ಉದ್ಯಾವರ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ


ಕಾಪು: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಸೌಂದರ್ಯ ಸಭಾಭವನದಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು.

ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಮೋದೀಜಿ ಆಡಳಿತದ 8 ವರ್ಷದ ವಾರ್ಷಿಕ ಆಚರಣೆ ವಿಶಿಷ್ಟವಾಗಿ ಫಲಾನುಭವಿಗಳ ಸಮಾವೇಶ ಮಾಡುವ ಮೂಲಕ ಆಚರಿಸಲು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಮಾರ್ಗದರ್ಶನ ಮಾಡಿದರು. ಕಾಪು ಶಾಸಕರಾದ ಲಾಲಾಜಿಯವರು ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿ ಉದ್ಯಾವರ ಹಾಗೂ ಕಾಪು ಕ್ಷೇತ್ರದ ಅಭಿವ್ಯಕ್ತಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ ಮುಂದೆಯೂ ಮತ್ತಷ್ಟು ಅನುದಾನ ತಂದು ಎಲ್ಲ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸುವುದಾಗಿ ತಿಳಿಸಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರಾದ ವಿಜಯ್ ಕುಮಾರ್, ಮಾಹಶಕ್ತಿಕೇಂದ್ರ ಉಸ್ತುವಾರಿ ಗುರುಪ್ರಸಾದ್ ಶೆಟ್ಟಿ, ಕಾಪು‌ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ರವಿ ಕೋಟ್ಯನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮಹಾಶಕ್ತಿಕೇಂದ್ರ ಪ್ರಧಾನ‌ಕಾರ್ಯದರ್ಶಿ ಅಶೋಕ್ ಕುಮಾರ್, ಮಂಡಲ ಕಾರ್ಯದರ್ಶಿಗಳಾದ ರಾಜೇಶ್ ಕುಂದರ್, ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರಿಯಾನ್, ಪಂಚಾಯತ್ ಸದಸ್ಯರು, ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಸರಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಸೇವೆ ಸುಶಾಸನ ಬಡವರ ಕಲ್ಯಾಣ ಅಭಿಯಾನ ಯಶಸ್ವಿಗೊಳಿಸಿ: ಪೆರ್ಣಂಕಿಲ ಶ್ರೀಶ ನಾಯಕ್



ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ‌ ಕೇಂದ್ರ ಸರಕಾರದ ಎಂಟು ವರ್ಷಗಳ ಆಡಳಿತಾವಧಿಯಲ್ಲಿ ಅನುಷ್ಠಾನಗೊಂಡಿರುವ ಅನೇಕ ಜನಪರ ಯೋಜನೆಗಳ ಬಗ್ಗೆ ಜನಮಾನಸದಲ್ಲಿ ಅರಿವು ಮೂಡಿಸುವ ಮೂಲಕ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಉಡುಪಿ ಗ್ರಾಮಾಂತರ ಮಂಡಲ ಪ್ರಭಾರಿ ಪೆರ್ಣಂಕಿಲ ಶ್ರೀಶ ನಾಯಕ್ ಕರೆ ನೀಡಿದರು.

ಅವರು ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷೆ ವೀಣಾ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿ ಗ್ರಾಮಾಂತರ ಕಛೇರಿಯಲ್ಲಿ ನಡೆದ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸ್ವಾತಂತ್ರ್ಯಾ ನಂತರ ಮೋದಿ ಆಡಳಿತದ ಪರಿಣಾಮಕಾರಿ ಬದಲಾವಣೆಗಳಿಂದಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕುವಂತಾಗಿದೆ. ಕಾಂಗ್ರೆಸ್ ನ ‘ಗರೀಬೀ ಹಠಾವೋ’ ಕೇವಲ ಘೋಷಣೆಯಾಗಿಯೇ ಉಳಿದಿರುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ‘ಗರೀಬ್ ಕಲ್ಯಾಣ್ ಅನ್ನ ಯೋಜನೆ’ಯ ಮೂಲಕ ಹಸಿವುಮುಕ್ತ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದೆ. ಸಾರ್ಥಕ ಸೇವೆ, ಉತ್ತಮ ಆಡಳಿತ ಮತ್ತು ಬಡವರ ಪರ ಕಾಳಜಿಯ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಯಶಸ್ವಿ 8ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಹಮ್ಮಿಕೊಂಡಿರುವ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಅಭಿಯಾನದಲ್ಲಿ ಜಿಲ್ಲಾ ಮತ್ತು ಮಂಡಲಗಳ ಸಂಚಾಲಕರ ತಂಡದ ಜೊತೆಗೆ ಪಕ್ಷದ ಜವಾಬ್ದಾರಿಯುತ ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು ಕೈಜೋಡಿಸಿ ಸಂಘಟಿತ ಪ್ರಯತ್ನದ ಮೂಲಕ ಅಭಿಯಾನವನ್ನು ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು ಎಂದು ಶ್ರೀಶ ನಾಯಕ್ ಹೇಳಿದರು.

ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಅಭಿಯಾನದ 17‌ ವಿಭಾಗಗಳ ಸಂಚಾಲಕರರು ಮತ್ತು ಸಹ ಸಂಚಾಲಕರ ಜವಾಬ್ದಾರಿ ಹಾಗೂ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಅಭಿಯಾನದ ಮಂಡಲ ಸಂಚಾಲಕರು, ಸಹ ಸಂಚಾಲಕರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಬಿಜೆಪಿ ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ಸಚಿನ್ ಪೂಜಾರಿ ವಂದಿಸಿದರು.

“ಸೇವೆ-ಸುಶಾಸನ ಹಾಗೂ ಬಡವರ ಕಲ್ಯಾಣ” ಕಾರ್ಯಕ್ರಮದ ಅಂಗವಾಗಿ ಕಾಪು ಬಿಜೆಪಿ ಕಚೇರಿಯಲ್ಲಿ ಸಭೆ

ಕಾಪು: ಮೋದೀಜಿಯವರ ಆಡಳಿತದ 8 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ಸೂಚನೆಯಂತೆ “ಸೇವೆ-ಶುಶಾಸನ ಹಾಗೂ ಬಡವರ ಕಲ್ಯಾಣ” ಕಾರ್ಯಕ್ರಮದ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸುಮಾರು 17 ಅಂಶಗಳ ಕಾರ್ಯಕ್ರಮಗಳ ಸಂಚಾಲಕರುಗಳಿಗೆ ಜವಾಬ್ದರಿಗಳನ್ನು ನೀಡಲಾಗಿ‌ ಎಲ್ಲಾ ಪಂಚಾಯತ್ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜರುಗುವಂತೆ ಮುತುವರ್ಜಿ ವಹಿಸಲು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿನಂತಿಸಿದರು. ಸಂಚಾಲಕರುಗಳು ತಮ್ಮ ತಮ್ಮ ವಿಷಯಗಳ ಬಗೆಗಿನ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ವಿವರಿಸುತ್ತ ಪಕ್ಷವನ್ನೂ ಬಲವರ್ಧನೆ ಗೊಳಿಸಬೇಂದು ಕರೆ ನೀಡಿದರು. ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಡಲ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರ ಪ್ರಮುಖರು, 17 ಕಾರ್ಯಕ್ರಮದ ಸಂಚಾಲಕರು ಸಹಸಂಚಾಲಕರು ಉಪಸ್ಥಿತರಿದ್ದರು.

ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ, ಸನ್ಮಾನ

ಕಾಪು: ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ಪುರಂದರ ಕೋಟ್ಯನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು.

ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಮೋದೀಜಿ ಆಡಳಿತದ 8 ವರ್ಷದ ವಾರ್ಷಿಕ ಆಚರಣೆ ವಿಶಿಷ್ಟವಾಗಿ ಫಲಾನುಭವಿಗಳ ಸಮಾವೇಶ ಮಾಡುವ ಮೂಲಕ ಆಚರಿಸಲು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ ರವರು ಮಾರ್ಗದರ್ಶನ ಮಾಡಿದರು. ರಾಜ್ಯ ಮಹಿಳಾಮೋರ್ಚ ಪ್ರಧಾನ‌ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಮಹಾಶಕ್ತಿಕೇಂದ್ರ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಸಾಲ್ಯನ್, ಮಂಡಲ ಕಾರ್ಯದರ್ಶಿಗಳಾದ ಸುಭಾಸ್ ನಾಯ್ಕ್, ಶಂಕರ ಸಾಲ್ಯನ್, ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ 90% ಕ್ಕೂ ಅಧಿಕ ಅಂಕಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆಯ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನ ಯಶಸ್ವಿಗೊಳಿಸಿ: ಕುಯಿಲಾಡಿ

ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರವು ಕಳೆದ 2 ವರ್ಷಗಳಲ್ಲಿ ಉಚಿತ ಕೋವಿಡ್ ಲಸಿಕೆ ಹಾಗೂ ಪಡಿತರ ಮೂಲಕ ದೇಶವಾಸಿಗಳಿಗೆ ಆಹಾರ ಮತ್ತು ಆರೋಗ್ಯ ಭದ್ರತೆಯನ್ನು ಖಾತ್ರಿಪಡಿಸಿ ಅಭೂತಪೂರ್ವ ಸವಾಲುಗಳನ್ನು ಎದುರಿಸಿದೆ. ಸರಕಾರದ 8ನೇ ವರ್ಷದ ಸಾಧನೆಗಳನ್ನು ಆಚರಿಸುವ ಸಲುವಾಗಿ ಜಿಲ್ಲೆಯಾದ್ಯಂತ ಮೇ 30ರಿಂದ ಜೂನ್ 14ರ ವರೆಗೆ ನಡೆಯಲಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ವಿವಿಧ ಕಾರ್ಯಕ್ರಮಗಳ ಜಿಲ್ಲಾ ಮತ್ತು ಮಂಡಲಗಳ ಸಂಚಾಲಕರು ಮತ್ತು ಸಹ ಸಂಚಾಲಕರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಮತ್ತು ಮಂಡಲಗಳ ತಂಡದ ಪ್ರಮುಖರ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

‘ಸೇವೆ’ಯು ಸಾಂಕ್ರಾಮಿಕ ಸಮಯದಲ್ಲಿ ರಾಷ್ಟ್ರದ ಸೇವೆಗಾಗಿ ಪ್ರಧಾನಿ ಮೋದಿಯವರ ಅವಿರತ ಪ್ರಯತ್ನಗಳನ್ನು ಸೂಚಿಸುತ್ತದೆ. ‘ಸುಶಾಸನ’ ಉತ್ತಮ ಆಡಳಿತವನ್ನು ಖಾತ್ರಿಪಡಿಸಿಕೊಳ್ಳಲು ಪ್ರಧಾನಿ ಮೋದಿ ಸರಕಾರದ ವಿವಿಧ ಉಪಕ್ರಮಗಳನ್ನು ಸಂಕೇತಿಸುತ್ತದೆ. ‘ಬಡವರ ಕಲ್ಯಾಣ’ ಬಡವರ ಪರವಾದ ಕಟ್ಟ ಕಡೆಯ ವ್ಯಕ್ತಿಗೆ ಯೋಜನೆಗಳನ್ನು ತಲುಪಿಸಲು ಮತ್ತು ಬಡವರನ್ನು ಮುಖ್ಯವಾಹಿನಿಗೆ ತರಲು ಪ್ರಧಾನಿ ಮೋದಿಯವರ ಬದ್ಧತೆಯನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.

ಉಡುಪಿ ಜಿಲ್ಲೆಯು ಸಂಘಟನಾತ್ಮಕವಾಗಿ ಮುಂಚೂಣಿಯಲ್ಲಿದ್ದು ಈ ಹಿಂದೆಯೂ ಪಕ್ಷದ ಹಲವಾರು ಅಭಿಯಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದೆ.‌‌ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನೂರಾರು ಜನಪರ ಯೋಜನೆಗಳು ಮತ್ತು ವಿಶಿಷ್ಟ ಸಾಧನೆಗಳೊಂದಿಗೆ ಯಶಸ್ವೀ 8 ವರ್ಷಗಳನ್ನು ಪೂರೈಸಿರುವ ಸಂಭ್ರಮಾಚರಣೆಯ ಪ್ರಯುಕ್ತ ಹಮ್ಮಿಕೊಂಡಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಎಲ್ಲಾ ವಿಭಾಗಗಳ ಕಾರ್ಯಕ್ರಮಗಳು ಜಿಲ್ಲೆಯಾದ್ಯಂತ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಂತೆ ಜಿಲ್ಲಾ ಮತ್ತು ಮಂಡಲಗಳ ತಂಡಗಳು ಬದ್ಧತೆಯಿಂದ ಶ್ರಮವಹಿಸಿ ಸೂಕ್ತ ಪೂರ್ವಸಿದ್ಧತೆಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕುಯಿಲಾಡಿ ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಸಂಘಟನಾತ್ಮಕ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ವೀಡಿಯೋ ಕಾನ್ಫರೆನ್ಸ್ ಮಾಧ್ಯಮದ ಮೂಲಕ ನೆರವೇರಿಸಿದ ಬೂತ್ ಸಶಕ್ತೀಕರಣದ ಉದ್ಘಾಟನೆಯ ನೇರ ಪ್ರಸಾರವನ್ನು ವೀಕ್ಷಿಸಲಾಯಿತು. ಸಭೆಯಲ್ಲಿ ಬೂತ್ ಸಶಕ್ತೀಕರಣದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲಾ ವ್ಯಾಪ್ತಿಯ 15 ಮಂದಿ ಪ್ರಮುಖರ ತಂಡವನ್ನು ಘೋಷಿಸಲಾಯಿತು.

‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸದಾನಂದ ಉಪ್ಪಿನಕುದ್ರು ಅಭಿಯಾನದ ಜಿಲ್ಲಾ ಮತ್ತು ಮಂಡಲಗಳ ತಂಡದ ಜವಾಬ್ದಾರಿ ನಿರ್ವಹಣೆಯ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಅಭಿಯಾನದ ಕಾರ್ಯಕ್ರಮಗಳ ವ್ಯವಸ್ಥಿತ ಆಯೋಜನೆಯ ಪೂರ್ವಸಿದ್ಧತೆಗಳ ಬಗ್ಗೆ ವಿಭಾಗವಾರು ಸಂಚಾಲಕರಿಂದ ಮಾಹಿತಿ ಪಡೆದರು.

ಪೂರ್ವಭಾವಿ ಸಭೆಯಲ್ಲಿ ಅಭಿಯಾನದ ಜಿಲ್ಲಾ ಹಾಗೂ ಮಂಡಲಗಳ ಸಂಚಾಲಕರು ಮತ್ತು ಸಹ ಸಂಚಾಲಕರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.

ಮೋದಿ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ: ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಜಿಲ್ಲಾ ತಂಡದ ಪೂರ್ವಭಾವಿ ಸಭೆ



ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಮೇ 30ರಿಂದ ಜೂನ್ 14ರ ವರೆಗೆ ಜಿಲ್ಲೆಯಾದ್ಯಂತ ನಡೆಯಲಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಜಿಲ್ಲಾ ತಂಡದ ಪೂರ್ವಭಾವಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಅಭಿಯಾನದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಅಭಿಯಾನದ ಜಿಲ್ಲಾ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಸಹ ಸಂಚಾಲಕ ಸದಾನಂದ ಉಪ್ಪಿನಕುದ್ರು ಹಾಗೂ ಅಭಿಯಾನದ ವಿವಿಧ ಕಾರ್ಯಕ್ರಮಗಳ 17 ವಿಭಾಗಗಳ ಜಿಲ್ಲಾ ಸಂಚಾಲಕರು ಮತ್ತು ಜಿಲ್ಲಾ ಸಹ ಸಂಚಾಲಕರು ಉಪಸ್ಥಿತರಿದ್ದರು.

ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಾಗಿ ಕಾರ್ಯ ನಿರ್ವಹಿಸಲು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ‌ ಕರೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾವು ಅತ್ಯಂತ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಪಕ್ಷದ ಕಾರ್ಯಕರ್ತರು ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಾಗಿ ಜವಾಬ್ದಾರಿ ನಿರ್ವಹಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ರೈತ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ನನ್ನ ಅಧ್ಯಕ್ಷೀಯ ಅವಧಿಯಲ್ಲಿ 4 ಬಾರಿ ಉಡುಪಿ ಜಿಲ್ಲಾ‌ ಪ್ರವಾಸವನ್ನು ಹಮ್ಮಿಕೊಂಡಿದ್ದೇನೆ. ನಾವು ಆಡಳಿತ ಪಕ್ಷವಾದ ಬಿಜೆಪಿ ಕಾರ್ಯಕರ್ತರಾಗಿ ಸರಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಸತ್ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಪ್ರಧಾನಿ ಮೋದಿ ಆಶಯದಂತೆ ಶತಮಾನ ವರ್ಷದ ಸಂದರ್ಭದಲ್ಲಿ ದೇಶವು ಇನ್ನಷ್ಟು ಸದೃಢವಾಗಿ ಆತ್ಮನಿರ್ಭರ ಭಾರತವಾಗಬೇಕು. ಮುಂದಿನ ಚುನಾವಣೆಗಳಲ್ಲಿ ರೈತ ಮೋರ್ಚಾದ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಜನಸೇವೆಯ ಮೂಲಕ ಪಕ್ಷ ಸಂಘಟನಾ ಕಾರ್ಯದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡು ನಿರಂತರ ಚಟುವಟಿಕೆಗಳೊಂದಿಗೆ ಪಕ್ಷದ ಅಭ್ಯರ್ಥಿಗಳ ಪ್ರಚಂಡ ವಿಜಯಕ್ಕೆ ಕಟಿಬದ್ಧರಾಗಿ ಶ್ರಮಿಸಬೇಕು ಎಂದರು.

ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಪ್ರಸನ್ನ ಕೆರೆಕೈ ಯವರು ಪ್ರಾಸ್ತಾವಿಕವಾಗಿ ಮಾತನಾಡಿ ಪಕ್ಷದ ಕಾರ್ಯಕರ್ತರು ತಳಮಟ್ಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ರೈತರ ಶ್ರೇಯೋಭಿವೃದ್ಧಿಯ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದರು.

ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ರಾಜ್ಯ ಸಾವಯವ ಕೃಷಿ ನಿರ್ದೇಶಕ ರಾಘವೇಂದ್ರ ಉಪ್ಪೂರು ಮಾತನಾಡಿ ರೈತ ಮೋರ್ಚಾದ ಪ್ರತಿಯೊಬ್ಬ ಪದಾಧಿಕಾರಿ, ಸದಸ್ಯರು ತಮ್ಮ ಜವಾಬ್ದಾರಿಗಳ ಮಹತ್ವವನ್ನು ಅರಿತು ಕೆಲಸ ಕಾರ್ಯಗಳನ್ನು ನಿರ್ವಹಿಸಿ, ಪಕ್ಷ ಸಂಘಟನೆಗೆ ಶಕ್ತಿ ತುಂಬಬೇಕು ಎಂದರು.

ಉಡುಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಮಾತನಾಡಿ ಜಿಲ್ಲಾ ರೈತ ಮೋರ್ಚಾ ನಿಯಮಿತ ಸಭೆಗಳು ಹಾಗೂ ನಿರಂತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಮಂಡಲವಾರು ಗ್ರಾಮ ಮಟ್ಟದಲ್ಲಿ ರೈತ ಉತ್ಪಾದಕ ಸಂಘವನ್ನು ಪ್ರಾರಂಭಿಸುವ ಕೆಲಸ ಕಾರ್ಯ ಪ್ರಗತಿಯಲ್ಲಿದೆ. ಸರಕಾರದಿಂದ ರೈತರಿಗೆ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಜಾರಿಯಲ್ಲಿದೆ ಎಂದರು.

ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ರೈತ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು, ಸಮಿತಿ ಹಾಗೂ ಕಾರ್ಯಕಾರಿಣಿ ಸದಸ್ಯರು, ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಜಿಲ್ಲಾ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಧೀರಜ್ ಕೆ.ಎಸ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

ಬೆಂಗಳೂರು: ಜಖನ್ 3. ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಬಿಡುಗಡೆ ಮಾಡಿದ್ದು , ಛಲವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯಕ,ಲಕ್ಷ್ಮಣ ಸವದಿ, ಮತ್ತು ಎಸ್. ಕೇಶವ ಪ್ರಸಾದ್ ಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ

ಕೋಟೆ ಗ್ರಾಮ ಪಂಚಾಯತ್- ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ

ಕಾಪು: ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ನಾಗರಾಜ್ ಮೆಂಡನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು.

ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆದ ಅಭಿವೃದ್ಧಿ ಕೆಲಸಗಳ ಹಾಗೂ ಸರಕಾರದ ಸಾಧನೆಗಳ ಬಗ್ಗೆ ತಿಳಿಸುತ್ತ ಮುಂದೆಯೂ ಮತ್ತಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ತಂದು ಎಲ್ಲ ಬೇಡಿಕೆಗಳಿಗೂ ಸ್ಪಂದಿಸುವ ಭರವಸೆ ನೀಡಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್, ಶಕ್ತಿಕೇಂದ್ರ ಸಹಪ್ರಮುಖ್ ಹರ್ಷಿತ್ , ಮತ್ತಿತರರು ಉಪಸ್ಥಿತರಿದ್ದರು. ಪಕ್ಷದ ಪ್ರಮುಖರಾದ ಯೋಗೀಶ್, ರಾಜೇಶ್ ಅಂಬಾಡಿ, ರತ್ನಾಕರ, ಗುರುಕ್ರಪಾ ರಾವ್, ಗುರುಪ್ರಸಾದ್ ಶೆಟ್ಟಿ, ಪಂಚಾಯತ್ ಸದಸ್ಯರುಗಳು ಪದಾಧಿಕಾರಿಗಳು ಬೂತ್ ಅಧ್ಯಕ್ಷರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಅಲೆವೂರು ಗ್ರಾಮ ಪಂಚಾಯತ್* – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ, ಸನ್ಮಾನ

ಕಾಪು: ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ಆಶಿಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು.

ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆದ ಅಭಿವೃದ್ಧಿ ಕೆಲಸಗಳ ಹಾಗೂ ಸರಕಾರದ ಸಾಧನೆಗಳ ಬಗ್ಗೆ ತಿಳಿಸುತ್ತ ಮುಂದೆಯೂ ಮತ್ತಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ತಂದು ಎಲ್ಲ ಬೇಡಿಕೆಗಳಿಗೂ ಸ್ಪಂದಿಸುವ ಭರವಸೆ ನೀಡಿದರು. ಬಳಿಕ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ ಬೂತ್ ಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸಲು ಎಲ್ಲ ಕಾರಗಯಕರ್ತರು ಶ್ರಮಿಸಲು ಕರೆ ನೀಡಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಅಲೆವೂರು ಶಕ್ತಿ ಕೇಂದ್ರ ಪ್ರಮುಖ್ ಶೇಖರ ಆಚಾರ್ಯ, ಮತ್ತಿತರರು ಉಪಸ್ಥಿತರಿದ್ದರು. ಪಕ್ಷದ ಪ್ರಮುಖರಾದ ಹರೀಶ್ ಸೇರಿಗಾರ್ ಬೇಬಿ ರಾಜೇಶ್, ಶಶಿಕಲಾ ಶೆಟ್ಟಿ, ಕೇಶವ ಶೆಟ್ಟಿಗಾರ್, ಪಂಚಾಯತ್ ಸದಸ್ಯರುಗಳು ಪದಾಧಿಕಾರಿಗಳು ಬೂತ್ ಅಧ್ಯಕ್ಷರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂತನವಾಗಿ ಚುನಾವಣೆಯಲ್ಲಿ ಜಯಗಳಿಸಿದ ಶಂಕರ ಪಾಲನ್‌ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

Design a site like this with WordPress.com
Get started