ಆರೋಗ್ಯ ಶಿಬಿರಗಳು ಗ್ರಾಮೀಣ ಜನತೆಗೆ ವರದಾನ: ಕುಯಿಲಾಡಿ ಸುರೇಶ್ ನಾಯಕ್


ಉಡುಪಿ: ಕೋವಿಡ್ ಸಂಕಷ್ಟದ ಕಾಲಘಟ್ಟದಲ್ಲಿ ಬಿಜೆಪಿಯಿಂದ ದಾಖಲೆ ಮಟ್ಟದಲ್ಲಿ ಆರೋಗ್ಯ ಶಿಬಿರಗಳು ನಡೆಯುತ್ತಿರುವುದು ಗ್ರಾಮೀಣ ಪ್ರದೇಶದ ಜನತೆಗೆ ವರದಾನವಾಗಿ ಪರಿಣಮಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಉಡುಪಿ ನಗರ ವ್ಯಾಪ್ತಿಯ ಅಂಬಲಪಾಡಿ- ಕಡೆಕಾರು ಮಹಾ ಶಕ್ತಿಕೇಂದ್ರದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಅ.17 ರವಿವಾರ ಅಂಬಲಪಾಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕೋವಿಡ್ ಲಸಿಕೆ ವಿತರಣಾ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಕಾರ್ಯಕರ್ತರು ಕೇವಲ ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರದೆ ನಿರಂತರ ಜನಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದಕ್ಕೆ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳೇ ಸಾಕ್ಷಿ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿ ಸೆ.17ರಿಂದ ಅ.7ರವರಿಗೆ 20 ದಿನಗಳ ಪರ್ಯಂತ ಸೇವೆ ಮತ್ತು ಸಮರ್ಪಣ ಅಭಿಯಾನವು ರಾಜ್ಯಕ್ಕೇ ಮಾದರಿಯಾಗಿ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಅಭಿಯಾನದ ಅಂಗವಾಗಿ 9 ವಿಧದ ಸೇವಾ ಕಾರ್ಯಗಳ ಸಹಿತ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ, ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಹಾಗೂ ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸೆ ಇತ್ಯಾದಿ ಶಿಬಿರಗಳು ಹಲವಾರು ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆದು ಜನಮನ್ನಣೆ ಗಳಿಸಿದೆ. ಇಂದು ಕೇಂದ್ರ ಮತ್ತು ರಾಜ್ಯ ಸರಕಾರಗಳು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಅಲ್ಲಲ್ಲಿ ಸಂಘಟಿತರಾಗಿ ಜನತೆಗೆ ಸಾರ್ಥಕ ಆರೋಗ್ಯ ಸೇವೆಯನ್ನು ಒದಗಿಸುವ ಸತ್ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಪ್ರಶಂಸನೀಯ ಎಂದು ಕುಯಿಲಾಡಿ ಹೇಳಿದರು.

ಉಡುಪಿ ತಾಲೂಕು ವೈದ್ಯಾಧಿಕಾರಿ ಡಾ! ವಾಸುದೇವ ಉಪಾಧ್ಯಾಯ ಮಾತನಾಡಿ, ಆರೋಗ್ಯದ ಕಾಳಜಿ ಹಾಗೂ ನಿಯಮಿತ ಆರೋಗ್ಯ ತಪಾಸಣೆ ಎಲ್ಲರ ಆದ್ಯ ಕರ್ತವ್ಯವಾಗಿದೆ. ಕೊರೋನಾ ಸೋಂಕಿನ ತೀವ್ರತೆ ಕಡಿಮೆಯಾಗುತ್ತಿರುವ ಈ ಸನ್ನಿವೇಶದಲ್ಲಿ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಜನತೆಗೆ ಅನುಕೂಲಕರ ಆರೋಗ್ಯ ಸೇವೆಯನ್ನು ನೀಡುವಲ್ಲಿ ಸಫಲವಾಗಿವೆ. ಸರಕಾರ ಆರೋಗ್ಯ ಇಲಾಖೆಯ ಸಬಲೀಕರಣಕ್ಕೆ ಒತ್ತು ನೀಡಿದೆ. ಕೋವಿಡ್ ಲಸಿಕೆಯ ಯಾವುದೇ ಕೊರತೆ ಇಲ್ಲ. ಉಚಿತ ಕೋವಿಡ್ ಲಸಿಕೆ ವಿತರಣೆಗೆ ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳು ಸಹಕರಿಸುತ್ತಿದ್ದು, ಲಸಿಕೆ ಪಡೆಯದೇ ಇರುವ ಸಾರ್ವಜನಿಕರು ಲಭ್ಯವಿರುವ ಲಸಿಕಾ ಕೇಂದ್ರಗಳಲ್ಲಿ ಲಸಿಕೆಯನ್ನು ಪಡೆಯಬಹುದು ಎಂದರು.

ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ ಕಪ್ಪೆಟ್ಟು, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ! ಹೇಮಂತ್, ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಬಿಜೆಪಿ ಅಂಬಲಪಾಡಿ ಕಡೆಕಾರು ಮಹಾ ಶಕ್ತಿಕೇಂದ್ರದ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಸಹ ಸಂಚಾಲಕ ಉಮೇಶ್ ಪೂಜಾರಿ ಕುತ್ಪಾಡಿ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಣಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ನಗರ ಆರೋಗ್ಯ ಸಹಾಯಕಿ ಪ್ರವೀಣ ಕೆ., ಅಂಬಲಪಾಡಿ ನಗರ ಆಶಾ ಕಾರ್ಯಕರ್ತೆ ಸರಸ್ವತಿ ಕೆ. ಶ್ರೀಯಾನ್, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂಧಿಗಳು, ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸೇವಾ ಕಾರ್ಯದಲ್ಲಿ ಹೊಸ ಭಾಷ್ಯ ಬರೆದ ಸೇವೆ ಮತ್ತು ಸಮರ್ಪಣ ಅಭಿಯಾನ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ:ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ಸೆ.17ರಂದು ಚಾಲನೆಗೊಂಡು ಅವರು ಚುನಾಯಿತ ಸರಕಾರದ ನೇತೃತ್ವವನ್ನು ವಹಿಸಿ 20 ವರ್ಷಗಳು ತುಂಬಿರುವ ದಿನ ಅ.7ರ ವರೆಗೆ ಉಡುಪಿ ಜಿಲ್ಲೆಯಾದ್ಯಂತ 20 ದಿನಗಳ ಪರ್ಯಂತ ನಡೆದ ಸೇವೆ ಮತ್ತು ಸಮರ್ಪಣ ಅಭಿಯಾನವು ಯಶಸ್ಸಿನ ಪಥದಲ್ಲಿ ಸಾಗಿ ಸಾರ್ಥಕ ಸೇವಾ ಕಾರ್ಯಗಳ ಮೂಲಕ ಹೊಸ ಭಾಷ್ಯ ಬರೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಅ.10 ರವಿವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ ಸಭೆಯ ಅಧ್ಯಕ್ಷತೆ ವಹಿಸಿ, ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಸೇವೆಗೆ ಇನ್ನೊಂದು ಹೆಸರು ಬಿಜೆಪಿ ಎನ್ನುವ ರೀತಿಯಲ್ಲಿ ಸೇವೆ ಮತ್ತು ಸಮರ್ಪಣ ಅಭಿಯಾನವು ಎಲ್ಲರ ಸಂಘಟಿತ ಪ್ರಯತ್ನದ ಫಲವಾಗಿ ನಿಗದಿತ 9 ವಿಧದ ಸೇವಾ ಚಟುವಟಿಕೆಗಳಡಿಯಲ್ಲಿ ಗರಿಷ್ಠ ಜನಸೇವಾ ಕಾರ್ಯಗಳೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಈ ವಿನೂತನ ಅಭಿಯಾನದಲ್ಲಿ ಕ್ರಿಯಾಶೀಲತೆ ಮತ್ತು ಬದ್ಧತೆಯಿಂದ ತೊಡಗಿಸಿಕೊಂಡು ಅಭಿಯಾನವನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಆಯೋಜಿಸಲು ಶ್ರಮ ವಹಿಸಿರುವ ಅಭಿಯಾನದ ಜಿಲ್ಲಾ ಸಂಚಾಲಕರು, ಜಿಲ್ಲಾ ಮತ್ತು ಮಂಡಲಗಳ 9 ಕಾರ್ಯಕ್ರಮಗಳ ಸಂಚಾಲಕರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳ ಸಮರ್ಪಣಾಭಾವದ ಸೇವೆ ಅಭಿನಂದನೀಯ ಎಂದು ಕುಯಿಲಾಡಿ ಹೇಳಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ, 20 ದಿನಗಳ ಪರ್ಯಂತ ನಡೆದ ಸೇವೆಯೆಂಬ ಯಜ್ಞವು ನವರಾತ್ರಿಯ ಪರ್ವ ಕಾಲದಲ್ಲಿ ಸಮರ್ಪಣೆಯಾಗುತ್ತಿರುವುದು ಬಹಳ ಅರ್ಥಪೂರ್ಣವಾಗಿದೆ. ಸೇವೆ ಮತ್ತು ಸಮರ್ಪಣ ಅಭಿಯಾನದಲ್ಲಿ ಪಾಲ್ಗೊಂಡ ಎಲ್ಲರಿಗೂ ಅಭಿನಂದನೆಗಳು ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಬಿಜೆಪಿ ಪಕ್ಷ ಸಂಘಟನೆಯ ಜೊತೆಗೆ ಸೇವಾ ಪರ್ವದ ವಿನೂತನ ಅವಕಾಶವನ್ನು ನೀಡಿದೆ. ವಿದ್ಯೆಯೊಂದಿಗೆ ಸಂಸ್ಕಾರವನ್ನು ಜೋಡಿಸುವ ನಿಟ್ಟಿನಲ್ಲಿ ಪಕ್ಷವು ಸೇವೆ ಮತ್ತು ಸಮರ್ಪಣ ಅಭಿಯಾನದಡಿ ವಿಶೇಷ ಕಾರ್ಯಕ್ರಮಗಳನ್ನು ನೀಡಿದೆ. ಸ್ವಚ್ಛತೆಯಂತಹ ಪ್ರಕ್ರಿಯೆಗಳು ನಮ್ಮ ಸ್ವಯಂ ಕ್ಷೇತ್ರಗಳಲ್ಲಿ ಅನುಷ್ಠಾನವಾಗಬೇಕಿದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಿದ ಎಲ್ಲರೂ ಅಭಿನಂದನಾರ್ಹರು ಎಂದರು.

ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮಾತನಾಡಿ, ನಡೆ ನುಡಿ ಕಾರ್ಯಗಳಲ್ಲಿ ಸಾಮ್ಯತೆ ಹೊಂದಿರುವ ಪ್ರಧಾನಿ ಮೋದಿಯವರ ಸೇವಾ ತತ್ಪರತೆ ಅನುಕರಣೀಯ. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ತತ್ವ ಸಿದ್ಧಾಂತ, ಸಂಘಟನೆಗಾಗಿ ಸಮರ್ಪಿತಗೊಂಡ ಬದುಕಿನ ವಿಚಾರಧಾರೆ ಸ್ಮರಣೀಯ. ಮಹಾತ್ಮಾ ಗಾಂಧಿಯವರ ಸ್ವದೇಶಿ ಚಿಂತನೆ, ಸ್ವಚ್ಛತೆ, ಸೇವಾ ಮನೋಭಾವ ಅದರ್ಶಪೂರ್ಣ. ಈ ಎಲ್ಲಾ ಸದ್ವಿಚಾರಗಳಿಗೆ ಒತ್ತು ನೀಡಿರುವ ಪಕ್ಷದ ಅತೀ ದೊಡ್ಡ ಅಭಿಯಾನ ಎಂದೆನಿಸಿರುವ ಸೇವೆ ಮತ್ತು ಸಮರ್ಪಣ ಅಭಿಯಾನವು ಉಡುಪಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿರುವುದು ಸಂತಸ ತಂದಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ, ಜಿಲ್ಲಾ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಯುವ ಮೋರ್ಚಾ ಸಂಯೋಜನೆಯಲ್ಲಿ ಹಿರಿಯ ಯಕ್ಷಗಾನ ವಿದ್ವಾಂಸ ಮತ್ತು ಮದ್ದಳೆ ವಾದಕ ಬಾಲಕೃಷ್ಣ ಬಿರ್ತಿಯವರನ್ನು ಸನ್ಮಾನಿಸಲಾಯಿತು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಅಭಿಯಾನದ ಜಿಲ್ಲಾ ಸಂಚಾಲಕ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು. ಜಿಲ್ಲಾ ಸಹ ವಕ್ತಾರ ಹಾಗೂ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ಸಂಚಾಲಕ ಗಣೇಶ್ ಬ್ರಹ್ಮಾವರ ವಂದಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ನೇತೃತ್ವದ ಹಿಮ್ಮೇಳ ಮತ್ತು ನುರಿತ ಅತಿಥಿ ಕಲಾವಿದರ ತಂಡದಿಂದ ಭೀಷ್ಮ ವಿಜಯ ಯಕ್ಷಗಾನ ತಾಳ ಮದ್ದಳೆ ಪ್ರದರ್ಶನಗೊಂಡಿತು.

ಕೊಡಂಗಳ ಬೂತ್ ಸಂಖ್ಯೆ 52 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ

ಉಡುಪಿ:ಕಾಪು ಕ್ಷೇತ್ರದ ಮಣಿಪುರ ಪಂಚಾಯತ್ ವ್ಯಾಪ್ತಿಯ ಕೊಡಂಗಳ‌ ಕನರಾಡಿ ಬೂತ್ ಸಂಖ್ಯೆ 52 ರ ಬಿಜಪಿ ಬೂತ್ ಅಧ್ಯಕ್ಷರಾದ ‌ಪ್ರಕಾಶ್ ಕುಲಾಲ್ ಇವರ ಮನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನಾಮಫಲಕ ನೀಡುವ ಉದ್ದೇಶ ಹಾಗೂ ಬೂತ್ ಅಧ್ಯಕ್ಷರ ಕರ್ತವ್ಯ ಜವಾಬ್ದಾರಿಯನ್ನು ವಿವರಿಸಿ ಶುಭ ಹಾರೈಸಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿ ಪಕ್ಷ ಬೆಳೆದು ಬಂದ ಹಾದಿ ಸವಾಲುಗಳು ಹಾಗೂ ಪ್ರಸ್ತುತ ಪರಿಸ್ಥಿತಿ ವಿವರಿಸಿದರು. ಮರ್ಣೆ ಕೊಡಂಗಳದ ಅಭಿವ್ರಧ್ಧಿಯ ಬಗ್ಗೆಯೂ ಚರ್ಚಿಸಿ ಸಾರ್ವಜನಿಕರಿಂದ ಅಹವಾಲು‌ಸ್ವೀಕರಿಸಿ ಬೂತ್ ಅಧ್ಯಕ್ಷರಿಗೆ ಶುಭಕೋರಿದರು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರ ಪ್ರಮುಖ್ ಪ್ರಜ್ವಲ್ ಹೆಗ್ಡೆ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಹಾಗೂ ಪಂಚಾಯತ್ ಸದಸ್ಯರಾದ ಪದ್ಮನಾಭ ನಾಯಕ್ ಪಂಚಾಯತ್ ಸದಸ್ಯರುಗಳಾದ ಸಂತೋಷ್ ಶೆಟ್ಟಿ, ಆಶಾ, ವಾಣಿ ಪಕ್ಷದ ಪ್ರಮುಖರಾದ ಮೋಹನ್‌ ನಾಯ್ಕ್, ಸಂಧ್ಯಾ, ಗಣಪತಿ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯರಾದ ಶ್ರೀನಿವಾಸ್ ನಾಯ್ಕ್, ಹಾಗೂ ಫ್ರಾನ್ಸಿಸ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಬೇಟಿ

ಉಡುಪಿ: ಕರ್ನಾಟಕ ಸರಕಾರದ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಅ.9ರಂದು ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಗೃಹ ಸಚಿವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ವಂದಿಸಿದರು.

ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ

ಉಡುಪಿ: ಕರ್ನಾಟಕ ಸರಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರವರು ಅ.8ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಸಚಿವರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ಸಚಿವರು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಅಹವಾಲುಗಳನ್ನು ಸ್ವೀಕರಿಸಿದರು. ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಮುಂತಾದವರು ಉಪಸ್ಥಿತರಿದ್ದರು.

ಭಾರತೀಯ ಜನತಾ ಪಾರ್ಟಿ ಕಾಪು‌ ಹಾಗೂ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಅಲೆವೂರು ಸಂತೆಯಲ್ಲಿ ಬಟ್ಟೆ ಚೀಲ ವಿತರಣೆ

ಅಲೆವೂರು ಸಂತೆಯಲ್ಲಿ‌ ಇಂದು ಬಿಜೆಪಿ ಕಾಪು ಮಂಡಲ ಹಾಗೂ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಅಲೆವೂರು ಜೋಡುರಸ್ತೆ ಬಳಿ ಸಂತೆಯಲ್ಲಿ ಮೋದೀಜಿ ಜನ್ಮದಿನದ ಅಂಗವಾಗಿ *ಸೇವೆ ಮತ್ತು ಸಮರ್ಪಣೆ* ಕಾರ್ಯಕ್ರಮದ ಅಂಗವಾಗಿ ಬಟ್ಟೆ ಚೀಲ ವಿತರಿಸಿ ಗ್ರಾಹಕರಿಗೆ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸುವ ಕಾರ್ಯಕ್ರಮ‌ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪು ಬಿಜೆಪಿ ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಉದ್ಯಾವರ ಬಿಜೆಪಿ ಯುವಮೋರ್ಚ ಮಾಹಾಶಕ್ತಿಕೇಂದ್ರದ ಅಧ್ಯಕ್ಷರಾದ ಅಶೋಕ್ ಶೆಟ್ಟಿಗಾರ್, ನಿಕಟಪೂರ್ವ ತಾಲೂಕು ಪಂಚಾಯತ್ ಸದಸ್ಯರಾದ ಬೇಬಿ ರಾಜೇಶ್, ಪಂಚಾಯತ್ ಸದಸ್ಯರಾದ ಅವಿನಾಶ್ ಶೆಟ್ಟಿಗಾರ್, ಪಕ್ಷದ ಪ್ರಮುಖರಾದ ರವಿ ಸೇರಿಗಾರ್, ಅರುಣ್ ಆಚಾರ್ಯ, ನಾರಾಯಣ ಆಚಾರ್ಯ, ರೋಷನ್ ಮತ್ತಿತರರು ಉಪಸ್ಥಿತರಿದ್ದರು. ಸುಮಾರು 100 ಬ್ಯಾಗ್ ವಿತರಿಸಲಾಯಿತು.

ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಬೇಟಿ – ಅಹವಾಲು ಸ್ವೀಕಾರ

ಉಡುಪಿ: ಕರ್ನಾಟಕ ಸರಕಾರದ ಮಾನ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ರವರು ಸೆ.8ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕ ಬೇಟಿಯೊಂದಿಗೆ ಅಹವಾಲು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ಮುಂತಾದವರು ಉಪಸ್ಥಿತರಿದ್ದರು.

ನಾಳೆ ಅ.9 ಶನಿವಾರ ಬೆಳಿಗ್ಗೆ 10.30ಕ್ಕೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ

ಉಡುಪಿ: ಕರ್ನಾಟಕ ಸರಕಾರದ ನೂತನ ಗೃಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅರಗ ಜ್ಞಾನೇಂದ್ರರವರು ನಾಳೆ ಅ.9 ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಗೃಹ ಸಚಿವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಗೌರವಿಸಲಾಗುವುದು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ

ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ಕಟಪಾಡಿ ಎಸ್ ವಿ ಎಸ್ ಕಾಲೇಜಿನ ಬಳಿ ನಡೆಯಿತು. ಸಾವಿರ ಸಾಧನೆಗಳ ಸರದಾರ, ಸಾಗರದಷ್ಟು ಯೋಜನೆಗಳ ಹರಿಕಾರ ನರೇಂದ್ರ ಮೋದೀಜಿಯವರಿಗೆ ನೂರಾರು‌ ವಿದ್ಯಾರ್ಥಿಗಳು ಸಂತೋಷದಿಂದ ಪತ್ರ ಬರೆದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷ ಕುಮಾರ್ ಮೂಡುಬೆಳ್ಳೆ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ್ ಕೃಷ್ಣ ರಾವ್ ಮಂಡಲ ಉಪಾಧ್ಯಕ್ಷರಾದ ಪವಿತ್ರ ಶೆಟ್ಟಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ಉದ್ಯಾವರ ಅಭಿರಾಜ್ ಸುವರ್ಣ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಆಡ್ವೆ ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ ಶಕ್ತಿಕೇಂದ್ರ ಪ್ರಮುಖ್ ಸಂತೋಷ್ ಕುಮಾರ್ ಉಪಸ್ಥಿತರಿದ್ದರು

“ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲಗಳ ಸಾರ್ವಜನಿಕರಿಗೆ ವಿತರಣೆ

ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜಿ ಯವರ 71ನೇ ಜನ್ಮದಿನದ ಪ್ರಯುಕ್ತ “ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲ ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಕಾಂತ್ ನಾಯಕ್ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ ಕುಮಾರ್ ಮೂಡುಬೆಳ್ಳೆ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ್ ಕೃಷ್ಣರಾವ್ ನಿಕಟ ಪೂರ್ವ ಪುರಸಭಾ ಅಧ್ಯಕ್ಷರಾದ ಅನಿಲ್ ಕುಮಾರ್ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಕಾರ್ಯದರ್ಶಿ ಸತೀಶ್ ಪೂಜಾರಿ ಉದ್ಯಾವರ ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಆಡ್ವೆ ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ ಉಪಸ್ಥಿತರಿದ್ದರು. ಸುಮಾರು 100 ಬಟ್ಟೆ ಚೀಲಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

Design a site like this with WordPress.com
Get started