ಕರ್ನಾಟಕದಲ್ಲಿ ಕರ್ಪ್ಯೂ ಅವಧಿಯಲ್ಲಿ ಬದಲಾವಣೆ

ಸಾಂಧರ್ಭಿಕ ಚಿತ್ರ@janathalokavani

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲಾಗಿದೆ. ಇಂದಿನಿಂದ (ಜನವರಿ 7 ) ರಿಂದ ಸೋಮವಾರದ ವರೆಗೆ ಕರುನಾಡು ಸಂಪೂರ್ಣವಾಗಿ ಸ್ತಬ್ದವಾಗಲಿದೆ. ಆದ್ರೀಗ ರಾಜ್ಯದಲ್ಲಿ ವೀಕೆಂಡ್‌ ಕರ್ಪ್ಯೂ ಅವಧಿಯನ್ನು (Weekend Curfew Timings Change) ರಾತ್ರಿ 8 ರ ಬದಲು 10 ಗಂಟೆಯಿಂದ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌ ತಿಳಿಸಿದ್ದಾರೆ.

ಕೊರೊನಾ ಹಾಗೂ ಓಮಿಕ್ರಾನ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್‌ ಅಧಿಕಾರಿಗಳು ಹಾಗೂ ಕೋವಿಡ್‌ ತಜ್ಞರ ಜೊತೆಗೆ ಸಭೆ ನಡೆಸಿದ್ದಾರೆ. ಸಭೆಯ ನಂತರದಲ್ಲಿ ಮಾತನಾಡಿದ ಅವರು, ವೀಕೆಂಡ್‌ ಕರ್ಪ್ಯೂ ಅವಧಿಯನ್ನು ಬದಲಾವಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಇನ್ನು ಜಿಲ್ಲಾ ಕೇಂದ್ರಗಳಲ್ಲಿ ಪರಿಸ್ಥಿತಿಯನ್ನು ನೋಡಿಕೊಂಡು ವೀಕೆಂಡ್ ಕರ್ಪ್ಯೂ ಅವಧಿಯನ್ನು ಆಯಾಯ ಜಿಲ್ಲಾಧಿಕಾರಿಗಳು ನಿರ್ಧಾರ ಮಾಡಬಹುದು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕ್ಷಣಕ್ಕೊಂದು ಆದೇಶ ಹೊರಬರುತ್ತಿದೆ. ಒಂದೆಡೆಯಲ್ಲಿ ಜನರು ವೀಕೆಂಡ್‌ ಕರ್ಪ್ಯೂ, ನೈಟ್‌ ಕರ್ಪ್ಯೂ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವಲ್ಲೇ ಸಚಿವರು, ಅಧಿಕಾರಿಗಳು ಕ್ಷಣಕ್ಕೊಂದು ಹೇಳಿಕೆ ನೀಡುವ ಮೂಲಕ ಜನರನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದಾರೆ.

ರಾಜ್ಯದಲ್ಲಿ ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಏನಿರುತ್ತೆ, ಏನಿರಲ್ಲ

ರಾಜ್ಯದಲ್ಲಿ ಓಮಿಕ್ರಾನ್​ ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಕೋವಿಡ್​ ಸೋಂಕು ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರೋದರಿಂದ ರಾಜ್ಯ ಸರ್ಕಾರ ನೈಟ್​ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಆದೇಶಗಳನ್ನು ಹೊರಡಿಸಿದೆ. ಶುಕ್ರವಾರ ರಾತ್ರಿ 10 ಗಂಟೆಗೆ ಆರಂಭವಾಗಲಿರುವ ವೀಕೆಂಡ್​ ಕರ್ಫ್ಯೂ ಸೋಮವಾರ ಬೆಳಗ್ಗೆ 5 ಗಂಟೆವರೆಗೂ ಇರಲಿದೆ. ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಹಾಗಾದರೆ ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಯಾವೆಲ್ಲ ಸೇವೆಗಳಿಗೆ ನಿರ್ಬಂಧವಿದೆ. ಹಾಗೂ ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶವಿದೆ ಎಂಬುದಕ್ಕೆ ಸಂಕ್ಷಿಪ್ತ ವಿವರ ಇಲ್ಲಿದೆ ನೋಡಿ :

  • ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆಗಳು, ತುರ್ತು ಸೇವೆಗಳು , ಕೊರೊನಾ ನಿರ್ವಹಣೆಗೆ ಸಂಬಂಧಿಸಿದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು ಕಾರ್ಯನಿರ್ವಹಿಸಲಿವೆ.
  • ಐಟಿ ಹಾಗೂ ಕೈಗಾರಿಕಾ ವಲಯಗಳಿಗೆ ಕರ್ಫ್ಯೂ ಅವಧಿಯಲ್ಲಿ ನಿರ್ಬಂಧ ಇರುವುದಿಲ್ಲ. ಕಂಪನಿಯ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಕರ್ತವ್ಯಕ್ಕೆ ಹಾಜರಾಗಬಹುದಾಗಿದೆ.
  • ರೋಗಿಗಳು ಹಾಗೂ ಅವರ ಸಂಬಂಧಿಗಳು, ಲಸಿಕೆ ತೆಗೆದುಕೊಳ್ಳುವವರು ತುರ್ತು ಸೇವೆಗಳ ಅಗತ್ಯ ಇರುವವರು ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಓಡಾಟ ನಡೆಸಬಹುದಾಗಿದೆ.
  • ಹಣ್ಣು ಹಾಗೂ ತರಕಾರಿ ಅಂಗಡಿ, ಡೈರಿ ಉತ್ಪನ್ನಗಳು, ದಿನಸಿ ಅಂಗಡಿಗಳು,ಮೀನು ಹಾಗೂ ಮಾಂಸದ ಅಂಗಡಿ, ಪ್ರಾಣಿಗಳಿಗೆ ಸಂಬಂಧಿಸಿದ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
  • ಬೀದಿ ಬದಿ ವ್ಯಾಪಾರಿಗಳೂ ಎಂದಿನಂತೆ ವ್ಯಾಪಾರ ವ್ಯವಹಾರ ನಡೆಸಬಹುದು. ನ್ಯಾಯಬೆಲೆ ಅಂಗಡಿಗಳೂ ಈ ಅವಧಿಯಲ್ಲಿ ತೆರೆಯಲಿವೆ.
  • ಹೋಂ ಡೆಲಿವರಿ ಪಡೆಯುವವರಿಗೆ ಮುಕ್ತ ಅವಕಾಶ ಇರಲಿದೆ. ರೆಸ್ಟಾರೆಂಟ್ ಹಾಗೂ ಹೋಟೆಲ್ಗಳಲ್ಲಿ ಪಾರ್ಸಲ್ ಮಾತ್ರ ಪಡೆಯಬಹುದು.
  • ವಿರಳ ಸಂಖ್ಯೆಯಲ್ಲಿ ಬಸ್ ಸೇವೆ, ರೈಲು ಸೇವೆ ಹಾಗೂ ವಿಮಾನ ಸೇವೆ ಕೂಡ ಇರಲಿದೆ. ಖಾಸಗಿ ವಾಹನಗಳು ಹಾಗೂ ಟ್ಯಾಕ್ಸಿಗಳ ಓಡಾಟಕ್ಕೂ ಅವಕಾಶ ನೀಡಲಾಗಿದೆ.
  • ಪ್ರಯಾಣಿಕರು ತಮ್ಮ ಟಿಕೆಟ್ನ್ನು ತೋರಿಸುವ ಮೂಲಕ ವಿಮಾನ ನಿಲ್ದಾಣ, ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಿಗೆ ಸಂಚರಿಸಬಹುದಾಗಿದೆ.
  • ಮೆಟ್ರೋ ಪ್ರಯಾಣದ ಸಮಯದಲ್ಲಿ ಪರಿಷ್ಕರಣೆ ಮಾಡಲಾಗುವುದು.
  • ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಮದುವೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಆಚರಿಸಲು ಅನುಮತಿ ನೀಡಲಾಗಿದೆ.
  • ಸಾರ್ವಜನಿಕ ಉದ್ಯಾನವಗಳು ಬಂದ್ ಇರಲಿವೆ.

ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಸರಕಾರವನ್ನು ವಜಾಗೊಳಿಸಿ: ಬಿಜೆಪಿ ಜಿಲ್ಲಾ ರೈತ ಮೋರ್ಚಾ ಆಗ್ರಹ

ಉಡುಪಿ: ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆ ಹಾಗೂ ರ್ಯಾಲಿಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಸರಕಾರವು ಪ್ರಧಾನಿಯವರ ಭದ್ರತೆ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿ, ಕೀಳು ರಾಜಕೀಯ ಪ್ರದರ್ಶಿಸಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ವತಿಯಿಂದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ರಾಜ್ಯ ಸಾವಯವ ಕೃಷಿ ನಿರ್ದೇಶಕ ರಾಘವೇಂದ್ರ ಉಪ್ಪೂರು ಮಾತನಾಡಿ, ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಯಶಸ್ಸಿನ ನಾಗಾಲೋಟದಿಂದ ಕಂಗೆಟ್ಟಿರುವ ಕಾಂಗ್ರೆಸ್ ಹಾಗೂ ಪ್ರಧಾನಿಯವರನ್ನು ನೇರವಾಗಿ ಎದುರಿಸಲಾಗದೇ ಭದ್ರತಾ ವೈಫಲ್ಯವೆಸಗಿರುವ ಕಾಂಗ್ರೆಸ್ ಆಡಳಿತದ ಪಂಜಾಬ್ ಮುಖ್ಯಮಂತ್ರಿಯ ಕುಕೃತ್ಯ ಖಂಡನೀಯ. ದೇಶದ ಪ್ರಧಾನಿಗೆ ಭದ್ರತೆ ನೀಡದೆ ರೈತ ಪ್ರತಿಭಟನೆಯ ನೆಪದಲ್ಲಿ ಸಂಚಾರಕ್ಕೆ ತಡೆಯೊಡ್ಡಿ ಪ್ರಧಾನಿ ಮೋದಿಯವರು 20 ನಿಮಿಷ ರಸ್ತೆ ನಡುವೆ ಕಾರಿನಲ್ಲೇ ಕಾಯುವಂತೆ ಮಾಡಿರುವ ವಿಲಕ್ಷಣ ಘಟನೆ ದೇಶದ ಇತಿಹಾಸದಲ್ಲೇ ಒಂದು ಕಪ್ಪು ಚುಕ್ಕೆಯಾಗಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಅವಮಾನಕಾರಿಯಾಗಿ ನಡೆಸಿಕೊಂಡು, ಭದ್ರತಾ ವೈಫಲ್ಯದೊಂದಿಗೆ ಸಂವಿಧಾನ ವಿರೋಧಿ ನಡೆ ಪ್ರದರ್ಶಿಸಿರುವ ಪಂಜಾಬ್ ಸರಕಾರವನ್ನು ಕೂಡಲೇ ವಜಾಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಹೇರಬೇಕು ಎಂದು ಕೇಂದ್ರ ಸರಕಾರವನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಧೀರಜ್ ಕೆ.ಎಸ್., ಗೋಪಾಲ್ ಕಾಂಚನ್, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ, ಐ.ಬಿ. ಅಶೋಕ್ ಶೆಟ್ಟಿ, ಸುರೇಂದ್ರ ಬೋಂಟ್ರ ಮುನಿಯಾಲು, ರೈತ ಮೋರ್ಚಾ ಮಂಡಲ ಅಧ್ಯಕ್ಷರಾದ ಸುಧಾಕರ ಕುಲಾಲ್ ಬೈಂದೂರು, ರಾಘವೇಂದ್ರ ನಾಯಕ್ ಉಡುಪಿ ನಗರ, ಪ್ರವೀಣ್ ಕುಮಾರ್ ಉಪ್ಪೂರು ಉಡುಪಿ ಗ್ರಾಮಾಂತರ, ಗುರುನಂದನ್ ನಾಯಕ್ ಕಾಪು, ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳು, ರೈತ ಮೋರ್ಚಾ ಮಂಡಲಗಳ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಎಫ್ ಪಿ ಒ ಸಂಚಾಲಕ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ವಿಶೇಷ ಪೂಜೆ


ಜ.5ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಬೇಟಿ ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದೇ ಕೀಳು ರಾಜಕೀಯ ಪ್ರದರ್ಶಿಸಿರುವ ಪಂಜಾಬಿನ ಕಾಂಗ್ರೆಸ್ ಸರಕಾರದ ನಡೆಯನ್ನು ಉಡುಪಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ ಹಾಗೂ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

ಈ ವಿಲಕ್ಷಣ ಸನ್ನಿವೇಶದಲ್ಲಿ ಪ್ರಧಾನಿ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಉಡುಪಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮೃತ್ಯುಂಜಯ ಜಪ ಮತ್ತು ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾಮ್, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರಾದ ರಜನಿ ಹೆಬ್ಬರ್, ಸವಿತಾ ಹರೀಶ್ ರಾಮ್, ರಶ್ಮಿ ಭಟ್, ಜಿಲ್ಲಾ ಮತ್ತು ಉಡುಪಿ ನಗರ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಅಶ್ವಿನಿ ಶೆಟ್ಟಿ, ಪೂರ್ಣಿಮಾ ರತ್ನಾಕರ್, ಸುಧಾ ಪೈ, ಸರೋಜಾ ಶೆಣೈ, ಕಾವೇರಿ, ಉಜ್ವಲ, ಲೈಲಾ, ಪ್ರತಿಮಾ ನಾಯಕ್, ಪ್ರೀತಿ ಮುಂತಾದವರು ಉಪಸ್ಥಿತರಿದ್ದರು.

ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಕಾಂಗ್ರೆಸ್ ಸರಕಾರ; ಜನ ಸಾಮಾನ್ಯರ ಪಾಡೇನು?: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ: ಪಂಜಾಬಿನ ಫಿರೋಜ್ ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸುವ ಸಲುವಾಗಿ ಹಾಗೂ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಜ.5ರಂದು ಪಂಜಾಬಿಗೆ ತೆರಳಿದ ಸಂದರ್ಭದಲ್ಲಿ ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ಸರಕಾರ ಪ್ರಧಾನಿಯವರಿಗೆ ಅಗತ್ಯ ಭದ್ರತೆಯ ಸುವ್ಯವಸ್ಥೆಯನ್ನು ನೀಡದೇ ಸಂವಿಧಾನ ವಿರೋಧಿಯಾಗಿ ವರ್ತಿಸಿ ಕೀಳು ಮಟ್ಟದ ರಾಜಕೀಯ ನಡೆ ಪ್ರದರ್ಶಿಸಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.

ಅನಿರೀಕ್ಷಿತ ಮಳೆಯ ಕಾರಣದಿಂದಾಗಿ ಅನಿವಾರ್ಯವಾಗಿ ರಸ್ತೆ ಮೂಲಕ ಹುಸೇನಿವಾಲಾದ ರಾಷ್ಟ್ರೀಯ ಸ್ಮಾರಕಕ್ಕೆ ತೆರಳುತ್ತಿದ್ದ ಪ್ರಧಾನಿ ಮೋದಿ ಯವರ ಪ್ರಯಾಣಕ್ಕೆ ರೈತ ಪ್ರತಿಭಟನೆಯ ಸೆಪದಲ್ಲಿ ಕೃತಕ ಟ್ರಾಫಿಕ್ ಜಾಮ್ ಸೃಷ್ಠಿಸಿದ ಪರಿಣಾಮವಾಗಿ ಪ್ರಧಾನಿಯವರ ಕಾರು 20 ನಿಮಿಷ ಫ್ಲೈಓವರ್ ಮೇಲೆಯೇ ನಿಲ್ಲುವಂತಾಗಿದೆ. ಆದರೂ ಪ್ರತಿಭಟನಾಕಾರರು ದಾರಿ ಬಿಡದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತನ್ನೆಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಬಟಿಂಡಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಿರುವುದು ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಕರಾಳ ಅಧ್ಯಾಯವೆನಿಸಿದೆ. ದೇಶದ ಪ್ರಧಾನಿಗೇ ಭದ್ರತಾ ವೈಫಲ್ಯವಾದರೆ ಇನ್ನು ಜನ ಸಾಮಾನ್ಯರ ಪಾಡೇನು? ಇದಕ್ಕೆ ಮುಖ್ಯ ಹೊಣೆಗಾರರಾಗಿರುವ ಪಂಜಾಬ್ ಮುಖ್ಯಮಂತ್ರಿ, ಭದ್ರತಾ ಮುಖ್ಯಸ್ಥರು ಮತ್ತು ಕೀಳು ರಾಜಕೀಯವನ್ನು ಪ್ರದರ್ಶಿಸಿದ ಕಾಂಗ್ರೆಸ್ ಪಕ್ಷ ದೇಶದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ.

ತನ್ನ ದೇಶ ವಿರೋಧಿ ಕೃತ್ಯಗಳಿಂದ ದೇಶದೆಲ್ಲೆಡೆ ಜನತೆಯಿಂದ ತಿರಸ್ಕರಿಸಲ್ಪಟ್ಟ ಕಾಂಗ್ರೆಸ್ ನಿಂದ ಇಂತಹ ನೀಚ ಕೃತ್ಯವನ್ನಲ್ಲದೆ ಬೇರೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ತನ್ನ ವಿರೋಧಿಗಳಿಗೆ ಮತ್ತು ದೇಶಕ್ಕೆ ಕಾಂಗ್ರೆಸ್ ಯಾವ ರೀತಿಯಲ್ಲಿ ಕಂಟಕವಾಗಿದೆ ಎಂಬುದನ್ನು ನೇತಾಜಿ ಸುಭಾಷ್ ಚಂದ್ರಬೋಸ್ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರೊಂದಿಗೆ ನಡೆದ ಘೋರ ಅನ್ಯಾಯದ ಮೂಲಕ ದೇಶದ ಜನತೆ ಅರಿತುಕೊಂಡಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿರದ ಕರ್ನಾಟಕದಲ್ಲಿ ಮುಖ್ಯ ಮಂತ್ರಿ ಕಾರ್ಯಕ್ರಮದಲ್ಲಿ ಗೂಂಡಾ ವರ್ತನೆ; ಕಾಂಗ್ರೆಸ್ ಅಧಿಕಾರದಲ್ಲಿರುವ ಪಂಜಾಬ್ ನಲ್ಲಿ ಪ್ರಧಾನ ಮಂತ್ರಿಗೆ ಭದ್ರತಾ ವೈಫಲ್ಯದ ದುರ್ವರ್ತನೆ ಇದು ಕಾಂಗ್ರೆಸ್ ಜಾಯಮಾನ.

‘ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ದೇಶಕ್ಕೆ ಎಷ್ಟು ಅಪಾಯಕಾರಿಯೋ, ಅಧಿಕಾರ ಕಳೆದುಕೊಂಡಾಗ ಮತ್ತಷ್ಟು ಅಪಾಯಕಾರಿ’ ಎಂಬ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಮಾತನ್ನು ಇಂತಹ ಕುಕೃತ್ಯಗಳ ಮೂಲಕ ಕಾಂಗ್ರೆಸ್ ಸಾಬೀತುಪಡಿಸಿದೆ. ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಯಶಸ್ಸಿನ ನಾಗಾಲೋಟದಿಂದ ಕಂಗೆಟ್ಟಿರುವ ಕಾಂಗ್ರೆಸ್ಸಿನ ಷಡ್ಯಂತ್ರಗಳನ್ನು ಸೂಕ್ಮವಾಗಿ ಗಮನಿಸಿ ಅರ್ಥೈಸಿಕೊಂಡಿರುವ ದೇಶದ ಜನತೆ ದೇಶ ವಿರೋಧಿ ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹನಿ ಟ್ರ್ಯಾಪ್ ಮೂಲಕ ಮತಾಂತರ ಮಾಡುತ್ತಿದ್ದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ವಿಚಾರದಲ್ಲಿ ಕಾಂಗ್ರೆಸ್ ನ ನಿಗೂಡ ಮೌನವೇಕೆ? : ಕುಯಿಲಾಡಿ ಸುರೇಶ್ ನಾಯಕ್

ಮಂಗಳೂರಿನ ಐಸಿಎಸ್ ಸಂಘಟನೆ ಸಂಪರ್ಕದಲ್ಲಿ ಮಂಗಳೂರಿನ ಉಳ್ಳಾಲದಲ್ಲಿ ಬಂಧನಕ್ಕೊಳಗಾದ ದೀಪ್ತಿ ಅಲಿಯಾಸ್ ಮರಿಯಂ ಹನಿಟ್ರ್ಯಾಪ್ ಮೂಲಕ ಹಿಂದೂ ಯುವಕರನ್ನು ಸೆಳೆದು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳ ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿರುವುದು ಜಗಜ್ಜಾಹೀರಾಗಿದೆ. ಆದರೆ ಮತಾಂತರ ವಿರೋಧಿ ಕಾಯ್ದೆಗೆ ಅಡ್ಡಿಪಡಿಸಿರುವ ಕಾಂಗ್ರೆಸ್ ಈ ವಿಚಾರದಲ್ಲಿ ಮಾತ್ರ ನಿಗೂಡ ಮೌನ ವಹಿಸಿರುವುದು ಯಾಕೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಪ್ರಶ್ನಿಸಿದೆ.

ಮಡಿಕೇರಿ ಮೂಲದ ದೀಪ್ತಿ ಮೂಲತಃ ಹಿಂದೂ ಆಗಿದ್ದು ಮಂಗಳೂರಿನ ದೇರಳಕಟ್ಟೆಯಲ್ಲಿ ಬಿಡಿಎಸ್ ವ್ಯಾಸಂಗ ಸಂದರ್ಭದಲ್ಲಿ ಮಾಜಿ ಶಾಸಕ ಇದಿನಬ್ಬ ಅವರ ಮೊಮ್ಮಗ ಅನಾಸ್ ಅಬ್ದುಲ್ ರೆಹಮಾನ್ ಜೊತೆ ಪ್ರೀತಿಸಿ ಮದುವೆಯಾಗಿ ಇಸ್ಲಾಂಗೆ ಮತಾಂತರವಾಗಿದ್ದಳು ಹಾಗೂ ಈಕೆ ಕ್ರೋನಿಕಲ್ ಫೌಂಡೇಶನ್ ಎಂಬ ಇನ್ಸ್ಟಾಗ್ರಾಂ ಪೇಜ್ ನಲ್ಲಿ ಯುವಕರನ್ನು ಮತಾಂತರಕ್ಕೆ ಪ್ರೇರೇಪಿಸುತ್ತಿದ್ದು, ಬಳಿಕ ಮತಾಂತರಗೊಂಡ ಯುವಕರನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿಸುತ್ತಿದ್ದಳು ಎಂಬ ವಿಚಾರ ಎನ್ಐಎ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ ಎನ್ನಲಾಗಿದೆ.

ಮತಾಂತರವನ್ನು ಬೆಂಬಲಿಸುತ್ತಾ ಬಂದಿರುವ ಕಾಂಗ್ರೆಸ್, ಸದಾ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಸದನದಲ್ಲಿ ಮಾತ್ರ ಮತಾಂತರ ವಿರೋಧಿ ಕಾಯ್ದೆಯನ್ನು ವಿರೋಧಿಸಿ ನಕಲಿ ಜಾತ್ಯಾತೀತ ನಡೆ ಪ್ರದರ್ಶಿಸಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಹಿಂದೂ ದೇವಸ್ಥಾನಗಳ ಸ್ವಾಯತ್ತೆ ಮುಂತಾದ ಜನಪರ ಕಾಯ್ದೆ ಕಾನೂನುಗಳಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಪಡಿಸಿ ವಿರೋಧಿಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮಗದೊಮ್ಮೆ ಸಾಬೀತುಪಡಿಸಿದೆ. ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯವಾಗಿದ್ದು ಜನತೆ ಜಾಗರೂಕರಾಗಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಂಬರಲಿರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಕಾರ್ಯಪ್ರವೃತ್ತವಾಗಲಿದೆ. ಆಯಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಕ್ಷದ ಕಾರ್ಯಕರ್ತರಿಗೆ ಅವಕಾಶಗಳು ಸಿಗಲಿವೆ. ಹಿಂದುಳಿದ ವರ್ಗಕ್ಕೆ ಸ್ವಾಭಾವಿಕವಾಗಿ ಹೆಚ್ಚಿನ ಅವಕಾಶಗಳಿವೆ.

ಪಕ್ಷದ ಪ್ರಸಕ್ತ ಜಿಲ್ಲಾ ತಂಡ ಜವಾಬ್ದಾರಿಯನ್ನು ವಹಿಸಿಕೊಂಡು ಜ.27ರಂದು ಯಶಸ್ವೀ ಎರಡು ವರ್ಷಗಳನ್ನು ಪೂರೈಸಲಿದೆ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಿಗೆ ಇನ್ನಷ್ಟು ವೇಗವನ್ನು ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಜನತೆಗೆ ತಲುಪಿಸುವ ಜೊತೆಗೆ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಪೂರ್ಣ ಪ್ರಮಾಣದಲ್ಲಿ ಗೆಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಕುಯಿಲಾಡಿ ಹೇಳಿದರು.

ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ಮಾತನಾಡಿ, ಜಗ ಮೆಚ್ಚಿದ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯತತ್ಪರತೆಯಿಂದ ಬಿಜೆಪಿ ಕಾರ್ಯಕರ್ತರೆನಿಸಿ ಕೊಳ್ಳಲು ಹೆಮ್ಮೆ ಎನಿಸುತ್ತದೆ. ಇಂದು ಗ್ರಾಮದಿಂದ ರಾಜ್ಯ, ಕೇಂದ್ರದ ವರೆಗೆ ಎಲ್ಲಾ ಸ್ತರಗಳಲ್ಲಿ ಬಿಜೆಪಿ ಅಡಳಿತವಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಸನ್ನಿವೇಶದಲ್ಲಿ ಪಕ್ಷದ ಕಾರ್ಯಕರ್ತರ ಜವಾಬ್ದಾರಿಯು ಅತ್ಯಂತ ಮಹತ್ವಪೂರ್ಣವಾಗಿದೆ. ಚುನಾವಣೆಗಳಲ್ಲಿ ಸೋತು ಕಂಗೆಟ್ಟಿರುವ ಕಾಂಗ್ರೆಸ್ ನ ವ್ಯವಸ್ಥಿತ ಅಪಪ್ರಚಾರ, ಗೂಂಡಾ ಸಂಸ್ಕೃತಿ, ಜನ ವಿರೋಧಿ ಮತ್ತು ಹಿಂದೂ ವಿರೋಧಿ ಮಾನಸಿಕತೆಯ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಮುಂದಿನ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸಹಿತ ಎಲ್ಲಾ ಚುನಾವಣೆಗಳನ್ನು ಸಮರ್ಪಕವಾಗಿ ಎದುರಿಸಿ ಬಿಜೆಪಿಯ ವಿಜಯ ಪತಾಕೆಯನ್ನು ಬಾನೆತ್ತರಕ್ಕೇರಿಸಲು ಎಲ್ಲರೂ ಸಂಘಟಿತರಾಗಿ ಶ್ರಮಿಸೋಣ ಎಂದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ವಿಠ್ಠಲ ಪೂಜಾರಿ ಯವರು ಸಂಘಟನಾತ್ಮಕ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ, ಶ್ರವಣಬೆಳಗೊಳದಲ್ಲಿ ಜರಗಿದ 12ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ‘ಕರ್ನಾಟಕ ಯಕ್ಷರತ್ನ’ ಪ್ರಶಸ್ತಿಯೊಂದಿಗೆ ಪುರಸ್ಕರಿಸಲ್ಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ರವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಸನ್ಮಾನಿಸಲಾಯಿತು.

ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷರಾದ ಲೀಲಾ ಅರ್. ಅಮೀನ್, ದಿನೇಶ್ ಎರ್ಮಾಳು, ಮನೋಜ್ ಕರ್ಕೇರ, ಗಣೇಶ್ ಕುಮಾರ್ ಉದ್ಯಾವರ, ಕಾರ್ಯದರ್ಶಿಗಳಾದ ಜ್ಯೋತಿ ಹರೀಶ್, ಶೇಖರ್ ಪೂಜಾರಿ ಕುಂದಾಪುರ, ಅಮೃತ್ ಪೂಜಾರಿ ಎಡ್ತಾಡಿ, ಕೋಶಾಧಿಕಾರಿ ಸತೀಶ್ ಪೂಜಾರಿ ಕುಕ್ಕಿಕಟ್ಟೆ, ಕಾರ್ಯಕಾರಿಣಿ ಸದಸ್ಯರು ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಾಕೇಶ್ ಜೋಗಿ ವಂದಿಸಿದರು.

ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ: ಜ.3ರಂದು ರಾಮನಗರದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ಮತ್ತು ನಾಡ ಪ್ರಭು ಕೆಂಪೇಗೌಡ ರವರ ಪ್ರತಿಮೆ ಅನಾವರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಎದುರಲ್ಲೇ ರಾಜ್ಯದ ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ! ಸಿ.ಎನ್. ಅಶ್ವತ್ಥನಾರಾಯಣ ರವರ ಮೇಲೆ ಹಲ್ಲೆಗೆ ಮುಂದಾಗಿ ಗೂಂಡಾಗಿರಿ ಪ್ರದರ್ಶಿಸಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಎಸ್.ರವಿ ಯವರ ಗೂಂಡಾ ಸಂಸ್ಕ್ರತಿಯನ್ನು ವಿರೋಧಿಸಿ, ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪ್ರತಿಭಟನಾ ಸಭೆ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಯವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಯನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಎಸ್. ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಹಿಂದುಸ್ಥಾನ್ ಶಿಪ್ ಯಾರ್ಡ್ ಸ್ವತಂತ್ರ ನಿರ್ದೇಶಕ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿಸೋಜ, ಆಸಿಫ್ ಕಟಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಾಂಬೆಟ್ಟು, ಉಡುಪಿ ನಗರ ಉಪಾಧ್ಯಕ್ಷ ಕೃಷ್ಣಪ್ಪ ಜತ್ತನ್, ಕಾರ್ಯದರ್ಶಿ ದಯಾಶಿನಿ, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಮಂಜುನಾಥ್ ಮಣಿಪಾಲ್, ರಜನಿ ಹೆಬ್ಬಾರ್, ವಿಜಯಲಕ್ಷ್ಮಿ, ಚಂದ್ರಶೇಖರ್, ಅಶೋಕ್ ನಾಯ್ಕ್, ಸುಂದರ ಕಲ್ಮಾಡಿ, ದೇವದಾಸ್ ಶೆಟ್ಟಿಗಾರ್, ಪ್ರಮುಖರಾದ ಉಪೇಂದ್ರ ನಾಯಕ್, ವಿಜೇತ್ ಕುಮಾರ್, ಚಂದ್ರಶೇಖರ ಪ್ರಭು, ದಿಲೇಶ್ ಶೆಟ್ಟಿ, ಜುನೈದ್, ಅಪ್ಸರ್ ಉಚ್ಚಿಲ, ವಿಜಯ ಪೂಜಾರಿ, ನಾಗರಾಜ್ ಕರ್ಕೇರ, ಸಂತೋಷ್ ಆಚಾರ್ಯ, ಆನಂದ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್ ಗೂಂಡಾಗಿರಿಯಿಂದ ರಾಜ್ಯದ ಜನತೆಗೆ ಮುಕ್ತಿ ನೀಡಬೇಕಾಗಿದೆ: ಕುಯಿಲಾಡಿ ಸುರೇಶ್ ನಾಯಕ್


ರಾಮನಗರ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಎದುರಲ್ಲೇ ರಾಜ್ಯದ ಸಚಿವ ಡಾ! ಸಿ.ಎನ್. ಅಶ್ವತ್ಥನಾರಾಯಣ ರವರ ಮೇಲೆ ಹಲ್ಲೆಗೆ ಮುಂದಾಗಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಅವರಿಗೆ ಬೆಂಬಲ ನೀಡಿರುವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಎಸ್.ರವಿ ಯವರ ಗೂಂಡಾಗಿರಿಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.

ರಾಮನಗರದಲ್ಲಿ ನಡೆದಿರುವುದು ಕಾಂಗ್ರೆಸ್ ಗೂಂಡಾಗಿರಿಯ ಒಂದು ಮಾದರಿಯಷ್ಟೇ. ಗ್ರಾಮ ಮಟ್ಟದಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗೂ ಗೂಂಡಾಗಿರಿ, ಪಾಳೆಗಾರಿಕೆ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಇವೇ ಮುಂತಾದವುಗಳು ಕಾಂಗ್ರೆಸ್ ರಾಜಕಾರಣದ ಮೂಲ ಸಂಸ್ಕೃತಿಯಾಗಿದೆ. ಇಂತಹ ಕಾಂಗ್ರೆಸ್ ನ ಕೀಳು ಮಟ್ಟದ ಗೂಂಡಾಗಿರಿಯಿಂದ ರಾಜ್ಯದ ಜನತೆಯನ್ನು ಪಾರು ಮಾಡಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಕಾಂಗ್ರೆಸಿಗರು ಇಂತಹ ಹೇಯ ಕೃತ್ಯಗಳಿಂದ ಕಾಂಗ್ರೆಸ್ ಅಂದರೆ ಗೂಂಡಾಗಿರಿ ಎಂಬುದನ್ನು ಸಾಬೀತುಪಡಿಸಿ, ಸ್ವತಃ ಕಾಂಗ್ರೆಸ್ಸನ್ನು ಬಸ್ಮ ಮಾಡಲು ಹೊರಟಂತಿದೆ.

ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿಯನ್ನು ಮೆಚ್ಚಿ ಜನತೆ ದೇಶಾದ್ಯಂತ ಜನಪರ ಆಡಳಿತಕ್ಕಾಗಿ ಬಿಜೆಪಿಗೆ ಅಧಿಕಾರವನ್ನು ನೀಡಿದೆ. ಇತ್ತೀಚೆಗೆ ನಡೆದ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿಯ ಗೆಲುವಿನ ನಾಗಾಲೋಟದಿಂದ ಕಂಗೆಟ್ಟಿರುವ ಕಾಂಗ್ರೆಸ್ ಇಂತಹ ಗೂಂಡಾಗಿರಿಯ ಕೀಳು ಸಂಸ್ಕೃತಿಯಿಂದ ಜನತೆಯಿಂದ ಇನ್ನಷ್ಟು ತಿರಸ್ಕರಿಸಲ್ಪಟ್ಟು ಮೂಲೆಗುಂಪಾಗಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸ್ತಿ ವಾಮನ್ ಶೆಣೈ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ

ಉಡುಪಿ: ಕೊಂಕಣಿ ಸಾಹಿತ್ಯ ಲೋಕದ ದಿಗ್ಗಜ, ಅಪ್ರತಿಮ ಸಂಘಟಕ, ವಿಶ್ವ ಕೊಂಕಣಿ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಸ್ತಿ ವಾಮನ್ ಶೆಣೈ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ ವ್ಯಕ್ತಪಡಿಸಿದೆ.

ಬಸ್ತಿ ವಾಮನ್ ಶೆಣೈಯವರ ನಿಧನ ಕೊಂಕಣಿ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಕ್ರೀಡಾ ಸಮ್ಮೇಳನ ಯಶಸ್ವಿಗೊಳಿಸಿ: ಶಾಸಕ ರಘುಪತಿ ಭಟ್

ಉಡುಪಿ: ಮನೋಲ್ಲಾಸ ಹಾಗೂ ಮನೋವಿಕಾಸಕ್ಕಾಗಿ ಕ್ರೀಡೆ ಎಂಬ ಧ್ಯೇಯ ವಾಕ್ಯದೊಂದಿಗೆ ಕ್ರೀಡಾ ಭಾರತಿ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜ.2ರಂದು ಅಜ್ಜರಕಾಡು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಥಮ ಬಾರಿಗೆ ನಡೆಯುವ ಜಿಲ್ಲಾ ಕ್ರೀಡಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಉಡುಪಿ ಶಾಸಕ, ಜಿಲ್ಲಾ ಕ್ರೀಡಾ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಕೆ.ರಘುಪತಿ ಭಟ್ ಕ್ರೀಡಾಭಿಮಾನಿಗಳಿಗೆ ಕರೆ ನೀಡಿದರು.

ಅವರು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜ.2ರಂದು ನಡೆಯುವ ಜಿಲ್ಲಾ ಕ್ರೀಡಾ ಸಮ್ಮೇಳನ 2021-22 ಇದರ ಪೂರ್ವ ಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ದೈಹಿಕ ಶ್ರಮ ರಹಿತ ಜೀವನವೇ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸಮಾಜದ ಎಲ್ಲಾ ವರ್ಗದ ಜನತೆಯನ್ನು ಕ್ರೀಡೆಯತ್ತ ಸೆಳೆದು ಅ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಕ್ರೀಡಾ ಭಾರತೀಯ ಸದುದ್ದೇಶವಾಗಿದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಕ್ರೀಡಾ ಸಂಸ್ಥೆಗಳ ಸಹಯೋಗದೊಂದಿಗೆ ಕ್ರೀಡಾ ಭಾರತಿ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಈ ಕ್ರೀಡಾ ಸಮ್ಮೇಳನವನ್ನು ಆಯೋಜಿಸಿದೆ. ಜಿಲ್ಲೆಯ ಕ್ರೀಡಾ ಪಟುಗಳು, ಕ್ರೀಡಾಭಿಮಾನಿಗಳು ಜ.2ರ ಒಂದು ದಿನವನ್ನು ಮನೋಲ್ಲಾಸ, ಮನೋವಿಕಾಸಕ್ಕಾಗಿ ಕ್ರೀಡೆಗೆ ಮೀಸಲಿಟ್ಟು, ಈ ಕ್ರೀಡಾ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾ ಕ್ರೀಡಾ ಸಮ್ಮೇಳನ ಸಮಿತಿಯ ಅಧ್ಯಕ್ಷ, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಗೆ ಸಂಘಟನಾತ್ಮಕ ರೀತಿಯ ಕಾರ್ಯಕ್ರಮಗಳ ಆಯೋಜನೆಯಲ್ಲಿ ಉತ್ತಮ ಹೆಸರಿದೆ. ಕ್ರೀಡಾ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಾ ಬಂದಿರುವ ರಾಷ್ಟ್ರೀಯ ಸಂಘಟನೆ ಕ್ರೀಡಾ ಭಾರತಿ ನೇತೃತ್ವದಲ್ಲಿ ಜಿಲ್ಲಾ ಕ್ರೀಡಾ ಸಮ್ಮೇಳನ ಪ್ರಥಮ ಬಾರಿಗೆ ಪೊಡವಿಗೊಡೆಯ ಶ್ರೀಕೃಷ್ಣನ ನೆಲೆವೀಡು ಉಡುಪಿಯಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ. ಸಂಕಲ್ಪ ಶುದ್ಧಿ ಇದ್ದಲ್ಲಿ ಕಾರ್ಯಸಿದ್ಧಿ ಆಗುತ್ತದೆ ಎಂಬಂತೆ, ಅತ್ಯಂತ ಯೋಜನಾಬದ್ಧವಾಗಿ ಎಲ್ಲಾ ಕ್ರೀಡಾ ಸಂಘಟನೆಗಳ ಸಂಪೂರ್ಣ ಸಹಕಾರದೊಂದಿಗೆ ನಡೆಯುವ ಈ ಪ್ರಥಮ ಕ್ರೀಡಾ ಸಮ್ಮೇಳನ ಒಂದು ಮಾದರಿ ಕ್ರೀಡಾ ಸಮ್ಮೇಳನವಾಗಿ ಮೂಡಿ ಬರಲಿ ಎಂದು ಹಾರೈಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ರೀಡಾ ಭಾರತೀ ಮಂಗಳೂರು ವಿಭಾಗ ಸಂಯೋಜಕ ಪ್ರಸನ್ನ ಕಾರ್ಕಳ, ಕ್ರೀಡಾ ಪ್ರತಿಭೆಗಳನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸುವ ಜೊತೆಗೆ ಸಮಾಜವನ್ನು ಬೆಸೆಯುವ ಸದುದ್ದೇಶದಿಂದ ಎಲ್ಲಾ ವಯೋಮಾನದವರೂ ಸಂತೋಷಕ್ಕಾಗಿ, ಸಂಭ್ರಮದಿಂದ ಆಟವಾಡುವ ಸಹಜ ಸ್ವಭಾವವನ್ನು ಬೆಳೆಸಿಕೊಳ್ಳಬೇಕೆಂಬ ಉದ್ದೇಶ ಕ್ರೀಡಾ ಭಾರತೀಯದ್ದಾಗಿದೆ. ರಾಷ್ಟ್ರಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಈ ರೀತಿಯ ಕ್ರೀಡಾ ಸಮ್ಮೇಳನಗಳು ನಡೆಯಲಿವೆ. ಜನ ಸಾಮಾನ್ಯರಲ್ಲೂ ಕ್ರೀಡಾಸಕ್ತಿಯನ್ನು ಬೆಳೆಸಿ ಸ್ವಸ್ಥ ಶರೀರ, ಸ್ವಸ್ಥ ಮನಸ್ಸುಳ್ಳ, ಸ್ವಸ್ಥ ಸಮಾಜ ನಿರ್ಮಾಣ ಈ ಕ್ರೀಡಾ ಸಮ್ಮೇಳನದ ಗುರಿ. ಜಿಲ್ಲೆಯಲ್ಲಿ ನಡೆಯುವ ಪ್ರಥಮ ಕ್ರೀಡಾ ಸಮ್ಮೇಳನದ ಯಶಸ್ಸಿಗೆ ಎಲ್ಲರ ತುಂಬು ಹೃದಯದ ಸಹಕಾರ ಅತೀ ಅಗತ್ಯ ಎಂದರು.

ಜಿಲ್ಲಾ ಕ್ರೀಡಾ ಸಮ್ಮೇಳನ ಸಮಿತಿಯ ಪ್ರಧಾನ ಕಾರ್ಯದರ್ಶಿ, ಯುವ ಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ ಕಾರ್ಯಕ್ರಮದ ವಿವರಗಳನ್ನು ನೀಡುತ್ತಾ, ಜ.2 ರವಿವಾರ ಬೆಳಿಗ್ಗೆ 9.30ಕ್ಕೆಉಡುಪಿ ಕಲ್ಪನಾ ಟಾಕೀಸ್ ಬಳಿಯಿಂದ ಕ್ರೀಡಾಳುಗಳ ಶೋಭಾಯಾತ್ರೆ, 10.30ಕ್ಕೆ ಕ್ರೀಡಾ ಸಮ್ಮೇಳನದ ಉದ್ಘಾಟನಾ ಸಮಾರಂಭ, 11.30ಕ್ಕೆ ವಿವಿಧ ಕ್ರೀಡಾ ಪ್ರದರ್ಶನ, ಮಧ್ಯಾಹ್ನ 3.00ಕ್ಕೆ ಕ್ರೀಡಾ ಗೋಷ್ಠಿ ಹಾಗೂ ಸಂಜೆ 5.00ಕ್ಕೆ ಸಮಾರೋಪ ಸಮಾರಂಭ ಹಾಗೂ ಪ್ರಶಾಂತ್ ಮತ್ತು ತಂಡ ಕಡಿಯಾಳಿ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಜಿಲ್ಲಾ ಕ್ರೀಡಾ ಸಮ್ಮೇಳನ ಸಮಿತಿಯ ಕಾರ್ಯಾಧ್ಯಕ್ಷ ಮಹೇಶ್ ಠಾಕೂರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಉಪ ನಿರ್ದೇಶಕ ಮಲ್ಲೆ ಸ್ವಾಮಿ, ವಿವಿಧ ವಲಯ ಶಿಕ್ಷಣಾಧಿಕಾರಿಗಳಾದ ನಾಗೇಂದ್ರ ಎ.ಕೆ. ಉಡುಪಿ, ಅರುಣ್ ಕುಮಾರ್ ಶೆಟ್ಟಿ ಕುಂದಾಪುರ, ಮುಂದಿನಮನಿ ಜಿ.ಎಮ್. ಬೈಂದೂರು, ಕ್ರೀಡಾ ಸಮ್ಮೇಳನ ಸಮಿತಿಯ ಸಂಚಾಲಕ, ಕ್ರೀಡಾ ಭಾರತಿ ಉಡುಪಿ ಜಿಲ್ಲಾಧ್ಯಕ್ಷ ಬಿ.ವಸಂತ ಶೆಟ್ಟಿ, ಸಮ್ಮೇಳನ ಸಮಿತಿ ಕಾರ್ಯದರ್ಶಿಗಳಾದ ಕ್ರೀಡಾ ಭಾರತಿ ಜಿಲ್ಲಾ ಉಪಾಧ್ಯಕ್ಷ ದಿನೇಶ್ ಕುಮಾರ್ ಎ., ಕ್ರೀಡಾ ಭಾರತಿ ಕಾಪು ತಾಲೂಕು ಅಧ್ಯಕ್ಷ ಅನಿಲ್ ಕುಮಾರ್, ಸಮ್ಮೇಳನ ಸಮಿತಿ ಕೋಶಾಧಿಕಾರಿ ಕ್ರೀಡಾ ಭಾರತಿ ಜಿಲ್ಲಾ ಕಾರ್ಯದರ್ಶಿ ಲಿಂಗಯ್ಯ ಬೈಂದೂರು, ಕ್ರೀಡಾ ಭಾರತಿಯ ವಿವಿಧ ತಾಲೂಕುಗಳ ಅಧ್ಯಕ್ಷರು, ಸಮ್ಮೇಳನ ಸಮಿತಿಯ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜಿಲ್ಲೆಯ ವಿವಿಧ ಕ್ರೀಡಾ ಸಂಘಟನೆಗಳ ಪದಾಧಿಕಾರಿಗಳು, ನಗರಸಭಾ ಸದಸ್ಯರು ಹಾಗೂ ಸಮಾಜದ ವಿವಿಧ ಸ್ತರದ ಪ್ರಮುಖರು ಉಪಸ್ಥಿತರಿದ್ದರು.

Design a site like this with WordPress.com
Get started