ಬಿಜೆಪಿ ಚುನಾವಣಾ ಸಿದ್ಧತೆ; ಪಕ್ಷ ಸಂಘಟನೆಗೆ ವೇಗ; ಮೇ 10ರಂದು ಉಡುಪಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ: ಕುಯಿಲಾಡಿ ಸುರೇಶ್ ನಾಯಕ್

ಮುಂಬರಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳನ್ನು ಪುನರಪಿ ಗೆಲ್ಲುವ ಗುರಿಯೊಂದಿಗೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ವೇಗ ನೀಡಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಜಿಲ್ಲಾ ಪ್ರಕೋಷ್ಠಗಳ ಸಂಕುಲಗಳ ಮತ್ತು ವಿವಿಧ ಕಾರ್ಯಕ್ರಮಗಳ ಉಸ್ತುವಾರಿಗಳ ಯಾದಿಯನ್ನು ಬಿಡುಗಡೆಗೊಳಿಸಿದರು.
ಮಾತನಾಡಿದರು.

ಇತ್ತೀಚೆಗೆ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾದ್ಯಂತ ಸದೃಢ ಪಕ್ಷ ಸಂಘಟನೆಗೆ ವಿವಿಧ ಕಾರ್ಯಸೂಚಿಗಳನ್ನು ನೀಡಲಾಗಿದೆ. ಮೇ 10ರಂದು ಉಡುಪಿಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಮೇ 13ರಂದು ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು 1,000ಕ್ಕೂ ಮಿಕ್ಕಿ ಪದಾಧಿಕಾರಿಗಳು, ವೃತ್ತಿ ಪರರು ಮತ್ತು ಕಾರ್ಯಕರ್ತರ ಸಮಾಗಮದೊಂದಿಗೆ ನಡೆಯಲಿದೆ. ಜಿಲ್ಲೆಯಾದ್ಯಂತ ಎಲ್ಲಾ ಮಂಡಲಗಳ ವ್ಯಾಪ್ತಿಯ ಪ್ರತೀ ಮಹಾ ಶಕ್ತಿಕೇಂದ್ರಗಳಲ್ಲಿ ಫಲಾನುಭವಿಗಳ ಸಮಾವೇಶವನ್ನು ಆಯೋಜಿಸಲಾಗುವುದು. ಮೇ 30ರಂದು ಮೋದಿ ಸರಕಾರದ 3ನೇ ಯಶಸ್ವೀ ವರ್ಷಾಚರಣೆ ಅದ್ದೂರಿಯಾಗಿ ನಡೆಯಲಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸರಕಾರದ ವಿವಿಧ ಜನಪರ ಯೋಜನೆಗಳ ಪ್ರಚಾರದ ದೃಷ್ಠಿಯಿಂದ ಎ.7ರಿಂದ 20ರ ವರೆಗೆ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಪಕ್ಷದ ಪ್ರತೀ ಸಭೆಗಳ ಪ್ರಾರಂಭದಲ್ಲಿ ಓರ್ವ ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರರ ಪರಿಚಯವನ್ನು ಮಾಡುವ ಪದ್ಧತಿಯನ್ನು ಬೆಳೆಸುವುದು, ಬೂತ್ ಅಧ್ಯಕ್ಷರ ನಾಮ ಫಲಕ ಅನಾವರಣ, ವಿಸ್ತಾರಕ ಯೋಜನೆಯ ವರದಿ, ಕೀ ವೋಟರ್ಸ್, ಮೈಕ್ರೋ ಡೊನೇಷನ್, ಮಂಡಲ ಮತ್ತು ಮೋರ್ಚಾಗಳ ಕಾರ್ಯಕಾರಿಣಿ ಸಭೆಗಳು ಮುಂತಾದ ಪಕ್ಷ ಸಂಘಟನೆಯ ಪೂರಕ ಕೆಲಸ ಕಾರ್ಯಗಳನ್ನು ಬದ್ಧತೆಯಿಂದ ನಿಗದಿತ ಕಾಲ ಮಿತಿಯೊಳಗೆ ಪೂರ್ಣಗೊಳಿಸುವ ಜೊತೆಗೆ ಚುನಾವಣೆಗೆ ಸಜ್ಜಾಗುವಂತೆ ಸದೃಢ ಪಕ್ಷ ಸಂಘಟನೆಗೆ ವೇಗ ನೀಡಬೇಕು ಎಂದು ಕುಯಿಲಾಡಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಸಂಘಟನಾತ್ಮಕವಾಗಿ ಉಡುಪಿ ಜಿಲ್ಲೆಗೆ ರಾಜ್ಯದಲ್ಲಿ ವಿಶೇಷ ಸ್ಥಾನಮಾನವಿದೆ. ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಅವಿರತ ಶ್ರಮದಿಂದ ಮಂಗಳೂರು ವಿಭಾಗವೂ ರಾಜ್ಯದಲ್ಲಿ ಮುಂಚೂಣಿಯಲ್ಲಿದೆ. ಪ್ರಕೋಷ್ಠಗಳ ಜಿಲ್ಲಾ ಸಂಯೋಜಕರು ಹಾಗೂ ಸಂಕುಲಗಳ ಉಸ್ತುವಾರಿಗಳು ಎಲ್ಲಾ ಪ್ರಕೋಷ್ಠ ಸಮಿತಿಗಳನ್ನು ಸಕ್ರಿಯಗೊಳಿಸಿ, ಸಭೆಗಳನ್ನು ನಡೆಸಿ, ಸಂಘಟಿತ ಪ್ರಯತ್ನದ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ವಿವಿಧ ಕಾರ್ಯಕ್ರಮಗಳ ಮೂಲಕ ಪಕ್ಷ ನೀಡಿರುವ ಅವಕಾಶವನ್ನು ಸದುಪಯೋಗಗೊಳಿಸುವ ಜೊತೆಗೆ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಿ ಮುಂಬರಲಿರುವ ಚುನಾವಣೆಗಳಲ್ಲಿ ಮಗದೊಮ್ಮೆ ಬಿಜೆಪಿ ವಿಜಯಯಾತ್ರೆಗೆ ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಜ್ಜಾಗಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪಕ್ಷದ ಸಂಘಟನಾತ್ಮಕ ವಿಚಾರ ಮತ್ತು ವಿವಿಧ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ ವಂದಿಸಿದರು.

ಆರ್ ಎಸ್ ಬಿ ಫ್ರೆಂಡ್ಸ್ ನೇತ್ರತ್ವದ ವಿಷ್ಣು ಟ್ರೋಫಿಯಲ್ಲಿ ಉಳಿದ ಹಣವನ್ನು ಕರ್ವಾಲು ಸರಕಾರಿ ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ನೀಡಿದ ಸಂಸ್ಥೆ

ಉಡುಪಿ: ಇತ್ತೀಚೆಗೆ ನಡೆದ ಆರ್ ಎಸ್ ಬಿ ಫ್ರೆಂಡ್ಸ್ ನೇತ್ರತ್ವದ ವಿಷ್ಣು ಟ್ರೋಫಿಯಲ್ಲಿ ಉಳಿದ ಹಣವನ್ನು ಕರ್ವಾಲು ಸರಕಾರಿ ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ನೀಡಿದ ಸಂಸ್ಥೆ, ಈ ಕ್ರಿಕೆಟ್ ಪಂದ್ಯಾಟದಿಂದ ಉಳಿಕೆಯಾದ ಮೊತ್ತ ಸುಮಾರು ರೂ.63 ಸಾವಿರವನ್ನು ಶಾಲಾ ಮುಖ್ಯೋಪಾಧ್ಯಾಯರ ಉಪಸ್ಥಿತಿಯಲ್ಲಿ ಶಾಲೆಯನ್ನು ದತ್ತು ಪಡೆದ ಶ್ರೀ ವಿಷ್ಣು ಸ್ನೇಹ ಬಳಗ ಸಂಸ್ಥೆಗೆ ನೀಡಲಾಯಿತು. ಶಾಲಾ ಮುಖ್ಯೊಪಾಧ್ಯಾಯರಾದ ಶ್ರೀಮತಿ‌ ಸವಿತಾರವರು ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಸುರೇಶ್ ನಾಯಕ್, ರಮೇಶ್ ಕಾಮತ್, ರೋಹಿತ್ ಪ್ರಭು, ವಿಘ್ನೇಶ್ ನಾಯಕ್, ಸುಬ್ರಹ್ಮಣ್ಯ ನಾಯಕ್, ದಿನೇಶ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಸಾಮಾಜಿಕ ನ್ಯಾಯ ಸಪ್ತಾಹಧ ಅಂಗವಾಗಿ ಅರ್ಥಪೂರ್ಣ ಪೋಷಣ್ ಅಭಿಯಾನ್

ಕಾಪು: ಕಾಪು ಬಿಜೆಪಿ ಮಹಿಳಾಮೋರ್ಚವತಿಯಿಂದ ಇಂದು ಕುರ್ಕಾಲು ಗಿರಿನಗರ ಬಳಿಯ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ್ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ರಾಜ್ಯ ಮಹಿಳಾಮೋರ್ಚ ಪ್ರಧಾನಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ನೇತ್ರತ್ವದಲ್ಲಿ ಕಾಪು ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾಶೆಟ್ಟಿ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಸಿಬ್ಬಂಧಿಯಿಂದ ಪೌಷ್ಟಿಕ ಆಹಾರದ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ನಂತರದಲ್ಲಿ ಗರ್ಭಿಣಿ ಯುವತಿ ಮಾಳವಿಕಾ ಇವರಿಗೆ ಸೀಮಂತ ಬಡಿಸುವ ಕಾರ್ಯಕ್ರಮ ನಡೆಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಾರ್ಪಣೆ ನಡಿಯಿತು. ಸುಮಾರು ೨೪ ಜನ ಮಕ್ಕಳಿಗೆ ಪೌಷ್ಟಿಕ ಆಹಾರ ಹಣ್ಣು ಹಂಪಲುಗಳನ್ನು ನೀಡಲಾಯಿತು.

ಅರ್ಥಪೂರ್ಣವಾದ ಈ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಭಾಗವಹಿಸಿ ಪೋಷಣ್ ಅಭಿಯಾನ್ ಕುರಿತಾಗಿ ಮಾತನಾಡಿ ಒಳ್ಳೆಯ ಕಾರ್ಯಕ್ರಮ ಆಯೋಜನೆಗಾಗಿ ಮಹಿಳಾಮೋರ್ಚದ ಎಲ್ಲ ಪದಾಧಿಕಾರಿಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮಂಡಲ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ನೀತಾ ಗುರುರಾಜ್, ಸುರೇಖ ಶೈಲೇಶ್, ಮಂಡಲ ಪದಾಧಿಕಾರಿಗಳಾದ ಶಕುಂತಳ, ಸೌಮ್ಯ ಶೆಟ್ಟಿ, ಪ್ರಮೀಳ ಆಚಾರ್ಯ, ಶಾಂತ, ಸುದಕ್ಷಿಣಿ, ಅಂಗನವಾಡಿ ಕಾರ್ಯಕರ್ತರಾದ ಸುಶೀಲಾ, ಗ್ಲಾಡಿಸ್ ಹಾಗೂ ಸಹಾಯಕರಾದ ಸುಜಾತ, ಆಶಾ ಕಾರ್ಯಕರ್ತೆಯರು, ಮಕ್ಕಳ ಪೋಷಕರು ಮತ್ತಿತರರು ಉಪಸ್ಥಿತರಿದ್ದರು.

ಕಾಪು ಮಂಡಲ ರೈತ ಮೋರ್ಚಾ ಹಾಗೂ ಜಿಲ್ಲಾ ರೈತ ಮೋರ್ಚಾ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ



ಕಾಪು: ಕಾಪು ಮಂಡಲ ರೈತ ಮೋರ್ಚ ದ ಕಾರ್ಯಕಾರಿಣಿ ಹಾಗೂ ಜಿಲ್ಲಾ ರೈತ ಮೋರ್ಚ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ ಇನ್ನಂಜೆ ಪಂಚಾಯತ್ ವ್ಯಾಪ್ತಿಯ ಪಾಂಗಳ ಜನಾರ್ದನ ದೇವಸ್ಥಾನ ಬಳಿ ನಡೆಯಿತು.

ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಪು ಮಂಡಲ ರೈತಮೋರ್ಚ ಅಧ್ಯಕ್ಷರಾದ ಗುರುನಂದನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ರೈತಮೋರ್ಚ ಅಧ್ಯಕ್ಷರಾದ ಪ್ರವೀಣ್ ಗುರ್ಮೆ, ಶಿವಕುಮಾರ್, ರಾಘವೇಂದ್ರ ಉಪ್ಪೂರು, ಮಲ್ಲಿಕಾ ಆಚಾರ್ಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಿಸಾನ್ ಸಮ್ಮಾನ್ ಬಗ್ಗೆ ಮಾಹಿತಿ ಹಾಗೂ ತೋಟಗಾರಿಕಾ ಇಲಾಖೆ, ಕ್ರಷಿ ಇಲಾಖೆ ಯ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಾಯಿತು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನಾ ವಿಚಾರ ಮಂಡಿಸಿದ ಕೆ.ಉದಯಕುಮಾರ್ ಶೆಟ್ಟಿ

ವಿಜಯಪುರ: ವಿಜಯಪುರದ ಹಂಪಿಯಲ್ಲಿ ಎಪ್ರಿಲ್ 16ರಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನಾ ವಿಷಯಗಳ ಬಗ್ಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿಯವರು ವಿಚಾರ ಮಂಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಚಿವರಾದ ಆನಂದ್ ಸಿಂಗ್, ಶಶಿಕಲಾ ಜೊಲ್ಲೆ ಮುಂತಾದವರು ಉಪಸ್ಥಿತರಿದ್ದರು.

ಬಿಜೆಪಿಯಿಂದ ವಿತ್ತೀಯ ಸಮಾವೇಶ ಗೌರವ ದಿವಸ್, ಸಾಮಾನ್ಯ ಕೇಂದ್ರ ಸಂಪರ್ಕ



ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಜಿಲ್ಲಾ ಆರ್ಥಿಕ, ವಾಣಿಜ್ಯ, ವ್ಯಾಪಾರ, ಕೈಗಾರಿಕಾ ಮತ್ತು ಸಹಕಾರ ಪ್ರಕೋಷ್ಠಗಳ ಜಂಟಿ ಸಹಯೋಗದಿಂದ ಬಿಜೆಪಿ ಕಾಪು ಮಂಡಲದ ಆಶ್ರಯದಲ್ಲಿ ‘ವಿತ್ತೀಯ ಸಮಾವೇಶ ಗೌರವ ದಿವಸ’ದನ್ವಯ ಸಾಮಾನ್ಯ ಕೇಂದ್ರಗಳ ಸಂಪರ್ಕ ಕಾರ್ಯಕ್ರಮವು ಅಲೆವೂರು ರಾಮ್ ಪುರ ಗ್ರಾಮ ವನ್ ಸೇವಾ ಕೇಂದ್ರದಲ್ಲಿ ನಡೆಯಿತು.

ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ರವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜನಪರ ಯೋಜನೆಗಳಾದ ಆಯುಷ್ಮಾನ್ ಭಾರತ್, ಜನದನ್, ಕಿಸಾನ್ ಸಮ್ಮಾನ್, ಕೋವಿಡ್ ಲಸಿಕೆ, ಗರೀಬ್ ಕಲ್ಯಾಣ ಅನ್ನ ಯೋಜನೆ, ಈಶ್ರಮ್ ಕಾರ್ಡ್, ಪೋಷಣ್ ಅಭಿಯಾನ, ಮುಂತಾದವುಗಳ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡಿದರು.

ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ ನಾಯಕ್ ರವರು ಗ್ರಾಮ ವನ್ ಕೇಂದ್ರ ದಲ್ಲಿ ದೊರೆಯುವ ವಿವಿಧ ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಫಲಾನುಭವಿಗಳ ಪ್ರಕೋಷ್ಠದ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಮಾಂಬೆಟ್ಟು, ಗೋಪಾಲಕೃಷ್ಣ ರಾವ್ ಮುಂತಾದವರು ಉಪಸ್ಥಿತರಿದ್ದರು.

ಪಲಾನುಭವಿಗಳಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಈಶ್ರಮ್ ಕಾರ್ಡ್ಗಳನ್ನು ವಿತರಿಸಲಾಯಿತು ಹಾಗೂ ಬ್ಯಾಂಕ್ ನೆರವಿನೊಂದಿಗೆ ಜನದನ್ ಖಾತೆಗೆ ಹೆಸರುಗಳನ್ನು ನೊಂದಾಯಿಸಲಾಯಿತು.

ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು: ನಳಿನ್‍ಕುಮಾರ್ ಕಟೀಲ್ ವಿಶ್ವಾಸ

ಬೆಂಗಳೂರು: ಕರ್ನಾಟಕದ ಮುಂದಿನ ಗೆಲುವು ದಕ್ಷಿಣ ಭಾರತಕ್ಕೇ ಒಂದು ಸಂದೇಶ ನೀಡಲಿದೆ. ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು ಪಡೆಯಲಿದೆ. ಯಡಿಯೂರಪ್ಪ ಅವರು ರೈತಬಂಧುವಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಬೆಳೆದಿದೆ; ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.

ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೊಸಪೇಟೆಯ ಸಂಕಲ್ಪ ಸಭೆಯು ಅಸೆಂಬ್ಲಿ ಚುನಾವಣೆಯಲ್ಲಿ ವಿಜಯವನ್ನು ತಂದು ಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತದ ಕುರಿತು ವಿಶ್ವದೆಲ್ಲೆಡೆ ಗೌರವ ಪ್ರಾಪ್ತಿಯಾಗುತ್ತಿದೆ. ಇದಕ್ಕೆ ಮಹಾನ್ ಪುರುಷ ನರೇಂದ್ರ ಮೋದಿ ಅವರು ಕಾರಣಕರ್ತರು. ಉಕ್ರೇನ್‍ನಿಂದ ಸಾವಿರಾರು ಭಾರತೀಯರನ್ನು ಕರೆತಂದು ನಮ್ಮ ಗೌರವ ಹೆಚ್ಚಿಸಿಕೊಂಡಿದ್ದೇವೆ. ಅರ್ಹ ಮಹಾಲಿಂಗ ನಾಯ್ಕ, ಹಾಜಬ್ಬರಿಗೆ ಪದ್ಮಶ್ರೀ ಲಭಿಸುತ್ತಿದೆ. ಸಾಂಸ್ಕøತಿಕ ಪರಿವರ್ತನೆಯು ಜಗದ್ವಂದ್ಯ ಭಾರತ ನಿರ್ಮಾಣಕ್ಕೆ ಮೋದಿ ಅವರ ನೇತೃತ್ವದ ಸರಕಾರ ಮುಂದಾಗಿದೆ ಎಂದು ತಿಳಿಸಿದರು.

ಮೋದಿ ಅವರ ಸರಕಾರದ ಏಳೂವರೆ ವರ್ಷದ ಆಡಳಿತದಲ್ಲಿ ಭ್ರಷ್ಟಾಚಾರದ ಒಂದೇ ಒಂದು ಕಳಂಕವಿಲ್ಲ. ಮುದ್ರಾ, ಜನಧನ್ ಸೇರಿದಂತೆ ಎಲ್ಲಿಯೂ ಭ್ರಷ್ಟಾಚಾರ ಇಲ್ಲ. ಒಂದೇ ಒಂದು ರೂಪಾಯಿ ಸೋರಿಕೆ ಆಗಿಲ್ಲ. ಕಿಸಾನ್ ಸಮ್ಮಾನ್ ಯೋಜನೆ ರೈತರನ್ನು ನೇರವಾಗಿ ತಲುಪುತ್ತಿದೆ. ಆಡಳಿತದಲ್ಲಿ ಪರಿವರ್ತನೆ ಸಾಧ್ಯವಾಗುತ್ತಿದೆ ಎಂದರು.
ಕೋವಿಡ್ ಸಂದರ್ಭದಲ್ಲಿ ಮೋದಿಯವರ ಕರೆಗೆ ವಿಶೇಷ ಜನಸ್ಪಂದನೆ ವ್ಯಕ್ತವಾಗಿತ್ತು ಎಂದ ಅವರು, ಜನರು ಜಾತಿ, ಮತ, ಪಂಥ ಮರೆತು ಮೋದಿಯವರ ಕರೆಗಳಿಗೆ ಸ್ಪಂದಿಸಿದರು ಎಂದು ನುಡಿದರು.

ಹಿಂದೆ ಪೋಲಿಯೋ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗೆ ಕಾಂಗ್ರೆಸ್ ಸರಿಯಾಗಿ ಸ್ಪಂದಿಸಲಿಲ್ಲ. ಆದರೆ, ಬಿಜೆಪಿ ಸರಕಾರವು ಉಚಿತವಾಗಿ ಕೋವಿಡ್ ಲಸಿಕೆ ನೀಡಿದೆ ಎಂದು ವಿವರಿಸಿದರು.

ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕರ್ನಾಟಕವು ಸ್ವಾಭಿಮಾನಿ ಕರ್ನಾಟಕವಾಗಿ ಪರಿವರ್ತನೆ ಹೊಂದುತ್ತಿದೆ. ರೈತವಿದ್ಯಾ ನಿಧಿ ಪರಿಕಲ್ಪನೆ ಜಾರಿ ಆಗಿದೆ. ವಿವಿಧ ಮಾಸಾಶನ ಹೆಚ್ಚಳ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ವಿಶೇಷ ಯೋಜನೆಗಳು ಜಾರಿಗೊಳ್ಳುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.

ಕರ್ನಾಟಕ ಸರಕಾರವು ಅಭಿವೃದ್ಧಿ ಪಥದಲ್ಲಿದೆ. ಭ್ರಷ್ಟಾಚಾರದ ಆರೋಪ ಮಾಡುವ ಕಾಂಗ್ರೆಸ್ಸಿಗರಿಗೆ ಉತ್ತರ ಕೊಡಬೇಕು. ಅರ್ಕಾವತಿ ಯೋಜನೆ ಪರಿಶೀಲಿಸಿ ಕ್ರಮ ಕೈಗೊಂಡರೆ ಸಿದ್ದರಾಮಯ್ಯ ಜೈಲಿಗೆ ಹೋಗಬೇಕು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಅಧ್ಯಕ್ಷರು ಜಾಮೀನಿನಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ಚುನಾವಣೆ ಸಂಬಂಧಿಸಿದ ಕಾರ್ಯಗಳಿಗೆ ಕಾರ್ಯಕರ್ತರೇ ಸಿಗುತ್ತಿಲ್ಲ ಎಂದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿ ಹೆಸರಿನಲ್ಲೇ ಚುನಾವಣೆ ಎದುರಿಸುತ್ತೇವೆ. ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳ ಅಭಿವೃದ್ಧಿ ಕಾಮಗಾರಿಗಳನ್ನು ಜನರ ಮುಂದಿಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸಭೆಯನ್ನು ಉದ್ಘಾಟಿಸಿದರು. ರಾಷ್ಟ್ರ ಮತ್ತು ರಾಜ್ಯದ ಮುಖಂಡರು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಆಹ್ವಾನಿತರು ಭಾಗವಹಿಸಿದ್ದರು

ಬಿಲ್ಲವ ಸೇವಾ ಸಂಘ ಅಂಬಲಪಾಡಿ: ಉಚಿತ ಯೋಗ ಶಿಕ್ಷಣ ಶಿಬಿರ ಉದ್ಘಾಟನೆ

ಉಡುಪಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ, ನೇತ್ರಾವತಿ ವಲಯ ಉಡುಪಿ ಜಿಲ್ಲೆ ಇದರ ವತಿಯಿಂದ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಆಶ್ರಯದಲ್ಲಿ ಆರೋಗ್ಯ ಸಂರಕ್ಷಣೆ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಶಿಬಿರದ ಉದ್ಘಾಟನಾ ಸಮಾರಂಭವು ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಯೋಗ ಶಿಕ್ಷಣ ತರಬೇತಿ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಇಂದಿನ ಒತ್ತಡಗಳ ನಡುವಿನ ಯಾಂತ್ರೀಕೃತ ಬದುಕಿನಲ್ಲಿ ಆರೋಗ್ಯಪೂರ್ಣ ಮತ್ತು ನೆಮ್ಮದಿಯ ಜೀವನಕ್ಕೆ ಯೋಗ ಶಿಕ್ಷಣವೊಂದೇ ರಹದಾರಿಯಾಗಿದೆ ಎಂದು ತಿಳಿಸಿದರು.

ಸಂಘದ ಸಮುದಾಯ ಭವನದಲ್ಲಿ ಪ್ರತೀ ದಿನ ಮುಂಜಾನೆ 5.00ರಿಂದ 6.30ರ ತನಕ 48 ದಿನಗಳ ಕಾಲ ನಡೆಯುವ ಉಚಿತ ಯೋಗ ಶಿಕ್ಷಣ ಶಿಬಿರದಲ್ಲಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಿ ಲಭ್ಯವಿರುವ ಅವಕಾಶದ ಸದುಪಯೋಗವನ್ನು ಪಡೆದು ಶಿಬಿರವನ್ನು ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ ಇದರ ಉಡುಪಿ ಜಿಲ್ಲಾ ಮಹಿಳಾ ಸಂಚಾಲಕಿ ಭವಾನಿ ಭಟ್ ರವರು ಮಾತನಾಡಿ ಸಂಸ್ಕಾರ, ಸಂಘಟನೆ, ಸೇವೆ ಎಂಬ ತತ್ವದಡಿ ಉಚಿತ ಯೋಗ ಶಿಕ್ಷಣವನ್ನು ನೀಡುತ್ತಿರುವ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸ್ಥೂಲ ಪರಿಚಯದೊಂದಿಗೆ ಜೀವನದಲ್ಲಿ ನಿರಂತರ ಯೋಗಾಭ್ಯಾಸದ ಔಚಿತ್ಯವನ್ನು ವಿವರಿಸಿದರು.

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ ಇದರ ಉಡುಪಿ ಜಿಲ್ಲಾ ಸಂಚಾಲಕ, ಯೋಗ ಶಿಕ್ಷಕ ಹಾಗೂ ಉಪನ್ಯಾಸಕ ಚಂದ್ರಶೇಖರ ಬಿ.ಎಮ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಯಂ ಆರೋಗ್ಯ ಸಂರಕ್ಷಣೆಯಲ್ಲಿ ಯೋಗ ಶಿಕ್ಷಣದ ಮಹತ್ವ, ಪ್ರಾಕಾರಗಳು ಹಾಗೂ ಉಪಯೋಗದ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.

ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ್ ಎ. ಮತ್ತು ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ ರವರು ಶುಭಾಂಶನೆಗೈದರು.

ಈಗಾಗಲೇ ಯೋಗ ಶಿಕ್ಷಣವನ್ನು ಪಡೆದು ಆರೋಗ್ಯಪೂರ್ಣ ಜೀವನವನ್ನು ನಡೆಸುತ್ತಿರುವ ಹಲವಾರು ಯೋಗ ಬಂಧುಗಳು ತಮ್ಮ ಸ್ವಯಂ ಅನುಭವಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಯೋಗ ಶಿಕ್ಷಕರು, ಸಂಘದ ಆಡಳಿತ ಸಮಿತಿ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಸಂಘದ ಸದಸ್ಯರು, ಯೋಗ ಬಂಧುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಯೋಗ ಶಿಕ್ಷಕಿ ನಳಿನಿಯವರು ಸ್ವಾಗತಿಸಿದರು. ಯೋಗ ಬಂಧು ಅಮಿತಾ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿದರು. ವಲಯ ಶಿಕ್ಷಣ ಪ್ರಮುಖ್ ಆರ್.ಜಿ. ಬಿರಾಧರ್ ರವರು ಸೂಚನೆಗಳನ್ನು ನೀಡಿ ವಂದಿಸಿದರು.

ಅಂಬೇಡ್ಕರ್ ತತ್ವಾದರ್ಶ ಪಾಲನೆಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ : ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ : ಶ್ರೇಷ್ಠ ಮಾನವತಾವಾದಿ ಸಾಮಾಜಿಕ ಪರಿವರ್ತನೆಯ ಹರಿಕಾರ ಸಂವಿಧಾನ ಶಿಲ್ಪಿ ಡಾ! ಬಾಬಾಸಾಹೇಬ್ ಅಂಬೇಡ್ಕರ್ ರವರ ತತ್ವಾದರ್ಶಗಳ ಪಾಲನೆಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವರ ಸಾಧನೆ ಮತ್ತು ಜೀವನಾದರ್ಶಗಳನ್ನು ವಿಶ್ಲೇಷಿಸಿ ಮಾತನಾಡಿದರು.

ತಾನೇ ಸ್ವತಃ ಅಸ್ಪೃಶ್ಯತೆ, ಅಸಮಾನತೆಯ ಪಿಡುಗನ್ನು ಅನುಭವಿಸಿ, ಅದರ ವಿರುದ್ಧ ಸೆಟೆದು ನಿಂತು ಜೀವನ ಪರ್ಯಂತ ಹೋರಾಟ ನಡೆಸಿದ ಮಹಾನ್ ಚೇತನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಬೇಕೆಂಬ ಡಾ! ಬಾಬಾಸಾಹೇಬ್ ಅಂಬೇಡ್ಕರ್ ರವರ ಆಶಯಗಳು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ಜನಪರ ಯೋಜನೆಗಳ ಮೂಲಕ ಸಾಕಾರಗೊಳ್ಳುತ್ತಿವೆ. ಕಾಂಗ್ರೆಸ್ ನಿರಂತರವಾಗಿ ಅಂಬೇಡ್ಕರ್ ರವರ ಹೆಸರನ್ನು ಕೇವಲ ರಾಜಕೀಯ ಲಾಭಕ್ಕಾಗಿ ಉಪಯೋಗಿಸುತ್ತಾ ಬಂದಿದೆ. ಭಾರತೀಯ ಜನತಾ ಪಾರ್ಟಿ ವಿವಿಧ ಮೋರ್ಚಾಗಳ ಮೂಲಕ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವದಡಿ ಎಲ್ಲಾ ವರ್ಗದ ಜನತೆಯನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನದಲ್ಲಿ ಯಶಸ್ಸನ್ನು ಕಾಣುತ್ತಿದೆ ಎಂದು ಅವರು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಪಕ್ಷದ ಪೂರ್ವ ನಿಗದಿತ ಕಾರ್ಯಕ್ರಮಗಳಂತೆ ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾ, ಮಂಡಲ, ಮಹಾ ಶಕ್ತಿಕೇಂದ್ರ ಹಾಗೂ ಬೂತ್ ಮಟ್ಟದಲ್ಲಿ ಆಚರಿಸಲಾಗುತ್ತಿದೆ. ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸಿದ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಮಾನತೆಯ ಹೋರಾಟದ ಅಗ್ರಗಣ್ಯರು. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಅಂಬೇಡ್ಕರ್ ರವರನ್ನು ನಿರಂತರವಾಗಿ ಅವಮಾನಿಸುತ್ತಾ ಬಂದಿದೆ. ಎರಡು ಬಾರಿ ಚುನಾವಣೆಯಲ್ಲಿ ಉದ್ದೇಶಪೂರ್ವಕವಾಗಿ ಅಂಬೇಡ್ಕರ್ ರವರನ್ನು ಸೋಲಿಸಿದ ಕಾಂಗ್ರೆಸ್, ಅವರ ಮಹಾನ್ ಸಾಧನೆಗೆ ಭಾರತ ರತ್ನ ಗೌರವವನ್ನು ನೀಡದೇ ಇರುವುದು ಮಾತ್ರವಲ್ಲದೆ, ಕನಿಷ್ಠ ಅವರ ಅಂತ್ಯ ಸಂಸ್ಕಾರಕಕ್ಕೆ ದೆಹಲಿಯಲ್ಲಿ ಸ್ಥಳವನ್ನು ನೀಡದಿರುವುದು ಕರಾಳ ಇತಿಹಾಸ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಂಬೇಡ್ಕರ್ ರವರ ಜೀವನದ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥ ಹೆಸರಿನಲ್ಲಿ ಅಭಿವೃದ್ಧಿಪಡಿಸಿ ಗೌರವ ಸೂಚಿಸಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ ಕಾಪು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಸೀಫ್ ಕಟಪಾಡಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪೆರ್ಡೂರು ಮಹಾ ಶಕ್ತಿಕೇಂದ್ರದ ಸಂಚಾಲಕ ಜಿಯಾನಂದ ಹೆಗ್ಡೆ, ಮಾಜಿ ನಗರಸಭಾ ಸದಸ್ಯೆ ಮಾಲತಿ ನಾಯ್ಕ್ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Breaking News: ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ

ಶಿವಮೊಗ್ಗ: ಉಡುಪಿ ಹೋಟೆಲ್ ಕೊಠಡಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಇರುಸುಮುರುಸು ಆಗಬಾರದೆಂದು ರಾಜೀನಾಮೆ ಸಲ್ಲಿಸುತ್ತಿದ್ದೇನೆಂದು ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಯಲ್ಲಿ ಘೋಷಿಸಿದ ಸಚಿವ ಕೆಎಸ್ ಈಶ್ವರಪ್ಪ

Design a site like this with WordPress.com
Get started