ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ




ಉಡುಪಿ:ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿಯನ್ನು ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್  ಮಾತನಾಡಿ, ಸುಧೀರ್ಘ 27 ವರ್ಷಗಳ ಬಳಿಕ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೊದಲ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ ಮಹಿಳಾ ಶಾಸಕಿ ರೇಖಾ ಗುಪ್ತಾ ಅವರನ್ನು ರಾಷ್ಟ್ರ ರಾಜಧಾನಿಯ ಗದ್ದುಗೆಗೆ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ದೆಹಲಿಯ ಮುಖ್ಯಮಂತ್ರಿ ಗಾದಿಗೆ ಅನೇಕ ಮಂದಿ ಘಟಾನುಘಟಿ ಶಾಸಕರು ಸಮರ್ಥರಾಗಿದ್ದರೂ, ಪಕ್ಷದ ಓರ್ವ ನೂತನ ಮಹಿಳಾ ಶಾಸಕಿಗೆ ದೆಹಲಿಯ ಆಡಳಿತದ ಚುಕ್ಕಾಣಿಯನ್ನು ಹಿಡಿಯುವ ಅವಕಾಶವನ್ನು ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ಪ್ರಮುಖರಿಗೆ ಅಭಿನಂದನೆಗಳು ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಜಾಲಾ ಸತೀಶ್, ತಾರಾ ಆಚಾರ್ಯ, ವಿದ್ಯಾ ಶ್ಯಾಮ್, ಸುಮಾ ಆರ್. ಕುಮಾರ್, ಲೀಲಾ ಆರ್. ಆಮೀನ್, ಕವಿತಾ ಪೂಜಾರಿ, ಲೀನಾ, ಉಡುಪಿ ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಧಾ ಪೈ, ಯಶೋಧಾ ರಾಜೇಂದ್ರ, ಸರೋಜಾ ಶೆಣೈ, ಆಶಲತಾ ಹೆಗ್ಡೆ, ದೀಪಾ ಪೈ, ಪ್ರಜ್ಞಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಕುಂಭಮೇಳ ಅಧ್ಯಯನ ಪ್ರವಾಸಕ್ಕೆ ತನ್ನ ಶಾಸಕರಿಗೆ ಲಕ್ಷಾಂತರ ಹಣ ವ್ಯಯಿಸುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಜ್ವಲಂತ ಸಮಸ್ಯೆಗಳು ಕಾಣದಾಯಿತೇ : ರೇಷ್ಮಾ ಉದಯ ಶೆಟ್ಟಿ





ಉಡುಪಿ: ‘ಗಂಗೆಯಲ್ಲಿ ಮಿಂದರೆ ಬಡತನ ನೀಗುತ್ತದೆಯೇ’ ಎಂದು ಪ್ರಶ್ನಿಸಿ ಕೋಟ್ಯಾoತರ ಆಸ್ತಿಕ ಹಿಂದೂಗಳ ಭಾವನೆಗಳಿಗೆ ಘಾಸಿಯಂನ್ನುಟುಮಾಡಿದ್ದ ಎಐಸಿಸಿ ಅಧ್ಯಕ್ಷ ಖರ್ಗೆ ಉವಾಚದ ನಡುವೆಯೇ ಸದನದ ವಸತಿ ಸಮಿತಿ ಸದಸ್ಯರಿಗೆ, ಅದರಲ್ಲೂ ಗರಿಷ್ಠ ಸಂಖ್ಯೆಯ ಕಾಂಗ್ರೆಸ್ ಶಾಸಕರಿಗೆ ಕುಂಭಮೇಳ (ಉತ್ತರ ಭಾರತ) ಅಧ್ಯಯನ ಪ್ರವಾಸಕ್ಕೆ ರೂ.50 ಲಕ್ಷಕ್ಕೂ ಮಿಕ್ಕಿದ ಮೊತ್ತವನ್ನು ವ್ಯಯಿಸಲು ಮುಂದಾಗಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರಕ್ಕೆ ಕಳೆದ ಒಂದು ವಾರದಿಂದ ವಿವಿಧ ತುರ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯoತ ಪ್ರತೀ ತಾಲೂಕು ಕೇಂದ್ರಗಳಲ್ಲಿ ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಕಾಣದಾಯಿತೇ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಹಾಗೂ ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಪ್ರಶ್ನಿಸಿದ್ದಾರೆ.

ಗ್ರಾಮ ಆಡಳಿತಾಧಿಕಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ  ಮಹಿಳೆಯರಿದ್ದು  ಕಛೇರಿಯಲ್ಲಿ ಶೌಚಾಲಯದಂತಹ ಕನಿಷ್ಠ ಮುಲಭೂತ ವ್ಯವಸ್ಥೆಗಳನ್ನೂ ಒದಗಿಸಲು ಅಸಮರ್ಥವಾಗಿರುವ ರಾಜ್ಯ ಸರಕಾರ ಕಾಂಗ್ರೆಸ್ ಶಾಸಕರ ಓಲೈಕೆಗಾಗಿ 42 ಮಂದಿ ಶಾಸಕರನ್ನು ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡಿ ಅವರು ಸರಕಾರಕ್ಕೆ ನಿಷ್ಠರಾಗಿರುವಂತೆ ನೋಡಿಕೊಂಡಿರುವುದು ಹಾಗೂ ಸರಕಾರದ ಈ ನಡೆಯ ವಿರುದ್ಧ ಸಾರ್ವಜನಿಕ ಹಿತಾಸಕ್ತಿಯ ದೂರು ದಾಖಲಾಗಿರುವುದು ಮಾತ್ರವಲ್ಲದೆ ವಿವಿಧ ಸಮಾವೇಶಗಳಿಗೆ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ಹೆಚ್ಚಿನ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿಗಳು ಸ್ವಂತ ಕಟ್ಟಡವೂ ಇಲ್ಲದೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಹುಟ್ಟಿನಿಂದ ಸಾವಿನವರೆಗೆ, ಸರಕಾರದ ಎಲ್ಲಾ ಯೋಜನೆಗಳನ್ನು ಜನತೆಗೆ ತಲುಪಿಸುವ ಮಹತ್ತರ ಜವಾಬ್ದಾರಿಗಳನ್ನು ಹೊಂದಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರಕಾರ ಇಂದಿನ ತಾಂತ್ರಿಕ ಯುಗದ ಕಾಲ ಘಟ್ಟದಲ್ಲೂ ಸೂಕ್ತ ಮೊಬೈಲ್ ವ್ಯವಸ್ಥೆಯನ್ನೂ ಮಾಡದಿರುವುದು ಶೋಚನೀಯವಾಗಿದೆ.

ಸಮಸ್ಯೆಗಳ ಆಗರವಾಗಿ ನಲುಗಿರುವ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿಯಲ್ಲಿ ದೈನಂದಿನ ಕೆಲಸ ಕಾರ್ಯಗಳು ಓಬಿರಾಯನ ಕಾಲದ ಮಾದರಿಯಲ್ಲೇ ಸಾಗುತ್ತಿರುವುದು ವಿಪರ್ಯಾಸ. ದೈನಂದಿನ ಪ್ರಮುಖ ದಾಖಲೀಕರಣ ಕೇಂದ್ರವಾಗಿರುವ ಈ ಕಛೇರಿಯಲ್ಲಿ ಅಗತ್ಯವೆನಿಸಿರುವ ಕಂಪ್ಯೂಟರ್, ಪ್ರಿಂಟರ್ ಹಾಗೂ ಇಂಟರ್ನೆಟ್ ಸಂಪರ್ಕವೇ ಇಲ್ಲದಿರುವುದು ಆಶ್ಚರ್ಯಕರ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವೃದ್ದಾಪ್ಯ ವೇತನ, ವಿಧವಾ ಮಾಸಾಶನ, ವಿಕಲಚೇತನ ಮಾಸಾಶನ, ರಾಷ್ಟ್ರೀಯ ಕುಟುಂಬ ಸಹಾಯಧನ, ಭಾಷಾ ಪ್ರಮಾಣ ಪತ್ರ, ರೈತರ ಪ್ರಮಾಣ ಪತ್ರ, ಕೃಷಿ ಕೂಲಿ ಕಾರ್ಮಿಕ ಪ್ರಮಾಣ ಪತ್ರ, ಕೃಷಿ ಬೆಳೆಹಾನಿ ವರದಿ, ಪ್ರಾಕೃತಿಕ ವಿಕೋಪ ವರದಿ, ಭೂಪರಿವರ್ತನಾ ವರದಿ, ಬೆಳೆ ಸಮೀಕ್ಷೆ, ಬೆಳೆ ಕಟಾವು, ಸರಕಾರಿ ಜಮೀನು ಸಂರಕ್ಷಣೆ ಮತ್ತು ಅತಿಕ್ರಮಣ ತಡೆ, ಕೆರೆ ಒತ್ತುವರಿ ತಡೆ ಸಹಿತ ಹಲವಾರು ಪ್ರಮುಖ ಕೆಲಸಕಾರ್ಯಗಳ ರೂವಾರಿಗಳಾಗಿರುವ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳಿಗೆ ಸರಕಾರ ತಕ್ಷಣ ಸ್ಪಂದಿಸಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಆದ್ಯತೆ ಮೇರೆಗೆ ಒದಗಿಸುವ ಮೂಲಕ ಗ್ರಾಮಾಭಿವೃದ್ಧಿಯೊಂದಿಗೆ ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸು ನನಸಾಗಿಸುವ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದು ಇಂದಿನ ಅಗತ್ಯತೆಯಾಗಿದೆ. ರಾಜ್ಯಾದ್ಯಂತ ತಾಲೂಕು ಕಛೇರಿಗಳ ಮುಂಭಾಗದಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಧರಣಿ ನಿರತ ಗ್ರಾಮ ಅಧಿಕಾರಿಗಳ ಮನವಿಯನ್ನು ಪುರಸ್ಕರಿಸಿ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರಕಾರ ಗಮನ ಹರಿಸಬೇಕು ಎಂದು ರೇಷ್ಮಾ ಉದಯ ಶೆಟ್ಟಿ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಎಲ್ಲರಿಗೂ ಪ್ರೇರಣಾದಾಯಕ : ಕಿಶೋರ್ ಕುಮಾರ್ ಕುಂದಾಪುರ




ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಆದರ್ಶ ವ್ಯಕ್ತಿಯಾಗಿದ್ದಾರೆ. ಸಂಘಟನೆಗೆ ಭದ್ರ ಬುನಾದಿಯನ್ನು ಹಾಕಿಕೊಡುವಲ್ಲಿ ಅವರ ಸೇವೆ ಅನನ್ಯ. ಪಂಡಿತ್ ಜೀ ಅವರ ಬಲಿದಾನ ದಿನದಂದು ಅವರ ಉದಾತ್ತ ತತ್ವ ಸಿದ್ಧಾಂತಗಳನ್ನು ನೆನಪಿಸಿಕೊಂಡು ಅವರನ್ನು ಸ್ಮರಿಸುವುದು ಪಕ್ಷದ ಕಾರ್ಯಕರ್ತರ ಆದ್ಯ ಕರ್ತವ್ಯ. ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜೀವನಾದರ್ಶ, ಜೀವನ ಸ್ಫೂರ್ತಿ ಎಲ್ಲರಿಗೂ ಪ್ರೇರಣಾದಾಯಕವಾಗಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಮರ್ಪಣಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ನಿಧಿ ಸಮರ್ಪಿಸಿ ಮಾತನಾಡಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಜನ ಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಸಾರ್ಥಕ ಬದುಕಿನ ವಿವಿಧ ಅವಿಸ್ಮರಣೀಯ ಘಟನೆಗಳನ್ನು ವಿಶ್ಲೇಷಿಸಿ ಅವರ ತತ್ವಾದರ್ಶಗಳು ಮತ್ತು ತ್ಯಾಗ, ಬಲಿದಾನದ ವಿಸ್ತ್ರತ ಮಾಹಿತಿಯನ್ನು ನೀಡಿ ಉಪನ್ಯಾಸವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಪಕ್ಷದ ಪ್ರಮುಖರಾದ ರವಿ ಅಮೀನ್, ಮೋಹನ ಉಪಾಧ್ಯಾಯ, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ರಾಘವೇಂದ್ರ ಕುಂದರ್, ವಿಜಯಕುಮಾರ್ ಉದ್ಯಾವರ, ಶ್ರೀನಿಧಿ ಹೆಗ್ಡೆ, ದಿನೇಶ್ ಅಮೀನ್, ಜಗದೀಶ್ ಆಚಾರ್ಯ, ರುಡಾಲ್ಫ್ ಡಿಸೋಜ, ಟಿ.ಜಿ. ಹೆಗ್ಡೆ, ಶ್ಯಾಮಲಾ ಎಸ್. ಕುಂದರ್, ಪ್ರಿಯದರ್ಶಿನಿ ದೇವಾಡಿಗ, ಸುಮಿತ್ರಾ ಆರ್. ನಾಯಕ್, ವೀಣಾ ಎಸ್. ಶೆಟ್ಟಿ, ನಳಿನಿ ಪ್ರದೀಪ್ ರಾವ್, ಕಲ್ಪನಾ ಸುಧಾಮ, ದೇವೇಂದ್ರ ಪ್ರಭು, ಡಾ! ವಿಜಯೇಂದ್ರ ವಸಂತ್, ಡಾ! ವಿದ್ಯಾಧರ ಶೆಟ್ಟಿ, ಮಧುಕರ ಮುದ್ರಾಡಿ, ಅಶೋಕ್ ನಾಯ್ಕ್, ಮಂಜುನಾಥ್ ಮಣಿಪಾಲ, ರಶ್ಮಿತಾ ಬಿ. ಶೆಟ್ಟಿ, ಶೋಭಾ ಶೆಟ್ಟಿ, ಸುಮಾ ಶೆಟ್ಟಿ, ಪ್ರೀತಿ, ವೆಂಕಟರಮಣ ಕಿದಿಯೂರು, ರಾಜೇಂದ್ರ ಪಂದುಬೆಟ್ಟು, ಆನಂದ್ ಸುವರ್ಣ, ಕಿಶೋರ್ ಕರಂಬಳ್ಳಿ, ಶ್ರೀವತ್ಸ, ಚಂದ್ರಶೇಖರ ಪ್ರಭು, ಶಿವರಾಮ್ ಕಾಡಿಮಾರ್ ಮುಂತಾದವರು ಉಪಸ್ಥಿತರಿದ್ದರು.

ಕೇಜ್ರಿವಾಲ್ ಭ್ರಷ್ಟ ಆಡಳಿತಕ್ಕೆ ತಿಲಾಂಜಲಿ, ಬಿಜೆಪಿಗೆ ದೆಹಲಿ ಗದ್ದುಗೆ ನೀಡಿದ ಮತದಾರರು ಅಭಿನಂದನಾರ್ಹರು: ಕಿಶೋರ್ ಕುಮಾರ್ ಕುಂದಾಪುರ




ಉಡುಪಿ: ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಭರ್ಜರಿ ಗೆಲುವು ಸಾಧಿಸಿ, 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾರಣೀಭೂತರಾದ ದೆಹಲಿ ಮತದಾರರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ. ನಡ್ದಾ ಅಭಿನಂದನಾರ್ಹರು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಹರ್ಷ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರ ಭ್ರಷ್ಟಚಾರ ವಿರುದ್ಧದ ಹೋರಾಟದ ಮೂಲಕ ರಾಜಕೀಯ ಮುನ್ನೆಲೆಗೆ ಬಂದಿರುವ ಆಮ್ ಆದ್ಮಿ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಅಧಿಕಾರದ ಗದ್ದುಗೆ ಏರಿದ ಬಳಿಕ ಭ್ರಷ್ಟಾಚಾರವನ್ನೇ ಉಸಿರಾಗಿಸಿಕೊಂಡು, ಶೀಷ್ ಮಹಲ್, ಅಬಕಾರಿ ಹಗರಣಗಳಿಂದ ಜೈಲುವಾಸ ಅನುಭವಿಸಿದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೆ ಕೆಲವು ತಿಂಗಳುಗಳ ಕಾಲ ಆಡಳಿತ ಯಂತ್ರವನ್ನು ಸ್ಥಗಿತಗೊಳಿಸಿ, ಭ್ರಷ್ಟಾಚಾರವನ್ನು ಪೋಷಿಸುತ್ತಾ ಬಂದಿರುವುದಕ್ಕೆ ದೆಹಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.

ಸುಧೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ ದೆಹಲಿ ಚುನಾವಣೆಯಲ್ಲಿ ಸತತ ಮೂರು ಬಾರಿಯೂ ಶೂನ್ಯ ಸಂಪಾದನೆ ಮಾಡಿರುವುದು ನಾಚಿಕೆಗೇಡು. ಅಭಿವೃದ್ಧಿಗೆ ತಿಲಾಂಜಲಿಯನ್ನಿತ್ತು ಐಶಾರಾಮಿ ನೀತಿ ಮತ್ತು ಎಲ್ಲೆ ಮೀರಿದ ಭ್ರಷ್ಟಾಚಾರದಿಂದ ಆಮ್ ಆದ್ಮಿ ಪಾರ್ಟಿ ದೆಹಲಿ ಚುನಾವಣೆಯಲ್ಲಿ ಹೀನಾಯ ಸೋಲುoಡಿದಿರುವ ಮಾದರಿ ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಭ್ರಷ್ಟಾಚಾರ ಮುಕ್ತ, ಅಭಿವೃದ್ಧಿ ಪರ ಆಡಳಿತ ವೈಖರಿ ಜನಮಾನಸದಲ್ಲಿ ಹೊಸ ಭರವಸೆ ಮೂಡಿಸಿರುವುದು ಕೂಡಾ ದೆಹಲಿ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿಗೆ ಪೂರಕವಾಗಿದ್ದು, ಮುಂದಿನ ಎಲ್ಲಾ ಚುನಾವಣೆಗಳಲ್ಲಿಯೂ ಬಿಜೆಪಿ ವಿಜಯಪತಾಕೆ ಉತ್ತುಂಗಕ್ಕೇರಲಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ.ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ.*




ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ವಿತರಿಸಿ ಸಂಭ್ರಮಾಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಟಿ.ಜಿ. ಹೆಗ್ಡೆ, ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್, ಶ್ರೀಕಾಂತ್ ನಾಯಕ್, ಅನಿತಾ ಶ್ರೀಧರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಗಿರೀಶ್ ಎಮ್. ಅಂಚನ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲೇಶ್ ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡೇನಿಸ್ ಮಾಸ್ಕರೇನಸ್, ನಗರಸಭಾ ಸದಸ್ಯರಾದ ಹರೀಶ್ ಶೆಟ್ಟಿ ಅಂಬಲಪಾಡಿ, ಗಿರಿಧರ ಆಚಾರ್ಯ ಕರಂಬಳ್ಳಿ, ಅನಿಟಾ ಮಿಲಿಂಡ ಡಿಸೋಜಾ, ಉಡುಪಿ ನಗರ ಪದಾಧಿಕಾರಿಗಳಾದ ಗುರುರಾಜ್, ಜಯಕರ ಸನಿಲ್, ಸಂತೋಷ್ ಆಚಾರ್ಯ, ಕಿಶೋರ್ ಕರಂಬಳ್ಳಿ, ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸ್ವಾಗತಾರ್ಹ : ಕಿಶೋರ್ ಕುಮಾರ್ ಕುಂದಾಪುರ





ಉಡುಪಿ: ಪ್ರತಿಷ್ಠಿತ ಉಡುಪಿ ನಗರಸಭೆಯನ್ನು  ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ ನಗರಸಭೆ ಮಹಾ ನಗರಪಾಲಿಕೆಯಾಗಿ ಪರಿವರ್ತಿತವಾದಲ್ಲಿ ಉಡುಪಿ ನಗರದ ಸಹಿತ ನಗರಕ್ಕೆ ಹೊಂದಿಕೊಂಡಿರುವ ಹಲವಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಮೂಲಭೂತ ಸೌಕರ್ಯ ವೃದ್ಧಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಿದಂತಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಮೂಲತ: ಸಿಟಿ ಮುನ್ಸಿಪಲ್ ಕೌನ್ಸಿಲ್, ಪುರಸಭೆಯಾಗಿದ್ದ ಉಡುಪಿ ನಗರಸಭೆ 1996ರಲ್ಲಿ ಮಲ್ಪೆ (ಕೊಡವೂರು), ಪುತ್ತೂರು, ಶಿವಳ್ಳಿ, 76 ಬಡಗಬೆಟ್ಟು ಮತ್ತು ಹೆರ್ಗ ಗ್ರಾಮಗಳ ಸೇರ್ಪಡೆಯೊಂದಿಗೆ ನಗರಸಭೆಯ ಸ್ಥಾನಮಾನವನ್ನು ಪಡೆದಿದೆ. 2010ರಲ್ಲಿ 75ನೇ ವರ್ಷಾಚರಣೆಯನ್ನು ನಡೆಸಿರುವ ಉಡುಪಿ ನಗರಸಭೆಗೆ ಪ್ರಸಕ್ತ 90ನೇ ವರ್ಷ ತುಂಬುತ್ತಿರುವ ಸುಸಂದರ್ಭದಲ್ಲಿ ಮಹಾ ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪ ಪ್ರಗತಿಯಲ್ಲಿರುವುದು ಹರ್ಷದಾಯಕವಾಗಿದೆ. ಈಗಾಗಲೇ ಹಲವಾರು ವಿನೂತನ ಯೋಜನೆಗಳೊಂದಿಗೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಉಡುಪಿ ನಗರಸಭೆಗೆ ಮಹಾ ನಗರಪಾಲಿಕೆಯ ಸ್ಥಾನಮಾನ ವರದಾನವಾಗಿ ಪರಿಣಮಿಸಲಿದೆ.

ಉಡುಪಿ ನಗರಸಭೆ ಮಹಾ ನಗರಪಾಲಿಕೆಯಾಗಿ ರೂಪುಗೊಳ್ಳುವ ಪ್ರಕ್ರಿಯೆಯಿಂದ ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿಯಂತಹ ಯೋಜನೆಗಳು ಹಾಗೂ ಬ್ರಹತ್ ಮೊತ್ತದ ಅನುದಾನಗಳು ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ. ಈ ಪ್ರಕ್ರಿಯೆ ಅತಿ ಶೀಘ್ರವಾಗಿ ಕಾರ್ಯಗತಗೊಂಡು ಉಡುಪಿ ಮಹಾ ನಗರಪಾಲಿಕೆ ಅಸ್ತಿತ್ವಕ್ಕೆ ಬರುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗುವಂತಾಗಲಿ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಕಲಶೋತ್ಸವ, 65ನೇ ಭಜನಾ ಮಂಗಲೋತ್ಸವ ಸಂಪನ್ನ




ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ನಡೆದ 65ನೇ ಭಜನಾ ಮಂಗಲೋತ್ಸವಕ್ಕೆ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವವು ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ, ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ಪಠೇಲರ ಮನೆ ಜಯಕರ ಶೆಟ್ಟಿ ಅಂಬಲಪಾಡಿ, ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ವಿದುಷಿ ಉಷಾ ಹೆಬ್ಬಾರ್ ಮಣಿಪಾಲ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಘದ ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಸುಧಾಕರ ಎ., ರಾಜೇಂದ್ರ ಪಂದುಬೆಟ್ಟು, ಭಾಸ್ಕರ ಅಂಚನ್, ಭಾಸ್ಕರ ಕೋಟ್ಯಾನ್, ಗುರುರಾಜ್ ಪೂಜಾರಿ, ವಿನಯ್ ಕುಮಾರ್, ಜನಾರ್ಧನ ಪೂಜಾರಿ, ಚೆನ್ನಕೇಶವ, ವಿನೋದ್ ಪೂಜಾರಿ, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್, ಮಹಿಳಾ ಘಟಕದ ಸಹ ಸಂಚಾಲಕಿಯರಾದ ದೇವಕಿ ಕೆ. ಕೋಟ್ಯಾನ್, ಜಯಂತಿ ಹರೀಶ್, ಕಾರ್ಯದರ್ಶಿ ವಾಣಿಶ್ರೀ ಅರುಣ್ ಕುಮಾರ್, ಜೊತೆ ಕಾರ್ಯದರ್ಶಿಗಳಾದ ಅಶ್ವಿನಿ ಪೂಜಾರಿ, ಲಾವಣ್ಯ, ಕೋಶಾಧಿಕಾರಿ ಸವಿತಾ ಸಂತೋಷ್, ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ್, ಸಹ ಸಂಘಟನಾ ಕಾರ್ಯದರ್ಶಿ ಸಂಚಲ ಶಶಿಕಾಂತ್, ಪ್ರಮುಖರಾದ ಸುರೇಶ್ ಎ., ರಮೇಶ್ ಕೋಟ್ಯಾನ್, ಕುಶಲ್ ಕುಮಾರ್ ಎ., ರವಿ ಪಾಲನ್, ಲಕ್ಷ್ಮಣ ಪೂಜಾರಿ, ಸಂಜೀವ ಪೂಜಾರಿ, ಸುಧಾಕರ ಪೂಜಾರಿ, ಪುನೀತ್ ಕುಮಾರ್, ಶಶಿಕಾಂತ್, ಸತೀಶ್, ಮಹಿಳಾ ಘಟಕದ ಸಮಿತಿ ಸದಸ್ಯರಾದ ವಿಜಯಲಕ್ಷ್ಮಿ ಶಿವಕುಮಾರ್, ವಿಜಯಲಕ್ಷ್ಮಿ ಕೃಷ್ಣ ಕೋಟ್ಯಾನ್, ಅನಿತಾ ಲಕ್ಷ್ಮಣ್ ಪೂಜಾರಿ, ಲೋಲಾಕ್ಷಿ, ಸುನೀತಾ ಶಂಕರ ಪೂಜಾರಿ, ಲಲಿತಾ ಅಚ್ಯುತ ಪೂಜಾರಿ, ಲೋಲಾಕ್ಷಿ, ರತಿ ಸುಧಾಕರ್, ಲತಾ ಆನಂದ್, ಮೋಹಿನಿ ಭಾಸ್ಕರ್, ಅಶ್ವಿನಿ ಸುನಿಲ್ ಕುಮಾರ್ ಹಾಗೂ ಶ್ರೀ ಗುರು ಕುಣಿತ ಭಜನಾ ಮಂಡಳಿಯ ಸದಸ್ಯೆಯರು, ಯುವ ಕಾರ್ಯಕರ್ತರು, ಸಂಘದ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಭಕ್ತಾಭಿಮಾನಿಗಳು ಪಾಲ್ಗೊಂಡಿದ್ದರು. ಭಜನಾ ಸಪ್ತಾಹ ಮತ್ತು 65ನೇ ಭಜನಾ ಮಂಗಲೋತ್ಸವದಲ್ಲಿ ಉಡುಪಿ ತಾಲೂಕಿನ 20 ಭಜನಾ ಮಂಡಳಿಗಳಿಂದ ಭಜನೆ ಹಾಗೂ ಕುಣಿತದ ಭಜನಾ ಸೇವೆ ನಡೆಯಿತು. ಸಂಘದ ಭಜನಾ ಮಂಡಳಿ, ಮಹಿಳಾ ಘಟಕ ಮತ್ತು ಶ್ರೀ ಗುರು ಕುಣಿತ ಭಜನಾ ಮಂಡಳಿಯಿಂದ ನಗರ ಭಜನೆ ನಡೆಯಿತು.

ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ : ಜ.28ರಿಂದ ‘ಭಜನಾ ಸಪ್ತಾಹ’, ಫೆ.4ರಂದು ‘ಬ್ರಹ್ಮಕಲಶೋತ್ಸವ’ ಮತ್ತು ’65ನೇ ಭಜನಾ ಮಂಗಲೋತ್ಸವ’




ಉಡುಪಿ:ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಜ.28ರಿಂದ ಫೆ.2ರ ವರೆಗೆ ‘ಭಜನಾ ಸಪ್ತಾಹ’, ಫೆ.3ರಂದು ‘ಬ್ರಹ್ಮಕಲಶ ಪೂಜೆ’ ಮತ್ತು ಧಾರ್ಮಿಕ ವಿಧಿ ವಿಧಾನಗಳು ಹಾಗೂ ಫೆ.4ರಂದು ‘ಬ್ರಹ್ಮಕಲಶೋತ್ಸವ’ ಮತ್ತು ’65ನೇ ಭಜನಾ ಮಂಗಲೋತ್ಸವ’ ಜರಗಲಿದೆ ಎಂದು ಸಂಘದ ಆಡಳಿತ ಸಮಿತಿಯ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.

’65ನೇ ಭಜನಾ ಮಂಗಲೋತ್ಸವ’ದ ಪ್ರಯುಕ್ತ ಜ.25ರಂದು ಸಂಘದ ‘ಶ್ರೀ ನಾರಾಯಣ ಗುರು ಸಮುದಾಯ ಭವನ’ದ ‘ಮಂಜುಶ್ರೀ ಭೋಜನ ಶಾಲೆ’ಗೆ ಸಂಘದ ಸದಸ್ಯರು ಮತ್ತು ದಾನಿಗಳ ನೆರವಿನಿಂದ ರೂ.2.50 ಲಕ್ಷ ವೆಚ್ಚದಲ್ಲಿ ‘ಶಾಶ್ವತ ಪಾತ್ರೆ ಪರಿಕರ’ಗಳನ್ನು ಸಮರ್ಪಿಸಲಾಗಿದೆ.

ಜ.28ರಂದು ಸಂಜೆ ಗಂಟೆ 7.00ಕ್ಕೆ ಪ್ರಾರಂಭಗೊಳ್ಳಲಿರುವ ‘ಭಜನಾ ಸಪ್ತಾಹ’ವು ಪ್ರತೀ ದಿನ ಸಂಜೆ ಗಂಟೆ 7.00ರಿಂದ 8.30ರ ವರೆಗೆ ವಿವಿಧ ಭಜನಾ ಮಂಡಳಿಗಳ ಭಜನಾ ಸೇವೆಯೊಂದಿಗೆ ಫೆ.2ರ ವರೆಗೆ ನಡೆಯಲಿದೆ.

ಫೆ.3ರ ಮಧ್ಯಾಹ್ನ ಗಂಟೆ 3.00ರಿಂದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಧಾರ್ಮಿಕ ವಿಧಿವಿಧಾನಗಳು ಹಾಗೂ ಸಂಜೆ ಗಂಟೆ 6.00ರಿಂದ ‘ಕುಣಿತ ಭಜನೆ’ ಮತ್ತು ‘ಬ್ರಹ್ಮ ಕಲಶ ಪೂಜೆ’ ನಡೆಯಲಿದೆ.

ಫೆ.4ರ ಮುಂಜಾನೆ ಗಂಟೆ 5.00ರಿಂದ ‘ಗಣ ಹೋಮ’, ಬೆಳಿಗ್ಗೆ 7.35ಕ್ಕೆ ‘ಬ್ರಹ್ಮ ಕಲಶೋತ್ಸವ ಪೂಜೆ’, 10.35ಕ್ಕೆ ‘ಬ್ರಹ್ಮಕಲಶಾಭಿಷೇಕ’ ಹಾಗೂ ಬೆಳಿಗ್ಗೆ ಗಂಟೆ 11.00ಕ್ಕೆ ‘ಮಹಾ ಪೂಜೆ’ ನಡೆಯಲಿದೆ.

ಮಧ್ಯಾಹ್ನ ಗಂಟೆ 12.00ಕ್ಕೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ’65ನೇ ಭಜನಾ ಮಂಗಲೋತ್ಸವ’ಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ ಗಂಟೆ 12.30ಕ್ಕೆ ‘ಅನ್ನ ಸಂತರ್ಪಣೆ’ ನಡೆಯಲಿದೆ. ರಾತ್ರಿ ಗಂಟೆ 8.30ಕ್ಕೆ ನಗರ ಭಜನೆ ಹಾಗೂ ರಾತ್ರಿ ಗಂಟೆ 12.00ಕ್ಕೆ ‘ಭಜನಾ ಮಂಗಲ’, ‘ಮಹಾ ಪೂಜೆ’ ಮತ್ತು ‘ಪ್ರಸಾದ ವಿತರಣೆ’ ನಡೆಯಲಿದೆ ಎಂದು ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಟಪಾಡಿ ಸೊಸೈಟಿ ಎದುರು ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಚುನಾವಣಾ ಗಿಮಿಕ್: ಆಡಳಿತ ಮಂಡಳಿಯ ಸ್ಪಷ್ಠನೆ

ಕಾಪು: ಕಾಂಗ್ರೆಸ್ ಪಕ್ಷದವರು ಆರೋಪಿಸಿದಂತೆ ನಮ್ಮ ಸಂಘದಲ್ಲಿ ಯಾವುದೇ ಅವ್ಯವಹಾರ ಆಗಿರುವುದಿಲ್ಲ. ಇತ್ತೀಚೆಗೆ ನಡೆದ  ನಕಲಿ ದಾಖಲೆಗಳನ್ನು ನೀಡಿ ಪಡೆದ ಸಾಲದ ಬಗ್ಗೆ ನಾವು ಈಗಾಗಲೇ ಇಲಾಖಾ ಮುಖ್ಯಸ್ಥರಿಗೂ ದೂರನ್ನು ನೀಡಿದ್ದು.ಮಾತ್ರವಲ್ಲ ಕಾಪು ಪೊಲೀಸ್ ಠಾಣೆಯಲ್ಲಿ ಈಗಾಗಲೇ ದೂರನ್ನು ದಾಖಲಿಸಿ, ತನಿಖೆಯೂ ನಡೆಯುತ್ತಿದ್ದು. ಇಷ್ಟೆಲ್ಲ ಆದಮೇಲೂ ಅವ್ಯವಹಾರ ಆಗಿದೆ ಎಂದು ಆರೋಪಿಸಿ ಪ್ರತಿಭಟನೆ ಮಾಡುವುದರಲ್ಲಿ ಅರ್ಥವಿಲ್ಲ. ಪ್ರತಿಭಟನೆಯಲ್ಲಿ ಸಂಘದ ವ್ಯಾಪ್ತಿಗೆ ಬಾರದವರು ಸಂಘದಲ್ಲಿ ಸಾಲಬಾಕಿ ಇಟ್ಟವರೂ ಕೂಡ ಭಾಗವಹಿಸಿದ್ದು ಇವರ ಉದ್ದೇಶ ಸಂಘದ ಅಭಿವೃದ್ದಿಯೋ ಅಥವಾ ಸಂಘವನ್ನು ಅಧ:ಪತನಕ್ಕೆ ತಳ್ಳುವುದೋ ತಿಳಿಯುತ್ತಿಲ್ಲ. ಸಂಘದ ಎಲ್ಲಾ ಗ್ರಾಹಕ ಸದಸ್ಯರ ಗಮನಕ್ಕೆ ತರುವುದೇನೆಂದರೆ ಸಂಘದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲವೆಂದೂ ಇದು ಕೇವಲ ಕಾಂಗ್ರೆಸ್ ನವರ ಪಿತೂರಿ ಎಂದೂ ಸಂಘದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

ಜ.29 : ‘ಪುರಂದರ ದಾಸರ ಆರಾಧನೆ’ಯ ಪ್ರಯುಕ್ತ ರಾಜಾಂಗಣದಲ್ಲಿ  ‘ಸಹಸ್ರ ಕಂಠ ಗಾಯನ’ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆ




ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆಯು ಭಜನಾ ಪರಿಷತ್ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆಯಲ್ಲಿ ಉಡುಪಿಯ ಶ್ರೀ ಪುತ್ತಿಗೆ ಮಠದಲ್ಲಿ ನಡೆಯಿತು.

ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಅವರು ಮಾತನಾಡಿ ಭಜನಾ ಪರಿಷತ್ ಕೇಂದ್ರ ಸಮಿತಿಯ ಮಾರ್ಗದರ್ಶನದಂತೆ ಪರಿಷತ್ ವತಿಯಿಂದ ನಡೆಸುವ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಭಜನಾ ತರಬೇತುದಾರೆ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಅವರು ಮಾತನಾಡಿ ಜನವರಿ 29ರಂದು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಮಧ್ಯಾಹ್ನ ಗಂಟೆ 3.30ರಿಂದ ‘ದಾಸ ಶ್ರೇಷ್ಠ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಉಡುಪಿ ರಾಜಾಂಗಣದಲ್ಲಿ ನಡೆಯಲಿರುವ ‘ಸಹಸ್ರ ಕಂಠ ಗಾಯನ’ ಕಾರ್ಯಕ್ರಮದ ಕುರಿತು ವಿಸ್ತೃತ ಮಾಹಿತಿ ನೀಡಿದರು. ಈ ಪ್ರಯುಕ್ತ ಜ.5ರಿಂದ ಪ್ರತೀ ರವಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಉಡುಪಿಯ ಶ್ರೀ ಪುತ್ತಿಗೆ ಮಠದಲ್ಲಿ ನಡೆಯುವ ಭಜನಾ ತರಬೇತಿಯಲ್ಲಿ ಭಜನಾ ಮಂಡಳಿಗಳ ಸದಸ್ಯರು ಹಾಗೂ ಭಜಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಿನಂತಿಸಿದರು.

ಉಡುಪಿ ತಾಲೂಕು ಭಜನಾ ಪರಿಷತ್ತಿನ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ವಿಸ್ತೃತ ವಿಚಾರ ವಿನಿಮಯ ನಡೆಸಲಾಯಿತು.

ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಮಾತನಾಡಿ ಉಡುಪಿ ತಾಲೂಕು ಪರಿಷತ್ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ್ದು, ವಲಯ ಮಟ್ಟದ ಕಾರ್ಯಕ್ರಮಗಳ ಸಹಿತ ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಇನ್ನಷ್ಟು ಮಾದರಿ ಕಾರ್ಯಕ್ರಮಗಳು ಮುಂದಿನ ದಿನಗಳಲ್ಲಿ ನಡೆಯಲಿವೆ ಎಂದರು.

ಭಜನಾ ಪರಿಷತ್ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಭಜನಾ ಪರಿಷತ್ ವತಿಯಿಂದ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ನಡೆದ ಪ್ರಮುಖ ಕಾರ್ಯಕ್ರಮಗಳು ಹಾಗೂ ಮುಂದೆ ನಡೆಯಲಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲಾ ಯೋಜನಾಧಿಕಾರಿ ಶ್ರೀಮತಿ ಸ್ವಪ್ನಾ ಪ್ರಕಾಶ್, ಭಜನಾ ಪರಿಷತ್ ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಮುದ್ರಾಡಿ, ಶ್ರೀ ಪುತ್ತಿಗೆ ಮಠದ ರಘುಪತಿ ರಾವ್ ಕಿದಿಯೂರು, ಭಜನಾ ಮಂಡಳಿಯ ಸುಮನ ಆಚಾರ್ಯ ಉಪಸ್ಥಿತರಿದ್ದರು.

ತಾಲೂಕು ಭಜನಾ ಪರಿಷತ್ ಉಪಾಧ್ಯಕ್ಷೆ ಸುಮಿತ್ರಾ ನಾಯ್ಕ್ ಪೆರಂಪಳ್ಳಿ ವಂದಿಸಿದರು.

Design a site like this with WordPress.com
Get started