ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಕಾಪು ತಾಲೂಕು ಉಚ್ಚಿಲ ವಲಯದ ಅದಮಾರು ಕಾರ್ಯಕ್ಷೇತ್ರದಲ್ಲಿ ಆಂತರಿಕ ಲೆಕ್ಕ ಪರಿಶೋಧನೆಯನ್ನು, ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀಮತಿ,ಜಯಂತಿ ಇವರು ದೀಪ ಪ್ರಜ್ವಲನೆ ಮಾಡಿ ತಾಲೂಕಿನಲ್ಲಿ ನಡೆಯುವ ಲೆಕ್ಕ ಪರಿಶೋಧನೆಗೆ ಚಾಲನೆ ನೀಡಿ, ಎಲ್ಲಾ ಸಂಘಗಳು ಅತ್ಯುನ್ನತ ಶ್ರೇಣಿಯಾದ S ಶ್ರೇಣಿಯಲ್ಲಿ ಇರಲಿ ಎಂದು ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ ಅದಮಾರು ಒಕ್ಕೂಟದ ಅಧ್ಯಕ್ಷರಾದ ವೀಣಾ ಯತಿನ್,ಉಡುಪಿ ಜಿಲ್ಲಾ *ಲೆಕ್ಕ ಪರಿಶೋಧನಾ ವಿಭಾಗದ ಪ್ರಬಂಧಕರಾದ ಪ್ರದೀಪ್, ತಾಲೂಕಿನ ಲೆಕ್ಕಪರಿಶೋಧಕರಾದ ವಿಶ್ವನಾಥ ಪೂಜಾರಿ,ವಲಯದ ಮೇಲ್ವಿಚಾರಕರಾದ ಭಾಸ್ಕರ್,ಸೇವಾಪ್ರತಿನಿಧಿಯಾದ ಪಾರ್ವತಿ ಹಾಗೂ ಸಂಘದ ಪ್ರಬಂಧಕರು ,ಸಂಯೋಜಕರು, ಕೋಶಾಧಿಕಾರಿ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು
ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ನ.5ರಂದು ಬೆಳಿಗ್ಗೆ 10.00ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶವು ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00ಕ್ಕೆ ತ್ರಾಸಿ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ. ಈ ಎರಡೂ ಮಹತ್ವಪೂರ್ಣ ಕಾರ್ಯಕ್ರಮಗಳ ಬಗ್ಗೆ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಸಂಘಟಿತ ಪ್ರಯತ್ನದ ಮೂಲಕ ನಿರೀಕ್ಷಿತ ಯಶಸ್ಸನ್ನು ಸಾಧಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಜಿಲ್ಲಾ ಜನಸಂಕಲ್ಪ ಸಮಾವೇಶದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತ್ರಾಸಿಯಲ್ಲಿ ನಡೆಯುವ ಜನಸಂಕಲ್ಪ ಸಮಾವೇಶದ ಪೂರ್ವಭಾವಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೂ.1,318 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ.
ಪ್ರತೀ ಶಕ್ತಿಕೇಂದ್ರ ಮಟ್ಟದಲ್ಲಿ ಸಮಾವೇಶದ ಪೂರ್ವಭಾವಿ ಸಭೆಗಳು ಪ್ರಗತಿಯಲ್ಲಿದ್ದು, ಉತ್ತಮ ಸ್ಪಂದನೆ ದೊರೆಯುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಜನಸಂಕಲ್ಪ ಸಮಾವೇಶದಲ್ಲಿ ಪ್ರತೀ ಬೂತ್ ವ್ಯಾಪ್ತಿಯಿಂದ ಫಲಾನುಭವಿಗಳು, ಪಕ್ಷದ ಹಿತೈಷಿಗಳು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಘಟನಾತ್ಮಕ ಪ್ರಕೋಷ್ಠಗಳ ಸಂಚಾಲಕರು ಉಪಸ್ಥಿತರಿದ್ದರು.
ಸುದೀರ್ಘ 62 ವರ್ಷಗಳಿಂದ ಪ್ರತಿಭಾನ್ವಿತ ತಬಲಾ ವಾದಕರಾಗಿ, ಕಳೆದ 42 ವರ್ಷಗಳಿಂದ ಉಚಿತ ತಬಲಾ ತರಬೇತಿ ನೀಡುತ್ತಾ ಸಂಗೀತ ಕಲಾ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದಿರುವ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರನ್ನು ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರ ವತಿಯಿಂದ ನ.1ರಂದು ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರೀಶ್ ಆಚಾರ್ಯ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ಭಾಸ್ಕರ್, ರಾಜೇಶ್ ಸುವರ್ಣ, ಲಕ್ಷಣ ಪೂಜಾರಿ ಹಾಗೂ ಗೋದಾವರಿ ಎಮ್. ಸುವರ್ಣ, ಚೆನ್ನಕೇಶವ, ಚಂದ್ರಿಕಾ ಅಶೋಕ್, ರಿದ್ಧಿ ಮತ್ತು ಪ್ರಿಶಾ ಉಪಸ್ಥಿತರಿದ್ದರು.
ಉಡುಪಿ: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ಬಸ್ ನಿಲ್ದಾಣದ ಬಳಿ ನ.7ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ದಲ್ಲಿ ಪ್ರತೀ ಬೂತ್ ಮಟ್ಟದಿಂದ ಫಲಾನುಭವಿಗಳು, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಹಾಗೂ ಪಕ್ಷದ ಹಿತೈಷಿಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಅ.30ರಂದು ಹಿರಿಯಡ್ಕದ ಸ್ಕಂದ ಸಭಾಗೃಹದಲ್ಲಿ ನಡೆದ ಬಿಜೆಪಿ ಪೆರ್ಡೂರು ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಹಿರಿಯಡ್ಕ-ಬೊಮ್ಮರಬೆಟ್ಟು ಶಕ್ತಿಕೇಂದ್ರದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಯ ಅಂಗವಾಗಿ ನಡೆಯುವ ಈ ಸಮಾವೇಶವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆಯಲಿದ್ದು ಮುಂಬರಲಿರುವ ಚುನಾವಣೆಗಳಿಗೆ ಶಕ್ತಿ ತುಂಬಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪೆರ್ಡೂರು ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಜಿಯಾನಂದ ಹೆಗ್ಡೆ, ಹಿರಿಯಡ್ಕ-ಬೊಮ್ಮರಬೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾದ ವಿನಯ ಪೂಜಾರಿ ಹಾಗೂ ದಯಾನಂದ ಪೂಜಾರಿ, ಪೆರ್ಡೂರು ಮಹಾಶಕ್ತಿ ಕೇಂದ್ರದ ಉಸ್ತುವಾರಿ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಪಕ್ಷದ ಪ್ರಮುಖರು ಹಾಗೂ ಶಕ್ತಿ ಕೇಂದ್ರ ವ್ಯಾಪ್ತಿಯ ಎಲ್ಲ ಬೂತ್ ಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಬೂತ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಕಾಪು: ನವೆಂಬರ್ 7 ನೇ ತಾರೀಕು ಕಾಪು ಕ್ಷೇತ್ರಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಇವರ ನೇತ್ರತ್ವದಲ್ಲಿ ನಡೆಯುವ ಜನ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ವಿವಿಧ ಶಕ್ತಿಕೇಂದ್ರಗಳ ಜವಾಬ್ದಾರಿ ಹೊಂದಿರುವ ಪದಾಧಿಕಾರಿಗಳು ಹಾಗೂ ವಿವಿಧ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಉಪಸ್ಥಿತರಿದ್ದರು. ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಕ್ತಿಕೇಂದ್ರ ಉಸ್ತುವಾರಿಗಳ ಜವಾಬ್ದಾರಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿವರಿಸಿ ಪ್ರತೀ ಬೂತ್ ಗಳಲ್ಲಿ ಇರುವ ಫಲಾನುಭವಿಗಳನ್ನು ಸಂಪರ್ಕಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ ನೀಡಿದರು. ಕಾಪು ಕ್ಷೇತ್ರದ ಚುನಾವಣಾ ಪೂರ್ವಭಾವಿಯಾಗಿ ನಡೆಯುವ ಈ ಸಭೆಯಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಲು ಎಲ್ಲ ಪದಾಧಿಕಾರಿಗಳು ಶ್ರಮವಹಿಸಲು ಕರೆ ನೀಡಿದರು.
‘ಕನ್ನಡ ರಾಜ್ಯೋತ್ಸವ’ದ ಪ್ರಯುಕ್ತ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಸಂಕೀರ್ಣ ‘ರಜತಾದ್ರಿ’ಯ ಮುಂಬಾಗದಲ್ಲಿರುವ ಡಾ! ವಿ.ಎಸ್. ಆಚಾರ್ಯ ರವರ ಪುತ್ಥಳಿಯ ಬಳಿ ಸಂಭ್ರಮದಿಂದ ಯಶಸ್ವಿಯಾಗಿ ನೆರವೇರಿತು.
ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಸೇರಿ ‘ಕನ್ನಡ ಶಾಲು ಮತ್ತು ಟೋಪಿ’ಗಳನ್ನು ಧರಿಸಿ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನಿಗದಿಪಡಿಸಿರುವ ಆರು ಕನ್ನಡ ಹಾಡುಗಳನ್ನು ಲಯಬದ್ಧವಾಗಿ ಹಾಡಿ ಸಂಭ್ರಮಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕನ್ನಡ ನಾಡು ನುಡಿಯ ಪ್ರಮಾಣ ವಚನ ಭೋಧಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಪ್ರಮುಖರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ದಿನಕರ ಬಾಬು, ಸಲೀಂ ಅಂಬಾಗಿಲು, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಪೂರ್ಣಿಮಾ ಸುರೇಶ್ ನಾಯಕ್, ಕೆ.ರಾಘವೇಂದ್ರ ಕಿಣಿ, ಮಹೇಶ್ ಠಾಕೂರ್, ಮಿಥುನ್ ಹೆಗ್ಡೆ, ಸತ್ಯಾನಂದ ನಾಯಕ್, ನಳಿನಿ ಪ್ರದೀಪ್ ರಾವ್, ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್, ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಶ್ರೀನಿಧಿ ಹೆಗ್ಡೆ, ವೀಣಾ ಎಸ್. ಶೆಟ್ಟಿ, ಸುರೇಂದ್ರ ಪಣಿಯೂರು, ಪ್ರವೀಣ್ ಕುಮಾರ್ ಗುರ್ಮೆ, ದಾವೂದ್ ಅಬೂಬಕರ್, ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಶ್ರೀಕಾಂತ್ ನಾಯಕ್, ದಿನೇಶ್ ಅಮೀನ್, ಸಚಿನ್ ಪೂಜಾರಿ, ಗಣೇಶ್ ಕುಲಾಲ್, ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಅಲ್ವಿನ್ ಡಿ’ಸೋಜಾ ಹಾಗೂ ಜಿಲ್ಲಾ ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.
ಉಡುಪಿ: ನ.7ರಂದು ಬೆಳಿಗ್ಗೆ 10.00 ಗಂಟೆಗೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00 ಗಂಟೆಗೆ ತ್ರಾಸಿ ರಾ.ಹೆ. ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಜನ ಸ್ಪಂದನ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಶುಕ್ರವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಜನ ಸ್ಪಂದನ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ಜಿಲ್ಲೆಯ ಕಾಪು ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ಜನಸ್ಪಂದನ ಸಮಾವೇಶದಲ್ಲಿ ಆಯಾ ಕ್ಷೇತ್ರದ ಸಹಿತ ಕಾರ್ಕಳ, ಉಡುಪಿ ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು 10,000ಕ್ಕೂ ಮಿಕ್ಕಿ ಫಲಾನುಭವಿಗಳು, ಸಾರ್ವಜನಿಕ ಬಂಧುಗಳು, ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಭಾಗವಹಿಸಲಿದ್ದಾರೆ.
ಜನಸ್ಪಂದನ ಸಮಾವೇಶಕ್ಕೆ ಸಮಾರೋಪಾದಿಯಲ್ಲಿ ಸಿದ್ಧತೆಗಳು ನಡೆಯುತ್ತಿದ್ದು ಪ್ರತೀ ಶಕ್ತಿಕೇಂದ್ರ ವ್ಯಾಪ್ತಿಗೆ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಪ್ರತೀ ಬೂತ್ ಮಟ್ಟದಿಂದ ವಿವಿಧ ಯೋಜನೆಗಳ ಫಲಾನುಭವಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ತಿಳಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಶಕ್ತಿಕೇಂದ್ರ ಉಸ್ತುವಾರಿಗಳ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ ಚುನಾವಣಾ ಪೂರ್ವಭಾವಿಯಾಗಿ ನಡೆಯುವ ಈ ಜನಸ್ಪಂದನ ಸಮಾವೇಶವು ಅತ್ಯಂತ ಮಹತ್ವಪೂರ್ಣವಾಗಿದ್ದು ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತರಾಗಿ ತೊಡಗಿಸಿಕೊಂಡು ಜನಸ್ಪಂದನ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು , ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯಕುಮಾರ್ ಉದ್ಯಾವರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ.28ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವಿನೂತನ ರೀತಿಯಲ್ಲಿ ಭಾಗವಹಿಸಲಿದೆ.
ಅ.28 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮಣಿಪಾಲದ ರಜತಾದ್ರಿ ಬಳಿ ಇರುವ ಡಾ! ವಿ.ಎಸ್. ಆಚಾರ್ಯ ರವರ ಪುತ್ಥಳಿಯ ಬಳಿ ಸುಮಾರು 500 ಮಂದಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸೇರಿ ‘ಕನ್ನಡ ಶಾಲು ಮತ್ತು ಟೋಪಿ’ಗಳನ್ನು ಧರಿಸಿ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನಿಗದಿಪಡಿಸಿರುವ ಆರು ಕನ್ನಡ ಹಾಡುಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಸಾಮೂಹಿಕವಾಗಿ ಹಾಡಲಿದ್ದಾರೆ.
ಈ ವಿನೂತನ ಸಾಮೂಹಿಕ ಗಾಯನ ಕಾರ್ಯಕ್ರಮವನ್ನು ಡ್ರೋನ್ ಕ್ಯಾಮರಾ ಮೂಲಕ ಚಿತ್ರೀಕರಿಸಿ, ನಿಗದಿತ ಲಿಂಕ್ ಮೂಲಕ ‘ಕೋಟಿ ಕಂಠ ಗಾಯನ’ ಆಯೋಜಕ ತಂಡಕ್ಕೆ ಕಳುಹಿಸಿಕೊಡಲಾಗುವುದು.
ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಈಗಾಗಲೇ ವಾಟ್ಸಾಪ್ ಗ್ರೂಪ್ ಮೂಲಕ ಕಳುಹಿಸಿಕೊಟ್ಟಿರುವ ನಿಗದಿತ ಆರು ಹಾಡುಗಳನ್ನು ಅಭ್ಯಾಸ ಮಾಡುವ ಮೂಲಕ ಅ.28ರ ಸಾಮೂಹಿಕ ಗಾಯನದಲ್ಲಿ ಭಾಗವಹಿಸಿ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಸುಪರ್ದಿಯಲ್ಲಿರುವ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿಯ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ, ಮಹಾರಾಷ್ಟ್ರ ಎಪೆಕ್ಸ್ ಕಾರ್ಪೋರೇಷನ್ ಲಿಮಿಟೆಡ್ ಮಣಿಪಾಲ ಇದರ ಅಧಿಕಾರಿ ಶಿವಕುಮಾರ್ ಅಂಬಲಪಾಡಿ ಇವರನ್ನು ಧನಲಕ್ಷ್ಮೀ ಪೂಜೆಯ ಸುಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗದ ಪರವಾಗಿ ಸಂಸ್ಥೆಯ ಸಹಾಯಕ ಮಹಾ ಪ್ರಬಂದಕ ವಿವೇಕಾನಂದ ಬಿ. ಇವರು ಸಂಸ್ಥೆಯ ಪ್ರಭಂದಕ ಶಶೀಂದ್ರ ಭಟ್ ಹಾಗೂ ಮಣಿಪಾಲ ಸಮೂಹ ಸಂಸ್ಥೆಯ ಹಿರಿಯ ಅಧಿಕಾರಿ ಕೆ.ಎಸ್. ಕಾರಂತ್ ರವರ ಉಪಸ್ಥಿತಿಯಲ್ಲಿ ಶಾಲು ಹೊದೆಸಿ ಸನ್ಮಾನಿಸಿದರು.
ಮಣಿಪಾಲ ಶ್ರೀ ದುರ್ಗಾಂಬಾ ದೇವಸ್ಥಾನದ ಪುರೋಹಿತ ಶಿವಾನಂದ ಭಟ್ ಪ್ರಸಾದ ನೀಡಿ ಶುಭಾಂಶನೆಗೈದರು.
ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಸಂಸ್ಥೆಯ ಹಿರಿಯ ಅಧಿಕಾರಿ ಕೆ.ರಮೇಶ್ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಉಡುಪಿ: ಸಿಎಎ ವಿರುದ್ಧ ಎಸ್ಡಿಪಿಐ ನಡೆಸಿದ್ದ ಪ್ರತಿಭಟನೆಯಲ್ಲಿ ಶಾಮೀಲಾಗಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಸೋಲಿನ ಬೀತಿ ಪ್ರಾರಂಭಗೊಂಡಿದೆ. ಮಾಜಿ ಸಿ.ಎಂ. ಸಿದ್ಧರಾಮಯ್ಯ ತನ್ನ ಆಡಳಿತಾವಧಿಯಲ್ಲಿ ನೂರಾರು ಎಸ್ಡಿಪಿಐ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆದಿದ್ದು, ಕಾಂಗ್ರೆಸ್ ಮತ್ತು ಎಸ್ಡಿಪಿಐ ನಡುವಿನ ಸುಮಧುರ ಬಾಂಧವ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೆ? ಎಸ್ಡಿಪಿಐ ಕಾಂಗ್ರೆಸ್ ನ ಪಾಪದ ಕೂಸು. ಅಪಪ್ರಚಾರವೇ ಕಾಂಗ್ರೆಸ್ ಜೀವಾಳ ಎಂದು ಉಡುಪಿ ಜಿಲ್ಲಾ ಬಿಜೆಪಿ, ಜಿಲ್ಲಾ ಕಾಂಗ್ರೆಸ್ ನ ‘ಬಿಜೆಪಿ-ಎಸ್ಡಿಪಿಐ’ ಒಳ ಒಪ್ಪಂದ’ ಎಂಬ ಆರೋಪಕ್ಕೆ ತಿರುಗೇಟು ನೀಡಿದೆ.
ಮುಸ್ಲಿಂ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಉಪಯೋಗಿಸುತ್ತಾ ಬಂದಿರುವ ಕಾಂಗ್ರೆಸ್ ನ ಕುಟಿಲ ನೀತಿ ಗುಟ್ಟಾಗಿ ಉಳಿದಿಲ್ಲ. ಪಿಎಫ್ಐ ಸಹಿತ 9 ದೇಶದ್ರೋಹಿ ಮತಾಂಧ ಸಂಘಟನೆಗಳನ್ನು ನಿಷೇಧಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ದಿಟ್ಟ ಕ್ರಮದಿಂದ ಕಂಗೆಟ್ಟಿರುವ ಕಾಂಗ್ರೆಸ್, ಬಿಜೆಪಿ ಮೇಲೆ ಗೂಬೆ ಕೂರಿಸುವ ವಿಫಲ ಯತ್ನದಿಂದ ನಿರಂತರ ನಿರಾಧಾರ ಆರೋಪದಲ್ಲಿ ತೊಡಗಿರುವುದು ಜನಜನಿತವಾಗಿದೆ. ದೇಶದೆಲ್ಲೆಡೆ ಅಸ್ತಿತ್ವವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಗೆ ಇದೀಗ ತಾನೇ ಪೋಷಿಸಿರುವ ಎಸ್ಡಿಪಿಐನಿಂದ ಸ್ಪರ್ಧೆ ಎದುರಿಸುವ ಅನಿವಾರ್ಯತೆ ಬಂದೊದಗಿರುವುದು ನುಂಗಲಾರದ ತುತ್ತೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಸದಾ ಒಂದೇ ವರ್ಗದ ಓಲೈಕೆ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದೊಂದಿಗೆ ಸುದೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ ದೇಶದ್ರೋಹಿ ಮತಾಂಧ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಗಾಢ ಮೌನ ವಹಿಸಿದ್ದು, ಇದೀಗ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಐತಿಹಾಸಿಕ ದಿಟ್ಟ ಕ್ರಮದಿಂದ ಜ್ಞಾನೋದಯವಾದಂತೆ ನಟಿಸುತ್ತಿರುವುದು ಹಾಸ್ಯಾಸ್ಪದವೆನಿಸಿದೆ.
ಪಿಎಫ್ಐ ನಂತಹ ಸಮಾಜಘಾತುಕ ಮತಾಂಧ ಭಯೋತ್ಪಾದಕ ಸಂಘಟನೆಗಳನ್ನು ನಿಷೇಧಿಸಿ ಮಟ್ಟಹಾಕಿರುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮತೀಯ ರಾಜಕೀಯ ಪಕ್ಷವೆನಿಸಿರುವ ಎಸ್ಡಿಪಿಐ ಅಥವಾ ಇನ್ನಿತರ ಯಾವುದೇ ಮತೀಯ ಸಂಘಟನೆಗಳು ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿದರೆ ಏನೇನು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಚೆನ್ನಾಗಿಯೇ ಅರಿತಿದೆ. ಆದರೆ ಸೋಲಿನ ಭಯದಿಂದಲೇ ಈ ಬಗ್ಗೆ ಅತಿಯಾದ ಕಾಳಜಿ ತೋರುತ್ತಿರುವ ಕಾಂಗ್ರೆಸ್ ನ ಹತಾಶ ಮನೋಭಾವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿಕೆಯಿಂದ ಜಗಜ್ಜಾಹೀರಾಗಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.