ನ.19 ಶುಕ್ರವಾರ ಬೆಳಿಗ್ಗೆ 11.00ಕ್ಕೆ ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ


ಉಡುಪಿ: ರಾಜ್ಯದ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿ ಮತ ಚಲಾಯಿಸಲಿರುವ ವಿಧಾನ ಪರಿಷತ್ ಚುನಾವಣೆಯು ಡಿ.10ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನ.19 ಶುಕ್ರವಾರ ಬೆಳಿಗ್ಗೆ ಗಂಟೆ 11.00ಕ್ಕೆ “ಜನಸ್ವರಾಜ್ ಸಮಾವೇಶ”ವು ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಅವರು ನ.15ರಂದು ಹೋಟೆಲ್ ಕಿದಿಯೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಯೋಜನೆಯಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದ ನಾಲ್ಕು ತಂಡಗಳು ರಾಜ್ಯಾದ್ಯಂತ ನ.19ರಿಂದ ನ.23ರ ವರೆಗೆ ಜನಸ್ವರಾಜ್ ಸಮಾವೇಶವನ್ನು ಪರಿಣಾಮಕಾರಿಯಾಗಿ ನಡೆಸಿಕೊಡಲಿವೆ.

ಉಡುಪಿಯಲ್ಲಿ ನ.19ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ನಡೆಯಲಿರುವ ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನಿಲ್ ವಿ. ಕುಮಾರ್, ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಅರವಿಂದ ಲಿಂಬಾವಳಿ, ಎಮ್.ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಜಿಲ್ಲೆಯ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ. ಸುಕುಮಾರ ಶೆಟ್ಟಿ ಮತ್ತು ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.

ಜನಸ್ವರಾಜ್ ಸಮಾವೇಶದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸದಸ್ಯರು ಪ್ರಮುಖ ಅಪೇಕ್ಷಿತರಾಗಿ ಪಾಲ್ಗೊಳ್ಳಲಿದ್ದು, ಮಾಜಿ ಜಿ.ಪಂ. ಮತ್ತು ತಾ.ಪಂ. ಸದಸ್ಯರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮಿತಿಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಮತ್ತು ಅಭಿವೃದ್ಧಿಪರ ಆಡಳಿತ, ಸ್ಥಳೀಯಾಡಳಿತ ಸಂಸ್ಥೆಗಳ ಸಬಲೀಕರಣದ ಜೊತೆಗೆ ಪ್ರತಿನಿಧಿಗಳ ಗೌರವ ಧನ ಹೆಚ್ಚಳ, ಹಳ್ಳಿಗಳ ಪುನಶ್ಚೇತನ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ ಮುಂತಾದ ಪೂರಕ ಅಂಶಗಳು ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿಯ ಪ್ರಚಂಡ ಗೆಲುವಿಗೆ ವರದಾನವಾಗಲಿದೆ ಎಂದು ಕುಯಿಲಾಡಿ ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸಮಾವೇಶದ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ ಉಪಸ್ಥಿತರಿದ್ದರು.

ನ.19ರಂದು ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ : ಕುಯಿಲಾಡಿ ಸುರೇಶ್ ನಾಯಕ್


ರಾಜ್ಯ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಜನಸ್ವರಾಜ್ ಸಮಾವೇಶವು ನ.19 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ನಡೆಯಲಿರುವ ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ಸಚಿವ ಸುನಿಲ್ ವಿ. ಕುಮಾರ್ ಸಹಿತ ಇನ್ನಿತರ ಸಚಿವ ಗಣ್ಯರು, ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಜನಸ್ವರಾಜ್ಯ ಸಮಾವೇಶದಲ್ಲಿ ವಿಶೇಷವಾಗಿ ಗ್ರಾಮ ಪಂಚಾಯತ್ ಸದಸ್ಯರು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸದಸ್ಯರ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಪಾರದರ್ಶಕ ಆಡಳಿತ, ಸ್ಥಳೀಯಾಡಳಿತ ಸಂಸ್ಥೆಗಳ ಸಬಲೀಕರಣ, ಹಳ್ಳಿಗಳ ಪುನಶ್ಚೇತನ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಕ್ರಮಗಳು ಪಕ್ಷದ ವಿಧಾನ ಪರಿಷತ್ ಅಭ್ಯರ್ಥಿಗಳ ಪ್ರಚಂಡ ಗೆಲುವಿಗೆ ವರದಾನವಾಗಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾ ವಾರ್ತಾ ಸಂಚಯ ತಂಡದೊಂದಿಗೆ ರಾಜ್ಯ ಬಿಜೆಪಿ ಧ್ಯೇಯ ಕಮಲ ತಂಡದ ಸಭೆ



ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ಮತ್ತು ಪ್ರಮುಖ ವಿಚಾರಗಳ ಹೂರಣ ಬಿಜೆಪಿ ಜಿಲ್ಲಾ ವಾರ್ತಾ ಸಂಚಯ ತಂಡದ ಜೊತೆ ರಾಜ್ಯ ಬಿಜೆಪಿ ಧ್ಯೇಯ ಕಮಲ ಮಾಸ ಪತ್ರಿಕೆ ತಂಡದ ಸಭೆಯು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಬಿಜೆಪಿ ರಾಜ್ಯ ಪ್ರಕಾಶನ ಪ್ರಕೋಷ್ಠದ ಸಂಚಾಲಕರು ಮತ್ತು ರಾಜ್ಯ ಧ್ಯೇಯ ಕಮಲ ಮಾಸಪತ್ರಿಕೆ ಸಂಪಾದಕ ಬಿದರೆ ಪ್ರಕಾಶ್ ರವರು ಧ್ಯೇಯ ಕಮಲ, ಕಮಲ ಪುಷ್ಪ ಹಾಗೂ ಜಿಲ್ಲಾ ವಾರ್ತಾ ಸಂಚಯ ಸಂಕಲನದ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಧ್ಯೇಯ ಕಮಲ ಮಾಸ ಪತ್ರಿಕೆಯ ಸಹ ಸಂಪಾದಕ ಅಜಿತ್ ಶೆಟ್ಟಿ ಹೆರಂಜೆ, ಬಿಜೆಪಿ ಪ್ರಕಾಶನ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾದ ಶ್ರೀಕಾಂತ್, ಅನಿಲ್ ಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್ ಚೇರ್ಕಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಪ್ರಕಾಶನ ಪ್ರಕೋಷ್ಠ ಸಂಚಾಲಕ ದುರ್ಗಾಪ್ರಸಾದ್, ಸಹ ಸಂಚಾಲಕ ಸತೀಶ್ ಕಾಡೋಳಿ, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಂಚಾಲಕ ಚಂದ್ರಶೇಖರ ಪ್ರಭು ಉಪಸ್ಥಿತರಿದ್ದರು.

ಕೃಷ್ಣ ಬಿ. ಪೂಜಾರಿ ಮೂಡುತೋನ್ಸೆ ನಿಧನ

ಕಲ್ಯಾಣಪುರ ಮೂಡುತೋನ್ಸೆ ಗ್ರಾಮದ ಉಗ್ಗೆಕುದ್ರು ಮೂಡುಬೆಟ್ಟು ನಿವಾಸಿ ಕೃಷ್ಣ ಬಿ. ಪೂಜಾರಿ (80 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ನ.11ರಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಮುಂಬೈನ ಉಚ್ಛ ನ್ಯಾಯಾಲಯದ ನ್ಯಾಯಾಧೀಶರ ವಾಹನ ಚಾಲಕರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ್ದರು. ಮೃತರು ಇಬ್ಬರು ಪುತ್ರರು ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆ

ಉಡುಪಿ: ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆಯು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನ.11ರಂದು ನಡೆಯಿತು.

ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಹ ಸಂಚಾಲಕ ಪ್ರಕಾಶ್ ಮಂಡೋತ್ ರವರು ಮಾತನಾಡಿ, ಅಂತಾರಾಷ್ಟ್ರೀಯ ಶಿಕ್ಷಣ ನಗರಿ ಮಣಿಪಾಲ ಹಾಗೂ ಟೆಂಪಲ್ ಟೌನ್ ಉಡುಪಿ ಎಂದು ಹೆಸರುವಾಸಿಯಾಗಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ವೈವಿಧ್ಯಮಯ ಉದ್ದಿಮೆ, ವ್ಯವಹಾರಗಳಿಗೆ ವಿಪುಲ ಅವಕಾಶವಿದೆ. ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದಿಂದ ಈ ಅವಕಾಶದ ಸದ್ಬಳಕೆ ಆಗುವಂತಾಗಬೇಕು. ಪ್ರಸಕ್ತ ಜಿಲ್ಲೆಯಲ್ಲಿರುವ ವಿವಿಧ ರಂಗಗಳ ವ್ಯಾಪಾರಸ್ಥರನ್ನು ಒಗ್ಗೂಡಿಸಿ ಪಕ್ಷದ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರದ ಅಭಿವೃದ್ಧಿಪರ ಚಿಂತನೆಗಳನ್ನು ಪ್ರಚಲಿತಗೊಳಿಸುವ ಜೊತೆಗೆ ಹೊಸ ಉದ್ದಿಮೆ ಹಾಗೂ ವ್ಯಾಪಾರ ವ್ಯವಹಾರವನ್ನು ಪ್ರಾರಂಭಿಸುವ ಯುವಶಕ್ತಿಗೆ ಉತ್ತೇಜನ ನೀಡುವ ಕೆಲಸ ಕಾರ್ಯಗಳು ಆಗಬೇಕಿದೆ. ಬುದ್ಧಿವಂತರ ಜಿಲ್ಲೆ ಎಂದೆನಿಸಿಕೊಂಡಿರುವ ಉಡುಪಿ ಜಿಲ್ಲೆಯ ಪ್ರಭಾವಿ ಕೇಂದ್ರ ಮತ್ತು ರಾಜ್ಯ ಸಚಿವರು, ಶಾಸಕರು, ಜಿಲ್ಲಾಧ್ಯಕ್ಷರ ಸಹಿತ ಪಕ್ಷದ ಕ್ರಿಯಾಶೀಲ ಮುಖಂಡರ ಸಹಕಾರದೊಂದಿಗೆ ಜಿಲ್ಲೆಯ ಪ್ರಕೋಷ್ಠದ ಚಟುವಟಿಕೆಗಳು ವೇಗವನ್ನು ಪಡೆದು ರಾಜ್ಯದಲ್ಲೇ ಮಾದರಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಎಂಬ ಹೆಗ್ಗಳಿಕೆ ಪಾತ್ರವಾಗುವಂತಾಗಬೇಕು. ಈ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಮತ್ತು ಸಹಕಾರ ನೀಡಲು ರಾಜ್ಯ ತಂಡ ಸದಾ ಸಿದ್ಧವಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಉಡುಪಿ ಜಿಲ್ಲೆ ಶಿಕ್ಷಣ, ಬ್ಯಾಂಕಿಂಗ್, ಕೃಷಿ, ಮೀನುಗಾರಿಕೆ, ಹೈನುಗಾರಿಕೆ ಕ್ಷೇತ್ರಗಳ ಜೊತೆಗೆ ವ್ಯಾಪಾರ, ವಾಣಿಜ್ಯದಲ್ಲೂ ಮುಂಚೂಣಿಯಲ್ಲಿದೆ. ರಾಜ್ಯ ತಂಡದ ಸಮಯೋಚಿತ ಮಾರ್ಗದರ್ಶನ ಮತ್ತು ವಿಚಾರ ವಿನಿಮಯದ ಸದುಪಯೋಗವನ್ನು ಪಡೆದು ವಿನೂತನ ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಉಡುಪಿ ಜಿಲ್ಲೆಯ ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಒಂದು ಮಾದರಿ ಪ್ರಕೋಷ್ಠವಾಗಿ ಮೂಡಿಬರುವಂತಾಗಲಿ ಎಂದರು.

ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅನಿಲ್ ಒಡೆಯರ್, ರಾಜ್ಯ ಸಮಿತಿ ಸದಸ್ಯ ಮತ್ತು ಉಡುಪಿ ಜಿಲ್ಲಾ ಪ್ರಭಾರಿ ರಾಮಕೃಷ್ಣ ರಾವ್ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್ ಚೇರ್ಕಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಂಚಾಲಕ ಚಿಟ್ಟೆ ರಾಜಗೋಪಾಲ್ ಹೆಗ್ಡೆ, ಸಹ ಸಂಚಾಲಕ ಸಚಿನ್ ಜಿ. ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್ ಉಪಸ್ಥಿತರಿದ್ದರು.

ಅಂಬಲಪಾಡಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಉಡುಪಿ: ಸ್ವಸ್ತಿಕ್ XI ಕ್ರಿಕೆಟರ್ಸ್ ಅಂಬಲಪಾಡಿ ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ಆಶ್ರಯದಲ್ಲಿ ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

ಉಡುಪಿ ಜಿ.ಪಂ. ನಿಕಟಪೂರ್ವ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮತ್ತು ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಪಾಧ್ಯಕ್ಷೆ ವಿಜಯಾ ಜಿ. ಬಂಗೇರ ಇವರು ಮೇರು ನಟ, ಮಾನವತಾವಾದಿ, ಕನ್ನಡ ನಾಡಿನ ಅನರ್ಘ್ಯ ರತ್ನ ಎನಿಸಿರುವ ಪುನೀತ್ ರಾಜ್ ಕುಮಾರ್ ರವರ ಸಾಧನೆ, ಉದಾತ್ತ ಚಿಂತನೆಗಳು ಮತ್ತು ಜೀವನಾದರ್ಶಗಳ ಗುಣಗಾನಗೈದು ನುಡಿ ನಮನ ಸಲ್ಲಿಸಿದರು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಮೊಂಬತ್ತಿ ಬೆಳಗಿಸಿ, ಮೌನ ಪ್ರಾರ್ಥನೆಯೊಂದಿಗೆ ಅಗಲಿದ ಅವರ ದಿವ್ಯಾತ್ಮಕ್ಕೆ ಚಿರ ಶಾಂತಿ ಕೋರುವ ಮೂಲಕ ಅಂತಿಮ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಸಮಾಜ ಸೇವಕಿ ವಿದ್ಯಾ ಶೆಟ್ಟಿ, ಯುವಕ ಮಂಡಲ(ರಿ.) ಅಂಬಲಪಾಡಿ ಅಧ್ಯಕ್ಷ ಹರೀಶ್ ಪಾಲನ್, ಬಿಜೆಪಿ ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ, ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಸುವರ್ಣ, ಅಂಬೇಡ್ಕರ್ ಯುವ ಸೇನೆ ಉಡುಪಿ ತಾಲೂಕು ಅಧ್ಯಕ್ಷ ದಯಾನಂದ್ ಕಪ್ಪೆಟ್ಟು, ಸಾಮಾಜಿಕ ಕಾರ್ಯಕರ್ತ ಸತೀಶ್ ಭಂಡಾರಿ, ಸ್ವಸ್ತಿಕ್ XI ಕ್ರಿಕೆಟರ್ಸ್ ಅಧ್ಯಕ್ಷ ಪ್ರಶಾಂತ್ ಕೆ.ಎಸ್. ಅಂಬಲಪಾಡಿ, ಪದಾಧಿಕಾರಿಗಳಾದ ಅಜಿತ್ ಕಪ್ಪೆಟ್ಟು, ಸುಜಿತ್ ಕಪ್ಪೆಟ್ಟು, ಕಾರ್ತಿಕ್ ಆಚಾರ್ಯ, ಕೀರ್ತಿ ಕಪ್ಪೆಟ್ಟು, ಸುನಿಲ್ ಕುಮಾರ್ ಅಂಬಲಪಾಡಿ, ಕಾರ್ತಿಕ್ ಅಂಬಲಪಾಡಿ, ನಿಶಾಂತ್ ಕಪ್ಪೆಟ್ಟು, ಗಣಪತಿ ಶೆಣೈ ಹಾಗೂ ಸ್ವಸ್ತಿಕ್ XI ಕ್ರಿಕೆಟರ್ಸ್ ಸದಸ್ಯರು ಮತ್ತು ಪುನೀತ್ ರಾಜ್ ಕುಮಾರ್ ರವರ ಅಭಿಮಾನಿಗಳು ಉಪಸ್ಥಿತರಿದ್ದರು.

ಆದಿಉಡುಪಿಯಲ್ಲಿ ಫ್ಲೆಕ್ಸಿಬಿಜ್ ಅಕೌಂಟಿಂಗ್ ಸರ್ವಿಸಸ್ ಪ್ರೈ.ಲಿ. ಇದರ ನೂತನ ಶಾಖೆ ಉದ್ಘಾಟನೆ



ಉಡುಪಿ:ಫ್ಲೆಕ್ಸಿಬಿಜ್ ಅಕೌಂಟಿಂಗ್ ಸರ್ವಿಸಸ್ ಪ್ರೈ.ಲಿ., ಬ್ರಹ್ಮಾವರ ಇದರ ನೂತನ ಶಾಖೆಯ ಉದ್ಘಾಟನಾ ಸಮಾರಂಭವು ನ.7ರಂದು ಆದಿಉಡುಪಿಯ ಜೈ ಜವಾನ್ ರೋಡ್ ನಲ್ಲಿರುವ ವೀರ ಭವನ ಕಟ್ಟಡದಲ್ಲಿ ನಡೆಯಿತು.

ಹಿರಿಯ ಲೆಕ್ಕ ಪರಿಶೋಧಕ ಸಿಎ. ದೇವ್ ಆನಂದ್ ಅವರು ಜ್ಯೋತಿ ಬೆಳಗಿಸಿ ನೂತನ ಶಾಖೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಸೈನಿಕರ ವಿವಿದೋದ್ಧೇಶ ಸಹಕಾರ ಸಂಘ (ರಿ.) ಅಧ್ಯಕ್ಷ ಕೆ.ಸುಭಾಷ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪರಮಶಿವ, ಸಿಎ. ರೇಖಾ ದೇವಾನಂದ್, ಫ್ಲೆಕ್ಸಿಬಿಜ್ ಅಕೌಂಟಿಂಗ್ ಸರ್ವಿಸಸ್ ಪ್ರೈ.ಲಿ. ಆಡಳಿತ ನಿರ್ದೇಶಕರಾದ ಸಚಿನ್ ಪೂಜಾರಿ, ಧೀರಜ್ ಜೆ. ಶೆಟ್ಟಿ ಹಾಗೂ ನೂತನ ಶಾಖೆ ಕಛೇರಿಯ ಪಾಲುದಾರರಾದ ಕಾರ್ತಿಕ್ ಬಿ.ಎಸ್., ರಕ್ಷಿತ್ ಶೆಟ್ಟಿಗಾರ್, ಅಭಿಷೇಕ್ ಆಚಾರ್ಯ, ಸಿಎಸ್. ಸುಷ್ಮಾ ಶ್ರೀಪಾದ್ ಉಪಸ್ಥಿತರಿದ್ದರು.

ಫ್ಲೆಕ್ಸಿಬಿಜ್ ಅಕೌಂಟಿಂಗ್ ಸರ್ವಿಸಸ್ ಪ್ರೈ.ಲಿ. ಇದರ ಪ್ರಧಾನ ಕಛೇರಿ ಬ್ರಹ್ಮಾವರದ ಎಸ್.ಎಮ್.ಎಸ್. ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದು ಈ ಸಂಸ್ಥೆಯು ಸಿಎ (ಚಾರ್ಟರ್ಡ್ ಅಕೌಂಟೆಂಟ್), ಸಿಎಸ್ (ಕಂಪನಿ ಸೆಕ್ರೆಟರಿ) ಅವರನ್ನೊಳಗೊಂಡಿದ್ದು, ಅಕೌಂಟಿಂಗ್ ಸರ್ವಿಸಸ್, ಬುಕ್ ಕೀಪಿಂಗ್, ಐಟಿ ಫೈಲಿಂಗ್, ಜಿಎಸ್ಟಿ, ಟಿಡಿಎಸ್ ಫೈಲಿಂಗ್, ರಿಜಿಸ್ಟ್ರೇಷನ್, ಕಂಪೆನಿ ರಿಜಿಸ್ಟ್ರೇಷನ್ ಮತ್ತು ಕಂಪ್ಲೈನ್ಸ್, ಇಂಟರ್ನಲ್ ಆಡಿಟ್, ಪ್ರೊಜೆಕ್ಟ್ ರಿಪೋರ್ಟ್, ಡಿಜಿಟಲ್ ಸಿಗ್ನೇಚರ್ ಸಹಿತ ಇನ್ನಿತರ ಸೇವೆಯನ್ನು ನೀಡುತ್ತಿದೆ. ಹೆಚ್ಚಿನ ಮಾಹಿತಿಗಾಗಿ http://www.flexibizservices.com ಸಂಪರ್ಕಿಸಬಹುದು.

ಅಲೆವೂರು ಕರ್ವಾಲು ನಮ್ಮೂರ ಕನ್ನಡ ಶಾಲಾ ಉತ್ಸವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ


ಶ್ರೀ ವಿಷ್ಣು ಸ್ನೇಹ ಬಳಗ ಕರ್ವಾಲು ಇದರ ವತಿಯಿಂದ ಕರ್ವಾಲಿನ ಸರಕಾರಿ ಶಾಲೆಯಲ್ಲಿ *ನಮ್ಮೂರ ಕನ್ನಡ ಶಾಲಾ ಉತ್ಸವ* ಎನ್ನುವ ಹೆಸರಿನಲ್ಲಿ ವಿಶಿಷ್ಠವಾಗಿ ಆಚರಿಸಲಾಯಿತು.

ಬೆಳಿಗ್ಗಿನಿಂದ ಸಂಜೆಯತನಕ ಊರಿನವರು ಹಾಗೂ ಶಾಲಾ ಪಕ್ಕದ ಊರಿನ ಶಾಲಾಭಿಮಾನಿಗಳು ಒಟ್ಟು ಸೇರಿ ಶಾಲಾ ಸ್ವಚ್ಚತಾ ಕಾರ್ಯಕ್ರಮ, ಹೂದೋಟ, ಪೌಷ್ಟಿಕ ತೋಟ, ಬಣ್ಣ ಬಳಿಯುವುದು ಇತ್ಯಾದಿ ಕೆಲಸಗಳನ್ನು ಶ್ರಮದಾನ ಮೂಲಕ ನಡೆಸಿದರು. ಸಭಾ ಕಾರ್ಯಕ್ರಮ ನಡೆಸಿ ಕನ್ನಡ ತಾಯಿಗೆ ಹಾಗೂ ಭಾರತಾಂಬೆಗೆ ಪುಷ್ಪಾರ್ಚನೆ ಮಾಡಲಾಯಿತು. ಭಾರತ 105 ಕೋಟಿ ವ್ಯಾಕ್ಸಿನ್ ನೀಡಿ ದಾಖಲೆ ಮಾಡಿರುವ ಸಂದರ್ಭದಲ್ಲಿ ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 7 ಜನ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಉದ್ಯಮಿಗಳಾದ ಗುರ್ಮೆ ಸುರೇಶ್ ಶೆಟ್ಟಿ, ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ಮಾಜಿ‌ ಜಿಲ್ಲಾ ಪಂಚಾಯತ್ ಸದಸ್ಯರಾದ ನಯನ ಗಣೇಶ್ ಶಾಲಾ ಮುಖ್ಯೋಪಾಧ್ಯಾಯರಾದ ಸವಿತಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಉಪಸ್ಥಿತರಿದ್ದರು.

ನಿಕಟಪೂರ್ವ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು ಭೇಟಿ‌ ನೀಡಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ ಸೌಮ್ಯ ಸುರೇಶ್ ನಾಯಕ್, ಶ್ರೀಮತಿ ಎಸ್ ಶೆಟ್ಟಿ, ಮಣಿಪುರ ಪಂಚಾಯತ್ ಸದಸ್ಯರಾದ ಪದ್ಮನಾಭ ನಾಯಕ್, ಪ್ರಜ್ವಲ್ ಹೆಗ್ಡೆ, ಸ್ಥಳೀಯ ಪ್ರಮುಖರಾದ ರಘುರಾಮ ಭಟ್, ಅಶೋಕ್ ಕುಮಾರ್ ಅಲೆವೂರು, ಸಂತೋಷ್ ಶೆಣೈ, ಸುರೇಶ್ ಶೆಟ್ಟಿಗಾರ್ ಕರ್ವಾಲು, ಸುರೇಶ್ ಕರ್ವಾಲು, ಗಣಪತಿ ಪಾಟ್ಕರ್, ಸುರೇಖ ಸುರೇಂದ್ರ ನಾಯಕ್, ಪ್ರತಿಭಾ ಪಾಟ್ಕರ್ ಅಲೆವೂರು ಯುವಕ ಸಂಘ ಹಾಗೂ ಯುವಸಂಘಟನೆ ಕೊಡಂಗಳ ಇದರ ಸದಸ್ಯರುಗಳು, ಶ್ರೀ ವಿಷ್ಣು ಸ್ನೇಹ ಬಳಗದ ಸದಸ್ಯರುಗಳು‌ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮೊದಲ ಹಾಗೂ ನಂತರದ ಭಾವಚಿತ್ರಗಳಿವು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನ್ನಡ ನಾಡಿನ ಅನರ್ಘ್ಯ ರತ್ನ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ ಜಿಲ್ಲಾ ಬಿಜೆಪಿ ಸಂತಾಪ

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕ ನಟ, ಅಭಿಮಾನಿಗಳ ಪ್ರೀತಿಯ ‘ಅಪ್ಪು’ ಎಂದೇ ಖ್ಯಾತರಾಗಿದ್ದ ‘ಪವರ್ ಸ್ಟಾರ್’ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಭಾವಪೂರ್ಣ ಶೃದ್ಧಾಂಜಲಿಯನ್ನು ಸಮರ್ಪಿಸುತ್ತದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ರವರು ತನ್ನ ಬದುಕಿನ ಅತ್ಯಮೂಲ್ಯ ಕ್ಷಣಗಳನ್ನು ಕೇವಲ ಚಿತ್ರರಂಗಕ್ಕೆ ಮಾತ್ರ ಮೀಸಲಿಡದೆ ಕನ್ನಡ ನಾಡಿನಾದ್ಯಂತ ಅನೇಕ ಅನಾಥಾಶ್ರಮ, ವೃದ್ಧಾಶ್ರಮ, ಗೋಶಾಲೆ ಹಾಗೂ ಉಚಿತ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಮಾನವತಾವಾದವನ್ನು ಮೇಳೈಸಿಕೊಂಡು ವಿಶ್ವ ಮಾನವರೆನಿಸಿಕೊಂಡಿದ್ದಾರೆ.

ಕನ್ನಡ ನಾಡಿನ ಕಣ್ಮಣಿಯಾಗಿದ್ದ ನಟ ಸಾರ್ವಭೌಮ ಡಾ! ರಾಜ್ ಕುಮಾರ್ ರವರು ಹಾಕಿ ಕೊಟ್ಟ ಸನ್ಮಾರ್ಗದಲ್ಲಿ ಮುನ್ನಡೆದು ನೇತ್ರ ದಾನದಂತಹ ಉದಾತ್ತ ಜೀವನ ಮೌಲ್ಯಗಳನ್ನು ನಾಡಿಗೆ ನೀಡಿರುವ ಪುನೀತ್ ರಾಜ್ ಕುಮಾರ್ ರವರು ಕನ್ನಡ ನಾಡಿನ ಅನರ್ಘ್ಯ ರತ್ನವೆನಿಸಿಕೊಂಡಿದ್ದಾರೆ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಾಜನೂರಿಗೆ ಹೋಗಿಬರುತ್ತೇನೆಂದಿದ್ದ ‘ಪವರ್ ಸ್ಟಾರ್’ ಮರಳಿ ಬಾರದ ಲೋಕಕ್ಕೆ

ಬೆಂಗಳೂರು: ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇನ್ನಿಲ್ಲ ಎಂಬ ಸುದ್ದಿ ಬರ ಸಿಡಿಲಿನಂತೆ ಬಂದೆರಗಿದೆ.

ದೈಹಿಕ ಕಸರತ್ತು ನಡೆಸುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಪ್ಪುರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪುನೀತ್ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ನೀಡಿದ ಹೇಳಿಕೆಯೇ ಅಭಿಮಾನಿಗಳಲ್ಲಿ ಕಳವಳ ಮೂಡಿಸಿತ್ತು. ಇದೀಗ ಕನ್ನಡ ಚಿತ್ರರಂಗದ ಅಪ್ರತಿಮ ನಟ ಅಗಲಿದ್ದಾರೆ ಎಂಬ ವಾರ್ತೆ ನುಂಗಲಾರದ ತುತ್ತಾಗಿದೆ. ಖ್ಯಾತ ನಟನ ನಿಧನಕ್ಕೆ ಇಡೀ ರಾಜ್ಯವೇ ಶೋಕ ಸಾಗರದಲ್ಲಿ ಮುಳುಗಿದೆ.

ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ಇಂದು ಪುನೀತ್ ರಾಜ್ಕುಮಾರ್ ಗಾಜನೂರಿಗೆ ಭೇಟಿ ನೀಡುವವರಿದ್ದರಂತೆ. ಎರಡು ತಿಂಗಳ ಹಿಂದೆ ಗಾಜನೂರಿಗೆ ಭೇಟಿ ನೀಡಿದ್ದ ಅಪ್ಪು ಸೋದರತ್ತೆ ನಾಗಮ್ಮ ಆರೋಗ್ಯ ವಿಚಾರಿಸಿ ಅಲ್ಲಿಂದ ತೆರಳಿದ್ದರು. ಸೋದರತ್ತೆ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಇಂದೂ ಸಹ ಅವರ ಆರೋಗ್ಯ ವಿಚಾರಿಸುವ ಸಲುವಾಗಿ ಗಾಜನೂರಿಗೆ ತೆರಳಲು ಅಪ್ಪು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ.

Design a site like this with WordPress.com
Get started