‘ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಶಿಫಾರಸು ಮೇರೆಗೆ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಕೇಂದ್ರ ಸರಕಾರದ ಸ್ವಾಮ್ಯದ “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್” ಗೋವಾ ಇದರ ‘ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ’ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ‘ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್’ ನವದೆಹಲಿ ಆದೇಶ ಹೊರಡಿಸಿದೆ.
ಇವರು ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ತಲಾ ಎರಡು ಅವಧಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಿಜೆಪಿ ಅಂಬಲಪಾಡಿ ಸ್ಥಾನೀಯ ಸಮಿತಿ ಕಾರ್ಯದರ್ಶಿಯಾಗಿ, ಬಿಜೆಪಿ ಉಡುಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷರಾಗಿ, ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಪ್ತಸಕ್ತ ಎರಡನೇ ಅವಧಿಗೆ ಬಿಜೆಪಿ ಜಿಲ್ಲಾ ಸಹ ವಕ್ತಾರರಾಗಿ ಹಾಗೂ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಪ್ರಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕರ್ನಾಟಕ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್ ಇದರ ಜತೆ ಕಾರ್ಯದರ್ಶಿಯಾಗಿ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ.) ಇದರ ಗೌರವ ಸಲಹೆಗಾರರಾಗಿ, ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ರೋಟರಿ ಕ್ಲಬ್ ಅಂಬಲಪಾಡಿ ಇದರ ಅತ್ಯುತ್ತಮ ಕ್ಲಬ್ ಪ್ರಶಸ್ತಿ ವಿಜೇತ ಕಾರ್ಯದರ್ಶಿಯಾಗಿ, ರೋಟರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಪ್ರಸಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾಗಿ, ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ಉಪಾಧ್ಯಕ್ಷರಾಗಿ, ಬಾಡಿ ಬಿಲ್ಡಿಂಗ್ ರಾಜ್ಯ ತೀರ್ಪುಗಾರರಾಗಿ, ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ ಆಡಳಿತ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷರಾಗಿ, ಶ್ರೀ ಬಬ್ಬುಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಶ್ರೀ ರಾಮಾಂಜನೇಯ ಪೂಜಾ ಮಂದಿರ ಅಂಬಲಪಾಡಿ ಇದರ ಸಂಚಾಲಕರಾಗಿ, ಅಂಗನವಾಡಿ ಕೇಂದ್ರ ಬಂಕೇರ್ಕಟ್ಟ ಅಂಬಲಪಾಡಿ ಇದರ ಬಾಲವಿಕಾಸ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುವ ಜೊತೆಗೆ ಮಣಿಪಾಲ ಸಮೂಹ ಸಂಸ್ಥೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕಾಪು: ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ ಕಾರ್ಯಕ್ರಮ ಪಲಿಮಾರಿನಲ್ಲಿ ನಡೆಯಿತು. ಕಾಪು ಮಂಡಲ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರಾಜ್ಯ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ನೆ ಲ ನರೇಂದ್ರ ಬಾಬು, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ಸುರೇಂದ್ರ ಪಣಿಯೂರು, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಪಲಿಮಾರು ಶಕ್ತಿಕೇಂದ್ರ ಪ್ರಮುಖರಾದ ಗಾಯತ್ರಿ ಪ್ರಭು, ಸೌಮ್ಯಲತಾ ಶೆಟ್ಟಿ, ಹಿಂದುಳಿದ ವರ್ಗ ಮೋರ್ಚ ವಕ್ತಾರರಾದ ವಿಠ್ಠಲ ಪೂಜಾರಿ, ಕಾಪು ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ , ಮತ್ತಿತರರು ಉಪಸ್ಥಿತರಿದ್ದರು. ರವಿಕೋಟ್ಯನ್ ಉದ್ಯಾವರ ಹಾಗೂ ಕಾಪು ಮಂಡಲ ಹಿಂದುಳಿದ ವರ್ಗ ಮೋರ್ಚ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಪಲಿಮಾರು ಕಾರ್ಯಕ್ರಮ ನಿರೂಪಿಸಿದರು. ಆಟಿ ವಿಶಿಷ್ಟತೆ ಹಾಗೂ ಪಕ್ಷದ ವಿಚಾರಗಳ ಬಗ್ಗೆ ಮಾತನಾಡಲಾಯಿತು. ಸುಮಾರು 45 ಜನ ಹಿರಿಯ ಕಾರ್ಯಕರ್ತರನ್ನು ಗೌರವಿಸಲಾಯಿತು.
ಉಡುಪಿ: ‘ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಹೆಸರಲ್ಲಿ ಮೂರು ನಾಲ್ಕು ತಲೆಮಾರಿಗೆ ಆಗುವಷ್ಟನ್ನು ನಾವು ಮಾಡಿಕೊಂಡಿದ್ದೇವೆ…’ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗಂಟಾಘೋಷದ ನುಡಿ ಮುತ್ತುಗಳು ಕಾಂಗ್ರೆಸ್ ಈ ದೇಶವನ್ನು ಲೂಟಿಗೈದು ದೇಶವಾಸಿಗಳಿಗೆ ಎಸಗಿರುವ ಅಕ್ಷಮ್ಯ ಘೋರ ದ್ರೋಹವನ್ನು ಪುಷ್ಠೀಕರಿಸಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರೋಪಿಸಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿಚಾರಣೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಸ್ವತ: ಕಾಂಗ್ರೆಸ್‌ನ ಹಿರಿಯ ಮುಖಂಡರೊಬ್ಬರು ಇಂತಹ ಹೇಳಿಕೆ ನೀಡಿರುವುದು ಕಾಂಗ್ರೆಸ್‌ನ ಮುಖವಾಡವನ್ನು ಕಳಚಿ ಅಧ:ಪತನಕ್ಕೆ ನಾಂದಿ ಹಾಡಿದಂತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಹಾಗೂ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಗತ್ತಿನ ಹಲವಾರು ರಾಷ್ಟ್ರಗಳ ವಿಷಮ ಪರಿಸ್ಥಿತಿಯನ್ನು ಅವಲೋಕಿಸಿದಾಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಕೆಲವೊಂದು ದೂರದರ್ಶಿತ್ವದ ನಿರ್ಧಾರಗಳು ಕಹಿ ಎನಿಸಿದರೂ ದೇಶ ಹಿತಕ್ಕೆ ಪೂರಕವಾಗಿವೆ ಎಂದು ಅವರು ತಿಳಿಸಿದ್ದಾರೆ.
ಪ್ಯಾಕೇಜ್ಡ್ ಪದಾರ್ಥಗಳ ಮೇಲೆ ಶೇ.5ರಷ್ಟು ಜಿಎಸ್ಟಿ ದರ ಹೆಚ್ಚಳ ವಿಚಾರವು ಎಲ್ಲ ರಾಜ್ಯಗಳ, ವಿವಿಧ ಪಕ್ಷಗಳ ಪ್ರತಿನಿಧಿಗಳ ಸಹಕಾರ ಮತ್ತು ಚರ್ಚೆಯ ಬಳಿಕ ಜಿಎಸ್‍ಟಿ ಮಂಡಳಿಗೆ ಬಂದಿದ್ದು, ಈ ನಿರ್ಧಾರದಲ್ಲಿ ಕಾಂಗ್ರೆಸ್ ಸಹಿತ ಇತರ ಪಕ್ಷಗಳ ಸರಕಾರಗಳ ಹಣಕಾಸು ಮಂತ್ರಿಗಳು ಭಾಗವಹಿಸಿ ಒಪ್ಪಿಗೆಯನ್ನು ಸೂಚಿಸಿರುವುದು ವಾಸ್ತವ.
ಕೋವಿಡ್ ಕಾಲಘಟ್ಟದ ಹೊರತಾಗಿಯೂ ದೇಶದ ಆರ್ಥಿಕ ಸ್ಥಿತಿ ಬಹಳಷ್ಟು ಸದೃಢವಾಗಿದೆ. ಇಂದು ಜಗತ್ತಿನ ವಿವಿಧ ದೇಶಗಳ ಜೊತೆ ಸ್ಪರ್ಧೆಯನ್ನು ಎದುರಿಸಿ ಐದು ಟ್ರಿಲಿಯನ್ ಇಕಾನಮಿ ಗುರಿಯೊಂದಿಗೆ ದೇಶವನ್ನು ವಿಶ್ವದ ಮುಂಚೂಣಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸಂಪನ್ಮೂಲ ಕ್ರೋಡೀಕರಣ ಅನಿವಾರ್ಯವೆನಿಸಿದೆ.
ಈ ಪ್ರಕ್ರಿಯೆಯಿಂದ ದೇಶಕ್ಕೆ ಸುಮಾರು ರೂಪಾಯಿ 1,55,000 ಕೋಟಿ ಹೆಚ್ಚುವರಿ ಸಂಪನ್ಮೂಲ ನಿರೀಕ್ಷಿಸಲಾಗಿದೆ. ಕರ್ನಾಟಕ ರಾಜ್ಯಕ್ಕೆ ಸೀಮಿತವಾಗಿ ಸುಮಾರು ರೂಪಾಯಿ 7,000 ಕೋಟಿ ಸಂಪನ್ಮೂಲ ಸಂಗ್ರಹದ ನಿರೀಕ್ಷೆ ಇದೆ. ಈ ಹಿಂದೆ 2011ರಲ್ಲಿ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಲೀಗಲ್ ಮೆಟ್ರಾಲಜಿಕಲ್ (ಪ್ಯಾಕೇಜ್ಡ್ ಕಮಾಡಿಟೀಸ್) ರೂಲ್ಸ್ 2011ನ್ನು ಜಾರಿಗೆ ತಂದು ಪ್ಯಾಕಿಂಗ್ ಪದಾರ್ಥಗಳಿಗೆ ಜಿಎಸ್‍ಟಿ ವಿಧಿಸಿರುವ ಮಾದರಿಯಲ್ಲೇ ಪರಿಷ್ಕೃತ ನಿಲುವನ್ನು ಈಗ ತೆಗೆದುಕೊಳ್ಳಲಾಗಿದೆ.
ಈ ಜಿಎಸ್ಟಿ ದರ ಬದಲಾವಣೆಗೆ ಯಾವುದೇ ರಾಜ್ಯಗಳ ವಿರೋಧವಿಲ್ಲದೆ, ಸಲಹಾ ಸಮಿತಿಯ ಸಲಹೆಗಳನ್ನು ಪರಿಗಣಿಸಿ ಇಂತಹ ದೇಶ ಹಿತದ ದೂರದರ್ಶಿತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಾಂಗ್ರೆಸ್ ಕೇವಲ ರಾಜಕೀಯ ದೃಷ್ಠಿಯಿಂದ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮನದಾಳದ ಮಾತಿನಿಂದ ಇದು ಸಾಬೀತಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ದೇಶದ 15ನೇ ರಾಷ್ಟ್ರಪತಿಯಾಗಿ ಮೊಟ್ಟಮೊದಲ ಬಾರಿಗೆ ಬುಡಕಟ್ಟು ಜನಾಂಗದ ಮಹಿಳೆ ಶ್ರೀಮತಿ ದ್ರೌಪದಿ ಮುರ್ಮು ರವರು ಅಭೂತಪೂರ್ವ ದಾಖಲೆಯ ಮತಗಳಿಂದ ಆಯ್ಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.
ದೇಶದ ಪ್ರಥಮ ಪ್ರಜೆಯಾಗಿ ಶ್ರೀಮತಿ ದ್ರೌಪದಿ ಮುರ್ಮು ರವರ ಆಯ್ಕೆ ಪ್ರಜಾಪ್ರಭುತ್ವದ ಹಿರಿಮೆಗೆ ಸಂದ ಗೌರವ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ದೇಶದ ನೂತನ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರಿಗೆ ಅಭಿನಂದನೆ ಸಲ್ಲಿಸಿರುವ ಕುಯಿಲಾಡಿ, ರಾಷ್ಟ್ರಪತಿಯವರ ರಾಷ್ಟ್ರ ಹಿತದ ಕಾಯಕದ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವ ಅಂತ್ಯೋದಯ ಪರಿಕಲ್ಪನೆಯು ಇನ್ನಷ್ಟು ಸದೃಢವಾಗಿ ಸಾಕಾರಗೊಳ್ಳುವಂತಾಲಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಮತ್ತು ಉಡುಪಿ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಮತ್ತು ಉಡುಪಿ ತಾಲೂಕು-ವಲಯ ನೇತೃತ್ವದಲ್ಲಿ ವಿಶ್ವ ಮಾಧಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವು ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಹಾಗೂ ಉಡುಪಿ ವಲಯಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಇವರ ಅಧ್ಯಕ್ಷತೆಯಲ್ಲಿ ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನವೀನ್ ಅಮೀನ್ ಶಂಕರಪುರ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ದುಶ್ಚಟಮುಕ್ತ ಸಮಾಜ ನಿರ್ಮಾಣದತ್ತ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಪರಿಚಯವನ್ನು ನೀಡಿ ಶುಭ ಹಾರೈಸಿದರು.
‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಿಸ್ತ್ರತ ಮಾಹಿತಿ ನೀಡಿದ ಉಡುಪಿ ಡಾ! ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಪ್ತ ಸಮಾಲೋಚಕಿ ಡಾ! ದೀಪಶ್ರೀ ಮಾತನಾಡಿ, ವಿದ್ಯಾರ್ಥಿಗಳು ಸಕಾರಾತ್ಮಕ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ದುಶ್ಚಟಗಳಿಂದ ದೂರವಿದ್ದು, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.
ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜ್ ಮೋಹನ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಲಭ್ಯವಿರುವ ಸ್ವಾಸ್ಥ್ಯ ಸಂಕಲ್ಪದಂತಹ ಉಪಯುಕ್ತ ಮಾಹಿತಿ ಶಿಬಿರದ ಸದುಪಯೋಗವನ್ನು ಪಡೆದುಕೊಂಡು ಮಾಧಕ ವಸ್ತುಗಳ ವಿರುದ್ಧ ಸ್ವಯಂ ಜಾಗೃತರಾಗುವ ಜೊತೆಗೆ ಸಾಮಾಜಿಕ ಜಾಗೃತಿಯನ್ನೂ ಮೂಡಿಸಬೇಕು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಮ್ ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಹಾಗೂ ಜನಜಾಗೃತಿ ವೇದಿಕೆಯ ಸಮಾಜಮುಖಿ ಸೇವಾ ಕಾರ್ಯಗಳನ್ನು ವಿವರಿಸಿದರು. ಯೋಜನೆಯ ಪ್ರಾದೇಶಿಕ ಕಛೇರಿಯ ಆಡಳಿತ ವಿಭಾಗದ ಯೋಜನಾಧಿಕಾರಿ ಪುರಂದರ್ ಸ್ವಾಸ್ಥ್ಯ ಸಂಕಲ್ಪದ ಪ್ರಮಾಣ ವಚನವನ್ನು ಭೋಧಿಸಿದರು.
ಮಾಧಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು. ಪದವಿ ಪೂರ್ವ ತರಗತಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಸೇವಾ ಪ್ರತಿನಿಧಿಗಳಾದ ಉಷಾ, ಆಶಾ ಮತ್ತು ಶರ್ಮಿಳಾ ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಗೀತಾ ಪಾಲನ್ ಸ್ವಾಗತಿಸಿದರು. ಉಡುಪಿ ವಲಯ ಮೇಲ್ವಿಚಾರಕಿ ಪ್ರೇಮಾ ಕಾರ್ಯಕ್ರಮ ನಿರೂಪಿಸಿ, ತಾಲೂಕು ಕೃಷಿ ಅಧಿಕಾರಿ ರಾಘವೇಂದ್ರ ವಂದಿಸಿದರು.
ನೂತನ ರಾಜ್ಯ ಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಜಿಲ್ಲಾಧ್ಯಕ್ಷ ನವೀನ್ ಅಮೀನ್ ಶಂಕರಪುರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ನಿಕಟಪೂರ್ವ ರಾಜ್ಯಾಧ್ಯಕ್ಷ ದೇವದಾಸ್ ಹೆಬ್ಬಾರ್, ಮಾಜಿ ಜಿಲ್ಲಾಧ್ಯಕ್ಷ ಅಪ್ಪಣ್ಣ ಹೆಗ್ಡೆ, ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಜಿಲ್ಲಾ ಹಿರಿಯ ನಿರ್ದೇಶಕ ಶಿವರಾಯ ಪ್ರಭು, ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಅಚ್ಯುತ ಪೂಜಾರಿ, ಸುಭಾಷ್ ಚಂದ್ರ ಚೌಟ, ಜಿಲ್ಲಾ ಸಮಿತಿ ಸದಸ್ಯರಾದ ಹರೀಶ್ ಶೆಟ್ಟಿ ಚೇರ್ಕಾಡಿ, ಎ.ಶಿವಕುಮಾರ್ ಅಂಬಲಪಾಡಿ, ಸತ್ಯಾನಂದ ನಾಯಕ್ ಆತ್ರಾಡಿ, ಹರಿಶ್ಚಂದ್ರ ತೆಂಡೂಲ್ಕರ್ ಮಾಳ, ಕಮಲಾಕ್ಷ ನಾಯಕ್, ಪ್ರೇಮ್ ಕುಮಾರ್ ಜೈನ್ ಹೊಸ್ಮಾರ್, ಮಂಜು ಬಿಲ್ಲವ ಕುಂದಾಪುರ, ಯು.ಸುರೇಂದ್ರ ಶೆಣೈ, ನವೀನ್ ಚಂದ್ರ ಶೆಟ್ಟಿ, ಉದಯಕುಮಾರ್ ಶೆಟ್ಟಿ ಬೈಲೂರು, ಚಂದ್ರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
ಧರ್ಮಸ್ಥಳ: ನೂತನ ರಾಜ್ಯ ಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ.ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜು.16ರಂದು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಶಾಸಕ ಕೆ.ರಘುಪತಿ ಭಟ್, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಎ.ಕಿರಣ್ ಕೊಡ್ಗಿ, ಮಾಜಿ ಸಚಿವ ಪ್ತಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ರಾಜ್ಯ ಮಹಿಳಾ ಮೋರ್ಚಾ ಪ್ತಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹಾಗೂ ನಗರಸಭಾ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಪುನರಪಿ ಗೆಲ್ಲುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಜು.16ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಿಜೆಪಿ ಎಲ್ಲಾ ಚುನಾವಣೆಗಳನ್ನು ಸಂಘಟನಾ ಸಾಮರ್ಥ್ಯದಿಂದ ಗೆಲ್ಲುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಬೂತ್ ಸಶಸ್ತೀಕರಣ, ಶಕ್ತಿ ಕೇಂದ್ರ ಪ್ರಮುಖರ ಸಭೆ ಹಾಗೂ ಮನೆ ಮನೆ ಬೇಟಿ ಅಭಿಯಾನ ನಡೆಯಲಿದೆ. ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಸಂಘಟಿತ ಪ್ರಯತ್ನದ ಮೂಲಕ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಲು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತೀ ಮನೆಗಳಲ್ಲಿ ಅ.11ರಿಂದ ಅ.17ರ ವರೆಗೆ ರಾಷ್ಟ್ರ ಧ್ವಜವನ್ನು ಅರಳಿಸುವ ಮೂಲಕ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಗೌರವಿಸುವ ಕೇಂದ್ರ ಸರಕಾರದ ‘ಹರ್ ಘರ್ ತಿರಂಗಾ’ ಅಭಿಯಾನದ ಯಶಸ್ವಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಕುಯಿಲಾಡಿ ವಿನಂತಿಸಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷವಾಗಿರುವ ಬಿಜೆಪಿ ಇಂದು ದೇಶದ ಎಲ್ಲ ಸ್ತರಗಳಲ್ಲಿ ಅಭಿವೃದ್ಧಿ ಪರ ಆಡಳಿತ ನಡೆಸುತ್ತಿದೆ. ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರ ಹಾಗೂ 150 ವಿಧಾನಸಭಾ ಕ್ಷೇತ್ರದ ಗೆಲುವಿನ ಗುರಿ ಹೊಂದಿರುವ ರಾಜ್ಯ ಬಿಜೆಪಿ ಸಂಘಟನಾತ್ಮಕವಾಗಿ 9 ವಿಭಾಗಗಳಡಿ ಪಕ್ಷದ ಪದಾಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ನೀಡಿದೆ. ಬೂತ್ ಸಶಸ್ತೀಕರಣ ಸಹಿತ ಪಕ್ಷದ ನಿಗದಿತ ಕಾರ್ಯ ಚಟುವಟಿಕೆಗಳನ್ನು ಬದ್ಧತೆಯಿಂದ ನಿರ್ವಹಿಸುವ ಜೊತೆಗೆ ಬೂತ್, ಮಂಡಲ ಮತ್ತು ಜಿಲ್ಲಾ ಸಮಾವೇಶದ ಮೂಲಕ ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಪಕ್ಷ ಸಂಘಟನೆಗೆ ಶಕ್ತಿ ತುಂಬಿ ಬಿಜೆಪಿ ವಿಜಯ ಪತಾಕೆಯನ್ನು ಬಾನೆತ್ತರಕ್ಕೇರಿಸಲು ಕೈ ಜೋಡಿಸಬೇಕು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ರಾಜ್ಯ ಮೋರ್ಚಾಗಳ ಪದಾಧಿಕಾರಿಗಳು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ಮನೋಹರ್ ಎಸ್. ಕಲ್ಮಾಡಿ ವಂದಿಸಿದರು.
ಬಿಲ್ಲವ ಸಮಾಜದ ಮೂರು ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವ ಭರವಸೆ ನೀಡಿದ ಸಿ.ಎಂ. ಬೊಮ್ಮಾಯಿ
ಕಾಪು : ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ, ಬಿಲ್ಲವ ಸಮಾಜವನ್ನು ಪ್ರವರ್ಗ (1) ಕ್ಕೆ ಸೇರ್ಪಡೆಗೊಳಿಸುವುದು, ಮಹಿಳಾ ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ, ಗರಡಿ ಅರ್ಚಕರಿಗೆ ಮಾಶಾಸನ, ಸಾಂಪ್ರಧಾಯಿಕ ಮೂರ್ತೆದಾರಿಕೆಗೆ ಪ್ರೋತ್ಸಾಹ ಮತ್ತು ಆಕಸ್ಮಿಕ ಅವಘಡದಿಂದ ಮೃತರಾಗುವ ಮೂರ್ತೆದಾರರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ ನೇತೃತ್ವದಲ್ಲಿ ಮನವಿ ನೀಡಲಾಯಿತು.
ಮನವಿಗೆ ಸ್ಪಂಧಿಸಿದ ಮುಖ್ಯಮಂತ್ರಿಗಳು ಗರೊಡಿ ಅರ್ಚಕರಿಗೆ ಮಾಶಾಸನ, ಮೂರ್ತೆದಾರಿಕೆಗೆ ಪ್ರೋತ್ಸಾಹ ಮತ್ತು ಆಕಸ್ಮಿಕ ಅವಘಡ ಸಂಧರ್ಭದಲ್ಲಿ ಪರಿಹಾರ ನೀಡಿಕೆ, ನಾರಾಯಣಗುರು ಅನುಯಾಯಿಗಳಾಗಿರುವ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಮತ್ತು ಸ್ವ ಉದ್ಯೋಗ ನಡೆಸುತ್ತಿರುವವರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿಕೆಗೆ ಪ್ರಥಮ ಆದ್ಯತೆಯಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯದ ಭಾಗವನ್ನು ಸಮಾಜ ವಿಜ್ಞಾನ ಪಠ್ಯ ಪುಸ್ತಕಕ್ಕೆ ಮರು ಸೇರ್ಪಡೆಗೆ ಆದೇಶಿಸಿದ ಸರಕಾರದ ನಿರ್ಧಾರವನ್ನು ಪ್ರಶಂಶಿಸಿ ಮುಖ್ಯಮಂತ್ರಿಗಳನ್ನು ಅಭಿನಂದಿಸಲಾಯಿತು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್, ಸುಕುಮಾರ್ ಶೆಟ್ಟಿ, ಬಿಜೆಪಿ ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಲ್ಲವ ಪರಿಷತ್ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ, ಹಿರಿಯ ಮುಖಂಡ ಅಚ್ಯುತ ಅಮೀನ್ ಕಲ್ಮಾಡಿ, ಮಾಜಿ ಜಿ. ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಎಂ, ಸುವರ್ಣ, ಕ್ಷೇತ್ರಾಡಳಿತ ಸಮಿತಿ ಗೌ. ಪ್ರ. ಕಾರ್ಯದರ್ಶಿ ಶಿವಾನಂದ ಪೂಜಾರಿ, ಕೋಶಾಧಿಕಾರಿ ವೀರೇಶ್ ಸುವರ್ಣ, ಪ್ರಮುಖರಾದ ರಾಜು ಪೂಜಾರಿ, ಭಾಸ್ಕರ ಪೂಜಾರಿ, ಕಾಮರಾಜ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ರಾಷ್ಟ್ರ ಹಿತಕ್ಕಾಗಿ ಮಂತ್ರಿ ಪದವಿಯನ್ನು ತೊರೆದು ಭಾರತೀಯ ಜನಸಂಘವನ್ನು ಸ್ಥಾಪಿಸಿದ ಡಾ! ಶ್ಯಾಮಪ್ರಸಾದ್ ಮುಖರ್ಜಿ, ಅಂತ್ಯೋದಯ ಪರಿಕಲ್ಪನೆಯನ್ನು ನೀಡಿದ ಪಂಡಿತ್ ದೀನದಯಾಳ್ ಉಪಾಧ್ಯಾಯರಂತಹ ಮಹಾನ್ ಚೇತನಗಳು ಪಕ್ಷದ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿಯಾಗಿದೆ. ರಾಷ್ಟ್ರೀಯತೆ ಸಹಿತ ಪಂಚ ನಿಷ್ಠೆಗಳ ಭದ್ರ ಬುನಾದಿಯಲ್ಲಿ ಸದೃಢವಾಗಿ ಬೆಳೆದು ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವೆನಿಸಿರುವ ಬಿಜೆಪಿಯ ಕಾರ್ಯಕರ್ತನಾಗುವುದು ಭಾಗ್ಯವೆನಿಸಿದರೆ, ಪಕ್ಷದ ಪದಾಧಿಕಾರಿಯಾಗುವುದು ಸೌಭಾಗ್ಯ ಎಂದು ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು.
ಅವರು ಬಿಜೆಪಿ ಉಡುಪಿ ನಗರ, ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಮತ್ತು ಬಿಜೆಪಿ ಅಂಬಲಪಾಡಿ ಇದರ ಆಶ್ರಯದಲ್ಲಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಹಾಗೂ ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ’ಯ ಅಂಗವಾಗಿ ಜು.10ರಂದು ಅಂಬಲಪಾಡಿ ವಸಂತ ಮಂಟಪದಲ್ಲಿ ನಡೆದ ಉಡುಪಿ ಜಿಲ್ಲಾಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸರ್ವೇಕ್ಷಣ ಘಟಕ ಮತ್ತು ಜಿಲ್ಲಾ ಎನ್.ಸಿ.ಡಿ. ಘಟಕ ಇದರ ಸಹಯೋಗದ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’, ‘ಉಚಿತ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ’ ಹಾಗೂ ‘ಉಚಿತ ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ನೊಂದಾವಣೆ’ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್(ರಿ.) ಹಾಗೂ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಇದರ ಸಹಯೋಗದ ‘ಉಚಿತ ನೇತ್ರ ತಪಾಸಣಾ ಶಿಬಿರ’ ಮತ್ತು ‘ಉಚಿತ ಕನ್ನಡಕ ವಿತರಣೆ’ ಹಾಗೂ ‘ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ’ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಇಂದು ಭಾರತದ ನಿಲುವಿಗೆ ವಿಶ್ವಮಾನ್ಯತೆ ದೊರೆಯುತ್ತಿದೆ. ಜಗತ್ತಿನ ರಾಷ್ಟ್ರಗಳು ದೇಶವನ್ನು ತಾತ್ಸಾರಭಾವದಿಂದ ಕಾಣುತ್ತಿದ್ದ ಈ ಹಿಂದಿನ ದೃಷ್ಟಿಕೋನಗಳು ಬದಲಾಗಿವೆ. ಇದಕ್ಕೆ ಕಾರಣ ವಿಶ್ವವಂದ್ಯರೆನಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ನಡೆ, ನುಡಿ ಹಾಗೂ ಆಡಳಿತ ವೈಖರಿ. ಇಂದು ಸಂಖ್ಯಾತ್ಮಕವಾಗಿ ಪಕ್ಷ ಸಾಕಷ್ಟು ಬೆಳೆದಿದೆ. ಆಡಳಿತ ಪಕ್ಷವಾಗಿ ಬಿಜೆಪಿ ತನ್ನದೇ ಆದ ವರ್ಚಸ್ಸು ಹಾಗೂ ಜವಾಬ್ದಾರಿ ಹೊಂದಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಚ್ಚಾರಿತ್ರ್ಯ, ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಪಕ್ಷದ ಗುಣಾತ್ಮಕ ಬೆಳವಣಿಗೆಗೆ ಒತ್ತು ನೀಡುವ ಜೊತೆಗೆ ಸರಕಾರದ ಜನಪರ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಯ ತನಕ ತಲುಪಿಸುವ ಮೂಲಕ ನಿರಂತರ ಜನಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ದ ಉತ್ತಮ ಕೆಲಸ ಕಾರ್ಯಗಳು, ಕೋವಿಡ್ ಸಂದರ್ಭದ ಸಾಧನೆ, ದೇಶದ ಭದ್ರತೆ ಹಾಗೂ ದೇಶವಾಸಿಗಳ ಕಲ್ಯಾಣಕ್ಕೆ ಕೈಗೊಂಡ ಉಪಕ್ರಮಗಳು ಪ್ರಶಂಸನೀಯ. ಕೇಂದ್ರ ಸರಕಾರದ ಎಂಟು ವರ್ಷಗಳ ಸಾರ್ಥಕ ಆಡಳಿತಕ್ಕೆ ಅಭಿನಂದನೆಗಳು. ಪಕ್ಷದ ಕಾರ್ಯಕರ್ತರು ಮೋದಿಯವರ ಆದರ್ಶಗಳು ಮತ್ತು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ಸರಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಪ್ರಚುರಪಡಿಸುವುದು ಇಂದಿನ ಅಗತ್ಯತೆ ಎಂದರು.
ಪ್ರಸಾದ್ ನೇತ್ರಾಲಯ ಉಡುಪಿ ಇದರ ವೈದ್ಯಕೀಯ ನಿರ್ದೇಶಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಜೃತ ನಾಡೋಜ ಡಾ! ಕೃಷ್ಣಪ್ರಸಾದ್ ಕೂಡ್ಲು ಮಾತನಾಡಿ, ಮೂಲಭೂತ ಅವಶ್ಯಕತೆಯಾಗಿರುವ ಆರೋಗ್ಯ ಸೇವೆಯನ್ನು ಜನತೆಗೆ ತಲುಪಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಪ್ರಧಾನಿ ಮೋದಿ ಆಶಯದಂತೆ ತಪಾಸಣಾ ಶಿಬಿರದ ಜೊತೆಗೆ ಗುಣಮಟ್ಟದ ಸೇವೆಯನ್ನು ನೀಡುವುದು ನಮ್ಮ ಆದ್ಯತೆಯಾಗಬೇಕು. ಮುಂದಿನ ದಿನಗಳಲ್ಲಿಯೂ ಉಚಿತ ನೇತ್ರ ತಪಾಸಣೆ ಹಾಗೂ ಕನ್ನಡಕ ವಿತರಣೆಯಂತಹ ಉದಾತ್ತ ಸೇವಾ ಕಾರ್ಯಗಳಿಗೆ ನಮ್ಮ ಸಂಪೂರ್ಣ ಸಹಕಾರವಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಮಾತನಾಡಿ, ಪ್ರಧಾನಿ ನರೇಂದ್ತ ಮೋದಿ ನೇತ್ರತ್ವದಲ್ಲಿ ನಡೆದ ಉತ್ತಮ ಕೆಲಸ ಕಾರ್ಯಗಳ ಪ್ರಚಾರ ಅಗತ್ಯ. ಬಿಜೆಪಿ ಉಡುಪಿ ನಗರ ವ್ಯಾಪ್ತಿಯ ಇತರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಕಾರ್ಯಕರ್ತರ ಸಮಾವೇಶ ಹಾಗೂ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಬೂತ್ ಸಶಸ್ತೀಕರಣ ಸಹಿತ ಪಕ್ಷದ ಎಲ್ಲ ಚಟುವಟಿಕೆಗಳನ್ನು ಅತ್ಯಂತ ಬದ್ಧತೆಯಿಂದ ಕಾರ್ಯಗತಗೊಳಿಸಲಾಗುತ್ತಿದೆ. ಅತ್ಯಂತ ಅರ್ಥಪೂರ್ಣ ರೀತಿಯಲ್ಲಿ ಕಾರ್ಯಕರ್ತರ ಸಮಾವೇಶ ಹಾಗೂ ಜನೋಪಯೋಗಿ ಸೇವಾ ಕಾರ್ಯಗಳನ್ನು ಆಯೋಜಿಸಲು ಕೈಜೋಡಿಸಿದ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ಎಲ್ಲ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಸದೃಢ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ತಾಲೂಕು ಆರೋಗ್ಯ ಇಲಾಖೆಯ ಡಾ! ಅಂಜಲಿ ವಾಗ್ಲೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ! ಸಾತ್ವಿಕ್, ಸಮುದಾಯ ವೈದ್ಯಕೀಯ ವಿಭಾಗದ ಡಾ! ಯಶ್, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ಕಾರ್ಯದರ್ಶಿ ದಯಾಶಿನಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಯೋಗೀಶ್ ಶೆಟ್ಟಿ, ರಾಮರಾಜ್ ಕಿದಿಯೂರು, ಶಕ್ತಿ ಕೇಂದ್ರಗಳ ಅಧ್ಯಕ್ಷರಾದ ನಾಗರಾಜ್ ಕರ್ಕೇರ, ವಿಜಯ ಶೆಟ್ಟಿ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಬೂತ್ ಸಮಿತಿಗಳ ಅಧ್ಯಕ್ಷರು, ಕಾರ್ಯದರ್ಶಿ, ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಮೋರ್ಚಾ ಮತ್ತು ಪ್ರಕೋಷ್ಠಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಬಿಜೆಪಿ ಮಹಾ ಶಕ್ತಿಕೇಂದ್ರ ಕಡೆಕಾರು-ಅಂಬಲಪಾಡಿ ಸಂಚಾಲಕ ರಾಜೇಂದ್ರ ಪಂದುಬೆಟ್ಟು ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು ವಂದಿಸಿದರು.