ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 29ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗೌರವ ಸನ್ಮಾನ, ಪ್ರತಿಭಾ ಪುರಸ್ಕಾರ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ 29ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿಯವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ಜರಗಿತು. ಸುಮಾರು ಐನೂರಕ್ಕೂ ಮಿಕ್ಕಿ ಭಕ್ತಾದಿಗಳು ಶ್ರೀ ಸತ್ಯನಾರಾಯಣ ಪೂಜೆಯನ್ನು ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕವನ್ನು ಗಳಿಸಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಸಂಘದ ಅಧ್ಯಕ್ಷರು ಹಾಗೂ 2020-21ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಇವರನ್ನು ಸಂಘದ ವತಿಯಿಂದ ಶಾಲು ಹೊದೆಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎ.ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ರಾಜೇಶ್, ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಘದ ಆಡಳಿತ ಸಮಿತಿಯ ಸದಸ್ಯರಾದ ಶಿವದಾಸ್ ಪಿ., ಸುಧಾಕರ್ ಎ., ಕುಶಲ್ ಕುಮಾರ್ ಎ., ಮುದ್ದಣ್ಣ ಪೂಜಾರಿ, ರಮೇಶ್ ಕೋಟ್ಯಾನ್, ಲಕ್ಷ್ಮಣ ಪೂಜಾರಿ, ಮಹೇಂದ್ರ ಕೋಟ್ಯಾನ್, ಸುಧಾಕರ ಪೂಜಾರಿ, ಗುರುರಾಜ್ ಪೂಜಾರಿ, ಸತೀಶ್ ಜಿ.ಪೂಜಾರಿ, ಜಯಂತಿ ಹರೀಶ್, ವಿನಯ್ ಕುಮಾರ್, ವಿನೋದ್ ಪೂಜಾರಿ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಪದಾಧಿಕಾರಿಗಳು, ಸಂಘದ ಸದಸ್ಯರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಪಂಚಾಯತ್ ರಾಜ್ ವ್ಯವಸ್ಥೆ ಸಬಲೀಕರಣಕ್ಕೆ ಕೋಟ ಶ್ರೀನಿವಾಸ ಪೂಜಾರಿ ರಾಜ್ಯಕ್ಕೇ ಮಾದರಿ: ಶಾಸಕ ಕೆ.ರಘುಪತಿ ಭಟ್

ಉಡುಪಿ: ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯತ್ ನ ಸದಸ್ಯರಿಗೆ ಪ್ರಥಮ ಬಾರಿಗೆ ಗೌರವ ಧನವನ್ನು ಮಂಜೂರು ಮಾಡಿಸಿದ್ದು ನಮ್ಮ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ನವರ ಅವಧಿಯಲ್ಲಿ ರೂ.250 ಗೌರವ ಧನವನ್ನು ಮಂಜೂರು ಮಾಡಿಸಲು ಶ್ರಮ ಪಟ್ಟಿದ್ದಲ್ಲದೇ ಗೌರವ ಧನ ಹೆಚ್ಚಳಕ್ಕೆ ನಿರಂತರವಾಗಿ ಹೋರಾಟ ಮಾಡಿ ಈಗ ರೂ.1,000ಕ್ಕೆ ಗೌರವ ಧನವನ್ನು ಹೆಚ್ಚಿಸಿದ್ದು ಮಾತ್ರವಲ್ಲದೆ ವಿಧಾನ ಪರಿಷತ್ ನಲ್ಲಿ ಸಭಾ ನಾಯಕರಾಗಿ ರೂ.1,000 ಇದ್ದ ಗೌರವ ಧನವನ್ನು ರೂ.2,000ಕ್ಕೆ ಹೆಚ್ಚಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ. ಇತಿಹಾಸದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಸಬಲೀಕರಣಕ್ಕೆ ಗ್ರಾಮ ಪಂಚಾಯತ್ ಗಳು ಸರಕಾರದಂತೆ ಕೆಲಸವನ್ನು ಮಾಡಬೇಕೆನ್ನುವ ಕಲ್ಪನೆಯನ್ನು ನೀಡಿ ನಿರಂತರವಾಗಿ ಗ್ರಾಮ ಪಂಚಾಯತ್ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿಗೋಸ್ಕರ ದುಡಿದಿರುವ ಏಕೈಕ ಜನಪ್ರತಿನಿಧಿ ಕೋಟ ಶ್ರೀನಿವಾಸ ಪೂಜಾರಿಯವರು ಎಂದು ಹೇಳಲು ನನಗೆ ಹೆಮ್ಮೆಯೆನಿಸುತ್ತದೆ. ಆ ಹಿನ್ನೆಲೆಯಲ್ಲಿ ಎಲ್ಲರೂ ಒಟ್ಟಾಗಿ ಒಂದಾಗಿ ಪೂರ್ಣ ಬಹುಮತದಿಂದ ಅವರನ್ನು ಗೆಲ್ಲಿಸಬೇಕು ಎಂಬ ವಿನಂತಿಯನ್ನು ಮಾಡುತ್ತೇನೆ ಎಂದು ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ಹೇಳಿದರು.

ಅವರು ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಉಡುಪಿ ನಗರ ವ್ಯಾಪ್ತಿಯ ಗ್ರಾಮ ಪಂಚಾಯತ್ ಮತ್ತು ಉಡುಪಿ ನಗರಸಭಾ ಸದಸ್ಯರ ಚುನಾವಣಾ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಮಾತನಾಡಿ, ಡಿ.10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ನ ಸದಸ್ಯರು, ಅತ್ಯಂತ ಜಾಗರೂಕರಾಗಿ, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಪಾರ ಅನುಭವ ಹೊಂದಿರುವ ಎಂ ಬಿಜೆಪಿಯ ಏಕೈಕ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತ್ರ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡಿ ಅವರನ್ನು ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದರು.

ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಮಾತನಾಡಿ ನನ್ನ ಮಿತಿಯೊಳಗೆ 13 ವರ್ಷಗಳಿಂದ ನಿರಂತರವಾಗಿ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಪರವಾಗಿ ಕೆಲಸಗಳನ್ನು ಮಾಡಿದ್ದೇನೆ ಎಂಬ ವಿಶ್ವಾಸವಿದೆ. ಬಿಜೆಪಿಯಿಂದ ನಾನೊಬ್ಬನೇ ಅಭ್ಯರ್ಥಿಯಾಗಿದ್ದು, 1 ಅಂಕೆಯನ್ನು ಮಾತ್ರ ಬರೆಯುವ ಮೂಲಕ ಒಂದೇ ಮತವನ್ನು ಚಲಾಯಿಸಿ ಪಂಚಾಯತ್ ರಾಜ್ ಸಬಲೀಕರಣಕ್ಕಾಗಿ ನನ್ನನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ ಎಸ್. ಪೂಜಾರಿ, ಪ್ರಭಾಕರ ತಿಂಗಳಾಯ, ಗಾಯತ್ರಿ ಸುರೇಶ್, ಕೃಷ್ಣ ದೇವಾಡಿಗ, ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ನಗರಸಭಾ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್ ಕಾರ್ಯಕ್ರಮ ನಿರೂಪಿಸಿ, ದಿನೇಶ್ ಅಮೀನ್ ವಂದಿಸಿದರು.

ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಸರಣಿ ಸಭೆಗಳು



ಕಾಪು: ಕಾಪು ವಿಧಾಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿಯಾಗಿ ಸರಣಿ ಸಭೆಗಳು ನಡೆದವು. ಮಹಾಶಕ್ತಿಕೇಂದ್ರವಾರು ಹಾಗು ನಾಲ್ಕೈದು ಪಂಚಾಯತ್ ಒಟ್ಟು ಸೇರಿಸಿ ಅಲೆವೂರು, ಮುದರಂಗಡಿ ಹಿರಿಯಡ್ಕ ಕಟಪಾಡಿ ಉಚ್ಚಿಲ ಹಾಗೂ ಪಡುಬಿದ್ರೆಯಲ್ಲಿ ಒಟ್ಟು ಆರು ಕಡೆ ಪಂಚಾಯತ್ ಸದಸ್ಯರಿಗೆ ಚುನಾವಣೆಯ ಮಹತ್ವ ಮತದಾನ ಮಾಡುವ ರೀತಿ ಇತ್ಯಾದಿಗಳ ಮಾಹಿತಿ ನೀಡಿದೆವು. ನಮ್ಮ ಅಭ್ಯರ್ಥಿಯೂ ಕರ್ನಾಟಕ ಸರಕಾರದ ಸಚಿವರೂ ಆದ ಕೋಟ ಶ್ರೀನಿವಾಸ ಪೂಜಾರಿ ಎಲ್ಲ ಸಭೆಗಳಲ್ಲಿ ಭಾಗವಹಿಸಿ ತನಗೆ ಮತದಾನ ಮಾಡುವಂತೆ ವಿನಂತಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಜ್ಯ ಕಾರ್ಯಕಾರಿಣಿ ಸದಸ್ಯರೂ, ಕಾಪು ಕ್ಷೇತ್ರ ಚುನಾವಣಾ ಸಂಚಾಲಕರೂ ಆದ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಂಗಳೂರು, ರಾಜ್ಯ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟ, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷರುಗಳಾದ ಜಿಯಾನಂದ ಹೆಗ್ಡೆ, ವಿಶ್ವನಾಥ ಕುರ್ಕಾಲು, ಸಂದೀಪ್ ರವ್, ಚಂದ್ರಶೇಖರ ಕೋಟ್ಯನ್, ಶಿವಪ್ರಸಾದ್ ಶೆಟ್ಟಿ, ಉದ್ಯಾವರ ಮಹಾಶಕ್ತಕೇಂದ್ರ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್, ರವಿಶೆಟ್ಟಿ ಪಾದೆಬೆಟ್ಟು, ಶಶಿಕಾಂತ್ ಪಡುಬಿದ್ರೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಕ್ಷದ ಪ್ರಮುಖರಾದ ಸುರೇಂದ್ರ ಪಣಿಯೂರು, ಗಂಗಾಧರ ಸುವರ್ಣ, ನವೀನ್ ಎಸ್ ಕೆ, ಸಂಧ್ಯಾ ಕಾಮತ್, ಪವಿತ್ರ ಶೆಟ್ಟಿ, ಸುಭಾಸ್ ನಾಯ್ಕ್, ಕೇಶವ ಮೊಯ್ಲಿ, ಮುರಳಿಧರ್ ಪೈ, ಶಶಿಪ್ರಭಾ ಶೆಟ್ಟಿ, ಸಚಿನ್ ಸುವರ್ಣ, ಸುಮಾ ಶೆಟ್ಟಿ, ಎಲ್ಲ ಪಂಚಾಯತ್ ಅಧ್ಯಕ್ಚರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರು, ಜಿಲ್ಲಾ ಮತ್ತು ಮಂಡಲ ಪ್ರಮುಖರು ಉಪಸ್ಥಿತರಿದ್ದರು.

ಉಡುಪಿ: ಕೋವಿಡ್ ರೂಪಾಂತರಿ ತಳಿ “ಒಮಿಕ್ರಾನ್” ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪ್ರಸರಣದ ಆತಂಕ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ಸರ್ವೇಕ್ಷಣ ಚಟುವಟಿಕೆಗಳನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ದೈನಂದಿನ ಕೋವಿಡ್ ಪರೀಕ್ಷೆಯ ಗುರಿಯನ್ನು ಹೆಚ್ಚಿಸಿ ಕರ್ನಾಟಕ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ. ಅದರಂತ ಜಿಲ್ಲೆಯಲ್ಲಿ ಕೋವಿಡ್ ನ ಹೊಸ ರೂಪಾಂತರಿ ಪ್ರಸರಣ ತಡೆಗೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಡುಪಿ ಡಿಸಿ ಕೂರ್ಮಾರಾವ್ ಎಂ ಹೇಳಿದರು. ಸರ್ಕಾರದ ಹೊಸ ಮಾರ್ಗಸೂಚಿಯಂತೆ ಉಡುಪಿ ಜಿಲ್ಲೆಯಲ್ಲಿ ದೈನಂದಿನ ಕೋವಿಡ್ ಪರೀಕ್ಷೆ ಗುರಿ 3000 ದಿಂದ 4000 ಹೆಚ್ಚಿಸಿ ನಿಗದಿಪಡಿಸಲಾಗಿದೆ. ರೋಗಲಕ್ಷಣ ಹೊಂದಿರುವವರು ilisar ಪ್ರಕರಣಗಳು, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂದರ್ಶ ಹೊಂದಿರುವವರು ಮತ್ತು ಹೈ ರಿಸ್ಕ್ ಹೊಂದಿರುವ ಗುಂಪಿನ ವ್ಯಕ್ತಿಗಳಿಗೆ ಕೋವಿಡ್ ಪರೀಕ್ಷೆ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸುವುದು ಮತ್ತು ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದಿದ್ದಾರೆ.

ಈ ಕೆಳಕಂಡ ಗುಂಪಿನವರಿಗೆ ಪಾಕಿಕವಾಗಿ Random ಪರೀಕ್ಷೆ ನಡೆಸಲಾಗುತ್ತದೆ. ಪ್ರೌಢಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಬೋದನಾ ಸಿಬ್ಬಂದಿ ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳ ಸಿಬ್ಬಂದಿ, ಮಾಲ್ ಗಳಲ್ಲಿರುವ ಅಂಗಡಿ ಮುಂಗಟ್ಟುಗಳ ವರ್ತಕರು, ಕ್ಯಾಟರಿಂಗ್ ಸಿಬ್ಬಂದಿ ಮತ್ತು ಮನೆಮನೆಗಳಿಗೆ ವಿತರಣೆ ಮಾಡುವ ಸಿಬ್ಬಂದಿ, ಕಾರ್ಖಾನೆಗಳ ಸಿಬ್ಬಂದಿ, ಎಲ್ಲಾ ಕಚೇರಿಗಳ ಸಿಬ್ಬಂದಿ, ಪಬ್ ಮತ್ತು ಬಾರ್ ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಕೆಲವೊಂದು ಸಂದರ್ಭಗಳಲ್ಲಿ ಸಾರ್ವಜನಿಕರು ಸೇರಿದಾಗ ಸಿಗದಿಪಡಿಸಿದ ಗುರಿಯಲ್ಲಿ ಶೇಕಡ 50 ರಷ್ಟು ಜಿಲ್ಲಾ ಕೇಂದ್ರದಲ್ಲಿ ಮತ್ತು ಉಳಿದ 50 ಗ್ರಾಮೀಣ ಪ್ರದೇಶಗಳಲ್ಲಿ ಪರೀಕ್ಷೆ ಮಾಡುವುದು, ಪರೀಕ್ಷೆಯಲ್ಲಿ ಶೇಕಡ 10 ರಷ್ಟು ಮಕ್ಕಳನ್ನು ಪರೀಕ್ಷೆಗೆ ಒಳಪಡಿಸುವುದು. ಐಸಿಎಂಆರ್‌ ಮಾರ್ಗಸೂಚಿ ಪ್ರಕಾರ ಎಲ್ಲಾ ರೋಗಲಕ್ಷಣ ಸಹಿತ ಪ್ರಕರಣಗಳನ್ನು ಮೊದಲಿಗೆ Mat ಪರೀಕ್ಷೆಗೆ ಒಳಪಡಿಸುವುದು, ಫಲಿತಾಂಶ ನೆಗಟಿವ್ ಬಂದಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಮಾಡುವುದು ರೋಗಲಕ್ಷಣ ಇಲ್ಲದವರಿಗೆ Rat ಪರೀಕ್ಷೆ ಮಾಡಬಾರದು.

ದಕ್ಷಿಣ ಆಫ್ರಿಕಾ ಬೋಟ್ಸುವಾನ ಮತ್ತು ಹಾಂಕಾಂಗ್ ದೇಶಗಳಲ್ಲಿ ಕೋವಿಡ್ ನ ರೂಪಾಂತರಿ ಪ್ರಭೇದ ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶಿ ಪ್ರಯಾಣಿಕರನ್ನು ತಪಾಸಣೆ ಪರೀಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕೆಳಕಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರ ಸುತ್ತೋಲೆ ದಕ್ಷಿಣ ಆಫ್ರಿಕಾ ಬೋಟ್ಸುವಾನ ಮತ್ತು ಹಾಂಕಾಂಗ್ ನಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ RTPCR ಪರೀಕ್ಷೆ ಮಾಡಬೇಕು ಮತ್ತು ನೆಗಟಿವ್ ವರದಿ ಬಂದ ನಂತರವೇ ವಿಮಾನ ನಿಲ್ದಾಣದಿಂದ ನಿರ್ಗಮಿಸಲು ಅನುಮತಿಸಬೇಕು. ಈ ಮೂರು ದೇಶಗಳಿಂದ ಕಳೆದ 15 ದಿನಗಳಿಂದ ಈಚೆಗೆ ಬಂದಿರುವ ಪ್ರಯಾಣಿಕರನ್ನು ಪತ್ತೆ ಹಚ್ಚಿ RTPCR ಪರೀಕ್ಷೆಗೆ ಒಳವಡಿಸಬೇಕು, ಪ್ರಯಾಣಿಕರು ಕೋವಿಡ್ ಸೋಂಕಿತರಾಗಿದ್ದಲ್ಲಿ ಅವರನ್ನು 10 ದಿನಗಳ ಕಾಲ ಕಡ್ಡಾಯ ಸಾಂಸ್ಥಿಕ ಪ್ರತ್ಯೇಕತೆಗೆ ಒಳಪಡಿಸಬೇಕು. ಪಾಸಿಟಿವ್ ಬಂದಿರುವ ಪರೀಕ್ಷಾ ಮಾದರಿಗಳನ್ನು ಕಡ್ಡಾಯವಾಗಿ ತಕ್ಷಣ ಜೆನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಬೇಕು. ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ಪರೀಕ್ಷೆಗೆ ಒಳಪಡಿಸಬೇಕು.

ಜಿಲ್ಲೆಯಲ್ಲಿ ಈ ಮೇಲ್ಕಂಡ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಥಮ ಆದ್ಯತೆ ಎಂದು ಪರಿಗಣಿಸಿ, ಆರೋಗ್ಯ ಇಲಾಖೆ ಮತ್ತು ಇತರ ಪ್ರಮುಖ ಇಲಾಖೆಗಳ ಸಹಕಾರ ಮತ್ತು ಸಮನ್ವಯದೊಂದಿಗೆ ಹಾಗೂ ಜಿಲ್ಲಾಡಳಿತದ ಸೂಕ್ತ ಮಾರ್ಗದರ್ಶನ ಮತ್ತು ನಿಗಾವಣೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

ಜಿಲ್ಲಾ ಎಸ್.ಸಿ. ಮೋರ್ಚಾದಿಂದ ಸಂವಿಧಾನ ದಿನ ಆಚರಣೆ

ಉಡುಪಿ: ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ನೇತೃತ್ವದಲ್ಲಿ ನ.26ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ ವಹಿಸಿದ್ದರು.

ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು.

ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಮಯೋಚಿತವಾಗಿ ಮಾತನಾಡಿದರು.

ದೇಶದ ಸಂವಿಧಾನದ ಆಶಯಗಳ ಬಗ್ಗೆ ಖ್ಯಾತ ಸಾಹಿತಿ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ವಿಸ್ತೃತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮುನ್ನಾ ಎರ್ಮಾಳು, ಶಿವಾನಂದ ತಲ್ಲೂರು, ತಿಲಕರಾಜ್ ಕುಂದಾಪುರ ಇವರನ್ನು ಸನ್ಮಾನಿಸಲಾಯಿತು.

ಜಿಲ್ಲೆಯ ಜಾನಪದ ಕ್ರೀಡೆ ಕಂಬಳದ ಕೋಣಗಳನ್ನು 30 ವರ್ಷಗಳಿಂದ ಸಲಹುತ್ತಿರುವ ಗುರುವ ಮೇಸ್ತ್ರಿ ಮಾರ್ಪಳ್ಳಿ ಇವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ಮತ್ತು ಕಿರಿಯ ವಯಸ್ಸಿನಲ್ಲೇ ಕೊರಗಜ್ಜನ ಹಾಡನ್ನು ಹಾಡುವ ಮೂಲಕ ಪ್ರಖ್ಯಾತರಾದ ಮಾಸ್ಟರ್ ಕಾರ್ತಿಕ್ ಇವರನ್ನು ಗೌರವಿಸಲಾಯಿತು.

ಎಸ್.ಎಸ್.ಎಲ್.ಸಿ. ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ 30 ಮಂದಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಎಸ್.ಸಿ. ಮೋರ್ಚಾ ಉಸ್ತುವಾರಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಪಕ್ಷದ ಪ್ರಮುಖರಾದ ಆನಂದ ಮಟಪಾಡಿ, ಎಸ್.ಸಿ. ಮೋರ್ಚಾ ಉಡುಪಿ ನಗರ ಮಂಡಲ ಅಧ್ಯಕ್ಷ ಕಿರಣ್, ಕುಂದಾಪುರ ಮಂಡಲ ಅಧ್ಯಕ್ಷ ಮಹೇಶ್ ಕಾಳಾವರ, ಬೈಂದೂರು ಮಂಡಲ ಅಧ್ಯಕ್ಷ ಚಂದ್ರ ಪಂಚವಟಿ, ಕಾರ್ಕಳ ಮಂಡಲ ಅಧ್ಯಕ್ಷ ಅನ್ನಿ ಕಾರ್ಕಳ ಹಾಗೂ ಎಸ್.ಸಿ. ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ ಕೈಪುಂಜಾಲು ಸ್ವಾಗತಿಸಿ, ವಂದಿಸಿದರು. ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ. ಕಾರ್ಯಕ್ರಮ ನಿರೂಪಿಸಿದರು.

ಕೃಷಿ ಕಾಯ್ದೆ ಹಿಂತೆಗೆತ ಪ್ರಧಾನಿ ಮೋದಿ ಜಾಣ ನಡೆ : ಜಿಲ್ಲಾ ಬಿಜೆಪಿ

ಉಡುಪಿ: ದೇಶದ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ರೈತಪರ ಕೇಂದ್ರ ಕೃಷಿ ಕಾಯ್ದೆಯನ್ನು ದೇಶದ ಬಾಹ್ಯ ಮತ್ತು ಆಂತರಿಕ ಭದ್ರತೆಯ ಹಿತಾಸಕ್ತಿಯಿಂದ ಹಿಂಪಡೆದಿರುವ ಪ್ರಧಾನಿ ನರೇಂದ್ರ ಮೋದಿ ಜಾಣ ನಡೆ ಪ್ರಶಂಸನೀಯ ಎಂದು ಜಿಲ್ಲಾ ಬಿಜೆಪಿ ಹೇಳಿದೆ.

ಕಾಂಗ್ರೆಸ್ ಬೆಂಬಲದಿಂದ ರಾಕೇಶ್ ಟಿಕಾಯತ್ ನಂತಹ ನಕಲಿ ರೈತ ನಾಯಕರು ಐಶಾರಾಮಿ ವ್ಯವಸ್ಥೆಗಳೊಂದಿಗೆ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನೈಜ ರೈತರ ಹಿತವನ್ನು ಕಡೆಗಣಿಸಿ ಮಧ್ಯವರ್ತಿಗಳ ಹಿತಾಸಕ್ತಿಗಾಗಿ ಕೇಂದ್ರ ಕೃಷಿ ಕಾಯ್ದೆಯನ್ನು ವಿರೋಧಿಸಿ ವರ್ಷಕ್ಕೂ ಮಿಕ್ಕಿ ಅವಧಿಯಲ್ಲಿ ನಡೆಸಿದ ಆಂದೋಲನ ಯಾವ ರೀತಿಯಲ್ಲಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂಬುದು ದೇಶದ ಜನತೆಯ ಮುಂದೆ ಜಗಜ್ಜಾಹೀರಾಗಿದೆ. ಕೊನೆಗೂ ಆಂದೋಲನ ಜೀವಿಗಳ ಮುಖ್ಯಸ್ಥ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ನೈಜ ರೈತರ ಮುಖವಾಡ ಧರಿಸಿರುವ ನಕಲಿ ರೈತರು ನಡೆಸಿರುವ ಕೇಂದ್ರ ಕೃಷಿ ಕಾಯ್ದೆ ವಿರೋಧಿ ಆಂದೋಲನ ಹಳ್ಳ ಹಿಡಿದು ಅಂತ್ಯಗೊಳ್ಳುವ ಕಾಲ ಸನ್ನಿಹಿತವಾಗಿದೆ.

ನೋಟ್ ಬ್ಯಾನ್, 370ನೇ ವಿಧಿ ರದ್ಧತಿ, ತ್ರಿವಳಿ ತಲಾಖ್ ರದ್ಧತಿಯ ಜೊತೆಗೆ ಸಿಎಎ ಕಾಯ್ದೆ ಜಾರಿಗೆ ಬದ್ಧವಿರುವ, ಶತ್ರು ರಾಷ್ಟ್ರ ಚೀನಾ ಮತ್ತು ಪಾಕಿಸ್ಥಾನದ ಹೆಡೆಮುರಿ ಕಟ್ಟಲು ಎಲ್ಲ ಅಗತ್ಯ ವ್ಯವಸ್ಥೆಗಳೊಂದಿಗೆ ಸನ್ನದ್ಧವಾಗಿರುವ, ಅಯೋಧ್ಯೆಯಲ್ಲಿ ಬಹು ನಿರೀಕ್ಷಿತ ಶ್ರೀರಾಮ ಮಂದಿರ ನಿರ್ಮಾಣದ ಸಹಿತ ಮುಸ್ಲಿಂ ರಾಷ್ಟ್ರದಲ್ಲೂ ಮಂದಿರ ನಿರ್ಮಾಣಕ್ಕೆ ಕಾರಣರಾದ ವಿಶ್ವ ವಂದ್ಯ ನಾಯಕ ಪ್ರಧಾನಿ ನರೇಂದ್ರ ಮೋದಿ ದೂರದರ್ಶಿತ್ವದ ಚಿಂತನೆಯ ನಿರ್ಧಾರದಲ್ಲಿ ದೇಶದ ಹಿತವಿದೆ. ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನೈಜ ರೈತರ ಹಿತ ಕಾಯುವ ಪರಿಷ್ಕ್ರತ ಕೃಷಿ ಕಾಯ್ದೆ ಜಾರಿಗೆ ಬರುವ ಸಂಪೂರ್ಣ ವಿಶ್ವಾಸವಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ತಿಳಿಸಿದ್ದಾರೆ.

ದೇಶದ ಸ್ವಾತಂತ್ರ್ಯಾ ನಂತರ ಬ್ರಹ್ಮಾಂಡ ಭ್ರಷ್ಟಾಚಾರದೊಂದಿಗೆ ಒಂದೇ ಕುಟುಂಬದ ಹಿತ ಕಾಯುವ ಜೊತೆಗೆ ನಕಲಿ ಜಾತ್ಯಾತೀತತೆ ಪ್ರದರ್ಶಿಸಿ ಸುಧೀರ್ಘ ಅವಧಿಗೆ ದುರಾಡಳಿತ ನಡೆಸಿ ದೇಶವಾಸಿಗಳಿಂದ ತಿರಸ್ಕ್ರತಗೊಂಡಿರುವ ಕಾಂಗ್ರೆಸ್ ಇಂದು ಯಾವ ರೀತಿಯಲ್ಲಿ ಮೂಲೆಗುಂಪಾಗಿದೆ ಎಂಬ ಬಗ್ಗೆ ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಸಾಮಾಜಿಕ ಜಾಲತಾಣದ ಮೂಲಕ ನಿರಂತರ ಅಪಪ್ರಚಾರದಿಂದ ವಿಶ್ವ ನಾಯಕ ಪ್ರಧಾನಿ ಮೋದಿ ಸಹಿತ ಕೇಂದ್ರ ಮತ್ತು ರಾಜ್ಯದ ಅಭಿವೃದ್ಧಿ ಪರ ಆಡಳಿತ ಪಕ್ಷ ಬಿಜೆಪಿಯ ಸಾಧನೆಗಳನ್ನು ಮರೆಮಾಚಲು ಹೆಣಗಾಡುತ್ತಿರುವ ಕಾಂಗ್ರೆಸ್‍ನ ದುರುದ್ಧೇಶಪೂರಿತ ಪ್ರಯತ್ನ ಎಂದಿಗೂ ಸಫಲವಾಗದು. ದೇಶವಾಸಿಗಳು ಪ್ರಬುದ್ಧರಾಗಿದ್ದು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅದೆಷ್ಟು ಅಮಾಯಕ ರಾಷ್ಟ್ರ ಭಕ್ತರು ದೇಶಕ್ಕಾಗಿ ಹುತಾತ್ಮರಾಗಿದ್ದಾರೆ, ಹಿಂಬಾಗಿಲಿನಿಂದ ಸ್ವತಂತ್ರ ಭಾರತದ ಚುಕ್ಕಾಣಿಯನ್ನು ಹಿಡಿದು ದೇಶದ ಭದ್ರತೆಯ ವಿಚಾರದಲ್ಲಿ ನೆಹರೂ ಯಾವ ರೀತಿಯಲ್ಲಿ ಅಸಡ್ಡೆ ತೋರಿದ್ದಾರೆ, ಸಂವಿಧಾನ ಶಿಲ್ಪಿ
ಡಾ| ಬಿ.ಆರ್. ಅಂಬೇಡ್ಕರ್ ರವರಿಗೆ ಕಾಂಗ್ರೆಸ್ ಯಾವ ರೀತಿಯಲ್ಲಿ ಮೋಸಗೈದಿದೆ, ಕಾಂಗ್ರೆಸ್‍ನ ಪರಮೋಚ್ಛ ನಾಯಕರು ಯಾವ ರೀತಿಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿ ಬೇಲ್ ಮೇಲೆ ಹೊರಗಡೆ ಇದ್ದಾರೆ ಎಂಬೆಲ್ಲಾ ವಿಚಾರಗಳ ಬಗ್ಗೆ ಸಂಪೂರ್ಣ ಅರಿವಿದೆ. ಇಂದಿನ ಅಭಿವೃದ್ಧಿ ಪರ ಆಡಳಿತದ ಮೋದಿ ಯುಗದಲ್ಲಿ ಕಾಂಗ್ರೆಸ್ ನಾಯಕರ ಬೊಗಳೆ ಮಾತಿಗೆ ಎಳ್ಳಷ್ಟೂ ಮನ್ನಣೆ ಸಿಗಲಾರದು ಎಂದು ಅವರು ತಿಳಿಸಿದ್ದಾರೆ.

ದೇಶದೆಲ್ಲೆಡೆ ಬಿಜೆಪಿ ನೇತೃತ್ವದ ಜನಪರ ಆಡಳಿತದಿಂದ ಕಂಗೆಟ್ಟು ಸರಕಾರದ ವಿರುದ್ಧ ಟೀಕಿಸಲು ಯಾವುದೇ ಪ್ರಮುಖ ವಿಚಾರಗಳಿಲ್ಲದೇ ಕಾಂಗ್ರೆಸ್ ದಿಕ್ಕು ದೆಸೆ ಇಲ್ಲದಂತೆ ವರ್ತಿಸುತ್ತಿರುವುದು ಹಾಸ್ಯಾಸ್ಪದ. ಪ್ರಧಾನಿ ನರೇಂದ್ರ ಮೋದಿ ತನ್ನ ದಿಟ್ಟತನದ ಕಾರ್ಯ ವೈಖರಿಯಿಂದ ವಿರೋಧಿಗಳಿಗೆ ಸಿಂಹಸ್ವಪ್ನವೆನಿಸಿದ್ದಾರೆ. ದೇಶದ ಸಂವಿಧಾನದ ಮೇಲೆ ನಂಬಿಕೆ ಇಲ್ಲದ ಒವೈಸಿಯಂತಹ ಅದೆಷ್ಟೋ ಮಂದಿಯ ದೇಶ ವಿರೋಧಿ ಹೇಳಿಕೆಗಳಿಗೆ ಸೊಪ್ಪು ಹಾಕದ ಪ್ರಧಾನಿ ಮೋದಿ ಸಿಎಎ ಸಹಿತ ಯೋಜಿತ ಎಲ್ಲ ಯೋಜನೆಗಳನ್ನು ಜಾರಿಗೊಳಿಸುವುದು ಶತಸಿದ್ಧ ಎಂದು ಗುರುಪ್ರಸಾದ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ ಎಲ್ಲಾ ಮಾದರಿಯ ಕ್ರಿಪ್ಟೋ ಕರೆನ್ಸಿ ನಿಷೇಧಕ್ಕೆ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ನಿರ್ಣಯ

ನವದೆಹಲಿ: ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ತೋಕರೆನ್ಸಿಯನ್ನು ಬ್ಯಾನ್ ಮಾಡಲಾಗುವುದು. ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ಮಾದರಿಯ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್ ಮಾಡಲು ಚಿಂತನೆ ನಡೆದಿದೆ.

ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಭಾರತದಲ್ಲಿ ಎಲ್ಲಾ ಮಾದರಿಯ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್ ಮಾಡುವ ಸಾಧ್ಯತೆಯಿದೆ. ಚಳಿಗಾಲದ ಅಧಿವೇಶನದಲ್ಲಿ 26 ವಿಧೇಯಕಗಳನ್ನು ಮಂಡಿಸಲಿದ್ದು, ಅದರಲ್ಲಿ ಕ್ಟಿಪ್ಟೋ ಕರೆನ್ಸಿ ಕೂಡ ಒಂದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಇತ್ತೀಚೆಗಷ್ಟೇ ಕ್ರಿಪ್ತೋಕರೆನ್ಸಿ ಬಗ್ಗೆ ಪ್ರಸ್ತಾಪಿಸಿದ್ದರು, ಇದರ ಬೆನ್ನಲ್ಲೇ ಭಾರತದಲ್ಲಿ ಕ್ರಿಪ್ತೋಕರೆನ್ಸಿ ಯನ್ನು ಬ್ಯಾನ್ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿಯೂ ಕ್ರಿಪ್ಟೋ ಕರೆನ್ಸಿ ವಿಚಾರ ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಲೋಕಸಭೆಯ ವೆಬ್‌ಸೈಟ್ ಪ್ರಕಾರ, ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವು 25 ಇತರ ಮಸೂದೆಗಳೊಂದಿಗೆ ಕ್ರಿಪ್ಟೋಕರೆನ್ಸಿಗಳ ಮಸೂದೆಯನ್ನು ಪರಿಚಯಿಸಲಿದೆ.

ಹೂಡಿಕೆದಾರರನ್ನು ತಪ್ಪುದಾರಿಗೆಳೆಯಲು, ಆಕರ್ಷಿಸಲು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಧನಸಹಾಯ ನೀಡಲು ಇಂತಹ ಕರೆನ್ಸಿಗಳನ್ನು ಬಳಸಲಾಗುತ್ತಿದೆ ಎಂಬ ಕಳವಳದ ನಡುವೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಅಧಿಕೃತ ಡಿಜಿಟಲ್ ಕರೆನ್ಸಿ ಮಸೂದೆ – 2021 ರ ಕ್ರಿಪ್ಟೋಕರೆನ್ಸಿ ಮತ್ತು ನಿಯಂತ್ರಣದ ಪ್ರಕಾರ, ಭಾರತದಲ್ಲಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಪ್ರಯತ್ನಿಸುತ್ತದೆ, ಆದಾಗ್ಯೂ, ಆಧಾರವಾಗಿರುವ ತಂತ್ರಜ್ಞಾನ ಮತ್ತು ಅದರ ಬಳಕೆಗಳನ್ನು ಉತ್ತೇಜಿಸಲು ಕೆಲವು ವಿನಾಯಿತಿಗಳನ್ನು ಇದು ಅನುಮತಿಸುತ್ತದೆ. ಬಿಲ್ ರಚನೆಗೆ ಚೌಕಟ್ಟನ್ನು ರಚಿಸುವ ಗುರಿ ಹೊಂದಿದೆ ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕೃತ ಡಿಜಿಟಲ್ ಕರೆನ್ಸಿಯನ್ನು ಬಿಡುಗಡೆ ಮಾಡಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಸ್ತುತ, ದೇಶದಲ್ಲಿ ಕ್ರಿಪ್ಟೋ ಕರೆನ್ಸಿಗಳ ಬಳಕೆಯ ಮೇಲೆ ಯಾವುದೇ ನಿರ್ದಿಷ್ಟ ನಿಯಮಗಳು ಅಥವಾ ಯಾವುದೇ ನಿಷೇಧವಿಲ್ಲ. ಈ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹಿರಿಯ ಅಧಿಕಾರಿಗಳೊಂದಿಗೆ ಕ್ರಿಪ್ಟೋ ಕರೆನ್ಸಿಗಳ ಕುರಿತು ಸಭೆ ನಡೆಸಿದ್ದರು. ಸಮಸ್ಯೆಯನ್ನು ಎದುರಿಸಲು ಬಲವಾದ ನಿಯಂತ್ರಕ ಕ್ರಮಗಳನ್ನು ತೆಗೆದುಕೊಳ್ಳಬಹುದಾದ ಸೂಚನೆಗಳಿವೆ. ಪ್ರಸ್ತಾವಿತ ಮಸೂದೆಯು ಹೂಡಿಕೆದಾರರ ರಕ್ಷಣೆಗೆ ಒತ್ತು ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್‌ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕ್ರಿಪ್ಟೋ ಕರೆನ್ಸಿ ಬಿಲ್‌ ಕ್ಯಾಬಿನೆಟ್‌ನಿಂದ ಅನುಮೋದನೆಗಾಗಿ ಕಾಯುತ್ತಿರುವುದಾಗಿ ಹೇಳಿದ್ದರು.

ಮಿನಿ ಸಮರದಲ್ಲಿ ಬಿಜೆಪಿ ಬೆಂಬಲಿಸಿ – ಶೋಭಾ ಕರಂದ್ಲಾಜೆ

ಉಡುಪಿಯಲ್ಲಿ ನಡೆದ ಯಶಸ್ವೀ ಜನ ಸ್ವರಾಜ್ ಸಮಾವೇಶ


ಡಿ.10ರ ವಿಧಾನ ಪರಿಷತ್ ಚುನಾವಣೆ ರಾಜ್ಯದ ಮಿನಿ ಸಮರ. ಇದರಲ್ಲಿ ವಿಧಾನ ಪರಿಷತ್ತಿನ ಸಭಾ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮತ್ತೆ ಗೆಲ್ಲಿಸಿ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ಉಡುಪಿಯ ಪುರಭವನದಲ್ಲಿ ನ.19 ಶುಕ್ರವಾರ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಸರಕಾರದ ಯಾವುದೇ ಮಸೂದೆ ಮಂಜೂರಾಗಲು ವಿಧಾನ ಪರಿಷತ್‍ನಲ್ಲೂ ಬಹುಮತ ಬೇಕು. ವಿಧಾನ ಸಭೆಯಲ್ಲಿ ಮಂಜೂರಾದ ಗೋಹತ್ಯಾ ಬಿಲ್ ವಿಧಾನ ಪರಿಷತ್‍ನಲ್ಲಿ ಮಂಜೂರಾಗಲು ಕಷ್ಟವಾಯಿತು. ಆದ್ದರಿಂದ ನಾವು ಹೆಚ್ಚು ಸ್ಥಾನ ಗೆಲ್ಲಬೇಕಿದೆ ಎಂದರು. ನರೇಂದ್ರ ಮೋದಿಯವರಿಗೆ ದಕ್ಷಿಣ ಭಾರತದಲ್ಲಿ ಇರುವ ಬೆಂಬಲಕ್ಕೆ ಈ ಚುನಾವಣೆ ಒರೆಗಲ್ಲು ಇದ್ದಂತೆ ಎಂದು ತಿಳಿಸಿದರು. ಉಡುಪಿಯಲ್ಲಿ ಪಕ್ಷ ಗೆಲ್ಲುವ ವಿಶ್ವಾಸ ನಮಗಿದೆ ಎಂದರು.

ಉತ್ತರ ಪ್ರದೇಶದ ಚುನಾವಣೆ ಎಂದರೆ ರಾಮ ಮಂದಿರದ ಚುನಾವಣೆ. ಉತ್ತರ ಪ್ರದೇಶದಲ್ಲಿ ಯೋಗಿಯವರ ನೇತೃತ್ವದಲ್ಲಿ ಮತ್ತೆ ನಮ್ಮ ಸರಕಾರ ಬರಬೇಕಿದೆ. ಅದೇ ರೀತಿ ರಾಜ್ಯದಲ್ಲೂ ಪಕ್ಷವು ಅತಿ ಹೆಚ್ಚು ವಿಧಾನ ಪರಿಷತ್ ಚುನಾವಣೆಯಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲಬೇಕಿದೆ ಎಂದು ತಿಳಿಸಿದರು. ನರೇಂದ್ರ ಮೋದಿಯವರು ಈಗ ಪ್ರಪಂಚದ ನಾಯಕರಾಗಿದ್ದಾರೆ. ನುಡಿದಂತೆ ನಡೆದ ನಾಯಕ ಅವರು ಎಂದು ವಿವರಿಸಿದರು.

ಕೋವಿಡ್ ನಿಭಾಯಿಸುವಲ್ಲಿ ನಮ್ಮ ದೇಶ ಮಾಡಿದ ಕಾರ್ಯ ಅತ್ಯಂತ ಶ್ಲಾಘನೀಯ. ಸಮರ್ಥ ನೇತೃತ್ವ ನೀಡುವ ಕಾರ್ಯವನ್ನು ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದಾರೆ. ಆದರೆ, ಕಾಂಗ್ರೆಸ್‍ನವರು ಕೋವಿಡ್ ಲಸಿಕೆಯನ್ನು ವಿರೋಧಿಸಿದರು ಎಂದು ತಿಳಿಸಿದರು. 100 ಕೋಟಿಗೂ ಹೆಚ್ಚು ಜನರಿಗೆ ಈಗಾಗಲೇ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. 2023ರಲ್ಲಿ ಮತ್ತೆ ರಾಜ್ಯದಲ್ಲಿ ನಮ್ಮ ಸರಕಾರ ಮತ್ತು 2024ರಲ್ಲಿ ಮತ್ತೆ ಮೋದಿಯವರು ಪ್ರಧಾನಿಯಾಗುವಂತೆ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ ಅವರು ಮಾತನಾಡಿ, ಕೇಂದ್ರ-ರಾಜ್ಯ ಸರಕಾರಗಳ ಸಾಧನೆ ಮತ್ತು ಜನಪರ ಕಾರ್ಯಕ್ರಮಗಳನ್ನು ಜನಪ್ರತಿನಿಧಿಗಳಿಗೆ ತಿಳಿಸಿ ಹೇಳಬೇಕು. ಕಾಂಗ್ರೆಸ್‍ನ ಬುರುಡೆ ಬಿಡುವವರಿಗೆ ಈ ಸಮಾವೇಶ ಸ್ಪಷ್ಟ ಉತ್ತರ ನೀಡುವಂತಿದೆ ಎಂದರು.

ಗ್ರಾಮಗಳಿಗೆ ಉದ್ಯೋಗ ಸಂಬಂಧ ಅನುದಾನವನ್ನು 150 ಮಾನವ ದಿನಕ್ಕೆ ಕೇಂದ್ರ ಸರಕಾರ ಹೆಚ್ಚಿಸಿದೆ. ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗ ಭ್ರಷ್ಟಾಚಾರ ಎಲ್ಲೆಡೆ ತಾಂಡವವಾಡುತ್ತಿತ್ತು. ಈಗ ಭ್ರಷ್ಟಾಚಾರರಹಿತವಾಗಿ ಕೆಲಸಗಳು ನಡೆಯುತ್ತಿವೆ ಎಂದು ವಿವರಿಸಿದರು. ಮನೆ ಮನೆಗೆ ಶುದ್ಧ ನೀರು ಸರಬರಾಜಿಗೆ ರಾಜ್ಯಕ್ಕೆ 1,008 ಕೋಟಿ ರೂಪಾಯಿ ನೀಡಲಾಗಿದೆ. ಸೌರ ವಿದ್ಯುತ್‍ಗೆ ಹಣ ಕೊಡಲಾಗಿದೆ. ಇಂಟರ್‍ನೆಟ್ ಕನೆಕ್ಟಿವಿಟಿ ಪ್ರತಿ ಗ್ರಾಮ ಪಂಚಾಯಿತಿಗೆ 20203ರ ವೇಳೆಗೆ ಲಭಿಸಲಿದೆ. 2025ಕ್ಕೆ ದೇಶದ ಪ್ರತಿಯೊಬ್ಬರಿಗೂ ಸೂರು ಒದಗಿಸಲು ಸರಕಾರ ಮುಂದಾಗಿದೆ ಎಂದು ತಿಳಿಸಿದರು. ಸ್ವಾಭಿಮಾನಿ ಭಾರತದ ನಿರ್ಮಾಣದ ಕನಸನ್ನು ನನಸಾಗಿಸಲು ಪ್ರಧಾನಿಯವರು ಮುಂದಾಗಿದ್ದಾರೆ ಎಂದು ತಿಳಿಸಿದರು. ಹೊಸ ಶಿಕ್ಷಣ ನೀತಿ ಉದ್ಯೋಗ ಸೃಷ್ಟಿಗೆ ಪೂರಕ ಪಠ್ಯಕ್ರಮವನ್ನು ಹೊಂದಿದೆ ಎಂದರು.

ವಿಧಾನಪರಿಷತ್‍ನ 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬಿಜೆಪಿಯ ಫೈರ್ ಬ್ರಾಂಡ್ ತಂಡ ಇಲ್ಲಿನದು. ಈ ಬಾರಿಯ ಚುನಾವಣೆ ಎ+++ ಫಲಿತಾಂಶ ನೀಡಲಿದೆ ಎಂದು ವಿಶ್ವಾಸದಿಂದ ನುಡಿದರು. ರೈತರ ಆದಾಯ ದ್ವಿಗುಣಗೊಳಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು. ರೈತರು, ಬೆಳೆಗಾರರನ್ನು ನಾವು ಬಿಟ್ಟು ಹಾಕುವುದಿಲ್ಲ. ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಸುಪ್ರೀಂ ಕೋರ್ಟ್‍ಗೂ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.

ರಾಜ್ಯ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮಾತನಾಡಿ, ಉಡುಪಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಬಗ್ಗೆ ಪರಿಶೀಲನೆ ನಡೆದಿದೆ. ನವೋದಯ ಚಾರಿಟೇಬಲ್ ಟ್ರಸ್ಟ್ ಗೆ ಡಿಸಿಸಿ ಬ್ಯಾಂಕಿನಿಂದ 19 ಲಕ್ಷ ಹಣ ವರ್ಗಾವಣೆ, ಬ್ಯಾಂಕಿನ ಶಾಖೆಯನ್ನು ಇದೇ ಟ್ರಸ್ಟಿನ ಕಟ್ಟಡದಲ್ಲಿ ನಡೆಸುವುದು ಕಾನೂನುಬಾಹಿರ. ಮಂಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಜಾಕ್ಕೆ ನೋಟಿಸ್ ಕೊಟ್ಟಿದ್ದೇವೆ ಎಂದು ತಿಳಿಸಿದರು. ಈ ವರ್ಷ 20,810 ಕೋಟಿ ಸಾಲವನ್ನು ನೀಡುವ ಗುರಿ ಇದ್ದು 10,591 ಕೋಟಿ ಹಣವನ್ನು ಸಾಲವಾಗಿ ರೈತರಿಗೆ ಈಗಾಗಲೇ ನೀಡಲು ಚಾಲನೆ ಕೊಟ್ಟಿದ್ದೇವೆ ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ವಿಧಾನ ಪರಿಷತ್‍ನಲ್ಲಿ ಪಕ್ಷ ಮತ್ತು ಸರಕಾರವನ್ನು ಸಮರ್ಥವಾಗಿ ಪ್ರತಿನಿಧಿಸಿ ಉತ್ತರ ನೀಡುತ್ತಾರೆ. ಅವರನ್ನು ಗರಿಷ್ಠ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಸಹಕಾರ ಇಲಾಖೆ ಅಧಿಕಾರಿಗಳು ಜನರಿಗೆ ಸರಿಯಾಗಿ ಸ್ಪಂದಿಸದೆ ಇದ್ದರೆ ಅದನ್ನು ಸಹಿಸಲಾಗದು ಎಂದು ಎಚ್ಚರಿಸಿದರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಖಾತೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ.ಸುನೀಲ್ ಕುಮಾರ್ ಸಮಯೋಚಿತವಾಗಿ ಮಾತನಾಡಿ ಡಿ.10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮಾತ್ರ ಪ್ರಾಶಸ್ತ್ಯದ ಮತವನ್ನು ನೀಡಿ ದೊಡ್ಡ ಅಂತರದ ಗೆಲುವಿಗೆ ಕೈಜೋಡಿಸಬೇಕು ಎಂದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥ್ ನಾರಾಯಣ, ರಾಜ್ಯ ಉಪಾಧ್ಯಕ್ಷರಾದ ಎಮ್. ಶಂಕರಪ್ಪ, ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದರೆ, ಶಾಸಕರಾದ ಬಿ.ಎಮ್. ಸುಕುಮಾರ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಕೆ.ಉದಯ ಕುಮಾರ್ ಶೆಟ್ಟಿ, ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್‍ಪಾಲ್ ಸುವರ್ಣ, ಉಡುಪಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ನ ಬಿಜೆಪಿ ಬೆಂಬಲಿತ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಭಾಗವಹಿಸಿದ್ದರು.

ಜನ ಸ್ವರಾಜ್ ಸಮಾವೇಶ ಯಶಸ್ಸಿಗೊಳಿಸಿ; ಬಿಜೆಪಿ ಅಭ್ಯರ್ಥಿಗೆ ಮಾತ್ರ ಪ್ರಾಶಸ್ತ್ಯದ ಮತ: ಶಾಸಕ ರಘುಪತಿ ಭಟ್ ಕರೆ



ರಾಜ್ಯ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿಯಾಗಿ ನ.19ರಂದು ಬೆಳಿಗ್ಗೆ 10.30ಕ್ಕೆ ಉಡುಪಿ ಪುರ ಭವನದಲ್ಲಿ ನಡೆಯಲಿರುವ ಜನ ಸ್ವರಾಜ್ ಸಮಾವೇಶದಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಎಲ್ಲಾ ಬಿಜೆಪಿ ಬೆಂಬಲಿತ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವ ಜೊತೆಗೆ ಡಿ.10ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮಾತ್ರ ಪ್ರಾಶಸ್ತ್ಯದ ಮತವನ್ನು ನೀಡುವ ಮೂಲಕ ಭರ್ಜರಿ ಅಂತರದ ವಿಜಯ ದಾಖಲಿಸುವಂತೆ ಎಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಕೈಜೋಡಿಸಬೇಕು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಕರೆ ನೀಡಿದರು.

ಅವರು ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್ ಅಧ್ಯಕ್ಷತೆಯಲ್ಲಿ ಬ್ರಹ್ಮಾವರದ ಉನ್ನತಿ ಸಭಾಂಗಣದಲ್ಲಿ ನಡೆದ ಜನ ಸ್ವರಾಜ್ ಸಮಾವೇಶದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಪ್ರಸಕ್ತ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಬಿಜೆಪಿಯ ಸಂಭಾವ್ಯ ಅಭ್ಯರ್ಥಿಯಾಗಿದ್ದು ಪಕ್ಷ ಸೂಕ್ತ ಸೂಚನೆ ನೀಡಲಿದೆ. ಎದುರಾಳಿ ಅಭ್ಯರ್ಥಿ ಈ ಹಿಂದೆ ಏನೇನು ತೊಂದರೆಯನ್ನು ಮಾಡಿದ್ದಾರೆ ಎಂಬುದು ಜನತೆಗೆ ತಿಳಿದಿದೆ. ಈ ನಿಟ್ಟಿನಲ್ಲಿ ಪಕ್ಷ ನಿಷ್ಠೆ ಮತ್ತು ಬದ್ಧತೆಯಿಂದ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಜನ ಸ್ವರಾಜ್ ಸಮಾವೇಶದಲ್ಲಿ ಪ್ರತಿಶತ ನೂರರಷ್ಟು ಉಪಸ್ಥಿತರಿದ್ದು, ಮುಂದೆ ಪಕ್ಷದ ತೀರ್ಮಾನದಂತೆ ಪ್ರಾಶಸ್ತ್ಯದ ಮತವನ್ನು ಪಕ್ಷದ ಅಭ್ಯರ್ಥಿಗೆ ಮಾತ್ರ ನೀಡುವ ಬಗ್ಗೆ ನಿಗಾ ವಹಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಜನ ಸ್ವರಾಜ್ ಸಮಾವೇಶದಲ್ಲಿ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳ ಸಹಿತ ಭಾಗವಹಿಸುವ ಗ್ರಾಮ ಪಂಚಾಯತ್ ಸದಸ್ಯರು ಮಂಡಲವಾರು ತಮ್ಮ ಗ್ರಾಮ ಪಂಚಾಯತ್ ಶಹ ಹೆಸರು ನೊಂದಾಯಿಸಿ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿಯೋರ್ವ ಬಿಜೆಪಿ ಬೆಂಬಲಿತ ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳುವ ಜೊತೆಗೆ ಡಿ.10ರಂದು ಕಡ್ಡಾಯವಾಗಿ ಬಿಜೆಪಿ ಅಭ್ಯರ್ಥಿಗೆ ಮಾತ್ರ 1ನೇ ಪ್ರಾಶಸ್ತ್ಯದ ಮತವನ್ನು ನೀಡಿ ಪ್ರಚಂಡ ಗೆಲುವು ಸಾಧಿಸಲು ಸಹಕರಿಸಬೇಕು ಎಂದರು.

ವಿಧಾನ ಪರಿಷತ್ ಚುನಾವಣೆಯ ಸಂಭಾವ್ಯ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜನ ಸ್ವರಾಜ್ ಸಮಾವೇಶದಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ಬಿಜೆಪಿ ಬೆಂಬಲಿತ ಸದಸ್ಯರ ಒಗ್ಗಟ್ಟಿನ ಪ್ರದರ್ಶನವಾಗಬೇಕು. ಪಕ್ಷದ ಒಂದೇ ಒಂದು ಮತವೂ ಕೂಡ ಇತರರ ಪಾಲಾಗದಂತೆ ಬಹಳ ಎಚ್ಚರ ವಹಿಸಬೇಕು. ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಯಾಗಿ ಸುದೀರ್ಘ ಅವಧಿಗೆ ದೊರೆತ ಅವಕಾಶ ಹಾಗೂ ಅನುಭವ ಪಂಚಾಯತ್ ರಾಜ್ ವ್ಯವಸ್ಥೆಗಳ ಬಗ್ಗೆ ಇನ್ನಷ್ಟು ಪರಿಣಾಮಕಾರಿ ಸುಧಾರಣೆಯ ಚಿಂತನೆಗೆ ಪೂರಕವಾಗಲಿದೆ. ಮುಜರಾಯಿ ಸಚಿವನಾಗಿ ವಿನೂತನ ಸಪ್ತಪದಿ ಸಾಮೂಹಿಕ ವಿವಾಹ ಯೋಜನೆಯ ಮೂಲಕ ಹಾಗೂ ಪ್ರಸಕ್ತ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವನಾಗಿ ಬಡವರ ಪರ ಕಲ್ಯಾಣ ಯೋಜನೆಗಳನ್ನು ರೂಪಿಸುವ ಸದವಕಾಶ ದೊರೆತಿರುವುದು ಸುಯೋಗ. ಡಿ.19ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿ ಸದಸ್ಯರ ಪ್ರತಿಯೊಂದು ಅಮೂಲ್ಯ ಮತವೂ ದೊಡ್ಡ ಅಂತರದ ಗೆಲುವು ಸಾಧಿಸಲು ಶಕ್ತಿ ತುಂಬುವ ಜೊತೆಗೆ ಪಕ್ಷದ ವರ್ಚಸ್ಸು ವೃದ್ಧಿಸಲು ವೇದಿಕೆಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎನ್. ಶಂಕರ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ ಬೈಕಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ್ ಚೇರ್ಕಾಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಂಚಾಲಕ ಅಕ್ಷಯ್ ಶೆಟ್ಟಿ, ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಪಕ್ಷದ ಪ್ರಮುಖರಾದ ಜ್ಞಾನ ವಸಂತ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಗಣೇಶ್ ಕುಲಾಲ್, ಮಂಡಲ ಪದಾಧಿಕಾರಿಗಳು, ಮಂಡಲ ವ್ಯಾಪ್ತಿಯ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮಾಜಿ ಜಿ.ಪಂ. ತಾ.ಪಂ. ಸದಸ್ಯರು, ಮಹಾ ಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರಗಳ ಸಂಚಾಲಕರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನ.19ರ ಜನ ಸ್ವರಾಜ್ ಸಮಾವೇಶ ಯಶಸ್ವಿಗೊಳಿಸಿ: ಕುಯಿಲಾಡಿ ಕರೆ


ಉಡುಪಿ: ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತ ಚಲಾಯಿಸಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ನ.19ರಂದು ಬೆಳಿಗ್ಗೆ 10.30ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿರುವ ಜನ ಸ್ವರಾಜ್ ಸಮಾವೇಶಕ್ಕೆ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಗಳ ಬಿಜೆಪಿ ಬೆಂಬಲಿತ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಪ್ರಮುಖ ಅಪೇಕ್ಷಿತರಾಗಿದ್ದು, ಕಡ್ಡಾಯವಾಗಿ ಭಾಗವಹಿಸಿ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸುವ ಮೂಲಕ ಪಕ್ಷ ನಿಷ್ಠೆ ಮತ್ತು ಬದ್ಧತೆಗೆ ಸಾಕ್ಷಿಯಾಗಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಜನಸ್ವರಾಜ್ ಸಮಾವೇಶದ ಪ್ರಯುಕ್ತ ನ.17ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಬಹುತೇಕ ಈ ವಿಧಾನ ಪರಿಷತ್ ಚುನಾವಣೆಯ ಸಂಭಾವ್ಯ ಅಭ್ಯರ್ಥಿಯಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ಪ್ರಾಯಶಃ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಚಿಂತನೆ ಪಕ್ಷದ ಮುಂದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಸಮಸ್ತ ಬಿಜೆಪಿ ಬೆಂಬಲಿತ ಪ್ರತಿನಿಧಿ ಸದಸ್ಯರು ಡಿ.10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮಾತ್ರವೇ 1ನೇ ಪ್ರಾಶಸ್ತ್ಯದ ಮತವನ್ನು ನೀಡುವ ಮೂಲಕ ದೊಡ್ಡ ಅಂತರದ ಗೆಲುವಿಗೆ ಕಾರಣರಾಗಬೇಕು ಎಂದರು.

ವಿಧಾನ ಪರಿಷತ್ ಚುನಾವಣೆಯ ಸಂಭಾವ್ಯ ಅಭ್ಯರ್ಥಿ, ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಾತನಾಡಿ, ಜಿಲ್ಲೆಯ ಎಲ್ಲಾ ಮಂಡಲಗಳ ವ್ಯಾಪ್ತಿಯಿಂದ ಜನ ಸ್ವರಾಜ್ ಸಮಾವೇಶಕ್ಕೆ ಪ್ರತೀ ಗ್ರಾಮ ಪಂಚಾಯತ್ ಮತ್ತು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳ ಎಲ್ಲಾ ಬಿಜೆಪಿ ಬೆಂಬಲಿತ ಸದಸ್ಯರನ್ನು ಕರೆ ತರುವ ಬಗ್ಗೆ ಜನಪ್ರತಿನಿಧಿಗಳ ಜೊತೆಗೆ ಪಕ್ಷದ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಸಹಿತ ಬೂತ್ ಪದಾಧಿಕಾರಿಗಳು ಹಾಗೂ ಪ್ರಮುಖರು ಸೇರಿ ಯೋಜನೆ ರೂಪಿಸುವ ಮೂಲಕ ಎಲ್ಲರೂ ಒಂದಾಗಿ ಸಂಘಟಿತ ಪ್ರಯತ್ನದ ಮೂಲಕ ಜನ ಸ್ವರಾಜ್ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ನ.19ರ ಜನ ಸ್ವರಾಜ್ ಸಮಾವೇಶದಲ್ಲಿ ಮಂಡಲವಾರು ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಶಹ ನೋಂದಾವಣೆ ಮತ್ತು ಆಸನ ವ್ಯವಸ್ಥೆ ಮಾಡಲಾಗಿದೆ. ಆಯಾ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ತಂಡದ ಜೊತೆ ಕ್ಲಪ್ತ ಸಮಯದಲ್ಲಿ ಉಪಸ್ಥಿತರಿದ್ದು ಸಮಾವೇಶದಲ್ಲಿ ಪೂರ್ತಿಯಾಗಿ ಭಾಗವಹಿಸಿ ಸಹಕರಿಸಬೇಕು ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ ಸ್ವಾಗತಿಸಿ, ಸದಾನಂದ ಉಪ್ಪಿನಕುದ್ರು ವಂದಿಸಿದರು.

Design a site like this with WordPress.com
Get started