ಅ.17: ಜಿಲ್ಲೆಯ ‘ಎಸ್.ಸಿ., ಎಸ್.ಟಿ. ಮುಖಂಡರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ‌ ಅಭಿನಂದನೆ’ -ಅ.22: ಬಿಜೆಪಿಯಿಂದ ಉಡುಪಿಯಲ್ಲಿ ‘ಎಸ್.ಸಿ., ಎಸ್.ಟಿ. ಸಮುದಾಯದ ಬೃಹತ್ ಅಭಿನಂದನಾ ಸಮಾವೇಶ’ : ಕುಯಿಲಾಡಿ ಸುರೇಶ್ ನಾಯಕ್

News by : ಜನತಾಲೋಕವಾಣಿನ್ಯೂಸ್

ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಕಲ್ಯಾಣದತ್ತ ಚಿತ್ತ ಹರಿಸಿ, ಪರಿಶಿಷ್ಟ ಜಾತಿ ಮೀಸಲಾತಿಯನ್ನು 15%ದಿಂದ 17%ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3%ದಿಂದ 7%ಕ್ಕೆ ಏರಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಸ್.ಸಿ. ಮತ್ತು ಎಸ್.ಟಿ.‌ ಸಮುದಾಯದ ಮುಖಂಡರು ಅ.17ರಂದು ಬೃಹತ್ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪ್ರಮುಖರು ಹಾಗೂ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಎಸ್.ಸಿ. ಮತ್ತು ಎಸ್.ಟಿ. ಸಮುದಾಯಗಳ ಕಲ್ಯಾಣದ‌ ವಿವಿಧ ಯೋಜನೆಗಳ ಅನುದಾನ ಮತ್ತು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು‌ ಅಭಿನಂದಿಸುವ ನೆಲೆಯಲ್ಲಿ ಅ.22ರಂದು ಉಡುಪಿ‌ಯಲ್ಲಿ‌ ಜಿಲ್ಲಾ ಬಿಜೆಪಿ, ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಜಿಲ್ಲಾ ಎಸ್.ಟಿ. ಮೋರ್ಚಾ ನೇತೃತ್ವದಲ್ಲಿ ‘ಬೃಹತ್ ಎಸ್.ಸಿ., ಎಸ್.ಟಿ. ಸಮುದಾಯಗಳ ಸಮಾವೇಶ’ ನಡೆಯಲಿದೆ ಎಂದು ಅವರು ಹೇಳಿದರು.

ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ರಾಮುಲು ಸಾರಥ್ಯದಲ್ಲಿ ನಡೆಯಲಿರುವ ‘ಬೃಹತ್ ಎಸ್.ಸಿ., ಎಸ್.ಟಿ. ಸಮಾವೇಶ’ದಲ್ಲಿ‌‌‌ 2,000ಕ್ಕೂ ಮಿಕ್ಕಿ ಎಸ್.ಸಿ., ಎಸ್.ಟಿ. ಸಮುದಾಯದ ಬಂಧುಗಳು ಪಾಲ್ಗೊಳ್ಳಲಿದ್ದು, ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ,‌ ಇಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹಾಗೂ ಜಿಲ್ಲೆಯ ಶಾಸಕರು ಮತ್ತು‌ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.

ಜಿಲ್ಲೆಯಾದ್ಯಂತ ಪಕ್ಷದ ಸಂಘಟನಾತ್ಮಕ ಕೆಲಸ ಕಾರ್ಯಗಳು ವೇಗ ಪಡೆದುಕೊಂಡಿದೆ. ಬೂತ್ ಸಶಸ್ತೀಕರಣ ಅಭಿಯಾನದ ಅಂಗವಾಗಿ ಈಗಾಗಲೇ ಬೈಂದೂರು ಮಂಡಲದ ಎಲ್ಲಾ ಶಕ್ತಿಕೇಂದ್ರಗಳ ಸಭೆಯು ಯಶಸ್ವಿಯಾಗಿ ನಡೆದಿದ್ದು, ಕುಂದಾಪುರ ಮಂಡಲದ ಶಕ್ತಿಕೇಂದ್ರಗಳ ಸಭೆಗಳು ಪ್ರಗತಿಯಲ್ಲಿವೆ. ಕಾಪು, ಕಾರ್ಕಳ, ಉಡುಪಿ ನಗರ ಮತ್ತು ಉಡುಪಿ ಗ್ರಾಮಾಂತರ ಮಂಡಲಗಳ ಶಕ್ತಿಕೇಂದ್ರಗಳ ಸಭೆಯು ಸದ್ಯದಲ್ಲೇ ಯೋಜನಾಬದ್ಧವಾಗಿ ನಡೆಯಲಿದ್ದು, ಬಳಿಕ ಜಿಲ್ಲೆಯಾದ್ಯಂತ ಎಲ್ಲಾ 1,111 ಬೂತ್ ಗಳ ಸಭೆ ನಡೆಯಲಿದೆ ಎಂದು ಕುಯಿಲಾಡಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಎಸ್.ಸಿ.‌ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ಎ. ನಾಯ್ಕ್, ಜಿಲ್ಲಾ ಎಸ್.ಸಿ. ಮೋರ್ಚಾ‌ ಮತ್ತು ಎಸ್.ಟಿ. ಮೋರ್ಚಾ ಪ್ರಭಾರಿ ನಳಿನಿ ಪ್ರದೀಪ್ ರಾವ್, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಸ್ವಾಗತಿಸಿ,‌ ಮನೋಹರ್ ಎಸ್. ಕಲ್ಮಾಡಿ ವಂದಿಸಿದರು.

ದುಶ್ಚಟಮುಕ್ತ ಸಮಾಜ ನಿರ್ಮಾಣದಲ್ಲಿ ಮದ್ಯವರ್ಜನ ಶಿಬಿರದ ಪಾತ್ರ ಮಹತ್ವಪೂರ್ಣ: ಪ್ರಮೋದ್ ಕುಮಾರ್

News by: ಜನತಾಲೋಕವಾಣಿನ್ಯೂಸ್

ದೇಶೀಯತೆ ಹಾಗೂ ಸುಸಂಸ್ಕೃತ ಶ್ರೇಷ್ಠ ಪರಂಪರೆಯನ್ನು ಉಳಿಸಿ ಬೆಳೆಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ವಿಶೇಷ ಒತ್ತು ನೀಡುತ್ತಿವೆ. ಈ ನಿಟ್ಟಿನಲ್ಲಿ ದುಶ್ಚಟಮುಕ್ತ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಮದ್ಯವರ್ಜನ ಶಿಬಿರದ ಪಾತ್ರ ಅತ್ಯಂತ ಮಹತ್ವಪೂರ್ಣ ಎಂದು‌ ಉಡುಪಿ‌ ನಗರ ಪೋಲಿಸ್ ನಿರೀಕ್ಷಕ ಪ್ರಮೋದ್ ಕುಮಾರ್ ಹೇಳಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಹಾಗೂ ಕಾಪು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಬೆಳ್ತಂಗಡಿ, ಶ್ರೀ ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನಾ ಕೇಂದ್ರ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಭಗವತೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪುತ್ತೂರು, ಮೂಕಾಂಬಿಕಾ ಪಾಲಿ ಪ್ರಾಡಕ್ಟ್ಸ್ ಕೊಡಂಕೂರು ಪುತ್ತೂರು, ಲಯನ್ಸ್ ಕ್ಲಬ್ ಪರ್ಕಳ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಅ‌.11ರಿಂದ 18ರ ವರೆಗೆ ನಡೆಯುವ 1601ನೇ ಮದ್ಯವರ್ಜನ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರು ರಾಮ ರಾಜ್ಯದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ಸ್ವಯಂ ಮನಪರಿವರ್ತನೆಯೊಂದಿಗೆ ತಮ್ಮ ಮನೆಗಳಲ್ಲಿ ಆತ್ಮೀಯತೆ, ಪರಸ್ಪರ ಸಹಕಾರ ಮನೋಭಾವ, ಪ್ರೀತಿ-ವಿಶ್ವಾಸದ ಸಹಬಾಳ್ವೆ ನಡೆಸುವಂತಾಗಲಿ. ಎಲ್ಲರ ಬದುಕಿನಲ್ಲಿ ಭರವಸೆಯ ಹೊಸ ಬೆಳಕು ಮೂಡಲಿ ಎಂದರು.

ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಸಾದ್ ರಾವ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಅಧ್ಯಕ್ಷ ಅಚ್ಚುತ ಪೂಜಾರಿ, ಉಡುಪಿ ‌ನಗರಸಭೆ ಅಧ್ಯಕ್ಷೆ ಸುಮಿತ್ರ ಆರ್. ನಾಯಕ್, ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷ ಸಿದ್ಧರಾಜು, ಜನಜಾಗೃತಿ ವೇದಿಕೆಯ ಅಂಬಾಗಿಲು ವಲಯಾಧ್ಯಕ್ಷ ಹರೀಶ್ ಕೋಟ್ಯಾನ್, ನಗರಸಭಾ ಸದಸ್ಯ ಯೋಗೀಶ್ ಸಾಲ್ಯಾನ್ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷೆ ಶಮಿತ ಪಿ. ಶೆಟ್ಟಿ ಮಾತನಾಡಿ ಶುಭಾಂಶನೆಗೈದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಸದಸ್ಯರಾದ ಜಯಂತಿ ಪೂಜಾರಿ, ಸುಂದರ ಕಲ್ಮಾಡಿ, ರಮೇಶ್ ಕಾಂಚನ್, ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯರು ಹಾಗೂ ಉಡುಪಿ ಮತ್ತು ಕಾಪು ತಾಲೂಕಿನ ವಲಯಾಧ್ಯಕ್ಷರಾದ ರಾಮಚಂದ್ರ ಸನಿಲ್, ಶಿವಕುಮಾರ್ ಅಂಬಲಪಾಡಿ, ಪ್ರಶಾಂತ್ ಕೆ. ಸಾಲ್ಯಾನ್, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ! ಸಾತ್ವಿಕ್, ಶಿಬಿರದ ಆರೋಗ್ಯ ಸಹಾಯಕಿ ಫಿಲೋಮಿನಾ, ಶಿಬಿರಾಧಿಕಾರಿ ರಾಜೇಶ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಿಟ್ಟೂರು ಮದಿಪು ಮಹಾಬಲ ಶೆಟ್ಟಿ, ಪ್ರಮುಖರಾದ ಶಂಕರ್ ಶೆಟ್ಟಿ, ಜ್ಯೋತಿ ಹೆಬ್ಬಾರ್,‌ ಕೃಷ್ಣ ಶೆಟ್ಟಿ, ಮಮತಾ ಪಿ. ಶೆಟ್ಟಿ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು ಹಾಗೂ ಯೋಜನೆಯ ಉಡುಪಿ ಮತ್ತು ಕಾಪು ತಾಲೂಕು ವ್ಯಾಪ್ತಿಯ ಮೇಲ್ವಿಚಾರಕರ ಸಿಬ್ಬಂಧಿಗಳು, ಸೇವಾ ಪ್ರತಿನಿಧಿಗಳು, ಶೌರ್ಯ ವಿಪತ್ತು ನಿರ್ವಹಣಾ ವಿಭಾಗದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜನಜಾಗೃತಿ ವೇದಿಕೆಯ ಕರಾವಳಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ಎಮ್.ರಾಮ ಸ್ವಾಗತಿಸಿದರು. ಮಲ್ಪೆ ಮೇಲ್ವಿಚಾರಕಿ ಮೂಕಾಂಬಿಕಾ ಕಾರ್ಯಕ್ರಮ ನಿರೂಪಿಸಿ, ಕಾಪು ತಾಲೂಕು ಯೋಜನಾಧಿಕಾರಿ ಜಯಂತಿ ವಂದಿಸಿದರು.

ಕಾಂಗ್ರೆಸಿಗರಿಗೆ ಹಿಂದುತ್ವದ ಐಕಾನ್ ಗೋವಾ ಸಿ.ಎಂ. ಡಾ! ಪ್ರಮೋದ್ ಸಾವಂತ್ ಶಿಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್

News by: ಜನತಾಲೋಕವಾಣಿನ್ಯೂಸ್



ಖಾಸಗಿ ಕಾರ್ಯಕ್ರಮದ ನಿಮಿತ್ತ ಅ.8ರಂದು ಉಡುಪಿ ನಗರಕ್ಕೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಡಾ! ಪ್ರಮೋದ್ ಸಾವಂತ್ ರವರು ಮಾಂಸಾಹಾರವನ್ನು ಸ್ವೀಕರಿಸಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೇಟಿ ‌ನೀಡಿದ್ದಾರೆ ಎಂಬ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸುಳ್ಳು ಆರೋಪವನ್ನು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಸರಾಸಗಟಾಗಿ ತಳ್ಳಿಹಾಕಿದ್ದಾರೆ.

ಸನಾತನ ಹಿಂದೂ ಧರ್ಮದ ಪ್ರತಿಪಾದಕರು, ಈ ಮಣ್ಣಿನ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಘನತೆ ಗೌರವದ ಸಂಪೂರ್ಣ ಅರಿವುಳ್ಳ ಹಿಂದುತ್ವದ ಐಕಾನ್ ಎಂದೆನಿಸಿರುವ ಗೋವಾ ಸಿ.ಎಂ. ಡಾ! ಪ್ರಮೋದ್ ಸಾವಂತ್ ರವರ ಶಿಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸಿಗರಿಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಗೋವಾ ಸಿ.ಎಂ. ಡಾ! ಸಾವಂತ್ ರವರು ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಿಶೇಷ ಸೌಲಭ್ಯವನ್ನು ಉದ್ಘಾಟಿಸಲು ನಗರಕ್ಕೆ ಆಗಮಿಸಿದ್ದು, ಕಾರ್ಯಕ್ರಮ ಮುಗಿದ ಬಳಿಕ ಪ್ರವಾಸಿ ಬಂಗಲೆಯಲ್ಲಿ ಗೋವಾ ಮುಖ್ಯಮಂತ್ರಿಗಳು, ಉಡುಪಿ ಶಾಸಕ ಕೆ.ರಘುಪತಿ ಭಟ್ ಹಾಗೂ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ! ಕೃಷ್ಣಪ್ರಸಾದ್ ಕೂಡ್ಲು ರವರು ಜೊತೆಯಾಗಿ ಸಸ್ಯಾಹಾರಿ ಭೋಜನವನ್ನು ಸ್ವೀಕರಿಸಿ ಬಳಿಕ ಶ್ರೀ ಕೃಷ್ಣ ಮಠ ಸಂದರ್ಶನಕ್ಕೆ ತೆರಳಿರುವುದಾಗಿ ಡಾ! ಕೃಷ್ಣಪ್ರಸಾದ್ ರವರು ಈಗಾಗಲೇ ಸ್ಫಷ್ಟೀಕರಣವನ್ನು ನೀಡಿದ್ದಾರೆ.

‘ನಾನು ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುತ್ತೇನೆ’ ಎಂದು ಗಂಟಾಘೋಷವಾಗಿ ಬಹಿರಂಗ ಹೇಳಿಕೆ ನೀಡಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ನವರಂತಹ ನಾಸ್ತಿಕ ಕಾಂಗ್ರೆಸ್ ಮುಖಂಡರನ್ನೊಳಗೊಂಡಿರುವ ಹಿಂದೂ ವಿರೋಧಿ ಮನಸ್ಥಿತಿಯ ಕಾಂಗ್ರೆಸಿಗರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯವಿದೆ?

ದೂರದರ್ಶಿತ್ವದ ಚಿಂತನೆಯ ಅಭಿವೃದ್ಧಿ ಪರ ಆಡಳಿತದ ಮೂಲಕ ಎರಡನೇ ಅವಧಿಗೆ‌ ಗೋವಾ ಮುಖ್ಯಮಂತ್ರಿಯಾಗಿ, ಕರ್ನಾಟಕ ರಾಜ್ಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಡಾ! ಪ್ರಮೋದ್ ಸಾವಂತ್ ರವರು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲೂ ಪ್ರವಾಸೋದ್ಯಮ ಹಾಗೂ ವ್ಯಾಪಾರೋಧ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿರುವುದನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ರವರಿಗೆ ಸಹಿಸಲಾಗದೆ ಮಾಡಿರುವ ಈ ಆಧಾರ ರಹಿತ ಆರೋಪ ಕೇವಲ ಸ್ವಯಂ ಪ್ರಚಾರದ ಗೀಳು ಮತ್ತು ಬಿಜೆಪಿ ವಿರುದ್ಧದ ಅಪಪ್ರಚಾರದ ಟೂಲ್‌ಕಿಟ್ ನ ಭಾಗವಷ್ಟೇ ಎಂದು ಮಹೇಶ್ ಠಾಕೂರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್.ಸಿ., ಎಸ್.ಟಿ. ಮೀಸಲಾತಿ ಹೆಚ್ಚಿಸಿದ ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಸಾಮಾಜಿಕ ನ್ಯಾಯದ ಬದ್ಧತೆ ಶ್ಲಾಘನೀಯ: ಕುಯಿಲಾಡಿ ಸುರೇಶ್ ನಾಯಕ್

News by : ಜನತಾಲೋಕವಾಣಿನ್ಯೂಸ್



ಉಡುಪಿ: ಕಾಂಗ್ರೆಸ್ ಮತ್ತಿತರ ವಿರೋಧ ಪಕ್ಷಗಳು ಸಾಮಾಜಿಕ ನ್ಯಾಯ ಎಂಬ ವ್ಯಾಖ್ಯಾನವನ್ನು ಕೇವಲ ಪೊಳ್ಳು ಭಾಷಣಕ್ಕೆ ಮಾತ್ರ ಸೀಮಿತಗೊಳಿಸಿರುವ ಪ್ರಸಕ್ತ ಸನ್ನಿವೇಶದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಎಸ್.ಸಿ., ಎಸ್.ಟಿ. ಸಮುದಾಯದ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿ ಸಾಮಾಜಿಕ ನ್ಯಾಯದ ಬದ್ಧತೆ ಮೆರೆದಿರುವುದು ಶ್ಲಾಘನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಕಾಂಗ್ರೆಸ್ ಅಹಿಂದ ಅಜೆಂಡಾದ ಮೂಲಕ ಮತ ಗಳಿಸಿ ಅಧಿಕಾರ ಅನುಭವಿಸಿ, ಹಿಂದುಳಿದ ಸಮುದಾಯಗಳ ಕಲ್ಯಾಣದ ಬಗ್ಗೆ ಏನನ್ನೂ ಮಾಡದೆ ದ್ರೋಹವೆಸಗಿದೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಪರಿಶಿಷ್ಟ ಜಾತಿ (ಎಸ್.ಸಿ.) ಮೀಸಲಾತಿಯನ್ನು 15% ದಿಂದ 17%ಕ್ಕೆ ಹಾಗೂ ಪರಿಶಿಷ್ಟ ಪಂಗಡ (ಎಸ್.ಟಿ.) ಮೀಸಲಾತಿಯನ್ನು 3%ದಿಂದ 7%ಕ್ಕೆ ಏರಿಸುವ ಮೂಲಕ ಬಿಜೆಪಿ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಪರವಾಗಿದೆ ಎಂಬುದನ್ನು ಸಾಬೀತುಪಡಿಸಿದೆ.

ಇದರ ಜೊತೆಗೆ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆ, ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖಾ ವ್ಯಾಪ್ತಿಯ ಅಭಿವೃದ್ಧಿ ನಿಗಮದ ಅನುದಾನ, ಅಂಬೇಡ್ಕರ್ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆ‌ ನಿರ್ಮಾಣದಂತಹ ವಿವಿಧ ಯೋಜನೆಗಳಿಗೆ‌ ಕೋಟ್ಯಾಂತರ ರೂಪಾಯಿ ಹೆಚ್ಚುವರಿ ಅನುದಾನವನ್ನು ಕಾದಿರಿಸುವ ಜೊತೆಗೆ ಎಸ್.ಸಿ., ಎಸ್.ಟಿ. ಸಮುದಾಯದ ಭೂಚೇತನ ಯೋಜನೆಯ ಘಟಕ ವೆಚ್ಚ ಹೆಚ್ಚಳ, ವಸತಿ ಯೋಜನೆಯ ಸಹಾಯಧನ ಮತ್ತು ಸ್ವಯಂ ಉದ್ಯೋಗ ಯೋಜನೆಯಡಿ ನೀಡುವ ನೆರವಿನ ಮೊತ್ತ ಹೆಚ್ಚಳ ಮುಂತಾದ ಸಮುದಾಯ ಸಬಲೀಕರಣದ ಐತಿಹಾಸಿಕ ಹೆಜ್ಜೆಗಳೊಂದಿಗೆ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಎಸ್.ಸಿ., ಎಸ್.ಟಿ. ಸಮುದಾಯಗಳ ಶ್ರೇಯೋಭಿವೃದ್ಧಿಗೆ ಬೆನ್ನೆಲುಬಾಗಿ ನಿಂತಿರುವುದು ಪ್ರಶಂಸನೀಯ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಸ್ಥಳೀಯ ಕುಚ್ಚಲಕ್ಕಿ ಖರೀದಿ, ವಿತರಣೆಗೆ ಕೇಂದ್ರದ ಅನುಮೋದನೆ ಸ್ವಾಗತಾರ್ಹ; ಕೇಂದ್ರ ಸಚಿವೆ ಶೋಭಾ ಪ್ರಯತ್ನ ಅಭಿನಂದನಾರ್ಹ: ಜಿಲ್ಲಾ ಬಿಜೆಪಿ

News by: ಜನತಾಲೋಕವಾಣಿನ್ಯೂಸ್

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೈತರು ಬೆಳೆಸುತ್ತಿರುವ ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳಾದ ಎಂಒ4, ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮ ಮತ್ತು ಅಭಿಲಾಷ್ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಿ ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಪಡಿತರ ಮೂಲಕ ವಿತರಿಸಲು ಅನುಮತಿ ನೀಡಿರುವ ಕೇಂದ್ರ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.

ಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬೇಡಿಕೆಯಂತೆ ಕರ್ನಾಟಕ ಸರಕಾರವು ಕೇಂದ್ರ ಸರಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವ ಪಿಯೂಷ್ ಗೋಯಲ್ ರವರ ಮೂಲಕ ಅನುಮೋದಿಸುವಂತೆ ಹೆಚ್ಚಿನ ಮುತುರ್ವಜಿ ವಹಿಸಿ, ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ‌ ಸ್ಥಳೀಯ ಕುಚ್ಚಲಕ್ಕಿ ವಿತರಣಾ ವ್ಯವಸ್ಥೆಗೆ ಕೇಂದ್ರ ಸರಕಾರ‌ದ ಅನುಮತಿಗೆ ಶ್ರಮಿಸಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರ ಪ್ರಾಮಾಣಿಕ ಪ್ರಯತ್ನ ಅಭಿನಂದನಾರ್ಹ ಎಂದು ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

ಕೇಂದ್ರ ಸರಕಾರಕ್ಕೆ ರಾಜ್ಯದಿಂದ ಪ್ರಸ್ತಾವನೆ ಸಲ್ಲಿಸುವ‌ ನಿಟ್ಟಿನಲ್ಲಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ‌ ಹಾಗೂ ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ಹಾಗೂ ಜನಪ್ರತಿನಿಧಿಗಳ ಸತತ ಪ್ರಯತ್ನವೂ ಶ್ಲಾಘನೀಯ.

ಕೇಂದ್ರ ಸರಕಾರ ಆಹಾರ ಭದ್ರತಾ ಕಾಯ್ದೆಯಡಿ ಅನ್ನ ಭಾಗ್ಯ ಯೋಜನೆ ಮೂಲಕ ನೀಡುತ್ತಿರುವ ಪಡಿತರದಲ್ಲಿ ಕರಾವಳಿ ಜಿಲ್ಲೆಯ ಜನತೆಗೆ ಪ್ರಿಯವಾಗಿರುವ ಸ್ಥಳೀಯ ಕುಚ್ಚಲಕ್ಕಿಯನ್ನೇ ವಿತರಿಸಲು ಮುಂದಾಗಿರುವ ಐತಿಹಾಸಿಕ ಕ್ರಮ ಕರಾವಳಿಗರಿಗೆ ಹಿತವೆನಿಸಲಿದೆ. ಜೊತೆಗೆ ಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೈತರು ಬೆಳೆಯುವ ವಿವಿಧ ಪ್ರಭೇದಗಳ‌ ಸ್ಥಳೀಯ ಕುಚ್ಚಲಕ್ಕಿಯನ್ನು ಕನಿಷ್ಠ ಬೆಂಬಲ ಬೆಲೆಯ ಮೂಲಕ ಖರೀದಿಸುವ ಪ್ರಕ್ರಿಯೆ ರೈತಾಪಿ ವರ್ಗದಲ್ಲಿ ಹೊಸ ಭರವಸೆ ಮೂಡಿಸಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿ RBI ನಿಂದ “ಇ-ರುಪಿ” ಡಿಜಿಟಲ್ ರೂಪಾಯಿ ಘೋಷಣೆ

News by: ಜನತಾಲೋಕವಾಣಿ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಮೊದಲ ಬಾರಿಗೆ ಇ-ರುಪಿ (Digital Currency) ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ.

ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಪರಿಕಲ್ಪನೆಯ ಟಿಪ್ಪಣಿಯನ್ನು ಬಿಡುಗಡೆ ಮಾಡಿದೆ. ನಿರ್ದಿಷ್ಟ ಬಳಕೆಗಾಗಿ ಆರ್‌ಬಿಐ ಶೀಘ್ರದಲ್ಲೇ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಬಿಡುಗಡೆಯನ್ನು ಪ್ರಾರಂಭಿಸುತ್ತದೆ. ಪರಿಕಲ್ಪನೆಯ ಟಿಪ್ಪಣಿಯು ಭಾರತದಲ್ಲಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯನ್ನು ನೀಡುವ ಉದ್ದೇಶಗಳು, ಪ್ರಯೋಜನಗಳು ಮತ್ತು ಅಪಾಯಗಳನ್ನು ವಿವರಿಸುತ್ತದೆ.

ಡಿಜಿಟಲ್ ರೂಪಾಯಿಯು ಭಾರತದ ಡಿಜಿಟಲ್ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುತ್ತದೆ, ಹಣಕಾಸು ಮತ್ತು ಪಾವತಿ ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುತ್ತದೆ ಮತ್ತು ಆರ್ಥಿಕ ಸೇರ್ಪಡೆಯನ್ನು ಹೆಚ್ಚಿಸಲು ಕೊಡುಗೆ ನೀಡುತ್ತದೆ ಎಂದು ಆರ್ ಬಿಐ ಹೇಳಿದೆ.

ಸಿಬಿಡಿಸಿ ಎಂಬುದು ನಿಯಂತ್ರಕರಿಂದ ಬೆಂಬಲಿತವಾದ ಮತ್ತು ಡಿಜಿಟಲ್ ಸ್ವರೂಪದಲ್ಲಿ ಸಂಗ್ರಹಿಸಲಾದ ಕರೆನ್ಸಿಯಾಗಿದೆ. ಇದನ್ನು ಕಾಗದದ ಕರೆನ್ಸಿಯಾಗಿ ಪರಿವರ್ತಿಸಬಹುದು ಮತ್ತು ಆರ್ಬಿಐನ ಬ್ಯಾಲೆನ್ಸ್ ಶೀಟ್ನಲ್ಲಿ ಪ್ರತಿಬಿಂಬಿಸುತ್ತದೆ, ಆ ಮೂಲಕ ಅದಕ್ಕೆ ಕಾನೂನುಬದ್ಧ ಟೆಂಡರ್ ಸ್ಥಾನಮಾನವನ್ನು ನೀಡುತ್ತದೆ.

ಮಾರ್ಚ್ 31, 2023 ಕ್ಕೆ ಕೊನೆಗೊಳ್ಳುವ ಈ ಹಣಕಾಸು ವರ್ಷದಲ್ಲಿ ಭಾರತವು ತನ್ನದೇ ಆದ ಕೇಂದ್ರೀಯ ಬ್ಯಾಂಕ್ ಡಿಜಿಟಲ್ ಕರೆನ್ಸಿಯನ್ನು ಬಿಡುಗಡೆ ಮಾಡುವ ಗುರಿಯನ್ನು ಹೊಂದಿದೆ ಎನ್ನಲಾಗಿದೆ.

ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (CBDC) ಟಿಪ್ಪಣಿಯ ಪ್ರಕಾರ,ಭಾರತೀಯ ರಿಸರ್ವ್ ಬ್ಯಾಂಕ್ ನ ಡಿಜಿಟಲ್ ರೂಪಾಯಿ ಅಥವಾ ಇ-ರೂಪಾಯಿ, RBI ಯ CBDC ಸಾರ್ವಭೌಮ ಕರೆನ್ಸಿಯಂತೆಯೇ ಇರುತ್ತದೆ ಮತ್ತು ಕರೆನ್ಸಿಗೆ ಸಮಾನವಾಗಿ ಒಂದರಿಂದ ಒಂದಕ್ಕೆ ವಿನಿಮಯ ಮಾಡಿಕೊಳ್ಳಬಹುದು ಎಂದು ನಿಯಂತ್ರಕರು ಉಲ್ಲೇಖಿಸಿದ್ದಾರೆ.

ಅ.8 : ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಬಿಜೆಪಿ ಜಿಲ್ಲಾ ಕಛೇರಿಗೆ ಭೇಟಿ

News by: ಜನತಾಲೋಕವಾಣಿ‌ನ್ಯೂಸ್

ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಅ.8 ಶನಿವಾರ ಸಂಜೆ 4.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯುವ ಸಭೆಯಲ್ಲಿ ಅವರನ್ನು ಗೌರವಿಸಲಾಗುವುದು.

ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ಮಾಧ್ಯಮ ವಿಭಾಗ*
*ಬಿಜೆಪಿ ಉಡುಪಿ ಜಿಲ್ಲೆ*

ಬಿಜೆಪಿ ಉಡುಪಿ ಗ್ರಾಮಾಂತರ : ಬ್ರಹ್ಮಾವರದಲ್ಲಿ ಬೃಹತ್ ಖಾದಿ ಮೇಳ ಉದ್ಘಾಟನೆ

News by: ಜನತಾಲೋಕವಾಣಿನ್ಯೂಸ್



ಉಡುಪಿ: ‘ಸೇವಾ ಪಾಕ್ಷಿಕ ಅಭಿಯಾನ’ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚಣೆ ಅಂಗವಾಗಿ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಬ್ರಹ್ಮಾವರದ ಗಾಂಧಿ ಮೈದಾನದ ಬಳಿ ಆಯೋಜಿಸಿದ ‘ಬೃಹತ್ ಖಾದಿ ಮೇಳ’ವನ್ನು (ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ) ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ವಿ. ನಾಯ್ಕ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸೇವಾ ಪಾಕ್ಷಿಕ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಮಂಡಲ ಉಪಾಧ್ಯಕ್ಷ ರಘುಪತಿ ಬ್ರಹ್ಮಾವರ, ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ವಾರಂಬಳ್ಳಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೇವಾನಂದ, ಮಂಡಲ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶೋಭಾ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷೆ ಲಕ್ಷ್ಮೀ, ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಮತಾ ಶೆಟ್ಟಿ, ಉಪಾಧ್ಯಕ್ಷ ಗುರುರಾಜ್ ಭಟ್, ಕಾರ್ಯಕ್ರಮದ ಮಂಡಲ ಸಂಚಾಲಕ ಮೋಹನ್ ಶೆಟ್ಟಿ, ಪ್ರಮುಖರಾದ ಪದ್ಮಾವತಿ ನಾಯರಿ, ರವಿ ಕೊಳಂಬೆ ಮುಂತಾದವರು ಉಪಸ್ಥಿತರಿದ್ದರು.

ಬಿಜೆಪಿ ಉಡುಪಿ ನಗರ ವತಿಯಿಂದ 3ನೇ ವರ್ಷದ ಶಾರದಾ ಪೂಜೆ ಸಂಪನ್ನ

News by: ಜನತಾಲೋಕವಾಣಿನ್ಯೂಸ್



ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಸೋಮವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 3ನೇ ವರ್ಷದ ಶಾರದಾ ಪೂಜೆಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಉಡುಪಿ ಶಾಸಕ ಕೆ.ರಘುಪತಿ ಭಟ್ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್, ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಉಪಸ್ಥಿತರಿದ್ದರು.

ಕಾಟೇಶ್ ಮತ್ತು ಬಳಗದವರಿಂದ ಭಜನಾ ಸೇವೆ ನಡೆಯಿತು. ನೂರಾರು ಮಂದಿ ಭಾಗವಹಿಸಿ ಅನ್ನ ಪ್ರಸಾದ ಸ್ವೀಕರಿಸಿದರು.

ಅ.2: ‘ಸೇವಾ ಪಾಕ್ಷಿಕ’ – ‘ಗಾಂಧಿ ಜಯಂತಿ’ ಪ್ರಯುಕ್ತ ಬಿಜೆಪಿಯಿಂದ ಬೃಹತ್ ‘ಖಾದಿ ಮೇಳ’

News by: ಜನತಾಲೋಕವಾಣಿನ್ಯೂಸ್


ಉಡುಪಿ: ‘ಸೇವಾ ಪಾಕ್ಷಿಕ’ ಅಭಿಯಾನ‌ ಹಾಗೂ ‘ಗಾಂಧಿ‌ ಜಯಂತಿ’ ಆಚರಣೆ ಪ್ರಯುಕ್ತ ಅ.2 ರವಿವಾರ ಬಿಜೆಪಿ ಉಡುಪಿ ಜಿಲ್ಲೆಯಾದ್ಯಂತ ವಿವಿಧ ಮಂಡಲಗಳ ವ್ಯಾಪ್ತಿಯಲ್ಲಿ ಈ ಕೆಳಗಿನಂತೆ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕಾಗಿ ‘ಖಾದಿ‌ ಮೇಳ’ವನ್ನು ಆಯೋಜಿಸಿದೆ:

* ಜಿಲ್ಲಾ ಬಿಜೆಪಿ ವತಿಯಿಂದ : ಬಿಜೆಪಿ ಜಿಲ್ಲಾ‌ ಕಛೇರಿ ಉಡುಪಿ (ಬೆಳಿಗ್ಗೆ 10.00ಕ್ಕೆ)
ಉದ್ಘಾಟನೆ: ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾಧ್ಯಕ್ಷರು, ಬಿಜೆಪಿ ಉಡುಪಿ ಜಿಲ್ಲೆ

* ಕಾರ್ಕಳ ಮಂಡಲ : ಕಾರ್ಕಳ ಬಸ್ ನಿಲ್ದಾಣ (3 ದಿನಗಳು) (ಬೆಳಿಗ್ಗೆ 7.30ಕ್ಕೆ)
ಉದ್ಘಾಟನೆ: ವಿ‌.ಸುನಿಲ್ ಕುಮಾರ್, ಇಂದನ, ಕನ್ನಡ ‌ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ

* ಕುಂದಾಪುರ : ಮಂಡಲ‌ ಕಛೇರಿ (3 ದಿನಗಳು) (ಬೆಳಿಗ್ಗೆ 9.30ಕ್ಕೆ)
ಉದ್ಘಾಟನೆ: ಹಾಲಾಡಿ ಶ್ರೀನಿವಾಸ ಶೆಟ್ಟಿ, ಶಾಸಕರು, ಕುಂದಾಪುರ

* ಬೈಂದೂರು :‌ ಮಂಡಲ ಕಛೇರಿ (3 ದಿನಗಳು) (ಬೆಳಿಗ್ಗೆ 9.30ಕ್ಕೆ)
ಉದ್ಘಾಟನೆ: ಬಿ.ಎಮ್. ಸುಕುಮಾರ್ ಶೆಟ್ಟಿ,
ಶಾಸಕರು, ಕುಂದಾಪುರ

* ಉಡುಪಿ ಗ್ರಾಮಾಂತರ : ಮಂಡಲ ಕಛೇರಿ (ಸೆ.4ರಂದು ಬೆಳಿಗ್ಗೆ 9.30ಕ್ಕೆ)
ಉದ್ಘಾಟನೆ: ಕೆ.ರಘುಪತಿ ಭಟ್, ಶಾಸಕರು, ಉಡುಪಿ

ಬಿಜೆಪಿ ಕಾಪು ಮಂಡಲದಲ್ಲಿ‌ ಸೆ.30ರಂದು ನಡೆದ ಖಾದಿ ಮೇಳಕ್ಕೆ ಶಾಸಕ ಲಾಲಾಜಿ ಅರ್. ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ ಹಾಗೂ ಪಕ್ಷದ ಮುಖಂಡರ ಸಮ್ಮುಖದಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆ ಚಾಲನೆ ನೀಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ವೋಕಲ್ ಫಾರ್ ಲೋಕಲ್’‌ ಪರಿಕಲ್ಪನೆಯಡಿ‌ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆಯೋಜಿಸಿರುವ ಖಾದಿ ಮೇಳದಲ್ಲಿ ಸಾರ್ವಜನಿಕ ಬಂಧುಗಳು, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ‌‌ ಭಾಗವಹಿಸಿ, ಖಾದಿ ಉತ್ಪನ್ನಗಳನ್ನು‌ ಖರೀದಿಸಿ, ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕಾಗಿ ‘ಸೇವಾ ಪಾಕ್ಷಿಕ’ ಅಭಿಯಾನದ ಜಿಲ್ಲಾ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಸಹ ಸಂಚಾಲಕರಾದ ಸದಾನಂದ ಉಪ್ಪಿನಕುದ್ರು, ಶಿವಕುಮಾರ್ ಅಂಬಲಪಾಡಿ ಹಾಗೂ ‘ಗಾಂಧಿ ಜಯಂತಿ ಆಚರಣೆ ಮತ್ತು ಖಾದಿ ಮೇಳ’ದ ಜಿಲ್ಲಾ ಸಂಚಾಲಕ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಸಹ ಸಂಚಾಲಕರಾದ ಅನಿತಾ ಶ್ರೀಧರ್ ಹಾಗೂ ದಾವೂದ್ ಅಬೂಬಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Design a site like this with WordPress.com
Get started