ಅಗ್ನಿಪಥ್‌ ಯೋಜನೆʼಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ: ಸೇನೆ ಸ್ಪಷ್ಟನೆ


ದೆಹಲಿ: ದೇಶಾದ್ಯಂತ ʻಅಗ್ನಿಪಥ್‌ ಯೋಜನೆ(Agnipath scheme)ʼ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಹೊರತಾಗಿಯೂ ಸೇನೆ, ನೌಕಾಪಡೆ ಮತ್ತು ವಾಯುಸೇನೆ ಭಾನುವಾರ ಅಗ್ನಿವೀರ್‌ಗಳ ನೇಮಕಾತಿಗಾಗಿ ವಿಶಾಲ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯೋಜನೆಯನ್ನು ಹಿಂತೆಗೆದುಕೊಳ್ಳುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಉನ್ನತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅನಿಲ್ ಪುರಿ, ಮುಂಬರುವ ವರ್ಷಗಳಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ ನೇಮಕಾತಿ ಮಾಡಿಕೊಳ್ಳುವವರ ಸಂಖ್ಯೆ 1.25 ಲಕ್ಷಕ್ಕೆ ಏರಲಿದೆ. ಮುಂದಿನ ನಾಲ್ಕೈದು ವರ್ಷಗಳಲ್ಲಿ, (ಸೈನಿಕರ) ಸೇವನೆಯು 50,000-60,000 ಕ್ಕೆ ಹೆಚ್ಚಾಗುತ್ತದೆ ಮತ್ತು ತರುವಾಯ 90,000-1 ಲಕ್ಷಕ್ಕೆ ಏರುತ್ತದೆ. ಮುಂದಿನ ದಿನಗಳಲ್ಲಿ ಅಗ್ನಿವೀರ್‌ಗಳ ಸೇವನೆಯು 1.25 ಲಕ್ಷಕ್ಕೆ ಏರಲಿದೆ ಮತ್ತು 46,000 ಕ್ಕೆ ಉಳಿಯುವುದಿಲ್ಲ ಎಂದು ಅವರು ಹೇಳಿದರು.


ಮೂರು ಸೇವೆಗಳಲ್ಲಿ ಸರಾಸರಿ ವಯೋಮಾನವನ್ನು ಕಡಿಮೆ ಮಾಡಲು ಮತ್ತು ಯುವಶಕ್ತಿಯನ್ನು ತುಂಬಲು ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಅನಿಲ್ ಹೇಳಿದರು. ಇದನ್ನು “ಪ್ರಗತಿಪರ ಹೆಜ್ಜೆ” ಎಂದು ಕರೆದರು. ವರ್ಷಗಳ ಚರ್ಚೆಯ ನಂತರ ಈ ಯೋಜನೆಯನ್ನು ಪರಿಚಯಿಸಲಾಗಿದೆ ಮತ್ತು 1999 ರ ಕಾರ್ಗಿಲ್ ಯುದ್ಧದ ಮೇಲಿನ ಉನ್ನತ ಮಟ್ಟದ ಸಮಿತಿಯು ಸಹ ಈ ವಿಷಯದ ಬಗ್ಗೆ ಅವಲೋಕನಗಳನ್ನು ಮಾಡಿದೆ. ಸೇವೆಯ ನಂತರದ ಅಗ್ನಿವೀರ್‌ಗಳಿಗಾಗಿ ಕಳೆದ ಕೆಲವು ದಿನಗಳಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು ಘೋಷಿಸಿದ ಬೆಂಬಲ ಕ್ರಮಗಳು ಪೂರ್ವ ಯೋಜಿತವಾಗಿವೆ ಎಂದು ಅನಿಲ್ ಪುರಿ ಹೇಳಿದರು.

ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ

ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ ಕಾರ್ಯಕ್ರಮ ಕಟಪಾಡಿ ಮಹಿಳಾ ಮಂಡಳಿ ಸಭಾಭವನದಲ್ಲಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ‌ ಆರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿದರು. ಫಲಾನುಭವಿ‌ ವರ್ಗದ ಕಾರ್ಯಕ್ರಮಗಳ ಮಂಡಲ ಸಂಚಾಲಕರಾದ ಮುರಳೀಧರ ಪೈ ಸ್ವಾಗತಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆ ಮಾತನ್ನಾಡಿ ಮೋದೀಜಿ ಸರಕಾರದ ಸಾಧನೆಗಳ ಬಗ್ಗೆ ವಿವರಿಸಿ ನಿರಂತರವಾಗಿ ಮೋದೀಜಿ ಬೆಂಬಲಿಸಲು ಮನವಿ ಮಾಡಿದರು. ಕಾಪು ಶಾಸಕರಾದ ಲಾಲಾಜಿಯವರು‌ ಮೋದೀಜಿ ಸರಕಾರದ ರಾಜ್ಯ ಸರಕಾರದ ಹಾಗೂ ಕಾಪು ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಶುಭಹಾರೈಸಿದರು. ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ, ಫಲಾನುಭವಿ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಸಾಧಕರ ಗೌರವಾರ್ಪಣಾ ಜಿಲ್ಲಾ ಸಂಚಾಲಕರಾದ ವಿಜಯ್ ಕುಮಾರ್ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು. ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ ಕುರ್ಕಾಲು ಅಧ್ಯಕ್ಷತೆ ವಹಿಸಿದ್ದರು. ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪಕ್ಷದ ಪ್ರಮುಖರಾದ ಗಂಗಾಧರ ಸುವರ್ಣ, ಮಂಡ ಉಪಾಧ್ಯಕ್ಷರಾದ ಪವಿತ್ರ ಶೆಟ್ಟಿ, ನವೀನ್ ಎಸ್ ಕೆ ಉಪಸ್ಥಿತರಿದ್ದರು.

ಅರ್ಥಪೂರ್ಣ ಕಾರ್ಯಕ್ರಮದಲ್ಲಿ *20 ಜನ* ಕುರ್ಕಾಲು ಮಹಾಶಕ್ತಿಕೇಂದ್ರ ವ್ಯಾಪ್ತಿಯ *ಎಸ್ ಎಸ್ ಎಲ್ ಸಿ ಸಾಧಕರಿಗೆ ಗೌರವಾರ್ಪಣೆ ಮಾಡಲಾಯಿತು. *9 ಜನ* ಸಮಾಜದ ವಿವಿಧ ಕ್ಷೇತ್ರಗಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.

ಒಟ್ಟಿನಲ್ಲಿ ಮೋದೀಜಿ ಹೆಸರಲ್ಲಿ ಅರ್ಥಪೂರ್ಣ ಸೇವಾಚಟುವಟಿಕೆ ಕುರ್ಕಾಲು ಮಹಾಶಕ್ತಿಕೇಂದ್ರದಲ್ಲಿ ನಡೆಯಿತು.

ಮರ್ಣೆ ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಕ್ಯಾಂಪ್

ಕಾಪು: ಉಡುಪಿ ತಾಲೂಕಿನ‌ ಮರ್ಣೆ ಗ್ರಾಮದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ *ಪ್ರಜ್ವಲ್ ಹೆಗ್ಡೆ, ವಾಣಿ, ಸುರೇಖ ಮತ್ತು ಪದ್ಮನಾಭ ನಾಯಕ್ ಕೊಡಂಗಳ* ಇವರ ಮುತುವರ್ಜಿಯಲ್ಲಿ ಮೋದೀಜಿ‌ ಆಡಳಿತದ ಎಂಟು ವರ್ಷದ ಆಚರಣಾ ಹಿನ್ನಲೆಯಲ್ಲಿ ಆಯುಷ್ಮಾನ್ ಕ್ಯಾಂಪ್ ಮಾಡಲಾಯಿತು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮೋದೀಜಿ ಆಡಳಿತದ ಬಗ್ಗೆ ವಿವರಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಭಾಗವಹಿಸಿ ಮೋದಿ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಸದಸ್ಯರುಗಳಾದ ಪ್ರಜ್ವಲ್ ಹೆಗ್ಡೆ, ಪದ್ಮನಾಭ ನಾಯಕ್ ಸುರೇಖ, ವಾಣಿ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ರವೀಂದ್ರ ಹಲ್ದೋಣ್ಕರ್, ಹಿರಿಯರಾದ ಪದ್ಮನಾಭ ಹೆಗ್ಡೆ ಉಪಸ್ಥಿತರಿದ್ದರು. ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಬಗ್ಗೆ ಮಾಹಿತಿ ನೀಡಲಾಯಿತು. ಸುಮಾರು 150 ಕ್ಕೂ ಹೆಚ್ಚು ಜನ ಆಯುಷ್ಮಾನ್ ಕಾರ್ಡ್ ನೋಂದಾಯಿಸಿಕೊಂಡರು.

ಬಿಜೆಪಿ ಯುವ‌ ಮೋರ್ಚಾ ಉಡುಪಿ‌ ನಗರ: ‘ವಿಕಾಸ್ ತೀರ್ಥ ಬೈಕ್ ರ್ಯಾಲಿ’

ಉಡುಪಿ: ಬಿಜೆಪಿ ಯುವ ಮೋರ್ಚಾ ಉಡುಪಿ ನಗರ ಇದರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ ಸಲುವಾಗಿ ‘ಸೇವೆ, ಸುಶಾಶನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಅಂಗವಾಗಿ ‘ವಿಕಾಸ್ ತೀರ್ಥ ಬೈಕ್ ರ್ಯಾಲಿ’ಯು ಮಲ್ಪೆ ಬೀಚ್ ನ ಗಾಂಧಿ ಪ್ರತಿಮೆ ಬಳಿಯಿಂದ‌ ಹೊರಟು ಕಲ್ಮಾಡಿ – ಆದಿವುಡುಪಿ – ಬನ್ನಂಜೆ – ಬ್ರಹ್ಮಗಿರಿ – ಜೋಡುಕಟ್ಟೆ – ಕೆ.ಎಂ. ಮಾರ್ಗ – ಸಿಟಿ ಬಸ್ ಸ್ಟ್ಯಾಂಡ್ – ಕುಂಜಿಬೆಟ್ಟು – ಮಣಿಪಾಲ್ ಸಿಂಡಿಕೇಟ್ ಸರ್ಕಲ್ – ಡಾ! ವಿ.ಎಸ್. ಆಚಾರ್ಯ ರಸ್ತೆ – ಮಣಿಪಾಲ್ ಡಾಲರ್ಸ್ ಸರ್ಕಲ್ – ಮಣಿಪಾಲ ಟೈಗರ್ ಸರ್ಕಲ್ – ಪರ್ಕಳ – ಮಣಿಪಾಲ್ ಬಸ್ ನಿಲ್ದಾಣ – ಇಂದ್ರಾಳಿ ಮಾರ್ಗವಾಗಿ ಕುಂಜಿಬೆಟ್ಟು ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಸಮಾಪನಗೊಂಡಿತು.

ವಿಕಾಸ ತೀರ್ಥ ಬೈಕ್ ರ್ಯಾಲಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಚಾಲನೆ ನೀಡಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬೈಕ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಶ್ವೇತ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ‍ವಿಖ್ಯಾತ್ ಶೆಟ್ಟಿ, ಯುವ‌ ಮೋರ್ಚಾ ಉಡುಪಿ ನಗರಾಧ್ಯಕ್ಷ ರೋಶನ್ ಶೆಟ್ಟಿ, ಹಿಂದೂ ಯುವಸೇನೆ‌ ಜಿಲ್ಲಾಧ್ಯಕ್ಷ ಮಂಜುನಾಥ್ ಕೊಳ, ನಗರಸಭಾ ಸದಸ್ಯರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜೂ.20 ಬೆಳಿಗ್ಗೆ ಗಂಟೆ 10.30ಕ್ಕೆ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಹಿರಿಯ ಮುಖಂಡ ಎ.ಜಿ. ಕೊಡ್ಗಿಯವರ ಶೃದ್ಧಾಂಜಲಿ ಸಭೆ

ಕರಾವಳಿ‌‌ ಕರ್ನಾಟಕದ ರಾಜಕೀಯ ಬೀಷ್ಮರೆಂದೇ ಖ್ಯಾತರಾಗಿದ್ದ ‌ಬಿಜೆಪಿ ಹಿರಿಯ‌ ಮುಖಂಡ, ಉಡುಪಿ ಜಿಲ್ಲಾ ಬಿಜೆಪಿ ಪ್ರಥಮ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಹಾಗೂ 3ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ. ಕೊಡ್ಗಿಯವರ ಶೃದ್ಧಾಂಜಲಿ ಸಭೆಯು ಜೂ.20ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಕು! ಶೋಭಾ ಕರಂದ್ಲಾಜೆ ಹಾಗೂ ಜಿಲ್ಲೆಯ ಸಚಿವರು ಮತ್ತು ಶಾಸಕರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ.

ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಭಾಗವಹಿಸಲಿದ್ದಾರೆ.

ಜೂ.18 ರಾಜ್ಯ ‘ಜನಪ್ರತಿನಿಧಿ ಸಮಾವೇಶ’; ಜೂ.21 ಜಿಲ್ಲಾ ಮಟ್ಟದ ‘ವಿಶ್ವ ಯೋಗ ದಿನಾಚರಣೆ’ ಯಶಸ್ವಿಗೊಳಿಸಲು ಕುಯಿಲಾಡಿ ಸುರೇಶ್ ನಾಯಕ್ ಕರೆ



ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಜನಪರ ಆಡಳಿತದ ಯಶಸ್ವಿ ಎಂಟು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಮೇ 30ರಿಂದ ಜೂನ್ 14ರ ವರೆಗೆ ಹಮ್ಮಿಕೊಂಡಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನವು ಮಂಡಲವಾರು ಗರಿಷ್ಠ ಕಾರ್ಯಕ್ರಮಗಳೊಂದಿಗೆ ಯಶಸ್ವಿಯಾಗಿ ಕಾರ್ಯಗತಗೊಂಡಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಮಾರ್ಗದರ್ಶನ ‌ಮಾಡಲಿರುವ ರಾಜ್ಯ‌ ಮಟ್ಟದ ‘ಜನಪ್ರತಿನಿಧಿ ಸಮಾವೇಶ’ವು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ರಾಜ್ಯದ ನಾಯಕರುಗಳು ಉಪಸ್ಥಿತಿಯಲ್ಲಿ ಜೂನ್ 18ರಂದು ಚಿತ್ರದುರ್ಗದ ಮುರುಘರಾಜೇಂದ್ರ ಮಠದ ‘ಅನುಭವ ಮಂಟಪ’ದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ‘ಜನಪ್ರತಿ‌ನಿಧಿ ಸಮಾವೇಶ’ ಮತ್ತು ‘ವಿಶ್ವ ಯೋಗ ದಿನಾಚರಣೆ’ಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜೂನ್ 18ರ ರಾಜ್ಯ ಮಟ್ಟದ ‘ಜನಪ್ರತಿನಿಧಿ ಸಮಾವೇಶ’ಕ್ಕೆ ಉಡುಪಿ ಜಿಲ್ಲೆಯಿಂದ ಅಪೇಕ್ಷಿತರಾದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ನಗರಸಭೆ ಮತ್ತು ಪುರಸಭೆಗಳ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ಸಮಾವೇಶದ ಯಶಸ್ಸಿಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

‘ಜನಪ್ರತಿನಿಧಿ ಸಮಾವೇಶ’ಕ್ಕೆ ಅಪೇಕ್ಷಿತ ಜನಪ್ರತಿನಿಧಿಗಳ ಭಾಗವಹಿಸುವಿಕೆಯ ಪೂರ್ವ ಸಿದ್ಧತೆಗಳ ಬಗ್ಗೆ ಜಿಲ್ಲಾ ಸಂಚಾಲಕರಾದ ಪ್ರಭಾಕರ ಪೂಜಾರಿ, ಭಾಲಕೃಷ್ಣ ಶೆಟ್ಟಿ, ರಾಜೀವ್ ಕುಲಾಲ್ ಹಾಗೂ ಮಂಡಲಗಳ ಅಧ್ಯಕ್ಷರು ಮಾಹಿತಿ ನೀಡಿದರು.

*ಜೂ.21ರಂದು ‘ವಿಶ್ವ ಯೋಗ ದಿನಾಚರಣೆ’:* ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜೂ.21ರಂದು ಉಡುಪಿಯಲ್ಲಿ ನಡೆಯಲಿರುವ ‘ವಿಶ್ವ ಯೋಗ ದಿನಾಚರಣೆ’ಯಲ್ಲಿ ಪಕ್ಷದ ಪ್ರಮುಖರು ಹಾಗೂ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ತಿಳಿಸಿದರು.

‘ವಿಶ್ವ ಯೋಗ ದಿನಾಚರಣೆ’ ಆಯೋಜನೆ ಬಗ್ಗೆ ಜಿಲ್ಲಾ ಸಂಚಾಲಕ ಮಹೇಶ್ ಠಾಕೂರ್ ಮಾಹಿತಿ ನೀಡಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜೂ.21ರಂದು ಸಂಜೆ ಗಂಟೆ 5.00 ರಿಂದ 7.00ರ ವರೆಗೆ ಉಡುಪಿಯಲ್ಲಿ ನಡೆಯಲಿರುವ ‘ವಿಶ್ವ ಯೋಗ ದಿನಾಚರಣೆ’ಯಲ್ಲಿ ಡಾ! ತನ್ಮಯ್ ಗೋಸ್ವಾಮಿ ‘ಯೋಗ ಮತ್ತು ಶಿಸ್ತುಬದ್ಧ ಜೀವನ’ದ ಬಗ್ಗೆ ಮಾರ್ಗದರ್ಶನ ಮಾಡಲಿದ್ದು, ಯೋಗ ಶಿಕ್ಷಕಿ ಶೋಭಾ ಶೆಟ್ಟಿ ಇಂದ್ರಾಳಿ ಯೋಗಾಭ್ಯಾಸ ತರಗತಿಯನ್ನು ನಡೆಸಿಕೊಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠಗಳ ಸಂಚಾಲಕರು ಉಪಸ್ಥಿತರಿದ್ದರು.

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಕಾಪು ಕೈಪುಂಜಾಲು ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್ ಆಯೋಜನೆ

ಕಾಪು: ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚದ ವತಿಯಿಂದ ನರೇಂದ್ರ ಮೋದೀಜಿ ಆಡಳಿತದ ಎಂಟು ವರ್ಷಗಳ ಸಾರ್ಥಕ ಸೇವೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಕಾಪು ಕೈಪುಂಜಾಲು ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಬಿಜೆಪಿ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು ನೆರವೇರಿಸಿ ಶುಭಹಾರೈಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನರೇಂದ್ರ ಮೋದಿ ಸರಕಾರದ ಹತ್ತು ಹಲವು ಯೋಜನೆಗಳ ಮಾಹಿತಿ ನೀಡಿ ಮೋದೀಜಿಯವರಿಗೆ ಶಕ್ತಿ ತುಂಬಲು ಎಲ್ಲರೂ ಕೈ ಜೋಡಿಸಬೇಕೆಂದು ವಿನಂತಿಸಿದರು. ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚ ಅಧ್ಯಕ್ಷರಾದ ಗೋಪಾಲ ಕಳಂಜ, ಬೈಂದೂರು ಮಂಡಲ ಎಸ್ ಸಿ ಮೋರ್ಚ ಅಧ್ಯಕ್ಷರಾದ ಚಂದ್ರ ಪಂಚವಟಿ, ಕಾಪು ಮಂಡಲ ಎಸ್ ಸಿ‌ ಮೋರ್ಚ ಉಪಾಧ್ಯಕ್ಷರಾದ ಕ್ರಷ್ಣ ಕಂಚಿನಡ್ಕ ಹಾಗು ಕಾರ್ಯಕ್ರಮ ಆಯೋಜನೆ ಮಾಡಿದ ಜಿಲ್ಲಾ ಎಸ್ ಸಿ ಮೋರ್ಚದ ಪ್ರಧಾನ ಕಾರ್ಯದರ್ಶಿ ಸದಾನಂದ ಕರ್ಕೇರ ಉಪಸ್ಥಿತರಿದ್ದರು.

ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ದುರ್ಬಲ ವರ್ಗದ ಕಲ್ಯಾಣ ಕಾರ್ಯಕ್ರಮ

ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ದುರ್ಬಲ ವರ್ಗದ ಕಲ್ಯಾಣ ಕಾರ್ಯಕ್ರಮ ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ‌ ಆರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿದರು. ದುರ್ಬಲ ವರ್ಗದ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ರೇಶ್ಮ ಶೆಟ್ಟಿ ಪ್ರಸ್ತಾವನೆ ಮಾತನ್ನಾಡಿದರು. ಮಂಡಲ ಸಂಚಾಲಕರಾದ ಅನಿಲ್ ಕುಮಾರ್ ಸ್ವಾಗತಿಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಆಡಳಿತದ ಸಾಧನೆಗಳು, ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ ಶುಭಹಾರೈಸಿದರು. ಇಂದು ದಿವಂಗತರಾದ ಪಕ್ಷದ ಹಿರಿಯರಾದ ಶ್ರೀ ಎ ಜಿ ಕೊಡ್ಗಿ ರವರಿಗೆ ಶ್ರಧ್ದಾಂಜಲಿ ಸಲ್ಲಿಸಲಾಯಿತು. ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕಾಪು ಪ್ರಾಧಿಕಾರದ ಅಧ್ಯಕ್ಷರಾದ ಸುಧಾಮ‌ ಶೆಟ್ಟಿ, ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಶೈಲೇಶ್ ಮತ್ತಿತರರು ಉಪಸ್ಥಿತರಿದ್ದರು. ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಮಂಡಲ ಉಸ್ತುವಾರಿ ಮಾಲಿನಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಹಾಶಕ್ತಿಕೇಂದ್ರ ಜಿಲ್ಲಾ ಉಸ್ತುವಾರಿ ಗಂಗಾಧರ ಸುವರ್ಣ ಉಪಸ್ಥಿತರಿದ್ದರು.

ಅರ್ಥಪೂರ್ಣ ಕಾರ್ಯಕ್ರಮದಲ್ಲಿ *17 ಜನ* ಪುರಸಭಾ ವ್ಯಾಪ್ತಿಯ *ಎಸ್ ಎಸ್ ಎಲ್ ಸಿ ಸಾಧಕರಿಗೆ ಗೌರವಾರ್ಪಣೆ ಮಾಡಲಾಯಿತು. *50 ಜನ* ದುರ್ಬಲ ವರ್ಗದ ಮನೆಯ ಮಕ್ಕಳಿಗೆ *ಪುಸ್ತಕಗಳನ್ನು ಕೊಡೆಯನ್ನು* ವಿತರಿಸಲಾಯಿತು.

ಬಿಜೆಪಿ ಹಿರಿಯ ಮುಖಂಡ, ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷ, ಕರಾವಳಿ ಕರ್ನಾಟಕದ ರಾಜಕೀಯ ಬೀಷ್ಮ ಎ.ಜಿ. ಕೊಡ್ಗಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ

ಉಡುಪಿ: ಕರಾವಳಿ‌‌ ಕರ್ನಾಟಕದ ರಾಜಕೀಯ ಬೀಷ್ಮರೆಂದೇ ಖ್ಯಾತರಾಗಿದ್ದ ‌ಬಿಜೆಪಿ ಹಿರಿಯ‌ ಮುಖಂಡ, ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ.ಜಿ. ಕೊಡ್ಗಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆ ರಚನೆಯಾದ ಪರ್ಯಂತ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷರಾಗಿ ಪಕ್ಷವನ್ನು‌ ಸದೃಢವಾಗಿ ಕಟ್ಟಿ ಬೆಳೆಸುವಲ್ಲಿ ಎ.ಜಿ. ಕೊಡ್ಗಿಯವರ ಪಾತ್ರ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಕುಂದಾಪುರ ತಾಲೂಕು ಅಧ್ಯಕ್ಷರಾಗಿ, ಉಡುಪಿ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ, 3ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾಗಿ ಪಕ್ಷದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವ ಜೊತೆಗೆ ಸಹಕಾರ‌ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲೂ ಗಣನೀಯ ಸೇವೆ ಸಲ್ಲಿಸಿ ಲಕ್ಷಾಂತರ ಕಾರ್ಯಕರ್ತರ ಪ್ರೇರಣಾಶಕ್ತಿಯಾಗಿದ್ದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿಯವರ ಅಗಲುವಿಕೆ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಅವರು ತಿಳಿಸಿದ್ದಾರೆ.

ಮೃತರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಮೃತರ ಪತ್ನಿ, ಪುತ್ರಿ ಹಾಗೂ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಎ.ಕಿರಣ ಕುಮಾರ್ ಕೊಡ್ಗಿ ಹಾಗೂ ಕ್ಯಾಂಪ್ಕೋ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಸಹಿತ ಪುತ್ರರು, ಕುಟುಂಬ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ಕೊಡ್ಗಿಯವರ ಅಗಲುವಿಕೆಯ ದುಖ:ವನ್ನು ಸಹಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌

ಕಾಪು : ಮೋದೀಜಿ ಆಡಳಿತಡ ಎಂಟನೆ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ‌ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ‌ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ವಹಿಸಿದ್ದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾ ಬಿಜೆಪಿ ಸಂಚಾಲಕರಾದ ಶಿಲ್ಪಾ ಜಿ‌ ಸುವರ್ಣ, ಮಂಡಲ ಸಂಚಾಲಕರಾದ ಮುರಳೀಧರ ಪೈ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ,ನಿಕಟಪೂರ್ವ ಮಂಡಲ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ನಿಕಟಪೂರ್ವ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಸಾಧಕರ ಗೌರವಾರ್ಪಣೆ ಮಂಡಲ ಸಂಚಾಲಕರಾದ ಗುರುಕ್ರಪಾ ರಾವ್, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ ಪಡುಬಿದ್ರೆ, ಪಡುಬಿದ್ರೆ ಪಂಚಾಯತ್ ಅಧ್ಯಕ್ಷರಾದ ರವಿ‌ಶೆಟ್ಟಿ, ಹೆಜಮಾಡಿ ಪಂಚಾಯತ್ ಪ್ರಭಾರ ಅಧ್ಯಕ್ಷರಾದ ಪವಿತ್ರ ಗಿರೀಶ್, ಪಲಿಮಾರು ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಸಾದ್ ಪಲಿಮಾರು ಕಾರ್ಯಕ್ರಮ ನಿರೂಪಿಸಿದರು.

Design a site like this with WordPress.com
Get started