ಅಂಬೇಡ್ಕರ್ ಜಯಂತಿ, ಸ್ವಚ್ಛ ಭಾರತ್ ಮಿಷನ್ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ನಗರಸಭಾ ಸ್ವಚ್ಛತಾ ಸೈನಿಕರಿಗೆ ಸನ್ಮಾನ


ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠ ಮತ್ತು ಜಿಲ್ಲಾ ಮೀನುಗಾರರ ಪ್ರಕೋಷ್ಠ ಇದರ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಸ್ವಚ್ಛ ಭಾರತ್ ಮಿಷನ್ ಅಂಗವಾಗಿ ನಗರಸಭಾ ‘ಸ್ವಚ್ಛತಾ ಸೈನಿಕರಿಗೆ ಸನ್ಮಾನ’ ಕಾರ್ಯಕ್ರಮವು ಉಡುಪಿ ನಗರಸಭೆಯ ಪರಿಸರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಅಂಬೇಡ್ಕರ್ ರವರ ತತ್ವಾದರ್ಶಗಳು ಎಂದೆಂದಿಗೂ ಅತ್ಯಂತ ಪ್ರಸ್ತುತ. ಸಾಮಾಜಿಕ ಪ್ರಜಾಪ್ರಭುತ್ವ ಉಳಿದರೆ ಮಾತ್ರ ದೇಶ ಉಳಿಯುತ್ತದೆ ಎಂಬ ಅವರ ವಿಚಾರಧಾರೆಗೆ ಒತ್ತು ನೀಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಂಬೇಡ್ಕರ್ ರವರ ಜೀವನದ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥ ಯೋಜನೆಯಡಿ ಅಭಿವೃದ್ಧಿ ಪಡಿಸಿದೆ. ಸಾಮಾಜಿಕ ನ್ಯಾಯಕ್ಕಾಗಿ ಅವಿರತ ಹೋರಾಡಿದ ಮಹಾನ್ ಮಾನವತಾವಾದಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಆಶಯಗಳು ಸರಕಾರದ ಜನಪರ ಯೋಜನೆಗಳ ಮೂಲಕ ಸಾಕಾರಗೊಳ್ಳಲು ಎಲ್ಲರ ಸಂಘಟಿತ ಪ್ರಯತ್ನದ ಅಗತ್ಯವಿದೆ. ಅಂಬೇಡ್ಕರ್ ಜಯಂತಿ ಹಾಗೂ ಸ್ವಚ್ಛ ಭಾರತ್ ಮಿಷನ್ ಅಂಗವಾಗಿ ಸ್ವಚ್ಛತಾ ಸೈನಿಕರನ್ನು ಗೌರವಾಧರದಿಂದ ಸನ್ಮಾನಿಸುವುದು ಅತ್ಯಂತ ಪ್ರಶಂಸನೀಯ ಎಂದರು.

ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು 130ಕ್ಕೂ ಮಿಕ್ಕಿರುವ ಪೌರ ಕಾರ್ಮಿಕರ ಪ್ರತಿನಿಧಿಗಳಾಗಿ ಹಿರಿಯ ಐದು ಮಂದಿ ಸ್ವಚ್ಛತಾ ಸೇನಾನಿಗಳಾದ ಶಾಂತ, ಲಕ್ಷ್ಮಣ, ತೇಜಪ್ಪ, ಪುಷ್ಪ, ಶಾಮ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಲಕ್ಷ್ಮೀ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪೌರಾಯುಕ್ತ ಉದಯಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠದ ಸಂಚಾಲಕ ಪಾಂಡುರಂಗ ಲಾಗ್ವಾಂಕರ್, ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಬುದ್ದರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯೆ ಮತ್ತು ಜಿಲ್ಲಾ ಕೆಡಿಪಿ ಸಮಿತಿ ಸದಸ್ಯೆ ನಿರಜಾ ಯು. ಶೆಟ್ಟಿ, ಪ್ರಕೋಷ್ಠದ ಜಿಲ್ಲಾ ಸಮಿತಿ ಸದಸ್ಯರಾದ ಮದ್ವೇಶ್ ಮಣಿಪಾಲ, ಉದಯ ಕುಮಾರ್ ಉಚ್ಚಿಲ, ಆನಂದ ಗಾಣಿಗ, ಶೋಭಾ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಮತ್ತು ಪೌರ ಕಾರ್ಮಿಕರು ಉಪಸ್ಥಿತರಿದ್ದರು.

ಸದೃಢ ಪಕ್ಷ ಸಂಘಟನೆಯಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣ: ಕುಯಿಲಾಡಿ

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

ಉಡುಪಿ: ಇಂದು ಎಲ್ಲಾ ಸ್ತರಗಳಲ್ಲಿ ಮಹಿಳೆಯರಿಗೆ ವಿಶೇಷ ಜವಾಬ್ದಾರಿ ಇದೆ. ಸಮೃದ್ಧ, ಸದೃಢ ಭಾರತ ನಿರ್ಮಾಣದತ್ತ ಪಕ್ಷದ ಸಂಸ್ಥಾಪಕರು ಕಂಡ ಕನಸನ್ನು ನನಸಾಗಿಸುವಲ್ಲಿ ಸಂಘಟಿತ ಶ್ರಮ ಅತ್ಯವಶ್ಯಕ. ಸದೃಢ ಪಕ್ಷ ಸಂಘಟನೆಯಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆಯಲ್ಲಿ ಎ.13ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ. ದೇಶದ ಭದ್ರತೆ ಮತ್ತು ಸಮಗ್ರತೆಗೆ ಒತ್ತು ನೀಡುವ ಜೊತೆಗೆ ಜನಪರ ಆಡಳಿತದ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಅಭಿವೃದ್ಧಿಯ ಶಖೆಯು ನಿರಂತರವಾಗಿ ಮುಂದುವರಿಯಲು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸರಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಜೊತೆಗೆ ಸರಕಾರದ ಉತ್ತಮ ಸಾಧನೆಗಳ ಮೇಲೆ ಬೆಳಕು ಚೆಲ್ಲುವುದು ಇಂದಿನ ಅಗತ್ಯತೆಯಾಗಿದೆ ಎಂದು ಕುಯಿಲಾಡಿ ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಎಮ್. ಸುವರ್ಣ ಮಾತನಾಡಿ, ಸಾರ್ಥಕ ಚಟುವಟಿಕೆಗಳ ಮೂಲಕ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ರಾಜ್ಯದಲ್ಲೇ ಒಂದು ಮಾದರಿ ಮಹಿಳಾ ಮೋರ್ಚಾ ಎಂದೆನಿಸಿದೆ. ಮಹಿಳಾ ಮೋರ್ಚಾ ಪ್ರತೀ ಬೂತ್ ನಲ್ಲೂ ಮಹಿಳಾ ಕಾರ್ಯಕರ್ತರ ತಂಡವನ್ನು ಸಕ್ರಿಯಗೊಳಿಸಿ, ಸರಕಾರದ ಯೋಜನೆಗಳ ಪ್ರಚಾರ ಹಾಗೂ ಸಶಕ್ತ ಬೂತ್ ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ಮುಂದಿನ ಚುನಾವಣೆಗೆ ಸಜ್ಜಾಗಬೇಕು ಎಂದರು.

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ, ಎ.19ರಂದು ಪೋಷಣ್ ಅಭಿಯಾನವನ್ನು ಜಿಲ್ಲೆಯಾದ್ಯಂತ ಎಲ್ಲಾ ಮಹಾ ಶಕ್ತಿಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗುವುದು. ಸದ್ಯದಲ್ಲೇ ಗುಡಿ ಕೈಗಾರಿಕೆಗಳ ಬಗ್ಗೆ ಉಪಯುಕ್ತ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗುವುದು. ಚುನಾವಣಾ ವರ್ಷದಲ್ಲಿರುವ ಈ ಸನ್ನಿವೇಶದಲ್ಲಿ ಪಕ್ಷ ನೀಡುವ ಎಲ್ಲಾ ಜವಾಬ್ದಾರಿಯನ್ನು ಬದ್ಧತೆಯಿಂದ ನಿರ್ವಹಿಸಲು ಜಿಲ್ಲಾ ಮಹಿಳಾ ಮೋರ್ಚಾ ಸರ್ವ ಸನ್ನದ್ಧವಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸಮಿತಿಯ ನಾಮ ನಿರ್ದೇಶಿತ ಸದಸ್ಯೆ ನೀರಜಾ ಯು. ಶೆಟ್ಟಿ, ಜಿಲ್ಲಾ ಕಾರಾಗೃಹ ಸಂದರ್ಶನ ಮಂಡಳಿ ಸದಸ್ಯೆ ದಯಾಶಿನಿ ಪಂದುಬೆಟ್ಟು ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಮಾಲತಿ ಶ್ರೀಯಾನ್ ಇವರನ್ನು ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಶಾಲು ಹೊದೆಸಿ ಗೌರವಿಸಲಾಯಿತು.

ಉಡುಪಿ ನಗರಸಭಾ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಮಹಿಳಾ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರುಗಳಾದ ಸರೋಜಾ ಶೆಟ್ಟಿಗಾರ್ ಉಡುಪಿ ನಗರ, ವಸಂತಿ ಪೂಜಾರಿ ಉಡುಪಿ ಗ್ರಾಮಾಂತರ, ಸುಮಾ ಶೆಟ್ಟಿ ಕಾಪು, ಮಾಲಿನಿ ಶೆಟ್ಟಿ ಕಾರ್ಕಳ, ರೂಪಾ ಪೈ ಕುಂದಾಪುರ, ಭಾಗೀರತಿ ಸುರೇಶ್ ಬೈಂದೂರು ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಷ್ಮಿತಾ ಬಾಲಕೃಷ್ಣ ಶೆಟ್ಟಿ ವರದಿ ಮಂಡಿಸಿ, ಪ್ರಮೀಳಾ ಹರೀಶ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ರೇಣುಕಾ ಕಡೆಕಾರು ವಂದಿಸಿದರು.

ಆತ್ರಾಡಿ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ‘ಇಂಗ್ಲಿಷ್ ಪರ್ವ’ ವಿಶಿಷ್ಠ ಕಾರ್ಯಕ್ರಮ

ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇದರ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಂದ ‘ಇಂಗ್ಲಿಷ್ ಪರ್ವ’ ಎಂಬ ವಿಶಿಷ್ಟ ಕಾರ್ಯಕ್ರಮವು ಎ.10ರಂದು ಶಾಲಾ ವಠಾರದಲ್ಲಿ ನಡೆಯಿತು.

ಇಂಗ್ಲಿಷ್ ಮಾಧ್ಯಮ ಶಾಲೆಗಳ ಪೈಪೋಟಿಯ ನಡುವೆ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಅಳಿವು ಉಳಿವಿನ ನಿರ್ಣಾಯಕ ಹಂತದ ನಡುವೆ ಕನ್ನಡ ಮಾಧ್ಯಮವನ್ನು ಉಳಿಸುವ ಸಲುವಾಗಿ ಈ ಮಾದರಿ ಕಾರ್ಯಕ್ರಮವು ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿಯವರ ನೇತೃತ್ವದಲ್ಲಿ ಸಹ ಶಿಕ್ಷಕರ ಸಹಯೋಗದೊಂದಿಗೆ ಜರಗಿತು.

ಇಂಗ್ಲಿಷ್ ಭಾಷಾ ಶಿಕ್ಷಕಿ ಶಬನಾ ಪರ್ವೀನ್ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಸಜ್ಜುಗೊಳಿಸಿದ ರೀತಿ ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಿರೂಪಿಸಿ, ಕಾರ್ಯಕ್ರಮದ ನಡುವಿನ ಹೊಂದಾಣಿಕೆ ಮಾಡಿರುವ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಶಾಲಾ ಮುಖ್ಯೋಪಾದ್ಯಾಯಿನಿ ಜ್ಯೋತಿ ಪ್ರಾಸ್ತಾವಿಕ ಮಾತುಗಳನ್ನಾಡಿ ‘ಇಂಗ್ಲಿಷ್ ಪರ್ವ’ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಆತ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ಶೆಟ್ಟಿ ಮಾತನಾಡಿ ವಿನೂತನ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶಾಮಲಾ ಪ್ರಭು ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದ ವೇದಿಕೆಯಲ್ಲಿ ಆತ್ರಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರತ್ನಾಕರ್ ಶೆಟ್ಟಿ, ಹರೀಶ್ ಹೆಗ್ಡೆ, ಸತ್ಯಾನಂದ ನಾಯಕ್, ಉಡುಪಿ ಬಿಆರ್ಸಿ ಉಮಾ, ಬ್ರಹ್ಮಾವರ ಬಿಆರ್ಪಿ ಉದಯ, ಉಡುಪಿ ಸಿಆರ್ಪಿ ಪ್ರದೀಪ್, ಮಾಜಿ ಸೇನಾಧಿಕಾರಿ ನಾರಾಯಣ ಕಾಮತ್, ಗ್ರಾಮ ಪಂಚಾಯತ್ ಸದಸ್ಯ ಇಸ್ಮಾಯಿಲ್, ಮುರಳೀಧರ ಹಾಲಂಬಿ, ಲೀಲಾವತಿ ಟೀಚರ್ ಮುಂತಾದವರು ಉಪಸ್ಥಿತರಿದ್ದರು.

ವಿಧ್ಯಾರ್ಥಿಗಳ ಪೋಷಕರು ಸಭಾಂಗಣದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಾದ ಚೇತನ್, ಅಂಕಿತ, ನವ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ನಿವೇದಿತಾ ಸ್ವಾಗತಿಸಿದರು. ಶಿಕ್ಷಕಿ ಶಬನಾ ಪರ್ವೀನ್ ವಂದಿಸಿದರು.

ಶಿಕ್ಷಕಿಯರಾದ ಶಾಮಲಾ, ಸುಹಾಸಿನಿ, ವಿಮಲಾರವರು ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

ಎಸ್ಡಿಪಿಐ ಕಾಂಗ್ರೆಸ್ಸಿನ ಪಾಪದ ಕೂಸು; ಅಧಿಕಾರವಿಲ್ಲದೆ ಸೊರಗಿದ ಸೊರಕೆ ಮುಖವಾಡ ಬಯಲಾಗಿದೆ: ಕುಯಿಲಾಡಿ


ಉಡುಪಿ:ಉಡುಪಿಯಲ್ಲಿ ಹಿಜಾಬ್ ವಿವಾದವನ್ನು ಹುಟ್ಟು ಹಾಕಿದವರು ಯಾರು, ವಿವಾದವನ್ನು ಬೆಂಬಲಿಸಿ ಪೋಷಿಸಿದವರು ಯಾರು ಹಾಗೂ ವಿದ್ಯಾರ್ಥಿನಿಯರ ದಾರಿ ತಪ್ಪಿಸಿದವರು ಯಾರು ಎಂಬ ಎಲ್ಲಾ ವಿಚಾರಗಳನ್ನು ಜಿಲ್ಲೆಯ ಬುದ್ಧಿವಂತ ಜನತೆ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಆದರೆ ತನ್ನ ನೆಚ್ಚಿನ ಎಸ್ಡಿಪಿಐ ಜೊತೆ ಶಾಮೀಲಾಗಿ ಸಿಎಎ, ಎನ್ಆರ್ಸಿ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡು ಇದೀಗ ಹಿಜಾಬ್ ವಿವಾದದ ಬಗ್ಗೆ ವ್ಯತಿರಿಕ್ತ ಹೇಳಿಕೆ ನೀಡುತ್ತಾ, ಅಧಿಕಾರವಿಲ್ಲದೆ ಸೊರಗಿದ ಸೊರಕೆ ನೈಜ ಮುಖವಾಡ ಬಯಲಾಗಿದೆ. ಎಸ್ಡಿಪಿಐ ಕಾಂಗ್ರೆಸ್ಸಿನ ಪಾಪದ ಕೂಸು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ವೇಳೆ ಬಿಜೆಪಿ ಮತ್ತು ಎಸ್ಡಿಪಿಐ ಶಿಶುವಾಗಿ ಹಿಜಾಬ್ ವಿವಾದ ಹುಟ್ಟಿಕೊಂಡಿದೆ ಎಂಬ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಾಯಕರ ಹಳೇ ಚಾಳಿ ಎಲ್ಲೆ ಮೀರುತ್ತಿದೆ. ಮುಸ್ಲಿಂ ಓಟು ಕೈತಪ್ಪುವ ಭೀತಿಯಿಂದ ಕಾಂಗ್ರೆಸ್ಸಿಗರು ನೈಜ ಸಮಾಜ ಘಾತುಕರ ದೇಶದ್ರೋಹದ ಬಗ್ಗೆ ಮಾತನಾಡುವುದಿಲ್ಲ. ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರಗೈದು ಒಂದೇ ವರ್ಗದ ಓಲೈಕೆಗೆ ಮುಡಿಪಾಗಿ ದುರಾಡಳಿತ ನಡೆಸಿದ ಪರಿಣಾಮವಾಗಿ ದೇಶದೆಲ್ಲೆಡೆ ಕಾಂಗ್ರೆಸ್ ನಿರ್ನಾಮದ ಹಾದಿಯಲ್ಲಿದೆ. ಪಂಚರಾಜ್ಯಗಳ ಚುನಾವಣಾ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಗೆ ತೀವ್ರ ಹತಾಶ ಮನೋಭಾವ ಕಾಡುತ್ತಿದೆ.

ತನ್ನ ಆಡಳಿತಾವಧಿಯಲ್ಲಿ ಕೇಂದ್ರ ಸರಕಾರ ರೂ.29ನ್ನು ಭರಿಸಿರುವ ಅನ್ನ ಭಾಗ್ಯ ಯೋಜನೆಗೆ ರಾಜ್ಯದಿಂದ ಕೇವಲ ರೂ.3ನ್ನು ಮಾತ್ರ ಭರಿಸಿ ಪುಕ್ಕಟೆ ಪ್ರಚಾರ ಪಡೆದು, ಜನತೆಯ ತೆರಿಗೆ ಹಣದಲ್ಲಿ ಒಂದೇ ವರ್ಗದ ಕಲ್ಯಾಣಕ್ಕೆ ಬಿಟ್ಟಿ ಭಾಗ್ಯಗಳನ್ನು ನೀಡಿ, ಖಜಾನೆಯನ್ನು ಬರಿದಾಗಿಸಿ ಅತೀ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಎಂಬ ಕುಖ್ಯಾತಿಗೆ ಪಾತ್ರವಾಗಿದ್ದು ಸಿದ್ದರಾಮಯ್ಯ ಸಾಧನೆ. ಜಾತ್ಯಾತೀತತೆಯ ಮುಖವಾಡ ಧರಿಸಿ ಹಿಂದೂ ಸಂತರನ್ನು ಅವಮಾನಿಸಿ, ಸದಾ ಹಿಂದೂ ವಿರೋಧಿ ನೀತಿ ಅನುಸರಿಸುತ್ತಾ ಸ್ವಕ್ಷೇತ್ರದ ಜನತೆಯಿಂದಲೇ ತಿರಸ್ಕೃತಗೊಂಡಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯನವರ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಬಿಜೆಪಿ ರಾಷ್ಟ್ರೀಯ, ರಾಜ್ಯ ನಾಯಕರು ವ್ಯಾಖ್ಯಾನಿಸಿರುವ ಮಾತು ವಾಸ್ತವಿಕವಾಗಿದೆ.

ಯಾವುದೇ ವಿಷಯವಿಲ್ಲದೆ ಸದಾ ಅನಗತ್ಯ ವಿವಾದಗಳನ್ನು ಸೃಷ್ಟಿಸಿ ಮುಖಭಂಗ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಧೀಮಂತ ಕೇಂದ್ರ ಸಚಿವೆ ಹಾಗೂ ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಮಂಪರು ಪರೀಕ್ಷೆ ನಡೆಸಿ ಎಂದಿರುವ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಮೊದಲು ಮಂಪರು ಪರೀಕ್ಷೆ ನಡೆಸುವುದು ಸೂಕ್ತ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದ ಏಕತೆ ಮತ್ತು ಸಮಗ್ರತೆಗೆ ಅಡ್ಡಿಯಾಗಿರುವ ಕಾಂಗ್ರೆಸ್ ಎಂದೂ ದೇಶಕ್ಕೆ ಅಪಾಯಕಾರಿ: ಕುಯಿಲಾಡಿ

ಉಡುಪಿ: ಕೇವಲ ಒಂದೇ ವರ್ಗದ ಓಲೈಕೆ ರಾಜಕಾರಣ ಮಾಡುತ್ತಾ ದೇಶದ ಏಕತೆ ಮತ್ತು ಸಮಗ್ರತೆಗೆ ಅಡ್ಡಿಯಾಗಿರುವ ಕಾಂಗ್ರೆಸ್ ಎಂದೂ ದೇಶಕ್ಕೆ ಅಪಾಯಕಾರಿ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರನ್ನು ಎರಡೆರಡು ಬಾರಿ ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್, ಅವರ ಸಾಧನೆ, ಘನತೆ, ಅರ್ಹತೆಗೆ ಭಾರತ ರತ್ನ ಗೌರವವನ್ನೂ ನೀಡದೆ, ಕನಿಷ್ಠ ಅವರ ಅಂತಿಮ ಸಂಸ್ಕಾರಕ್ಕೂ ದೆಹಲಿಯಲ್ಲಿ ಅವಕಾಶ ನೀಡದೇ ಅವಮಾನಿಸಿರುವುದು ಕರಾಳ ಇತಿಹಾಸವಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರ ಪ್ರಯತ್ನದಿಂದ ಪ್ರಧಾನಿ ವಿ.ಪಿ. ಸಿಂಗ್ ನೇತೃತ್ವದ ಕೇಂದ್ರ ಸರಕಾರ 1990ರಲ್ಲಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಮರಣೋತ್ತರ ಭಾರತ ರತ್ನ ಗೌರವವನ್ನು ನೀಡಿದೆ. ಪ್ರಸಕ್ತ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನಕ್ಕೆ ಸಂಬಂಧಪಟ್ಟಿರುವ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥ ಹೆಸರಿನಲ್ಲಿ ಅಭಿವೃದ್ಧಿಪಡಿಸಿ ಅವರಿಗೆ ಗೌರವವನ್ನು ಸಲ್ಲಿಸಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.

ಮತಾಂಧ ದೇಶ ವಿರೋಧಿ ಸಂಘಟನೆಗಳು ಸೃಷ್ಠಿಸಿದ ಹಿಜಾಬ್ ವಿವಾದದ ಕುರಿತು ನಿಷೇಧಿತ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥನೊಬ್ಬ ನೀಡಿದ ಹೇಳಿಕೆಗೆ ಹಿಂದೂ ವಿರೋಧಿ ಮಾನಸಿಕತೆಯ ಮಾಜಿ ಸಿ.ಎಂ. ಸಿದ್ಧರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ವರ್ತಿಸಿ, ಪರೋಕ್ಷ ಬೆಂಬಲ ನೀಡಿರುವುದು ಖಂಡನೀಯ. ಕಾಂಗ್ರೆಸ್ ಇಂತಹ ವಿವಾದಗಳಿಗೆ ಬೆಂಬಲಿಸುತ್ತಾ ಬಂದಿರುವುದು ಜಗಜ್ಜಾಹೀರಾಗಿದೆ.

ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸದಸ್ಯತಾ ನೊಂದಣಿ ಅಭಿಯಾನವು ಸಂಪೂರ್ಣ ವೈಫಲ್ಯವನ್ನು ಕಂಡಿದ್ದು, ಬಿಜೆಪಿ ಸದಸ್ಯತ್ವ ಹೊಂದಿರುವ ಅಮಾಯಕ ಜನತೆಯನ್ನು ಯೋಜನೆಗಳ ಹೆಸರಿನಲ್ಲಿ ಯಾಮಾರಿಸಿ, ಮೋಸದಿಂದ ಕಾಂಗ್ರೆಸ್ ಸದಸ್ಯರನ್ನಾಗಿ ನೊಂದಣಿ ಮಾಡಿರುವ ಹಲವಾರು ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಕರ್ನಾಟಕದ ಮುಂದಿನ ಚುನಾವಣೆಯಲ್ಲಿ ತನ್ನ ಪಕ್ಷದ ನಾಯಕರಿಗೆ 150 ಸ್ಥಾನಗಳ ಟಾರ್ಗೆಟ್ ನೀಡಿರುವುದು ಹಾಸ್ಯಾಸ್ಪದವೆನಿಸಿದೆ ಎಂದು ಕುಯಿಲಾಡಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಾತಿನಂತೆ ಬಿಜೆಪಿ ರಾಷ್ಟ್ರ ಭಕ್ತಿಯಲ್ಲಿ ಮೇಳೈಸಿದರೆ, ವಿರೋಧ ಪಕ್ಷಗಳು ಪರಿವಾರ ಭಕ್ತಿಗೆ ಜೋತು ಬಿದ್ದಿವೆ. ದೇಶದ ಅಖಂಡತೆ, ಭದ್ರತೆ ಹಾಗೂ ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಯಾವತ್ತೂ ರಾಜಿ ಮಾಡಿಕೊಂಡಿಲ್ಲ. ಇದಕ್ಕೆ ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯ ಫಲಿತಾಂಶವೇ ಸಾಕ್ಷಿ. ಕೋವಿಡ್ ಸಂಕಷ್ಟದ ಸಮಯದಿಂದ ಕೇಂದ್ರ ಸರಕಾರ ಬಡ ಜನತೆಯ ಹಸಿವು ನೀಗಿಸಲು ಪ್ರಧಾನ ಮಂತ್ರಿ ಆಹಾರ ಭದ್ರತೆಯ ಗರೀಬ್ ಕಲ್ಯಾಣ ಯೋಜನೆಯಡಿ ದೇಶದ 80 ಕೋಟಿ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿರುವ ಅನ್ನ ಯೋಜನೆ ಆಹಾರ ವಿತರಣೆ ಸೌಲಭ್ಯವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಐ.ಎಂ.ಎಫ್ ಪ್ರಶಂಸೆಗೆ ಪಾತ್ರವಾಗಿದೆ.

ಎ.6ರಂದು ಜಿಲ್ಲೆಯ ಎಲ್ಲಾ ಬೂತ್ ಗಳಲ್ಲಿ ಪಕ್ಷದ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಬಿಜೆಪಿ ಸ್ಥಾಪನಾ ದಿನವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಎ.14ರಂದು ಸಂವಿಧಾನ ಶಿಲ್ಪಿ ಭಾರತರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಜಿಲ್ಲೆಯ ಎಲ್ಲಾ ಬೂತ್ ಗಳಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಸೇವಾ ಕಾರ್ಯಗಳ ಮೂಲಕ ಆಚರಿಸಲಾಗುವುದು. ಪಕ್ಷದ ವಿಸ್ತಾರಕ ಯೋಜನೆಯಡಿ ಬೂತ್ ಮಟ್ಟದಿಂದ ಸದೃಢ ಪಕ್ಷ ಸಂಘಟನೆ ಕಾರ್ಯದಲ್ಲಿ ಪಕ್ಷದ ಸಮಸ್ತ ಕಾರ್ಯಕರ್ತರು ತೊಡಗಿಸಿಕೊಂಡಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಮಗದೊಮ್ಮೆ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷದ ಸಂಸ್ಥಾಪಕರ ತ್ಯಾಗ ಬಲಿದಾನ ಆದರ್ಶ ಬಿಜೆಪಿ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿ: ಕೋಟ ಶ್ರೀನಿವಾಸ ಪೂಜಾರಿ


ಉಡುಪಿ: ಕಾಂಗ್ರೆಸ್ ನ ದುರಾಡಳಿತ, ತುಷ್ಟೀಕರಣ ನೀತಿ ಅಂದು ಡಾ! ಶ್ಯಾಮ ಪ್ರಸಾದ್ ಮುಖರ್ಜಿ, ಪಂಡಿತ್ ದೀನದಯಾಳ್ ಉಪಾಧ್ಯಾಯರಂತಹ ದಿವ್ಯ ಚೇತನಗಳಿಂದ ಭಾರತೀಯ ಜನ ಸಂಘದ ಹುಟ್ಟಿಗೆ ಕಾರಣವಾಯಿತು. ಬಳಿಕ ರಾಷ್ಟ್ರೀಯತೆ ಸಹಿತ ಪಂಚ ನಿಷ್ಠೆಗಳ ತಳಹದಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿಯವರಂತಹ ಧೀಮಂತ ನಾಯಕರ ಪರಿಶ್ರಮದಿಂದ ಎಪ್ರಿಲ್ 6, 1980ರಂದು ಭಾರತೀಯ ಜನತಾ ಪಾರ್ಟಿ ಸ್ಥಾಪನೆಗೊಂಡಿತು. ಪಕ್ಷದ ಸಂಸ್ಥಾಪಕರ ತ್ಯಾಗ, ಬಲಿದಾನ, ಆದರ್ಶಗಳು ಕಾರ್ಯಕರ್ತರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ ಎಂದು ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಎ.6ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಪಕ್ಷದ ಧ್ವಜಾರೋಹಣವನ್ನು ನೆರವೇರಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ತತ್ವ ಸಿದ್ಧಾಂತಗಳು, ಉತ್ತಮ ಪ್ರಜಾಸತ್ತಾತ್ಮಕ ವ್ಯವಸ್ಥೆಯಿಂದ ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ. ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಇಂದು ಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ಧ್ವಜಾರೋಹಣ ನಡೆದಿದೆ. ಆದರೆ ಕಾಂಗ್ರೆಸ್ ತನ್ನ ಸದಸ್ಯತ್ವ ಅಭಿಯಾನದಲ್ಲಿ ಸಂಪೂರ್ಣ ವಿಫಲವಾಗಿ, ಬಿಜೆಪಿ ಸದಸ್ಯತ್ವ ಹೊಂದಿರುವ ಅಮಾಯಕ ಜನತೆಯನ್ನು ಯೋಜನೆಗಳ ಹೆಸರಿನಲ್ಲಿ ಯಾಮಾರಿಸಿ ಸದಸ್ಯತ್ವ ನೋಂದಣಿ ಮಾಡುತ್ತಿರುವ ದಯನೀಯ ಸ್ಥಿತಿಗೆ ತಲುಪಿರುವ ಸಂದಿಗ್ಧ ಸನ್ನಿವೇಶದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮುಂದಿನ ಚುನಾವಣೆಯಲ್ಲಿ ತನ್ನ ಪಕ್ಷದ ನಾಯಕರಿಗೆ 150 ಸ್ಥಾನಗಳ ಗುರಿಯನ್ನು ನೀಡಿರುವುದು ಹಾಸ್ಯಾಸ್ಪದವೆನಿಸಿದೆ. ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತ ಬಂಧುಗಳು ಜಾಗೃತರಾಗಿ ಪಕ್ಷದ ಸಂಘಟನಾತ್ಮಕ ವಿಚಾರದಲ್ಲಿ ಬದ್ಧತೆಯಿಂದ ಕಾರ್ಯ ಪ್ರವೃತ್ತರಾಗಬೇಕು ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ, ವ್ಯಕ್ತಿಗಿಂತ ಪಕ್ಷ ಮೇಲು, ಪಕ್ಷಕ್ಕಿಂತ ದೇಶ ಮೇಲು ಎಂಬ ತತ್ವವನ್ನು ಅನುಸರಿಸುತ್ತಿರುವ ಬಿಜೆಪಿ ವಿಶಿಷ್ಟ ಕಾರ್ಯ ಪದ್ಧತಿಯನ್ನು ಹೊಂದಿದೆ. ಕಾಂಗ್ರೆಸ್ ನ ದೇಶ ವಿರೋಧಿ ನೀತಿ, ತುರ್ತು ಪರಿಸ್ಥಿತಿ ಮುಂತಾದ ಜ್ವಲಂತ ಸನ್ನಿವೇಶಗಳನ್ನು ಸಮರ್ಥವಾಗಿ ಎದುರಿಸಿದ ಪರ್ಯಂತ ಜನ್ಮ ತಾಳಿದ ಬಿಜೆಪಿ ಇಂದು ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯತ್ವವನ್ನು ಹೊಂದಿರುವ ಬಲಿಷ್ಠ ರಾಜಕೀಯ ಪಕ್ಷವೆನಿಸಿದೆ. ಬಿಜೆಪಿ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಪಕ್ಷದ ಹುಟ್ಟು ಮತ್ತು ಬೆಳವಣಿಗೆಗೆ ಕಾರಣರಾದ ಪಕ್ಷದ ಸಂಸ್ಥಾಪಕರು ಹಾಗೂ ಎಲ್ಲ ಹಿರಿಯರನ್ನು ಸ್ಮರಿಸಿಕೊಂಡು, ಸಮೃದ್ಧ ಸಶಕ್ತ ಭಾರತ ನಿರ್ಮಾಣದತ್ತ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದರು.

ಬಿಜೆಪಿ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಉಡುಪಿ ನಗರಾಭಿೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಹಾಗೂ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ಕುತ್ಯಾರು ನವೀನ್ ಶೆಟ್ಟಿ ವಂದಿಸಿದರು.

ಅಂಬಲಪಾಡಿ ಬೂತ್ 178ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಉಡುಪಿ: ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಅಂಬಲಪಾಡಿ ಬೂತ್ ಸಂಖ್ಯೆ 178ರಲ್ಲಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿಯವರ ಮನೆಯಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಪಕ್ಷದ ಹುಟ್ಟು ಬೆಳವಣಿಗೆ ಸಾಧನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ರಾಜ್ ಪ್ರಕೋಷ್ಠ ಸಮಿತಿ ಸದಸ್ಯ ಹರೀಶ್ ಆಚಾರ್ಯ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಶೆಟ್ಟಿ, ಮಹಾ ಶಕ್ತಿಕೇಂದ್ರದ ಯುವ ಮೋರ್ಚಾ ಉಪಾಧ್ಯಕ್ಷ ವಿನೋದ್ ಪೂಜಾರಿ, ಬೂತ್ ಪದಾಧಿಕಾರಿಗಳಾದ ಅನಿಲ್ ರಾಜ್ ಅಂಚನ್, ಸತೀಶ್ ರಾವ್, ಪ್ರವೀಣ್ ಕುಮಾರ್, ಅಣ್ಣು ಪದ್ಮನಾಭ ಜತ್ತನ್, ಪ್ರಕಾಶ್ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು.

ವಿಸ್ತಾರಕ ಯೋಜನೆ: ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಬೂತ್ ಅಧ್ಯಕ್ಷರ ನಾಮ ಫಲಕ ಅನಾವರಣಗೈದ ಕೋಟ


ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂದಟ್ಟು ಮತ್ತು ಪಡುಕರೆಯ 4 ಮತ್ತು 5 ನೇ ವಾರ್ಡಿನ ಬಿಜೆಪಿ ಬೂತ್ ಗಳ ಅಧ್ಯಕ್ಷರ ಮನೆಯಲ್ಲಿ ಬೂತ್ ಅಧ್ಯಕ್ಷರ ನಾಮ ಫಲಕವನ್ನು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅನಾವರಣಗೊಳಿಸಿ ಶುಭ ಹಾರೈಸಿದರು.

ವಿಸ್ತಾರಕ ಅಭಿಯಾನದ ಅಂಗವಾಗಿ ‘ಸಶಕ್ತ ಬೂತ್ – ಸದೃಢ ಭಾರತ’ ಪರಿಕಲ್ಪನೆಯಡಿ ಬೂತ್ ಸಮಿತಿಯ ಅಧ್ಯಯನ ಹಾಗೂ ಪರಿಶೀಲನಾ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕೋಟತಟ್ಟು ಶಕ್ತಿಕೇಂದ್ರದ ವಿಸ್ತಾರಕ ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಿಜೆಪಿ ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ಕುಂದಾಪುರ ಮಂಡಲಾಧ್ಯಕ್ಷ ಶಂಕರ ಅಂಕದಕಟ್ಟೆ, ಕುಂದಾಪುರ ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೊರ್ಚಾ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರಿ, ಕೋಟತಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಮೊದ್ ಹಂದೆ, ನೂತನ ಬೂತ್ ಅಧ್ಯಕ್ಷರುಗಳಾದ ಪ್ರಭಾಕರ ಪೂಜಾರಿ ಹಂದಟ್ಟು, ರಾಮ ಎಮ್. ಬಂಗೇರ, ರಮಾನಂದ ಮೆಂಡನ್ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಪಕ್ಷದ ಬೆಳವಣಿಗೆಯಲ್ಲಿ ಪ್ರಕೋಷ್ಠಗಳ ಕ್ರಿಯಾಶೀಲತೆ ಮಹತ್ವಪೂರ್ಣ: ಕುಯಿಲಾಡಿ ಸುರೇಶ್ ನಾಯಕ್



ಉಡುಪಿ: ಬಿಜೆಪಿ ಇಂದು ಸರ್ವ ಸ್ಪರ್ಶಿ ಸರ್ವ ವ್ಯಾಪಿ ಎನಿಸಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ. ಪಕ್ಷದ ಬೆಳವಣಿಗೆಯಲ್ಲಿ ಪ್ರಕೋಷ್ಠಗಳ ಕ್ರಿಯಾಶೀಲತೆ ಮಹತ್ವಪೂರ್ಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲಾ ಪ್ರಕೋಷ್ಠಗಳು ತಮ್ಮ ವ್ಯಾಪ್ತಿಯ ಇತಿ ಮಿತಿಯೊಳಗೆ ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಮಹತ್ತರವಾದ ಕೊಡುಗೆಯನ್ನು ನೀಡಬೇಕು. ಪ್ರಕೋಷ್ಠಗಳ ನಿಗದಿತ ಕಾರ್ಯ ಚಟುವಟಿಕೆಗಳ ಜೊತೆಗೆ ಕಮಲ ಪುಷ್ಪ, ವಿಸ್ತಾರಕ ಯೋಜನೆಯಂತಹ ಅಭಿಯಾನದ ಯಶಸ್ಸಿಗೆ ಕೈಜೋಡಿಸಬೇಕು ಎಂದರು.

ಜಿಲ್ಲೆಯ ವಿವಿಧ ಪ್ರಕೋಷ್ಠಗಳ ಕಳೆದ ಮೂರು ತಿಂಗಳ ಚಟುವಟಿಕೆಗಳ ವಿವರಗಳನ್ನು ಪಡೆದ ಕುಯಿಲಾಡಿ, ರಾಜ್ಯದ ಸೂಚನೆಯಂತೆ ಮುಂದಿನ ದಿನಗಳಲ್ಲಿ ಪ್ರಕೋಷ್ಠಗಳ ಜಿಲ್ಲಾ ಮತ್ತು ಮಂಡಲ ಸಮಿತಿಗಳ ಸಂಚಾಲಕರು, ಸಹ ಸಂಚಾಲಕರು ಹಾಗೂ ಸಮಿತಿ ಸದಸ್ಯರಿಗೆ ಅಯೋಜಿಸಲ್ಪಡುವ ಒಂದು ದಿನದ ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲೆಯ ವಿವಿಧ ಪ್ರಕೋಷ್ಠಗಳ ಸಂಚಾಲಕರುಗಳಾದ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ರಘುವೀರ್ ಶೆಣೈ, ದುರ್ಗಾಪ್ರಸಾದ್, ರಾಜೀವ್ ಕುಲಾಲ್, ಡಾ! ರಾಮಚಂದ್ರ ಕಾಮತ್, ಡಾ! ವಿದ್ಯಾಧರ ಶೆಟ್ಟಿ, ಗಣೇಶ್ ಬ್ರಹ್ಮಾವರ, ಸಂತೋಷ್ ಜತ್ತನ್ ಹೇರೂರು, ಚಂದ್ರಶೇಖರ್ ಪ್ರಭು, ಪಾಂಡುರಂಗ ಲಾಗ್ವನ್ಕರ್, ಆನಂದ ಗಾಣಿಗ ಮುಂತಾದವರು ಉಪಸ್ಥಿತರಿದ್ದರು.

ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಸಭೆ

ಉಡುಪಿ: ಬಿಜೆಪಿ ಉಡುಪಿ ನಗರ ವ್ಯಾಪ್ತಿಯ ಬಿಜೆಪಿ ಹೆರ್ಗ ಮಹಾ ಶಕ್ತಿ ಕೇಂದ್ರದ ಸಭೆಯು ಮಹಾ ಶಕ್ತಿಕೇಂದ್ರದ ಸಂಚಾಲಕ ಹೇಮಂತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಎ.4ರಂದು ಕೆಳ ಪರ್ಕಳದಲ್ಲಿ ನಡೆಯಿತು.

ಬಿಜೆಪಿ ಜಿಲ್ಲಾ ಸಹ ವಕ್ತಾರ ಹಾಗೂ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಜಿಲ್ಲಾ ಉಸ್ತುವಾರಿ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಬಿಜೆಪಿ ಸ್ಥಾಪನಾ ದಿನಾಚರಣೆ ಮತ್ತು ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಪಕ್ಷದ ವಿಸ್ತಾರಕ ಯೋಜನೆಯ ಹಿನ್ನೆಲೆಯಲ್ಲಿ ಸಶಕ್ತ ಬೂತ್ ನಿರ್ಮಾಣದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಮಾಜಿ ನಗರಸಭಾ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ, ಕಲ್ಪನಾ ಸುಧಾಮ, ಹೆರ್ಗ ಮಹಾ ಶಕ್ತಿ ಕೇಂದ್ರದ ಸಹ ಸಂಚಾಲಕ ಶಿವಾನಂದ ಕಾಮತ್, ಪರ್ಕಳ ಶಕ್ತಿ ಕೇಂದ್ರದ ಅಧ್ಯಕ್ಷ ದುರ್ಗಾದಾಸ್ ರೈ, ಮಣಿಪಾಲ ಶಕ್ತಿ ಕೇಂದ್ರದ ಅಧ್ಯಕ್ಷ ನಟರಾಜ್ ಕಾಮತ್, ಬೂತ್ ಅಧ್ಯಕ್ಷರಾದ ಎಸ್.ರಮಾನಂದ ಸಾಮಂತ್, ಪ್ರಸನ್ನ ಶೆಟ್ಟಿ ಹೆರ್ಗ, ಜಗದೀಶ್ ಆಚಾರ್ಯ, ಸುರೇಶ್ ಕೇಳ್ಕರ್, ಸುಧೀರ್ ಶೆಟ್ಟಿಗಾರ್, ಗಿರೀಶ್, ಸುಧಾಮ ಪಿ., ಕಿರಣ್ ಬಿ.ಆರ್., ಬೂತ್ ಕಾರ್ಯದರ್ಶಿಗಳು, ಸಮಿತಿ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Design a site like this with WordPress.com
Get started