ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ.

ಮಧ್ಯಾಹ್ನ 2.30ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾವೇಶ ಉದ್ಘಾಟಿಸುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಅಧ್ಯಕ್ಷತೆ ವಹಿಸುವರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ‌ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿರುವರು.

ಮಧ್ಯಾಹ್ನ 3.15ಕ್ಕೆ ಪಕ್ಷ ಸಂಘಟನೆಯಲ್ಲಿ ಪ್ರಕೋಷ್ಠಗಳ ಪಾತ್ರ ವಿಷಯದ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡುವರು. ಸಂಜೆ 4.00ಕ್ಕೆ 2014ರ ನಂತರ ಭಾರತದ ವಿಕಾಸ ವಿಷಯದ ಬಗ್ಗೆ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ಗುಂಜೂರು ಚರಣ್ ಮಾತನಾಡುವರು.

ಸಂಜೆ 4.45ಕ್ಕೆ ಸಚಿವ‌‌ ವಿ.ಸುನೀಲ್ ಕುಮಾರ್ ಸಮಾರೋಪ ಭಾಷಣ ಮಾಡುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸುವರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಉಪಸ್ಥಿತರಿರುವರು ಎಂದು ಬಿಜೆಪಿ ಕರ್ನಾಟಕ ರಾಜ್ಯ ಕೈಗಾರಿಕಾ ಪ್ರಕೋಷ್ಠದ ಸಂಚಾಲಕ ಪ್ರದೀಪ್ ಜಿ. ಪೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರ ದರ್ಶನ ಹಾಗೂ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೇ 13ರಂದು ಉಡುಪಿಗೆ ಆಗಮಿಸಿರುವ ಮಾನ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಮಣಿಪಾಲದಲ್ಲಿ‌ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ‌ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಪಕ್ಷದ ಹಿರಿಯ ಕಾರ್ಯಕರ್ತ ಬಾಲಕೃಷ್ಣ ಹೆಗ್ಡೆ ಆತ್ರಾಡಿ ಮತ್ತಿತರರು ಉಪಸ್ಥಿತರಿದ್ದರು.

ಕೃಷ್ಣ ನಗರಿ ಉಡುಪಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ

ಉಡುಪಿ: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಮೇ 10ರಂದು ಉಡುಪಿಯ ಕಿದಿಯೂರ್ ಹೋಟೆಲ್‍ನಲ್ಲಿ ನಡೆಯಿತು.ಈ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಂಖನಾದವನ್ನು ಮೊಳಗಿಸುವ ಮೂಲಕ ಉದ್ಘಾಟಿಸಿದರು.

ಈ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ರಾಜ್ಯದ ಸಚಿವರಾದ ಸುನೀಲ್ ಕುಮಾರ್, ಮಂಗಳೂರು ವಿಭಾಗ ಪ್ರಭಾರಿಗಳಾದ ಕೆ.ಉದಯಕುಮಾರ್ ಶೆಟ್ಟಿ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್ ಮತ್ತು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ಉದ್ಘಾಟನೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪದಾಧಿಕಾರಿಗಳು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆ ಹಾಗೂ ಕರ್ನಾಟಕ ಸರಕಾರದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ರವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಉ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ‌ ಪೂಜಾರಿಯವರು ಪ್ರಶ್ನೋತ್ತರ ಅವಧಿಯಲ್ಲಿ ಭಾಗವಹಿಸಿ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳ ಪ್ರಶ್ನೆಗಳನ್ನು ವಿಶ್ಲೇಷಿಸಿ ಸೂಕ್ತ ಪರಿಹಾರ ಮಾರ್ಗೋಪಾಯಗಳನ್ನು ತಿಳಿಸಿದರು.

ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಂಗಳೂರು ಮತ್ತು ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಯವರು ಪಕ್ಷದ ಸಂಘಟನಾತ್ಮಕ ವಿಚಾರಗಳು ಮತ್ತು ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಸುದೀರ್ಘ ಅವಧಿಯ ಬೇಡಿಕೆಯಾದ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಿರುವ ಕರ್ನಾಟಕ ಸರಕಾರದ ಮಾನ್ಯ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ವ್ಯವಹಾರ ಖಾತೆ ಸಚಿವ ಉಮೇಶ್ ಕತ್ತಿ ಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು.

ಜಿಲ್ಲಾ ವಿಶೇಷ ಕಾರ್ಯಕಾರಿಣಿಯ ಸಮಾರೋಪದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಪ್ರಭಾರಿ ಹಾಗೂ ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಚುನಾವಣೆ ಸಮೀಪಿಸುತ್ತಿರುವ ಈ ಕಾಲಘಟ್ಟದಲ್ಲಿ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತ ಪ್ರಯತ್ನದ ಮೂಲಕ ಮಗದೊಮ್ಮೆ ಜಿ.ಪಂ. ಮತ್ತು ತಾ.ಪಂ. ಚುನಾವಣೆಯಲ್ಲಿ ವಿಕ್ರಮ ಸಾಧನೆ ತೋರುವ ಜೊತೆಗೆ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಪಣದೊಂದಿಗೆ ಸದೃಢ ಪಕ್ಷ ಸಂಘಟನೆಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿ.ಎಮ್. ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ಪದಾಧಿಕಾರಿಗಳು, ವಿಶೇಷ ಆಹ್ವಾನಿತರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ಸಂಚಾಲಕರು, ಸಹ ಸಂಚಾಲಕರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ‌ ಕಾರ್ಯಕ್ರಮ ನಿರೂಪಿಸಿ, ಸದಾನಂದ ಉಪ್ಪಿನಕುದ್ರು ವಂದಿಸಿದರು.

ಜಿಲ್ಲೆಯಾದ್ಯಂತ ಮಹಾ ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಲು ಕುಯಿಲಾಡಿ ಕರೆಜಿಲ್ಲಾ ಪದಾಧಿಕಾರಿಗಳು ಮತ್ತು ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳ ಸಭೆ

ಉಡುಪಿ: ಮೇರಾ ಬೂತ್ ಸಬ್ಸೇ‌ ಮಜ್ಬೂತ್’ ಎಂಬ ತತ್ವದಡಿ ಪ್ರತಿಯೊಂದು ಬೂತ್ ಗಳನ್ನು ಗೆಲ್ಲುವ ಗುರಿಯೊಂದಿಗೆ ಬೂತ್ ಮತ್ತು ಶಕ್ತಿಕೇಂದ್ರಗಳನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮಹಾ ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ‌ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.

ಅವರು ಮೇ 2ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ‌ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೇ 7ರಂದು ಬಿಜೆಪಿ ಜಿಲ್ಲಾ‌‌ ಕಾರ್ಯಕಾರಿಣಿ ಸಭೆ ನಡೆಯಲಿದೆ. ಜಿಲ್ಲಾ‌ ಕಾರ್ಯಕಾರಿಣಿ ಸಭೆಯ ಮೊದಲು ಹಾಗೂ ಪ್ರತೀ‌ ತಿಂಗಳಿಗೊಮ್ಮೆ ಎಲ್ಲಾ‌ ಮಹಾ‌ ಶಕ್ತಿಕೇಂದ್ರಗಳ ಸಭೆಯನ್ನು ಕಡ್ಡಾಯವಾಗಿ ನಡೆಸಿ ಸಭೆಯ ವರದಿಯನ್ನು ಜಿಲ್ಲೆಗೆ ಸಲ್ಲಿಸುವ ಜೊತೆಗೆ ಶಕ್ತಿ‌‌ಕೇಂದ್ರಗಳಿಗೆ ಉಸ್ತುವಾರಿಗಳ ನೇಮಕ ಮಾಡುವಂತೆ ಅವರು ತಿಳಿಸಿದರು.

ವಿಸ್ತಾರಕ ಯೋಜನೆಯ ಪರಿಪೂರ್ಣ ಅನುಷ್ಠಾನ, ಬೂತ್ ಅಧ್ಯಕ್ಷರ ನಾಮ ಫಲಕ ಅನಾವರಣ, ಬೂತ್ ಸಮಿತಿ‌ ಮತ್ತು ಶಕ್ತಿ‌ಕೇಂದ್ರಗಳ ಪ್ರಮುಖರ ಸಹಿತ ಕೀ‌ ವೋಟರ್ಸ್ ಯಾದಿ ರಚನೆಯ ಪರಿಶೀಲನೆ, ಮೈಕ್ರೋ ಡೊನೇಶನ್‌ಗೆ ವೇಗ ನೀಡುವುದು ಹಾಗೂ ಶಕ್ತಿಕೇಂದ್ರಗಳಿಗೆ‌ ಮಂಡಲಗಳ ಪದಾಧಿಕಾರಿಗಳನ್ನು ಉಸ್ತುವಾರಿಗಳನ್ನಾಗಿ ನೇಮಿಸುವ ನಿಟ್ಟಿನಲ್ಲಿ ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಕುಯಿಲಾಡಿ ತಿಳಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳು ಉಪಸ್ಥಿತರಿದ್ದರು.

ಸಮಾಜ ಘಾತುಕ‌ರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ನೆರವು;‌‌ ಕಾಂಗ್ರೆಸ್ ನ ನ‌ಕಲಿ ಜಾತ್ಯಾತೀತತೆಯ ನೈಜ ಬಣ್ಣ ಬಯಲು: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಹುಬ್ಬಳ್ಳಿ ಗಲಭೆಯಲ್ಲಿ ಪೊಲೀಸರ ಮೇಲೆ ಕಲ್ಲು ಹೊಡೆದು ದಾಂಧಲೆ ನಡೆಸಿರುವ ಗಲಭೆಕೋರ ಸಮಾಜ ಘಾತುಕರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ನೆರವು ನೀಡಲು ಮುಂದಾಗಿರುವುದು‌ ನಾಚಿಕೆಗೇಡಿನ ವಿಚಾರವಾಗಿದೆ. ಕಾಂಗ್ರೆಸ್ ನಾಯಕನ ಈ ಕುಕೃತ್ಯದಿಂದ ಜಾತ್ಯಾತೀತತೆಯ ಸೋಗಿನಲ್ಲಿರುವ ಕಾಂಗ್ರೆಸ್ ನ ನೈಜ ಬಣ್ಣ ಬಯಲಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಈ ಹಿಂದೆ ಪಾದರಾಯನಪುರ ಪುಂಡರಿಗೂ ಸಹಾಯ ಮಾಡಿ ವಿವಾದಕ್ಕೀಡಾಗಿದ್ದ ಜಮೀರ್ ಅಹ್ಮದ್‌ ಖಾನ್ ಜಾಮೀನಿನಲ್ಲಿ ಹೊರಬಂದ ಪುಂಡರಿಗೆ ನಗದು ಮತ್ತು ರೇಷನ್ ಕಿಟ್ ಹಂಚಿದ್ದರು. ಇದೀಗ ಹುಬ್ಬಳ್ಳಿ ಗಲಭೆಕೋರರಿಗೆ ಹಣ ಮತ್ತು ಫುಡ್ ಕಿಟ್ ಹಂಚಿಕೆ ಮಾಡುವ ಮೂಲಕ ವ್ಯಾಪಕ ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ.

ಡಿಜೆ ಹಳ್ಳಿ ಕೆಜೆ ಹಳ್ಳಿ ಪ್ರಕರಣದಲ್ಲಿಯೂ ತಮ್ಮದೇ ಪಕ್ಷದ ಶಾಸಕರ ಮನೆಗೆ ಬೆಂಕಿ ಹಚ್ಚಿ ಲೂಟಿಗೈದ ಗಲಭೆಕೋರರ‌ ಬೆಂಬಲಕ್ಕೆ‌ ನಿಂತಿದ್ದ ಕಾಂಗ್ರೆಸ್‌ ಶಾಸಕ ಜಮೀರ್ ಅಹ್ಮದ್ ಖಾನ್ ಮಾನಸಿಕತೆ ಹಾಗೂ ಕಾಂಗ್ರೆಸ್ ನಿಲುವು ಸ್ಪಷ್ಟವಾಗಿದೆ. ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಸಮಾಜಘಾತುಕರ ಮೇಲಿದ್ದ ಪ್ರಕರಣಗಳನ್ನು ರದ್ದುಗೊಳಿಸಿ ಅವರನ್ನು ಬಿಡುಗಡೆಗೊಳಿಸಿದ ಮಾಜಿ ಸಿ.ಎಂ. ಸಿದ್ಧರಾಮಯ್ಯ ನಡೆಯ ಪರಿಣಾಮವಾಗಿ ರಾಜ್ಯದೆಲ್ಲೆಡೆ ಇಂತಹ ಅನಪೇಕ್ಷಿತ ದೇಶ ವಿರೋಧಿ ಕೃತ್ಯಗಳು ನಡೆಯುತ್ತಿದ್ದು, ರಾಜ್ಯದ ಜನತೆ ಈ ಎಲ್ಲಾ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಸೂಕ್ತ ಸಮಯದಲ್ಲಿ ‌ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು‌ ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಧನ

ಜಗನ್ನಾಥ ಕೆ. ಜತ್ತನ್ ಅಡ್ಡ ಬೆಂಗ್ರೆ, ಪಡು ತೋನ್ಸೆ



ಕೆಮ್ಮಣ್ಣು ಪಡು ತೋನ್ಸೆ, ಅಡ್ಡ ಬೆಂಗ್ರೆ ನಿವಾಸಿ ಜಗನ್ನಾಥ ಕೆ. ಜತ್ತನ್ (72 ವರ್ಷ) ರವರು‌ ಎ.26ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವ್ಯಾಪಾರಸ್ಥರಾಗಿದ್ದ ಅವರು ಪಡು ತೋನ್ಸೆ ಶ್ರೀ ರಾಮ ಭಜನಾ ಮಂದಿರದ ಗೌರವಾಧ್ಯಕ್ಷರಾಗಿ, ಕೋಡಿ ಬೆಂಗ್ರೆ ಬಿಲ್ಲವರ ಸೇವಾ ಸಂಘದ ಉಪಾಧ್ಯಕ್ಷರಾಗಿ ಸೇವೆ‌ ಸಲ್ಲಿಸಿದ್ದರು.

ಪಿಎಸ್ಐ ಪರೀಕ್ಷೆ ಆಕ್ರಮ: ಶಾಸಕ ಪ್ರಿಯಾಂಕ್ ಖರ್ಗೆ ಬಂಧಿಸಿ ತನಿಖೆ ನಡೆಸುವಂತೆ ಕುಯಿಲಾಡಿ ಆಗ್ರಹ


ಉಡುಪಿ: ಪಿಎಸ್ಐ ನೇಮಕಾತಿ ಪರೀಕ್ಷೆ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಮಾಜಿ ಸಚಿವ ಕಾಂಗ್ರೆಸ್ ಶಾಸಕ‌ ಪ್ರಿಯಾಂಕ್ ಖರ್ಗೆ ತನ್ನ ಬಳಿ ಇದ್ದ‍‍‍‍‍ ‍ಆಡಿಯೋವನ್ನು ವಿಳಂಬವಾಗಿ ಬಿಡುಗಡೆ ಮಾಡಿದ‌ ಮರ್ಮ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಕಲೆಹಾಕುವ ನಿಟ್ಟಿನಲ್ಲಿ ಸಿಐಡಿ ವಿಶೇಷ ಘಟಕಕ್ಕೆ ಸಹಕರಿಸದಿದ್ದಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸರಕಾರವನ್ನು ಆಗ್ರಹಿಸಿದ್ದಾರೆ.

ಸದ್ರಿ ಪ್ರಕರಣದಲ್ಲಿ ಕಾಂಗ್ರೆಸ್ ವಿನಾಕಾರಣ ಬಿಜೆಪಿ ಮೇಲೆ ಗೂಬೆ ಕೂರಿಸುವ ವಿಫಲ ಯತ್ನದಲ್ಲಿದೆ. ಆದರೆ ಸಿಐಡಿ ಪೊಲೀಸರು‌ ಇದುವರೆಗೆ ಬಂಧಿಸಿರುವ‌ ಶಂಕಿತರೆಲ್ಲರೂ ಕಾಂಗ್ರೆಸ್‌ ಪಾಳಯಕ್ಕೆ ಸೇರಿದ ವ್ಯಕ್ತಿಗಳು ಎಂಬ ವಿಚಾರ ಕಾಂಗ್ರೆಸ್ ಪಾಲಿಗೆ ನುಂಗಲಾರದ ತುತ್ತೆನಿಸಿದೆ.

ಈಗಾಗಲೇ ಬಂಧಿತನಾಗಿರುವ ಪಿಎಸ್ಐ ನೇಮಕಾತಿ ಪರೀಕ್ಷೆ ಆಕ್ರಮ ಪ್ರಕರಣದ ಕಿಂಗ್ ಪಿನ್ ಎನ್ನಲಾದ ಕಲ್ಬುರ್ಗಿಯ ಅಫಜಲಪುರದ ಅರ್.ಡಿ. ಪಾಟೀಲ ಕಾಂಗ್ರೆಸ್‌ನ ಪ್ರಭಾವಿ ನಾಯಕರ ಪರಮಾಪ್ತ ಎಂಬ ವಿಚಾರ ಕಾಂಗ್ರೆಸ್‌ನ ಹಗರಣಗಳ ಕೂಪಕ್ಕೆ ಹಿಡಿದ ಕೈಗನ್ನಡಿಯಂತಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಜುನಾಥ ಭಂಡಾರಿ ಹೇಳಿಕೆ ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಸ್ವಾತಂತ್ರ್ಯ ನಂತರ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿರುವ ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರಗೈದಿರುವುದನ್ನು ಮರೆತು ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಬಿಜೆಪಿ ಬಗ್ಗೆ ಲಘುವಾಗಿ ಮಾತನಾಡಿರುವುದು ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಆರೋಪಿಗಳಾಗಿ ಇದೀಗ ಬೇಲ್ ಮೇಲೆ ಹೊರಗಡೆ ತಿರುಗಾಡುತ್ತಿರುವುದು ಜಗಜ್ಜಾಹೀರಾಗಿದೆ.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಕೇಂದ್ರದ ಯೋಜನೆಯ ಪ್ರತಿ 1 ರೂಪಾಯಿಯಲ್ಲಿ ಫಲಾನುಭವಿಗಳಿಗೆ ತಲುಪುತ್ತಿದ್ದ ಮೊತ್ತ ಕೇವಲ ಹದಿನೈದು ಪೈಸೆ ಮಾತ್ರ ಎಂದು ಸ್ವತಃ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಹೇಳಿದ್ದರು. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ಇತಿಹಾಸ ಸೃಷ್ಟಿಸಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಎಂಬುದು ಜನಜನಿತವಾಗಿದೆ. ಇದೆಲ್ಲವನ್ನು ಮರೆತು ಕಾಂಗ್ರೆಸ್ ವರಿಷ್ಠರನ್ನು ಖುಷಿಪಡಿಸುವ ಭರದಲ್ಲಿ ಸಜ್ಜನ ರಾಜಕಾರಣಿ ಎನಿಸಿರುವ ಭಂಡಾರಿಯವರು ಬಿಜೆಪಿ ಮೇಲೆ ಗೂಬೆ ಕೂರಿಸುವ ಮೊದಲು ತಮ್ಮ ಕಾಂಗ್ರೆಸ್ ಪಕ್ಷದ ಸಾಚಾತನದ ಬಗ್ಗೆ ಅವಲೋಕಿಸುವುದು ಉತ್ತಮ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಯೋಧರಿಗೆ ಸನ್ಮಾನ

ಕಾಪು: ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಪಕ್ಷದ ಸೂಚನೆ ಮೇರೆಗೆ ಇಂದು ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಅಧ್ಯಕ್ಷರಾದ ಸಚಿನ್ ಸುವರ್ಣ ಇವರ ನೇತ್ರತ್ವದಲ್ಲಿ ಯೋಧರಿಗೆ ಸನ್ಮಾನ ಮಾಡುವ ಕಾರ್ಯಕ್ರಮ‌ ನಡೆಯಿತು.

ಕಾಪು ಪುರಸಭಾ ವ್ಯಾಪ್ತಿಯಲ್ಲಿ 4 ಜನ ಯೋಧರನ್ನು ಗುರುತಿಸಿ ಅವರ ಮನೆಗೆ ತೆರಳಿ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಕಾಪು‌ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್, ಪುರಸಭಾ ಸದಸ್ಯರುಗಳಾದ ಅನಿಲ್ ಕುಮಾರ್ ಅರುಣ್ ಶೆಟ್ಟಿ, ಯುವಮೋರ್ಚ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳಾದ ಪ್ರವೀಣ್ ಕುಮಾರ್, ಯತೀಶ್ ಕೋಟ್ಯನ್, ಸೋನು ಪಾಂಗಳ,ಉದಯ್, ರಾಜ್, ವಿನಿಶ್, ಧೀರೇಶ್ ಮತ್ತಿತರರು ಉಪಸ್ಥಿತರಿದ್ದರು.

Design a site like this with WordPress.com
Get started