ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ನೇಮಕ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ತೆರವಾಗಿರುವ ಮತ್ತು ಖಾಲಿ ಉಳಿದಿರುವ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸ್ಥಾನಗಳನ್ನು ಭರ್ತಿ ಮಾಡಿ ಸದಸ್ಯರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಗೀತಾಂಜಲಿ ಎಮ್. ಸುವರ್ಣ ಮತ್ತು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಕಾರ್ಯದರ್ಶಿಗಳಾಗಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಮತ್ತು ಅನಿತಾ ಶ್ರೀಧರ್ ಕುಂದಾಪುರ ಹಾಗೂ ಜಿಲ್ಲಾ ವಕ್ತಾರರಾಗಿ ಕೆ.ರಾಘವೇಂದ್ರ ಕಿಣಿ ಕಡಿಯಾಳಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ‌ ಪೂಜೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಮಹಿಳಾ ಘಟಕದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ನಡೆಯಿತು.

ಸುಮಾರು 350ಕ್ಕೂ‌ ಮಿಕ್ಕಿ ಭಕ್ತಾದಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆಯನ್ನು ಸಲ್ಲಿಸಿ ಭಜನೆ, ಸಾಮೂಹಿಕ ಅಷ್ಟೋತ್ತರ‌ ಮತ್ತು ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡರು. ಮಹಾಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ,‌ ಪ್ರಧಾನ ಕಾರ್ಯದರ್ಶಿ ರಾಜೇಶ್, ಜತೆ ಕಾರ್ಯದರ್ಶಿ‌ ಮಹೇಂದ್ರ ಕೋಟ್ಯಾನ್,‌ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿಯರಾದ ಗೋಧಾವರಿ ಎಮ್. ಸುವರ್ಣ, ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ಜಯಂತಿ ಹರೀಶ್, ಜತೆ ಕಾರ್ಯದರ್ಶಿಗಳಾದ ಸವಿತಾ ಸಂತೋಷ್, ಪ್ರಭಾ ದಯಾನಂದ ಮತ್ತು ಸಂಘದ ಆಡಳಿತ ಸಮಿತಿ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಶಿವದಾಸ್ ಪಿ., ರಮೇಶ್ ಕೋಟ್ಯಾನ್, ಸತೀಶ್ ಪೂಜಾರಿ, ಗುರುರಾಜ್ ಪೂಜಾರಿ, ಶಿವಾಜಿ ಸನಿಲ್, ವಿನಯ್ ಕುಮಾರ್, ಶಶಿಕಾಂತ್‌, ನಿತಿನ್ ಕುಮಾರ್, ಮಹಿಳಾ ಘಟಕದ ಸಮಿತಿ ಸದಸ್ಯರು, ಸಂಘದ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿಯಾದ ಸಚಿವೆ ಶೋಭಾ ಕರಂದ್ಲಾಜೆ

ದೆಹಲಿ: ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಇಂದು ಸಂಸತ್ತಿನಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರು ಭೇಟಿ ಮಾಡಿದರು.

ಸಂಘ ಪರಿವಾರದ ಕಾರ್ಯಕರ್ತ ಶ್ರೀ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದುದಕ್ಕೆ ಅವರಿಗೆ ಧನ್ಯವಾದ ತಿಳಿಸಿ, ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದರು.

ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಶಾಸಕ ಕೆ.ರಘುಪತಿ ಭಟ್ ಅಭಿನಂದನೆ

ಉಡುಪಿ: ಕೇಂದ್ರ ಸರಕಾರಿ ಸ್ವಾಮ್ಯದ ‘ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್’ ಇದರ ಮೆನೇಜ್ಮೆಂಟ್ ಕಮಿಟಿ’ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಬಿಜೆಪಿ ಉಡುಪಿ ನಗರ ವತಿಯಿಂದ ಶಾಲು ಹೊದೆಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಸಾವಯವ ಕೃಷಿ ನಿರ್ದೇಶಕ ರಾಘವೇಂದ್ರ ಉಪ್ಪೂರು, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ಉಪಸ್ಥಿತರಿದ್ದರು.

ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ



ಉಡುಪಿ: ಕೇಂದ್ರ ಸರಕಾರದ ಕೃಷಿ ಮತ್ತು ರೈತರ‌ ಕಲ್ಯಾಣ ಸಚಿವಾಲಯದ ಸುಪರ್ದಿಯಲ್ಲಿರುವ ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದೆಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಮಂಡಳಿ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ,‌ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಂಚಾಲಕ ಶ್ರೀನಿಧಿ ಹೆಗ್ಡೆ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು ಉಪಸ್ಥಿತರಿದ್ದರು.

ಬಿಜೆಪಿ ಸಂಘಟನೆಯ ಶಕ್ತಿಯನ್ನು ಕುಗ್ಗಿಸಲು ಜಿಹಾದಿಗಳಿಂದ ಸಾಧ್ಯವಿಲ್ಲ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಸುಳ್ಯದ ಬೆಳ್ಳಾರೆಯಲ್ಲಿ ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಕಗ್ಗೊಲೆಯಾಗಿದೆ‌. ಕೋಳಿ ಅಂಗಡಿ ಇಟ್ಟುಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದನು. ಜಿಹಾದಿಗಳು ಬಿಜೆಪಿಗೆ ನೀಡುವ ಬೆದರಿಕೆ ಹೊಸತಲ್ಲ. ಆದರೆ ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಜು.30ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿ ನಡೆದ ಶೃದ್ದಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರಕಾರ ಹರ್ಷ ಹತ್ಯೆ, ಪ್ರವೀಣ್ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಎನ್.ಐ.ಎ ಗೆ ವಹಿಸಿದೆ. ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡುವುದು ನೆಪ ಮಾತ್ರ. ಆದರೆ ಇದರ ಹಿಂದೆ ಇರುವ ಮತಾಂಧರ ಹುನ್ನಾರವನ್ನು ಅರಿಯಬೇಕಿದೆ.

ಬಿಜೆಪಿ ಪಕ್ಷಕ್ಕೆ ಇದು ಪರೀಕ್ಷೆಯ ಕಾಲಘಟ್ಟ. ಕಾರ್ಯಕರ್ತರು ಮನನೊಂದು ರಾಜಿನಾಮೆ ನೀಡುವುದು ಸೂಕ್ತವಲ್ಲ. ಮನೆಗೆ ಬೆಂಕಿ ಬಿದ್ದಾಗ ಅಗ್ನಿಶಾಮಕ ದಳವನ್ನು ಕರಿಯಬೇಕು, ಅದನ್ನು ಬಿಟ್ಟು ಪೆಟ್ರೋಲ್ ಹುಡುಕುವುದಲ್ಲ. ನಾವೆಲ್ಲಾ ಒಟ್ಟಾಗಿ ಇಂತಹ ಸಂದರ್ಭವನ್ನು ಎದುರಿಸುವ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಪ್ರವೀಣ್ ನೆಟ್ಟಾರು ಅವರ ಮನೆಗೆ ಉಡುಪಿ ಜಿಲ್ಲಾ ಬಿಜೆಪಿಯ ತಂಡ ಭೇಟಿ ನೀಡಿ ಆರ್ಥಿಕ ಸಹಾಯ ಮಾಡುತ್ತೇವೆ ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಪಕ್ಷದ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಅತೀವ ನೋವು ತಂದಿದೆ. ಜಿಹಾದಿ ಮಾನಸಿಕತೆಯನ್ನು ಮಟ್ಟಹಾಕಲು ಸರ್ವ ಪ್ರಯತ್ನಗಳೂ ನಡೆಯುತ್ತಿವೆ. ಕಾಂಗ್ರೆಸ್ಸಿನ ವ್ಯವಸ್ಥಿತ ಸಂಚಿನಿಂದ ಸಮಾಜದಲ್ಲಿ ಇಂತಹ ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಪ್ರಕರಣಗಳ ಹಿನ್ನೆಲೆಯಲ್ಲಿ ಪಿ.ಎಫ್.ಐ, ಎಸ್.ಡಿ.ಪಿ.ಐ ನಂತಹ ಮೂಲಭೂತವಾದಿ ಮತಾಂಧ ಸಂಘಟನೆಗಳ ನಿಷೇಧಕ್ಕೆ ಇದು ಸೂಕ್ತ ಕಾಲವೆನಿಸಿದೆ. ಪಕ್ಷದ ಕಾರ್ಯಕರ್ತರು ಧೃತಿಗೆಡದೆ ವಿರೋಧಿಗಳ ಷಡ್ಯಂತ್ರವನ್ನು ಎದುರಿಸಲು ಕೈಜೋಡಿಸಬೇಕು ಎಂದರು.

ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಎಸ್.ಡಿ.ಪಿ.ಐ, ಪಿ.ಎಫ್.ಐ ಸಂಘಟನೆಗಳನ್ನು ಮುಸ್ಲಿಂ ಸಮಾಜ ದೂರವಿಟ್ಟಾಗ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಿದೆ. ಹಿಜಾಬ್ ವಿವಾಧದಲ್ಲಿ ಕೈಜೋಡಿಸಿದ ಭಯೊತ್ಪಾದಕ ಜಿಹಾದಿ ಸಂಘಟನೆಗಳು ಪ್ರವೀಣ್ ನೆಟ್ಟಾರ್ ಹತ್ಯೆಯಲ್ಲಿ ಕೈ ಜೋಡಿಸಿವೆ. ಪ್ರವೀಣ್ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

2ನೇ ಹಂತದ ಹಡಿಲು ಭೂಮಿ ಕೃಷಿ “ಕಡೇ ನಟ್ಟಿ” ಕೈಜೋಡಿಸಿದ ವಿದ್ಯಾರ್ಥಿಗಳು – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ: ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ 2ನೇ ಹಂತದ ಹಡಿಲು ಭೂಮಿ ಕೃಷಿಯ “ಕಡೇ ನಟ್ಟಿ” (ಸಮಾರೋಪ) ಇಂದು ದಿನಾಂಕ 30-07-2022 ರಂದು ಕಡೆಕಾರ್ ಭುವನೆಂದ್ರ ಕಿದಿಯೂರ್ ಮನೆಯ ಬಳಿ ನಡೆಯಿತು.*

*ಸ್ಥಳೀಯ ಕೃಷಿಕರು, ಸಂಘಟನೆಗಳ ಸದಸ್ಯರು, ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ ಪ್ರಥಮವಾಗಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರು ರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು.*

*ಕೇದಾರೋತ್ಥಾನ ಟ್ರಸ್ಟ್ ಅಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೃಷಿ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕೃಷಿಯ ಮಹತ್ವದ ಬಗ್ಗೆ ತಿಳಿಸಿದರು. ಹಾಗೂ ಕೃಷಿ ಕಾರ್ಯಕ್ಕೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.*

*ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಕೇದಾರೋತ್ಥಾನ ಟ್ರಸ್ಟ್ ನ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿಗಳಾದ ರಾಘವೇಂದ್ರ ಉಪ್ಪೂರು, ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಗೋವಾ ಇದರ ಇನ್‌ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯರಾದ ಶಿವಕುಮಾರ್, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ವಿಜ್ಞಾನಿಗಳಾದ ಡಾ. ಶಂಕರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.*

ಜು.30 ಬೆಳಿಗ್ಗೆ 10.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಅವರ ಶೃದ್ಧಾಂಜಲಿ ಸಭೆ



ಬೆಳ್ಳಾರೆಯಲ್ಲಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಆವರ ಶೃದ್ಧಾಂಜಲಿ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜು.30 ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ.

ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದು ಪ್ರವೀಣ್ ನೆಟ್ಟಾರು ಅವರಿಗೆ ಅಂತಿಮ ನಮನ ಸಲ್ಲಿಸಬೇಕಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ‌ ಖಂಡನೆ; ಹಂತಕರನ್ನು ಎನ್ಕೌಂಟರ್ ಮಾಡಲು ಕುಯಿಲಾಡಿ ಆಗ್ರಹ

ಉಡುಪಿ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ಕಾನೂನಾತ್ಮಕ ಉಗ್ರ ಶಿಕ್ಷೆಗೆ ಒಳಪಡಿಸುವ ಜೊತೆಗೆ ಹಂತಕರ ಹಿಂದಿರುವ ಸಂಘಟನೆಯನ್ನು ಪತ್ತೆ ಹಚ್ಚಿ ರೂವಾರಿ ಜಿಹಾದಿಗಳನ್ನು ಹೈದರಾಬಾದ್ ಮಾದರಿಯಲ್ಲಿ ಎನ್ಕೌಂಟರ್ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ.

ಶಿವಮೊಗ್ಗದ ಹರ್ಷ ಹತ್ಯೆಯ ಬಳಿಕ ಇದೀಗ ನಡೆದಿರುವ‌ ಪ್ರವೀಣ್ ನೆಟ್ಟಾರು ಕಗ್ಗೊಲೆ ರಾಜ್ಯ ಗೃಹ ಖಾತೆಗೆ ಸವಾಲಾಗಿ ಪರಿಣಮಿಸಿದ್ದು, ಬಿಜೆಪಿ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿ ನಡೆಯುತ್ತಿರುವ ಇಂತಹ ನರಮೇಧಕ್ಕೆ ತಕ್ಷಣ ತಡೆಯೊಡ್ಡಿ ಉತ್ತರ ಪ್ರದೇಶದ ಕ್ಷಿಪ್ರ ಕಾರ್ಯಾಚರಣೆ ಮಾದರಿಯಲ್ಲಿ ಕಾರ್ಯಪ್ರವೃತ್ತರಾಗುವ ಅನಿವಾರ್ಯತೆ ಇದೆ.

ಮಾಜಿ ಸಿ.ಎಂ. ಸಿದ್ಧರಾಮಯ್ಯ ಆಡಳಿತಾವಧಿಯಲ್ಲಿ ಹಲವಾರು ಹಿಂದೂ ಕಾರ್ಯಕರ್ತರ ಮಾರಣ ಹೋಮ ನಡೆದಿದ್ದರೂ, ಮತಾಂಧ ಜಿಹಾದಿ ಮಾನಸಿಕತೆಯ ಆರೋಪಿಗಳನ್ನು ಜೈಲಿನಿಂದ ಬಿಡುಗಡೆಗೊಳಿಸಿರುವ ಕಾಂಗ್ರೆಸ್ಸಿಗೆ ಈ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಸಮಾಜದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲು ಹವಣಿಸುತ್ತಿರುವ ಹಂತಕರ ಹುಟ್ಟಡಗಿಸುವಲ್ಲಿ ಶೀಘ್ರ ಪರಿಣಾಮಕಾರಿ ದಿಟ್ಟ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ ನಾಮ ನಿರ್ದೇಶನ

ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಶಿಫಾರಸು ಮೇರೆಗೆ‌‌ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಕೇಂದ್ರ ಸರಕಾರದ ಸ್ವಾಮ್ಯದ “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್‌‌” ಗೋವಾ ಇದರ‌ ‘ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ’ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ‘ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್’ ನವದೆಹಲಿ‌‌ ಆದೇಶ ಹೊರಡಿಸಿದೆ.

ಇವರು ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ತಲಾ ಎರಡು ಅವಧಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಿಜೆಪಿ ಅಂಬಲಪಾಡಿ ಸ್ಥಾನೀಯ ಸಮಿತಿ ಕಾರ್ಯದರ್ಶಿಯಾಗಿ, ಬಿಜೆಪಿ ಉಡುಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷರಾಗಿ, ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಪ್ತಸಕ್ತ ಎರಡನೇ ಅವಧಿಗೆ ಬಿಜೆಪಿ ಜಿಲ್ಲಾ ಸಹ ವಕ್ತಾರರಾಗಿ ಹಾಗೂ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಪ್ರಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕರ್ನಾಟಕ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್ ಇದರ ಜತೆ ಕಾರ್ಯದರ್ಶಿಯಾಗಿ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ.) ಇದರ ಗೌರವ ಸಲಹೆಗಾರರಾಗಿ, ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ರೋಟರಿ ಕ್ಲಬ್ ಅಂಬಲಪಾಡಿ ಇದರ ಅತ್ಯುತ್ತಮ ಕ್ಲಬ್ ಪ್ರಶಸ್ತಿ ವಿಜೇತ ಕಾರ್ಯದರ್ಶಿಯಾಗಿ, ರೋಟರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಪ್ರಸಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾಗಿ, ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ಉಪಾಧ್ಯಕ್ಷರಾಗಿ, ಬಾಡಿ ಬಿಲ್ಡಿಂಗ್‌ ರಾಜ್ಯ ತೀರ್ಪುಗಾರರಾಗಿ, ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ ಆಡಳಿತ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷರಾಗಿ, ಶ್ರೀ ಬಬ್ಬುಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಶ್ರೀ ರಾಮಾಂಜನೇಯ ಪೂಜಾ ಮಂದಿರ ಅಂಬಲಪಾಡಿ ಇದರ ಸಂಚಾಲಕರಾಗಿ, ಅಂಗನವಾಡಿ ಕೇಂದ್ರ ಬಂಕೇರ್ಕಟ್ಟ ಅಂಬಲಪಾಡಿ ಇದರ ಬಾಲವಿಕಾಸ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುವ ಜೊತೆಗೆ ಮಣಿಪಾಲ ಸಮೂಹ ಸಂಸ್ಥೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Design a site like this with WordPress.com
Get started