ಎಮ್.ಇ.ಐ. ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ಯವರಿಗೆ ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ

ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರು ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರನ್ನು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೇಟಿಯಾದರು. ಉತ್ತಮ ಕೆಲಸ ಕಾರ್ಯಗಳನ್ನು ಮಾಡುವಂತೆ ಸೂಚಿಸಿದ ಶ್ರೀಪಾದರು ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಸಮಿತಿ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ರಾಮರಾಜ್ ಕಿದಿಯೂರು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜಾ ಉಪಸ್ಥಿತರಿದ್ದರು.

ಅಟಲ್ ಜೀ ಮೇರು ವ್ಯಕ್ತಿತ್ವ, ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಕುಯಿಲಾಡಿ

ಉಡುಪಿ: ಶ್ರೇಷ್ಠ ಸಂಸದೀಯ ಪಟು, ಕವಿ ಹೃದಯದ, ಮೇರು ವ್ಯಕ್ತಿತ್ವದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ
ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಯವರ 4ನೇ ವರ್ಷದ ಪುಣ್ಯ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಟಲ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

ಭಾರತೀಯ ಜನ ಸಂಘದ ನಂತರ ಭಾರತೀಯ ಜನತಾ ಪಾರ್ಟಿಯ ಪ್ರಥಮ ಅಧ್ಯಕ್ಷರಾಗಿ ವಿರೋಧ ಪಕ್ಷದ ನಾಯಕರಾಗಿ ವಿದೇಶಾಂಗ ಸಚಿವರಾಗಿ ಮೂರು ಬಾರಿ ದೇಶದ ಪ್ರಧಾನಿಯಾಗಿ ಅತ್ಯಮೂಲ್ಯ ಸೇವೆ ಸಲ್ಲಿಸಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲಘಟ್ಟದಲ್ಲಿ ದೇಶವು ಮಹತ್ತರ ಅಭಿವೃದ್ಧಿಯನ್ನು ದಾಖಲಿಸಿದೆ. ಆಟಲ್ ಜೀ ಯವರು ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆಯ ಪರಿಕಲ್ಪನೆಯನ್ನು ದೇಶಕ್ಕೆ ನೀಡಿದ ಪರಿಣಾಮವಾಗಿ ಇಂದು ದೇಶಾದ್ಯಂತ ಉತ್ತಮ ಗುಣಮಟ್ಟದ ರಸ್ತೆಗಳು ನಿರ್ಮಾಣಗೊಳ್ಳಲು ಸಾಧ್ಯವಾಗಿದೆ. ಅಟಲ್ ಜೀ ನಡೆ-ನುಡಿ, ಆಚಾರ ವಿಚಾರಗಳನ್ನು ನೆನಪಿಸಿಕೊಳ್ಳುವುದೇ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ಎಂದು ಕುಯಿಲಾಡಿ ಹೇಳಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ ತನ್ನ ಜೀವನದ ಸರ್ವಸ್ವವನ್ನೂ ಒಂದು ಉದಾತ್ತ ವಿಚಾರ, ತತ್ವ ಮತ್ತು ಬದ್ಧತೆಗೆ ಮುಡಿಪಾಗಿಟ್ಟು ರಾಜಕೀಯ ಕ್ಷೇತ್ರದಲ್ಲೂ ಮಾದರಿ ವ್ಯಕ್ತಿತ್ವವನ್ನು ಮೇಳೈಸಬಹುದು ಎಂದು ತೋರಿಸಿಕೊಟ್ಟ ಮಹಾನ್ ಚೇತನ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರು. ವೈಯಕ್ತಿಕ ಜೀವನ ಮತ್ತು ಸಾಮಾಜಿಕ ಜೀವನ ಒಂದೇ ರೀತಿಯಾಗಿದ್ದಾಗ ಯಶಸ್ವೀ ಜನ ನಾಯಕನಾಗಲು ಸಾಧ್ಯ. ಅಟಲ್ ಜೀ ಯವರು ಬಿಟ್ಟು ಹೋದ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವುದೇ ಅವರ ತತ್ವ ಸಿದ್ಧಾಂತಗಳಿಗೆ ನೀಡುವ ನೈಜ ಗೌರವವೆನಿಸುವುದು ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ಪೂಜಾರಿ, ರತ್ನಾಕರ ಶೆಟ್ಟಿ, ವಿಜಯ್ ಭಟ್ ಕಡೆಕಾರು, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪ್ರಮುಖರಾದ ಚಂದ್ರಶೇಖರ ಪ್ರಭು, ಸಂತೋಷ್ ಆಚಾರ್ಯ, ಕಿಶೋರ್ ಕುಮಾರ್ ಕರಂಬಳ್ಳಿ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ದೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಉಡುಪಿ ಜಿಲ್ಲಾ ಬಿಜೆಪಿಯಿಂದ ನಡೆದ ಯಶಸ್ವೀ ತಿರಂಗಾ ಯಾತ್ರೆ



ಉಡುಪಿ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ತನಕ ‘ಬೃಹತ್ ತಿರಂಗಾ ಯಾತ್ರೆ’ ನಡೆಯಿತು.

ತದನಂತರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ರವರು ಗಾಂಧೀಜಿ ಪುತ್ಥಳಿಗೆ ಹಾರಾರ್ಪಣೆಗೈದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ‌ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಅರ್. ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ,‌ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಪದಾಧಿಕಾರಿಗಳಾದ ಶ್ರೀಮತಿ ಶಿಲ್ಪಾ ಜಿ. ಸುವರ್ಣ, ದಿನಕರ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್ , ಬೈಕಾಡಿ ಸುಪ್ರಸಾದ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ , ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಮತ್ತು ಮಂಡಲಗಳ ಅಧ್ಯಕ್ಷರುಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು, ನಗರಸಭಾ ಸದಸ್ಯರು, ಪಂಚಾಯತ್ ಸದಸ್ಯರುಗಳು, ವಿವಿಧ ಸ್ತರದ ಸಮಿತಿಯ ಪದಾಧಿಕಾರಿಗಳು, ಸಮಿತಿ ಸದಸ್ಯರು, ನೂರಾರು ಸಂಖ್ಯೆಯಲ್ಲಿ 75 ಮೀಟರ್ ಉದ್ದದ ತ್ರಿವರ್ಣ ಧ್ವಜದ ಮೆರವಣಿಗೆಯ ‘ತಿರಂಗಾ ಯಾತ್ರೆ’ಯಲ್ಲಿ ಉಪಸ್ಥಿತರಿದ್ದರು.

ಆಗಸ್ಟ್ 15ರಂದು ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ತಿರಂಗಾ ಯಾತ್ರೆ’



ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಆಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 8.30ಕ್ಕೆ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ.

ಬೆಳಿಗ್ಗೆ 11.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿ ಬಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ವರೆಗೆ ‘ಬೃಹತ್ ತಿರಂಗಾ ಯಾತ್ರೆ’ ನಡೆಯಲಿದ್ದು, ಗಾಂಧಿ ಪ್ರತಿಮೆಗೆ ಹಾರಾರ್ಪಣೆಯೊಂದಿಗೆ ಸಮಾಪನಗೊಳ್ಳಲಿದೆ.

ಈ ‘ತಿರಂಗಾ ಯಾತ್ರೆ’ಯಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ, ಬೂತ್ ಸಮಿತಿಯ ಪದಾಧಿಕಾರಿಗಳು, ಸಮಿತಿ ಸದಸ್ಯರು, ಎಲ್ಲಾ ಸ್ತರದ ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಹಾಗೂ ಪಕ್ಷದ ಹಿತೈಷಿಗಳು ಬಿಳಿ ಬಣ್ಣದ ಶುಭ್ರ ಉಡುಪು ಧರಿಸಿ ಗರಿಷ್ಠ ಸಂಖ್ಯೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ‘ತಿರಂಗಾ ಯಾತ್ರೆ’ಯನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಮ್.ಇ.ಐ.‌ ನೂತನ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿಯವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ


ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ‌ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್,‌‌ ಕಿಶೋರ್ ಕುಮಾರ್ ಕುಂದಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ ಶೆಟ್ಟಿ,‌ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ,‌ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಹ ಸಂಚಾಲಕ ಸಂತೋಷ್ ಜತ್ತನ್ ಹೇರೂರು, ಅಂಬಲಪಾಡಿ-ಕಡೆಕಾರು ಮಹಾ ಶಕ್ತಿ ಕೇಂದ್ರದ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಉಡುಪಿ ನಗರಸಭಾ ಸದಸ್ಯ ಟಿ. ಜಿ. ಹೆಗ್ಡೆ, ಪ್ರಮುಖರಾದ ಮೆರ್ಡಿ ಸತೀಶ್ ಶೆಟ್ಟಿ ಕುಂದಾಪುರ ಹಾಗೂ ನ್ಯಾಯವಾದಿ ಉಮೇಶ್ ಶೆಟ್ಟಿ ಕಳತ್ತೂರು, ರಾಧಾಕೃಷ್ಣ ಶೆಟ್ಟಿ, ಜಗದೀಶ್ ಶೆಟ್ಟಿ ಹಾವಂಜೆ, ಪ್ರವೀಣ್ ಶೆಟ್ಟಿ ಕಿದಿಯೂರು, ಪ್ರಸನ್ನ ಶೆಟ್ಟಿ ಕಡೆಕಾರು, ಅಮರ್ ಶೆಟ್ಟಿ ಹಿರಿಯಡ್ಕ, ಪ್ರಶಾಂತ್ ಶೆಟ್ಟಿ ಅಂಜಾರು ಮುಂತಾದವರು ಉಪಸ್ಥಿತರಿದ್ದರು.

ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮೆಟೆಡ್ ನೂತನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ಪದಗ್ರಹಣ

ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ 77 ವರ್ಷಗಳ ಇತಿಹಾಸವಿರುವ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣ ಸಮಾರಂಭವು ಬೆಂಗಳೂರು ಯಶವಂತಪುರದ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆಯಿತು.

ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ರವರು ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣವನ್ನು ನೆರವೇರಿಸಿ, ಅಭಿನಂದಿಸಿ ಮಾತನಾಡಿದರು.

ಸಂಸ್ಥೆಯ ನೂತನ ಅಧ್ಯಕ್ಷರಾಗಿ ಜಬಾಬ್ದಾರಿ ಸ್ವೀಕರಿಸಿದ ಕೆ.ಉದಯ ಕುಮಾರ್ ಶೆಟ್ಟಿಯವರು ಮಾತನಾಡಿ, 77 ವರ್ಷಗಳ ಭವ್ಯ ಇತಿಹಾಸವುಳ್ಳ ಎಮ್.ಇ.ಐ. ಸಂಸ್ಥೆಯ ಬೆಳವಣಿಗೆಯಲ್ಲಿ ಆಡಳಿತ ನಿರ್ದೇಶಕರು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗದ ಪರಿಶ್ರಮ ಮಹತ್ವಪೂರ್ಣವಾಗಿದೆ. ದೊರೆತಿರುವ ಜವಾಬ್ದಾರಿಯನ್ನು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ನಿಭಾಯಿಸುವ ಮೂಲಕ ಎಲ್ಲರ ಸಂಘಟಿತ ಪ್ರಯತ್ನ ಮತ್ತು ಸಹಕಾರದಿಂದ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವ ಆತ್ಮವಿಶ್ವಾಸವಿದೆ. ನಿರ್ದಿಷ್ಟ ಗುರಿಯೊಂದಿಗೆ ಒಳ್ಳೆಯ ಸಂಗತಿಗಳನ್ನು ಅಳವಡಿಸಿಕೊಂಡು ಎಲ್ಲರೂ ಒಟ್ಟಾಗಿ ಒಂದಾಗಿ ಸಂಸ್ಥೆಯ ಶ್ರೆಯೋಭಿವೃದ್ದಿಗೆ ಶ್ರಮಿಸೋಣ ಎಂದರು.

ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಶೀಲಾ ಜಿ., ಪ್ರಧಾನ ವ್ಯವಸ್ಥಾಪಕ ಪ್ರಕಾಶ್ ಟಿ.ಆರ್., ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ ಹಾಗೂ ಉಡುಪಿ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಬೆಂಗಳೂರು ವಿಜಯ ನಗರ ಕಾರ್ಪೊರೇಟರ್ ಉಮೇಶ್ ಶೆಟ್ಟಿ, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು,‌ ಕೆ.ಉದಯಕುಮಾರ್ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಪ್ರಗತಿ ಉದಯಕುಮಾರ್ ಶೆಟ್ಟಿ, ಎಮ್.ಇ.ಐ. ಸಂಸ್ಥೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗ, ಬಿಜೆಪಿ ಉಡುಪಿ ಜಿಲ್ಲಾ ಪದಾಧಿಕಾರಿಗಳು, ಉಡುಪಿ ನಗರಸಭಾ ಸದಸ್ಯರು ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಿಲ್ಲಾ ಬಿಜೆಪಿಯಿಂದ ರಾಷ್ಟ್ರ ಧ್ವಜ ಹಸ್ತಾಂತರ

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನದಡಿ ಬಿಜೆಪಿ ಜಿಲ್ಲಾ ಮಾಧ್ಯಮ ವಿಭಾಗದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿಯವರಿಗೆ ಉಡುಪಿ ಜಿಲ್ಲಾ ಪ್ರೆಸ್ ಕ್ಲಬ್ ನಲ್ಲಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು.

ಅಗಸ್ಟ್ 13ರ ಬೆಳಿಗ್ಗೆಯಿಂದ ಅಗಸ್ಟ್ 15ರ ಸಂಜೆಯ ವರೆಗೆ ಸಮಸ್ತ ಜನತೆ ತಮ್ಮ ಮನೆಯ ಮೇಲೆ ಸಂಭ್ರಮದಿಂದ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಪ್ರಚಾರ ಮೂಲಕ ಜಾಗೃತಿ ಮೂಡಿಸುವಂತೆ ದೃಶ್ಯ ಮತ್ತು ಮುದ್ರಣ ಮಾಧ್ಯಮದ ಪ್ರತಿನಿಧಿ ಬಂಧುಗಳಲ್ಲಿ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಉಡುಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ ಮತ್ತು ಜಿಲ್ಲಾ ದೃಶ್ಯ ಮತ್ತು ಮುದ್ರಣ ಮಾಧ್ಯಮ‌ದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ರಾಷ್ಟ್ರ ಧ್ವಜ ವಿತರಣೆ

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆಯಂತೆ ‘ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ ಅಭಿಯಾನದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ‌ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರನ್ನು ಬೇಟಿಯಾಗಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು.

ಮಣಿಪಾಲ್ ಯುನಿವರ್ಸಿಟಿಯ ಉಪ ಕುಲಾಧಿಪತಿ ಡಾ! ಹೆಚ್.ಎಸ್. ಬಲ್ಲಾಳ್, ಉಡುಪಿ ಜಿಲ್ಲಾ ಸಂಘ ಚಾಲಕ್ ನಾರಾಯಣ ಶೆಣೈ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿಧ್ವಾಂಸ ಬನ್ನಂಜೆ ಬಾಬು ಅಮೀನ್, ‘ವೈದೇಹಿ’ ಕಾವ್ಯನಾಮದ ಖ್ಯಾತ ಸಾಹಿತಿ ಶ್ರೀಮತಿ ಜಾನಕಿ ಶ್ರೀನಿವಾಸಮೂರ್ತಿ, ಉಡುಪಿ ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಮಾಂಡವಿ ಬಿಲ್ಡರ್ಸ್ ಎಂಡ್ ಡೆವಲಪರ್ಸ್ ಆಡಳಿತ ನಿರ್ದೇಶಕ ಜೆರ್ರಿ ವಿನ್ಸೆಂಟ್ ಡಯಾಸ್, ‘ಹರ್ಷ’ ಸಮೂಹ ಸಂಸ್ಥೆ ಹಾಗೂ ಪ್ರಕಾಶ್ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಸೂರ್ಯಪ್ರಕಾಶ್, ಉಡುಪಿ ಜಿಲ್ಲಾ ಬಳಕೆದಾರರ ವೇದಿಕೆಯ ಅಧ್ಯಕ್ಷ ಡಾ! ರವೀಂದ್ರನಾಥ ಶ್ಯಾನಭಾಗ್ ಮುಂತಾದ ಗಣ್ಯರಿಗೆ ರಾಷ್ಟ್ರ ಧ್ವಜವನ್ನು ವಿತರಿಸಲಾಯಿತು.

ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ಪ್ರತೀ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವ ಜೊತೆಗೆ ಎಲ್ಲಾ ಕಛೇರಿಗಳು, ಸಂಘ-ಸಂಸ್ಥೆಗಳು, ಎಲ್ಲಾ ಧರ್ಮ ಸಮುದಾಯಗಳ ಮಠ ಮಂದಿರ ದೇವಸ್ಥಾನಗಳು ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ತ್ರಿವರ್ಣ ಧ್ವಜವನ್ನು ಅರಳಿಸಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಂಭ್ರಮಿಸುವಂತೆ ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ‌ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರಸಭಾ ಸದಸ್ಯ ಸಂತೋಷ್ ಜತ್ತನ್ ಉಪಸ್ಥಿತರಿದ್ದರು.

‘ಹರ್ ಘರ್ ತಿರಂಗಾ’ ಅಭಿಯಾನ : ತ್ರಿವರ್ಣ ಧ್ವಜ ಹಸ್ತಾಂತರಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ

ಉಡುಪಿ: ದೇಶದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ’ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ‌ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ದೇವಸ್ಥಾನ, ಸಂಘ-ಸಂಸ್ಥೆಗಳು ಹಾಗೂ ಪ್ರತೀ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಂಭ್ರಮಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಮೇನೇಜಿಂಗ್ ಟ್ರಸ್ಟಿ ಪಿ. ವಿ. ಶೆಣೈ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರದೀಪ್ ರಾವ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ಉಪಸ್ಥಿತರಿದ್ದರು.

ಅಂದಿನ ಕಾಂಗ್ರೆಸ್ಸಿಗೂ ಇಂದಿನ ನಕಲಿ ಕಾಂಗ್ರೆಸ್ಸಿಗೂ ಯಾವುದೇ ಸಂಬಂಧವಿಲ್ಲ; ಅಪಪ್ರಚಾರದ ಗೀಳಿನಿಂದ ಕಾಂಗ್ರೆಸ್ ಅಸಂಬದ್ಧ ಹೇಳಿಕೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಮಹಾತ್ಮಾ ಗಾಂಧೀಜಿ ಹಾಗೂ ಮಹಾನ್ ರಾಷ್ಟ್ರ ಭಕ್ತರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮಕ್ಕೆ ದೇಶವಾಸಿಗಳ ಜೊತೆಗೆ ಬೆಂಬಲಿಸಿದ ಅಂದಿನ ರಾಜಕೀಯ ರಹಿತ ಮೂಲ ಕಾಂಗ್ರೆಸ್ಸಿಗೂ ಇಂದಿನ ನಕಲಿ ಕಾಂಗ್ರೆಸ್ಸಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ವಿರುದ್ಧ ಅಪಪ್ರಚಾರದ ಗೀಳಿನಿಂದ ಕಾಂಗ್ರೆಸ್ ಅಸಂಬದ್ಧ ಹೇಳಿಕೆಯಲ್ಲಿ ತೊಡಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಅಸಂಖ್ಯಾತ ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರ ಕಠಿಣ ಪರಿಶ್ರಮ, ತ್ಯಾಗ ಹಾಗೂ ಬಲಿದಾನದ ಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಸ್ವಾತಂತ್ರ್ಯಾ‌ನಂತರ ಕಾಂಗ್ರೆಸ್ಸ್ ಪಕ್ಷವನ್ನು ಬರ್ಕಾಸ್ತುಗೊಳಿಸಬೇಕು ಎಂದು ಮಹಾತ್ಮಾ ಗಾಂಧೀಜಿಯವರು ತಾಕೀತು ಮಾಡಿದ್ದರು. ಆದರೆ ಅಧಿಕಾರದ ಲಾಲಸೆಯಿಂದ ಗಾಂಧೀಜಿ ಇಚ್ಛೆಗೆ ತಿಲಾಂಜಲಿಯನ್ನಿತ್ತು ದುರುದ್ದೇಶಪೂರ್ವಕವಾಗಿ ಅದೇ ಹೆಸರಿನಲ್ಲಿ ಪಕ್ಷವನ್ನು ಮುಂದುವರಿಸಿಕೊಂಡು ಬಂದು ಕೇವಲ ನಕಲಿ ಗಾಂಧಿ ಪರಿವಾರದ ಹಿತಕ್ಕಾಗಿ ದೇಶ ಹಿತವನ್ನು ಮುಡಿಪಾಗಿಟ್ಟು ಸುದೀರ್ಘ ಅವಧಿಗೆ ಬ್ರಹ್ಮಾಂಡ ಭ್ರಷ್ಟಾಚಾರದ ಮೂಲಕ ದುರಾಡಳಿತ ನಡೆಸಿರುವುದು ಇಂದಿನ ನಕಲಿ ಕಾಂಗ್ರೆಸ್ಸಿನ ನೈಜ ಕರಾಳ ಇತಿಹಾಸ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ‌ ಕರೆಯಂತೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಐತಿಹಾಸಿಕ‌ ಕ್ಷಣಗಳನ್ನು ದೇಶವಾಸಿಗಳು ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯವರೆಗೆ ಪ್ರತೀ‌ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ‘ಹರ್ ಘರ್ ತಿರಂಗಾ’ ಅಭಿಯಾನದ ಮೂಲಕ ಸಂಭ್ರಮಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆಯಂತೆ ರಾಷ್ಟ್ರಾದ್ಯಂತ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಅಭಿಯಾನವನ್ನು ಯಶಸ್ವಿಗೊಳಿಸಲು, ಜಿಲ್ಲೆಯಾದ್ಯಂತ ‘ಹರ್ ಘರ್ ತಿರಂಗಾ’ ಹಾಗೂ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಬಗ್ಗೆ ಜಾಗೃತಿ ಮೂಡಿಸುವ ಜಾಥಾ ಹಾಗೂ ಇನ್ನಿತರ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.

ರಾಷ್ಟ್ರ ಧ್ವಜದ ಬಗ್ಗೆ ಕಾಂಗ್ರೆಸ್‌ ನಾಯಕರಿಗೆ ಎಳ್ಳಷ್ಟೂ ಗೌರವವಿಲ್ಲ.‌ ಪ್ರತಿಯೊಬ್ಬ ಭಾರತೀಯನ ಹೆಮ್ಮೆಯ ಪ್ರತೀಕವಾಗಿರುವ ರಾಷ್ಟ್ರ ಧ್ವಜದ ಬಣ್ಣ ಯಾವುದೆಂದು ತಿಳಿದಿದ್ದರೂ ಮಾಜಿ ಸಿ.ಎಂ. ಸಿದ್ಧರಾಮಯ್ಯ ಉದ್ದೇಶಪೂರ್ವಕವಾಗಿಯೇ ರಾಷ್ಟ್ರ ಧ್ವಜದ ಬಣ್ಣ ಕೆಂಪು, ಬಿಳಿ, ಹಸಿರು ಎನ್ನುತ್ತಾ ತನ್ನ ಆಶಾಡಭೂತಿತನದ ಪರಮಾವಧಿಯನ್ನು ಪ್ರದರ್ಶಿಸಿ, ತ್ರಿವರ್ಣ ಧ್ವಜವನ್ನು ಅವಮಾನಿಸಿರುವುದು ಖಂಡನೀಯ. ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶಾದ್ಯಂತ ಅದ್ದೂರಿಯಾಗಿ ನಡೆಯಲಿರುವ ‘ಹರ್ ಘರ್ ತಿರಂಗಾ’ ಅಭಿಯಾನದಿಂದ ಕಂಗೆಟ್ಟಿರುವ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ದುರ್ವರ್ತನೆ ಅವರ ದಯನೀಯ ಸ್ಥಿತಿಗೆ ಹಿಡಿದ ಕೈಗನ್ನಡಿಯಂತಿದೆ.

ಬಿಜೆಪಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿಲ್ಲ ಎನ್ನುವ ಸಿದ್ಧರಾಮಯ್ಯ ಮೊದಲು ತನ್ನ ಕುಟುಂಬದಿಂದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಹುತಾತ್ಮರಾದವರ ಬಗ್ಗೆ ಮಾಹಿತಿ ನೀಡಲಿ. ಇತ್ತ ಕಾಂಗ್ರೆಸ್ ನಾಯಕರೂ ತಾವೇ ಸ್ವತಃ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಸ್ವಾತಂತ್ರ್ಯ ದೊರಕಿಸಿಕೊಟ್ಟಂತೆ ವರ್ತಿಸುತ್ತಾ ದೇಶದ ಅಸ್ಮಿತೆಯಾಗಿರುವ ಸ್ವಾತಂತ್ರ್ಯದ ‘ಅಮೃತ ಮಹೋತ್ಸವ’ ವಿಚಾರದಲ್ಲೂ ರಾಜಕೀಯ ಬೇಳೆ ಬೇಯಿಸಲು ಹರಸಾಹಸಪಡುತ್ತಿರುವುದು ಶೋಚನೀಯ. ರಾಜ್ಯದ ಜನತೆ ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಕಾಂಗ್ರೆಸ್ಸಿನ‌ ದೇಶ ವಿರೋಧಿ ಮನಸ್ಥಿತಿಗೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Design a site like this with WordPress.com
Get started