ಕಾಂಗ್ರೆಸ್ಸಿನ ಸಂವಿಧಾನ ವಿರೋಧಿ ನಡೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಜಿಹಾದಿಗಳಿಗೆ ನೈತಿಕ ಬೆಂಬಲ ನೀಡುತ್ತಿರುವ ಕಾಂಗ್ರೆಸ್ಸಿಗೆ ಹಿಂದೂಗಳ ಬಗ್ಗೆ ಕಾಳಜಿ ಯಾಕಿಲ್ಲ?: ಕುಯಿಲಾಡಿ ಸುರೇಶ್ ನಾಯಕ್


ಉಡುಪಿ: ಕೇವಲ ವೋಟ್ ಬ್ಯಾಂಕಿಗಾಗಿ ಒಂದೇ ವರ್ಗವನ್ನು ಓಲೈಸುತ್ತಾ ಸಂವಿಧಾನ ವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಾ ಜಿಹಾದಿಗಳಿಗೆ ನೈತಿಕ ಬೆಂಬಲ ನೀಡುತ್ತಾ ಬಂದಿರುವ ಕಾಂಗ್ರೆಸ್ಸಿಗೆ ಹಿಂದೂಗಳ ಬಗ್ಗೆ ಕಾಳಜಿ ಯಾಕಿಲ್ಲ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ.

ಅವರು ಕಾಂಗ್ರೆಸ್ಸಿನ ಪ್ರಜಾಪ್ರಭುತ್ವ ವಿರೋಧಿ ನೀತಿ ಮತ್ತು ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಫೆ.26ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿ ಈ ಬಗ್ಗೆ ವಿಸ್ತೃತ ವಿವರಣೆ ನೀಡಿದರು.

ನಿರ್ಧಿಷ್ಟ ಕೋಮಿನ ಜನತೆ ನನ್ನ ಸಹೋದರರು ಎಂದು ರಾಜಾರೋಷವಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಅವರ ಅಮಾನುಷ ಹತ್ಯೆಯ ಬಗ್ಗೆ ಗಾಢ ಮೌನ ವಹಿಸಿರುವ ಹಿಂದಿನ ಮರ್ಮವೇನು? ಮತಾಂಧರಿಂದ ಬರ್ಬರ ಹತ್ಯೆಗೀಡಾಗಿರುವ ಹರ್ಷರವರ ಮನೆಗೆ ಕನಿಷ್ಠ ಬೇಟಿ ನೀಡುವ ಸೌಜನ್ಯವಿಲ್ಲದ ಡಿಕೆಶಿ, ಸಿದ್ದರಾಮಯ್ಯ ಮುಂತಾದ ಕಾಂಗ್ರೆಸ್ ನಾಯಕರು ಬರೇ ಸುಳ್ಳು ಹೇಳಿಕೆಗಳನ್ನು ನೀಡುತ್ತಾ ಸಾಮಾಜದ ಸ್ವಾಸ್ಥ್ಯ ಕೆಡಿಸಲು ಹೆಣಗಾಡುತ್ತಿರುವುದು ಶೋಚನೀಯವಾಗಿದೆ.

ಉಭಯ ಸದನಗಳ ಕಲಾಪವನ್ನು ವಿನಾಕಾರಣ ವ್ಯರ್ಥಗೊಳಿಸಿರುವ ಕಾಂಗ್ರೆಸ್ಸಿನ ಸಂವಿಧಾನ ವಿರೋಧಿ ನಡೆಯನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ.

ಶಿವಮೊಗ್ಗದಲ್ಲಿ ಜಿಹಾದಿಗಳಿಗೆ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ. ಆರೋಪಿಗಳನ್ನು ಕೂಡಲೇ ಬಂಧಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರವು ಜನರಲ್ಲಿ ವಿಶ್ವಾಸ ಮೂಡಿಸಿದೆ.

ರಾಜ್ಯ ಸರಕಾರ ಪೊಲೀಸ್ ಇಲಾಖೆಗೆ ಪೂರ್ಣ ಸ್ವಾತಂತ್ರ್ಯ ನೀಡಿದ್ದಲ್ಲದೆ ಇಬ್ಬರು ಉನ್ನತ ಪೊಲೀಸ್ ಅಧಿಕಾರಿಗಳನ್ನು (ಎಡಿಜಿಪಿ) ತಕ್ಷಣವೇ ಸ್ಥಳದಲ್ಲಿ ನಿಯೋಜಿಸಿ ಅಪರಾಧಿಗಳ ಬಂಧನ ಸಾಧ್ಯವಾಗುವಂತೆ ಮಾಡಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಗಲಭೆಗೆ ಆಸ್ಪದವಾಗದಂತೆ, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಂಡಿದ್ದಾರೆ.

ಜನವಿರೋಧಿ, ಸದನ ವಿರೋಧಿ, ಭಯೋತ್ಪಾದಕರ ಪರ ಇರುವ ಕಾಂಗ್ರೆಸ್ ವಿರುದ್ಧ ಫೆ.27 ಮತ್ತು 28ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟವನ್ನು ಬಿಜೆಪಿ ಹಮ್ಮಿಕೊಂಡಿದೆ.

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳು ಕಾಂಗ್ರೆಸ್ ಕೂಸು. ಕಾಂಗ್ರೆಸ್‌ನ ಆಡಳಿತಾವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಂ ಸಿದ್ದರಾಮಯ್ಯ ಈ ಸಂಘಟನೆಗಳ ವಿರುದ್ಧ ಇದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದ್ದಾರೆ. ಇದರಿಂದ ಈ ಸಂಘಟನೆಗಳು ಹೆಚ್ಚು ಸಕ್ರಿಯವಾಗಿವೆ.

ಕಾಂಗ್ರೆಸ್ ಪಕ್ಷವು ಎಸ್‌ಡಿಪಿಐ, ಪಿಎಫ್ಐ ಜೊತೆಗೂಡಿ ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡಿದೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಪಕ್ಷ ಮತ್ತು ಅದರ ಮುಖಂಡರು ಸದನದ ಕಲಾಪ ವ್ಯರ್ಥವಾಗುವಂತೆ ಮಾಡಿದ್ದಾರೆ. ಅವರು ಡಾ! ಅಂಬೇಡ್ಕರ್‌ ವಿರೋಧಿ, ಸಾವರ್ಕರ್ ವಿರೋಧಿ, ಜನವಿರೋಧಿ, ಹಿಂದೂ ವಿರೋಧಿ, ಶಿಕ್ಷಣ ದ್ರೋಹಿ, ಮಹಿಳಾ ವಿರೋಧಿ ಅಲ್ಲದೇ ಮತಾಂತರದ ಪರವಾಗಿದ್ದಾರೆ.

ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹರ್ಷ ಅವರ ಮನೆಗೆ ಹೋಗಲು ಕಾಂಗ್ರೆಸ್‌ನವರಿಗೆ ಸಮಯ ಇಲ್ಲ. ದೆಹಲಿಗೆ ಹೋಗಲು ಸಮಯ ಇದೆ. ಇದು ಅವರ ಹಿಂದೂ ವಿರೋಧಿ ಮತ್ತು ಭಯೋತ್ಪಾದನಾ ಪರ ಮಾನಸಿಕತೆಗೆ ಸಾಕ್ಷಿಯಾಗಿದೆ.

ಹಿಜಾಬ್ ಪರವಾಗಿ ನಿಂತ ಮತಾಂಧರ ಕೃತ್ಯದಿಂದ ಶಿವಮೊಗ್ಗದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಅವರ ಹತ್ಯೆಯಾಗಿದೆ. ಇದೊಂದು ಪೂರ್ವಯೋಜಿತ ದುಷ್ಕೃತ್ಯ; ಗೋಮುಖ ವ್ಯಾಘ್ರರ ಕೃತ್ಯವಾಗಿದೆ.

ಸುಳ್ಳು ಹೇಳಿಕೆ ನೀಡುತ್ತಿರುವ ಡಿ.ಕೆ. ಶಿವಕುಮಾರ್ ಸುಳ್ಳಿನ ಕುಮಾರ್ ಆಗಿದ್ದಾರೆ. ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾಗಿ ಸುಳ್ಳಿನ ಕಂತೆ ಬಿಚ್ಚಿಟ್ಟಿದ್ದಾರೆ. ಡಿ.ಕೆ. ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಗೂಂಡಾಗಿರಿ ಹೆಚ್ಚಾಗಿದೆ. ಕಾಂಗ್ರೆಸ್ ಪಕ್ಷದ ಯುವ ಘಟಕಕ್ಕೂ ಗೂಂಡಾಗಿರಿ ಹಿನ್ನೆಲೆಯ ವ್ಯಕ್ತಿಯನ್ನೇ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವಿನ ಪೈಪೋಟಿ, ವೈಮನಸ್ಸು, ಒಳಜಗಳ ರಾಜ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಅಧಿಕಾರದಲ್ಲಿ ಇಲ್ಲದ ಹತಾಶೆ, ಆಡಳಿತ ಕಳೆದುಕೊಂಡ ನೋವನ್ನು ಅವರು ಕೋಮು ಗಲಭೆಗಳಿಗಾಗಿ ಬಳಸುತ್ತಿದ್ದಾರೆ.

ಸದನದಲ್ಲಿ ಸಚಿವ ಈಶ್ವರಪ್ಪ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮ ನೈಜ ಗೂಂಡಾ ಪ್ರವೃತ್ತಿಯನ್ನು ಮೆರೆದಿದ್ದಾರೆ. ಈ ರೀತಿಯ ದುರ್ವರ್ತನೆ ವಿಧಾನಸಭೆಯಲ್ಲಿ ಮೊದಲನೇ ಬಾರಿಗೆ ನಡೆದಿದೆ. ಜೊತೆಗೆ ಕಾಂಗ್ರೆಸ್ಸಿನ ವಿನಾಕಾರಣ ಧರಣಿಯಿಂದ ಕಲಾಪಗಳು ಬಲಿ ಆಗಿವೆ.

ಸದನಕ್ಕೆ ರಾಷ್ಟ್ರ ಧ್ವಜವನ್ನು ತಂದು ಧ್ವಜ ನೀತಿಯನ್ನು ಕಾಂಗ್ರೆಸ್ ಪಕ್ಷ ಉಲ್ಲಂಘಿಸಿದೆ. ಪಕ್ಷದ ನಾಯಕರ ದುರ್ವರ್ತನೆಗೆ ಇದು ಜ್ವಲಂತ ಸಾಕ್ಷಿಯಾಗಿದೆ.

ಬಿಜೆಪಿ ಸ್ಥಾಪನೆಯಾದಂದಿನಿಂದ ಇಂದಿನವರೆಗೂ ದೇಶಭಕ್ತಿ, ರಾಷ್ಟ್ರದ ಸಂಸ್ಕೃತಿ, ಪುನರುತ್ಥಾನಕ್ಕೆ ಮತ್ತು ರಾಷ್ಟ್ರ ಧ್ವಜಕ್ಕೆ ಗೌರವ ನೀಡುವ ನಿಟ್ಟಿನಲ್ಲಿ ಶ್ರಮಿಸಿದ ಪಕ್ಷ. ಕಾಂಗ್ರೆಸ್ ಪಕ್ಷ ಜಮ್ಮು ಮತ್ತು ಕಾಶ್ಮೀರಕ್ಕೆ ಒಂದು ನೀತಿ ಮತ್ತು ಭಾರತದ ಇತರ ಭಾಗಗಳಿಗೆ ಇನ್ನೊಂದು ನೀತಿಯನ್ನು ಜಾರಿಗೊಳಿಸಿದ್ದರೆ ಅದನ್ನು ಜನಸಂಘ ಮತ್ತು ಬಿಜೆಪಿ ಸದಾ ಖಂಡಿಸಿದ್ದವು. ಈ ಹೆಮ್ಮೆ ನಮ್ಮ ಕಾರ್ಯಕರ್ತರು ಮತ್ತು ಮುಖಂಡರಿಗೆ ಸಲ್ಲುತ್ತದೆ. ಈ ಹಿಂದೆ ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಹಾರಿಸದಂತೆ ಕಾಂಗ್ರೆಸ್ ಗೋಲಿಬಾರ್ ನಡೆಸಿರುವುದು ಇತಿಹಾಸ.

ವಿಧಾನಸಭೆ ಸದನದಲ್ಲಿ ವಿಷಯ ಇಲ್ಲದೇ ಇದ್ದರೂ ಕಾಂಗ್ರೆಸ್ ವೃಥಾ ಗದ್ದಲವೆಬ್ಬಿಸಿ ಕಲಾಪವನ್ನು ವ್ಯರ್ಥಗೊಳಿಸಿದೆ. ಇದರಿಂದ ಬೊಕ್ಕಸಕ್ಕೆ ಅನಗತ್ಯ ಹೊರೆಯಾಗಿದೆ. ರಾಜ್ಯದ ಅಭಿವೃದ್ಧಿ, ಬಜೆಟ್ ಪೂರ್ವಭಾವಿ ಚರ್ಚೆ, ಕೋವಿಡೋತ್ತರ ಬೆಳವಣಿಗೆ ಸೇರಿದಂತೆ ಮಹತ್ವದ ವಿಚಾರಗಳ ಚರ್ಚೆಗೆ ಕಾಂಗ್ರೆಸ್ ಅವಕಾಶವನ್ನೇ ನೀಡಲಿಲ್ಲ.

ಸದನ ನಡೆಯದಂತೆ ಪೂರ್ವನಿಯೋಜಿತವಾಗಿ ಧರಣಿ ನಡೆಸಿರುವ ಕಾಂಗ್ರೆಸ್ ಪಕ್ಷವು ಹಿಜಾಬ್ ಕುರಿತ ಚರ್ಚೆಗೆ ಅವಕಾಶವಾಗದಂತೆ ನೋಡಿಕೊಂಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶಿವಮೊಗ್ಗದಲ್ಲಿ ನಡೆದ ಹತ್ಯೆಯ ಸಂಬಂಧ ಸುಳ್ಳು ಮಾಹಿತಿಯ ಟ್ವೀಟ್‌ಗಳ ಮೂಲಕ ಜನರ ದಾರಿ ತಪ್ಪಿಸಿ ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ. ಮಾತ್ರವಲ್ಲದೆ ಪರಿಸ್ಥಿತಿಯ ಉದ್ವಿಗ್ನತೆಗೆ ಕಾರಣವಾಗುವಂತೆ ವರ್ತಿಸಿದ್ದಾರೆ.

ನಿಗದಿತ ಶಾಲಾ ಕಾಲೇಜಿನಲ್ಲಿ ತ್ರಿವರ್ಣ ಧ್ವಜವನ್ನು ಕೆಳಕ್ಕಿಳಿಸಿ ಕೇಸರಿ ಧ್ವಜವನ್ನು ಹಾರಿಸಲಾಗಿದೆ ಎಂಬ ಅಪ್ಪಟ ಸುಳ್ಳಿನ ಮೂಲಕ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ವಿಷಬೀಜ ಬಿತ್ತುವ ಕುಕೃತ್ಯ ಮಾಡಿದ್ದಾರೆ ಎಂದು ಕುಯಿಲಾಡಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್, ಸುಪ್ರಸಾದ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಫೆ.26 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಜನವಿರೋಧಿ ಕಾಂಗ್ರೆಸ್ ವಿರುದ್ಧ, ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬ್ರಹತ್ ಪ್ರತಿಭಟನೆ

ಉಡುಪಿ: ಸಂವಿಧಾನಾತ್ಮಕವಾಗಿ ನಡೆಯುವ ವಿಧಾನ ಮಂಡಲ ಅಧಿವೇಶನವನ್ನು ವಿನಾಕಾರಣ ಬಹಿಷ್ಕರಿಸಿರುವ ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ ನಿಲುವನ್ನು ಖಂಡಿಸಿ ಹಾಗೂ ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಫೆ.26 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಪಕ್ಷದ ಮುಖಂಡರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.26 ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಛೇರಿ ಬಳಿ ಬಿಜೆಪಿ ಬೃಹತ್ ಪ್ರತಿಭಟನೆ

ಉಡುಪಿ: ಸಂವಿಧಾನಾತ್ಮಕವಾಗಿ ನಡೆಯುವ ಅಧಿವೇಶನವನ್ನು ಬಹಿಷ್ಕರಿಸಿದ ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ ನಿಲುವನ್ನು ಖಂಡಿಸಿ ಹಾಗೂ ಶಿವಮೊಗ್ಗದಲ್ಲಿ ನಡೆದ ಹರ್ಷ ಅವರ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಫೆ.26 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲದ ಉಡುಪಿ ಜಿಲ್ಲಾಧಿಕಾರಿ ಕಛೇರಿಯ ಪ್ರತಿಭಟನಾ ಕಟ್ಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಪಕ್ಷದ ಮುಖಂಡರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಪ್ರತಿಷ್ಠಾ ವರ್ಧಂತ್ಯುತ್ಸವ, 62ನೇ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಚಾಲನೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 62ನೇ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ್ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಭಜನಾ ಸಂಚಾಲಕ ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿಯರಾದ ಗೋದಾವರಿ ಎಮ್. ಸುವರ್ಣ, ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ಜಯಂತಿ ಹರೀಶ್, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ರಮೇಶ್ ಕೋಟ್ಯಾನ್, ಸುಧಾಕರ ಎ., ಗುರುರಾಜ್ ಪೂಜಾರಿ, ಸತೀಶ್ ಪೂಜಾರಿ, ಭಾಸ್ಕರ ಕೋಟ್ಯಾನ್, ಶಿವಾಜಿ ಸನಿಲ್, ವಿನಯ್ ಕುಮಾರ್, ನಿತಿನ್ ಕುಮಾರ್, ವಿನೋದ್ ಪೂಜಾರಿ, ಶಶಿಕಾಂತ್, ಪ್ರಮುಖರಾದ ರುಕ್ಮಯ್ಯ ಪೂಜಾರಿ, ಸುರೇಶ್ ಎ., ಕುಶಲ್ ಕುಮಾರ್ ಎ., ಸುಧಾಕರ ಪೂಜಾರಿ, ರವಿ ಪಾಲನ್, ಸತೀಶ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್ ಹಾಗೂ ಮಹಿಳಾ ಘಟಕದ ಸಮಿತಿ ಸದಸ್ಯರು, ಸಂಘದ ಸದಸ್ಯರು ಮತ್ತು ಭಕ್ತಾಬಿಮಾನಿಗಳು ಉಪಸ್ಥಿತರಿದ್ದರು.

ಉಡುಪಿ ತಾಲೂಕು ವ್ಯಾಪ್ತಿಯ ಶ್ರೀ ಬಾಲ ಮಾರುತಿ ಭಜನಾ ಮಂಡಳಿ ಕಿದಿಯೂರು- ಪಡುಕರೆ, ಶ್ರೀ ಪ್ರಸನ್ನ ಗಣಪತಿ ಭಜನಾ ಮಂಡಳಿ ಮಣಿಪಾಲ, ಶ್ರೀ ವೀರ ಮಾರುತಿ ಭಜನಾ ಮಂಡಳಿ ಗರಡಿಮಜಲು, ಶ್ರೀ ನಾಗಬನ ಮಹಿಳಾ ಭಜನಾ ಮಂಡಳಿ ಸಂತೆಕಟ್ಟೆ, ಶ್ರೀ ವಿಠೋಬ ಭಜನಾ ಮಂಡಳಿ ಸಂಕೇಶ ಕಿದಿಯೂರು, ಶ್ರೀ ಪ್ರಸನ್ನ ಗಣಪತಿ ಭಜನಾ ಮಂಡಳಿ ಕಿದಿಯೂರು, ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಅಂಬಲಪಾಡಿ, ಶ್ರೀ ರಾಮ ಭಜನಾ ಮಂಡಳಿ ಕಲ್ಯಾಣಪುರ, ಶ್ರೀ ದುರ್ಗಾ ಭಜನಾ ಮಂಡಳಿ ಗುಂಡಿಬೈಲು, ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಕಿದಿಯೂರು, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಉಪ್ಪೂರು ತಂಡಗಳಿಂದ ಭಜನಾ ಸೇವೆ ನಡೆಯಿತು.

ನಗರ ಭಜನೆ, ಕುಣಿತ ಭಜನೆಯ ಬಳಿಕ ಭಜನಾ ಮಂಗಲ, ಮಹಾ ಪೂಜೆ ಮತ್ತು ಪ್ರಸಾದ ವಿತರಣೆ ನಡೆಯಿತು.

ಪ್ರತಿಷ್ಠಾ ವರ್ಧಂತ್ಯುತ್ಸವವು ದಯಾಕರ ಶಾಂತಿ ಮತ್ತು ಬಳಗದ ಪೌರೋಹಿತ್ಯದಲ್ಲಿ ಜರಗಿತು. ಈ ಸಂದರ್ಭದಲ್ಲಿ ನಡೆದ ಅನ್ನ ಸಂತರ್ಪಣೆಯಲ್ಲಿ ಊರ ಪರವೂರ ಭಕ್ತಾಭಿಮಾನಿಗಳು ಪಾಲ್ಗೊಂಡರು.

ಭಜನಾ ಮಂಲೋತ್ಸವದ ಪೂರ್ವಭಾವಿಯಾಗಿ ನಡೆದ ಭಜನಾ ಸಪ್ತಾಹದ ಅಂಗವಾಗಿ ನಡೆದ ಭಜನಾ ಸೇವೆಯಲ್ಲಿ ಶ್ರೀ ವಿಠೋಬ ಭಜನಾ ಮಂಡಳಿ ಅಂಬಲಪಾಡಿ, ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿ ಅಂಬಲಪಾಡಿ, ಶ್ರೀ ನಾಗರಾಜ ಮಹಿಳಾ ಭಜನಾ ಮಂಡಳಿ ಅಂಬಲಪಾಡಿ, ಮಾತೃ ಮಂಡಳಿ ಕಡಿಯಾಳಿ, ಶ್ರೀ ಮೂಕಾಂಬಿಕಾ ಭಜನಾ ಮಂಡಳಿ ಪೊಲೀಸ್ ಲೈನ್ ಉಡುಪಿ, ಶ್ರೀ ಕೃಷ್ಣ ಮುಖ್ಯಪ್ರಾಣ ಭಜನಾ ಮಂಡಳಿ ಉಡುಪಿ ತಂಡಗಳಿಂದ ಭಜನಾ ಸೇವೆ ನಡೆಯಿತು.

ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್



ಶಿವಮೊಗ್ಗ: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಶಿವಮೊಗ್ಗ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪೊಲೀಸರು ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ 24 ಘಂಟೆಯ ಒಳಗಡೆ ಆರೋಪಿಗಳನ್ನು ಬಂಧಿಸಿದ್ದು ರಾಜ್ಯ ಗೃಹ ಇಲಾಖೆ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ಹರ್ಷ ಹತ್ಯೆ ಪ್ರಕರಣದಲ್ಲಿ ಸಯ್ಯದ್ ನದೀಮ್, ಖಾಸಿಫ್, ಅಫಾನ್, ಖಾಸಿ ಅಲಿಯಾಸ್ ಸಲ್ಮಾನ್, ಚಿಕು, ಸಲ್ಮಾನ್ ಸೇರಿದಂತೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದ್ದು 12 ಮಂದಿಯನ್ನು ವಿಚಾರಣೆಗೆ ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗದಲ್ಲಿ ಬೀಡುಬಿಟ್ಟಿರುವ ಎಡಿಜಿಪಿ ಮುರುಗನ್ ಅವರು, “ಈ ಹತ್ಯೆಯಲ್ಲಿ ನೇರವಾಗಿ ಹಾಗು ಪರೋಕ್ಷವಾಗಿ ಭಾಗಿಯಾಗಿರುವಂತಹ ಪ್ರತಿಯೊಬ್ಬರನ್ನು ಕೂಡ ಹಿಡಿದು ಕಾನೂನಿನ ಪ್ರಕ್ರಿಯೆಗಳಿಗೆ ಒಳಪಡಿಸುತ್ತೇವೆ. ಯಾರನ್ನೂ ಬಿಡುವ ಪ್ರಶ್ನೆ ಇಲ್ಲ” ಎಂದು ಹೇಳಿದರು.

ಸದ್ಯಕ್ಕೆ ಭುಧವಾರ ತನಕ ಶಿವಮೊಗ್ಗ ನಗರದಲ್ಲಿ ಕರ್ಫ್ಯು ಹೇರಲಾಗಿದ್ದು ಪೊಲೀಸ್ ಭದ್ರತೆ ಗಟ್ಟಿಗೊಳಿಸಲಾಗಿದೆ. ಸೋಮವಾರ ದಿನ ಗಲಭೆಯ ಗೂಡಾಗಿದ್ದ ನಗರದ ರಸ್ತೆಗಳು ಇಂದು ಬಿಕೋ ಎನ್ನುತ್ತಿವೆ.

ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಹಂತಕರನ್ನು ಕಾನೂನಾತ್ಮಕ ಗಲ್ಲು ಶಿಕ್ಷೆಗೆ ಗುರಿಪಡಿಸಲು ಕುಯಿಲಾಡಿ ಆಗ್ರಹ

ಉಡುಪಿ: ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ಫೆ.20ರಂದು ನಡೆದ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಹರ್ಷ ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.

ಹಿಂದೂ ಯುವ ಕಾರ್ಯಕರ್ತನ ಕಗ್ಗೊಲೆ ಆತಂಕಕಾರಿಯಾಗಿದೆ. ಈ ಹತ್ಯೆ ಪ್ರಕರಣ ಹಿಂದೂ ಸಮಾಜವನ್ನು ಭೀತಿಗೊಳಪಡಿಸುವ ದುಷ್ಕೃತ್ಯವಾಗಿದೆ. ಮೊಗಲ್ ಕಾಲದಿಂದಲೂ ಈ ರೀತಿಯ ಬೀತಿ ಇದ್ದರೂ ಕೂಡಾ ಹಿಂದೂ ಸಮಾಜ ಯಾವುದಕ್ಕೂ ಜಗ್ಗದೆ ತಲೆ ಎತ್ತಿ ನಿಂತಿದೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಹಿಂದೂ ಸಮಾಜ ಎಂದೂ ಸೊಪ್ಪು ಹಾಕದು.

ಈ ಹಿಂದೆಯೂ ರಾಜ್ಯದಲ್ಲಿ ನಡೆದ ಹಲವಾರು ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಕಾರಣರಾಗಿರುವ ಸಮಾಜ ಘಾತುಕ ಶಕ್ತಿಗಳ ಕೈವಾಡ ಹರ್ಷ ಹತ್ಯೆಯಲ್ಲೂ ಇದೆಯೋ ಎಂಬ ಬಗ್ಗೆ ಕೂಲಂಕುಷ ತನಿಖೆಯ ಅಗತ್ಯವಿದೆ.

ಈ ನಿಟ್ಟಿನಲ್ಲಿ ಹರ್ಷ ಹತ್ಯೆ ಪ್ರಕರಣವನ್ನು ತಕ್ಷಣ ಎನ್ಐಎ ಗೆ ಹಸ್ತಾಂತರಿಸುವ ಮೂಲಕ ದುಷ್ಕರ್ಮಿಗಳನ್ನು ಶೀಘ್ರ ಪತ್ತೆಹಚ್ಚಿ ಹಂತಕರಿಗೆ ಕಾನೂನಾತ್ಮಕ ಗಲ್ಲು ಶಿಕ್ಷೆಯನ್ನು ವಿಧಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಮತ್ತು ಎಸ್‍ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆ ಸೃಷ್ಟಿಸಿವೆ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ತಮ್ಮ ಯೋಜನೆಗಳ ಮೂಲಕ ಜನಮೆಚ್ಚುಗೆಯನ್ನು ಮತ್ತು ಜನರ ವಿಶ್ವಾಸÀವನ್ನು ಹೆಚ್ಚಿಸಿಕೊಂಡಿದ್ದರೆ, ಕಾಂಗ್ರೆಸ್ ಪಕ್ಷ ಹಿಜಾಬ್ ಒಳಗೆ ಸೇರಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಾಬ್ ಗಲಭೆಯನ್ನು ಪ್ರಾರಂಭಿಸಲು ಎರಡು ಶಕ್ತಿಗಳು ಒಂದುಗೂಡಿವೆ. ಇದರಲ್ಲಿ ಮಾನಸಿಕ ಮತ್ತು ಬೌದ್ಧಿಕ ಚಿಂತನೆ ಕಾಂಗ್ರೆಸ್ ಪಕ್ಷದ್ದಾದರೆ, ದೈಹಿಕ ಚಿಂತನೆ ಎಸ್‍ಡಿಪಿಐಯದು. ಕಾಂಗ್ರೆಸ್ ಮತ್ತು ಎಸ್‍ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆಯನ್ನು ಸೃಷ್ಟಿಸಿವೆ. ಕಾಂಗ್ರೆಸ್‍ಗೆ ಹಿಜಾಬ್ ವಿಚಾರದಲ್ಲಿ ನಷ್ಟ ಆಗುವ ಅರಿವಾಗಿ ಅದು ಆತಂಕಕ್ಕೆ ಒಳಗಾಗಿದೆ ಎಂದು ವಿಶ್ಲೇಷಿಸಿದರು.
ಸಿಎಎ ಗಲಭೆಯಲ್ಲೂ ಕಾಂಗ್ರೆಸ್ ಪಾತ್ರವಿತ್ತು. ಡಿಜೆ ಹಳ್ಳಿ- ಕೆಜೆ ಹಳ್ಳಿ ಗಲಭೆಯ ಹಿಂದೆ ಕಾಂಗ್ರೆಸ್ ಕೈವಾಡವಿತ್ತು. ರಾಜ್ಯದಲ್ಲಿ ಅವಾಂತರ ಮಾಡಲು ಗಲಭೆಗಳಿಗೆ ಕಾಂಗ್ರೆಸ್ ಬೆಂಗಾವಲಾಗಿ ನಿಂತಿದೆ. ಹಿಜಾಬ್ ವಿಷಯದಲ್ಲಿ ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸಿದೆ. ಸದನದಲ್ಲಿ ಚರ್ಚೆ ಮಾಡಬೇಕಿದ್ದ ವಿರೋಧ ಪಕ್ಷವಾದ ಕಾಂಗ್ರೆಸ್, ಧರಣಿ ಮೂಲಕ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನ, ವಿಧಾನಸಭೆ, ವಿಧಾನ ಪರಿಷತ್ ಮೇಲೆ ನಂಬಿಕೆ ಇಲ್ಲ ಎಂದು ನುಡಿದರು. ಕೇವಲ ರಾಜಕಾರಣಕ್ಕಾಗಿ ಕಾಂಗ್ರೆಸ್ಸಿಗರು ಧರಣಿ ಕುಳಿತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್‍ನ ಈ ನಿಲುವನ್ನು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಖಂಡಿಸುತ್ತದೆ ಎಂದರು. ವಿರೋಧ ಪಕ್ಷವಾಗಿ ಅದು ನಾಲಾಯಕ್ ಪಾರ್ಟಿ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮೇಲೇಳುವುದಿಲ್ಲ ಎಂಬುದು ಆ ಪಕ್ಷದ ನಾಯಕರಿಗೆ ಗೊತ್ತಾಗಿದೆ. ಶಾಲೆಗಳಲ್ಲಿ ಧನಿಕ, ಬಡವ, ಜಾತಿ ವಿಂಗಡನೆ ಆಗಬಾರದೆಂಬ ಕಾರಣಕ್ಕೆ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಶಾಲೆಯಲ್ಲಿ ಸಮವಸ್ತ್ರ ಕಡ್ಡಾಯ. ಶಾಲೆಯೊಳಗೆ ಹಿಜಾಬ್‍ಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.
ರಾಷ್ಟ್ರಧ್ವಜ, ಸಂವಿಧಾನ, ಜನಗಣಮನ, ವಂದೇ ಮಾತರಂ ಗೀತೆಗೆ ಬಿಜೆಪಿ ಗರಿಷ್ಠ ಗೌರವ ನೀಡುತ್ತಿದೆ. ಶಿವಮೊಗ್ಗದಲ್ಲಿ ಕಾಲೇಜೊಂದರಲ್ಲಿ ರಾಷ್ಟ್ರಧ್ವಜವನ್ನು ಇಳಿಸಿ ಕೇಸರಿ ಧ್ವಜವನ್ನು ಹಾರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಸುಳ್ಳುಮಾಹಿತಿ ನೀಡಿದ್ದರು. ಸುಳ್ಳು, ಮೋಸದ ಮೂಲಕ ಗಲಭೆಗೆ ಪ್ರೇರೇಪಿಸಿದ್ದರು. ಕಾಂಗ್ರೆಸ್ಸಿಗರು ರಾಷ್ಟ್ರಧ್ವಜ, ಜನಗಣಮನಕ್ಕೆ ಗೌರವ ಕೊಡುವುದಿಲ್ಲ. ಅವರದು ಏನಿದ್ದರೂ ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಜೈಕಾರವನ್ನಷ್ಟೇ ಕೂಗುತ್ತಿದೆ ಎಂದು ವಿವರಿಸಿದರು.
ಕಾಂಗ್ರೆಸ್ಸಿಗರು ನಮಗೆ ರಾಷ್ಟ್ರಭಕ್ತಿಯ ಪಾಠ ಹೇಳಬೇಕಿಲ್ಲ. ರಾಷ್ಟ್ರಧ್ವಜ ಮತ್ತು ಕೇಸರಿ ಧ್ವಜಗಳೆರಡನ್ನೂ ನಾವು ಗೌರವಿಸುತ್ತೇವೆ ಎಂದು ನುಡಿದರು. ಕಾಂಗ್ರೆಸ್ ಪಕ್ಷದ ಗಲಭೆ ಸೃಷ್ಟಿಸುವ ಪ್ರಯತ್ನದ ಫಲವಾಗಿ ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಈ ಹತ್ಯೆಗೆ ಕಾರಣವಾದವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಕೊಲೆಯ ಹಿಂದಿನ ಕೈವಾಡ, ಶಕ್ತಿಗಳನ್ನು ಪೊಲೀಸ್ ಇಲಾಖೆ ಹೊರಕ್ಕೆ ತರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಸದನದಲ್ಲಿ ಧರಣಿ ಮಾಡಿ ನಿದ್ದೆಗೆಟ್ಟು ಈಶ್ವರಪ್ಪ ಅವರ ರಾಜೀನಾಮೆ ಪಡೆಯಲು ಸಾಧ್ಯವಿಲ್ಲ ಎಂದ ಅವರು, ಹಿಜಾಬ್ ಕುರಿತ ಚರ್ಚೆ ವಿಧಾನಸಭೆಯಲ್ಲಿ ನಡೆಯಬಾರದು ಮತ್ತು ಕಾಂಗ್ರೆಸ್ ಪಕ್ಷದ ಡಿ.ಕೆ.ಶಿವಕುಮಾರ್ ವiತ್ತು ಸಿದ್ದರಾಮಯ್ಯ ನಡುವಿನ ಒಳಜಗಳದ ಕಾರಣಕ್ಕೇ ಧರಣಿ ನಡೆಸಲಾಗುತ್ತಿದೆ. ಹಿಜಾಬ್‍ನ ಚರ್ಚೆಯಲ್ಲಿ ಭಾಗವಹಿಸಿದರೆ ಕಾಂಗ್ರೆಸ್‍ಗೆ ಮೈನಸ್ ಆಗಲಿದೆ ಎಂಬ ರಾಜಕೀಯ ಲೆಕ್ಕಾಚಾರ, ಅವಕಾಶ ಕೊಟ್ಟರೆ ಸಿದ್ದರಾಮಯ್ಯ ಅವರು ರಾಜ್ಯಪಾಲರ ಭಾಷಣಕ್ಕೆ ಉತ್ತರಿಸಿ ಪ್ರಚಾರಕ್ಕೆ ಬರುತ್ತಾರೆಂಬ ಕಾರಣಕ್ಕಾಗಿ ಡಿಕೆಶಿ ಅವರು ಮಾಡಿರುವ ತಂತ್ರ ಇದರ ಹಿಂದಿದೆ. ಇದರಿಂದಾಗಿ ಕಾಂಗ್ರೆಸ್‍ಮುಕ್ತ ಕರ್ನಾಟಕ ಆಗಲಿದೆ ಎಂದರು.
ಮಾರ್ಚ್ 27- 28ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಅವರು ಪ್ರಕಟಿಸಿದರು.
ಕೇಂದ್ರದ ಯೋಚನೆ ಮತ್ತು ಯೋಜನೆಗಳಿಗೆ ಕರ್ನಾಟಕದ ಕಾರ್ಯಕರ್ತರು ತಕ್ಷಣ ಸ್ಪಂದಿಸುತ್ತಿದ್ದಾರೆ. ಕೇಂದ್ರದ ಸೂಚನೆಯಂತೆ ಪಾರ್ಟಿ ವಿಸ್ತರಣೆಗೊಂಡಿದೆ. ಅದರ ಆಧಾರದಲ್ಲಿ ಮತಗಟ್ಟೆ ಅಧ್ಯಕ್ಷರ ಆಯ್ಕೆ, ಪೇಜ್ ಪ್ರಮುಖರ ನೇಮಕ, ವಿಸ್ತಾರಕರ ಯೋಜನೆ ಅನುಷ್ಠಾನವೂ ಸಮರ್ಪಕವಾಗಿ ನಡೆಯುತ್ತಿದೆ ಎಂದರು.
ಶೇ 50 ರಷ್ಟು ಪೇಜ್ ಸಮಿತಿಗಳೂ ರಚನೆಯಾಗಿವೆ. ಸಂಘಟನಾತ್ಮಕವಾಗಿ ನಾವು ಯಶಸ್ಸು ಪಡೆದಿದ್ದೇವೆ. ಮುಂದಿನ ಕಾರ್ಯಚಟುವಟಿಕೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.
ವಿಶ್ವವಂದ್ಯ ಪ್ರಧಾನಿಗಳಾದ ನರೇಂದ್ರ ಮೋದಿಜಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತವು ಇಂದು ಜಗತ್ತಿನ ಪ್ರಮುಖ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಕೋವಿಡ್ ಸಂಕಷ್ಟವನ್ನು ಎದುರಿಸಿಯೂ ಭಾರತವು ಆರ್ಥಿಕವಾಗಿ ಸದೃಢವಾಗಿ ಬೆಳೆಯುತ್ತಿದೆ. ಆತ್ಮನಿರ್ಭರ ಭಾರತ ಮತ್ತು ಸ್ವದೇಶಿ ಚಿಂತನೆಯಡಿ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾವiನ್ ಅವರು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಅದ್ಭುತವಾದ, ಅತ್ಯಂತ ದೂರದೃಷ್ಟಿಯ ಬಜೆಟ್ ಅನ್ನು ನೀಡಿದ್ದಾರೆ. ರಾಜ್ಯಾಧ್ಯಕ್ಷನ ನೆಲೆಯಲ್ಲಿ ಇದನ್ನು ಸ್ವಾಗತಿಸುವುದಾಗಿ ತಿಳಿಸಿದರು.
ಮುಂದಿನ ಭಾರತದ ದಿಕ್ಕುದೆಸೆ, ಅಭಿವೃದ್ಧಿಗೆ ಈ ಬಜೆಟ್ ಕಾರಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 20,000 ಕೋಟಿ ರೂ. ವೆಚ್ಚದಲ್ಲಿ ಪ್ರಧಾನಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಹಾ ಯೋಜನೆ ಜಾರಿಗೊಳಿಸಲಾಗುತ್ತಿದೆ. ರಸ್ತೆಗಳು, ರೈಲ್ವೆಗಳು, ವಿಮಾನ ನಿಲ್ದಾಣಗಳು, ಬಂದರುಗಳು,ಸಮೂಹ ಸಾರಿಗೆ, ಜಲಮಾರ್ಗಗಳಂಥ ಪ್ರಮುಖ ವಿಚಾರಗಳಿಗೆ ಆದ್ಯತೆ ಕೊಟ್ಟು ದೇಶದ ಸವiಗ್ರ ಅಭಿವೃದ್ಧಿಗೆ ಕಾರಣವಾಗಲಿದೆ. 2022-23ರಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲವನ್ನು 25,000 ಕಿ.ಮೀ.ಗಳಷ್ಟು ವಿಸ್ತರಣೆ ಮಾಡಲಾಗುವುದು. ಇದೊಂದು ಮಹತ್ವದ ಕ್ರಮ ಎಂದು ತಿಳಿಸಿದರು.
ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ ದಿನಕ್ಕೆ 11 ಕಿಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ನಡೆದರೆ, ಅದು ಯುಪಿಎ ಕಾಲಘಟ್ಟದಲ್ಲಿ 4 ಕಿಮೀಗೆ ಇಳಿಯಿತು. ನಮ್ಮ ಕಾಲಘಟ್ಟದಲ್ಲಿ 24 ಕಿಮೀ ರಸ್ತೆ ನಿರ್ಮಾಣ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ಸಾಧ್ಯವಾಗಿದೆ ಎಂದು ವಿವರಿಸಿದರು.
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಬಂದ ಬಳಿಕ ಹಳ್ಳಿಗಳಲ್ಲಿ ಗುಣಮಟ್ಟದ ರಸ್ತೆಗಳು ನಿರ್ಮಾಣಗೊಳ್ಳುತ್ತಿವೆ. ಮೋದಿಯವರ ಆಡಳಿತದಲ್ಲಿ ಹಳ್ಳಿಗಳ ರಸ್ತೆಯೂ ಕಾಂಕ್ರಿಟೀಕರಣವಾಗುತ್ತಿದೆ. ಯುಪಿಎ ಕಾಲಘಟ್ಟದಲ್ಲಿ ಗ್ರಾಮ ಸಡಕ್ ಯೋಜನೆ ಆಮೆಗತಿಯಲ್ಲಿ ಸಾಗುತ್ತಿತ್ತು. ಕರ್ನಾಟಕಕ್ಕೆ ಹಣವೇ ಬಂದಿರಲಿಲ್ಲ ಎಂದು ತಿಳಿಸಿದರು.
ಹರ್ ಘರ್ ಜಲ್ ಯೋಜನೆಯಡಿ 8.7 ಕೋಟಿ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ನೀಡಲಾಗಿದೆ ಹೊಸದಾಗಿ 3.8 ಕೋಟಿ ಕುಟುಂಬಗಳಿಗೆ ನೀರು ಒದಗಿಸಲು ರೂ.60,000 ಕೋಟಿ. ಅನುದಾನ (ನಲ್ ಸೆ ಜಲ್) ನೀಡಲಾಗಿದೆ. ಇದೊಂದು ಮಹತ್ವದ ಉಪಕ್ರಮ ಎಂದು ಶ್ಲಾಘಿಸಿದರು. ಪ್ರಧಾನಿ ಆವಾಸ್ ಯೋಜನೆಯಡಿ 80 ಲಕ್ಷ ಮನೆಗಳನ್ನು ನಿರ್ಮಿಸಲು ರೂ.48,000 ಕೋಟಿ ವಿನಿಯೋಗ ಮಾಡಲಾಗುತ್ತಿದೆ. 2 ಲಕ್ಷ ಅಂಗನವಾಡಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ವಿವರಿಸಿದರು.
ದೂರದ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶಿಕ್ಷಣವನ್ನು ನೀಡಲು 200 ಟಿವಿ ಚಾನೆಲ್‍ಗಳು ಆರಂಭಿಸಲಾಗುವುದು. ರೈತಪರ ಕೇಂದ್ರ ಸರಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಲಾಗುತ್ತಿದೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಯೋಜನೆಗಳ ಅಡಿಯಲ್ಲಿ ರೂ.2.37 ಲಕ್ಷ ಕೋಟಿ ಪಾವತಿಗೆ ಹಣ ಮೀಸಲಿಡಲಾಗಿದೆ. ಕೃಷಿ ಅರಣ್ಯವನ್ನು ಕೈಗೆತ್ತಿಕೊಳ್ಳುವ ಎಸ್‍ಸಿ/ಎಸ್‍ಟಿಗೆ ಸೇರಿದ ರೈತರಿಗೆ ಆರ್ಥಿಕ ಬೆಂಬಲ ಪ್ರಕಟಿಸಲಾಗಿದೆ. ದೇಶಾದ್ಯಂತ ರಾಸಾಯನಿಕ ಮುಕ್ತ, ನೈಸರ್ಗಿಕ ಕೃಷಿಗೆ ಉತ್ತೇಜನ ನೀಡಲಾಗುವುದು. ಇದೆಲ್ಲವೂ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಎಂದರು.
ರಾಜ್ಯದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರವು ಸಿಎಂ ಎಂದರೆ ಕಾಮನ್‍ಮ್ಯಾನ್ ಎಂಬ ಪರಿಕಲ್ಪನೆಯನ್ನು ಜಾರಿಗೊಳಿಸಿದ್ದು, ಆಡಳಿತ ಯಂತ್ರಕ್ಕೆ ಚುರುಕು ನೀಡಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಗಮನ ಕೊಡುತ್ತಿದೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಯೋಜನೆಯನ್ನು ಜಾರಿಗೊಳಿಸಿದ್ದು, ಕಂದಾಯ ಇಲಾಖೆಯಲ್ಲಿ ಬಹಳಷ್ಟು ಪರಿವರ್ತನೆಗಳು ಆಗುತ್ತಿವೆ. 9.5 ಕೋಟಿ ಕೋವಿಡ್ ಲಸಿಕೆಗಳನ್ನು ಈಗಾಗಲೇ ಕೊಡಲಾಗಿದೆ. ಅದ್ಭುತವಾದ ಕಾರ್ಯಗಳನ್ನು ನಮ್ಮ ರಾಜ್ಯ ಸರಕಾರ ಮಾಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್, ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.




ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಚಾರಗೋಷ್ಠಿಗೆ ಶಾಸಕ ಕೆ.ರಘುಪತಿ ಭಟ್ ಚಾಲನೆ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಮತ್ತು ಜಿಲ್ಲಾ ಮಾಧ್ಯಮ ಪ್ರಕೋಷ್ಠ ಇದರ ಸಂಯುಕ್ತ ಆಶ್ರಯದಲ್ಲಿ ಫೆ.19ರಂದು ಉಡುಪಿಯ ಹೋಟೆಲ್ ಕಿದಿಯೂರ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆದ ‘ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಚಾರಗೋಷ್ಠಿಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಆರ್ಥಿಕ ತಜ್ಞ ಹಾಗೂ ಬಿಜೆಪಿ ರಾಜ್ಯ ಆರ್ಥಿಕ ಪ್ರಕೋಷ್ಠದ ಸಂಚಾಲಕ ಡಾ! ಸಮೀರ್ ಕಗಲ್ಕರ್ ವಿಚಾರಗೋಷ್ಠಿಯನ್ನು ನಡೆಸಿಕೊಟ್ಟರು.

ಡಾ! ಸಮೀರ್ ಕಗಲ್ಕರ್ ರವರನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಶಾಲು ಹೊದೆಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠ ಸಮಿತಿ ಸದಸ್ಯ ಚಿದಾನಂದ ಉಚ್ಚಿಲ್, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಸಮಾಜದ ವಿವಿಧ ರಂಗಗಳ ಪ್ರಮುಖರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ ವಂದಿಸಿದರು.

ಪಕ್ಷ ಸಂಘಟನೆಯಲ್ಲಿ ವಿಸ್ತಾರಕರ ಕಾರ್ಯ ಪದ್ಧತಿ ಅತೀ ಶ್ರೇಷ್ಠ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಪಕ್ಷದ ಸೂಚನೆಯಂತೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ವಿಸ್ತಾರಕರ ಕಾರ್ಯ ಪದ್ಧತಿ ಪಕ್ಷ ಸಂಘಟನೆಯಲ್ಲಿ ಅತೀ ಶ್ರೇಷ್ಠ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಫೆ.18ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ, ಉಡುಪಿ ಗ್ರಾಮಾಂತರ ಮತ್ತು ಕಾಪು ಮಂಡಲಗಳ ವ್ಯಾಪ್ತಿಯ ವಿಸ್ತಾರಕರ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ, ಕಾರ್ಯಾಗಾರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಫೆ.21ರಿಂದ ಫೆ.28ರ ನಿಗದಿತ ಅವಧಿಯಲ್ಲಿ ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಶಹ ಪ್ರತೀ ಶಕ್ತಿಕೇಂದ್ರಕ್ಕೆ 3 ದಿನಗಳ ನಿವಾಸಿ ಪ್ರವಾಸದ ಮೂಲಕ ಪಕ್ಷದ ಮಂಡಲ ಮತ್ತು ಜಿಲ್ಲಾ ಮಟ್ಟದ ಪದಾಧಿಕಾರಿಗಳು ವಿಸ್ತಾರಕರಾಗಿ ಸೇವೆ ಸಲ್ಲಿಸಲಿದ್ದಾರೆ.

ಬೂತ್ ಸಮಿತಿಯನ್ನು ಸಕ್ರಿಯಗೊಳಿಸುವ ಜೊತೆಗೆ ಸರಕಾರದ ವಿವಿಧ ಜನಪರ ಯೋಜನೆಗಳ ಫಲಾನುಭವಿಗಳನ್ನು ಗುರುತಿಸುವುದು, ಪಕ್ಷದ ನಿಗದಿತ ಚಟುವಟಿಕೆಗಳ ಪರಿಣಾಮಕಾರಿ ಅನುಷ್ಠಾನ ಇತ್ಯಾದಿ ಕಾರ್ಯಸೂಚಿಗಳೊಂದಿಗೆ ವಿಸ್ತಾರಕರು ಜವಾಬ್ದಾರಿ ನಿರ್ವಹಿಸಲಿದ್ದಾರೆ. ವಿಸ್ತಾರಕ ಅಭಿಯಾನವು ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಕಾರ್ಯಗಳೊಂದಿಗೆ ಮುಂದಿನ ಎಲ್ಲಾ ಚುನಾವಣೆಯ ಪ್ರಚಂಡ ಗೆಲುವಿಗೆ ಪೂರಕವಾಗಲಿದೆ ಎಂದು ಕುಯಿಲಾಡಿ ತಿಳಿಸಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ ವಿಸ್ತಾರಕ ಯೋಜನೆಯಿಂದ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವಾಗಲಿದೆ. ಪ್ರಶಿಕ್ಷಣದ ಮೂಲಕ ಪಕ್ಷದ ಸ್ಥೂಲ ಪರಿಚಯ ಪಡೆದಿರುವ ವಿವಿಧ ಸ್ತರದ ಪದಾಧಿಕಾರಿಗಳು ವಿಸ್ತಾರಕರಾಗಿ ಬೂತ್ ಸಮಿತಿ, ಪಂಚರತ್ನ, ಪೇಜ್ ಪ್ರಮುಖ್, ಪೇಜ್ ಸಮಿತಿ ಮುಂತಾದ ವ್ಯವಸ್ಥೆಗಳನ್ನು ಗಮನಿಸಿ, ಸಕ್ರಿಯಗೊಳಿಸಿ, ಕೇಂದ್ರ ಮತ್ತು ರಾಜ್ಯ ಸರಕಾರದ ವಿನೂತನ ಯೋಜನೆಗಳನ್ನು ಪ್ರಚಲಿತಗೊಳಿಸುವ ಮೂಲಕ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಸಶಕ್ತ ಬೂತ್ ನಿಂದ ಸದೃಢ ಪಕ್ಷ ಸಂಘಟನೆ ಎಂಬ ಪರಿಕಲ್ಪನೆಯೊಂದಿಗೆ ನಡೆಯುವ ಈ ಅಭಿಯಾನದಲ್ಲಿ ವಿಸ್ತಾರಕರ ಪಾತ್ರ ಅತ್ಯಂತ ಮಹತ್ವಪೂರ್ಣವಾಗಿದೆ ಎಂದರು.

ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ವಿಸ್ತಾರಕರ ಜವಾಬ್ದಾರಿ, ಕರ್ತವ್ಯ ನಿರ್ವಹಣೆ, ಮಾಹಿತಿ ಸಂಗ್ರಹ ಮತ್ತು ವರದಿ ಸಲ್ಲಿಕೆಯ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಎಮ್. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಮಂಡಲವಾರು ವಿಸ್ತಾರಕರು, ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ಮನೋಹರ್ ಎಸ್. ಕಲ್ಮಾಡಿ ವಂದಿಸಿದರು.

ಫೆ.19: ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ ಕುರಿತು ವಿಚಾರ ಗೋಷ್ಠಿ


ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಆರ್ಥಿಕ ಪ್ರಕೋಷ್ಠ ಉಡುಪಿ ಜಿಲ್ಲೆ ಮತ್ತು ಮಾಧ್ಯಮ ಪ್ರಕೋಷ್ಠ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ‘ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಷಯದ ಕುರಿತು ವಿಚಾರ ಗೋಷ್ಠಿಯು ಫೆ.19 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರ್ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.

ವಿಚಾರ ಗೋಷ್ಠಿಯ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಹಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದಾರೆ.

ಆರ್ಥಿಕ ತಜ್ಞ ಹಾಗೂ ಬಿಜೆಪಿ ರಾಜ್ಯ ಆರ್ಥಿಕ ಪ್ರಕೋಷ್ಠದ ಸಂಚಾಲಕ ಡಾ! ಸಮೀರ್ ಕಗಲ್ಕರ್ ವಿಚಾರ ಗೋಷ್ಠಿಯನ್ನು ನಡೆಸಿಕೊಡಲಿದ್ದಾರೆ.

ಸಮಾಜದ ಆರ್ಥಿಕ, ವಾಣಿಜ್ಯ, ವ್ಯವಹಾರ ಹಾಗೂ ಇನ್ನಿತರ ರಂಗಗಳ ಪ್ರಮುಖರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಕ್ಲಪ್ತ ಸಮಯದಲ್ಲಿ ಭಾಗವಹಿಸಿ ವಿಚಾರ ಗೋಷ್ಠಿಯನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ. ಹಾಗೂ ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಪತ್ರಿಕಾ ಪ್ರಕಟನೆಯಲ್ಲಿ ಕೋರಿದ್ದಾರೆ.

Design a site like this with WordPress.com
Get started