ಅ.10ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ:ಸೆ.17ರಿಂದ ಅ.7ರ ವರೆಗೆ ಜಿಲ್ಲೆಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಸಮಾರೋಪ ಸಭೆಯು ಅ.10 ರವಿವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಮಾರೋಪ ಸಭೆಯನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭಿಯಾನದ ಸಮಾರೋಪ ಸಭೆಯ ಬಳಿಕ ಜಿಲ್ಲಾ ಬಿಜೆಪಿ, ಜಿಲ್ಲಾ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ, ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಜಿಲ್ಲಾ ಯುವ ಮೋರ್ಚಾ ಸಂಯೋಜನೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ನೇತೃತ್ವದ ತಂಡದ ಹಿಮ್ಮೇಳದಲ್ಲಿ “ಬೀಷ್ಮ ವಿಜಯ” ಯಕ್ಷಗಾನ ತಾಳ ಮದ್ದಲೆ ಪ್ರದರ್ಶನ ನಡೆಯಲಿದೆ.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಸೇವೆ ಮತ್ತು ಸಮರ್ಪಣ ಅಭಿಯಾನದ ಜಿಲ್ಲಾ ಸಂಚಾಲಕರು, ಅಭಿಯಾನದ 9 ಕಾರ್ಯಕ್ರಮಗಳ ಜಿಲ್ಲಾ ಮತ್ತು ಮಂಡಲಗಳ ಸಂಚಾಲಕರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಾಳೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಬೇಟಿ


ಕರ್ನಾಟಕ ಸರಕಾರದ ಮಾನ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ್ ರವರು ಅ.8 ಶುಕ್ರವಾರ ಮಧ್ಯಾಹ್ನ 12.30 ರಿಂದ 1.30ರ ವರೆಗೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಬೇಟಿಗೆ ಲಭ್ಯವಿರುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶಾದ್ಯಂತ ವ್ಯಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಆ್ಯಪ್ಲಿಕೇಶನ್ ಸರ್ವರ್ ಡೌನ್!



ಬೆಂಗಳೂರು: ಸೋಮವಾರ ತಡರಾತ್ರಿ, ವಾಟ್ಸಾಪ್, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿವೆ. ಇನ್ನು ಈ ಬಗ್ಗೆ ಹಲವು ಬಳಕೆದಾರರು ದೂರುತ್ತಿದ್ದಾರೆ.

ಹೆಚ್ಚಿನ ಬಳಕೆದಾರರಿಗೆ ವಾಟ್ಸಪ್, ಇನ್ ಸ್ಟಾಗ್ರಾಮ್ ಮತ್ತು ಫೇಸ್ ಬುಕ್ ಸೇವೆಗಳು ಸ್ಥಗಿತಗೊಂಡಿವೆ. ಹಾಗಾಗಿ ಹಲವಾರು ಬಳಕೆದಾರರು ಈ ಪ್ಲಾಟ್ ಫಾರ್ಮ್ʼಗಳಲ್ಲಿ ಸ್ಥಗಿತವನ್ನು ಟ್ವಿಟರ್ʼನಲ್ಲಿ ವರದಿ ಮಾಡಿದ್ದಾರೆ.


ಬಳಕೆದಾರರಲ್ಲಿ ಕ್ಷಮೆ ಯಾಚಿಸಿದ ಫೇಸ್ ಬುಕ್ ಸಮೂಹ ಸಂಸ್ಥೆ


ಎಲ್ಲಾ ಮೂರು ಸೇವೆಗಳು ಉಲ್ಲಾಸದಾಯಕವಾದ ದೋಷವನ್ನ ತೋರಿಸಿವೆ. ವಾಟ್ಸಪ್ ಸಂದೇಶಗಳನ್ನು ಕಳುಹಿಸುತ್ತಿಲ್ಲ ಅಥವಾ ಸ್ವೀಕರಿಸುತ್ತಿಲ್ಲ. ಇನ್ನು ಇನ್ ಸ್ಟಾಗ್ರಾಮ್ ‘ಫೀಡ್ ಅನ್ನು ತಾಜಾಗೊಳಿಸಲು ಸಾಧ್ಯವಾಗಲಿಲ್ಲ’ ಎಂದು ತೋರಿಸುತ್ತದೆ. ಅದೇ ರೀತಿ, ಫೇಸ್ ಬುಕ್ ಪುಟವು ಲೋಡ್ ಮಾಡಲು ಶಾಶ್ವತವಾಗಿ ತೆಗೆದುಕೊಳ್ಳುತ್ತದೆ.

ಡೌನ್ ಡಿಟೆಕ್ಟರ್ ವಾಟ್ಸಪ್, ಇನ್ ಸ್ಟಾಗ್ರಾಮ್ ಮತ್ತು ಫೇಸ್ ಬುಕ್ ಪ್ಲಾಟ್ ಫಾರ್ಮ್ʼಗಳಲ್ಲಿ ಸಮಸ್ಯೆಗಳಿವೆ ಎಂದು ದೃಢಪಡಿಸುತ್ತದೆ.

ಸತತ ಆರು ಗಂಟೆಗಳ ನಂತರ ಸರ್ವರ್ ಡೌನ್ ಸಮಸ್ಯೆ ಸಹಜ ಸ್ಥಿತಿಗೆ

ಕಾಪು ಕುತ್ಯಾರು ಕಳತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ – ಪಕ್ಷಾಂತರ ಪರ್ವ ಆರಂಭ

ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಪಂಚಾಯತ್ ವ್ಯಾಪ್ತಿಯ ಕಳತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪ್ರಸನ್ನ ಆಚಾರ್ಯ, ಪ್ರಶಾಂತ ಆಚಾರ್ಯ, ಶಾಂತ ಪೂಜಾರಿ ಹಾಗೂ ಡೇನಿಸ್ ಎನ್ನುವವರು ಕಳತ್ತೂರು ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಧ್ವಜ ಸ್ವೀಕರಿಸಿ ಅಧಿಕ್ರತವಾಗಿ ಪಕ್ಷ ಸೇರ್ಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಹಾಗೂ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವ್ಯಕ್ತಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಮಜೂರು, ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಪ್ರದೀಪ್ ರಾವ್ ಶಕ್ತಿಕೇಂದ್ರ ಪ್ರಮುಖ್ ಶಶಿಪ್ರಭಾ ಶೆಟ್ಟಿ ಮತ್ತಿತರರು ಬರಮಾಡಿಕೊಂಡರು. ಬಳಿಕ ಮಾತನಾಡಿ ಯಾವುದೇ ಸ್ಥಾನಮಾನದ ಅಪೇಕ್ಷೆ ಇಲ್ಲದೆ ಮೋದದೀಜಿಯವರ ಕಾರ್ಯವೈಖರಿಗೆ ಮನಸೋತು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದೇವೆ ಎಂದರು.

ಕಾಪುವಿನಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು ಚುನಾವಣೆ ಸಂದರ್ಭದಲ್ಲಿ ‌ಮತ್ತಷ್ಟು ಜನ ವಿವಿಧ ಪಕ್ಷಗಳಿಂದ ಸೇರ್ಪಡೆಗೊಳ್ಳಲು ಕಾಯುತ್ತಿದ್ದು ಪ್ರಧಾನಿ ಮೋದೀಜಿಯವರ ಕಾರ್ಯವೈಖರಿ, ರಾಜ್ಯದ ಮುಖ್ಯ ಮಂತ್ರಿಗಳ ಜನಪರ ಕಾರ್ಯವೈಖರಿ ಹಾಗೂ ಸ್ಥಳೀಯ ಶಾಸಕರುಗಳ ಕಾರ್ಯವೈಖರಿಗೆ ಮೆಚ್ಚಿ ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ನಮ್ಮ‌ಪಕ್ಷಕ್ಕೆ ಸೇರ್ಪಡೆಗೊಳ್ಳಲಿರುವರು ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವರು.

ಅಲೆವೂರಿನಲ್ಲಿ ಬಿಜೆಪಿ ವತಿಯಿಂದ ಅರ್ಥಪೂರ್ಣವಾಗಿ ಗಾಂಧೀ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ


ಉಡುಪಿ:ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಜಯಂತಿ ಅಂಗವಾಗಿ ಅಲೆವೂರು‌ ಪಂಚಾಯತ್ ವ್ಯಾಪ್ತಿಯ 9 ಬಸ್ ನಿಲ್ದಾಣಗಳನ್ನು, ಕರ್ವಾಲು, ಕೆಮ್ತೂರು, ಮಾರ್ಪಳ್ಳಿ, ಮಣಿಪಾಲ ರಸ್ತೆ ಬಳಿ ಒಟ್ಟು‌ 4 ಕಡೆ ಸ್ವಚ್ಚತಾ ಕಾರ್ಯಕ್ರಮಗಳನ್ನು, ಒಬ್ಬ ನೇಕಾರರಿಗೆ ಸನ್ಮಾನ, 2 ಶಕ್ತಿಕೇಂದ್ರಗಳಲ್ಲಿ ಈ ಮಹಾನ್ ಪುರುಷರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಹಾಗೂ ಸಭಾ ಕಾರ್ಯಕ್ರಮ‌ನಡೆಸಿ ಅವರ ಚಿಂತನೆಗಳ ಬಗ್ಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದ ನೇತ್ರತ್ವವನ್ನು ಶಕ್ತಿಕೇಂದ್ರ ಪ್ರಮುಖರಾದ ಶೇಖರ ಆಚಾರ್ಯ ಹಾಗೂ ಆಶಿಶ್ ಶೆಟ್ಟಿ ವಹಿಸಿದ್ದರು. ಪಂಚಾಯತ್ ಸದಸ್ಯರಾದ ಶಾಂತ ನಾಯ್ಕ್, ಪ್ರಶಾಂತ್ ಆಚಾರ್ಯ, ಗೀತಾ ಶೆಟ್ಟಿಗಾರ್, ರೇಣುಕಾ ಶೆಟ್ಟಿ, ಅವಿನಾಶ್ ಶೆಟ್ಟಿಗಾರ್, ನಿಕಟಪೂರ್ವ ತಾಲೂಕು ಪಂಚಾಯತ್ ಸದಸ್ಯರಾದ ಬೇಬಿ ರಾಜೇಶ್, ಮಹಾಶಕ್ತಿಕೇಂದ್ರ ಪ್ರಧಾನ‌ಕಾರ್ಯದರ್ಶಿ ಅಶೋಕ್ ಕುಮಾರ್, ಪ್ರಮುಖ ಕಾರ್ಯಕರ್ತರುಗಳಾದ ಸಂತೀಷ್ ಶೆಣೈ, ಸತೀಶ್ ಶೆಟ್ಟಿ ನೆಹರೂನಗರ, ಅರುಣ್ ಆಚಾರ್ಯ, ಸುರೇಶ್ ನಾಯಕ್ ಕರ್ವಾಲು, ಕೇಶವ ಶೆಟ್ಟಿಗಾರ್, ಕ್ರಷ್ಣ ಜತ್ತನ್ನ, ಹಂಸರಾಜ್ ಸನಿಲ್, ನಾಗರಾಜ ಆಚಾರ್ಯ, ರಾಘವೇಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಉಪಸ್ಥಿತರಿದ್ದು ಮಹಾತ್ಮರ ಬಗ್ಗೆ ಮಾಹಿತಿ ನೀಡಿದರು.

ಕಳತ್ತೂರಿನಲ್ಲಿ ಬೂತ್ ನಂಬರ್ 157 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ


ಕಾಪು ಕ್ಷೇತ್ರದ ಕಳತ್ತೂರಿನಲ್ಲಿ ಬೂತ್ ಸಂಖ್ಯೆ 157 ರಲ್ಲಿ‌ಬೂತ್ ಅಧ್ಯಕ್ಷರಾ‌ದ ಪ್ರದೀಪ್ ರಾವ್ ಇವರ ಮನೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು.‌ ಪ್ರಾಸ್ತಾವಿಕ ಮಾತುಗಳನ್ನು ಆಡಿದ ಜಿಲ್ಲಾ ಪ್ರಧಾನ‌‌ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಬೂತ್ ಅಧ್ಯಕ್ಷರಿಗೆ ನಾಮಫಲಕ ಕೊಡುತ್ತಿರುವ ಉದ್ದೇಶದ ಬಗ್ಗೆ ವಿವರಿಸಿದರು. ರಾಜ್ಯ ಬಿಜೆಪಿ‌ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಬೂತ್ ಅಧ್ಯಕ್ಷರುಗಳು ಉತ್ತಮ ಕಾರ್ಯ ನೀರ್ವಹಿಸಿದರೆ ಯಾವುದೇ ಚುನಟವಣೆ ಗೆಲ್ಲುವುದು ಕಷ್ಟವಾಗುವುದಿಲ್ಲ ಎಂದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾತನಾಡಿ ಬಿಜೆಪಿ ಹುಟ್ಟು ಬೆಳವಣಿಗೆ ಹಾಗೂ ಬೂತ್ ಅಧ್ಯಕ್ಷರ ಕಾರ್ಯಪಧ್ಧತಿ ಯಾವ ರೀತಿ ಇರಬೇಕೆಂದು ವಿವರಿಸಿದರು. ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿ ಬೂತ್ ಅಧ್ಯಕ್ಷರಿಗೆ ಶುಭಹಾರೈಸಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ ಕಾಪು ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಸಂಘಟನಾತ್ಮಕವಾಗಿ ಬೂತ್ ಅಧ್ಯಕ್ಷರುಗಳು ಮುತುವರ್ಜಿ ವಹಿಸಿ ಬಲಿಷ್ಠಗೊಳಿಸಬೇಕೆಂದರು.

ವೇದಿಕೆಯಲ್ಲಿ ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಶಿರ್ವ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಮಜೂರು, ಪ್ರಧಾನ ಕಾರ್ಯದರ್ಶಿ ಸುಶಾಂತ್ ಶೆಟ್ಟಿ, ಶಕ್ತಿಕೇಂದ್ರ ಪ್ರಮುಖ್ ಆದ ಶಶಿಪ್ರಭಾ ಶೆಟ್ಟಿ, ಶಿರ್ವ ಸೊಸೈಟಿ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಕಾರ್ಯದರ್ಶಿ ಕತ್ಯಾರು ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ ಉಪಸ್ಥಿತರಿದ್ದರು.

ಸ್ಥಳೀಯ ಪಕ್ಷದ ಹಿರಿಯರಾದ ನವೀನ್ ಶೆಟ್ಟಿ, ಹಾಗೂ ಚಂದು ಶೆಟ್ಟಿಗಾರ್ ಇವರನ್ನು ಪಕ್ಷಕ್ಕೆ ನೀಡಿದ ಸೇವೆಗಾಗಿ ಗೌರವಿಸಲಾಯಿತು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿಧವಾ ಮಹಿಳೆಯರಿಗೆ ಆರ್ಥಿಕ ಸಹಾಯ ಮಾಡಲಾಯಿತು. ಸ್ಥಳಿಯ ಪಂಚಾಯತ್ ಉಪಾಧ್ಯಕ್ಷರಾದ ರಾಜ ಶೆಟ್ಟಿ, ಹಿರಿಯರಾದ ಜನಾರ್ದನ ಆಚಾರ್ಯ, ಪಂಚಾಯತ್ ಸದಸ್ಯರುಗಳು,ಬೂತ್ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸೇವೆ ಮತ್ತು‌ ಸಮರ್ಪಣಾ ಕಾರ್ಯಕ್ರಮದಡಿ ಪ್ರತಿಜ್ಞಾ ಬೋಧನೆ ಹಾಗೂ‌ ಪೋಸ್ಟ್ ಕಾರ್ಡ್ ಅಭಿಯಾನ ನಡೆಸಲಾಯಿತು.

ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ ಸೇವೆ ಮತ್ತು ಸಮರ್ಪಣ ಅಭಿಯಾನ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ:ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮ ದಿನಾಚರಣೆಯ ಪ್ರಯುಕ್ತ ಪಕ್ಷವು ಹಮ್ಮಿಕೊಂಡಿರುವ ಸೇವೆ ಮತ್ತು ಸಮರ್ಪಣ ಅಭಿಯಾನ ಗರಿಷ್ಠ ಸೇವಾ ಕಾರ್ಯಗಳ ಮೂಲಕ ಜಿಲ್ಲೆಯಾದ್ಯಂತ ಹೊಸ ಸಂಚಲನ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆಯ ಅಂಗವಾಗಿ ಸೇವೆ ಮತ್ತು ಸಮರ್ಪಣ ಅಭಿಯಾನದಡಿ ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ, ಅಮೋಘ(ರಿ.) ಉಡುಪಿ ಹಿರಿಯಡ್ಕ, ವೈದ್ಯಕೀಯ ಪ್ರತಿನಿಧಿಗಳ ಸಂಘ ಉಡುಪಿ ಇವರ ಜಂಟಿ ಸಹಯೋಗದೊಂದಿಗೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ತಜ್ಞ ವೈದ್ಯರಿಂದ ಅ.3ರಂದು ಹಿರಿಯಡ್ಕ ದೇವಾಡಿಗರ ಸಭಾ ಭವನದಲ್ಲಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜ್ಯೋತಿ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದರು.

ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಕೊರೋನಾ ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಿ ವಿಕಾಸದತ್ತ ದಾಪುಗಾಲು ಹಾಕುತ್ತಿರುವ ಸನ್ನಿವೇಶದಲ್ಲಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆ ಇದೆ. ಬಿಜೆಪಿ ದೇಶದಾದ್ಯಂತ ಘೋಷಿಸಿರುವ 20 ದಿನಗಳ ಸೇವೆ ಮತ್ತು ಸಮರ್ಪಣ ಅಭಿಯಾನವು ಉಡುಪಿ ಜಿಲ್ಲೆಯಾದ್ಯಂತ 9 ವಿವಿಧ ಸೇವಾ ಕಾರ್ಯಗಳ ಜೊತೆಗೆ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಜನತೆಗೆ ಸಾರ್ಥಕ ಆರೋಗ್ಯ ಸೇವೆ ಒದಗಿಸುವಲ್ಲಿ ಯಶಸ್ವಿಯಾಗಿದೆ. ಈ ಪ್ರಕ್ರಿಯೆ ಬಿಜೆಪಿ ಕಾರ್ಯಕರ್ತರ ಸಮರ್ಪಣಾಭಾವದ ಸೇವೆಗೆ ಜ್ವಲಂತ ನಿದರ್ಶನ ಎಂದು ಕುಯಿಲಾಡಿ ಹೇಳಿದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ ಆರೋಗ್ಯ ಶಿಬಿರಗಳ ಔಚಿತ್ಯ ಮತ್ತು ಪ್ರಧಾನಿ ಮೋದಿ ಆಡಳಿತ ಆರೋಗ್ಯ ಸೇವೆಗೆ ನೀಡಿದ ಕೊಡುಗೆಗಳನ್ನು ವಿವರಿಸಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಉಡುಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ! ರಾಮಚಂದ್ರ ಕಾಮತ್ ರವರು ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜನಪ್ರಿಯ ಯೋಜನೆಗಳನ್ನು ಉಲ್ಲೇಖಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ 71ನೇ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸುವ ಮತ್ತು ಅವರ ನೇತೃತ್ವದಲ್ಲಿ ಜಾರಿಗೆ ಬಂದಿರುವ ಜನಪರ ಯೋಜನೆಗಳನ್ನು ಪ್ರಶಂಸಿಸಿ ಪೋಸ್ಟ್ ಕಾರ್ಡ್ ಬರೆಯುವ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಕೆ.ಎಂ.ಸಿ. ಮಾರ್ಕೆಟಿಂಗ್ ವಿಭಾಗದ ಡೆಪ್ಯುಟಿ ಮೆನೇಜರ್ ಮೋಹನ್ ಶೆಟ್ಟಿ, ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಹ ಸಂಚಾಲಕ ಡಾ! ವಿದ್ಯಾಧರ ಶೆಟ್ಟಿ ಕೆ., ಅಮೋಘ(ರಿ.) ಉಡುಪಿ ಹಿರಿಯಡ್ಕ ಸಂಚಾಲಕಿ ಪೂರ್ಣಿಮಾ ಸುರೇಶ್ ನಾಯಕ್, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಮಾಂಬೆಟ್ಟು, ಗೋಪಾಲಕೃಷ್ಣ ರಾವ್ ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪೆರ್ಡೂರು ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಜಿಯಾನಂದ ಹೆಗ್ಡೆ ವಂದಿಸಿದರು.

ಈ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದ 11 ವಿವಿಧ ಸೇವಾ ವಿಭಾಗಗಳಲ್ಲಿ 450ಕ್ಕೂ ಮಿಕ್ಕಿ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಲಾಯಿತು. ಲಸಿಕೆ ವಿತರಣಾ ಕೇಂದ್ರದಲ್ಲಿ 98 ಮಂದಿ ಲಸಿಕೆ ಪಡೆದರು. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ಕೌಂಟರ್ ಮೂಲಕ ಅಪೇಕ್ಷಿತರಿಗೆ ಉಚಿತ ಔಷಧಿಯನ್ನು ವಿತರಿಸಲಾಯಿತು.

ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ‌ ಜಯಂತಿ ಹಾಗೂ‌ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಡುಪಿ:ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ‌ ಜಯಂತಿ ಹಾಗೂ‌ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ನಡೆಯಿತು. ನಂತರದಲ್ಲಿ ಮುಖ್ಯ ರಸ್ತೆಯ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾತನಾಡಿ, ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಚಿಂತನೆಗಳು ಆದರ್ಶಗಳನ್ನು ವಿವರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಶಕ್ತಿಕೇಂದ್ರ ಪ್ರಮುಖ್ ಶ್ರೀನಿವಾಸ ಪೂಜಾರಿ, ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು, ಪಂಚಾಯತ್ ಸದಸ್ಯರುಗಳು, ಹಿರಿಯರಾದ ಭಾರತಿ ಶೆಟ್ಟಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಶಿರ್ವ ಬಿಜೆಪಿ ಶಕ್ತಿಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ, ಯೋಧರಿಗೆ ಸನ್ಮಾನ

ಕಾಪು:ಶಿರ್ವ ಬಿಜೆಪಿ ಶಕ್ತಿಕೇಂದ್ರ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ‌ ನಡೆಯಿತು. ಈ ಸಂದರ್ಭದಲ್ಲಿ ಸುಮಾರು 20 ವರ್ಷಗಳಿಂದ ದೇಶದ ಗಡಿಯಲ್ಲಿ ಯೋಧರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಯೋಧರಾದ ರಾಜೇಂದ್ರ ಪಾಟ್ಕರ್ ಇವರಿಗೆ ಗೌರವಾರ್ಪಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಹಾಗೂ ಹಿರಿಯರಾದ ವಸಂತ ಶೆಣೈ ಶಿರ್ವ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀನಿವಾಸ ಶೆಣೈ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ರವೀಂದ್ರ ಪಾಟ್ಕರ್ ಕೋಡುಗುಡ್ಡೆ, ಮಂಡಲ ಕಾರ್ಯಕಾರಣಿ ಸದಸ್ಯರಾದ ಸಂತೋಷ್ ಶೆಟ್ಟಿ ಕೋಡು ಪಂಚಾಯತ್ ಸದಸ್ಯರಾದ ಪ್ರವೀಣ್ ಪೂಜಾರಿ ,ಆಶಾ ಆಚಾರ್ಯ, ಅನೂಸುಯಪೂಜಾರಿ,ಮಮತಾ ಶೆಟ್ಟಿ, ರಿಚರ್ಡ್ ಫೆರವೋ, ದೊಲ್ಫಿ, ಸಂದೀಪ ಬಂಗೇರ (ಕೀರ್ತಿ) ಹಾಗೂ ಶಿರ್ವದ ಕಾರ್ಯಕರ್ತರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಸ್ವಚ್ಚತಾ ಕಾರ್ಯಕ್ರಮ‌ ನಡೆಯಿತು.

ಕುಂತಳ ನಗರ ಮೋಕ್ಷ ಗಿರಿ ಪುಣ್ಯ ಕ್ಷೇತ್ರ ಕ್ಕೆ ಮಣಿಪುರ ಗ್ರಾಮ ದ ದೆಂದೂರು, ಮಣಿಪುರ, ಕುಂತಳ ನಗರ ದ ಪ್ರಮುಖ ನಾಯಕರ ಭೇಟಿ

ಕುಂತಳ ನಗರ ಮೋಕ್ಷ ಗಿರಿ ಪುಣ್ಯ ಕ್ಷೇತ್ರ ಕ್ಕೆ ಮಣಿಪುರ ಗ್ರಾಮ ದ ದೆಂದೂರು, ಮಣಿಪುರ, ಕುಂತಳ ನಗರ ದ ಪ್ರಮುಖ ನಾಯಕರು ಗಳು ತೋಟದ ಮನೆ ಅಶೋಕ್ ಶೆಟ್ಟಿ, ಮುಂಬೈ ಇವರ ನೇತೃತ್ವ ದಲ್ಲಿ ಭೇಟಿ ಕೊಟ್ಟು ವೀಕ್ಷಣೆ ಮಾಡಿ ಮುಂದಿನ ದಿನ ದಲ್ಲಿ ಈ ಕ್ಷೇತ್ರ ಇನ್ನು ಹೆಚ್ಚು ಪ್ರಸಿದ್ದಿ ಗೊಳ್ಳಲು ಎಲ್ಲಾ ಹಿಂದೂ ಸಂಘಟನೆ ಗಳು ಒಟ್ಟಾಗಿ ಕೆಲಸ ಮಾಡ ಬೇಕಾಗಿದೆ ಎಂದು ಕರೆ ಕೊಟ್ಟರು. ಮಣಿಪುರ ಪಂಚಾಯತ್ ಸದಸ್ಯರಾದ ಶ್ರೀ ಸಂತೋಷ್ ಶೆಟ್ಟಿ ಯವರು ಈ ಭೇಟಿ ಸಂಯೋಜನೆ ಮಾಡಿದರು. ಕುಂತಳ ನಗರ ಮೋಕ್ಷ ಗಿರಿ ಪುಣ್ಯ ಕ್ಷೇತ್ರ ಪರಿಸರ ಸೌರಕ್ಷಣಾ ವೇದಿಕೆ ಯ ಪದಾಧಿಕಾರಿಗಳು ಹಾಗೂ ಹಿತ ಚಿಂತಕರು ಭೇಟಿ ಕೊಟ್ಟು ಸಹರಿಸಿದ ಎಲ್ಲರಿಗೂ ವಂದಿಸಿದರು.

Design a site like this with WordPress.com
Get started