ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.
ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.
ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ.
*ಶೋಭಾ ಕರಂದ್ಲಾಜೆ* *ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ*
ಉಡುಪಿ: ಬಿಜೆಪಿ ಮಹತ್ವಾಕಾಂಕ್ಷಿ ‘ಜನ ಸಂಕಲ್ಪ ಯಾತ್ರೆ’ಯು ಉಡುಪಿ ಜಿಲ್ಲೆಯ ಬೈಂದೂರು ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.16 ಮತ್ತು 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಅ.19ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅ.29ರಂದು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ರಾಜ್ಯದಲ್ಲೇ ವಿನೂತನವಾಗಿ ಜಿಲ್ಲೆಯ ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿ ಶಕ್ತಿ ಕೇಂದ್ರಗಳ ಸಭೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ 242 ಶಕ್ತಿಕೇಂದ್ರಗಳಲ್ಲಿ 2 ತಿಂಗಳಿಗೊಮ್ಮೆ ನಿರಂತರ ಸಭೆಗಳು ನಡೆಯಲಿವೆ. ಅಲ್ಲದೆ ಸದೃಢ ಪಕ್ಷದ ಸಂಘಟನಾ ದೃಷ್ಟಿಯಿಂದ ನವೆಂಬರ್ ತಿಂಗಳಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲಾ 1,111 ಬೂತ್ ಗಳಲ್ಲಿ ಜಿಲ್ಲಾ ಮತ್ತು ಮಂಡಲ ಮಟ್ಟದ ಪ್ರಮುಖರ ನೇತೃತ್ವದಲ್ಲಿ ಬೂತ್ ಸಭೆಗಳು ನಡೆಯಲಿವೆ ಎಂದು ಕುಯಿಲಾಡಿ ತಿಳಿಸಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ಮಾತನಾಡಿ ಕಾಂಗ್ರೆಸ್ ಇಂದು ಸೂತ್ರವಿಲ್ಲದ ಗಾಳಿಪಟದಂತಾಗಿದೆ. ಪಕ್ಷ ಸಂಘಟನೆ, ಜನ ಸೇವೆ, ಕಾರ್ಯ ಪದ್ಧತಿ ಮತ್ತು ನಾಯಕತ್ವದ ಮೂಲಕ ಗೆಲುವು ಸಾಧಿಸುವುದು ನಮ್ಮ ಗುರಿಯಾಗಬೇಕು. ಬಿಜೆಪಿಯಿಂದ ರಾಜ್ಯಾದ್ಯಂತ 3 ತಂಡಗಳ ನೇತೃತ್ವದಲ್ಲಿ ‘ಜನ ಸಂಕಲ್ಪ ಯಾತ್ರೆ’ ನಡೆಯುತ್ತಿದ್ದು, ಪಕ್ಷದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಜನಪರ ಯೋಜನೆಗಳನ್ನು ಇನ್ನಷ್ಟು ಪ್ರಚಲಿತಗೊಳಿಸಿ ಅರ್ಹ ಫಲಾನುಭವಿಗಳಿಗೆ ಪ್ರಯೋಜನವನ್ನು ತಲುಪಿಸುವ ಮೂಲಕ ಸಶಕ್ತ ಬೂತ್ ಸದೃಢ ಸಂಘಟನೆಯೊಂದಿಗೆ ಮಗದೊಮ್ಮೆ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಲು ಬದ್ಧತೆಯಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಬೂತ್ ಸಶಸ್ತೀಕರಣ, ಶಕ್ತಿಕೇಂದ್ರಗಳ ಸಭೆ, ಅಭ್ಯಾಸ ವರ್ಗ ಹಾಗೂ ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.
ಅಡಿಕೆ ಕೃಷಿಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶದಿಂದ ಸಾವಿಗೀಡಾದ ಪಕ್ಷದ ಹಿರಿಯ ಮುಖಂಡ, ಶೀರೂರು ಶಕ್ತಿಕೇಂದ್ರದ ಅಧ್ಯಕ್ಷ ಸತೀಶ್ ಪ್ರಭು ಶೀರೂರು ಇವರ ಅಕಾಲಿಕ ನಿಧನದ ಬಗ್ಗೆ ಸಭೆಯಲ್ಲಿ ಮೌನ ಪ್ರಾರ್ಥನೆಯೊಂದಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ಜಿಲ್ಲಾ ಸಂಘಟನಾತ್ಮಕ ಪ್ರಕೋಷ್ಠಗಳ ಸಂಚಾಲಕರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಬಿಜೆಪಿ ಉಡುಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಮೋರ್ಚಾದಿಂದ ಮುಖ್ಯಮಂತ್ರಿಗಳಿಗೆ ಬೆಂಗಳೂರಿನಲ್ಲಿ ಅಭಿನಂದನೆ
ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಬಿಜೆಪಿ ನೇತೃತ್ವದ ರಾಜ್ಯ ಬದ್ಧವಾಗಿದ್ದು, ಇದಕ್ಕೆ ಬೇಕಾಗುವಂತಹ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಮುಂದಿನ ದಿನಗಳಲ್ಲಿ ಈ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ವತಿಯಿಂದ ಸಿ.ಎಂ. ನಿವಾಸದ ಬಳಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್,ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಚಲವಾದಿ ನಾರಾಯಣ ಸ್ವಾಮಿ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಎಸ್ಸಿ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ಗೋಪಾಲ ಕಳಂಜಿ, ಎಸ್ಟಿ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ನಿತ್ಯಾನಂದ ನಾಯ್ಕ್, ಉಡುಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಪದಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಮತ್ತು ಪದಾಧಿಕಾರಿಗಳು, ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಕಾರ್ಯದರ್ಶಿಗಳಾದ ಸುನೀತಾ ನಾಯ್ಕ್, ಗುರುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಕಾಪು: ಇತ್ತೀಚೆಗೆ ಕಾಪು ಕ್ಷೇತ್ರ ಮಾಜಿ ಶಾಸಕರೂ, ಕರ್ನಾಟಕ ಸರಕಾರದ ಮಾಜಿ ಸಚಿವರೂ ಆದ ವಿನಯ್ ಕುಮಾರ್ ಸೊರಕೆಯವರು ಎಸ್ ಡಿ ಪಿ ಐ ಪಕ್ಷದ ಚುನಾವಣಾ ಕರಪತ್ರಗಳನ್ನು ನಮ್ಮ ಶಾಸಕರು ಮುದ್ರಿಸಿ ಕೊಟ್ಟಿರುವರು ಹಾಗೂ ಜೊತೆಯಾಗಿ ವಿಜಯೋತ್ಸವ ಮಾಡಿರುವರು ಎಂದು ಹೇಳಿರುವುದು ಅವರ ರಾಜಕೀಯ ಅಪ್ರಬುಧ್ಧತೆ ತೋರಿಸುತ್ತದೆ. ಗಾಳಿಯಲ್ಲಿ ಗುಂಡು ಹಾರಿಸುವಲ್ಲಿ ಸೊರಕೆಯವರು ನಿಸ್ಸೀಮರು. ನಮ್ಮ ವಿಚಾರಧಾರೆಗಳಿಗೂ ಎಸ್ ಡಿ ಪಿ ಐ ವಿಚಾರಧಾರೆಗಳಿಗೂ ಅಜಗಜಾಂತರ ವ್ಯತ್ಯಾಸವಿದೆ. ಎಸ್ ಡಿ ಪಿ ಐ ನಮ್ಮ ರಾಜಕೀಯ ವಿಚಾರಧಾರೆಗಳ ನೇರ ವಿರೋಧಿ ಪಕ್ಷ. ಆ ಪಕ್ಷದ ವಿಚಾರಗಳನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ಅಂತಹ ಪಕ್ಷದೊಂದಿಗೆ ವಿಜಯೋತ್ಸವ ಮಾಡಿರುವರೆಂದು ಸುಳ್ಳು ಹೇಳಿ ಜನರನ್ನು ಮರುಳು ಮಾಡುವ ಮಾಜಿ ಶಾಸಕರ ಪ್ರಯತ್ನ ಅವರಿಗೇ ಮುಳುವಾಗುವುದು ಖಂಡಿತಾ. ಎಸ್ ಡಿ ಪಿ ಐ ಕಾಂಗ್ರೆಸ್ ಪಕ್ಷದ ಕೊಡುಗೆ ಎನ್ನುವುದು ಜಗಜ್ಜಾಹೀರು. ನೀವು ಶಾಸಕರಿರುವಾಗ ಈಗಿನ ನಿಷೇಧಿತ ಪಿಎಫ್ಐ ನ ಸಾವಿರಾರು ಕಾರ್ಯಕರ್ತರ ಬಿಡುಗಡೆಗೆ ಆಗಿನ ಮುಖ್ಯಮಂತ್ರಿಗಳಾದ ಸಿಧ್ಧರಾಮಯ್ಯರವರಿಗೆ ಪ್ರೋತ್ಸಾಹ ನೀಡಿರುವವರು. ಅವರನ್ನು ಬೆಳೆಸಿ ಇದೀಗ ನಿಮ್ಮ ತಲೆಯ ಮೇಲೆ ಬಂದಾಗ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಇಂತಹ ಚಿಲ್ಲರೆ ಹೇಳಿಕೆಗಳನ್ನು ಜನ ನಂಬುವರೆಂಬುದು ನಿಮ್ಮ ಮೂರ್ಖತನ. ಇಂತಹ ಡೋಂಗಿ ರಾಜಕಾರಣ ಬಿಟ್ಟು ಬಿಡಿ ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪತ್ರಿಕಾ ಹೇಳಿಕೆ ನೀಡಿರುತ್ತಾರೆ.
ಉಡುಪಿ: ಕೊಡಗಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧಾ ಕೂಟದಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿಧ್ಯಾರ್ಥಿಗಳು ಭಾಗವಹಿಸಿ 41 ಚಿನ್ನ, 30 ಬೆಳ್ಳಿ, 19 ಕಂಚಿನ ಪದಕಗಳನ್ನು ಪಡೆದು ಟೀಮ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪ್ರಶಸ್ತಿ ವಿಜೇತ ಕರಾಟೆ ಪಟುಗಳಿಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಅಂಬಲಪಾಡಿ ದೇವಳದಲ್ಲಿ ಆಶೀರ್ವದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಮುಖ್ಯ ಶಿಕ್ಷಕ ರೆಂಶಿ ವಾಮನ್ ಪಾಲನ್, ಕಾರ್ಯದರ್ಶಿ ಸೆನ್ಸೈ ಮೇಘಾ, ಕೋಶಾಧಿಕಾರಿ ಸೆನ್ಸೈ ಚೈತನ್ಯ ಹಾಗೂ ಕರಾಟೆ ಕಪ್ಪು ಪಟ್ಟಿ ವಿದ್ಯಾರ್ಥಿಗಳಾದ ನಿಶಾಂತ್, ರಾಹಿಲ್, ಕಾರ್ತಿಕ್, ಅರ್ಮಾನ್, ರಿಶಾಲ್ ವಿಶ್ವಜಿತ್ ಮತ್ತು ಪ್ರಶಸ್ತಿ ವಿಜೇತ ಕರಾಟೆ ಪಟುಗಳು ಉಪಸ್ಥಿತರಿದ್ದರು.
ಉಡುಪಿ: ಕೊಡಗಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಸರ್ಧಾ ಕೂಟದಲ್ಲಿ ಉಡುಪಿಯ ಪ್ರತಿಷ್ಠಿತ ಸಂಸ್ಥೆ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನ ವಿಧ್ಯಾರ್ಥಿಗಳು ಭಾಗವಹಿಸಿ 41 ಚಿನ್ನ, 30 ಬೆಳ್ಳಿ, 19 ಕಂಚಿನ ಪದಕಗಳನ್ನು ಪಡೆದು ಟೀಮ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಜಯಿಸಿದ್ದಾರೆ.
ಪ್ರಶಸ್ತಿ ವಿಜೇತ ವಿಧ್ಯಾರ್ಥಿಗಳಿಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಅಂಬಲಪಾಡಿ ದೇವಳದಲ್ಲಿ ಆಶೀರ್ವದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಬುಡೋಕಾನ್ ಕರಾಟೆ ಆಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನ ಮುಖ್ಯ ಶಿಕ್ಷಕ ರೆಂಶಿ ವಾಮನ್ ಪಾಲನ್, ಕಾರ್ಯದರ್ಶಿ ಸೆನ್ಸೈ ಮೇಘಾ, ಕೋಶಾಧಿಕಾರಿ ಸೆನ್ಸೈ ಚೈತನ್ಯ ಹಾಗೂ ಕಪ್ಪು ಪಟ್ಟಿ ಕರಾಟೆ ವಿದ್ಯಾರ್ಥಿಗಳಾದ ನಿಶಾಂತ್, ರಾಹಿಲ್, ಕಾರ್ತಿಕ್, ಅರ್ಮಾನ್, ರಿಶಾಲ್ ಉಪಸ್ಥಿತರಿದ್ದರು.
ಉಡುಪಿ, ಅ.14: ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಉದ್ಯಮ ಸಾಗಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಗುಣಮಟ್ಟದ ಉತ್ಪನ್ನಗಳೊಂದಿಗೆ ಉತ್ತಮ ಸೇವೆ ಒದಗಿಸಿದಾಗ ಬೇಡಿಕೆ ಹೆಚ್ಚಾಗಲಿದೆ. ಪ್ರಧಾನಿಯವರ ಸಂಕಲ್ಪವಾದ ಸ್ಟಾರ್ಟ್ ಅಪ್ ಇಂಡಿಯಾ ಯೋಜನೆಯಡಿ ಆರಂಭಗೊಂಡ ಈ ಉದ್ಯಮ ಅಭಿವೃದ್ಧಿ ಹೊಂದಲಿ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಉಡುಪಿಯ ಹಳೆ ಡಯಾನ ಸರ್ಕಲ್‌ನ ಬಳಿ ಕಲ್ಪನಾ ರೆಸಿಡೆನ್ಸಿ ಕಟ್ಟಡದ ನೆಲ ಮಹಡಿಯಲ್ಲಿ ನೂತನವಾಗಿ ತೆರೆಯಲಾದ ದಿಶಾ ಸರ್ಜಿಕಲ್ಸ್ ಆ್ಯಂಡ್ ಲೈಫ್‌ಕೇರ್ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದರು.
ಬ್ಯಾಂಕಿಂಗ್, ಶಿಕ್ಷಣ, ವೈದ್ಯಕೀಯ ಕ್ಷೇತ್ರಗಳಲ್ಲಿ ಉಡುಪಿ ಜಿಲ್ಲೆ ಪ್ರಪಂಚದಾದ್ಯಂತ ಹೆಸರು ಗಳಿಸಿದೆ. ಉಡುಪಿಯ ಹೆಸರನ್ನು ಬಹಳ ಹಿಂದಿನಿಂದಲೂ ಇಲ್ಲಿನ ಹಿರಿಯರು ಬಹು ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಕೊರೊನಾ ಸಂದರ್ಭ ರಾಜ್ಯಕ್ಕೆ ಎನ್95 ಮಾಸ್ಕ್ ಒದಗಿಸುವ ಮೂಲಕ ಭರತ್ ಶೆಟ್ಟಿ ನೇತೃತ್ವದ ಸಂಸ್ಥೆ ಶ್ಲಾಘನೀಯ ಕಾರ್ಯವೆಸಗಿದೆ. ವಿದ್ಯೆ ಮತ್ತು ಆರೋಗ್ಯ ಉದ್ಯಮವಾಗಬಾರದು. ಸೇವೆಯೋಪಾದಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಈ ಉದ್ಯಮ ಇನ್ನಷ್ಟು ಬೆಳವಣಿಗೆ ಹೊಂದಿ ಯಶಸ್ಸನ್ನು ಕಾಣಲಿ ಎಂದು ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ಲಾನ್ ಲಿಮಿಟೆಡ್ ಸಂಸ್ಥೆಯ ಸಿಎಂಡಿ ಟಿ. ಸುಧಾಕರ್ ಪೈ ಶುಭಾಂಶನೆಗೈದರು.
ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಜಿ.ಎಸ್. ಚಂದ್ರಶೇಖರ್, ಹೈಟೆಕ್ ಆಸ್ಪತ್ರೆಯ ನಿರ್ದೇಶಕ ಡಾ| ಟಿ.ಎಸ್. ರಾವ್ ಮಾತನಾಡಿ ನೂತನ ಸಂಸ್ಥೆಗೆ ಶುಭ ಹಾರೈಸಿದರು.
ಉಡುಪಿ ನಗರಸಭಾ ಸದಸ್ಯೆ ಮಾನಸ ಸಿ. ಪೈ, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಖಾರಾಮ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಸಂಸ್ಥೆಯ ಪಾಲುದಾರರಾದ ಭರತ್ ಶೆಟ್ಟಿ ಅಂಬಲಪಾಡಿ, ಜಯ ಸನಿಲ್, ಗೋಪಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಉಡುಪಿ: ಹಿಂದೂ ಪರ ನಾಯಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ನಡೆದ ದಾಳಿ ಯತ್ನವನ್ನು ಖಂಡಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಆರೋಪಿಗಳ ಶೀಘ್ರ ಬಂಧನಕ್ಕೆ ತುರ್ತು ಕ್ರಮ ಜರಗಿಸುವಂತೆ ರಾಜ್ಯ ಗೃಹ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಇತ್ತೀಚೆಗೆ ಕೇಂದ್ರ ಸರಕಾರ ಪಿ.ಎಫ್.ಐ ಸಹಿತ ಒಂಬತ್ತು ಮತಾಂಧ ಭಯೋತ್ಪಾದಕ ದೇಶದ್ರೋಹಿ ಜಿಹಾದಿ ಸಂಘಟನೆಗಳನ್ನು ನಿಷೇಧಿಸಿರುವ ಕ್ರಮದಿಂದ ಕಂಗೆಟ್ಟಿರುವ ಜಿಹಾದಿ ಮನಸ್ಥಿತಿಯ ದುಷ್ಟಶಕ್ತಿಗಳು ಅಟ್ಟಹಾಸವನ್ನು ಮೆರೆಯಲು ಇಂತಹ ನಪುಂಸಕ ಕೃತ್ಯದಲ್ಲಿ ತೊಡಗಿವೆ.
ಮಂಗಳೂರಿನಿಂದ ಪಡೀಲ್ ಮಾರ್ಗವಾಗಿ ಕಾರಿನಲ್ಲಿ ತೆರಳುವ ಸಂದರ್ಭದಲ್ಲಿ ಅ.13ರ ತಡ ರಾತ್ರಿ ಈ ದುಷ್ಕೃತ್ಯ ನಡೆದಿದ್ದು, ಜಿಹಾದಿಗಳ ಕಾರಿನ ನೊಂದಣಿ ಕೇರಳ ರಾಜ್ಯದ್ದಾಗಿದೆ ಎಂದು ತಿಳಿದು ಬಂದಿದೆ.
ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿ ಶಾಸಕ ಹರೀಶ್ ಪೂಂಜಾರವರಿಗೆ ಸೂಕ್ತ ಭದ್ರತೆ ಒದಗಿಸುವ ಜೊತೆಗೆ ಮತಾಂಧ ಜಿಹಾದಿ ಮಾನಸಿಕತೆಯ ಇಂತಹ ಭಯೋತ್ಪಾದಕ ಸಮಾಜಘಾತುಕ ಶಕ್ತಿಗಳ ಹೆಡೆಮುರಿಕಟ್ಟಲು ಶೀಘ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟಿನ ದ್ವಿಸದಸ್ಯ ನ್ಯಾಯಪೀಠ ಒಮ್ಮತದ ತೀರ್ಪು ನೀಡದೇ, ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿದೆ. ಈ ಮಧ್ಯೆ, ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಎತ್ತಿಹಿಡಿದಿರುವುದು ಮುಂಬರುವ ತೀರ್ಪು ಸಕಾರಾತ್ಮಕವಾಗಿ ಬರಲಿದೆ ಎಂಬ ಸೂಚನೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಿಶ್ಲೇಷಿಸಿದ್ದಾರೆ.
ವಿವಾದದ ಅಂತಿಮ ತೀರ್ಪು ಬರುವ ವರೆಗೆ ಈಗಾಗಲೇ ಹೈಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸಲೇಬೇಕಾಗಿದೆ. ಸಂವಿಧಾನದಲ್ಲಿ ನಂಬಿಕೆ ಇರುವವರು ಮುಂಬರುವ ತೀರ್ಪನ್ನು ಗೌರವಿಸಬೇಕು ಎಂದು ಕುಯಿಲಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಕಲ್ಯಾಣದತ್ತ ಚಿತ್ತ ಹರಿಸಿ, ಪರಿಶಿಷ್ಟ ಜಾತಿ ಮೀಸಲಾತಿಯನ್ನು 15%ದಿಂದ 17%ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3%ದಿಂದ 7%ಕ್ಕೆ ಏರಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಸ್.ಸಿ. ಮತ್ತು ಎಸ್.ಟಿ. ಸಮುದಾಯದ ಮುಖಂಡರು ಅ.17ರಂದು ಬೃಹತ್ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪ್ರಮುಖರು ಹಾಗೂ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಎಸ್.ಸಿ. ಮತ್ತು ಎಸ್.ಟಿ. ಸಮುದಾಯಗಳ ಕಲ್ಯಾಣದ ವಿವಿಧ ಯೋಜನೆಗಳ ಅನುದಾನ ಮತ್ತು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸುವ ನೆಲೆಯಲ್ಲಿ ಅ.22ರಂದು ಉಡುಪಿಯಲ್ಲಿ ಜಿಲ್ಲಾ ಬಿಜೆಪಿ, ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಜಿಲ್ಲಾ ಎಸ್.ಟಿ. ಮೋರ್ಚಾ ನೇತೃತ್ವದಲ್ಲಿ ‘ಬೃಹತ್ ಎಸ್.ಸಿ., ಎಸ್.ಟಿ. ಸಮುದಾಯಗಳ ಸಮಾವೇಶ’ ನಡೆಯಲಿದೆ ಎಂದು ಅವರು ಹೇಳಿದರು.
ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ರಾಮುಲು ಸಾರಥ್ಯದಲ್ಲಿ ನಡೆಯಲಿರುವ ‘ಬೃಹತ್ ಎಸ್.ಸಿ., ಎಸ್.ಟಿ. ಸಮಾವೇಶ’ದಲ್ಲಿ 2,000ಕ್ಕೂ ಮಿಕ್ಕಿ ಎಸ್.ಸಿ., ಎಸ್.ಟಿ. ಸಮುದಾಯದ ಬಂಧುಗಳು ಪಾಲ್ಗೊಳ್ಳಲಿದ್ದು, ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಇಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹಾಗೂ ಜಿಲ್ಲೆಯ ಶಾಸಕರು ಮತ್ತು ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.
ಜಿಲ್ಲೆಯಾದ್ಯಂತ ಪಕ್ಷದ ಸಂಘಟನಾತ್ಮಕ ಕೆಲಸ ಕಾರ್ಯಗಳು ವೇಗ ಪಡೆದುಕೊಂಡಿದೆ. ಬೂತ್ ಸಶಸ್ತೀಕರಣ ಅಭಿಯಾನದ ಅಂಗವಾಗಿ ಈಗಾಗಲೇ ಬೈಂದೂರು ಮಂಡಲದ ಎಲ್ಲಾ ಶಕ್ತಿಕೇಂದ್ರಗಳ ಸಭೆಯು ಯಶಸ್ವಿಯಾಗಿ ನಡೆದಿದ್ದು, ಕುಂದಾಪುರ ಮಂಡಲದ ಶಕ್ತಿಕೇಂದ್ರಗಳ ಸಭೆಗಳು ಪ್ರಗತಿಯಲ್ಲಿವೆ. ಕಾಪು, ಕಾರ್ಕಳ, ಉಡುಪಿ ನಗರ ಮತ್ತು ಉಡುಪಿ ಗ್ರಾಮಾಂತರ ಮಂಡಲಗಳ ಶಕ್ತಿಕೇಂದ್ರಗಳ ಸಭೆಯು ಸದ್ಯದಲ್ಲೇ ಯೋಜನಾಬದ್ಧವಾಗಿ ನಡೆಯಲಿದ್ದು, ಬಳಿಕ ಜಿಲ್ಲೆಯಾದ್ಯಂತ ಎಲ್ಲಾ 1,111 ಬೂತ್ ಗಳ ಸಭೆ ನಡೆಯಲಿದೆ ಎಂದು ಕುಯಿಲಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ಎ. ನಾಯ್ಕ್, ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಎಸ್.ಟಿ. ಮೋರ್ಚಾ ಪ್ರಭಾರಿ ನಳಿನಿ ಪ್ರದೀಪ್ ರಾವ್, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಎಸ್.ಸಿ. ಮೋರ್ಚಾ ಮತ್ತು ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಸ್ವಾಗತಿಸಿ, ಮನೋಹರ್ ಎಸ್. ಕಲ್ಮಾಡಿ ವಂದಿಸಿದರು.