ಉಡುಪಿ: ಪಕ್ಷದ ಸೂಚನೆಯಂತೆ ‘ವಿಜಯ ಸಂಕಲ್ಪ ಅಭಿಯಾನ’ದ ಅಂಗವಾಗಿ ಜ.29ರಂದು ಅಂಬಲಪಾಡಿ ಬೂತ್ 178ರ ವ್ಯಾಪ್ತಿಯಲ್ಲಿ ನಡೆದ ಮನೆ ಮನೆ ಬೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ‘ಮನ್ ಕೀ ಬಾತ್’ ಕಾರ್ಯಕ್ರಮವನ್ನು ಅಂಬಲಪಾಡಿ ಶರತ್ ಶೆಟ್ಟಿ ಯವರ ಮನೆಯಲ್ಲಿ ವೀಕ್ಷಿಸಿ, ವರದಿ ಮತ್ತು ಫೋಟೋವನ್ನು ಆನ್ಲೈನ್ ಮೂಲಕ ‘ಮನ್ ಕೀ ಬಾತ್’ ವೆಬ್ಸೈಟ್ ಗೆ ಅಪ್ಲೋಡ್ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಅಂಬಲಪಾಡಿ, ಅಂಬಲಪಾಡಿ ಬೂತ್ 178ರ ಅಧ್ಯಕ್ಷ ಮಹೇಂದ್ರ ಕೋಟ್ಯಾನ್, ಕಾರ್ಯದರ್ಶಿ ಅಶೋಕ್ ಅಂಚನ್, ಅಂಬಲಪಾಡಿ-ಕಡೆಕಾರು ಮಹಾಶಕ್ತಿ ಕೇಂದ್ರದ ಯುವ ಮೋರ್ಚಾ ಉಪಾಧ್ಯಕ್ಷ ವಿನೋದ್ ಪೂಜಾರಿ, ಪಕ್ಷದ ಪ್ರಮುಖರಾದ ಅನಿಲ್ ರಾಜ್ ಅಂಚನ್, ಪ್ರವೀಣ್ ಕುಮಾರ್, ಬೂತ್ ಸಮಿತಿ ಸದಸ್ಯರು ಹಾಗೂ ಶರತ್ ಶೆಟ್ಟಿ ಮತ್ತು ಮನೆಯವರು ಉಪಸ್ಥಿತರಿದ್ದರು.
ಉಡುಪಿ: ಶ್ರೀ ವಿಠೋಬ ಭಜನಾ ಮಂದಿರ ಬಿಲ್ಲವ ಸೇವಾ ಸಂಘ (ರಿ.), ಅಂಬಲಪಾಡಿ ಇದರ ವಾರ್ಷಿಕ ಭಜನಾ ಸಪ್ತಾಹಕ್ಕೆ ಸಂಘದ ನಿಕಟಪೂರ್ವ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಆಡಳಿತ ಸಮಿತಿಯ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ರಮೇಶ್ ಕೋಟ್ಯಾನ್, ವಿನಯ್ ಕುಮಾರ್, ಭಜನಾ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಸಂಘದ ಸದಸ್ಯರಾದ ಕುಶಲ್ ಕುಮಾರ್ ಎ., ಜನಾರ್ದನ ಪೂಜಾರಿ, ವಿಘ್ನೇಶ್, ರಾಜು ಪೂಜಾರಿ, ಹರೀಶ್ ಪೂಜಾರಿ, ಮಹಿಳಾ ಘಟಕದ ಪದಾಧಿಕಾರಿಗಳಾದ ಪ್ರಭಾ ದಯಾನಂದ್, ಅಶ್ವಿನಿ ಪೂಜಾರಿ, ಅರ್ಚಕರಾದ ಜೀವನ್, ಅದಿತ್ ಮತ್ತಿತರರು ಉಪಸ್ಥಿತರಿದ್ದರು.
Android ಮತ್ತು iOS ಅತ್ಯಂತ ಜನಪ್ರಿಯ ಮೊಬೈಲ್ ಫೋನ್ ಆಪರೇಟಿಂಗ್ ಸಿಸ್ಟಂಗಳಾಗಿವೆ (Operating System). ಈ ಎರಡೂ ಓಎಸ್‌ಗಳನ್ನು (OS) ಅದ್ಭುತ ವೈಶಿಷ್ಟ್ಯಗಳೊಂದಿಗೆ ಬಳಸಲು ತುಂಬಾ ಸುಲಭವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಹೆಚ್ಚಿನ ಬಳಕೆದಾರರು ಇವುಗಳನ್ನು ಬಳಸುತ್ತಿದ್ದಾರೆ.
ಕೆಲವು ಸಮಯದಿಂದ, ಇವುಗಳಿಗೆ ಪೈಪೋಟಿ ನೀಡಲು ಇತರ ಕೆಲವು ಓಎಸ್‌ಗಳು (OS) ಲಭ್ಯವಾಗುತ್ತಿವೆ. ಹೆಚ್ಚಿನ ವೇಗ, (Speed) ಅದ್ಭುತ ವೈಶಿಷ್ಟ್ಯಗಳು (Features) ಮತ್ತು ಸುರಕ್ಷತೆಯ (Safety) ವಿಷಯದಲ್ಲಿ ಯಾವುದೇ ರಾಜಿ ಇಲ್ಲ, ಇದೀಗ ಇದು Android ಮತ್ತು iOS ಸವಾಲಾಗಿದೆ. ಇತ್ತೀಚೆಗಷ್ಟೇ ಭಾರತದಿಂದ ಹೊಸ ಓಎಸ್ (OS) ಬಿಡುಗಡೆಯಾಗಿದೆ. ಈ OS ಗೆ ‘BharOS’ ಎಂದು ಹೆಸರಿಸಲಾಗಿದೆ.’
ಕೇಂದ್ರ ಸರ್ಕಾರ ಆರಂಭಿಸಿರುವ ಆತ್ಮ ನಿರ್ಭರ ಭಾರತ್ ಕಾರ್ಯಕ್ರಮದ ಭಾಗವಾಗಿ ಐಐಟಿ ಮದ್ರಾಸ್ (IIT Madras)ಈ ಮೊಬೈಲ್ ಆಪರೇಟಿಂಗ್ ಸಿಸ್ಟಮ್ (Mobile Operating System)ಅನ್ನು ಬಿಡುಗಡೆ ಮಾಡಿದೆ. ಅದಕ್ಕೆ ‘BharOS’ ಎಂದು ಹೆಸರಿಡಲಾಗಿದೆ. ಗೌಪ್ಯತೆ ಮತ್ತು ಭದ್ರತೆ ಈ OS ನ ಮುಖ್ಯ ಗುರಿಗಳಾಗಿವೆ. ಐಐಟಿ ಮದ್ರಾಸ್, (IIT Madras) ಪ್ರವರ್ತಕ್ ಟೆಕ್ನಾಲಜೀಸ್ ಫೌಂಡೇಶನ್ ಮತ್ತು ಝಂಡ್ ಕೆ ಆಪರೇಷನ್ ಪ್ರೈವೇಟ್ ಲಿಮಿಟೆಡ್ ಜಂಟಿಯಾಗಿ ಈ ಓಎಸ್ ಅನ್ನು ಅಭಿವೃದ್ಧಿಪಡಿಸಿವೆ.
ಭದ್ರತೆಯ ವಿಷಯಕ್ಕೆ ಬಂದಾಗ ‘ಭರೋಸ್’ ತುಂಬಾ ನಿಖರವಾಗಿದೆ. ಈ OS ಹೊಂದಿರುವ ಮೊಬೈಲ್‌ಗಳಲ್ಲಿ ಮೂರನೇ ವ್ಯಕ್ತಿಯ ಅಪ್ಲಿಕೇಶನ್‌ಗಳನ್ನು ಅನುಮತಿಸಲಾಗುವುದಿಲ್ಲ. ನಿರ್ದಿಷ್ಟ ನಿರ್ಬಂಧಿತ ಅಪ್ಲಿಕೇಶನ್‌ಗಳನ್ನು ಮಾತ್ರ ಅನುಮತಿಸುತ್ತದೆ. ಮೊದಲೇ ಸ್ಥಾಪಿಸಲಾದ ಅಪ್ಲಿಕೇಶನ್‌ಗಳು ಮೂಲವಲ್ಲ. ಈ ಕಾರಣದಿಂದಾಗಿ, ಅಪ್ಲಿಕೇಶನ್ ಅನುಮತಿಗಳಿಗೆ ಸಂಬಂಧಿಸಿದಂತೆ ಬಳಕೆದಾರರು ಯಾವುದೇ ಸಮಸ್ಯೆಯನ್ನು ಎದುರಿಸುವುದಿಲ್ಲ.
ಆಂಡ್ರಾಯ್ಡ್ ಮತ್ತು ಐಒಎಸ್ ಗೆ (Android and Ios) ಹೋಲಿಸಿದರೆ ಈ ಆಪರೇಟಿಂಗ್ ಸಿಸ್ಟಂ (Operating System) ಉತ್ತಮವಾಗಿರಲಿದೆ ಎನ್ನುತ್ತಾರೆ ಟೆಕ್ ತಜ್ಞರು. ಈ OS ಯಾವುದೇ ಸಂದರ್ಭಗಳಲ್ಲಿ ಮೂರನೇ ವ್ಯಕ್ತಿಯ ಅಪ್ಲಿಕೇಶನ್‌ಗಳನ್ನು (Applications) ಅನುಮತಿಸುವುದಿಲ್ಲ. ವೈರಸ್, ಮಾಲ್ವೇರ್ ಮತ್ತು ಹ್ಯಾಕಿಂಗ್ ಮುಕ್ತವಾಗಿ ವಿನ್ಯಾಸಗೊಳಿಸಲಾಗಿದೆ. ದೇಶದ 100 ಕೋಟಿ ಮೊಬೈಲ್ ಬಳಕೆದಾರರು ಇದನ್ನು ಬಳಸುವಂತೆ ಮಾಡಲಾಗಿದೆ. ಅತ್ಯಂತ ರಹಸ್ಯವಾದ ವಿಷಯಗಳನ್ನು ಮತ್ತು ಸೂಕ್ಷ್ಮ ಮಾಹಿತಿಯನ್ನು ಹೆಚ್ಚು ಗೌಪ್ಯವಾಗಿ ಮತ್ತು ಸುರಕ್ಷಿತವಾಗಿಡಲು ಬಯಸುವ ಸಂಸ್ಥೆಗಳು ಈ OS ಅನ್ನು ಬಳಸುತ್ತವೆ. ಇದನ್ನು ಖಾಸಗಿ 5G ನೆಟ್‌ವರ್ಕ್ (5G Network) ಮೂಲಕ ಬಳಸಲಾಗುತ್ತಿದೆ
ಅಸ್ತಿತ್ವದಲ್ಲಿರುವ ಫೋನ್‌ಗಳಲ್ಲಿ ‘BharOS’ ಕಾರ್ಯನಿರ್ವಹಣೆ ಹೇಗೆ..?
ಪ್ರಸ್ತುತ Android OS ಬಳಸುವ ಫೋನ್‌ಗಳಲ್ಲಿ ‘Bharos’ ಅನ್ನು ಸ್ಥಾಪಿಸಲು ಯಾವುದೇ ಸಾಧ್ಯತೆಯಿಲ್ಲ. ಆಯಾ ಮೊಬೈಲ್ ತಯಾರಿಕಾ ಕಂಪನಿಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದದಿಂದಾಗಿ ಗೂಗಲ್ ಆಂಡ್ರಾಯ್ಡವನ್ನೇ ಬಳಸಬೇಕಾಗುತ್ತದೆ. ಭಾರತದಲ್ಲಿ ಮೊಬೈಲ್ ಬಳಕೆದಾರರನ್ನು ಆಕರ್ಷಿಸಲು, ‘ಭರೋಸ್’ ಸಹ ಆಯಾ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. JandKops ಮೊಬೈಲ್ ಫೋನ್‌ಗಳಲ್ಲಿ ‘Bharos’ ಬಳಕೆಯನ್ನು ಪಡೆಯಲು ಸರ್ಕಾರಿ ಏಜೆನ್ಸಿಗಳು ಮತ್ತು ಖಾಸಗಿ ಉದ್ಯಮಗಳೊಂದಿಗೆ ಪಾಲುದಾರಿಕೆ ಮಾಡುವ ಗುರಿಯನ್ನು ಹೊಂದಿದೆ.
ಜಿಲ್ಲಾ ಬಿಜೆಪಿಯಿಂದ ‘ವಿಜಯ ಸಂಕಲ್ಪ ಅಭಿಯಾನ’ದ ಸ್ಟಿಕ್ಕರ್ ಬಿಡುಗಡೆ
News By:ಜನತಾಲೋಕವಾಣಿನ್ಯೂಸ್
ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗರಿಷ್ಠ ಅಂತರದಿಂದ ಗೆಲ್ಲುವ ಜೊತೆಗೆ ರಾಜ್ಯದಲ್ಲಿ 150 ಕ್ಷೇತ್ರಗಳ ಗೆಲುವಿನ ಮೂಲಕ ಮಗದೊಮ್ಮೆ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ವಿಜಯ ಸಂಕಲ್ಪ ಅಭಿಯಾನ’ದ ಸ್ಟಿಕ್ಕರ್ ಮತ್ತು ಗೋಡೆ ಬರಹವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಬಿಜೆಪಿ ಜನಪರ ಆಡಳಿತ, ವಿನೂತನ ಯೋಜನೆಗಳು ಮತ್ತು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಜನತೆಯ ಮುಂದಿಟ್ಟು ಮತ ಯಾಚಿಸುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಸುಳ್ಳನ್ನೇ ಬಂಡವಾಳವನ್ನಾಗಿರಿಸಿ, ಅಪಪ್ರಚಾರ ಮತ್ತು ಬೋಗಸ್ ಭಾಗ್ಯಗಳ ಆಸೆ ತೋರಿಸಿ ಜನರನ್ನು ಯಾಮಾರಿಸಲು ಯತ್ನಿಸುತ್ತಿದೆ. ಜನತೆ ಪ್ರಬುದ್ಧರಾಗಿದ್ದು ಜನವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ಸಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಜ.21ರಂದು ಜಿಲ್ಲೆಯಾದ್ಯಂತ ಚಾಲನೆಗೊಂಡಿರುವ ‘ವಿಜಯ ಸಂಕಲ್ಪ ಅಭಿಯಾನ’ದಲ್ಲಿ ಪಕ್ಷದ ಪ್ರಮುಖರು, ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಮಸ್ತ ಕಾರ್ಯಕರ್ತ ಬಂಧುಗಳು ಇನ್ನಷ್ಟು ಹುಮ್ಮಸ್ಸಿನಿಂದ ತೊಡಗಿಸಿಕೊಂಡು ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರ ಹಾಗೂ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಚಂದ್ರಶೇಖರ್ ಪ್ರಭು, ಉಡುಪಿ ವಿಧಾನಸಭಾ ಕ್ಷೇತ್ರದ ವಿಸ್ತಾರಕ ಗೋಕುಲ್ ಕೃಷ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಅಭಿಯಾನದ ಮಂಡಲ ಸಂಚಾಲಕ ಅನಿಲ್ ಶೆಟ್ಟಿ ಮಾಂಬೆಟ್ಟು, ಉಡುಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಅಭಿಯಾನದ ಮಂಡಲ ಸಂಚಾಲಕ ಸಚಿನ್ ಪೂಜಾರಿ, ಅಭಿಯಾನದ ಉಡುಪಿ ನಗರ ಮಂಡಲ ಸಂಚಾಲಕ ಕಿಶೋರ್ ಕುಮಾರ್ ಕರಂಬಳ್ಳಿ, ನಗರ ಮಂಡಲ ಕಾರ್ಯದರ್ಶಿ ಆನಂದ್ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ: ಅಧ:ಪತನದತ್ತ ಸಾಗುತ್ತಿರುವ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ಹಿಂದೂ ವಿರೋಧಿ ನೀತಿ ಹಾಗೂ ಒಂದೇ ವರ್ಗದ ಓಲೈಕೆಯಿಂದಾಗಿ ದೇಶದಾದ್ಯಂತ ಜನತೆಯಿಂದ ತಿರಸ್ಕೃತಗೊಂಡು ಕೇವಲ ಮೂರು ರಾಜ್ಯಗಳ ಅಧಿಕಾರಕ್ಕೆ ಮಾತ್ರ ಸೀಮಿತಗೊಂಡಿದೆ. ತಮ್ಮ ಆಡಳಿತವಿರುವ ಮೂರು ರಾಜ್ಯಗಳಲ್ಲಿ ಉಚಿತ ಭಾಗ್ಯಗಳನ್ನು ಜಾರಿಗೆ ತರಲು ಅಸಮರ್ಥವಾಗಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ಸೋಲಿನ ಭೀತಿಯಿಂದ ಹತಾಶ ಮನೋಭಾವದಲ್ಲಿ ಸಾಧ್ಯವಾಗದಂತಹ ಬೇಕಾಬಿಟ್ಟಿ ಭಾಗ್ಯಗಳನ್ನು ಘೋಷಿಸಲು ಹೊರಟಿರುವುದು ಹಾಸ್ಯಾಸ್ಪದ. ಕೇಸರಿ ಕಂಡರೆ ಮಾರುದ್ದ ಓಡುವ ಮಾಜಿ ಸಿ.ಎಂ. ಸಿದ್ದರಾಮಯ್ಯಗೆ ಹಿಂದೂಗಳ ಕಂಡರೆ ಭಯವೇಕೆ? ಜಿಹಾದಿಗಳ ಕಂಡರೆ ಪ್ರೀತಿ ಯಾಕೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ.
ಅವರು ಕಾಂಗ್ರೆಸ್ ವತಿಯಿಂದ ಉಡುಪಿಯಲ್ಲಿ ನಡೆದ ಪ್ರಜಾ ಧ್ವನಿ ಸಮಾವೇಶವನ್ನು ವಿಶ್ಲೇಷಿಸಿ, ಉಡುಪಿಯಲ್ಲಿ ನಡೆದಿರುವುದು ಕಾಂಗ್ರೆಸ್ ನ ಪ್ರಜಾ ವಿರೋಧಿ ಸಮಾವೇಶ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಅಧಿಕಾರದ ಲಾಲಸೆಯಿಂದ ದೇಶದಾದ್ಯಂತ ತುರ್ತು ಪರಿಸ್ಥಿತಿಯನ್ನು ಹೇರಿ ಪ್ರಜಾಪ್ರಭುತ್ವದ ಅಸ್ತಿತ್ವವನ್ನೇ ಬುಡಮೇಲು ಮಾಡಿರುವುದು ಕಾಂಗ್ರೆಸ್ ನ ಕರಾಳ ಇತಿಹಾಸ. ಇದೀಗ ಸೋಲಿನ ಭಯದಿಂದ ಕಂಗೆಟ್ಟಿರುವ ಕಾಂಗ್ರೆಸ್ ಮೋಸ ಜಾಲದ ಮೂಲಕ ಸುಳ್ಳು ಭರವಸೆಗಳನ್ನು ನೀಡುತ್ತಿರುವ ಅರ್ಥಹೀನ, ಸತ್ವಹೀನ ಪ್ರಜಾ ವಿರೋಧಿ ಯಾತ್ರೆಯಿಂದ ಜನರನ್ನು ಮರುಳು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಮಾಜಿ ಸಿ.ಎಂ. ಸಿದ್ಧರಾಮಯ್ಯ ಆಡಳಿತಾವಧಿಯಲ್ಲಿ 25ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಹತ್ಯೆಯಾದ ಹಿಂದೂಗಳ ಬಗ್ಗೆ ಕಾಂಗ್ರೆಸ್ ಮುಖಂಡರು ಯಾಕೆ ಮಾತನಾಡುತ್ತಿಲ್ಲ? ಹಿಂದೂ ವಿರೋಧಿ ಕಾಂಗ್ರೆಸ್ ಗೆ ಕೊಲೆಗಡುಕರ ಮೇಲೆ ಮಾತ್ರ ವಾತ್ಸಲ್ಯವೇ?
ಸ್ವಾತಂತ್ರ್ಯಾನಂತರ ಸುದೀರ್ಘ ಅವಧಿಗೆ ದುರಾಡಳಿತವನ್ನು ನಡೆಸಿ ನೂರಾರು ಹಗರಣಗಳ ಮೂಲಕ ದೇಶವನ್ನು ಲೂಟಿಗೈದ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ. ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಹಾಗೂ ಸ್ವತಃ: ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿದ್ದು ಕಾಂಗ್ರೆಸ್ ನ ಸಾಚಾತನ ಏನು ಎಂಬುದು ಜಗಜ್ಜಾಹೀರಾಗಿದೆ. ಇದರೊಂದಿಗೆ ಕಾಂಗ್ರೆಸ್ ಸ್ವಯಂ ಸೃಷ್ಟಿಸಿದ ಪರ್ಸಂಟೇಜ್ ಪ್ರಹಸನವೂ ನಕಲಿ ಎಂಬುದು ಕೂಡಾ ಬಟ್ಟಾಬಯಲಾಗಿದೆ.
ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿಯಂತಿದ್ದು, ಸದಾ ಸುಳ್ಳಿನ ಸರಮಾಲೆಯೊಂದಿಗೆ ಬೊಗಳೆ ಬಿಡುವ, ಕೇಸರಿ ಕಂಡರೆ ಬೆಚ್ಚಿ ಬೀಳುವ ಹಿಂದೂ ವಿರೋಧಿ ಸಿದ್ಧರಾಮಯ್ಯನವರಿಗೆ ಹಿಂದೂ ಕಾರ್ಯಕರ್ತರ ನರಮೇಧಗೈದ ಆರೋಪದಲ್ಲಿ ಬಂಧಿತರಾಗಿದ್ದ ಪಿಎಫ್ಐ, ಸಿಎಫ್ಐ, ಎಸ್ಡಿಪಿಐ ಮುಂತಾದ ಮತಾಂಧ ಜಿಹಾದಿ ಸಂಘಟನೆಗಳ ಕಾರ್ಯಕರ್ತರ ಪ್ರಕರಣಗಳನ್ನು ತರಾತುರಿಯಲ್ಲಿ ಹಿಂಪಡೆದು ಅವರನ್ನು ಜೈಲಿನಿಂದ ಬಿಡುಗಡೆಗೊಳಿಸುವಾಗ ಹಾಗೂ ಯಾರಿಗೂ ಬೇಡವಾಗಿದ್ದ ಮತಾಂಧ ಟಿಪ್ಪು ಜಯಂತಿ ಆಚರಿಸುವಾಗ ಕರಾವಳಿ ಹಿಂದುತ್ವದ ಭದ್ರ ಕೋಟೆ ಎಂಬುದು ನೆನಪಿಗೆ ಬರಲಿಲ್ಲವೇ? ಕರಾವಳಿ ಜಿಲ್ಲೆಗಳ ಜನತೆ ಪ್ರಬುದ್ಧರು, ಪ್ರಜ್ಞಾವಂತರು ಹಾಗೂ ಸ್ವಾಭಿಮಾನಿಗಳಾಗಿದ್ದು, ರಾಜ್ಯವನ್ನು ದಿವಾಳಿಯ ಅಂಚಿಗೆ ಕೊಂಡೊಯ್ಯುವ ಕಾಂಗ್ರೆಸ್ ನ ತಲೆ ಬುಡವಿಲ್ಲದ ಗೊಡ್ಡು ಭಾಗ್ಯಗಳಿಗೆ ಮರುಳಾಗಲಾರರು ಎಂದಿದ್ದಾರೆ.
ಮಾತೆತ್ತಿದರೆ ಅನ್ನಭಾಗ್ಯ ಎನ್ನುವ ಮಾಜಿ ಸಿ.ಎಂ. ಸಿದ್ಧರಾಮಯ್ಯನವರಿಗೆ ಅನ್ನಭಾಗ್ಯ ಎಂಬುದು ಕೇಂದ್ರ ಸರಕಾರದ ಯೋಜನೆ ಎಂದು ತಿಳಿದಿಲ್ಲವೆ? ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯಡಿ ಪ್ರತೀ ಕೆ.ಜಿ. ಅಕ್ಕಿಗೆ ರೂ.29 ರಂತೆ ಕೇಂದ್ರ ಸರಕಾರ ನೀಡುತ್ತಿದ್ದು, ಉಳಿದ ರೂ.3 ನ್ನು ಮಾತ್ರ ರಾಜ್ಯ ಸರಕಾರ ಬರಿಸುತ್ತಿದೆ. ಕೇಂದ್ರದ ಅನ್ನಭಾಗ್ಯ ಯೋಜನೆಗೆ ತನ್ನ ಫೊಟೋ ಅಂಟಿಸಿ ಬಿಟ್ಟಿ ಪ್ರಚಾರ ಪಡೆದಿದ್ದ ಸಿದ್ಧರಾಮಯ್ಯ ಜನರನ್ನು ದಾರಿ ತಪ್ಪಿಸಲು ಹೊರಟು ಸುಳ್ಳುರಾಮಯ್ಯ ಎನಿಸಿಕೊಂಡಿರುವುದು ವಾಸ್ತವ. ಜಾತ್ಯಾತೀತತೆಯ ಬಗ್ಗೆ ಫುಂಖಾನುಪುಂಖವಾಗಿ ಮಾತನಾಡುವ ಸಿದ್ದರಾಮಯ್ಯಗೆ ಒಂದೇ ವರ್ಗಕ್ಕೆ ಶಾಧಿ ಭಾಗ್ಯ ಎಂದು ಘೋಷಿಸುವಾಗ ಜಾತ್ಯಾತೀತ ಮನೋಭಾವ ಕಾಡಲಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ಅವಿಭಜಿತ ದ.ಕ. ಜಿಲ್ಲೆ ಶಿಕ್ಷಣ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಆದರೂ ಜನತೆಯನ್ನು ಅವಮಾನಿಸುವ ಉದ್ದೇಶದಿಂದ ‘ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡುತ್ತೀರೋ ಅಥವಾ ಭಯೋತ್ಪಾದಕರನ್ನಾಗಿ ಮಾಡುತ್ತೀರಾ’ ಎಂದು ಪ್ರಶ್ನಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಮಾತನ್ನು ಅವರು ಖಂಡಿಸಿದರು.
ಭಯೋತ್ಪಾದಕರ ಬಗ್ಗೆ ಕಾಂಗ್ರೆಸ್ ಮೃದು ಧೋರಣೆ ತಳೆದಿರುವುದು ಹಲವಾರು ಸನ್ನಿವೇಶಗಳಲ್ಲಿ ರುಜುವಾತಾಗಿದೆ. ಬುದ್ಧಿವಾದ ಹೇಳುವವರು ಸ್ವಲ್ಪ ತಮ್ಮ ಹಿನ್ನೆಲೆಯನ್ನೂ ಅರಿತು ವರ್ತಿಸುವುದು ಉತ್ತಮ. ಈ ಹಿನ್ನೆಲೆಯಲ್ಲಿ ಬಿ.ಕೆ. ಹರಿಪ್ರಸಾದ್ ರವರ ವಿಭಿನ್ನ ಮನಸ್ಥಿತಿಯ ಬಿಟ್ಟಿ ಉಪದೇಶ ಜಿಲ್ಲೆಯ ಜನತೆಗೆ ಅನಗತ್ಯ ಎಂದು ಕುಯಿಲಾಡಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳು ಬಿಜೆಪಿಯ ಭದ್ರ ಕೋಟೆ. ಇಲ್ಲಿ ಕಾಂಗ್ರೆಸ್ ಅಥವಾ ಇನ್ನಿತರ ಯಾವುದೇ ಪಕ್ಷಗಳಿಗೆ ಜನತೆ ಮಣೆ ಹಾಕಲಾರರು. ಈಗಾಗಲೇ ಸ್ವಯಂಕೃತ ಅಪರಾಧದಿಂದ ದೇಶದಲ್ಲಿ ಕಾಂಗ್ರೆಸ್ ಅಧಿಕೃತ ವಿರೋಧ ಪಕ್ಷವೆನಿಸಲೂ ಅನರ್ಹ ಎಂಬ ದುಸ್ಥಿತಿ ನಿರ್ಮಾಣವಾಗಿದ್ದು, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿಯವರು ಕಾಂಗ್ರೆಸ್ಸಿನ ಗತ ವೈಭವವನ್ನಷ್ಟೇ ಮೆಲುಕು ಹಾಕಿ ಸಂಭ್ರಮಿಸುವುದು ಸೂಕ್ತ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿ ಎಂದರೆ ಅಭಿವೃದ್ಧಿ. ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ ಕಾ ಸಬ್ ಕಾ ವಿಕಾಸ್’ ಮೂಲ ಮಂತ್ರದ ಜನಪರ ಯೋಜನೆಗಳು ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹಿತ ಬಿಜೆಪಿ ನೇತೃತ್ವದಲ್ಲಿ ವಿವಿಧ ರಾಜ್ಯಗಳ ಅಭಿವೃದ್ಧಿ ಪರ ಆಡಳಿತದಿಂದ ಜನತೆ ಪ್ರಭಾವಿತರಾಗಿ ದೇಶದೆಲ್ಲೆಡೆ ಬಿಜೆಪಿ ಪರ ಜನಾದೇಶ ನೀಡಿರುವುದನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅರಿತುಕೊಳ್ಳುವುದು ಉತ್ತಮ ಎಂದಿದ್ದಾರೆ.
ಈ ಹಿಂದೆ ಕಾಂಗ್ರೆಸ್ಸಿನ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರು ಯುವಕರಿಗೆ ರೂ.6,000 ಮಾಸಾಶನ ನೀಡುವ ವಾಗ್ದಾನ ನೀಡಿದ್ದು, ಅದು ಫಲಕಾರಿಯಾಗಲಿಲ್ಲ. ಇದೇ ಮಾದರಿಯಲ್ಲಿ, ಇತಿಹಾಸದಲ್ಲೇ ರಾಜ್ಯವನ್ನು ಅತಿ ಹೆಚ್ಚು ಸಾಲಕ್ಕೆ ದೂಡಿದ ಕುಖ್ಯಾತಿ ಹೊಂದಿರುವ, ವಿದ್ಯುತ್ ಬರದಿಂದ ಟಾರ್ಚ್ ಬೆಳಕಿನಲ್ಲೇ ಬಜೆಟ್ ಮಂಡಿಸಿದ್ದ ಮಾಜಿ ಸಿ.ಎಂ. ಸಿದ್ಧರಾಮಯ್ಯ ಹಾಗೂ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ಸಿನ ಉಚಿತ ಭಾಗ್ಯಗಳ ಭರವಸೆ ಎಂದಿಗೂ ಈಡೇರದು. ಕಾಂಗ್ರೆಸ್ ಇನ್ನೊಮ್ಮೆ ಎಂದಿಗೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಅವರು ತಿಳಿಸಿದ್ದಾರೆ.
ನಾಯಕತ್ವದ ಕೊರತೆಯಿಂದ ಸೊರಗಿ, ಅವನತಿಯ ಅಂಚಿನಲ್ಲಿರುವ ಕಾಂಗ್ರೆಸ್ಸಿನ ದುರಾಡಳಿತ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಹಿಂದೂ ವಿರೋಧಿ ನೀತಿಯಿಂದ ರಾಜ್ಯದ ಜನತೆ ರೋಸಿಹೋಗಿದ್ದು ಎಂದಿಗೂ ಮರೆಯಲಾರದ ಪಾಠವನ್ನು ಕಲಿತಿರುವುದು ವಾಸ್ತವ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ಅಭಿವೃದ್ಧಿ ಪರ ಆಡಳಿತ, ಜನಪರ ಯೋಜನೆಗಳು, ದಾಖಲೆಯ ಸಾಧನೆಗಳು ಜನಮಾನಸದಲ್ಲಿ ಹೊಸ ಭರವಸೆ ಮೂಡಿಸಿವೆ. ಮಗದೊಮ್ಮೆ ಉಡುಪಿ ಜಿಲ್ಲೆಯ ಎಲ್ಲ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಅತಿ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸುವ ಜೊತೆಗೆ ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮಗದೊಮ್ಮೆ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು: ತೆಂಕ ಪಂಚಾಯತ್ ವ್ಯಾಪ್ತಿಯ ಎರ್ಮಾಳು ‘ಇಂಸ್ಟೆಂಟ್ ಸೀ ರೆಸಾರ್ಟ್’ ನಲ್ಲಿ ನಡೆದ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಅಭಿಯಾನದ ಬಗ್ಗೆ ಕಾಪು ಕ್ಷೇತ್ರದಲ್ಲಿ ನಡೆಯುತ್ತಿರುವ ಪಕ್ಷದ ಚಟುವಟಿಕೆ ಬಗ್ಗೆ ಹಾಗೂ ಬಿಜೆಪಿ ಗೆಲುವಿನ ಅನಿವಾರ್ಯತೆ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನೀಡಿದರು. ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಅಭಿವ್ರಧ್ಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರಿ. ಅಭಿಯಾನಕ್ಕೆ ಚಾಲನೆ ನೀಡಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಪಕ್ಷ ನೀಡಿದ ಎಲ್ಲ ಕಾರ್ಯಕ್ರಮಗಳನ್ನು ಎಲ್ಲ ಬೂತ್ ಗಳಲ್ಲಿ ಪ್ರಾಮಾಣಿಕವಾಗಿ ಅನುಷ್ಠಾನ ಮಾಡಲು ಕರೆ ನೀಡಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರು ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬಿದರು.
ಕಾರ್ಯಕ್ರಮದಲ್ಲಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ, ಶ್ರೀಶ ನಾಯಕ್, ಗೀತಂಜಲಿ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಕೊಡಿಬೆಟ್ಟು, ಗೋಪಾಲಕೃಷ್ಣ ರಾವ್, ನಿಕಟಪೂರ್ವ ಜಿಲ್ಲಾಧ್ಯಕ್ಷರು ಮಟ್ಟಾರು ರತ್ನಾಕರ್ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರು ವೀಣಾ ಶೆಟ್ಟಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ವೇದಿಕೆಯಲ್ಲಿ ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು /ಪ್ರಧಾನ ಕಾರ್ಯದರ್ಶಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು
ಉಡುಪಿ: ಸ್ವಾತಂತ್ರ್ಯಾನಂತರ ಬ್ರಹ್ಮಾಂಡ ಭ್ರಷ್ಟಾಚಾರದೊಂದಿಗೆ ದುರಾಡಳಿತ ನಡೆಸಿದ್ದ ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆಯಿಂದ ದೇಶದೆಲ್ಲೆಡೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆಗೈದು, ಇದೀಗ ಪ್ರಜಾ ಧ್ವನಿ ಯಾತ್ರೆಗೆ ಮುಂದಾಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಅವರು ಕುಂದಾಪುರ ಮಂಡಲದ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 164ರಲ್ಲಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಜೊತೆ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
‘ವಿಜಯ ಸಂಕಲ್ಪ ಅಭಿಯಾನ’ದಲ್ಲಿ ಪಕ್ಷದ ಪ್ರಮುಖರು ಹಾಗೂ ಎಲ್ಲ ಸ್ತರದ ಕಾರ್ಯಕರ್ತರು ಅತ್ಯಂತ ಕ್ರಿಯಾಶೀಲತೆ ಮತ್ತು ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
‘ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ; ಭ್ರಷ್ಟಾಚಾರ ಅಂದರೆ ಕಾಂಗ್ರೆಸ್’ ಎಂಬುದು ಜಗಜ್ಜಾಹೀರಾಗಿದೆ. ಇದಕ್ಕೊಂದು ಜ್ವಲಂತ ಉದಾಹರಣೆ ಎಂದರೆ ಗೂಗಲ್ ಸರ್ಚ್ ನಲ್ಲಿ ‘ಕಾಂಗ್ರೆಸ್ ಲೂಟೆಡ್ ಇಂಡಿಯಾ ಫಾರ್ 70 ಇಯರ್ಸ್’ ಎಂದು ಹುಡುಕಿದರೆ ಕಾಂಗ್ರೆಸ್ ಕಳೆದ 70 ವರ್ಷಗಳಿಂದ ದೇಶವನ್ನು ಲೂಟಿ ಮಾಡಿರುವ ಮೊತ್ತ ರೂ.48,20,69,00,00,000 ಎಂಬ ಉತ್ತರ ಬರುತ್ತದೆ. ಇದರಲ್ಲಿ ಕಾಂಗ್ರೆಸ್ ಉನ್ನತ ನಾಯಕರ ಹೆಸರಿನ ಜೊತೆಗೆ ಪ್ರಸ್ತುತ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ತನಿಖೆ ಎದುರಿಸುತ್ತಿರುವ ನ್ಯಾಷನಲ್ ಹೆರಾಲ್ಡ್ ಹಗರಣ ಕೂಡ ಸೇರಿರುವುದು ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಕೂಪದ ವಿರಾಟ್ ಸ್ವರೂಪವನ್ನು ಇನ್ನಷ್ಟು ಪುಷ್ಟೀಕರಿಸುತ್ತದೆ ಎಂದರು.
ಒಂದೆಡೆ ಹಲವಾರು ಪ್ರಕರಣಗಳಲ್ಲಿ ಸ್ವಯಂ ತನಿಖೆಗೆ ಹೆದರಿ ಲೋಕಾಯುಕ್ತಕ್ಕೇ ಎಳ್ಳು ನೀರು ಬಿಟ್ಟ ಮಾಜಿ ಸಿ.ಎಂ. ಸಿದ್ಧರಾಮಯ್ಯ; ಇನ್ನೊಂದೆಡೆ ಭ್ರಷ್ಟಾಚಾರದ ಹಗರಣಗಳ ಸರಮಾಲೆಯೊಂದಿಗೆ ಪದೇ ಪದೇ ತನಿಖೆ ಎದುರಿಸುತ್ತಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಇವರ ನಡುವಿನ ಮುಸುಕಿನ ಗುದ್ದಾಟ ಪ್ರಸ್ತುತ ಬಟ್ಟಾಬಯಲಾಗಿದೆ. ಇದೀಗ ಚುನಾವಣಾ ಸಂದರ್ಭದಲ್ಲಿ ಯಾವುದೇ ಹಣದ ಮೂಲದ ವಿವರವನ್ನು ನೀಡದೇ ಉಚಿತ ಭಾಗ್ಯಗಳನ್ನು ಘೋಷಿಸುತ್ತಾ ರಾಜ್ಯದ ಜನತೆಗೆ ಮಂಕು ಬೂದಿ ಎರಚಲು ಹವಣಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ನ ಮೋಸ ಜಾಲದ ಹಿಡನ್ ಅಜೆಂಡಾವನ್ನು ರಾಜ್ಯದ ಜನತೆ ಚೆನ್ನಾಗಿಯೇ ಅರಿತಿದ್ದಾರೆ. ಒಂದೇ ವರ್ಗವನ್ನು ಓಲೈಸುವ ಜೊತೆಗೆ ಪ್ರಚಾರಕ್ಕಾಗಿ ಬಿಟ್ಟಿ ಭಾಗ್ಯಗಳನ್ನು ನೀಡುತ್ತಾ ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಸಾಲ ಮಾಡಿದ ಕುಖ್ಯಾತಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕರಾಳ ಇತಿಹಾಸವನ್ನು ರಾಜ್ಯದ ಜನತೆ ಮರೆತಿಲ್ಲ. ಜನತೆ ಜಾಗೃತರಾಗಿದ್ದು, ಗೊತ್ತು ಗುರಿ ಇಲ್ಲದ ಉಚಿತ ಭಾಗ್ಯಗಳನ್ನು ಘೋಷಿಸಿ ರಾಜ್ಯವನ್ನು ದಿವಾಳಿತನದ ಅಂಚಿಗೆ ನೂಕುವ ಕಾಂಗ್ರೆಸ್ ಪ್ರಯತ್ನ ಎಂದಿಗೂ ಸಫಲವಾಗದು ಎಂದು ತಿಳಿಸಿದರು.
ಅಭಿವೃದ್ಧಿಯನ್ನೇ ಮೂಲ ಮಂತ್ರವನ್ನಾಗಿಸಿರುವ ಬಿಜೆಪಿ ದೇಶದ ಭದ್ರತೆಯ ಸಹಿತ ಎಲ್ಲ ವರ್ಗದ ಜನತೆಯ ಅಭಿವೃದ್ಧಿಗೆ ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಅದರ ವಿವರಗಳನ್ನು ಪ್ರತಿ ಮನೆ ಮನೆಗೆ ತಲುಪಿಸಬೇಕಾಗಿದೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ತೀವ್ರತೆಯನ್ನು ಪಡೆದಿವೆ. ಈಗಾಗಲೇ ಜಿಲ್ಲೆಯಾದ್ಯಂತ ನಡೆದ ‘ಬೂತ್ ವಿಜಯ ಅಭಿಯಾನ’ ದಾಖಲೆ ಮಟ್ಟದ ಯಶಸ್ಸನ್ನು ಕಂಡಿದೆ. ಜ.21ರಿಂದ ಜ.29ರ ವರೆಗೆ ಜಿಲ್ಲೆಯಾದ್ಯಂತ ನಡೆಯಲಿರುವ ‘ವಿಜಯ ಸಂಕಲ್ಪ ಅಭಿಯಾನ’ಕ್ಕೆ ಜಿಲ್ಲೆಯಾದ್ಯಂತ ಭರ್ಜರಿ ಚಾಲನೆ ದೊರೆತಿದ್ದು, ಮನೆ ಮನೆ ಸಂಪರ್ಕದ ಸಹಿತ 80000 90009 ನಂಬರ್ ಗೆ ಮಿಸ್ ಕಾಲ್ ಕೊಡುವ ಮೂಲಕ ಬಿಜೆಪಿ ಸದಸ್ಯತಾ ಅಭಿಯಾನದಲ್ಲಿ ಪಕ್ಷದ ಪ್ರಮುಖರು, ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಹುಮ್ಮಸ್ಸಿನಿಂದ ತೊಡಗಿಸಿಕೊಂಡು ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.
ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳ ಅಪಪ್ರಚಾರಗಳ ನಡುವೆಯೂ ಜಿಲ್ಲೆ ಹಾಗೂ ರಾಜ್ಯದೆಲ್ಲೆಡೆ ಬಿಜೆಪಿ ಪರ ಉತ್ತಮ ವಾತಾವರಣವಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ಅಭಿವೃದ್ಧಿಪರ ಆಡಳಿತ, ಜನಪರ ಯೋಜನೆಗಳು ಇಂದು ಮನೆ ಮನಗಳನ್ನು ತಲುಪಿ ಸಾರ್ಥಕತೆಯನ್ನು ಪಡೆದಿವೆ. ಮಗದೊಮ್ಮೆ ಅಭಿವೃದ್ಧಿ ಮತ್ತು ಸಂಘಟನಾ ಸಾಮರ್ಥ್ಯದಿಂದ ಬಿಜೆಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗೆಲ್ಲುವ ಜೊತೆಗೆ ರಾಜ್ಯದಲ್ಲಿ 150ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆದ್ದು ಆಡಳಿತದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಕುಯಿಲಾಡಿ ತಿಳಿಸಿದರು.
ಅಭಿಯಾನದ ತಂಡದೊಂದಿಗೆ ಮನೆ ಮನೆಗಳಿಗೆ ತೆರಳಿ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಾಧನೆಗಳ ಕರಪತ್ರಗಳನ್ನು ವಿತರಿಸಿ, ವಿವಿಧ ಯೋಜನೆಗಳ ಮಾಹಿತಿಯನ್ನು ನೀಡಲಾಯಿತು.
ಈ ಸಂಧರ್ಭದಲ್ಲಿ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ವಿಠ್ಠಲ ಪೂಜಾರಿ, ಅಭಿಯಾನದ ಜಿಲ್ಲಾ ಸಂಚಾಲಕ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲ ಪ್ರಭಾರಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಸಹವಕ್ತಾರ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಅಭಿಯಾನದ ಮಂಡಲ ಸಂಚಾಲಕರಾದ ಸತೀಶ್ ಪೂಜಾರಿ ವಕ್ವಾಡಿ, ಸುರೇಶ್ ಶೆಟ್ಟಿ ಗೋಪಾಡಿ, ಸುರೇಂದ್ರ ಕಾಂಚನ್ ಸಂಗಮ್, ಅರುಣ್ ಬಾಣ, ಸತೀಶ್ ಬಾರಿಕೆರಿ, ವಿದ್ಯಾ ಸಾಲಿಯನ್, ರೂಪಾ ಪೈ, ಜ್ಯೋತಿ ಪೂಜಾರಿ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಉಪಸ್ಥಿತರಿದ್ದರು.
ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ಶಕ್ತಿ ಕೇಂದ್ರಗಳ ವಿಜಯ ಸಂಕಲ್ಪ ಅಭಿಯಾನದ ಅನ್ವಯ ಸಭೆಯನ್ನು 19/01/2023 ನೇ ಗುರುವಾರ ಸಂಜೆ 4 ಗಂಟೆಗೆ ಸರಿಯಾಗಿ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಕಾಪು ಪುರಸಭೆ ವ್ಯಾಪ್ತಿಯ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಆದ ಸಂದೀಪ್ ಶೆಟ್ಟಿ ಕಲ್ಯ ಅಧ್ಯಕ್ಷತೆ ವಹಿಸಿದ್ದರು. ಕಾಪು ಮಂಡಲ ಅಧ್ಯಕ್ಷರು ಆದ ಶ್ರೀಕಾಂತ್ ನಾಯಕ್ ವಿಜಯ ಸಂಕಲ್ಪ ಅಭಿಯಾನದ ಬಗ್ಗೆ ವಿಸ್ತಾರವಾಗಿ ತಿಳಿಸಿದರು. ಪುರಸಭಾ ವ್ಯಾಪ್ತಿಯ ಬೂತ್ ಗಳ ಸಮಸ್ಯೆಯ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಯಿತು.ಸಭೆಯಲ್ಲಿ ಕಾಪು ಪ್ರಾಧಿಕಾರ ಅಧ್ಯಕ್ಷರು ಆದ ಸುಧಾಮ ಶೆಟ್ಟಿ, ಮಂಡಲ ನಿಕಟ ಪೂರ್ವ ಅಧ್ಯಕ್ಷರು ಜಿಲ್ಲಾ ಉಪಾಧ್ಯಕ್ಷರು ಆದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಇವರು ಪಕ್ಷದ ಸಂಘಟನೆ ಬಗ್ಗೆ ಮಾತನಾಡಿದರು.ಪಕ್ಷದ ಪ್ರಮುಖರು ಆದ ಗಂಗಾಧರ್ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿಯಾದ ಗೋಪಾಲ್ ಕೃಷ್ಣ ರಾವ್,ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿಯಾದ ಶೈಲೇಶ್ ಅಮೀನ್, ಜಿಲ್ಲಾ ಉಸ್ತುವಾರಿಗಳಾದ ಸತೀಶ್ ಪೂಜಾರಿ ಉದ್ಯಾವರ, ಪ್ರವೀಣ್ ಪೂಜಾರಿ ಕಾಪು, ನವೀನ್ ಎಸ್ ಕೆ. ಅಭಿಯಾನ ಸಹ ಸಂಚಾಲಕರು ಆದ ಮಾಲಿನಿ ಇನ್ನಂಜೆ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆದ ಸುರೇಖಾ ಶೈಲೇಶ್, ಶಕ್ತಿ ಕೇಂದ್ರ ಅಧ್ಯಕ್ಷರಾದ ರತ್ನಾಕರ ಶೆಟ್ಟಿ, ಬೂತ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಪುರಸಭಾ ಸದಸ್ಯರು, ಕಾಪು ಪುರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಸದಸ್ಯರು, ಮತ್ತು ಅನನ್ಯ ಜವಾಬ್ದಾರಿ ಹೊತ್ತ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಎಲ್ಲರೂ ಉಪಸ್ಥಿತರಿದ್ದರು*
ಉಡುಪಿ: ಜಿಲ್ಲೆಯಾದ್ಯಂತ ಜ.2ರಿಂದ ಜ.12ರ ವರೆಗೆ ನಡೆದ ‘ಬೂತ್ ವಿಜಯ ಅಭಿಯಾನ’ವು 100% ಪ್ರಗತಿಯೊಂದಿಗೆ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸನ್ನು ಸಾಧಿಸಿದೆ. ಇದೀಗ ಎರಡನೇ ಹಂತದಲ್ಲಿ ಜ.21ರಿಂದ ಜ.29ರ ವರೆಗೆ ನಡೆಯಲಿರುವ ‘ವಿಜಯ ಸಂಕಲ್ಪ ಅಭಿಯಾನ’ವನ್ನು ಕೂಡಾ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ಅವರು ಜ.17ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ‘ಡಬಲ್ ಇಂಜಿನ್ ಸರಕಾರ’ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ವೇಗ ನೀಡಿದೆ. ಶೋಷಿತ, ಬಡವ, ದಲಿತ, ರೈತ, ಮಹಿಳೆ, ಯುವಕರ ಸಹಿತ ಎಲ್ಲ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ರಾಜ್ಯಾದ್ಯಂತ ಸದೃಢ ಪಕ್ಷ ಸಂಘಟನೆಯಲ್ಲಿ ಪಕ್ಷದ ಮುಖಂಡರು, ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯ ಪಾತ್ರ ವಹಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಯುವ ಜನತೆ ಸ್ವಯಂ ಪ್ರೇರಿತರಾಗಿ ಬಿಜೆಪಿ ಕಾರ್ಯಕರ್ತರಾಗಿ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.
ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಜ.21ರಿಂದ ಜ.29ರ ವರೆಗೆ ಜಿಲ್ಲೆಯಾದ್ಯಂತ ‘ವಿಜಯ ಸಂಕಲ್ಪ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿದೆ. ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು ಮತ್ತು ಸಮಸ್ತ ಕಾರ್ಯಕರ್ತರು ಈ ಬೃಹತ್ ಅಭಿಯಾನದಲ್ಲಿ ಕೈಜೋಡಿಸಿ, ಪ್ರತಿ ಮನೆಯನ್ನು ಸಂಪರ್ಕಿಸುವ ಮೂಲಕ ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಜೊತೆಗೆ ಈ ಕೆಳಗಿನ ಪ್ರಮುಖ ಕಾರ್ಯ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
* ಬೂತ್ ವ್ಯಾಪ್ತಿಯಲ್ಲಿರುವ ಎಲ್ಲ ಮನೆಗಳ ಸಂಪರ್ಕ * ಪ್ರತೀ ಮನೆಗೆ ಸರಕಾರದ ಸಾಧನೆಗಳ ಕರಪತ್ರ ಮತ್ತು ಸ್ಟಿಕ್ಕರ್ ವಿತರಣೆ * 80000 90009 ಸಂಖ್ಯೆಗೆ ಮಿಸ್ ಕಾಲ್ ಕೊಡುವ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಸುವುದು * ಫಲಾನುಭವಿಗಳ ಸಂಪರ್ಕ *ಪ್ರತೀ ಬೂತ್ ವ್ಯಾಪ್ತಿಯಲ್ಲಿ 10 ನಿಗದಿತ ಗೋಡೆ ಬರಹಗಳು ಹಾಗೂ 1 ಡಿಜಿಟಲ್ ಗೋಡೆ ಬರಹವನ್ನು ಮಾಡುವುದು.
‘ವಿಜಯ ಸಂಕಲ್ಪ ಅಭಿಯಾನ’ದ ರಾಜ್ಯ ತಂಡದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಉಡುಪಿ ಜಿಲ್ಲಾ ಸಂಚಾಲಕರಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಸಹ ಸಂಚಾಲಕರಾಗಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಈಗಾಗಲೇ ಜಿಲ್ಲೆಯ ಪ್ರತಿ ಮಂಡಲಗಳಲ್ಲಿ ತಂಡಗಳನ್ನು ರಚಿಸಿ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ. ಜ.16ರಂದು ಪ್ರಾರಂಭಗೊಂಡಿರುವ ಜಿಲ್ಲೆಯ ಪ್ರತೀ ಶಕ್ತಿಕೇಂದ್ರಗಳ ಸಭೆ ಜ.18ರ ವರೆಗೆ ನಡೆಯಲಿದೆ.
ಜ.21ರಂದು ಸ್ಥಳೀಯ ಸಚಿವರು, ಶಾಸಕರು ಹಾಗೂ ಜಿಲ್ಲಾ ಮತ್ತು ಮಂಡಲ ತಂಡ ‘ವಿಜಯ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ ನೀಡಲಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಾವಧಿ ವಿಸ್ತಾರಕರನ್ನು ನೇಮಿಸಲಾಗಿದೆ ಎಂದು ಅವರು ಹೇಳಿದರು.
ಬಿಜೆಪಿ ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಈ ನಿಟ್ಟಿನಲ್ಲಿ ಜ.21ರಂದು ಜಿಲ್ಲೆಯಾದ್ಯಂತ ಚಾಲನೆಗೊಳ್ಳಲಿರುವ ‘ವಿಜಯ ಸಂಕಲ್ಪ ಅಭಿಯಾನ’ದಲ್ಲಿ ಎಲ್ಲ ಸ್ತರದ ಕಾರ್ಯಕರ್ತರು ಬದ್ಧತೆ ಮತ್ತು ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡು ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು. ಜೊತೆಗೆ ಜ.29ರಂದು ಬೆಳಿಗ್ಗೆ 11.00 ಗಂಟೆಗೆ ಪ್ರತಿ ಬೂತ್ ನಲ್ಲಿ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮವನ್ನು ವೀಕ್ಷಿಸಿ ನಿಗದಿತ ಲಿಂಕ್ ನಲ್ಲಿ ಕಾರ್ಯಕ್ರಮದ ಫೋಟೋ ಅಪ್ಲೋಡ್ ಮಾಡುವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ಸತತ 70 ವರ್ಷಗಳ ಕಾಲ ದೇಶ ಲೂಟಿಗೈದಿರುವ ಕಾಂಗ್ರೆಸ್ಸಿಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಸುಳ್ಳಿನ ಫ್ಯಾಕ್ಟರಿಯಂತಿರುವ ಕಾಂಗ್ರೆಸ್ ನಿಂದ ಚುನಾವಣಾ ಸಂದರ್ಭದಲ್ಲಿ ಸುಳ್ಳು ಭರವಸೆಗಳ ಮಹಾಪೂರವೇ ಹರಿದು ಬರುತ್ತಿದೆ. ಕತ್ತಲೆಯಲ್ಲಿ ಟಾರ್ಚ್ ಹಿಡಿದು ಬಜೆಟ್ ಮಂಡಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿ ತಿಂಗಳು ಯುವ ಜನತೆಗೆ 6,000 ಮಾಶಾಸನ ನೀಡುವ ವಾಗ್ದಾನಗೈದ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಇಂತವರ ಪೊಳ್ಳು ಭರವಸೆಯನ್ನು ರಾಜ್ಯದ ಜನತೆ ಸಾಕಷ್ಟು ಕಂಡಿದ್ದಾರೆ. ಇದೀಗ ‘ನಾ ನಾಯಕಿ’; ಅಂದರೆ ‘ನಾಯಕಿ ಇಲ್ಲ’ ಎಂದು ಪ್ರದರ್ಶನ ನೀಡುತ್ತಿರುವ ಪ್ರಿಯಾಂಕಾ ಗಾಂಧಿ ತನ್ನ ಪೊಳ್ಳು ಭರವಸೆಗೆ ಹಣವನ್ನು ಎಲ್ಲಿಂದ ತರುತ್ತಾರೆ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ. ಬಿಜೆಪಿ ಸರಕಾರ ಕೊಟ್ಟು ಮಾತನಾಡುವ ಪರಿ ಪಾಠ ಹೊಂದಿದೆ; ಆದರೆ ಕಾಂಗ್ರೆಸ್ ಕೇವಲ ಪೊಳ್ಳು ಭರವಸೆಗೆ ಮಾತ್ರ ಸೀಮಿತವಾಗಿದೆ ಎಂದು ಅವರು ತಿಳಿಸಿದರು.
ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸದಾ ಜಾಗೃತರಾಗಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ವಿರೋಧ ಪಕ್ಷಗಳ ಅಪಪ್ರಚಾರ, ಸುಳ್ಳು ಭರಸೆಗಳ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸಿ, ಅಭಿವೃದ್ಧಿ ಮತ್ತು ಸಂಘಟನಾ ಸಾಮರ್ಥ್ಯದ ಮೂಲಕ ಬಿಜೆಪಿ ಮಗದೊಮ್ಮೆ ಜಿಲ್ಲೆಯ ಎಲ್ಲ ಐದು ಕ್ಷೇತ್ರಗಳಲ್ಲಿ ಹೆಚ್ಚಿನ ಅಂತರದಲ್ಲಿ ಜಯಭೇರಿ ಗಳಿಸಲು ಸಂಘಟಿತರಾಗಿ ಶ್ರಮಿಸಬೇಕು ಎಂದು ಕುಯಿಲಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಪ್ರತಾಪ್ ಶೆಟ್ಟಿ ಚೇರ್ಕಾಡಿ ಉಪಸ್ಥಿತರಿದ್ದರು.
ಕಾಪು: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಳೆದ ಹತ್ತು ದಿನಗಳ ಕಾಲ ನಡೆದ ಬೂತ್ ವಿಜಯ ಅಭಿಯಾನದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ಮುಂದೆ ಜ.21 ರಿಂದ ಜ.29 ರವರೆಗೆ ನಡೆಯುವ ವಿಜಯ ಸಂಕಲ್ಪ ಅಭಿಯಾನದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪಕ್ಷದ ವಿವಿಧ ಪದಾಧಿಕಾರಿಗಳು ಅಪೇಕ್ಷಿತರು ಉಪಸ್ಥಿತರಿದ್ದರು.