ಸೆ.2ರ ‘ಪ್ರಧಾನಿ ಮಂಗಳೂರು ಬೇಟಿ’ ಕಾರ್ಯಕ್ರಮ ಯಶಸ್ವಿಗೊಳಿಸಿ: ಸಚಿವ ವಿ.ಸುನಿಲ್ ಕುಮಾರ್

ಉಡುಪಿ: ದ.ಕ. ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಪ್ರಥಮ ಕಾರ್ಯಕ್ರಮ ಸೆ.2ರಂದು ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿದೆ. ಚುನಾವಣಾ ಸಂಬಂಧಿತ ಉಭಯ ಜಿಲ್ಲೆಗಳ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿಯವರು ಭಾಗಿಯಾಗಿದ್ದರೂ, ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಚಾಲನೆ ನೀಡುವ ಸರಕಾರಿ ಕಾರ್ಯಕ್ರಮ ಇದಾಗಿದೆ. ದ.ಕ ಜಿಲ್ಲೆಯಿಂದ ಸುಮಾರು 80 ಸಾವಿರ ಮಂದಿ ಹಾಗೂ ಉಡುಪಿ ಜಿಲ್ಲೆಯಿಂದ ಸುಮಾರು 20 ಸಾವಿರ ಮಂದಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಅವರು ಶುಕ್ರವಾರ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪ್ರಧಾನಿ ಮಂಗಳೂರು ಭೇಟಿ ಕಾರ್ಯಕ್ರಮದ ಪೂರ್ವಬಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಮಂಗಳೂರಿನಲ್ಲಿ ನಡೆಯುವ ಪ್ರಧಾನಿ ಮೋದಿಯವರ ಮೊದಲನೇ ಸರಕಾರಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಲು ಯೋಜನೆಯನ್ನು ರೂಪಿಸಲಾಗಿದೆ. ಸೆ.2ರ ಮಧ್ಯಾಹ್ನ 2.30ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಪ್ರಧಾನಿ ಮೋದಿಯವರು ಸಂಜೆ 4.00 ಗಂಟೆಗೆ ಆಗಮಿಸಲಿದ್ದಾರೆ. ಗೋಲ್ಡ್ ಪಿಂಚ್ ಮೈದಾನದಲ್ಲಿ ಸುಮಾರು 1 ಲಕ್ಷ ಮಂದಿ ಸೇರಲಿದ್ದು, ಪ್ರಧಾನಿಯವರು ಆಗಮಿಸುವ ದಾರಿಯಲ್ಲಿ ಸುಮಾರು 2 ಕೀ.ಮೀ ಉದ್ದಕ್ಕೆ ಸುಮಾರು 15 ಸಾವಿರ ಮಂದಿಯನ್ನು ಸೇರಿಸಿ ರೋಡ್ ಶೋ ಮಾಡಲು ಸಿದ್ಧತೆಗಳನ್ನು ನಡೆಸಲಾಗಿದೆ.

ಈಗಾಗಲೇ ಸರಕಾರಿ ಅಧಿಕಾರಿಗಳ ಮಟ್ಟದ ಸಭೆಗಳನ್ನು ನಡೆಸಲಾಗಿದೆ. ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೇಕಡಾ 50ಕ್ಕೂ ಹೆಚ್ಚು ಮನೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದಾದರೊಂದು ಯೋಜನೆಗಳು ತಲುಪಿರುವ ಹಿನ್ನೆಲೆಯಲ್ಲಿ ಅಂತಹ ಫಲಾನುಭವಿಗಳನ್ನು ಕೂಡಾ ಈ ಸಮಾವೇಶದಲ್ಲಿ ಜೋಡಿಸಿಕೊಳ್ಳಲು ಸಿದ್ಧತೆಗಳನ್ನು ನಡೆಸಲಾಗಿದೆ. ಉಭಯ ಜಿಲ್ಲೆಗಳಲ್ಲಿ ಯೋಜನಾಬದ್ಧ ಪೂರ್ವ ಸಿದ್ದತಾ ಸಭೆಗಳ ಮೂಲಕ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಸೆ.2ರ ಪ್ರಧಾನಿ ಮೋದಿಯವರ ಮಂಗಳೂರು ಐತಿಹಾಸಿಕ ಸಮಾವೇಶದಲ್ಲಿ ಸುಮಾರು 15 ಸಾವಿರ ಮಂದಿ ಮೇಲ್ಪಟ್ಟು ಭಾಗವಹಿಸಲು ಜಿಲ್ಲಾದ್ಯಂತ ಆ.27, 28 ಮತ್ತು 29ರಂದು ಬೈಂದೂರು, ಕುಂದಾಪುರ, ಕಾಪು, ಕಾರ್ಕಳ, ಉಡುಪಿ ಗ್ರಾಮಾಂತರ ಮತ್ತು ಉಡುಪಿ ನಗರ ಮಂಡಲಗಳ ಪೂರ್ವಸಿದ್ಧತಾ ಸಭೆಗಳು ನಡೆಯಲಿವೆ. ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ಮತ್ತು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳ ಪ್ರತೀ ವಾರ್ಡ್ ಗಳ ವ್ಯಾಪ್ತಿಯಿಂದ ಕನಿಷ್ಠ ನೂರು ಮಂದಿ ಹಾಗೂ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಮತ್ತು ಸರಕಾರದ ಯೋಜನೆಗಳ ಫಲಾನುಭವಿಗಳು ಸಕ್ರಿಯವಾಗಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಮಾತನಾಡಿ ಚುನಾವಣಾ ವರ್ಷದಲ್ಲಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಬೇಟಿ ಕಾರ್ಯಕ್ರಮ ಅತ್ಯಂತ ಮಹತ್ವವನ್ನು ಪಡೆದಿದೆ. ಪಕ್ಷದ ಪ್ರಮುಖರು, ಜವಾಬ್ದಾರಿಯುತ ಪದಾಧಿಕಾರಿಗಳು, ಕಾರ್ಯಕರ್ತ ಬಂಧುಗಳು ಮತ್ತು ಎಲ್ಲಾ ಸ್ತರದ ಜನಪ್ರತಿನಿಧಿಗಳು ಒಂದಾಗಿ ಸಂಘಟಿತ ಪ್ರಯತ್ನದ ಮೂಲಕ ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಧಾನಿ ಮೋದಿಯವರ ಮಂಗಳೂರು ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ್, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ವಂದಿಸಿದರು.

ಸಿ.ಸಿ.ಎ.ಆರ್.ಐ. ಗೋವಾ ಇದರ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದಿಂದ ಸನ್ಮಾನ


ಉಡುಪಿ: ಕೇಂದ್ರ ಸರಕಾರದ ಸ್ವಾಮ್ಯದ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ (ಸಿ.ಸಿ.ಎ.ಆರ್.ಐ) ಗೋವಾ ಇದರ ಆಡಳಿತ ಸಮಿತಿಯ ಸದಸ್ಯರಾಗಿ ಭಾರತೀಯ ಕೃಷಿ ಸಂಶೋಧನಾ ಪರಿಷತ್ ನಿಂದ ನಾಮ ನಿರ್ದೇಶನಗೊಂಡಿರುವ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಇವರನ್ನು ಬಿಲ್ಲವಾ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ ಬಂಗೇರ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ನಳಿನಾದೇವಿ, ವಿಜಯಲಕ್ಷ್ಮಿ ಶಿವಕುಮಾರ್, ಸಂಘದ ಮಾಜಿ ಅಧ್ಯಕ್ಷರಾದ ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಆಡಳಿತ ಸಮಿತಿಯ ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಸಮಿತಿ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಶಿವದಾಸ್ ಪಿ., ರಮೇಶ್ ಕೋಟ್ಯಾನ್, ಶಿವಾಜಿ ಸನಿಲ್, ಗುರುರಾಜ್, ಸತೀಶ್ ಜಿ. ಪೂಜಾರಿ, ಭಾಸ್ಕರ್ ಕೋಟ್ಯಾನ್, ವಿನಯ್ ಕುಮಾರ್, ಶಶಿಕಾಂತ್, ನಿತಿನ್ ಕುಮಾರ್, ಮಹಿಳಾ ಘಟಕದ ಸಹ ಸಂಚಾಲಕಿಯರಾದ ಗೋದಾವರಿ ಎಮ್. ಸುವರ್ಣ, ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ಜಯಂತಿ ಹರೀಶ್, ಜತೆ ಕಾರ್ಯದರ್ಶಿಗಳಾದ ಸವಿತಾ ಸಂತೋಷ್, ಪ್ರಭಾ ದಯಾನಂದ್, ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿಯ ಸದಸ್ಯೆಯರಾದ ಅಶ್ವಿನಿ, ಸೌಮ್ಯ, ಲಾವಣ್ಯ, ರೋಶನಿ, ಶಿಫಾಲಿ ಹಾಗೂ ಸಂಘದ ಮತ್ತು ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

ಅಂಬಲಪಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ



ಉಡುಪಿ: ಕ್ಷೇತ್ರದ ಅಭಿವೃದ್ಧಿಗೆ ಸರಕಾರದ ವಿವಿಧ ಮೂಲಗಳಿಂದ ಅನುದಾನ ನೀಡುತ್ತಾ ಬಂದಿರುವ ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ವತಿಯಿಂದ ಅವರ ಗೃಹ ಕಛೇರಿಯಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ದೈವಸ್ಥಾನದ ಹತ್ತು ಸಮಸ್ತರ ಗುರಿಕಾರ ದೇವದಾಸ್, ಆಡಳಿತ ಸಮಿತಿಯ ಕೋಶಾಧಿಕಾರಿ ಭರತ್ ರಾಜ್ ಕೆ.ಎನ್., ಜತೆ ಕಾರ್ಯದರ್ಶಿ ಸುನಿಲ್ ಕುಮಾರ್ ಮತ್ತು ಜತೆ ಕೋಶಾಧಿಕಾರಿ ಶರತ್ ಶೆಟ್ಟಿ ಪಟೇಲರ ಮನೆ ಅಂಬಲಪಾಡಿ ಉಪಸ್ಥಿತರಿದ್ದರು.

ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಕರೆ

ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ

ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಪ್ರಸಕ್ತ ಸನ್ನಿವೇಶದಲ್ಲಿ ‘ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಬಿಜೆಪಿಯ ಯೋಜನೆಯಂತೆ ಮುಂಬರುವ ದಿನಗಳಲ್ಲಿ ಹಲವಾರು ಕಾರ್ಯ ಚಟುವಟಿಕೆಗಳು ನಡೆಯಲಿವೆ. ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮೂರು ತಂಡಗಳ ಪ್ರವಾಸ ರಾಜ್ಯಾದ್ಯಂತ ನಡೆಯಲಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ ತಂಡ ಅತ್ಯಂತ ಕ್ರಿಯಾಶೀಲತೆಯಿಂದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಾಗಿದೆ.

ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ, ಸೆಪ್ಟೆಂಬರ್ 25ರಂದು ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಹಾಗೂ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಣೆಯನ್ನು ಜಿಲ್ಲೆಯಾದ್ಯಂತ ಎಲ್ಲಾ ಮಂಡಲಗಳಲ್ಲಿ ಮತ್ತು ಬೂತ್ ಮಟ್ಟದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಯೋಜನಾಬದ್ಧವಾಗಿ ಆಯೋಜಿಸಬೇಕು ಎಂದರು.

ಬೂತ್ ಸಶಸ್ತೀಕರಣದ ಕೆಲಸ ಕಾರ್ಯಗಳನ್ನು ಆದ್ಯತೆ ಮೇರೆಗೆ ಆಗಸ್ಟ್ 30ರೊಳಗೆ ಪೂರ್ತಿಗೊಳಿಸಬೇಕು. ಜಿಲ್ಲೆಯ ವಿವಿಧ ಮೋರ್ಚಾ, ಮಂಡಲ, ಪ್ರಕೋಷ್ಠಗಳ ಉಸ್ತುವಾರಿಗಳು ಹಾಗೂ ಮಹಾ ಶಕ್ತಿಕೇಂದ್ರಗಳ ಪ್ರಭಾರಿಗಳು ಪದಾಧಿಕಾರಿಗಳ ಸಹಕಾರದೊಂದಿಗೆ ಪ್ರತೀ ಮಾಸಿಕ ಸಭೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಿ ವರದಿಗಳನ್ನು ಸಲ್ಲಿಸುವ ಜೊತೆಗೆ ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ಸಕ್ರಿಯರಾಗಬೇಕು ಎಂದರು.

ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಗೆ 25 ವರ್ಷಗಳು ತುಂಬುವ ಹಿನ್ನೆಲೆಯಲ್ಲಿ ಆಗಸ್ಟ್ 25ರಂದು ಚಾಲನೆಗೊಳ್ಳಲಿರುವ ‘ಉಡುಪಿ ಜಿಲ್ಲಾ ರಜತೋತ್ಸವ’ ಆಚರಣೆಯಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿಯ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಪೂರ್ಣ ಪ್ರಮಾಣದಲ್ಲಿ ಭಾಗವಹಿಸಿ ಜನವರಿ 25ರ ತನಕ ನಡೆಯುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.

ಶಾಸಕ ಕೆ.ರಘುಪತಿ ಭಟ್ ಮಾತನಾಡಿ ಉಡುಪಿ ಜಿಲ್ಲಾ ‘ರಜತೋತ್ಸವ ಆಚರಣೆ’ಯು ಆಗಸ್ಟ್ 25ರಿಂದ ಜನವರಿ 25ರ ವರೆಗೆ ನಡೆಯಲಿದೆ. ಇದರ ಅಂಗವಾಗಿ ಆಗಸ್ಟ್ 24ರಿಂದ ಸಾವಿರಾರು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಐತಿಹಾಸಿಕವಾಗಿ ನಡೆಯಲಿರುವ ‘ಅಗ್ನಿಪಥ್ ದೌಢ್’ ಹಾಗೂ ಆಗಸ್ಟ್ 25 ರಂದು ಮಧ್ಯಾಹ್ನ 2.30ಕ್ಕೆ ಉಡುಪಿಯ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮೈದಾನದವರೆಗೆ ನಡೆಯಲಿರುವ ‘ಪುರ ಮೆರವಣಿಗೆ’ ಹಾಗೂ ‘ಉಡುಪಿ ಜಿಲ್ಲಾ ರಜತೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಎಲ್ಲ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತ ಬಂಧುಗಳು, ಪಕ್ಷದ ಹಿತೈಷಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಬೂತ್ ಸಶಸ್ತೀಕರಣ ಮತ್ತು ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ಹಾಗೂ ಮನೋಹರ್ ಎಸ್. ಕಲ್ಮಾಡಿ ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮತ್ತು ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಂಗ್ರೆಸ್ ನವರದು ಬಯಲು ನಾಟಕ : ಆರೋಗ್ಯ ಸಚಿವ ಡಾ! ಕೆ.ಸುಧಾಕರ್ ಲೇವಡಿ 75 ವರ್ಷ ರಾಷ್ಟ್ರಧ್ವಜವನ್ನೇ ಮರೆತಿದ್ದವರು ಈಗ ಬೀದಿ ಬೀದಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ


ಚಿಕ್ಕಬಳ್ಳಾಪುರ : ಕಳೆದ 75 ವರ್ಷದಲ್ಲಿ ಭಾವುಟಗಳನ್ನೇ ಮರೆತಿದ್ದವರು, ರಾಷ್ಟ್ರಧ್ವಜವನ್ನೇ ಮರೆತಿದ್ದವರು ಪ್ರಧಾನಿಯವರು ಹರ್ ಘರ್ ತಿರಂಗ ಘೋಷಣೆ ನಂತರ ಬೆಂಗಳೂರಿನ ಬೀದಿಗಳಲ್ಲಿ ಧ್ವಜ ಹಿಡಿದು ಪಾದಯಾತ್ರೆ ಮಾಡಿರುವುದು ಬಯಲು ನಾಟಕವಲ್ಲವೇ ಎಂದು ಆರೋಗ್ಯ ಸಚಿವ ಡಾ! ಕೆ. ಸುಧಾಕರ್ ಪ್ರಶ್ನಿಸಿದ್ದಾರೆ.

ಹರ್ ಘರ್ ತಿರಂಗ ಎಂಬುದು ನಾಟಕ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಯಲು ನಾಟಕ ಮಾಡುತ್ತಿರುವ ಕಾಂಗ್ರೆಸ್ ಗೆ ಕಳೆದ 75 ವರ್ಷದಲ್ಲಿ ರಾಷ್ಟ್ರಧ್ವಜ ನೆನಪಿತ್ತೇ? ಈಗ ಪ್ರಧಾನಿಯವರ ಘೋಷಣೆಯ ನಂತರ ಬೀದಿ ಬೀದಿಗಳಲ್ಲಿ ಧ್ವಜ ಹಿಡಿದು ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಜನೋತ್ಸವ ಅಲ್ಲ, ಭ್ರಷ್ಟೋತ್ಸವ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅದನ್ನು ಜನರು ಹೇಳಬೇಕಿದೆ. 2023ರ ಚುನಾವಣೆಯಲ್ಲಿ ಜನರು ಅದನ್ನು ಹೇಳುತ್ತಾರೆ. ಭ್ರಷ್ಟರಾಗಿದ್ದರೆ 2018ರಲ್ಲಿ ಯಾಕೆ ಸೋಲುಂಡರು ಎಂಬುದನ್ನು ಪರಾಮರ್ಶೆ ಮಾಡಿಕೊಳ್ಳಲಿ, ಅದೂ ಭ್ರಷ್ಟಾಚಾರ ಸರ್ಕಾರ ಎನ್ನಬಹುದಿತ್ತಲ್ಲ ಎಂದು ಪ್ರಶ್ನಿಸಿದರು.

ಆರೋಪ ಮಾಡುವಾಗ ನಿಖರವಾದ ವಿಷಯ ಇಟ್ಟಿಕೊಂಡು ಮಾತನಾಡಬೇಕು, ಕಳೆದ ಮೂರು ವರ್ಷದಲ್ಲಿ ಸರ್ಕಾರದ ಸಾಧನೆಗಳು ಮತ್ತು ಜನಪರ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ಮುಟ್ಟಿಸಲು ಜನೋತ್ಸವ ಆಯೋಜಿಸಲಾಗಿದೆ. ಸರ್ಕಾರದ ಸಾಧನೆಗಳ ರಿಪೋರ್ಟ್ ಕಾರ್ಡ್ ಜನರ ಮುಂದೆ ಇಡುತ್ತಿದ್ದೇವೆ, ಯಾರದೋ ವೈಯಕ್ತಿಕ ಉತ್ಸವ ಕಂಡು ಮಾಡುತ್ತಿರುವುದಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಮುಂಚೆಯೇ ಕಾರ್ಯಕ್ರಮ ಯೋಜಿಸಿದ್ದೆವು, ಆದರೆ ಕಾರಣಾಂತರಗಳಿಂದ ಮುಂದೂಡಲಾಗಿತ್ತು, ಈಗ ಕಾಲ ಕೂಡಿ ಬಂದಿದೆ ಹಾಗಾಗಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಮೊದಲ ಕಾರ್ಯಕ್ರಮ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಇನ್ನೂ ನಾಲ್ಕೆದು ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಸಂವಿಧಾನಕ್ಕೆ ಬಿಜೆಪಿಯಿಂದ ಅಪಾಯ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಕಳೆದ 8 ವರ್ಷಗಳಿಂದ ನರೇಂದ್ರಮೋದಿ ಅವರು ಪ್ರಧಾನಿಯಾಗಿದ್ದಾರೆ, ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು 5 ವರ್ಷ ಪ್ರಧಾನಿಯಾಗಿದ್ದರು. ಒಟ್ಟು 13 ವರ್ಷದಲ್ಲಿ ಸಂವಿಧಾನಕ್ಕೆ ಆಗಿರುವ ಧಕ್ಕೆಯಾದರೂ ಏನು ಎಂದು ಸಚಿವರು ಪ್ರಶ್ನಿಸಿದರು.
ಸಂವಿಧಾನದಲ್ಲಿ ಯಾವ ಅಪಚಾರವಾಗಿದೆ ಎಂಬುದನ್ನು ತೋರಿಸಿ ಮಾತನಾಡಬೇಕಿದೆ. ಅದನ್ನು ಬಿಟ್ಟು ನಿಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜನರಿಗೆ ಮಂಕು ಬೂದಿ ಎರಚುವ ಕೆಲಸ ಮಾಡಬೇಡಿ ಎಂದು ನೇರವಾಗಿ ವಿಪಕ್ಷ ನಾಯಕರಿಗೆ ಸಚಿವರು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ತಮ್ಮ ನಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ,ಕೆ. ಸುಧಾಕರ್‌

ಆರ್‌ಎಸ್‌ಎಸ್‌ ಮತ್ತು ಸಾವರ್ಕರ್‌ ಬಗ್ಗೆ ಮಾತನಾಡುವುದು ಕಾಂಗ್ರೆಸ್‌ ದೌರ್ಬಲ್ಯ


ಬೆಂಗಳೂರು, ಭಾನುವಾರ, ಆಗಸ್ಟ್‌ 21: ಸತ್ಯಕ್ಕೆ ಎರಡು ಮುಖಗಳಿರುತ್ತವೆ. ಈಗ ಕಾಂಗ್ರೆಸ್‌ ಕಾರ್ಯಕರ್ತರೇ ಅವರ ನಾಯಕರ ಮೇಲೆ ಮುಗಿ ಬಿದ್ದಿದ್ದಾರೆ. *ಕೈ ಪಕ್ಷದ ನಾಯಕರು ಸಮಾಜದಲ್ಲಿ ಹೇಗೆ ಇರಬೇಕು ಅನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು* ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಸಂಖ್ಯಾತರ ಬಗ್ಗೆ ಕಾಂಗ್ರೆಸ್‌ ನಾಯಕರು ಲಘುವಾಗಿ ಮಾತನಾಡಿರುವುದು ಕಾರ್ಯಕರ್ತರಿಗೆ ಕೋಪ ತರಿಸಿದೆ. ಭಾವೋದ್ವೇಗಕ್ಕೆ ಒಳಗಾಗಿ ಮೊಟ್ಟೆ ಎಸೆದಿದ್ದು ಖಂಡನಾರ್ಹ. ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರೇ ಈ ಕೃತ್ಯ ಮಾಡಿದ್ದಾರೆ. ಕಾಂಗ್ರೆಸ್‌ ನಾಯಕರು ಈಗಲಾದರೂ ಸಮಾಜದಲ್ಲಿ ಹೇಗೆ ನಡೆದುಕೊಳ್ಳಬೇಕು ಅನ್ನುವುದನ್ನು ಕಲಿತುಕೊಳ್ಳಲಿ ಎಂದು ಹೇಳಿದ್ದಾರೆ, ವಿಪಕ್ಷ ನಾಯಕ ಕಾರಿಗೆ *ಮೊಟ್ಟೆ ಎಸೆದವರ ವಿರುದ್ಧ ಸರ್ಕಾರ ಸರ್ಕಾರ ಕ್ರಮ ತೆಗೆದುಕೊಂಡಿದೆ. ಅದನ್ನು ಅಲ್ಲೇ ಬಿಡಬೇಕು. ಆದರೆ ಅದೇ ರಾಜಕಾರಣವನ್ನು ಮುಂದಕ್ಕೆ ತೆಗೆದುಕೊಂಡು ಹೋಗುವುದು ಶೋಭೆ ತರುವುದಿಲ್ಲ. ಕಾಂಗ್ರೆಸ್‌ ಕಾರ್ಯಕರ್ತನೆ ಈ ಕೆಲಸ ಮಾಡಿರುವುದರಿಂದ ಸಿದ್ದರಾಮಯ್ಯ ಹೇಳಿಕೆ ಏನಿರುತ್ತೆ ಅನ್ನುವ ಕುತೂಹಲವಿದೆ ಎಂದು ತಿಳಿಸಿದ್ದಾರೆ.


ಕಾಂಗ್ರೆಸ್‌ಗೆ ಆರ್‌ಎಸ್‌ಎಸ್‌ ಮತ್ತು ವೀರ್‌ ಸಾವರ್ಕರ್‌ ಬಗ್ಗೆ ಮಾತನಾಡುವುದು ದೌರ್ಬಲ್ಯ. ಇದು ಅವರ ಅಜ್ಞಾನವನ್ನು ತಿಳಿಸುತ್ತದೆ. ಅವರು ಬದಲಾಗದಿದ್ದರೆ ಜನರು ಬದಲಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿ 3 ವರ್ಷದ ಆಡಳಿತದ ಸಂಭ್ರಮವನ್ನು ಹಂಚಿಕೊಳ್ಳಲು ಸೆಪ್ಟಂಬರ್‌ 8 ರಂದು ಜನೋತ್ಸವ ಕಾರ್ಯಕ್ರಮ ನಡೆಸಲಾಗುತ್ತದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಜೊತೆಗೆ ಹಲವು ರಾಷ್ಟ್ರೀಯ ನಾಯಕರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳು, ಎಲ್ಲಾ ನಾಯಕರು, ಸಚಿವರು,ಶಾಸಕರು, ಕಾರ್ಯಕರ್ತರು ಇದರಲ್ಲಿ ಭಾಗಿಯಾಗಲಿದ್ದಾರೆ. 3 ಜಿಲ್ಲೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು 2 ರಿಂದ 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

ಜನೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳು ಕೂಡ ಭಾಗಿಯಾಗಲಿದ್ದಾರೆ. ಸರ್ಕಾರದ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಅಭಿನಂದಿಸಲು ಬರಲಿದ್ದಾರೆ ಎಂದು ತಿಳಿಸಿದ್ದಾರೆ.

ಸಿದ್ದು ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಮೈಯೆಲ್ಲಾ ಹಿಂದೂ ವಿರೋಧಿ ವಿಷ ತುಂಬಿಕೊಂಡಿರುವ ಮಾಜಿ ಸಿ.ಎಂ. ಸಿದ್ದರಾಮಯ್ಯನವರ ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಅಪ್ಪಟ ದೇಶ ಭಕ್ತ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಹೆಸರೆತ್ತಲೂ ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸಮಾಜ ಒಡೆಯುವ ದುಷ್ಕೃತ್ಯದಲ್ಲಿ ತೊಡಗಿರುವುದು ಜಗಜ್ಜಾಹೀರಾಗಿದೆ.

‘ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಬ್ಯಾನರ್ ಯಾಕೆ ಹಾಕಿದ್ದೀರಿ’ ಎಂದಿರುವ ಸಿದ್ದುಗೆ ಹಿಂದೂ ಏರಿಯಾಕ್ಕೆ ಹೋಗುವ ನೈತಿಕತೆ ಇದೆಯೇ? ‘ವಸುಧೈವ ಕುಟುಂಬಕಂ’ ಎಂಬ ತತ್ವದಲ್ಲಿ ನಂಬಿಕೆ ಇರಿಸಿರುವ ಬಿಜೆಪಿ ಇಡೀ ಭಾರತವನ್ನೇ ಒಂದು ಕುಟುಂಬವೆಂದು ಭಾವಿಸುತ್ತದೆ. ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬ ಚಿಂತನೆಯೊಂದಿಗೆ ಎಲ್ಲಾ ವರ್ಗದ ಜನತೆಯ ಅಭ್ಯುದಯಕ್ಕಾಗಿ ವಿವಿಧ ಜನಪರ ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ಧಿಪರ ಆಡಳಿತದೊಂದಿಗೆ ಶ್ರಮಿಸುತ್ತಿದೆ. ಸದಾ ಒಂದೇ ವರ್ಗದ ಓಲೈಕೆಯಲ್ಲಿ ತೊಡಗಿರುವ ಸಿದ್ದರಾಮಯ್ಯನವರಿಗೆ ಇದನ್ನೆಲ್ಲಾ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ರಾಜ್ಯದೆಲ್ಲೆಡೆ ವಿಪರೀತ ನೆರೆ ಹಾವಳಿಯಿಂದ ಪ್ರಕೃತಿ ವಿಕೋಪ ಉಂಟಾದ ಸಂದರ್ಭದಲ್ಲಿ ತನ್ನ 74ನೇ ವಯಸ್ಸಿನಲ್ಲಿ ರಾಜಕೀಯ ಕಾರಣಕ್ಕಾಗಿಯೇ 75ನೇ ಹುಟ್ಟು ಹಬ್ಬ ಎಂದು ಆಚರಿಸಿ ‘ಸಿದ್ದರಾಮೋತ್ಸವ’ದ ಗುಂಗಿನಲ್ಲಿ ತೇಲಾಡುತ್ತಿದ್ದ ಸಿದ್ದರಾಮಯ್ಯ, ಎಲ್ಲಾ ಮುಗಿದ ಮೇಲೆ ನಾಟಕೀಯವಾಗಿ ಮಳೆ ಹಾನಿ ವೀಕ್ಷಣೆಗೆಂದು ಕೊಡಗಿಗೆ ತೆರಳಿರುವುದು ಹಾಗೂ ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಂದಲೇ ತನ್ನ ಕಾರಿಗೆ ಮೊಟ್ಟೆ ಹೊಡೆಸಿಕೊಂಡು ಬಿಜೆಪಿ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿರುವುದನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತನ್ನ ಪಕ್ಷದ ಕಾರ್ಯಕರ್ತನ ವಿರುದ್ಧವೇ ಆ.26ರಂದು ಕೊಡಗಿಗೆ ದಂಡೆತ್ತಿ ಹೋಗುವ ವಿಚಾರ ಸಿದ್ದು ವಿಚಲಿತ ಮನಸ್ಥಿತಿಯನ್ನು ಸಾಬೀತುಪಡಿಸಿದೆ. ಅದೇ ದಿನ ಕೊಡಗು ಬಿಜೆಪಿ, ಶಾಸಕರ ನೇತೃತ್ವದಲ್ಲಿ ಲಕ್ಷಾಂತರ ಕೊಡವರನ್ನು ಸೇರಿಸಿ ‘ಜನ ಜಾಗೃತಿ ಸಮಾವೇಶ’ ಹಮ್ಮಿಕೊಂಡಿರುವುದು ಸಿದ್ದರಾಮಯ್ಯ ತಂತ್ರಗಾರಿಕೆಯನ್ನು ತಲೆಕೆಳಗಾಗಿಸಿದೆ.

ಈ ಎಲ್ಲಾ ಬೆಳವಣಿಗೆಗಳು ಸಿದ್ದು ಮಹತ್ವಾಕಾಂಕ್ಷೆಯ ‘ಸಿದ್ದರಾಮೋತ್ಸವ’ದ ಉತ್ಸಾಹವನ್ನು ನೀರಿನಲ್ಲಿ ಹೋಮ ಇಟ್ಟಂತೆ ಮಾಡಿರುವುದಂತೂ ಸತ್ಯ. ‘ಸಂವಿಧಾನ ಅಪಾಯದಲ್ಲಿದೆ’ ಎಂದು ಒದರುತ್ತಾ ತಾನೊಬ್ಬನೇ ‘ಸಂವಿಧಾನದ ಮಹಾನ್ ರಕ್ಷಕ’ ಎಂದು ಪೋಸ್ ಕೊಡುವ ಸಿದ್ದರಾಮಯ್ಯ, ಪ್ರಜಾಸತ್ತಾತ್ಮಕ ಪ್ರತಿಭಟನೆಗೆ ಅವಕಾಶ ನೀಡಿರುವ ಸಂವಿಧಾನವನ್ನೇ ವಿರೋಧಿಸಿ, ‘ವಿನಾಶ ಕಾಲೇ ವಿಪರೀತ ಬುದ್ಧಿ’ ಎಂಬಂತೆ ವರ್ತಿಸುತ್ತಿರುವುದು ವಾಸ್ತವ.

‘ಮುಸ್ಲಿಂ ಏರಿಯಾ’ ವ್ಯಾಖ್ಯಾನವನ್ನು ಹುಟ್ಟುಹಾಕಿರುವ ಸಿದ್ದು ‘ಪ್ರತ್ಯೇಕತೆಯ ಮಾನಸಿಕತೆ’ ನಾಡಿನ ಸೌಹಾರ್ದತೆಗೆ ತುಂಬಾ ಅಪಾಯಕಾರಿ ಎನಿಸಿದ್ದು, ಇಂತಹಾ ಏರಿಯಾ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವ ಸಂದರ್ಭದಲ್ಲೇ ಅಧಿಕಾರದ ಹಪಾಹಪಿಗಳ ಸಂಚಿನಿಂದ ದೇಶವನ್ನು ತುಂಡರಿಸುವ ಮೂಲಕ ಸೃಷ್ಟಿಯಾಗಿರುವುದನ್ನು ಸಿದ್ದರಾಮಯ್ಯ ಮರೆತಿರುವುದು ದುರದೃಷ್ಟಕರ.

ಸಮರ್ಥ ನಾಯಕತ್ವದ ಕೊರತೆಯಿಂದ ಕಂಗೆಟ್ಟಿರುವ ಕಾಂಗ್ರೆಸ್ ಆಂತರಿಕ ಬೇಗುದಿಯಿಂದ ಬೆಂದಿದ್ದು, ಚುನಾವಣೆ ಗೆಲ್ಲುವ ಮೊದಲೇ ಮುಖ್ಯಮಂತ್ರಿ ಪದವಿಗಾಗಿ ನಡೆಯುತ್ತಿರುವ ಪೈಪೋಟಿ
‘ಕೂಸು ಹುಟ್ಟುವ ಮುನ್ನ ಕುಲಾವಿ’ ಹೊಲಿಸಿದಂತಿದೆ. ಮಾಸ್ ಲೀಡರ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ನೀಡಿರುವ ಸ್ಥಾನಮಾನ, ಹೊಸ ಚೈತನ್ಯದಿಂದ ರಾಜಾಹುಲಿಯ ಪುನರಾಗಮನ ಸಿದ್ದರಾಮಯ್ಯ, ಡಿಕೆಶಿ ಸಹಿತ ವಿರೋಧ ಪಕ್ಷಗಳ ನಾಯಕರ ನಿದ್ದೆಗೆಡಿಸಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮತ್ತು ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಂಘಟಿತ ಪ್ರಯತ್ನದ ಮೂಲಕ 150 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಮಗದೊಮ್ಮೆ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ನಡೆದ ದಲಿತ ಬಾಲಕನ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆಯಾಗಲಿ: ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಆಗ್ರಹ

ಉಡುಪಿ: ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ. ಜುಲೈ 25ರಂದು ಶಿಕ್ಷಕನ ಮಡಕೆಯ ನೀರನ್ನು ಮುಟ್ಟಿದ ಕಾರಣಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಹುಡುಗನಿಗೆ ಹೊಡೆಯುತ್ತಾರೆ. ಬಾಲಕನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಮತ್ತು ಆ ಬಳಿಕ ಉದಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗುತ್ತದೆ. ಒಂದು ತಿಂಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ 9 ವರ್ಷದ ಬಾಲಕ ಸಾವಿಗೀಡಾಗುತ್ತಾನೆ. ಬಾಲಕನ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಆಗ್ರಹಿಸುತ್ತದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಹೇಳಿದರು.

ಅವರು ರಾಜಸ್ಥಾನದಲ್ಲಿ ನಡೆದ ದಲಿತ ಬಾಲಕನ ಹತ್ಯೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ ಅಧ್ಯಕ್ಷತೆಯಲ್ಲಿ ಗುರುವಾರ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ರಾಜಸ್ಥಾನದ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಬಾಲಕನ ಮನೆಯವರು ಪೊಲೀಸ್ ಠಾಣೆಗೆ ಹೋದಾಗ ಎಫ್.ಐ.ಆರ್ ದಾಖಲಿಸಲೂ ಸಿದ್ದರಿಲ್ಲದ ನಿರ್ಲಜ್ಜ ಸರ್ಕಾರದ ಆಡಳಿತವಿದ್ದರೆ ಅದು ರಾಜಸ್ಥಾನದ ಕಾಂಗ್ರೆಸ್ ಸರ್ಕಾರ. ದಲಿತರ ಬಗ್ಗೆ ದೊಡ್ಡ ಮಾತುಗಳನ್ನಾಡುವ ಕಾಂಗ್ರೆಸ್ ನಾಯಕರು ಈಗ ಎಲ್ಲಿದ್ದಾರೆ. ಶಾಲಾ ಬಾಲಕ ಶಿಕ್ಷಕನ ಮಡಕೆಯ ನೀರನ್ನು ಮುಟ್ಟಿದ ಕಾರಣಕ್ಕೆ ಬಾಲಕನ ಕೊಲೆಯಾಗುತ್ತದೆಯೆಂದಾದರೆ ನಾಗರಿಕ ಸಮಾಜ ಚಿಂತನೆ ಮಾಡಬೇಕಾಗಿದೆ. ಇವತ್ತು ಎಂತಹ ಸ್ಥಿತಿಯಲ್ಲಿ ನಾವಿದ್ದೇವೆ ಎನ್ನುವುದನ್ನು ಅಲೋಚನೆ ಮಾಡಬೇಕಾಗಿದೆ.

ಇದು ರಾಜಸ್ಥಾನದಲ್ಲಿ ನಡೆದ ಮೊದಲ ಘಟನೆಯೇನಲ್ಲ, ಈ ಹಿಂದೆ ಕನಯ್ಯಾಲಾಲ್ ಪ್ರಕರಣ ಕೂಡಾ ನಿರ್ಲಜ್ಜ ಸರ್ಕಾರದ ಆಡಳಿತಾವಧಿಯಲ್ಲಿಯೆ ನಡೆದ ಘಟನೆ. ರಾಜಸ್ಥಾನದಲ್ಲಿರುವುದು ಜನ ವಿರೋಧಿ ಸರ್ಕಾರ. ದಲಿತ ಬಾಲಕನಿಗೆ ಆಗಿರುವ ಅನ್ಯಾಯ ದೇಶವೇ ತಲೆ ತಗ್ಗಿಸಬೇಕಾದ ವಿಚಾರ ಎಂದರು.

ಬಿಜೆಪಿ ರಾಜ್ಯ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ಪ್ರಸ್ತಾವಿಕವಾಗಿ ಮಾತನಾಡಿ ಶಿಕ್ಷಕನು ಬಾಲಕನಿಗೆ ವಿದ್ಯೆ ನೀಡುವ ಬದಲಿಗೆ ಅಮಾನವೀಯ ಸಾವು ನೀಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ರಾಜಸ್ಥಾನದ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಈ ಘಟನೆಯ ಬಗ್ಗೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾದೀತು. ಅಸಂಬದ್ಧ ವಿಚಾರಗಳ ಬಗ್ಗೆ ದಿನಂಪ್ರತಿ ಮಾತನಾಡುವ ಕಾಂಗ್ರೆಸ್ ಮುಖಂಡರು ಇಂತಹ ಕುಕೃತ್ಯದ ಬಗ್ಗೆ ಚಕಾರವೆತ್ತದಿರುವುದು ಖಂಡನೀಯ. ಬಿಜೆಪಿ ಸದಾ ದಲಿತರ ಶ್ರೇಯೋಭಿವೃದ್ಧಿ ಪರ ಚಿಂತನೆ ಹೊಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನದ ಸ್ಮರಣೀಯ ಸ್ಥಳಗಳನ್ನು ಪಂಚತೀರ್ಥಗಳ ಹೆಸರಲ್ಲಿ ಅಭಿವೃದ್ಧಿಪಡಿದಿರುವುದು ಇದಕ್ಕೆ ಸಾಕ್ಷಿಯಾಗಿದೆ. ಸದ್ರಿ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿ ಆರೋಪಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ರಾಜಸ್ಥಾನ ಸರಕಾರ ಮತ್ತು ಕೇಂದ್ರ ಸರಕಾರವನ್ನು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಗೀತಾಂಜಲಿ ಎಮ್. ಸುವರ್ಣ ಮತ್ತು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ ಘಟನೆಯನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ ಹಾಗೂ ಜಿಲ್ಲಾ ಮತ್ತು ಮಂಡಲ ಎಸ್.ಸಿ ಮೋರ್ಚಾ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಡಿ.ಬಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ಸದಾನಂದ ಕೈಪುಂಜಾಲು ವಂದಿಸಿದರು.

ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಯು ಸಂಘದ ವಠಾರದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸಿಕೊಂಡು, 75ನೇ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ತಿಳಿಸಿದರು.

ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಅಸಂಖ್ಯಾತ ದೇಶಭಕ್ತ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮ, ತ್ಯಾಗ ಮತ್ತು ಬಲಿದಾನದಿಂದ ದೊರೆತಿರುವ ಸ್ವಾತಂತ್ರ್ಯದ ಮಹತ್ವವನ್ನು ಅರಿಯುವ ಜೊತೆಗೆ ದೇಶ ರಕ್ಷಣೆಯಲ್ಲಿ ತೊಡಗಿರುವ ಯೋಧರನ್ನು ಸ್ಮರಿಸಿಕೊಂಡು, ದೇಶ ಭಕ್ತಿಯನ್ನು ಜಾಗೃತಗೊಳಿಸಿ ದೇಶದ ಏಕತೆ, ಅಖಂಡತೆ ಮತ್ತು ಅಭಿವೃದ್ಧಿಗೆ ನಮ್ಮ ಅಳಿಲು ಸೇವೆ ಸಲ್ಲಿಸೋಣ ಎಂದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಸಂಘದ ಮಾಜಿ ಅಧ್ಯಕ್ಷ ಕೆ.ಮಂಜಪ್ಪ ಸುವರ್ಣ, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಘದ ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ರಮೇಶ್ ಕೋಟ್ಯಾನ್, ಭಾಸ್ಕರ ಕೋಟ್ಯಾನ್, ವಿನಯ್ ಕುಮಾರ್, ನಿತಿನ್ ಕುಮಾರ್, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ, ಮಂದಿರದ ಸಹ ಅರ್ಚಕ ಜೀವನ್, ಮಹಿಳಾ ಘಟಕದ ಸಹ ಸಂಚಾಲಕಿಯರಾದ ಗೋದಾವರಿ ಎಮ್. ಸುವರ್ಣ, ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ಜಯಂತಿ ಹರೀಶ್, ಜತೆ ಕಾರ್ಯದರ್ಶಿ ಸವಿತಾ ಸಂತೋಷ್, ಸಂಘದ ಸದಸ್ಯರು ಮತ್ತು ಶ್ರೀ ಗುರು ಕುಣಿತ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಸಂಘದ ಸದಸ್ಯ ಸುನಿಲ್ ಕುಮಾರ್ ಮತ್ತು ಅಶ್ವಿನಿ ದಂಪತಿಗಳಿಂದ ದೇಶ ಭಕ್ತಿ ಗೀತೆಗಳ ಕಾರ್ಯಕ್ರಮ ನಡೆಯಿತು.

ಉಡುಪಿಯಲ್ಲಿ ಸಾವರ್ಕರ್ ಬ್ಯಾನರ್ ತೆರವುಗೊಳಿಸುವ ಎಸ್ಡಿಪಿಐ ಹುನ್ನಾರದ ಪುಂಡಾಟ ನಿಲ್ಲಿಸದಿದ್ದರೆ ತಕ್ಕ ಶಾಸ್ತಿ : ಕುಯಿಲಾಡಿ

ಉಡುಪಿಯ ಬ್ರಹ್ಮಗಿರಿ ವೃತ್ತದ ಬಳಿ ದೇಶ ಭಕ್ತರು ಅಳವಡಿಸಿರುವ ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಾವರ್ಕರ್ ರವರ ಬ್ಯಾನರನ್ನು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನ ಪಾಪದ ಕೂಸು ಎಸ್ಡಿಪಿಐ ಸೇರಿ ತೆರವುಗೊಳಿಸುವ ಹುನ್ನಾರದ ಬಗ್ಗೆ ತಿಳಿದುಬಂದಿದೆ.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಎರಡೆರಡು ಬಾರಿ ಕರಿ ನೀರಿನ ಶಿಕ್ಷೆ ಅನುಭವಿಸಿ ಛಲ ಬಿಡದ ಹೋರಾಟದಿಂದ ದೇಶಕ್ಕಾಗಿ ಹುತಾತ್ಮರಾದ ಅಪ್ಪಟ ದೇಶ ಭಕ್ತ ಸಾವರ್ಕರ್ ರವರ ಹೆಸರೆತ್ತಲೂ ಕಾಂಗ್ರೆಸ್ ಗೆ ಯೋಗ್ಯತೆ ಇಲ್ಲ. ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದ ದಕ್ಕಿರುವ ಸ್ವಾತಂತ್ರ್ಯವನ್ನು ಸುದೀರ್ಘ ಅವಧಿಗೆ ದುರಾಡಳಿತದ ಮೂಲಕ ಬೇಕಾಬಿಟ್ಟಿ ದುರುಪಯೋಗಪಡಿಸಿ ಕೊಂಡಿರುವ ಕಾಂಗ್ರೆಸ್ ಗೆ ವಿನಾಯಕ ದಾಮೋದರ್ ಸಾವರ್ಕರ್ ರಂತಹ ಅಪ್ಪಟ ದೇಶ ಭಕ್ತರ ತಾಕತ್ತು ತಿಳಿದುಕೊಳ್ಳುವ ಯೋಗ್ಯತೆ ಇಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಸಮಾಜದಲ್ಲಿ ಸದಾ ಗೊಂದಲದ ವಾತಾವರಣ ಸೃಷ್ಟಿಸಲು ದೇಶವಿರೋಧಿ ಮತಾಂಧ ಸಂಘಟನೆಯಾದ ಎಸ್ಡಿಪಿಐ ಯೊಂದಿಗೆ ಶಾಮೀಲಾಗಿರುವ ಕಾಂಗ್ರೆಸ್ ನ ದೇಶ ವಿದ್ರೋಹಿ ಕೃತ್ಯಗಳು ಈಗಾಗಲೇ ಹಲವಾರು ಸನ್ನಿವೇಶಗಳಲ್ಲಿ ಜಗಜ್ಜಾಹೀರಾಗಿದೆ.

ಕಾಂಗ್ರೆಸ್ ನ ತಾಳಕ್ಕೆ ಕುಣಿಯುವ ಎಸ್ಡಿಪಿಐ ಇದೀಗ ಸಮಾಜದಲ್ಲಿ ಅಶಾಂತಿ ಮೂಡಿಸುವ ಸಲುವಾಗಿ ಉಡುಪಿಯ ಬ್ರಹ್ಮಗಿರಿಯಲ್ಲಿ ಸಾವರ್ಕರ್ ಬ್ಯಾನರ್ ತೆರವುಗೊಳಿಸುವ ಕುಕೃತ್ಯದಲ್ಲಿ ತೊಡಗಿ ಪುಂಡಾಟ ನಡೆಸಲು ಯತ್ನಿಸಿದರೆ ತಕ್ಕ ಶಾಸ್ತಿ ಎದುರಿಸಬೇಕಾದೀತು.

ದೇಶ ಭಕ್ತರ ಅಪಮಾನವನ್ನು ಬಿಜೆಪಿ ಎಂದಿಗೂ ಸಹಿಸದು. ಸ್ವಾತಂತ್ರ್ಯ ಸೇನಾನಿಗಳ ಅವಹೇಳನಕ್ಕೆ ಯಾವ ಬೆಲೆ ತೆತ್ತಾದರೂ ತಕ್ಕ ಉತ್ತರ ನೀಡಲು ಬಿಜೆಪಿ ಕಾರ್ಯಕರ್ತರು ಸದಾ ಸನ್ನದ್ಧರಾಗಿದ್ದಾರೆ. ಅಗತ್ಯ ಬಿದ್ದರೆ ‘ಒಂದು ಬ್ಯಾನರ್ ಬದಲಿಗೆ ನೂರಾರು ಬ್ಯಾನರ್ ಅಭಿಯಾನ’ಕ್ಕೆ ಜಿಲ್ಲಾ ಬಿಜೆಪಿ ಚಾಲನೆ ನೀಡಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Design a site like this with WordPress.com
Get started