ ಭಂಡಾರ ಮೆರವಣಿಗೆ ಹಾಗೂ ರಾತ್ರಿ 9.00ಕ್ಕೆ ಶ್ರೀ ಬಬ್ಬುಸ್ವಾಮಿ ನೇಮ ಮತ್ತು ರಾತ್ರಿ 12.00ಕ್ಕೆ ಶ್ರೀ ತನ್ನಿಮಾನಿಗ ದೇವಿಯ ನೇಮ ನಡೆಯಲಿದೆ.
ಡಿ.25 ರವಿವಾರ ಬೆಳಿಗ್ಗೆ 9.00ರಿಂದ ಶ್ರೀ ಧೂಮಾವತಿ ಬಂಟ ದೈವಗಳ ನೇಮ, ಮಧ್ಯಾಹ್ನ 12.00ರಿಂದ ಶ್ರೀ ಮಹಾ ಗುಳಿಗಧ್ವಯ ದೈವಗಳ ನೇಮ, ಸಂಜೆ 4.00ರಿಂದ ಶ್ರೀ ಕೊರಗಜ್ಜ ದೈವದ ನೇಮ ಹಾಗೂ ಪ್ರಸಾದ ವಿತರಣೆ ನಡೆಯಲಿದೆ ಎಂದು ನೇಮೋತ್ಸವದ ಸೇವಾದಾರ ಅಂಬಲಪಾಡಿ ಪಠೇಲರ ಮನೆ ಭರತ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು: ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ ನೀಡಿದ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಇವರ ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಷ್ಟ್ರೀಯ ಭದ್ರತಾ ವಿಚಾರಗಳ ಮೇಲೆ ಹೇಳಿಕೆ ಕೊಡುವಾಗ ರಾಜಕೀಯ ಬಿಟ್ಟು ಮಾತನಾಡಲು ಡಿಕೆಶಿಯವರಿಗೆ ಎಚ್ಚರಿಕೆ ನೀಡಲಾಯಿತು. ತುಷ್ಟೀಕರಣ ರಾಜಕಾರಣ ಬಿಟ್ಟು ವಿಷಯಾಧರಿತ ರಾಜಕಾರಣ ಮಾಡಬೇಕು, ಮುಂದೆಯೂ ಇಂತಹ ತುಚ್ಚವಾದ ಹೇಳಿಕೆಗಳು ಬಂದರೆ ಅವರ ಮನೆಯ ಮುಂದೆಯೂ ಪ್ರತಿಭಟನೆ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಲಾಯಿತು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು, ಸುರೇಂದ್ರ ಪಣಿಯೂರು, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರು, ಪ್ರವೀಣ್ ಗುರ್ಮೆ, ಜಿಲ್ಲಾ ಬಿಜೆಪಿ ರೈತ ಮೋರ್ಚ ಅಧ್ಯಕ್ಷರು, ಸಚಿನ್ ಸುವರ್ಣ, ಕಾಪು ಮಂಡಲ ಬಿಜೆಪಿ ಯುವಮೋರ್ಚ ಅಧ್ಯಕ್ಷರು, ಜಿಲ್ಲಾ ಫಲಾನುಭವಿ ಪ್ರಕೋಷ್ಠ ಸಂಚಾಲಕರಾದ ದಿಲ್ಲೇಶ್ ಶೆಟ್ಟಿ ,ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷರು, ಕಾಪು ಮಂಡಲ ಕಾರ್ಯದರ್ಶಿಗಳಾದ ರಾಜೇಶ್ ಕುಂದರ್, ಮಾಲಿನಿ ಶೆಟ್ಟಿ, ಲತಾ ಆಚಾರ್ಯ, ಕಾಪು ಮಂಡಲ ಉಪಾಧ್ಯಕ್ಷರು ಗಳಾದ ಸಂಧ್ಯಾ ಕಾಮತ್, ನವೀನ್ ಎಸ್ ಕೆ, ಚಂದ್ರ ಮಲ್ಲಾರ್, ಪಲಿಮಾರು ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಪುರಸಭಾ ಸದಸ್ಯರುಗಳಾದ ಅನಿಲ್ ಕುಮಾರ್, ಸುರೇಶ್ ದೇವಾಡಿಗ ಪಕ್ಷದ ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು
ಉಡುಪಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮಾಡಿರುವ ವೈಯಕ್ತಿಕ ನಿಂದನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಡಿ.17 ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ದೇಶದ ಸುರಕ್ಷತೆ ಹಾಗೂ ಶಾಂತಿಗೆ ಭಂಗವನ್ನುಂಟುಮಾಡುವ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ನ ದೇಶ ವಿರೋಧಿ ನೀತಿ ಮತ್ತು ಸದಾ ಭಯೋತ್ಪಾದಕರನ್ನು ಪೋಷಿಸುತ್ತಿರುವ ಉಗ್ರರ ತವರೂರು ಪಾಕಿಸ್ತಾನದ ಅವಿವೇಕಿತನದ ಪರಮಾವಧಿಯನ್ನು ತೀವ್ರವಾಗಿ ಖಂಡಿಸಿದರು.
ದೇಶ ವಿರೋಧಿ ಕಾಂಗ್ರೆಸ್ ಮತ್ತು ಭಯೋತ್ಪಾದಕ ರಾಷ್ಟ್ರ ಪಾಕ್ ವಿರುದ್ಧ ಘೋಷಣೆ ಮೊಳಗಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಗೀತಾಂಜಲಿ ಎಮ್. ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಸದಾನಂದ ಬಳ್ಕೂರು, ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್, ಮಾಲತಿ ನಾಯ್ಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಪ್ರ.ಕಾರ್ಯದರ್ಶಿ ಗೋಪಾಲ್ ಕಾಂಚನ್, ಜಿಲ್ಲಾ ಅಲ್ಪಸಂಖ್ಯಾಕ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರ.ಕಾರ್ಯದರ್ಶಿ ಆಸಿಫ್ ಕಟಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷೆ ವೀಣಾ ನಾಯ್ಕ್, ಕುಂದಾಪುರ ಮಂಡಲಾಧ್ಯಕ್ಷ ಶಂಕರ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ಬೈಂದೂರು, ಮಂಜುನಾಥ್ ಮಣಿಪಾಲ್, ಸಚಿನ್ ಪೂಜಾರಿ, ಜಿಲ್ಲಾ ಮತ್ತು ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಪ್ರಕೋಷ್ಠಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ನಗರಸಭಾ ಸದಸ್ಯರು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಶ್ಚಿತವಾಗಿ ಹೀನಾಯ ಸೋಲನ್ನನುಭವಿಸಲಿರುವ ಸ್ಪಷ್ಟ ಚಿತ್ರಣವನ್ನರಿತು ಕಂಗೆಟ್ಟಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಉಗ್ರನನ್ನು ಸಮರ್ಥಿಸಿಕೊಳ್ಳುವ ಕೀಳು ಮಟ್ಟಕ್ಕೆ ಇಳಿದಿರುವುದು ಕಾಂಗ್ರೆಸ್ಸಿನ ಅಧ:ಪತನಕ್ಕೆ ಹಿಡಿದ ಕೈಗನ್ನಡಿಯಂತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಈ ಹಿಂದೆ 2018ರಲ್ಲಿ, ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಲ್ಲಿರುವ ಉಗ್ರರನ್ನು ಬಿಡುಗಡೆಗೊಳಿಸುವ ಜೊತೆಗೆ ಉಗ್ರರಿಗೆ 1 ಕೋಟಿ ರೂ. ಪರಿಹಾರ ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು. ಅದೇ ರೀತಿಯ ವರಸೆಯನ್ನು ಮುಂದುವರಿಸಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪ್ರಕರಣದ ಆರೋಪಿಗಳನ್ನು ‘ದೆ ಆರ್ ಮೈ ಬ್ರದರ್ಸ್’ ಎಂದಿದ್ದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಒಂದೇ ವರ್ಗವನ್ನು ಓಲೈಸುವ ಭರದಲ್ಲಿ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ ಭಯೋತ್ಪಾದಕನ ಪರ ವಹಿಸಿ ಮಾತನಾಡಿರುವುದು ಕಾಂಗ್ರೆಸ್ಸಿನ ಉಗ್ರ ಪ್ರೇಮ ಮತ್ತು ದೇಶವಿರೋಧಿ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ರಾಜ್ಯದ ಎಲ್ಲ ವರ್ಗದ ಜನತೆ ಖಂಡಿಸಿದ್ದರೂ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಾತ್ರ ಉಗ್ರರ ಪರ ವಕಾಲತ್ತು ವಹಿಸಿ, ರಾಜ್ಯದ ಆಂತರಿಕ ಭದ್ರತೆಗೆ ಅಪಾಯಕಾರಿ ಎನಿಸಿರುವುದು ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತಿದೆ.
ಡಿಕೆಶಿಯವರ ಪ್ರಕಾರ ಮುಂಬೈ ಮತ್ತು ಪುಲ್ವಾಮಾ ದಾಳಿಯಂತೆ ಜನತೆ ಹಾಗೂ ಯೋಧರು ಬಾಂಬ್ ಸ್ಪೋಟದಲ್ಲಿ ಪ್ರಾಣ ತೆತ್ತರೆ ಮಾತ್ರ ಅದು ಭಯೋತ್ಪಾದಕ ಕೃತ್ಯವೆನಿಸುತ್ತದೆಯೆ? ಯಾರು ಭಯೋತ್ಪಾದಕರು, ಯಾರು ದೇಶದ್ರೋಹಿಗಳು ಎಂಬುದನ್ನು ತನಿಖಾ ಸಂಸ್ಥೆಗಳು ಡಿಕೆಶಿಯವರಿಂದ ತಿಳಿದುಕೊಳ್ಳಬೇಕೆ? ಅಷ್ಟಕ್ಕೂ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ ನಡೆದು ಸುಮಾರು 25 ದಿನಗಳ ಬಳಿಕ ಡಿಕೆಶಿಯವರಿಗೆ ಜ್ಞಾನೋದಯವಾಗಿರುವುದೇ ವಿಪರ್ಯಾಸವೆನಿಸಿದೆ.
ನಿರಂತರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಾ ಬಂದಿರುವ ಕಾಂಗ್ರೆಸ್ ಕೇವಲ ಅಲ್ಪಸಂಖ್ಯಾತ ಮತಗಳ ದುರಾಸೆಯಿಂದ ಒಂದೇ ವರ್ಗವನ್ನು ಓಲೈಸುವ ಪರಿಪಾಠದ ಜೊತೆಗೆ ಉದ್ದೇಶಪೂರ್ವಕವಾಗಿಯೇ ಉಗ್ರರ ಪರ ನಿಂತಿರುವುದು ದೇಶದ ಆಂತರಿಕ ಭದ್ರತೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ನಡೆಸಿದ ಉಗ್ರ ಶಾರೀಕ್ ಪರ ಮೃದು ಧೋರಣೆ ವಹಿಸಿ, ದೇಶದ ತನಿಖಾ ಸಂಸ್ಥೆಗಳು ಹಾಗೂ ಭದ್ರತಾ ವ್ಯವಸ್ಥೆಯನ್ನು ಕಡೆಗಣಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಗ್ರ ಪ್ರೇಮ ಖಂಡನೀಯ. ರಾಜ್ಯದ ಜನತೆ ಕಾಂಗ್ರೆಸ್ ನ ಈ ಎಲ್ಲ ವಿಲಕ್ಷಣ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಮುಂಬರಲಿರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು.
ಕೊಪ್ಪಳದಲ್ಲಿ, ಕೊಪ್ಪಳ ಸೇರಿದಂತೆ ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮರ್ಥ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವ, ಯಡಿಯೂರಪ್ಪ, ಬೊಮ್ಮಾಯಿ ಅವರ ನೇತೃತ್ವದಲ್ಲಿ ದೇಶ – ರಾಜ್ಯದಲ್ಲಿ ಮಹಿಳಾ ಸಶಕ್ತೀಕರಣ ಕಾರ್ಯ ನಡೆಯಿತು. 12 ಕೋಟಿಗೂ ಹೆಚ್ಚು ಶೌಚಾಲಯ ನಿರ್ಮಾಣ ನಡೆಯಿತು ಎಂದು ವಿವರಿಸಿದರು.
ಆಯುಷ್ಮಾನ್ ಭಾರತ್ ಮೂಲಕ 5 ಲಕ್ಷ ರೂಪಾಯಿಯ ಸ್ವಾಸ್ಥ್ಯ ರಕ್ಷಣೆ ಲಭಿಸಿದೆ. ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ್ (ನಳ್ಳಿ ನೀರು) ಲಭಿಸುತ್ತಿದೆ. ಉಜ್ವಲ ಯೋಜನೆಯಡಿ 9 ಕೋಟಿ ಸಿಲಿಂಡರ್ ಸಂಪರ್ಕ ಕೊಡಲಾಗಿದೆ ಎಂದು ತಿಳಿಸಿದರು.
ರೈತರ ಮಕ್ಕಳಿಗೆ ವಿದ್ಯಾನಿಧಿಯನ್ನು ಕರ್ನಾಟಕ ಸರಕಾರ ನೀಡಿದೆ. ನೂತನ ಶಿಕ್ಷಣ ನೀತಿಯನ್ನು ಜಾರಿ ಮಾಡಿದ ಮೊದಲ ರಾಜ್ಯ ಕರ್ನಾಟಕ. ಸಂಕಷ್ಟದಲ್ಲಿರುವ ಸಮಾಜದ ಎಲ್ಲರಿಗೂ ಯಡಿಯೂರಪ್ಪ – ಬೊಮ್ಮಾಯಿ ಸರಕಾರ ನೆರವಾಗಿದೆ ಎಂದು ಮೆಚ್ಚುಗೆ ಸೂಚಿಸಿದರು.
ಕಾರ್ಯಕರ್ತರು ಜನರ ಕಡೆ ತೆರಳಬೇಕು. ಬಿಜೆಪಿ ಸಮಾಜದ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಗ್ಗೆ ಜನರಿಗೆ ತಿಳಿಸಬೇಕು. ಇತರ ಪಕ್ಷಗಳು ಭ್ರಷ್ಟಾಚಾರಕ್ಕಾಗಿಯೇ ಕೆಲಸ ಮಾಡುತ್ತಿವೆ ಎಂಬುದನ್ನು ಮನವರಿಕೆ ಮಾಡಬೇಕು ಎಂದು ವಿನಂತಿಸಿದರು.
ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರಾ ಮಾಡಿದ್ದರು. ಅದು ಭಾರತ್ ಜೋಡೋ ಯಾತ್ರೆ ಅಲ್ಲ; ಅದು ಪ್ರಾಯಶ್ಚಿತ್ತ ಯಾತ್ರೆ. ಇವರ ಪೂರ್ವಜರೇ ಭಾರತದ ಒಡೆಯುವಿಕೆಗೆ ಕಾರಣರಾಗಿದ್ದರು ಎಂದು ಟೀಕಿಸಿದರು. ದೇಶದ್ರೋಹಿಗಳ ಜೊತೆ ಅವರು ಯಾತ್ರೆ ಮಾಡಿದ್ದರು ಎಂದು ಆಕ್ಷೇಪಿಸಿದರು.
ವಿಕಾಸ ಎಂಬುದು ಕಾಂಗ್ರೆಸ್ಸಿಗರಿಗೆ ಗೊತ್ತೇ ಇಲ್ಲ. ಭ್ರಷ್ಟತೆಯೇ ಕಾಂಗ್ರೆಸ್ ಹಿನ್ನೆಲೆ ಮತ್ತು ಇತಿಹಾಸ. ಅದೇ ಇತಿಹಾಸವನ್ನು ಇಲ್ಲಿಯೂ ಕಾಂಗ್ರೆಸ್ಸಿಗರು ಹೊಂದಿದ್ದಾರೆ ಎಂದ ಅವರು, ಬಿಜೆಪಿಯನ್ನು ಬೆಂಬಲಿಸಿದರೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದರು.
ಕೋವಿಡ್‍ನಿಂದ ಚೀನಾ ಮುಕ್ತವಾಗಿಲ್ಲ. ಯುರೋಪ್‍ನಲ್ಲಿ, ಅಮೇರಿಕಾದಲ್ಲೂ ಇದೇ ಸ್ಥಿತಿ ಇದೆ. ಭಾರತವು ಎಲ್ಲರಿಗೂ ಕೋವಿಡ್ ಲಸಿಕೆ ನೀಡಿ ಕೋವಿಡ್‍ಮುಕ್ತ ದೇಶವನ್ನಾಗಿ ಮಾಡಿದ್ದೇವೆ. ಬಿಜೆಪಿ ಸಾಧನೆಯ ಜೊತೆ ಮುನ್ನಡೆದಿದೆ. ಸಿದ್ದರಾಮಯ್ಯ ಕರ್ನಾಟಕಕ್ಕಾಗಿ ಏನು ಮಾಡಿದ್ದಾರೆ ಎಂದು ಹೇಳಲು ಅವರಲ್ಲಿ ವಿಷಯವೇ ಇಲ್ಲ ಎಂದು ಟೀಕಿಸಿದರು. ಡಿ.ಕೆ. ಶಿವಕುಮಾರ್ ಅವರದೂ ಇದೇ ಸ್ಥಿತಿ ಎಂದರು. ವಂದೇ ಭಾರತ್ ರೈಲು ಭಾರತದ ವಿಕಾಸಕ್ಕೆ ಪೂರಕ ಎಂದು ಅವರು ತಿಳಿಸಿದರು.
ಕೆಂಪೇಗೌಡ ವಿಮಾನನಿಲ್ದಾಣ ಅಭಿವೃದ್ಧಿಗೆ ಗರಿಷ್ಠ ಮೊತ್ತದ ಹಣವನ್ನು ಹೂಡಲಾಗಿದೆ. ನವ ಮಂಗಳೂರು ಬಂದರು ಅಭಿವೃದ್ಧಿಯು ಪ್ರವಾಸೋದ್ಯಮದ ದೃಷ್ಟಿಯಿಂದ ಮಹತ್ವದ ಹೆಜ್ಜೆ ಇಟ್ಟಿದೆ ಎಂದರು.
370ನೇ ವಿಧಿ ರದ್ದು, ಲಾಲ್ ಚೌಕದಲ್ಲಿ ತ್ರಿವರ್ಣ ಧ್ವಜಾರೋಹಣ, ತುಷ್ಟೀಕರಣ ಇಲ್ಲದೆ ಎಲ್ಲರಿಗೂ ನ್ಯಾಯ ದೊರಕಿಸಿ ಕೊಡುವ ಕಡೆ ಬಿಜೆಪಿ ಮುನ್ನಡೆದಿದೆ. ಶಾಬಾನೊ ಕೇಸಿನ ವಿರೋಧ ಮಾಡಿದ ಬಿಜೆಪಿ ಅಯೋಧ್ಯೆಯಲ್ಲಿ ಮಂದಿರಕ್ಕಾಗಿ ಶಿಲಾನ್ಯಾಸ ನೆರವೇರಿಸಿದೆ ಎಂದು ವಿವರಿಸಿದರು.
ನಮ್ಮಲ್ಲಿ ಪಕ್ಷ ಎಂದು ಒಂದು ಕುಟುಂಬ. ಇತರ ಪಕ್ಷಗಳಲ್ಲಿ ಒಂದು ಕುಟುಂಬವೇ ಪಕ್ಷ ಎಂಬ ಸ್ಥಿತಿ ಇದೆ. ಭಾರತ ಜಿ20 ಅಧ್ಯಕ್ಷತೆ ವಹಿಸಿದೆ. ಇದು ಹೆಮ್ಮೆಯ ವಿಚಾರ ಎಂದು ತಿಳಿಸಿದರು.
2014ರಲ್ಲಿ ಮೋದಿಜಿ ಮತ್ತು ಅಮಿತ್ ಶಾ ಅವರು ಜಿಲ್ಲಾ ಸ್ವಂತ ಕಾರ್ಯಾಲಯದ ವಿಚಾರವನ್ನು ಮಂಡಿಸಿದ್ದರು. ಬಿಜೆಪಿ ಪ್ರತಿ ಜಿಲ್ಲೆಯಲ್ಲಿ ಕಾರ್ಯಾಲಯ ಹೊಂದುವತ್ತ ಮುನ್ನಡೆದಿದೆ ಎಂದು ತಿಳಿಸಿದರು.
10 ಕಾರ್ಯಾಲಯಗಳ ಉದ್ಘಾಟನೆ, 3 ಕಾರ್ಯಾಲಯಕ್ಕೆ ಶಿಲಾನ್ಯಾಸವು ಸೌಭಾಗ್ಯದ ವಿಚಾರ ಎಂದು ಮೆಚ್ಚುಗೆ ಸೂಚಿಸಿದ ಅವರು, ಯಡಿಯೂರಪ್ಪ ಅವರಂಥ ನಾಯಕರು, ಕಾರ್ಯಕರ್ತರ ಶ್ರಮದಿಂದ ಇದು ಸಾಧ್ಯವಾಗಿದೆ ಎಂದರು.
ಅಂಜನಿಪುತ್ರ ಹನುಮಾನ್‍ಗೆ ನಮನಗಳು. ಇದು ಪುಣ್ಯಭೂಮಿ. ನಮನಗಳು ಎಂದು ತಿಳಿಸಿದರು. ಸಾಂಸ್ಕೃತಿಕ ದೃಷ್ಟಿಯಿಂದ ವಿಭಿನ್ನ ಭೂಮಿ ಇದು ಎಂದು ವಿವರಿಸಿದರು.
ರಾಜ್ಯದ ಇತರೆ ಒಂಭತ್ತು ಜಿಲ್ಲೆಗಳ ಜಿಲ್ಲಾ ಕಾರ್ಯಾಲಯ ಭವನದ ಉದ್ಘಾಟನೆಯನ್ನು ವಚ್ರ್ಯುವಲ್ ಮಾಧ್ಯಮದ ಮೂಲಕ ಜೆ.ಪಿ.ನಡ್ಡಾ ಅವರು ನೆರವೇರಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ್ ಎಸ್. ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ವಿಜಯಪುರ, ಬಾಗಲಕೋಟೆ, ಕೋಲಾರ, ಚಾಮರಾಜನಗರ, ಹಾವೇರಿ ಮತ್ತು ಗದಗದಲ್ಲಿ ನಿರ್ಮಿಸಿದ ನೂತನ ಕಾರ್ಯಾಲಯಗಳನ್ನು ಕೊಪ್ಪಳದಲ್ಲಿ ಜೆ.ಪಿ. ನಡ್ಡಾ ಅವರು ಉದ್ಘಾಟಿಸಿದರು. ವಿಜಯನಗರ, ಕೊಡಗು ಮತ್ತು ಉತ್ತರಕನ್ನಡ ಜಿಲ್ಲಾ ಕಚೇರಿ ಕಟ್ಟಡಗಳಿಗೆ ಅವರು ಶಿಲಾನ್ಯಾಸ ನೆರವೇರಿಸಿದರು. ಕೊಪ್ಪಳದ ನಗರದಾದ್ಯಂತ ನಾಯಕರ ಕಟೌಟ್‍ಗಳು ಹಾಗೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದವು.
ಕುಂದಾಪುರ: ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ.
ಹೆಮ್ಮಾಡಿಯ ಖಾಸಗಿ ಹೋಟೇಲ್‌ನಲ್ಲಿ ಡಿ.13ರ ಸಂಜೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಗಾಗಿ ಕೆಲಸ ಮಾಡುವ ಯಾರನ್ನೆ ಆಗಲಿ ಸ್ವಾಗತಿಸುತ್ತೇವೆ. ತಳಮಟ್ಟದ ಸಂಘಟನೆ ಇರುವ ಬಿಜೆಪಿಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ. ಗುಜರಾತ್ ಹಾಗೂ ಉತ್ತರಕಾಂಡ್ ರಾಜ್ಯದ ಚುನಾವಣಾ ಮಾದರಿಯಲ್ಲಿ ರಾಜ್ಯದಲ್ಲಿಯೂ ಬದಲಾವಣೆಯ ನಿರೀಕ್ಷೆಗಳು ಇದೆ. 3-4 ಬಾರಿ ಶಾಸಕರಾದವರು, ಹೊಸಬರಿಗೆ ಅವಕಾಶ ನೀಡುವ ಸ್ವಯಂ ತೀರ್ಮಾನ ಕೈಗೊಳ್ಳಬೇಕು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಹಿಂದುತ್ವ ಪರವಾದ ಅಲೆ ಪ್ರಬಲವಾಗಿರುವ ಕಾರಣದಿಂದಾಗಿ ಜಾತಿ ಸಮೀಕರಣಗಿಂತ, ಪಕ್ಷದ ತತ್ವ, ಸಿದ್ದಾಂತ ಒಪ್ಪಿಕೊಳ್ಳುವ ಅಭ್ಯರ್ಥಿಗಳಿಗೆ ಅವಕಾಶ ದೊರಕುವ ಸಾಧ್ಯತೆಗಳನ್ನು ಅಲ್ಲಗಳಿಯುವಂತಿಲ್ಲ ಎಂದರು.
ಬೈಂದೂರು ಸೇರಿದಂತೆ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳು ಯಾರು ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಆದರೆ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ನಮಗೆ ಆಗಿದೆ ಪಕ್ಷ ತಿರುಗಲು ಹೇಳಿದೆ ಎನ್ನುವ ಮೂಲಕ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಪಕ್ಷ ಇದನ್ನು ಗಂಭೀರವಾಗಿ ಪರಿಗಣಿಸಲಿದ್ದು, ಇಂತಹವರ ವಿರುದ್ಧ ನೋಟಿಸು ನೀಡಿ, ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕ್ಷೇತ್ರದ ಜನರಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಪಕ್ಷದ ಶಾಸಕರಾಗಿರುವುದರಿಂದಾಗಿ ಅವರೇ ನಮ್ಮ ನಾಯಕರಾಗಿದ್ದಾರೆ. 243 ಬೂತ್‌ಗಳಲ್ಲೂ ಪಕ್ಷ ಸಶಕ್ತವಾಗಿ ಕೆಲಸ ಮಾಡುತ್ತಿದೆ.
ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟನೆಯ ಅವಲೋಕನ ನಡೆಸಲಾಗಿದೆ. ಜಿಲ್ಲೆಯ ಎಲ್ಲ 5 ಕ್ಷೇತ್ರಗಳ ಶಾಸಕರು ಉತ್ತಮವಾಗಿದ್ದಾರೆ. ಸ್ಥಳಿಯಾಡಳಿತ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ, ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆಗಳಲ್ಲಿ ಪಕ್ಷಕ್ಕೆ ಬಹುಮತ ಇರುವುದರಿಂದ ಮುಂದಿನ ಚುನಾವಣೆಯಲ್ಲಿಯೂ ಪಕ್ಷದ ಅಭ್ಯರ್ಥಿಗಳು ನಿಚ್ಚಳವಾಗಿ ಗೆಲುವು ಸಾಧಿಸಲಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಹಗಲುಗನಸು ಕಾಣುವುದು ಬೇಡ ಎಂದರು.
ಮತದಾರರು ಉತ್ತರಿಸುತ್ತಾರೆ: ಮುತಾಲಿಕ್ ಗೆ ಕುಯಿಲಾಡಿ ಖಡಕ್ ನುಡಿ:
ಬಿಜೆಪಿಯದು ಡೊಂಗಿ ಹಿಂದುತ್ವ ಎನ್ನುವ ಪ್ರಮೋದ್ ಮುತಾಲಿಕ್ ಅವರು ಚುನಾವಣೆಗೆ ಸ್ಪರ್ಧಿಸಿದಲ್ಲಿ, ಕಾರ್ಕಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಫಲಿತಾಂಶದಲ್ಲಿ ಉತ್ತರ ಕೊಡುತ್ತಾರೆ. ಸಚಿವ ಸುನೀಲ್ ಕುಮಾರ್ ಪ್ರಖರ ಹಿಂದುತ್ವವಾದಿಯಾಗಿದ್ದು, ಸಂಘಟನೆ ಹಾಗೂ ಅಭಿವೃದ್ಧಿಯಲ್ಲಿ ಕಾರ್ಕಳವನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿ ಇರಿಸಿದ್ದಾರೆ. ಮುತಾಲಿಕ್ ಅವರ ಬಗ್ಗೆ ಗೌರವ ಇದೆ. ಇದು ಖಂಡಿತ ಅವರ ತೀರ್ಮಾನವಲ್ಲ; ಕೆಲ ವಿಘ್ನ ಸಂತೋಷಿಗಳು, ಗೊಂದಲ ಸೃಷ್ಟಿಸಲು ಅವರನ್ನು ಅಭ್ಯರ್ಥಿಯಾಗಿ ಬಿಂಬಿಸಲು ಹೊರಟಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜಡ್ಡು, ಕೋಶಾಧಿಕಾರಿ ಅಶೋಕ ಕುಮಾರ ಶೆಟ್ಟಿ ಸಂಸಾಡಿ, ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ದಾವೂದ್ ಇದ್ದರು.