ಬೆಂಗಳೂರು: ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇನ್ನಿಲ್ಲ ಎಂಬ ಸುದ್ದಿ ಬರ ಸಿಡಿಲಿನಂತೆ ಬಂದೆರಗಿದೆ.
ದೈಹಿಕ ಕಸರತ್ತು ನಡೆಸುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಪ್ಪುರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪುನೀತ್ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ನೀಡಿದ ಹೇಳಿಕೆಯೇ ಅಭಿಮಾನಿಗಳಲ್ಲಿ ಕಳವಳ ಮೂಡಿಸಿತ್ತು. ಇದೀಗ ಕನ್ನಡ ಚಿತ್ರರಂಗದ ಅಪ್ರತಿಮ ನಟ ಅಗಲಿದ್ದಾರೆ ಎಂಬ ವಾರ್ತೆ ನುಂಗಲಾರದ ತುತ್ತಾಗಿದೆ. ಖ್ಯಾತ ನಟನ ನಿಧನಕ್ಕೆ ಇಡೀ ರಾಜ್ಯವೇ ಶೋಕ ಸಾಗರದಲ್ಲಿ ಮುಳುಗಿದೆ.
ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ಇಂದು ಪುನೀತ್ ರಾಜ್ಕುಮಾರ್ ಗಾಜನೂರಿಗೆ ಭೇಟಿ ನೀಡುವವರಿದ್ದರಂತೆ. ಎರಡು ತಿಂಗಳ ಹಿಂದೆ ಗಾಜನೂರಿಗೆ ಭೇಟಿ ನೀಡಿದ್ದ ಅಪ್ಪು ಸೋದರತ್ತೆ ನಾಗಮ್ಮ ಆರೋಗ್ಯ ವಿಚಾರಿಸಿ ಅಲ್ಲಿಂದ ತೆರಳಿದ್ದರು. ಸೋದರತ್ತೆ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಇಂದೂ ಸಹ ಅವರ ಆರೋಗ್ಯ ವಿಚಾರಿಸುವ ಸಲುವಾಗಿ ಗಾಜನೂರಿಗೆ ತೆರಳಲು ಅಪ್ಪು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆಯ ತಜ್ಞ ವೈದ್ಯ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಪುನೀತ್ ಆರೋಗ್ಯದ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ. ಪುನೀತ್ ತೀವ್ರ ಎದೆನೋವಿನಿಂದ ಬಳಲುತ್ತಿದ್ದರು ಬೆಳಿಗ್ಗೆ 11:30ಕ್ಕೆ ಆಸ್ಪತ್ರೆಗೆ ಆಗಮಿಸಿದ್ದರು. ವಿಕ್ರಂ ಆಸ್ಪತ್ರೆಗೆ ಬರುವ ಮೊದಲೇ ಇಸಿಜಿ ಮಾಡಿಸಿಕೊಂಡು ಬಂದಿದ್ದರು. ಅವರು ಆಸ್ಪತ್ರೆಗೆ ಬರುವಷ್ಟರಲ್ಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
ಪುನೀತ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಆದರೆ ಅವರ ಆರೋಗ್ಯದ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ ಎಂದು ವಿವರಿಸಿದ್ದಾರೆ.
ಉಡುಪಿ:ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಹಮ್ಮಿಕೊಂಡ ಹಡಿಲು ಭೂಮಿ ಕೃಷಿ ಅಂದೋಲನದಡಿ ನಾಟಿ ಮಾಡಲಾದ ಭತ್ತದ ಬೆಳೆಯ ಕಟಾವು ಕಾರ್ಯ ಆರಂಭಗೊಂಡಿದ್ದು, ಅ.27ರಂದು ಅಂಬಲಪಾಡಿ ಗ್ರಾಮದ ಬಂಕೇರಕಟ್ಟ ಬಳಿ ಗದ್ದೆಯ ಭತ್ತದ ಬೆಳೆ ಕಟಾವು ಕಾರ್ಯವನ್ನು ಶಾಸಕ ಕೆ.ರಘುಪತಿ ಭಟ್ ರವರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಪೂಜಾರಿ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಬಿಜೆಪಿ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಸುವರ್ಣ, ಭಾರತಿ ಭಾಸ್ಕರ್, ಮಾಜಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಹಾಗೂ ಸ್ಥಳೀಯರಾದ ವಿನೋದ್ ಪೂಜಾರಿ, ಪ್ರಕಾಶ್, ಅಭಿರಾಜ್ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ:ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಜಗುಡ್ಡೆ ಪ್ರದೇಶದಲ್ಲಿ ಹಡಿಲು ಭೂಮಿ ಕೃಷಿಯ ಪೈರು ಕಟಾವು ಗದ್ದೆಯ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ನಡೆಯಿತು.
ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಅಂಬಲಪಾಡಿ, ಉಡುಪಿ ತಾ.ಪಂ. ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾ.ಪಂ. ಸದಸ್ಯರಾದ ಭಾರತಿ ಭಾಸ್ಕರ್, ರಾಜೇಶ್ ಸುವರ್ಣ, ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ.ರಾಘವೇಂದ್ರ ಕಿಣಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಬ್ಬಾರ್, ಸ್ಥಳೀಯರಾದ ಗಣೇಶ್ ಶೆಣೈ ಅಂಬಲಪಾಡಿ, ಪ್ರಕಾಶ್, ಅಭಿರಾಜ್ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಿರಿಯಡ್ಕದಲ್ಲಿ ಉಚಿತ ಕನ್ನಡಕ ವಿತರಣೆ
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆಯುಷ್ಮಾನ್ ಭಾರತ ಯೋಜನೆಯಡಿ ವಿಶ್ವದಲ್ಲೇ ಮಾದರಿಯಾಗಿರುವ ಉಚಿತ ಆರೋಗ್ಯ ಸೇವೆ, ರೈತ ಸಮ್ಮಾನ್ ಯೋಜನೆ ಮೂಲಕ ದೇಶದ ರೈತರ ಖಾತೆಗೆ ನೇರ ನಗದು ವರ್ಗಾವಣೆ ಸಹಿತ ಹಲವಾರು ಜನಪರ ಯೋಜನೆಗಳ ಜೊತೆಗೆ ದೇಶದ ಸಮಗ್ರತೆ ಮತ್ತು ಅಖಂಡತೆಗೆ ವಿಶೇಷ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿಶ್ವವಂದ್ಯರೆನಿಸಿದ್ದಾರೆ. ಇಂದು ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಕಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಡೆದ ಕಣ್ಣಿನ ಉಚಿತ ತಪಾಸಣಾ ಶಿಬಿರದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ, ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾರ್ಥಕ ಸೇವೆ ನೀಡುವ ಸದುದ್ದೇಶದಿಂದ ಬಿಜೆಪಿ ಜನಸಂಘದ ಮೂಲಕ ಜನ್ಮತಾಳಿದೆ. ಇತರ ರಾಜಕೀಯ ಪಕ್ಷಗಳಂತೆ ಬಿಜೆಪಿ ಕೇವಲ ಚುನಾವಣಾ ಸಂದರ್ಭದಲ್ಲಿ ಮಾತ್ರ ಕೆಲಸ ಮಾಡದೆ, ನಿರಂತರ ಜನ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಈ ನಿಟ್ಟಿನಲ್ಲಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಸಲುವಾಗಿ ಸೇವೆ ಮತ್ತು ಸಮರ್ಪಣ ಅಭಿಯಾನದಡಿ ಸೆ.17ರಿಂದ ಅ.7ರ ವರೆಗೆ ದೇಶದಾದ್ಯಂತ ದಾಖಲೆ ಮಟ್ಟದ ಸೇವಾ ಕಾರ್ಯಗಳು ನಡೆದಿವೆ. ಉಡುಪಿ ಜಿಲ್ಲೆಯಲ್ಲಿಯೂ ರಾಜ್ಯಕ್ಕೆ ಮಾದರಿ ಎಂಬ ರೀತಿಯಲ್ಲಿ ರಕ್ತದಾನ ಶಿಬಿರ, ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, ಸ್ವಚ್ಛತಾ ಅಭಿಯಾನ, ಸಸಿ ನೆಡುವ ಅಭಿಯಾನ ಇತ್ಯಾದಿ ಹಲವಾರು ಸೇವಾ ಕಾರ್ಯಗಳು ದೊಡ್ಡ ಮಟ್ಟದಲ್ಲಿ ನಡೆದು ಜನ ಮೆಚ್ಚುಗೆ ಗಳಿಸಿವೆ ಎಂದರು.
ಇಂದು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದಾದ್ಯಂತ 100 ಕೋಟಿ ಡೋಸ್ ಉಚಿತ ಕೋವಿಡ್ ಲಸಿಕೆ ವಿತರಣೆಯಾಗಿರುವುದು ವಿಶ್ವ ದಾಖಲೆ ಎನಿಸಿದೆ. ವಿಶ್ವದ ಅನೇಕ ರಾಷ್ಟ್ರಗಳು ಕೋವಿಡ್ ಸಂಕಷ್ಟದಿಂದ ಮೂಲಭೂತ ಸೌಲಭ್ಯಗಳ ಕೊರತೆಯಿಂದ ತತ್ತರಿಸಿದ್ದರೂ, ಭಾರತ ಎಲ್ಲಾ ವಿಷಮ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ ಪ್ರಗತಿ ಪಥದತ್ತ ಸಾಗುತ್ತಿದೆ. ಇದಕ್ಕೆ ಕಾರಣರಾಗಿರುವ ಪ್ರಧಾನಿ ಮೋದಿಯವರಿಗೆ ದೇಶವಾಸಿಗಳು ವಂದನೆಯನ್ನು ಸಲ್ಲಿಸಬೇಕಾಗಿದೆ. ಕಣ್ಣುಗಳು ನಮ್ಮ ದೇಹದ ಅಮೂಲ್ಯ ಅಂಗ. ನಮ್ಮ ದೈನಂದಿನ ಬದುಕಿನಲ್ಲಿ ಕನ್ನಡಕ ಯಾವ ರೀತಿಯಲ್ಲಿ ಹಾಸುಹೊಕ್ಕಾಗಿದೆ ಎನ್ನುವುದು ಅದರ ಬಳಕೆದಾರ ಜನತೆಗೆ ಚೆನ್ನಾಗಿ ತಿಳಿದಿದೆ. ಇಂದು ಉತ್ತಮ ಗುಣ ಮಟ್ಟದ ಕನ್ನಡಕವನ್ನು ಉಚಿತವಾಗಿ ವಿತರಿಸುವ ಮೂಲಕ ಬಿಜೆಪಿ ಜನತೆಯ ನಿತ್ಯ ಬದುಕಿನ ಸಂಕಷ್ಟಕ್ಕೆ ಒಂದು ರೀತಿಯಲ್ಲಿ ಸ್ಪಂದಿಸಿದಂತಾಗಿದೆ. ಈ ಸೌಲಭ್ಯ ಪಾಲಾನುಭವಿಗಳ ನಿತ್ಯೋಪಯೋಗಕ್ಕೆ ಸಹಕಾರಿಯಾಗಲಿ ಎಂದು ಕುಯಿಲಾಡಿ ಹೇಳಿದರು.
ಖ್ಯಾತ ಕಣ್ಣಿನ ತಜ್ಞ ಡಾ! ಕೃಷ್ಣ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ಆರೋಗ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಶ್ಲಾಘಿಸಿ, ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯಾದ್ಯಂತ ನಡೆಯುತ್ತಿರುವ ಉಚಿತ ಆರೋಗ್ಯ ಮತ್ತು ಕಣ್ಣಿನ ಶಿಬಿರಗಳ ಆಯೋಜನೆಯನ್ನು ಪ್ರಶಂಸಿಸಿದರು.
ಜಿಲ್ಲೆಯಾದ್ಯಂತ ಅನೇಕ ಉಚಿತ ಕಣ್ಣಿನ ತಪಾಸಣಾ ಶಿಬಿರ, ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣೆಗೆ ಸಹಕರಿಸಿರುವ ಜಿಲ್ಲೆಯ ಖ್ಯಾತ ನೇತ್ರ ತಜ್ಞ ಡಾ! ಕೃಷ್ಣ ಪ್ರಸಾದ್ ರವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು. ನೇತ್ರ ತಪಾಸಣಾ ಶಿಬಿರದ 346 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಬಿಜೆಪಿ ಹಿರಿಯ ಕಾರ್ಯಕರ್ತ ವಿಶ್ವಾಸ್ ಭಟ್, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಾಂಬೆಟ್ಟು, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ವಿಜೇತ್ ಕುಮಾರ್ ಬೆಳ್ಳರ್ಪಾಡಿ ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಹ ಸಂಚಾಲಕ ಡಾ! ವಿದ್ಯಾಧರ ಶೆಟ್ಟಿ ವಂದಿಸಿದರು.
*ದೇಶದಾದ್ಯಂತ 100 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್ ವಿತರಣೆಗೈದು ಭಾರತ ವಿಶ್ವ ದಾಖಲೆಗೈದಿರುವ ಹಿನ್ನೆಲೆಯಲ್ಲಿ ಇಂದು ದಿನಾಂಕ 26-10-2021 ರಂದು ಗ್ರಾಮಾಂತರ ಬಿಜೆಪಿ ವತಿಯಿಂದ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ಕೋರೋನ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಈ ಸಾಧನೆಗೆ ಶ್ರಮಿಸಿದ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದರು.*
*ಈ ಸಂದರ್ಭದಲ್ಲಿ ವೈದ್ಯರು, ಶುಶ್ರೂಷಕರು ಹಾಗೂ ಆಶಾ ಕಾರ್ಯಕರ್ತರನ್ನು ಸನ್ಮಾನಿಸಿದರು.*
*ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಉಪಾಧ್ಯಕ್ಷರಾದ ರಘುಪತಿ ಬ್ರಹ್ಮಾವರ, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗುಲಾಬಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಪೂಜಾರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ವಾರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ದೇವಾನಂದ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ ಹಾಗೂ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಜಿತ್ ಶೆಟ್ಟಿ ಮತ್ತು ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.*
ಕನ್ನಡ ಶಾಲೆಗಳು ನಿಧಾನವಾಗಿ ಹೇಗೆ ಅಂತ್ಯಗೊಳ್ಳುತ್ತಿವೆ ಎಂದು ಎಲ್ಲರಿಗೂ ತಿಳಿದ ವಿಚಾರ. ಆದರೆ ಇದಕ್ಕೆ ಸೆಡ್ಡು ಹೊಡೆದು ನಮ್ಮ ಊರಿನ ಶಾಲೆ ಮುಚ್ಚಬಾರದು ಅದು ನಮ್ಮೂರ ಹೆಮ್ಮೆ ಎಂದು ಕಳೆದ ಐದು ವರ್ಷಗಳಿಂದ ಶಾಲಾ ದತ್ತು ಸ್ವೀಕಾರ ಎನ್ನುವ ಕಾರ್ಯಕ್ರಮ ನಡೆಸಿ ಮುಚ್ಚುವ ಹಂತದಲ್ಲಿದ್ದ ಅಲೆವೂರು ಕರ್ವಾಲಿನ ಸರಕಾರಿ ಕನ್ನಡ ಶಾಲೆಯನ್ನು ಯಶಸ್ವಿಯಾಗಿ ನಡೆಸುತ್ತಿರುವ ಅಲೆವೂರು ಕರ್ವಾಲಿನ ಹೆಮ್ಮೆಯ ಸಂಸ್ಥೆ ಶ್ರೀ ವಿಷ್ಣು ಸ್ನೇಹ ಬಳಗ ಇದೀಗ ಮತ್ತೊಂದು ನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದೇ
*ನಮ್ಮೂರ ಶಾಲಾ ಉತ್ಸವ*
ಕನ್ನಡ ರಾಜ್ಯೋತ್ಸವ ಅಂಗವಾಗಿ ಈ ಶಾಲಾ ಅಭಿಮಾನಿಗಳು ಊರವರು ಸೇರಿಕೊಂಡು ಇದೇ ಬರುವ ಅಕ್ಟೋಬರ್ 31 ನೇ ತಾರೀಕು ಭಾನುವಾರ ಶಾಲೆಗೆ ದಾನಿಗಳ ಸಹಾಯದಿಂದ ಶ್ರಮದಾನದ ಮೂಲಕ ಸುಣ್ಣ ಬಣ್ಣ ಹೂದೋಟ ಪೌಷ್ಟಿಕ ತೋಟ ಸ್ವಚ್ಚತಾ ಕಾರ್ಯಕ್ರಮ ನಡೆಸಿ ಕೊರೊನದ ನಂತರದಲ್ಲಿ ಪ್ರಾರಂಭವಾಗುವ ಶಾಲೆಗೆ ಮತ್ತಷ್ಟು ಮೆರುಗು ನೀಡಲು ಯೋಜನೆ ತಯಾರಿಸಿದೆ. ಗ್ರಾಮಸ್ಥರೆಲ್ಲ ಉತ್ಸುಕತೆಯಿಂದ ಭಾಗವಹಿಸಲು ತಯಾರಿ ನಡೆಸಿತ್ತಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಲು ಕರ್ನಾಟಕ ಸರಕಾರದ ಘನ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಕ್ಷೇತ್ರ ಸಚಿವರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನಕರ್ ಬಾಬು, ಉದ್ಯಮಿಗಳಾದ ಕುಯಿಲಾಡಿ ಸುರೇಶ್ ನಾಯಕ್, ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಸುವರ್ಣ ಮತ್ತಿತರ ಗಣ್ಯರು ಆಗಮಿಸಲಿರುವರು.
ಕಳೆದ ಐದು ವರ್ಷಗಳಿಂದ ಶಾಲಾ ಮಕ್ಕಳಿಗೆ ಉಚಿತ ವಾಹನ ಸೌಕರ್ಯ, ಬ್ಯಾಗ್, ಪುಸ್ತಕ ಕೊಡೆ ಇತ್ಯಾದಿಗಳನ್ನು ನೀಡಿ ಶಾಲೆಗೆ ಬೇಕಾಗುವ ಎಲ್ಲ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿರುವ ಸಂಸ್ಥೆಗೆ ಸಾರ್ವಜನಿಕರು ಮತ್ತಷ್ಟು ಸಹಕಾರ ನೀಡಬೇಕೆಂದು ಶ್ರೀ ವಿಷ್ಣು ಸ್ನೇಹ ಬಳಗದ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಇವರು ವಿನಂತಿಸಿರುತ್ತಾರೆ.
ಕಾಪು: ಬಿಜೆಪಿ ಕಚೇರಿಯಲ್ಲಿ ಮಂಡಲ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಮೋರ್ಚ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರ ಪದಾಧಿಕಾರಿಗಳ ಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪದಾಧಿಕಾರಿಗಳಿಗೆ ಪಕ್ಷ ನೂತನವಾಗಿ ಕೊಟ್ಟ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿ ಎಲ್ಲ ಬೂತ್ ಗಳಲ್ಲಿಯೂ ಕಾರ್ಯಕ್ರಮ ನಡೆಯುವಂತಹ ಶಕ್ತಿಕೇಂದ್ರ ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದರು. ಕಾಪು ಕ್ಷೇತ್ರ ಶಾಸಕರಾದ ಲಾಲಾಜಿಯವರು, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಪದಾಧಿಕಾರಿಗಳ ಜವಾಬ್ದಾರಿಗಳನ್ನು ನೆನಪಿಸಿದರು. ಜಿಲ್ಲ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಗೊಳಿಸಿ ಕಾರ್ಯಕ್ರಮಗಳನ್ನು ಮಾಡಬೇಕು, ಮುಂದೆ ಚುನಾವಣೆಗಳ ಸಾಲು ಇದೆ, ಎಲ್ಲ ಚುನಾವಣೆಗಳನ್ನು ಗೆಲ್ಲಬೇಕಾದರೆ ಬೂತ್ ಮಟ್ಟದಲ್ಲಿ ಸಂಘಟನಾತ್ಮಕವಾಗಿ ಸಭೆಗಳನ್ನು ನಡೆಸಬೇಕು ಎಂದರು.
ನಿಕಟಪೂರ್ವ ಬಿಜೆಪಿ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಉಪಸ್ಥಿತರಿದ್ದರು.
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ 100 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸಿ ವಿಶ್ವ ದಾಖಲೆಗೈದಿರುವ ಸುಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ! ಹೇಮಂತ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪ್ರವೀಣ ಕೆ., ನಗರ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸರಸ್ವತಿ ಕೆ. ಶ್ರೀಯಾನ್ ರವರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಉಪಸ್ಥಿತರಿದ್ದರು.
ವಿಶ್ವದ ಅತೀ ದೊಡ್ಡ ಕೋವಿಡ್ ಲಸಿಕಾ ಅಭಿಯಾನದಲ್ಲಿ ಅ.21ರಂದು 100 ಕೋಟಿ ಡೋಸ್ ಲಸಿಕೆ ವಿತರಣೆಯನ್ನು ಪೂರೈಸಿ ವಿಶ್ವ ದಾಖಲೆ ಬರೆದಿರುವ ಭಾರತ ನಮ್ಮ ಹೆಮ್ಮೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಈ ಮಹತ್ಕಾರ್ಯದ ನೇತೃತ್ವ ವಹಿಸಿ ಅಭಿಯಾನದ ಯಶಸ್ಸಿಗೆ ಹಗಲಿರುಳು ಶ್ರಮಿಸಿರುವ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾರ್ದಿಕ ಅಭಿನಂದನೆಗಳು. ಈ ವಿಕ್ರಮ ಸಾಧನೆಯಲ್ಲಿ ಪಾಲುದಾರರಾದ ದೇಶದ ವಿಜ್ಞಾನಿಗಳು, ವೈದ್ಯಕೀಯ ಸಿಬ್ಬಂದಿಗಳು, ಜಿಲ್ಲಾಡಳಿತ, ಅಧಿಕಾರಿ ವರ್ಗ, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಹಾಗೂ ಲಸಿಕೆ ವಿತರಣೆಗೆ ಸಹಕರಿಸಿರುವ ಸಮಾಜ ಸೇವಾ ಸಂಘ-ಸಂಸ್ಥೆಗಳಿಗೆ ಜಿಲ್ಲಾ ಬಿಜೆಪಿ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.