ಕೊರಂಗ್ರಪಾಡಿ ಉಪಚುನಾವಣೆ ಬಿಜೆಪಿ ಗೆಲುವು – ಇದು ನೇರವಾಗಿ‌ ಸೊರಕೆಯವರಿಗೆ ಹಿನ್ನಡೆ



ಕಾಪು: ಅಲೆವೂರು ಗ್ರಾಮ ಪಂಚಾಯತ್ ಕೊರಂಗ್ರಪಾಡಿ ಮೂರನೇ ವಾರ್ಡ್ ನ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶಂಕರ್ ಪಾಲನ್ ರವರು ಎದುರಾಳಿ ಅಭ್ಯರ್ಥಿಯ ಎದುರು 67 ಮತಗಳಿಂದ ಜಯಗಳಿಸಿದ್ದು ಇದು ಜನತೆ ಇಂದು ಬಿಜೆಪಿಯ ಪರ ಇದೆ ಎಂದು ಮತ್ತೆ ಸಾಬೀತುಪಡಿಸಿದೆ. ಅದರಲ್ಲೂ ವಿನಯ್ ಕುಮಾರ್ ಸೊರಕೆಯವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು ಹಾಗೂ ನೂರಾರು ಕಾರ್ಯಕರ್ತರು, ಘಟಾನುಘಟಿ ನಾಯಕರೊಡನೆ ಮನೆ ಮನೆ ಭೇಟಿ ಮಾಡಿ ಇದು ನಮ್ಮ ಪ್ರಸ್ಟೀಜ್ ದಯವಿಟ್ಟು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಶತಪ್ರಯತ್ನ ಮಾಡಿದರೂ ಯಶಸ್ವಿಯಾಗಿಲ್ಲ. ಅಲ್ಲದೆ ಈ ಹಿಂದೆ ದಿವಂಗತರಾದ ಪ್ರವೀಣ್ ಶೆಟ್ಟಿ ಯವರು ಬ್ಲಾಕ್ ಕಾಂಗ್ರೆಸ್ ಉತ್ತರವಲಯದ ಅಧ್ಯಕ್ಷರಾಗಿದ್ದವರು. ಅಲ್ಲದೆ ಚುನಾವಣೆಗೆ ನಿಂತವರು ಅವರ ತಮ್ಮ ಪ್ರಸಾದ್ ಶೆಟ್ಟಿ, ಸರಳ ಸಜ್ಜನಿಕೆಯ ವ್ಯಕ್ತಿ. ಅಂತಹ ವರ್ಚಸ್ಸಿನ ನಾಯಕರೆದುರು ನಮ್ಮ ಸಾಮಾನ್ಯ ಕಾರ್ಯಕರ್ತರನ್ನು‌ ನಿಲ್ಲಿಸಿ ಗೆಲ್ಲಿಸಿದ್ದೇವೆ. ಇದು ಎಲ್ಲ ಕಾಂಗ್ರೆಸ್ಸಿಗರಿಗೆ ಸ್ಪಷ್ಟವಾದ ಸೂಚನೆ ಜನ ಕಾಂಗ್ರೆಸ್ ಪರವಾಗಿಲ್ಲವೆಂಬುದು. ಅಲ್ಲದೆ ಅಲೆವೂರು ಪಂಚಾಯತ್ ಆಡಳಿತ ಎಷ್ಟು ಜನರನ್ನು ಎಷ್ಟರ ಮಟ್ಟಿಗೆ ತಲುಪಿದೆ ಎನ್ನುವುದು ಇದರಿಂದ ತಿಳಿಯುತ್ತಿದೆ. ಅಲೆವೂರು ಪಂಚಾಯತ್ ಆಡಳಿತ ಜನಮರುಳು ಮಾಡುತ್ತ ವ್ಯರ್ಥ ಕಾಲಹರಣ ಮಾಡುತ್ತಿದೆ. ಜನತೆ ಕೊಟ್ಟ ಅವಕಾಶವನ್ನು ಸದುಪಯೋಗ ಪಡೆಸುವುದು ಬಿಟ್ಟು ಜನವಿರೋಧಿ ಆಡಳಿತ ನಡೆಸಿದುದರ ಪರಿಣಾಮವೂ ಈ ಫಲಿತಾಂಶಕ್ಕೆ ಸ್ವಲ್ಪ ಮಟ್ಟಿನ ಕಾರಣವಾಗಿದೆ. ಒಟ್ಟಾರೆ ಕಾಂಗ್ರೆಸ್ ಮುಳುಗುವ ಹಡಗು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗೂ‌ ಇದು ದಿಕ್ಸೂಚಿಯಾಗಿದೆ.

ಶ್ರೀಕಾಂತ ನಾಯಕ್
ಅಧ್ಯಕ್ಷರು ಬಿಜೆಪಿ ಕಾಪು ಕ್ಷೇತ್ರ

ಕಟಪಾಡಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ



ಕಾಪು: ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಮಹಾಶಕ್ತಿಕೇಂದ್ರ ಪ್ರಮುಖ್ ವಿಶ್ವನಾಥ ಕುರ್ಕಾಲು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಲಾಯಿತು.

ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆದ ಅಭಿವೃದ್ಧಿ ಕೆಲಸಗಳ ಹಾಗೂ ಸರಕಾರದ ಸಾಧನೆಗಳ ಬಗ್ಗೆ ತಿಳಿಸುತ್ತ ಮುಂದೆಯೂ ಮತ್ತಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ತಂದು ಎಲ್ಲ ಬೇಡಿಕೆಗಳಿಗೂ ಸ್ಪಂದಿಸುವ ಭರವಸೆ ನೀಡಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್, ಶಕ್ತಿಕೇಂದ್ರ ಪ್ರಮುಖ್ ನಿತಿನ್ ಸೇರಿಗಾರ್, ಸಂತೋಷ್ , ಮತ್ತಿತರರು ಉಪಸ್ಥಿತರಿದ್ದರು. ಪಕ್ಷದ ಪ್ರಮುಖರಾದ ಮುರಳೀಧರ ಪೈ, ಸರೋಜಿನಿ ಶೆಟ್ಟಿ, ಗುರುಕ್ರಪಾ ರಾವ್, ಮಹಮ್ಮದ್ ಆಲಿ, ಗುರುಪ್ರಸಾದ್ ಶೆಟ್ಟಿ, ಪಂಚಾಯತ್ ಸದಸ್ಯರುಗಳು ಪದಾಧಿಕಾರಿಗಳು ಬೂತ್ ಅಧ್ಯಕ್ಷರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಮುದರಂಗಡಿ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ

ಕಾಪು: ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಶಕ್ತಿಕೇಂದ್ರ ಪ್ರಮುಖ್ ಶಿವರಾಮ ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು.

ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆದ ಅಭಿವೃದ್ಧಿ ಕೆಲಸಗಳ ಹಾಗೂ ಸರಕಾರದ ಸಾಧನೆಗಳ ಬಗ್ಗೆ ತಿಳಿಸುತ್ತ ಮುಂದೆಯೂ ಮತ್ತಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ತಂದು ಎಲ್ಲ ಬೇಡಿಕೆಗಳಿಗೂ ಸ್ಪಂದಿಸುವ ಭರವಸೆ ನೀಡಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಉಪಾಧ್ಯಕ್ಷರಾದ ಚಂದ್ರಶೇಖರ ಕೋಟ್ಯನ್, ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರುಗಳು ಪದಾಧಿಕಾರಿಗಳು ಬೂತ್ ಅಧ್ಯಕ್ಷರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ತೆಂಕ ಗ್ರಾಮ ಪಂಚಾಯತ್- ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ

ಕಾಪು: ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಭೂತರಾಜ ಸಭಾಭವನದಲ್ಲಿ ಶಕ್ತಿಕೇಂದ್ರ ಪ್ರಮುಖ್ ಕೇಶವ ಮೊಯ್ಲಿ‌ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು.

ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆದ ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಸುತ್ತ ಮುಂದೆಯೂ ಮತ್ತಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ತಂದು ಎಲ್ಲ ಬೇಡಿಕೆಗಳಿಗೂ ಸ್ಪಂದಿಸುವ ಭರವಸೆ ನೀಡಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಉಪಾಧ್ಯಕ್ಷರಾದ ಚಂದ್ರಶೇಖರ ಕೋಟ್ಯನ್, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಪಂಚಾಯತ್ ಉಪಾಧ್ಯಕ್ಷರಾದ ಜಯಶ್ರೀ, ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರುಗಳು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಕೋಷ್ಠಗಳ ಕ್ರಿಯಾಶೀಲತೆ ಪಕ್ಷದ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವಕ್ಕೆ ಶಕ್ತಿ ತುಂಬಲಿದೆ: ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ: ಸಮಾಜದ ಎಲ್ಲಾ ಸ್ತರದ ಜನತೆಯನ್ನು ತಲುಪುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ವೃತ್ತಿಪರರನ್ನೊಳಗೊಂಡಿರುವ ಪ್ರಕೋಷ್ಠಗಳನ್ನು ರಚಿಸಲಾಗಿದೆ. ಪ್ರಕೋಷ್ಠಗಳ ಬದ್ಧತೆ ಮತ್ತು ಕ್ರಿಯಾಶೀಲತೆ ಪಕ್ಷದ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವಕ್ಕೆ ಶಕ್ತಿ ತುಂಬಲಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು.

ಅವರು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆದ ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ‌ ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳ ಯಶಸ್ವೀ ಅನುಷ್ಠಾನದ ಮೂಲಕ ಅಭಿವೃದ್ಧಿಪರ ಆಡಳಿತ ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬುದನ್ನು ಜನಮಾನಸದಲ್ಲಿ ಸಾಬೀತುಪಡಿಸಿದೆ ಎಂದರು.

ಇಂದು ಸಮಾಜದ ವಿವಿಧ ಸಮುದಾಯ, ವೃತ್ತಿಪರರು ಎಲ್ಲರೂ ಒಂದಾಗಿ ಸಬ್ ಕೇ ಸಾಥ್ ಸಬ್ ಕೇ ವಿಕಾಸ್, ಸಬ್ ಕೇ ವಿಶ್ವಾಸ್ ಎಂಬ ಉದಾತ್ತ ಧ್ಯೇಯದಡಿ ಕೈಜೋಡಿಸಿರುವ ಫಲವಾಗಿ ಬಿಜೆಪಿ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದು‌‌ ನಿಂತಿದೆ. ಈ‌ ನಿಟ್ಟಿನಲ್ಲಿ ಪ್ರಕೋಷ್ಠಗಳು ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ವ್ಯವಸ್ಥಿತ ರೀತಿಯಲ್ಲಿ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ಪಕ್ಷ ಸಂಘಟನೆಗೆ ಶಕ್ತಿ ತುಂಬುವಂತಾಗಬೇಕು ಎಂದು ಉದಯ ಕುಮಾರ್ ಶೆಟ್ಟಿ ಹೇಳಿದರು.

ಸಮಾರೋಪ‌ ಸಮಾರಂಭದ‌ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷ‌‌ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಅತ್ಯಂತ ಯಶಸ್ವಿಯಾಗಿ ‌ಮೂಡಿಬಂದಿದೆ. ಪಕ್ಷದ ಕೆಲಸ ಕಾರ್ಯಗಳು ನಿತ್ಯ ನಿರಂತರವಾಗಿವೆ. ವಿರೋಧ ಪಕ್ಷಗಳು ನಿಂತ ನೀರಿನಂತಿವೆ. ಬಿಜೆಪಿಯ ಚಟುವಟಿಕೆಗಳು ಹರಿಯುವ ನೀರಿನಂತೆ ಸದಾ ಪರಿಶುದ್ಧವಾಗಿದ್ದು ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಚೈತನ್ಯ ‌ತುಂಬುವ ರೀತಿಯಲ್ಲಿ ಸಾಗುತ್ತಿವೆ. ಪ್ರಶಿಕ್ಷಣ ವರ್ಗ, ವಿಸ್ತಾರಕ ಯೋಜನೆ, ಬೂತ್ ಸಮಿತಿ, ಪಂಚ ರತ್ನ, ಪೇಜ್ ಪ್ರಮುಖ್, ಪೇಜ್ ಸಮಿತಿ, ಕೀ ವೋಟರ್ಸ್ ಇತ್ಯಾದಿ ಅಭಿಯಾನಗಳು ಪಕ್ಷ ಸಂಘಟನೆಗೆ ಶಕ್ತಿ ತುಂಬುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಮೂಲಕ ದೇಶ ಸೇವೆಯ ಪರಿಕಲ್ಪನೆ ಹೊಂದಿರುವ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ಪ್ರಕೋಷ್ಠಗಳ ಸಹಿತ ವಿವಿಧ ಸ್ತರದ ಜವಾಬ್ದಾರಿಯುತ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಮುಂಬರಲಿರುವ ಎಲ್ಲಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸದೃಢ ಪಕ್ಷ ಸಂಘಟನೆಯತ್ತ ಕಾರ್ಯ ಪ್ರವೃತ್ತರಾಗಬೇಕು ಎಂದು ಕರೆ‌ ನೀಡಿದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ. ಪೈ, ಸಹ ಸಂಚಾಲಕ ಗುಂಜೂರು ಚರಣ್, ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ್ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಮತ್ತು ಮಂಡಲ ಪ್ರಕೋಷ್ಠಗಳ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕಾನೂನು ಪ್ರಕೋಷ್ಠದ ಸಂಚಾಲಕ ಕೈಲಾಡಿ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಪಲಿಮಾರು ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ

ಕಾಪು: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಪಡುಬಿದ್ರೆ ಉದಯಾದ್ರಿಯಲ್ಲಿ ಶಕ್ತಿಕೇಂದ್ರ ಪ್ರಮುಖ್ ಗಾಯತ್ರಿ ಪ್ರಭು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು.

ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಬಾಲಕ್ರಷ್ಣ ದೇವಾಡಿಗ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಶಕ್ತಿ ಕೇಂದ್ರ ಪ್ರಮುಖರಾದ ಶಶಿಕಾಂತ ಪಡುಬಿದ್ರೆ ಮತ್ತಿತರರು ಉಪಸ್ಥಿತರಿದ್ದರು. ಪ್ರಸಾದ್ ಪಲಿಮಾರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು‌. ಪಂಚಾಯತ್ ಸದಸ್ಯರುಗಳು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಪಡುಬಿದ್ರೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ

ಕಾಪು: ಪಡುಬಿದ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಪಡುಬಿದ್ರೆ ಉದಯಾದ್ರಿಯಲ್ಲಿ ಮಹಾಶಕ್ತಿಕೇಂದ್ರ ಪ್ರಮುಖ್ ಶಿವಪ್ರಸಾದ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿರು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು.

ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಬಾಲಕ್ರಷ್ಣ ದೇವಾಡಿಗ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಶಕ್ತಿ ಕೇಂದ್ರ ಪ್ರಮುಖರಾದ ಶಶಿಕಾಂತ ಪಡುಬಿದ್ರೆ, ನೀತಾಗುರುರಾಜ್ ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರುಗಳು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಉಡುಪಿ: ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ‌ ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಬಿಜೆಪಿ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ. ಪೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ಗುಂಜೂರು ಚರಣ್, ಜಿಲ್ಲಾ‌ ಮತ್ತು ಮಂಡಲ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಸಮಿತಿ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ್ ಕುಮಾರ್ ಉದ್ಯಾವರ ಸ್ವಾಗತಿಸಿದರು. ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಡಾ! ವಿಜಯೇಂದ್ರ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು ವಂದಿಸಿದರು.

‘ಪಕ್ಷ ಸಂಘಟನೆಯಲ್ಲಿ ಪ್ರಕೋಷ್ಠಗಳ ಪಾತ್ರ’ ಈ ವಿಷಯದ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿದರು. ‘2014ರ ನಂತರ ಭಾರತದ ವಿಕಾಸ’ ಈ ವಿಷಯದ ಬಗ್ಗೆ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ಗುಂಜೂರು ಚರಣ್ ಮಾತನಾಡಿದರು.

ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷೆತೆಯನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಹಿಸಿದ್ದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಮಾರೋಪ ಭಾಷಣಗೈದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ. ಪೈ, ಸಹ ಸಂಚಾಲಕ ಗುಂಜೂರು ಚರಣ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ್ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಮತ್ತು ಮಂಡಲ ಪ್ರಕೋಷ್ಠಗಳ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕಾನೂನು ಪ್ರಕೋಷ್ಠದ ಸಂಚಾಲಕ ಕೈಲಾಡಿ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ನಿಧನ

ಶ್ರೀಮತಿ ರಾಧು ಪೂಜಾರ್ತಿ ಅಂಬಲಪಾಡಿ

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಸ್ಥಾಪಕ ಸದಸ್ಯರಲ್ಲೊಬ್ಬರಾದ ದಿ! ಕೊರಗ ಪೂಜಾರಿ‌ಯವರ ಧರ್ಮಪತ್ನಿ‌ ಶ್ರೀಮತಿ ರಾಧು‌ ಪೂಜಾರ್ತಿಯವರು (91 ವರ್ಷ) ಮೇ 14ರ ರಾತ್ರಿ‌ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಇನ್ನಂಜೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ.

ಕಾಪು: ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಆರ್ಯಾಡಿಯಲ್ಲಿ ಶಕ್ತಕೇಂದ್ರ ಪ್ರಮುಖ್ ಪ್ರವೀಣ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿರು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು.

ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಗಯರುಕ್ರಪಾ ರಾವ್, ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರುಗಳು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Design a site like this with WordPress.com
Get started