ಉದಯಪುರ ಘಟನೆಯ‌ ಬಗ್ಗೆ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಖಂಡನೀಯ; ಅಮಾಯಕನ ಶಿರಚ್ಛೇದಗೈದ ಇಬ್ಬರು ಭಯೋತ್ಪಾದಕರಿಗೆ ಅದೇ ಮಾದರಿಯ ಶಿಕ್ಷೆಯಾಗಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಲಾಲ್ ಎಂಬ ಅಮಾಯಕ ವ್ಯಕ್ತಿಯ ಶಿರಚ್ಛೇದಗೈದು ಹತ್ಯೆ ಮಾಡಿರುವ ಭಯೋತ್ಪಾದಕ ಜಂತುಗಳನ್ನು ಕೇವಲ ವ್ಯಕ್ತಿಗಳು ಮಾಡಿದ ಕೃತ್ಯ ಎಂದು ಸಂಭೋಧಿಸಿ, ಇಂತಹ ಘಟನೆಗಳು ಬಿಜೆಪಿ ಪ್ರೇರಿತ ಭಯೋತ್ಪಾದನೆ ಎಂದಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಕಳೆದ ಎಂಟು ವರ್ಷಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದಿರುವ ಬಿ.ಕೆ. ಹರಿಪ್ರಸಾದ್ ರವರಿಗೆ ಮಾಜಿ ಸಿ.ಎಂ. ಸಿದ್ಧರಾಮಯ್ಯ ಅವಧಿಯಲ್ಲಿ‌ ರಾಜ್ಯಾದ್ಯಂತ ನಡೆದಿರುವ ಹಿಂದೂ ಕಾರ್ಯಕರ್ತರ ಮಾರಣಹೋಮ ಮರೆತು ಹೋಯಿತೆ. ಧರ್ಮದ ಹೆಸರಲ್ಲಿ ರಾಜಕಾರಣ ಎಂದು ಕೇವಲ ಹಿಂದೂ ಸಮಾಜಕ್ಕೆ ಮಾತ್ರ ಬುದ್ಧಿ ಹೇಳುವ ಬಿ.ಕೆ. ಹರಿಪ್ರಸಾದ್ ರವರ ಮಾನಸಿಕತೆ ಮತ್ತು ಅತಿ ಬುದ್ಧಿವಂತಿಕೆಯನ್ನು ರಾಜ್ಯದ ಜನತೆ ಚೆನ್ನಾಗಿಯೇ ಅರಿತುಕೊಂಡಿದ್ದಾರೆ.

ಕಾಶ್ಮೀರದಲ್ಲಿರುವ ಕಾಶ್ಮೀರಿ ಪಂಡಿತರಿಗೆ ರಕ್ಷಣೆ ಇಲ್ಲ ಎಂದು ಅತಿ ಕಾಳಜಿ ತೋರುವ ಬಿ.ಕೆ. ಹರಿಪ್ರಸಾದ್ ರವರಿಗೆ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯಾಕಾಂಡ ನೆನಪಿಲ್ಲವೆ. ಹಿಂದೂ ಕಾರ್ಯಕರ್ತರ ಘಟನೆಗಳನ್ನು ಉಲ್ಲೇಖಿಸಿ ಭೋಧನೆ ಮಾಡುವವರಿಗೆ ಮಂಗಳೂರು ಗಲಭೆ, ಡಿ.ಜೆ. ಹಳ್ಳಿ ಕೆ.ಜೆ. ಹಳ್ಳಿ, ಹುಬ್ಬಳ್ಳಿ ಹಾಗೂ ಶಿವಮೊಗ್ಗ ಘಟನೆಗಳು ಕೂಡಾ ನೆನಪಿಗೆ ಬಾರದಿರುವುದು ವಿಪರ್ಯಾಸ.

ಪ್ರಜಾಪ್ರಭುತ್ವ, ಸಂವಿಧಾನ ಎಂದು ಮಹಾ ಮೇಧಾವಿಗಳಂತೆ ಬೊಗಳೆ ಬಿಡುವ ಕಾಂಗ್ರೆಸ್ ನಾಯಕರ ಹಿಂದೂ ವಿರೋಧಿ ಹೇಳಿಕೆಗಳು ಮತ್ತು ಒಂದೇ ಕೋಮಿನ ಅತಿಯಾದ ಓಲೈಕೆ ಇಂತಹ ಭಯೋತ್ಪಾದನಾ ಹೇಯ ಕೃತ್ಯಗಳಿಗೆ ಪ್ರೇರಣೆಯಾಗಿದೆ. ಉದಯಪುರದಲ್ಲಿ ನಡೆದ ಅಮಾಯಕ‌ ಟೈಲರ್ ನ ಬರ್ಬರ ಹತ್ಯೆ ನಾಗರಿಕ ಸಮಾಜಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದ್ದು ಅಪರಾಧಿಗಳಿಗೆ ಅದೇ ಮಾದರಿಯಲ್ಲಿ ಕಾನೂನು ರೀತ್ಯಾ ಉಗ್ರ ಶಿಕ್ಷೆಯನ್ನು ನೀಡುವ ಮೂಲಕ ಸಮಾಜ ಕಂಟಕರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ಸರಕಾರವನ್ನು ಅಗ್ರಹಿಸಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕರಾಳ ತುರ್ತು ಪರಿಸ್ಥಿತಿಯನ್ನು ಯಾತಕ್ಕಾಗಿ ಹೇರಿದರು ಎಂದು ವೆರೋನಿಕಾ ಕರ್ನೆಲಿಯೋ ಸ್ಪಷ್ಟಪಡಿಸಲಿ; ವೆರೋನಿಕಾ ಸಹಿತ ಕಾಂಗ್ರೆಸ್‌ ನಾಯಕರಿಗೆ ಆ‌ರ್.ಎಸ್‌.ಎಸ್ ಮತ್ತು ಪ್ರಧಾನಿ ಮೋದಿಯವರ ಹೆಸರೆತ್ತುವ ಯೋಗ್ಯತೆ ಇಲ್ಲ: ಉಡುಪಿ ಜಿಲ್ಲಾ ಬಿಜೆಪಿ

ಉಡುಪಿ: ಅಸಂಖ್ಯಾತ ಭಾರತೀಯರ ಹೋರಾಟ ಹಾಗೂ ಬಲಿದಾನದ ಫಲವಾಗಿ ದೊರೆತ ಸ್ಥಾತಂತ್ರ ವನ್ನು ಸರ್ವಾಧಿಕಾರಿ ಧೋರಣೆಯಿಂದ ಹತ್ತಿಕ್ಕಿ ಕೇವಲ ತನ್ನ ಅಧಿಕಾರ ಉಳಿಸಿಕೊಳ್ಳಲು ಮಾಜಿ ಪ್ರಧಾನಿ ಕಾಂಗ್ರೆಸ್ಸಿನ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ ಕರಾಳ ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳುವ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋರವರಿಗೆ ನಾಚಿಕೆಯಾಗಬೇಕು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿಯವರಿಗೆ ಇಂದಿರಾ ಗಾಂಧಿಯವರ ಹೆಸರು ಹೇಳುವ ಯೋಗ್ಯತೆ ಇಲ್ಲ ಎಂದಿರುವ ವೆರೋನಿಕಾ ಕರ್ನೆಲಿಯೋರವರು ದೇಶದಲ್ಲಿ ಅರಾಜಕತೆ, ದೊಂಬಿ, ಯುದ್ಧ, ಪ್ರವಾಹ ಅಥವಾ ಬರ ಪರಿಸ್ಥಿತಿ ಇಲ್ಲದೇ ಇದ್ದ ಕಾಲದಲ್ಲಿ ಇಂದಿರಾ ಗಾಂಧಿಯವರು ಯಾವ ಕಾರಣಕ್ಕೆ ತುರ್ತು ಪರಿಸ್ಥಿತಿಯನ್ನು ಹೇರಿಕೆ ಮಾಡಿದ್ದಾರೆ ಎಂದು ಮೊದಲು ಸ್ಪಷ್ಟಪಡಿಸಲಿ. ಸದಾ ನಕಲಿ ಗಾಂಧಿ ಕುಟುಂಬಕ್ಕೆ ಬಹುಪರಾಕ್ ಹೇಳುವ ವೆರೋನಿಕಾ ಸಹಿತ ಕಾಂಗ್ರೆಸ್‌ ನಾಯಕರಿಗೆ ಆರ್‌ಎಸ್‌ಎಸ್‌ ಹಾಗೂ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಹೆಸರೆತ್ತುವ ಯೋಗ್ಯತೆ ಇಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

1971ರ ಲೋಕಸಭೆಯ ಮಧ್ಯಂತರ ಚುನಾವಣಿಯಲ್ಲಿ ನಡೆಸಿದ ಆಕ್ರಮಗಳ ಕಾರಣಕ್ಕೆ 1975ರಲ್ಲಿ ತನ್ನ ಲೋಕಸಭಾ ಸದಸ್ಯತ್ವದ ಆಯ್ಕೆಯನ್ನು ರದ್ದುಗೊಳಸಿ 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನ್ಯಾಯಾಲಯ ನೀಡಿದ ತೀರ್ಪನ್ನೇ ತಿರಸ್ಕರಿಸಿದ ಇಂದಿರಾ ಗಾಂಧಿಯವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಜೂನ್ 25, 1975ರಂದು ತುರ್ತು ಪರಿಸ್ಥಿತಿಯನ್ನು ಘೋಷಿಸಿ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳಿರುವುದು ಹಾಗೂ ಪತ್ರಿಕಾ ಸ್ವಾತಂತ್ರ್ಯದ ಹರಣದ ಜೊತೆಗೆ ಮಾನವ ಹಕ್ಕುಗಳನ್ನು ಮೊಟಕುಗೊಳಿಸಿರುವುದು ದೇಶದ ಕರಾಳ ಇತಿಹಾಸವಾಗಿದ್ದರೂ ಕರ್ನೆಲಿಯೋರವರು ಮಾತ್ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಡೆದ ಧಮನಕಾರಿ ಕೆಟ್ಟ ಸಂಗತಿಗಳನ್ನು ಅಧಿಕಾರಿಗಳ ತಲೆಗೆ ಕಟ್ಟಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ ಹಾಗೂ ಅವರ ರಾಜಕೀಯ ಅನುಭವದ ಅಪಕ್ವತೆಯನ್ನು ಬಿಂಬಿಸುತ್ತದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್‌ ಶೆಟ್ಟಿ ಕಟಪಾಡಿ ತಿಳಿಸಿದ್ದಾರೆ.

ಸ್ವಾತಂತ್ರ್ಯ ನಂತರ ಬ್ರಹ್ಮಾಂಡ ಭ್ರಷ್ಟಾಚಾರದೊಂದಿಗೆ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿರುವ ಕಾಂಗ್ರೆಸ್‌ ಒಂದೇ ಕುಟುಂಬದ ಹಿತ ಕಾಯಲು ಪಣತೊಟ್ಟು ದೇಶದ ಹಿತ ಮರೆತಿರುವುದು ಗತ ಇತಿಹಾಸ. ಇದರ ಫಲವಾಗಿ ಇಂದು ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರು ಎರಡು ಸಾವಿರ ಕೋಟಿ ರೂಪಾಯಿಗೂ ಮಿಕ್ಕಿದ ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಸಿಲುಕಿ ಇ.ಡಿ. ವಿಚಾರಣೆಯನ್ನು ಎದುರಿಸುತ್ತಿರುವುದು ವಾಸ್ತವ. ದೇಶದೆಲ್ಲೆಡೆ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಳೆದುಕೊಂಡು ತೀವ್ರ ಅಧ:ಪತನದತ್ತ ಸಾಗುತ್ತಿದ್ದರೂ, ದೇಶಭಕ್ತ ಸಂಘಟನೆ ಆರ್.ಎಸ್.ಎಸ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ದೂಷಿಸುವುದು ಹಾಗೂ ಕಾಂಗ್ರೆಸ್ಸಿನ ನಾಯಕರು ಜೈಲಿನಿಂದ ಬಿಡುಗಡೆಯಾದಾಗ ಹಾರ ತುರಾಯಿಯೊಂದಿಗೆ ವಿಜೃಂಭಿಸುವುದು; ಇ.ಡಿ. ವಿಚಾರಣೆಗೆ ಹೋಗುವಾಗ ಮೆರವಣಿಗೆ, ಪ್ರತಿಭಟನೆಯ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿರುವುದು ಕಾಂಗ್ರೆಸ್‌ನ ದಯನೀಯ ಸ್ಥಿತಿಗೆ ಹಿಡಿದ ಕೈಗನ್ನಡಿಯಂತಿದೆ.

ಸ್ವಾತಂತ್ರ್ಯ ನಂತರ ಕಾಂಗ್ರೆಸ್ಸಿನ ದುರಾಡಳಿತ ದೇಶದ ಅಭಿವೃದ್ಧಿ ಮತ್ತು ಏಳಿಗೆಗೆ ಸ್ಪೀಡ್ ಬ್ರೇಕರ್‌ನಂತಾಗಿದೆ. ಹಿಂಬಾಗಿಲಿನಿಂದ ಅಧಿಕಾರ ಪಡೆದ ಜವಾಹರಲಾಲ್ ನೆಹರೂರವರಿಂದ ಪ್ರಾರಂಭಿಸಿ ರಿಮೋಟ್‌ ಕಂಟ್ರೋಲ್ ಪ್ರಧಾನಿಯೆಂದೇ ಬಿಂಬಿತರಾದ ಮನಮೋಹನ್ ಸಿಂಗ್‌ರವರ ವರೆಗೆ ದೇಶವನ್ನಾಳಿದ ಕಾಂಗ್ರೆಸ್‌ ದೇಶದ ಭದ್ರತೆ, ಗಡಿಗಳ ರಕ್ಷಣೆ, ಆರೋಗ್ಯ, ಮೂಲ ಸೌಕರ್ಯಗಳನ್ನು ಕಡೆಗಣಿಸಿ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ಫಲವಾಗಿ ದೇಶದೆಲ್ಲೆಡೆ ತಿರಸ್ಕೃತಗೊಂಡು ಅವನತಿಯ ಅಂಚಿನಲ್ಲಿದೆ. ಇಂದು ಉತ್ತಮ ಆಡಳತ, ಸೇವೆ ಮತ್ತು ಬಡವರ ಕಲ್ಯಾಣಕ್ಕೆ ಒತ್ತು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಜನಪರ ಮತ್ತು ಅಭಿವೃದ್ಧಿ ಪರ ಆಡಳಿತದ ಹೊಸ ಶಕೆಗೆ ನಾಂದಿ ಹಾಡಿ ಜನಬೆಂಬಲ ಗಳಿಸುತ್ತಿದೆ ಎಂದು ಗುರುಪ್ರಸಾದ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರ್.ಎಸ್.ಎಸ್. ಸರಸಂಘ ಚಾಲಕರ ಸ್ಥಾನದ ಬಗ್ಗೆ ಮಾತನಾಡುವ ಸಿದ್ದು ಮೊದಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಗಾಂಧಿ ಪರಿವಾರದ ಹೊರತಾದ ಅಭ್ಯರ್ಥಿ ಬಗ್ಗೆ ಪ್ರಸ್ತಾಪ ಮಾಡಲಿ: ಕುಯಿಲಾಡಿ ಸುರೇಶ್ ನಾಯಕ್ ಲೇವಡಿ

ಆರ್.ಎಸ್.ಎಸ್. ಸರಸಂಘ ಚಾಲಕರಾದ ಮೋಹನ್ ಭಾಗವತ್ ಅವರ ಸ್ಥಾನಕ್ಕೆ ದ್ರೌಪದಿ ಮುರ್ಮು ಅವರಂತಹ ಮಹಿಳೆಯನ್ನು ನೇಮಿಸಲಿ ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಮೊದಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಕಲಿ ಗಾಂಧಿ ಕುಟುಂಬದ ಹೊರತಾದ ಅಭ್ಯರ್ಥಿಯನ್ನು ಸೂಚಿಸುವ ಎದೆಗಾರಿಕೆಯನ್ನು ತೋರುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಲೇವಡಿ ಮಾಡಿದ್ದಾರೆ.

ಇತ್ತೀಚೆಗೆ ಚಡ್ಡಿ ಸುಡುವ ಅಭಿಯಾನ ಪ್ರಾರಂಭಿಸಿ ಚಡ್ಡಿ ಜಾರಿಸಿಕೊಂಡ ಸಿದ್ಧು ತನ್ನ ಒಣ ಪ್ರತಿಷ್ಠೆ ಪ್ರದರ್ಶನಗೈದ ರಾಜ್ಯಸಭಾ ಚುನಾವಣೆಯಲ್ಲಿಯೂ ತೀವ್ರ ಮುಖಭಂಗ ಅನುಭವಿಸಿರುವುದು ಬಟ್ಟಾಬಯಲಾಗಿದೆ.

ದೇಶಭಕ್ತರನ್ನೊಳಗೊಂಡಿರುವ ವಿಶ್ವದ ಅತೀ ದೊಡ್ಡ ಸ್ವಯಂ ಸೇವಕ ಸಂಘಟನೆ ಆರ್.ಎಸ್.ಎಸ್. ತತ್ವ ಸಿದ್ಧಾಂತಗಳ ಬಗ್ಗೆ ಎಳ್ಳಷ್ಟೂ ಅರಿಯದ ಸಿದ್ಧರಾಮಯ್ಯಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಥಮಿಕ ಶಿಕ್ಷಾ ವರ್ಗದ ತೀರಾ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ.

ಅಧಿಕಾರದ ದುರಾಸೆಯಿಂದ ದಲಿತ ನಾಯಕರಾದ ಪರಮೇಶ್ವರ್ ಸೋಲಿಗೆ ತಂತ್ರ ರೂಪಿಸಿ, ಮಲ್ಲಿಕಾರ್ಜುನ ಖರ್ಗೆಯೂ ಮುಖ್ಯಮಂತ್ರಿಯಾಗದಂತೆ ನೋಡಿಕೊಂಡ ಸಿದ್ಧರಾಮಯ್ಯ ಪ್ರಸಕ್ತ ಡಿ ಕೆ ಶಿವಕುಮಾರ್ ಜೊತೆಗಿನ ಮುಸುಕಿನ ಗುದ್ದಾಟದಲ್ಲಿ ಮೂಲೆಗುಂಪಾಗುವ ಭಯದಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡು ಕೇವಲ ಪ್ರಚಾರದಲ್ಲಿರಲು ಸದಾ ಪ್ರಧಾನಿ ಮೋದಿ ಹಾಗೂ ಆರ್.ಎಸ್.ಎಸ್. ಮಂತ್ರ ಪಠಿಸುತ್ತಿರುವುದು ಹಾಸ್ಯಾಸ್ಪದ.

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲೂ ಅನಗತ್ಯ ಗುಲ್ಲೆಬ್ಬಿಸಿ ವಿವಾದ ಸೃಷ್ಠಿಸಿರುವ ಸಿದ್ದು ತನ್ನ ಅಧಿಕಾರಾವಧಿಯಲ್ಲಿ ಎಡಪಂತೀಯ ಚಿಂತನೆಗಳಿಗಷ್ಟೆ ಮಹತ್ವ ನೀಡಿರುವ ವಿಚಾರವನ್ನು ಮರೆಮಾಚಲು ವಿಫಲಯತ್ನ ನಡೆಸಿರುವುದು ಗುಟ್ಟಾಗಿ ಉಳಿದಿಲ್ಲ.

ಓರ್ವ ಬುಡಕಟ್ಟು ಜನಾಂಗದ ಸಮರ್ಥ ಮಹಿಳೆ ರಾಷ್ಟ್ರಪತಿಯಾಗುವುದನ್ನು ಸಹಿಸದ ಸಿದ್ಧರಾಮಯ್ಯ ಕೀಳು ಮನಸ್ಥಿತಿ ಅವರ ನಕಲಿ ಜಾತ್ಯಾತೀತತೆಯ ಮುಖವಾಡವನ್ನು ಅನಾವರಣಗೊಳಿಸಿರುವುದು ವಾಸ್ತವ.

ಸರಕಾರದ ಯಾವುದೇ ಪ್ರಗತಿಪರ ಯೋಚನೆ ಯೋಜನೆಗಳನ್ನು ಪೂರ್ವಾಪರ ವಿಮರ್ಷಿಸದೇ ಕೇವಲ ವಿರೋಧಕ್ಕಾಗಿಯೇ ವಿರೋಧಿಸಿ ತನ್ನ ಮೂಗಿನ ನೇರಕ್ಕೆ ಸಮರ್ಥಿಸಿಕೊಳ್ಳುವ ಸಿದ್ಧು ತನ್ನ ಪೊಳ್ಳು ವಾದಕ್ಕೆ ಕವಡೆ ಕಿಮ್ಮತ್ತಿಲ್ಲದಿರುವುದನ್ನು ಅರಿತರೆ ಒಳಿತು. ತಪ್ಪಿದರೆ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿಯಂತೆ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧ:ಪತನದ ರೂವಾರಿಯಾಗುವುದಂತೂ ನಿಶ್ಚಿತ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಧಿಕಾರದ ಲಾಲಸೆಯಿಂದ ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿ ನಿಜಕ್ಕೂ ಅಮಾನವೀಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಂದು ದೇಶದಲ್ಲಿ ಯಾವುದೇ ಅರಾಜಕತೆ, ಯುದ್ಧ, ನೆರೆ ಹಾವಳಿ ಅಥವಾ ಬರ ಪರಿಸ್ಥಿತಿ ಇಲ್ಲದೇ ಇದ್ದರೂ ಇಂದಿರಾ ಗಾಂಧಿ ಕೇವಲ ರಾಜಕೀಯ ಲಾಭಕ್ಕಾಗಿ, ಅಧಿಕಾರದ ಲಾಲಸೆಯಿಂದ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿಕೆ ಮಾಡಿರುವುದು ನಿಜಕ್ಕೂ ಸರ್ವಕಾಲಿಕ ಅಮಾನವೀಯ ಕೃತ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಜೂ.25ರಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ‘ಕಾಂಗ್ರೆಸ್ ಸರ್ವಾಧಿಕಾರ ಹೇರಿದ ತುರ್ತುಪರಿಸ್ಥಿತಿಯ ಕರಾಳ ದಿನಕ್ಕೆ 45 ವರ್ಷಗಳು’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂದು ಅಧಿಕಾರ ಉಳಿಸಿಕೊಳ್ಳಲು ಇಂದಿರಾ ಗಾಂಧಿ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕಿ ತುರ್ತು ಪರಿಸ್ಥಿತಿ ಹೇರಿದ್ದರೆ, ಇಂದು ಕಾಂಗ್ರೆಸ್ ವರಿಷ್ಠರಿಗೆ ಇ.ಡಿ. ವಿಚಾರಣೆಗೆ ನೋಟಿಸ್ ನೀಡಿದರೆ ಡಿಕೆಶಿ, ಸಿದ್ದರಾಮಯ್ಯ ಸಹಿತ ಕಾಂಗ್ರೆಸಿಗರು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬೊಬ್ಬಿರಿದು ಬೀದಿಗಿಳಿದು ಗಲಭೆ ಮಾಡುತ್ತಿರುವುದು ವಿಪರ್ಯಾಸ. ದೇಶದಲ್ಲಿ ಒಳ್ಳೆಯ ವಿಚಾರವನ್ನು ಕಾಂಗ್ರೆಸ್ ಎಂದಿಗೂ ಸಹಿಸಿಕೊಳ್ಳುವುದಿಲ್ಲ. ದೇಶದ ಸ್ವಾತಂತ್ರ್ಯಾನಂತರ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿ ಒಂದೇ ಕುಟುಂಬದ ಉದ್ಧಾರಕ್ಕಾಗಿ ದೇಶದ ಹಿತವನ್ನು ಬಲಿಕೊಟ್ಟು ಸಂವಿಧಾನ ಮತ್ತು ಕಾನೂನನ್ನು ತಮಗೆ ಬೇಕಾದಂತೆ ದುರ್ಬಳಕೆ ಮಾಡಿರುವ ಕಾಂಗ್ರೆಸ್ ನಿರಂತರವಾಗಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕುಯಿಲಾಡಿ ಹೇಳಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, 1947ರಲ್ಲಿ ಹೋರಾಟಗಳ ಮೂಲಕ ಪಡೆದ ಸ್ವಾತಂತ್ರ್ಯವನ್ನು 1975ರಲ್ಲಿ ಇಂದಿರಾ ಗಾಂಧಿಯವರು ತಮ್ಮ ರಾಜಕೀಯ ದುರಾಸೆಗೋಸ್ಕರ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ದೇಶವಾಸಿಗಳ ಬದುಕನ್ನು ದುಸ್ತರಗೊಳಿಸಿ ವ್ಯಕ್ಯಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಪತ್ತಿಕಾ ಸ್ವಾತಂತ್ರ್ಯ ಹರಣ ಮಾಡಿದರು ಎಂದರು.

ಇಂದಿನ ಯುವ ಪೀಳಿಗೆಗೆ ತುರ್ತು ಪರಿಸ್ಥಿತಿಯ ಬಗ್ಗೆ ಅರಿವು ಮೂಡಿಸುವುದು ಜವಾಬ್ದಾರಿಯುತ ಸ್ಥಾನದಲ್ಲಿರುವ ಬಿಜೆಪಿ ಪಕ್ಷದ ಕರ್ತವ್ಯವಾಗಿದೆ. ಅಂದು ಜನಸಂಘದ ಹಿರಿಯರನ್ನು ಅಧಿಕಾರ ದುರುಪಯೋಗ ಪಡಿಸಿಕೊಂಡು ಜೈಲಿಗೆ ಅಟ್ಟಲಾಯಿತು. 21 ತಿಂಗಳ ಕಾಲ ಹೇರಿದ್ದ ತುರ್ತು ಪರಿಸ್ಥಿತಿಯ ವಿರುದ್ದ ಧ್ವನಿ ಎತ್ತಿದವರನ್ನು ಬಂಧಿಸಿ ಹಿಂಸಿಸಲಾಯಿತು. ಈ ವಿಷಯಗಳನ್ನು ನಮ್ಮ ಹಿರಿಯರು ನಮಗೆ ತಿಳಿಸಿದ್ದಾರೆ. ನಾವು ಅದನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಭಾರತೀಯ ಜನಸಂಘದ ಸಕ್ರಿಯ ಸದಸ್ಯರಾಗಿದ್ದು ತುರ್ತು ಪರಿಸ್ಥಿತಿಯ ಹೋರಾಟಗಳಲ್ಲಿ ಭಾಗವಹಿಸಿ, ಪ್ರಸಕ್ತ ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿರುವ ರಮಾಕಾಂತ್ ದೇವಾಡಿಗ ರವರನ್ನು ಪಕ್ಷದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಪದಾಧಿಕಾರಿಗಳು, ನಗರಸಭಾ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆ ಕಾರ್ಯಕ್ರಮದ ಜಿಲ್ಲಾ ಸಂಚಾಲಕಿ ರೇಶ್ಮಾ ಉದಯ ಶೆಟ್ಟಿ ಸ್ವಾಗತಿಸಿ, ಜಿಲ್ಲಾ ಸಹ ಸಂಚಾಲಕ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ವಂದಿಸಿದರು.

ಜೂ.25 ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆ’

ಉಡುಪಿ: ಜೂನ್ 25, 1975ರಂದು ವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಹರಣದೊಂದಿಗೆ ಪ್ರಜಾತಂತ್ರ ವ್ಯವಸ್ಥೆಯ ಕಗ್ಗೊಲೆಯಿಂದ ದೇಶ ಕಂಡ ಕರಾಳ ಅಧ್ಯಾಯ ‘ತುರ್ತುಪರಿಸ್ಥಿತಿ’. ಕಾಂಗ್ರೆಸ್ ಸರ್ವಾಧಿಕಾರ ಹೇರಿದ ತುರ್ತುಪರಿಸ್ಥಿತಿಯ ಕರಾಳ ದಿನಕ್ಕೆ ಜೂ.25ರಂದು 45 ವರ್ಷಗಳು ತುಂಬಲಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜೂ.25 ಶನಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ‌ ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆ ನಡೆಯಲಿದೆ.

ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಜಿಲ್ಲಾ ಸಂಚಾಲಕಿ ರೇಶ್ಮಾ ಉದಯ ಶೆಟ್ಟಿ ಹಾಗೂ ಸಹ ಸಂಚಾಲಕ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಅಖಂಡ ಭಾರತಕ್ಕಾಗಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ’: ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ: ‘ಏಕ್ ದೇಶ್ ಮೆ ಧೋ ವಿಧಾನ್, ಧೋ ಪ್ರಧಾನ್ ಔರ್ ಧೋ ನಿಶಾನ್ ನಹೀ ಚಲೇಗ’ ಎಂಬ ಘೋಷಣೆಯೊಂದಿಗೆ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣ ವಿಲೀನಗೊಳಿಸುವ ಬೇಡಿಕೆಯೊಂದಿಗೆ ಸತ್ಯಾಗ್ರಹ, ಹೋರಾಟಗಳ ಮೂಲಕ ಅಖಂಡ ಭಾರತಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು.

ಅವರು ಜೂ.23ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜನಸಂಘದ ಸಂಸ್ಥಾಪಕ ಹಾಗೂ ಪ್ರಥಮ ಅಧ್ಯಕ್ಷ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮುಖರ್ಜಿ ಜೀವನಾದರ್ಶಗಳನ್ನು ವಿಶ್ಲೇಷಿಸಿ ಮಾತನಾಡಿದರು.

ಜುಲೈ 6, 1901ರಲ್ಲಿ ಕಲ್ಕತ್ತದಲ್ಲಿ
ಜನಿಸಿದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರು ಮಹಾ ಮೇಧಾವಿಯಾಗಿದ್ದು ಬ್ಯಾರಿಸ್ಟರ್ ಪದವಿ ಸಹಿತ ಉನ್ನತ ವ್ಯಾಸಂಗವನ್ನು ಪಡೆದು 1924ರಲ್ಲಿ ಕಲ್ಕತ್ತ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದರು. ನೆಹರೂ ಸಂಪುಟದಲ್ಲಿ ಸಚಿವರಾಗಿದ್ದ ಮುಖರ್ಜಿಯವರು ನೆಹರೂ ಸಿದ್ಧಾಂತವನ್ನು ವಿರೋಧಿಸಿ 1950ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, 1951ರಲ್ಲಿ ಭಾರತೀಯ ಜನಸಂಘ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿ ಮೊದಲ ಅಧ್ಯಕ್ಷರಾದರು.

ರಾಷ್ಟ್ರವಾದಿ ಭಾವನೆಗಳನ್ನು ಮೈಗೂಡಿಸಿಕೊಳ್ಳುವಂತೆ ಯುವಕರಿಗೆ ಕರೆ ನೀಡಿರುವ ಮುಖರ್ಜಿಯವರು ಜಮ್ಮು ಕಾಶ್ಮೀರದ 370ನೇ ವಿಧಿ ರದ್ಧತಿಯ ಹೋರಾಟಕ್ಕೆ ಧುಮುಕಿ 1953 ಮೇ 11ರಂದು ಕಾಶ್ಮೀರ ಪ್ರವೇಶಿಸಿ ಬಂಧಿತರಾಗಿ, ಜೂನ್ 23ರಂದು ಶ್ರೀನಗರದಲ್ಲಿ ಅವರ ಬಲಿದಾನವಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನೇತೃತ್ವದಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನದ 370ನೇ ವಿಧಿಯ ರದ್ದತಿಯಾಗಿರುವುದು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರಿಗೆ ಸಂದ ಅರ್ಥಪೂರ್ಣ ಶೃದ್ಧಾಂಜಲಿಯಂತಿದೆ ಎಂದು ಉದಯ ಕುಮಾರ್ ಶೆಟ್ಟಿ ಹೇಳಿದರು.

ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಸ್ವದೇಶಿ ಹಾಗೂ ಸ್ವಾವಲಂಬನೆಯ ಚಿಂತನೆಯೊಂದಿಗೆ ದೇಶದ ಅಖಂಡತೆಗೆ ತನ್ನನ್ನು ಸಮರ್ಪಿಸಿಕೊಂಡಿರುವ ಡಾ! ಶ್ಯಾಮಪ್ರಸಾದ್ ಮುಖರ್ಜಿರವರ ತತ್ವಾದರ್ಶಗಳು ಬಿಜೆಪಿ ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ. ದೇಶ ವಿಭಜನೆಯಿಂದ ನಡೆದ ಘೋರ ಕಗ್ಗೊಲೆ, ಮುಸ್ಲಿಂ ತುಷ್ಟೀಕರಣ, ಪಾಶ್ಚಾತ್ಯ ನೀತಿಗಳತ್ತ ವಾಲಿಕೆಯ ಸ್ಥಿತಿಗತಿಗಳನ್ನರಿತ ಡಾ! ಶ್ಯಾಮಪ್ರಸಾದ್ ಪ್ರಸಾದ್ ಮುಖರ್ಜಿಯವರು ನೆಹರೂ ಸಂಪುಟದಿಂದ ನಿರ್ಗಮಿಸಿ, ಭಾರತೀಯ ಜನ ಸಂಘವನ್ನು ಸ್ಥಾಪಿಸಿ, ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿಯ ಹೋರಾಟದ ಮೂಲಕ ದೇಶದ ಅಖಂಡತೆಗೆ ನೀಡಿರುವ ಕೊಡುಗೆ ಸದಾ ಸ್ಮರಣೀಯ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್‌ ಠಾಕೂರ್, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಪದಾಧಿಕಾರಿಗಳು, ನಗರಸಭಾ ಸದಸ್ಯರು, ವಿವಿಧ ಸ್ತರದ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಜಿಲ್ಲಾ ಸಂಚಾಲಕ ಪೆರ್ಣಂಕಿಲ ಶ್ರೀಶ ನಾಯಕ್ ಸ್ವಾಗತಿಸಿದರು. ಜಿಲ್ಲಾ ಸಹ ಸಂಚಾಲಕ ಗಿರೀಶ್ ಎಮ್. ಅಂಚನ್ ಕಾರ್ಯಕ್ರಮ ‌ನಿರೂಪಿಸಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ವಂದಿಸಿದರು.

ಅಗ್ನಿಪಥ್ ಪ್ರತಿಭಟನಾಕಾರರಿಂದಲೇ ಹಾನಿ ಮೌಲ್ಯ ದ ವಸೂಲಿ!?




ಲಕ್ನೋ : ಅಗ್ನಿಪಥ್ ಯೋಜನೆಯ ವಿರುದ್ಧ ಉತ್ತರ ಪ್ರದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.
ಹಲವಾರು ಸ್ಥಳಗಳಲ್ಲಿ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಇಂತಹ ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರ ಮನೆಗಳನ್ನು ಬುಲ್ಡೋಜರ್ಗಳಿಂದ ಧ್ವಂಸಗೊಳಿಸಿ ಯೋಗಿ ಸರ್ಕಾರ ಈಗಾಗಲೇ ಬಿಸಿ ಮುಟ್ಟಿಸಿತ್ತು.



ಈ ಬಾರಿ ವಾರಣಾಸಿ ಆಡಳಿತ ಒಂದು ಹೆಜ್ಜೆ ಮುಂದೆ ಹೋಗಿ, ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಆಸ್ತಿಯನ್ನು ನಾಶಪಡಿಸಿದವರಿಂದ ಪರಿಹಾರವನ್ನು ವಸೂಲಿ ಮಾಡುವುದಾಗಿ ಹೇಳಿದೆ.



ವಾರಣಾಸಿ ಆಡಳಿತ ಅಗ್ನಿಪಥ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸುವ ಕೆಲಸವನ್ನು ಈಗಾಗಲೇ ಪ್ರಾರಂಭಿಸಿದೆ. ಈ ಕೆಲಸ ಮುಗಿದ ಬಳಿಕ ಹಾನಿಯಾದ ಸಾರ್ವಜನಿಕ ಆಸ್ತಿಯನ್ನು ಸರಿಪಡಿಸಲು ಪ್ರತಿಭಟನಾಕಾರರಿಂದಲೇ ವಸೂಲಿ ಮಾಡಲಿದೆ ಎಂದು ತಿಳಿಸಿದೆ.

ಮೈಸೂರಿನಲ್ಲಿ ಸಾವಿರಾರು ಜನರೊಂದಿಗೆ ಪ್ರಧಾನಿ ಮೋದಿ ಯೋಗ ದಿನಾಚರಣೆ


ಮೈಸೂರು: ಮಾನವೀಯತೆಗಾಗಿ ಯೋಗ ಈ ವರ್ಷದ ಘೋಷವಾಕ್ಯವಾಗಿದೆ. ಇಂದು ಯೋಗ ಜಾಗತಿಕವಾಗಿ ತನ್ನದೇ ಆದ ಮಹತ್ವದ ಸ್ಥಾನ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮೈಸೂರಿನ ಅರಮನೆ ಮೈದಾನದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಮೋದಿ, ಎಲ್ಲರಿಗೂ ವಿಶ್ವ ಯೋಗ ದಿನಾಚರಣೆಯ ಶುಭಾಶಯಗಳು. ಇಂದು ವಿಶ್ವದ ಮೂಲೆ ಮೂಲೆಗಳಲ್ಲಿಯೂ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಕೊರೋನಾ ಸಮಯದಲ್ಲಿಯೂ ಯೋಗದ ಉತ್ಸಾಹ ಕಡಿಮೆಯಾಗಲಿಲ್ಲ ಎಂದರು.


ಯೋಗ ಶಾಂತಿಯನ್ನು ಮೂಡಿಸುತ್ತದೆ ಎಂದು ನಮ್ಮ ಋಷಿಮುನಿಗಳು ತೋರಿಸಿಕೊಟ್ಟಿದ್ದಾರೆ. ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾಗಿರುವ ಮೈಸೂರು ಆಧ್ಯಾತ್ಮ, ಯೋಗದ ಭೂಮಿಯಾಗಿದೆ. ಈ ಮೊದಲು ಯೋಗವನ್ನು ಕೆಲವು ಮನೆಗಳು ಆಧ್ಯಾತ್ಮ ಕೇಂದ್ರಗಳಲ್ಲಿ ಮಾತ್ರ ಆಚರಿಸಲಾಗುತ್ತಿತ್ತು. ಇಂದು ವಿಶ್ವದೆಲ್ಲೆಡೆ ಜನ ಯೋಗ ಮಾಡುತ್ತಿದ್ದಾರೆ ಎಂದು ಹೇಳಿದರು.

ಇಂದು ಜೀವನಶೈಲಿಯಲ್ಲಿ ಬದಲಾವಣೆಯಾಗಿದೆ. ಸ್ವಯಂ ಜಾಗೃತಿಯಿಂದ ಯೋಗದಿಂದ ಜೀವನಶೈಲಿ ಸುಧಾರಿಸಿಕೊಳ್ಳಬಹುದು. ಯೋಗದ ಸಂದೇಶ ಸಾರಲು ಮುಂದಾದ ವಿಶ್ವಸಂಸ್ಥೆಗೆ ಧನ್ಯವಾದ ಹೇಳಿದ ಅವರು, ಯೋಗದಿನದ ವಿಶ್ವಾಸವೇ ನಮ್ಮ ಬದುಕಿಗೂ ಪ್ರೇರಣೆಯಾಗಿದೆ. ನಮ್ಮೆಲ್ಲರ ಆತ್ಮಸಾಕ್ಷಿಯನ್ನು ಯೋಗ ಎಚ್ಚರಿಸುತ್ತದೆ. ಜನತೆ, ದೇಶದ ಸಂಪರ್ಕಕ್ಕೆ ಯೋಗದಿಂದ ಅನುಕೂಲವಾಗಿದೆ. ಸಮಾಜದಲ್ಲಿ ಶಾಂತಿ, ವಿಶ್ವಶಾಂತಿಗಾಗಿ ಯೋಗ ಬೇಕಿದೆ. ಗಾರ್ಡಿಯನ್ ರಿಂಗ್ ಆಫ್ ಯೋಗ ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನದ ಪ್ರಮುಖ ಆಕರ್ಷಣೆಯಾಗಿದೆ. ವಿಶ್ವದಾದ್ಯಂತ ನಡೆಯುವ ಯೋಗ ದಿನಾಚರಣೆಯ ಕಾರ್ಯಕ್ರಮಗಳನ್ನು ಜೋಡಿಸಲಾಗುತ್ತದೆ ಎಂದರು.

ಉಡುಪಿ ಜಿಲ್ಲಾ ಬಿಜೆಪಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಜೊತೆಯಾಗಿ ದೀಪ ಪ್ರಜ್ವಲಿಸುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.

ಬಿಜೆಪಿ‌ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಯೋಗ ದಿನಾಚರಣೆಯ ರಾಜ್ಯ ಸಹ ಸಂಯೋಜಕ ಕೆ‌.ಉದಯ ಕುಮಾರ್ ಶೆಟ್ಟಿಯವರು ಯೋಗ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಡಾ! ಪ್ರಭಾಕರ ಯು. ರೆಂಜಾಳ ರವರು ಯೋಗದ ಮಹತ್ವ ಮತ್ತು ಉಪಯೋಗದ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಯೋಗ ಶಿಕ್ಷಕಿ ಶೋಭಾ ಶೆಟ್ಟಿ ಇಂದ್ರಾಳಿ ಯವರು ಯೋಗ ತರಗತಿಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ‌ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಯೋಗ ದಿನಾಚರಣೆಯ ಜಿಲ್ಲಾ ಸಂಚಾಲಕ ಮಹೇಶ್ ಠಾಕೂರ್ ಹಾಗೂ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ‌ ಮತ್ತು ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.‌ ಜಿಲ್ಲಾ ಸಹ ವಕ್ತಾರ ಗಿರೀಶ್ ಎಮ್. ಅಂಚನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಯೋಗದಿಂದ ಭಾರತದ ಭವ್ಯ ಪರಂಪರೆ ಹಾಗೂ ಸಂಸ್ಕ್ರತಿಯ ಅನಾವರಣ: ಕೆ.ಉದಯ ಕುಮಾರ್ ಶೆಟ್ಟಿ


ಯೋಗ ಮತ್ತು ಭಾರತಕ್ಕೆ ಅವಿನಾಭಾವ ಸಂಬಂಧವಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನವನ್ನು ಆಚರಿಸುವ ಮೂಲಕ ಭಾರತದ ಭವ್ಯ ಪರಂಪರೆ ಹಾಗೂ ಸಂಸ್ಕ್ರತಿಯ ಅನಾವರಣವಾದಂತಾಗಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ರಾಜ್ಯ ಸಹ ಸಂಯೋಜಕ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸೆ.2014ರಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಹೆಮ್ಮೆಯ ಯೋಗಾಭ್ಯಾಸದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಪ್ತಸ್ತಾಪಕ್ಕೆ ಮಾನ್ಯತೆ ದೊರೆತು ಜೂನ್ 21, 2015ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಪ್ರಥಮ ಬಾರಿಗೆ ಆಚರಿಸಲಾಯಿತು. ಸುಮಾರು 6,000 ವರ್ಷಗಳ ಇತಿಹಾಸವಿರುವ ಭೌತಿಕ, ಮಾನಸಿಕ ಆರೋಗ್ಯ ಸಂರಕ್ಷಣೆಯ ಜೊತೆಗೆ ಆಧ್ಯಾತ್ಮಿಕ ಚಿಂತನೆಗಳಿಗೆ ಸ್ಪೂರ್ತಿ ನೀಡುವ ಯೋಗಾಭ್ಯಾಸವನ್ನು ಜನತೆ ತಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವನ್ನಾಗಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿದೆ ಎಂದು ಅವರು ಹೇಳಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉಡುಪಿ ಜಿಲ್ಲಾ ಸಂಚಾಲಕ ಮಹೇಶ್ ಠಾಕೂರ್ ಮಾತನಾಡಿ ಜಿಲ್ಲಾ ಬಿಜೆಪಿ ವತಿಯಿಂದ ಜೂನ್ 21ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಗಂಟೆ 7.30 ರಿಂದ 9.30ರವರೆಗೆ ಶ್ಯಾಮಿಲಿ ಸಭಾಂಗಣದಲ್ಲಿ ಯೋಗ ದಿನಾಚರಣೆ ನಡೆಯಲಿದೆ. ಡಾ! ಚಿನ್ಮಯ್ ಗೋಸ್ವಾಮಿಯವರು ಯೋಗದ ಮಹತ್ವ ಮತ್ತು ಶಿಸ್ತುಬದ್ಧ ಜೀವನದ ಬಗ್ಗೆ ಮಾಹಿತಿ ನೀಡಲಿದ್ದು, ಯೋಗ ಶಿಕ್ಷಕಿ ಶೋಭಾ ಶೆಟ್ಟಿ ಯೋಗ ತರಗತಿ ನಡೆಸಿಕೊಡಲಿದ್ದಾರೆ. ಜಿಲ್ಲೆಯ ಸಚಿವರು, ಶಾಸಕರು, ಪಕ್ಷದ ಎಲ್ಲಾ ಸ್ತರದ‌ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ ಜೂನ್ 21ರಂದು ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಶಕ್ತಿಕೇಂದ್ರ ಮಟ್ಟದಲ್ಲಿ ಆಯೋಜಿಸಿ ಯಶಸ್ವಿಗೊಳಿಸುವ ಜೊತೆಗೆ ಜೂನ್ 23ರಂದು ನಡೆಯುವ ಶ್ಯಾಮಪ್ರಸಾದ್ ಮುಖರ್ಜಿಯವರ ಸಂಸ್ಮರಣಾ ದಿನವನ್ನು ಪ್ರತೀ ಬೂತ್ ಗಳಲ್ಲಿ ಆಯೋಜಿಸಬೇಕು. ಜೂನ್ 25ರಂದು ತುರ್ತುಪರಿಸ್ಥಿತಿ ಕರಾಳ ದಿನಾಚರಣೆಯನ್ನು ಜಿಲ್ಲೆ ಮತ್ತು ಮಂಡಲ ಮಟ್ಟದಲ್ಲಿ ಹಮ್ಮಿಕೊಳ್ಳುವ ಜೊತೆಗೆ ಜುಲೈ 7ರಂದು ಶ್ಯಾಮಪ್ರಸಾದ್ ಮುಖರ್ಜಿಯವರ ಜನ್ಮ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಎಲ್ಲಾ ಬೂತ್ ಗಳಲ್ಲಿ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಮಿತಿ ಸದಸ್ಯ ಡಾ! ವಿಜಯೇಂದ್ರ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್, ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪಕ್ಷದ ಪ್ರಮುಖರು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠಗಳ ಸಂಚಾಲಕರು ಉಪಸ್ಥಿತರಿದ್ದರು.

Design a site like this with WordPress.com
Get started