ಉಡುಪಿ: ರಾಜ್ಯದ ಬೇರೆ ಬೇರೆ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ. ಯಥಾ ಸ್ಥಿತಿಯಂತೆ ಬಸ್ ಸಂಚಾರ ಇರುತ್ತದೆ ಎಂದು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಕೊರೋನಾ 1 ಮತ್ತು 2ರ ಬಂದ್ ನಿಂದ ನಮ್ಮ ಬಸ್ ಉದ್ಯಮ ಸೊರಗಿ ಹೋಗಿದೆ. ಯಾವುದೇ ಕಾರಣಕ್ಕೂ ಬಸ್ ಬಂದ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ. ಈಗ ಬಸ್ ಉದ್ಯಮ ಸ್ವಲ್ಪ ಚೇತರಿಸಿಕೊಳ್ಳುತ್ತಾ ಇದೆ. ಈ ಹಂತದಲ್ಲಿ ಪುನಃ ಬಂದ್ ಮಾಡುವ ಪ್ರಶ್ನೆ ನಮ್ಮ ಮುಂದಿಲ್ಲ. ನಮ್ಮನ್ನು ಯಾವುದೇ ಸಂಘಟನೆಗಳು ಇನ್ನು ಮುಂದೆ ಬಂದ್ ಗಾಗಿ ಕೇಳಿಕೊಳ್ಳಬಾರದು ಮತ್ತು ಅದನ್ನು ಬೆಂಬಲಿಸುವ ಪ್ರಶ್ನೆ ನಮ್ಮಲ್ಲಿ ಇಲ್ಲ ಎಂದು ಕುಯಿಲಾಡಿ ತಿಳಿಸಿದ್ದಾರೆ.
ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯರವರು ದೇಶಕ್ಕಾಗಿ ಬದುಕಿದವರು. ಸಾಮಾನ್ಯ ಕುಟುಂಬದಲ್ಲಿ ಜನಿಸಿ ಅದೆಷ್ಟು ಬುದ್ಧಿವಂತರಾಗಿದ್ದರೂ ಯಾವುದೇ ಉದ್ಯೋಗವನ್ನು ಅರಸದೆ ತನ್ನ ಜೀವನವನ್ನು ರಾಷ್ಟ್ರಕ್ಕಾಗಿ ಸಮರ್ಪಿಸಿಕೊಂಡವರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರೇರಣೆಯನ್ನು ಪಡೆದು ಅದರ ಸೂಚನೆಯ ಮೇರೆಗೆ ಭಾರತೀಯ ಜನ ಸಂಘಕ್ಕೆ ಬಂದು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ನಿಧನದ ನಂತರ ದೇಶಾದ್ಯಂತ ತನ್ನ ಜವಾಬ್ದಾರಿಯನ್ನು ಹೊತ್ತುಕೊಂಡು ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಕುತಂತ್ರಿಗಳ ಷಡ್ಯಂತ್ರದ ಪಿತೂರಿಗೆ ಬಲಿಯಾದರು. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಸೆ.25ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ 105ನೇ ಜನ್ಮದಿನಾಚರಣೆಯ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಸೇವಾ ಕಾರ್ಯದ ಪ್ರಯುಕ್ತ ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ನೇತೃತ್ವದಲ್ಲಿ ಆಯೋಜಿಸಿದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸೆ.17 ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆಯ ದಿನದಿಂದ ಅ.7ರ ವರೆಗೆ ನಡೆಯುವ ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಗರಿಷ್ಠ ಸೇವಾ ಕಾರ್ಯಗಳು ನಡೆಯುತ್ತಿರುವುದು ಪ್ರಶಂಸನೀಯ. ಪ್ರಧಾನಿ ಮೋದಿಯವರಿಗೆ ಖುಷಿ ಕೊಡುವ ಕಾರ್ಯ ಸೇವೆ. ಈ ಅಭಿಯಾನದಡಿ ಅ.2ರಂದು ಗಾಂಧಿ ಜಯಂತಿ ಆಚರಣೆಯು ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ. ರಕ್ತದಾನ ಶ್ರೇಷ್ಠ ದಾನ. ಕೊರೋನಾ ಸಂದರ್ಭದಲ್ಲಿಯೂ ಪಕ್ಷದ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿರುವುದು ಅರ್ಥಪೂರ್ಣ. ರಕ್ತದಾನ ಮಾಡಿರುವ ಎಲ್ಲಾ ಕಾರ್ಯಕರ್ತರು ಮತ್ತು ವೈದ್ಯಕೀಯ ತಂಡಕ್ಕೆ ಅಭಿನಂದನೆಗಳು. ಸೇವೆ ಮತ್ತು ಸಮರ್ಪಣ ಅಭಿಯಾನದ ಎಲ್ಲಾ ಸೇವಾ ಕಾರ್ಯಗಳು ಯಶಸ್ವಿಯಾಗಲಿ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ವಕ್ತಾರ ಗುರು ಪ್ರಸಾದ್ ಶೆಟ್ಟಿ ಕಟಪಾಡಿ, ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿಸೋಜ, ಆಸಿಫ್ ಕಟಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಚಂದ್ರಶೇಖರ ಪ್ರಭು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ್, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಕಾರ್ಯದರ್ಶಿ ಶ್ರೀವತ್ಸ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್(ರಿ.) ಉಡುಪಿ ಅಧ್ಯಕ್ಷ ಸತೀಶ್ ಸಾಲ್ಯಾನ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ರಕ್ತನಿಧಿ ವಿಭಾಗದ ಡಾ! ವಿನು ರಾಜೇಂದ್ರನ್, ನಗರಸಭಾ ಸದಸ್ಯರಾದ ರಜನಿ ಹೆಬ್ಬಾರ್, ಸಂತೋಷ್ ಜತ್ತನ್, ಗಿರಿಧರ್ ಆಚಾರ್ಯ, ಅಶೋಕ್ ನಾಯ್ಕ್, ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ಪದಾಧಿಕಾರಿಗಳಾದ ಸಂದೇಶ್, ಶರತ್ ರಾಜ್, ಕಾರ್ತಿಕ್ ಪಾಲನ್, ಯೋಗೀಶ್ ದೇವಾಡಿಗ, ಅಕ್ಷಯ್ ಬಂಗೇರ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ:ಸೆ.17ರಂದು ವಿಶ್ವ ನಾಯಕ, ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆಯಿಂದ ಮೊದಲ್ಗೊಂಡು ಅ.7ರಂದು ಅವರು ಚುನಾಯಿತ ಸರಕಾರದ ನೇತೃತ್ವ ವಹಿಸಿ 20 ವರ್ಷಗಳು ತುಂಬುವ ದಿನದ ಸವಿ ನೆನಪಿಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರವರು ದೇಶದಾದ್ಯಂತ ಘೋಷಿಸಿರುವ 20 ದಿನಗಳ ಸೇವೆ ಮತ್ತು ಸಮರ್ಪಣ ಅಭಿಯಾನದ ಎಲ್ಲಾ 9 ಸೇವಾ ಕಾರ್ಯಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಆಯೋಜಿಸಿ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಬಿಜೆಪಿ ಜಿಲ್ಲಾ ಸೇವೆ ಮತ್ತು ಸಮರ್ಪಣ ಅಭಿಯಾನದ ಜಿಲ್ಲಾ ಸಂಚಾಲಕರು, ಒಂಬತ್ತು ಕಾರ್ಯಕ್ರಮಗಳ ಜಿಲ್ಲಾ ಮತ್ತು ಮಂಡಲ ಸಂಚಾಲಕರು ಮತ್ತು ಬಿಜೆಪಿ ಜಿಲ್ಲಾ ಕಾರ್ಯತಂಡದ ಗೂಗಲ್ ಮೀಟ್ ವರ್ಚುವಲ್ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬ ದಿನಾಚರಣೆಯ ಅಂಗವಾಗಿ ನಡೆದ ಸೇವಾ ಕಾರ್ಯಗಳ ಮೂಲಕ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಸೇವೆ ಮತ್ತು ಸಮರ್ಪಣೆ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಆರು ಮಂಡಲಗಳ ವ್ಯಾಪ್ತಿಯಲ್ಲಿ ವಿವಿಧ ವಿಭಾಗಗಳ ಸೇವಾ ಕಾರ್ಯಗಳು ವೇಗ ಪಡೆದಿವೆ.
ಈ ಅಭಿಯಾನದ ಅಂಗವಾಗಿ ಸೆ.25ರಂದು ಏಕಾತ್ಮ ಮಾನವ ವಾದದ ಪ್ರತಿಪಾದಕ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಜನ್ಮ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಎಲ್ಲಾ ಬೂತ್ ಗಳಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವಿವಿಧ ಸೇವಾ ಕಾರ್ಯಗಳನ್ನು ಆಯೋಜಿಸುವ ಮೂಲಕ ಅವಿಸ್ಮರಣೀಯವಾಗಿ ಆಚರಿಸುವ ಗುರಿ ಹೊಂದಲಾಗಿದೆ. ಈ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ವತಿಯಿಂದ ನಡೆಯುವ ರಕ್ತದಾನ ಶಿಬಿರವನ್ನು ಉದ್ಘಾಟಿಸುವ ಮೂಲಕ ಜಿಲ್ಲೆಯಾದ್ಯಂತ ಆಚರಣೆಗೆ ಚಾಲನೆ ನೀಡಲಿದ್ದಾರೆ.
ಸೇವೆ ಮತ್ತು ಸಮರ್ಪಣ ಅಭಿಯಾನದ ಈ ಕೆಳಗಿನ ಎಲ್ಲಾ 9 ವಿಧದ ಸೇವಾ ಚಟುವಟಿಕೆಗಳನ್ನು ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಮಟ್ಟಕ್ಕೆ ತಲುಪಿಸುವ ಮೂಲಕ ಸಂಘಟಿತ ಪ್ರಯತ್ನ ಮತ್ತು ಬದ್ಧತೆಯಿಂದ ಜಿಲ್ಲೆಯಲ್ಲಿ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಕುಯಿಲಾಡಿ ಹೇಳಿದರು.
* ಬೂತ್ ಮಟ್ಟದಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ, ನಮೋ ಆಪ್ ಸೇವೆ ಬಳಕೆ, ಪ್ರತಿಜ್ಞಾ ವಿಧಿ ಸ್ವೀಕಾರ ಇತ್ಯಾದಿ
* ಪರಿಸರ ಸ್ನೇಹಿ ಕಾರ್ಯದಲ್ಲಿ ನದಿ-ಕೆರೆ ಸ್ವಚ್ಛತೆ, ಪ್ಲಾಸ್ಟಿಕ್ ಮುಕ್ತ ಅಭಿಯಾನ, ಸಸಿ ನೆಡುವುದು ಇತ್ಯಾದಿ
* ಆರೋಗ್ಯ ಚಟುವಟಿಕೆಗಳಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ, ಲಸಿಕೆ ವಿತರಣಾ ಅಭಿಯಾನ ಇತ್ಯಾದಿ
* ಸೇವಾ ಕಾರ್ಯಗಳಲ್ಲಿ ಆಸ್ಪತ್ರೆ ಹಾಗೂ ಅನಾಥಾಶ್ರಮಗಳಲ್ಲಿ ಹಣ್ಣು ಹಂಪಲು ವಿತರಣೆ, ಅಂಧರಿಗೆ ನೆರವು, ಪಡಿತರ ಚೀಲ ವಿತರಣೆ ಇತ್ಯಾದಿ
* ಪ್ರಚಾರ ಕಾರ್ಯದಲ್ಲಿ ಪ್ರದರ್ಶನಗಳು, ಸಭೆಗಳು, ಇ-ಸಂವಾದ, ವಿಚಾರ ಸಂಕಿರಣ, ಹೋರ್ಡಿಂಗ್ಸ್ ಇತ್ಯಾದಿ
* ಮಾಧ್ಯಮ ವಿಭಾಗದಲ್ಲಿ ಲೇಖನ, ಪ್ಯಾನಲ್ ಚರ್ಚೆ, ಕ್ಲಬ್ ಹೌಸ್ ಚಟುವಟಿಕೆ ಇತ್ಯಾದಿ
* ಸಾಮಾಜಿಕ ಜಾಲತಾಣದ ಮೂಲಕ ವಿವಿಧ ಯೋಜನೆಗಳ ಫಲಾನುಭವಿಗಳ ಹೇಳಿಕೆ, ಇನ್ಫೋಗ್ರಾಫಿಕ್ಸ್ ಇತ್ಯಾದಿ
* ಸೆ.25ರಂದು ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಆಚರಣೆ
* ಅ.2ರಂದು ಗಾಂಧಿ ಜಯಂತಿ ಆಚರಣೆ
ಜಿಲ್ಲಾ ಬಿಜೆಪಿಯ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ನಡೆಯುತ್ತಿರುವ “ಸೇವೆ ಮತ್ತು ಸಮರ್ಪಣ ಅಭಿಯಾನ”ವನ್ನು ವ್ಯವಸ್ಥಿತವಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಬಿಜೆಪಿ ಸೂಚನೆಯಂತೆ ನೇಮಕಗೊಂಡಿರುವ ಅಭಿಯಾನದ ಜಿಲ್ಲಾ ಸಂಚಾಲಕರು, ಜಿಲ್ಲಾ ಕಾರ್ಯಕ್ರಮಗಳ ಸಂಚಾಲಕರು ಮತ್ತು ಮಂಡಲ ಕಾರ್ಯಕ್ರಮಗಳ ಸಂಚಾಲರು ಹಾಗೂ ಬಿಜೆಪಿ ಉಡುಪಿ ನಗರ, ಉಡುಪಿ ಗ್ರಾಮಾಂತರ, ಕಾಪು, ಕಾರ್ಕಳ, ಕುಂದಾಪುರ ಮತ್ತು ಬೈಂದೂರು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಮೋರ್ಚಾ, ಪ್ರಕೋಷ್ಠ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಗಳ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಸಂಘಟಿತ ಶ್ರಮ ಅಭಿನಂದನೀಯ ಎಂದು ಕುಯಿಲಾಡಿ ಹೇಳಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿಯವರು ಸೇವೆ ಮತ್ತು ಸಮರ್ಪಣ ಅಭಿಯಾನದ ಸೇವಾ ಚಟುವಟಿಕೆಗಳ ಪರಿಣಾಮಕಾರಿ ಆಯೋಜನೆ ಮತ್ತು ದೈನಂದಿನ ಚಟುವಟಿಕೆಗಳ ವರದಿ ನೀಡುವ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.
ಸೇವೆ ಮತ್ತು ಸಮರ್ಪಣ ಅಭಿಯಾನದ ಜಿಲ್ಲಾ ಸಂಚಾಲಕರಾದ ಸದಾನಂದ ಉಪ್ಪಿನಕುದ್ರು ಮತ್ತು ಶಿವಕುಮಾರ್ ಅಂಬಲಪಾಡಿ ಸೆ.17ರಿಂದ ಜಿಲ್ಲೆಯಾದ್ಯಂತ ನಡೆದ ಮಂಡಲವಾರು ಸಭೆಗಳು ಹಾಗೂ ಸೇವಾ ಚಟುವಟಿಕೆಗಳ ವರದಿ ಮಂಡಿಸಿದರು.
ಸೇವೆ ಮತ್ತು ಸಮರ್ಪಣ ಅಭಿಯಾನದ 9 ಕಾರ್ಯಕ್ರಮಗಳ ಜಿಲ್ಲಾ ಸಂಚಾಲಕರುಗಳಾದ ಶ್ರೀಶ ನಾಯಕ್ ಪೆರ್ಣಂಕಿಲ, ಸುವರ್ಧನ್ ನಾಯಕ್, ಪ್ರವೀಣ್ ಕುಮಾರ್ ಗುರ್ಮೆ, ವಿಖ್ಯಾತ್ ಶೆಟ್ಟಿ, ಗಿರೀಶ್ ಎಮ್. ಅಂಚನ್, ಡಾ! ರಾಮಚಂದ್ರ ಕಾಮತ್, ರೇಶ್ಮಾ ಉದಯ ಶೆಟ್ಟಿ, ವೀಣಾ ಎಸ್. ಶೆಟ್ಟಿ, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಪ್ರತಾಪ್ ಚಂದ್ರ ಶೆಟ್ಟಿ ಚೇರ್ಕಾಡಿ, ಶ್ರೀನಿಧಿ ಹೆಗ್ಡೆ, ರಘುವೀರ್ ಶೆಣೈ, ಚಂದ್ರಶೇಖರ ಪ್ರಭು, ಪ್ರಭಾಚಂದ್ರ, ಕಿಶೋರ್ ಕುಮಾರ್, ಸವಿತಾ ಶಿವಾನಂದ ಕೋಟ್ಯಾನ್, ಸುನೀತಾ ನಾಯ್ಕ್, ಮಾಲತಿ ನಾಯ್ಕ್, ಸುಪ್ರಸಾದ್ ಶೆಟ್ಟಿ, ರವೀಂದ್ರ ಮಡಿವಾಳ, ಪ್ರಮೀಳಾ ಹರೀಶ್, ನಯನಾ ಗಣೇಶ್ ಹಾಗೂ ಕಾರ್ಯಕ್ರಮಗಳ ಮಂಡಲ ಸಂಯೋಜಕರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಕಾರ್ಯಕ್ರಮದ ಜಿಲ್ಲಾ ಸಂಚಾಲಕ ಕಿಶೋರ್ ಕುಮಾರ್ ಕುಂದಾಪುರ ಸ್ವಾಗತಿಸಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ವಂದಿಸಿದರು.
ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆ ಮತ್ತು ಸಮರ್ಪಣೆಯ ಕಾರ್ಯಕ್ರಮದಡಿಯಲ್ಲಿ ಪಕ್ಷದ ಪ್ರಮುಖರ ಸಭೆ ನಡೆದು ಇದರಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಮೋದೀಜಿಯವರ ಜನ್ಮದಿನದ ಅಂಗವಾಗಿ ಪಕ್ಷ ನೀಡಿದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಮೋದೀಜಿಯವರು ಮಾಡಿದ ಸಾಧನೆಗಳ ಬಗ್ಗೆ ವಿವರಿಸುತ್ತ ದೇಶಕ್ಕಾಗಿ ಸರ್ವಸ್ವವನ್ನು ಮೀಸಲಿಟ್ಟ ಇಂತಹ ವ್ಯಕ್ತಿ ನಮ್ಮ ಪಕ್ಷದಲ್ಲಿರುವುದು ನಮ್ಮ ಹೆಮ್ಮೆ ಹಾಗಾಗಿ ಅವರ ಆದರ್ಶಗಳನ್ನು ನಾವು ಪಾಲಿಸುತ್ತ ಸೇವೆ ಮತ್ತು ಸಮರ್ಪಣಾ ಭಾವದಿಂದ ದೇಶ ಸೇವೆ ಜಾಗೂ ಸಮಾಜಸೇವೆಗೆ ತೊಡಗಬೇಕು ಎಂದರು.
ಕೊರಂಗ್ರಪಾಡಿ ಶಕ್ತಿಕೇಂದ್ರ ಪ್ರಮುಖ್ ಆಶಿಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಅಲೆವೂರು ಉಪಸ್ಥಿತರಿದ್ದರು. ಅಲೆವೂರು ಶಕ್ತಿಕೇಂದ್ರ ಪ್ರಮುಖ್ ಶೇಖರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಹರೀಶ್ ಸೇರಿಗಾರ್, ಬೇಬಿ ರಾಜೇಶ್, ರಮಾ ಜೆ ರಾವ್ ಪಂಚಾಯತ್ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ಮೋದೀಜಿಯವರ ಜನ್ಮದಿನದ ಅಂಗವಾಗಿ ಸೇವೆ ಮತ್ತುಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಅಲೆವೂರು ಸಿಧ್ಧಾರ್ಥನಗರದ ಕೊರಗ ಸಮಯದಾಯದ ಸುಮಾರು 40 ಮನೆಗಳಿಗೆ ರಾಜ್ಯ ಮಹಿಳಾಮೋರ್ಚ ಪ್ರಧಾನಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಇವರ ನೇತ್ರತ್ವದಲ್ಲಿ ಹಣ್ಣು ಹಂಪಲು ವಿತರಣೆ ಹಾಗೂ ಬೆಡ್ ಶೀಟ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಮೋದಿ ಸರಕಾರದ ಸಾಧನೆಯನ್ನು ಸವಿಸ್ತಾರವಾಗಿ ವಿವರಿಸಿದರು ಮತ್ತು ಮೋದಿಜಿಯವರಿಗೆ ಜನಸಾಮಾನ್ಯರಿಗೆ ಆಯುಷ್ಮಾನ್, ಉಚಿತ ವ್ಯಾಕ್ಸಿನ್, ಕಿಸಾನ್ ಸಮ್ಮಾನ್, ಉಜ್ವಲ ಮುಂತಾದ ಯೋಜನೆಗಳನ್ನು ನೀಡಿದುದಕ್ಕಾಗಿ ಧನ್ಯವಾದವಿತ್ತರು.
ಈ ಸಂದರ್ಭದಲ್ಲಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಮಾಂಬೆಟ್ಟು, ಗೋಪಾಲ್ ಕೃಷ್ಣ ರಾವ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರು ಆದ ವೀಣಾ ಶೆಟ್ಟಿ, ಮಂಡಲ ಕಾರ್ಯದರ್ಶಿ ಮಾಲಿನಿ ಇನ್ನಂಜೆ, ಕಾಪು ಮಹಿಳಾ ಮೋರ್ಚಾ ಅಧ್ಯಕ್ಷರು ಆದ ಸುಮಾ ಶೆಟ್ಟಿ, ಉದ್ಯಾವರ ಮಹಾಶಕ್ತಿಕೇಂದ್ರ ಪ್ರಧಾನಕಾರ್ಯದರ್ಶಿ ಅಶೋಕ್ ಕುಮಾರ್ ಅಲೆವೂರು, ಶಕ್ತಿಕೇಂದ್ರ ಪ್ರಮುಖ್ ಆದ ಶೇಖರ ಆಚಾರ್ಯ ಹಾಗೂ ಆಶಿಶ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಅವಿನಾಶ್ ಶೆಟ್ಟಿಗಾರ್, ತಾ.ಪಂ. ಮಾಜಿಸದಸ್ಯರಾದ ಬೇಬಿ ರಾಜೇಶ್ ಸ್ಥಳೀಯ ಪ್ರಮುಖರಾದ ಸುಮತಿ ಸೇರಿಗಾರ್, ರವಿ, ಅಶೋಕ್ ಶೆಟ್ಟಿಗಾರ್, ಅರುಣ್ ಆಚಾರ್ಯ, ವಿಜೇತ್ ಬೆಳ್ಳರ್ಪಾಡಿ, ಸಂತೋಷ್ ಶೆಣೈ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆಯ ಸೆ.23ರಂದು ಉಡುಪಿ ಪ್ರಾದೇಶಿಕ ಕಛೇರಿಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷರಾದ ನವೀನ್ ಅಮೀನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷರಾದ ದೇವದಾಸ ಹೆಬ್ಬಾರ್, ಮಾಜಿ ಜಿಲ್ಲಾಧ್ಯಕ್ಷರಾದ ಅಪ್ಪಣ್ಣ ಹೆಗ್ಡೆ, ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಜಿಲ್ಲಾ ನಿರ್ದೇಶಕರಾದ ಗಣೇಶ್ ಬಿ., ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್, ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು, ಜಿಲ್ಲಾ ವ್ಯಾಪ್ತಿಯ ತಾಲೂಕು ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಗಾಂಧಿ ಜಯಂತಿ ಆಚರಣೆಯ ಸಹಿತ ಇತರ ಪ್ರಮುಖ ವಿಚಾರಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಅಮೆರಿಕದಲ್ಲಿ ಮೋದಿಗೆ ಅದ್ಧೂರಿ ಸ್ವಾಗತ ಪ್ರಧಾನಿ ನರೇಂದ್ರ ಮೋದಿ, ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆಂಡ್ರೂಸ್ ಜಂಟಿ ಏರ್‌ಫೋರ್ಸ್ ಬೇಸ್ನಲ್ಲಿ ಅವರಿಗೆ ಬೈಡನ್ ಆಡಳಿತ ಅದ್ಧೂರಿ ಸ್ವಾಗತ ಕೋರಿದೆ.
ಏರ್ ಇಂಡಿಯಾ ಒನ್‌ನಲ್ಲಿ ಪಯಣ
ಏರ್ ಇಂಡಿಯಾ ಒನ್ ಎಂದು ಕರೆಯಲಾಗುವ ‘ಬೋಯಿಂಗ್ 777 ವಿವಿಐಪಿ’ ವಿಮಾನದಲ್ಲಿ ಮೋದಿ ತಮ್ಮ ತಂಡದೊಂದಿಗೆ ಅಮೆರಿಕಕ್ಕೆ ತೆರಳಿದರು. ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಿಯವರ ಅಂತಾರಾಷ್ಟ್ರೀಯ ಪ್ರಯಾಣಕ್ಕಾಗಿ ಈ ವಿಶೇಷ ವಿಮಾನವನ್ನು ಬಳಸಲಾಗುತ್ತದೆ. ರಾಷ್ಟ್ರ ಪ್ರಮುಖರ ರಕ್ಷಣೆಗೆ ಅಗತ್ಯವಾದ ವಿಶೇಷ ಭದ್ರತಾ ಕ್ರಮಗಳನ್ನು ಇದರಲ್ಲಿ ಅಳವಡಿಸಲಾಗಿದೆ. ಅಂದಾಜು 8,400 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನವನ್ನು ಮಾರ್ಪಾಡು ಮಾಡಲಾಗಿದೆ.
ಪ್ರಧಾನಿ ಮೋದಿ ವೇಳಾಪಟ್ಟಿ (ಭಾರತೀಯ ಕಾಲಮಾನ ಪ್ರಕಾರ)
ಗುರುವಾರ 1. ವಾಷಿಂಗ್ಟನ್‌ಗೆ ನಸುಕಿನ 3.30ಕ್ಕೆ ಆಗಮನ
2. ಸಂಜೆ 7.15ರಿಂದ ಕ್ವಾಲ್ಕಾಮ್ ಆಪಲ್, ಅಡೋಬ್, ಫಸ್ಟ್ ಸೋಲಾರ್, ಜನರಲ್ ಆಟಾಮಿಕ್ಸ್, ಬ್ಲಾಯಕ್ ಸ್ಟೋನ್, ಇನ್ನಿತರ ಕಂಪನಿಗಳ ಸಿಇಒಗಳ ಜತೆ ಸರಣಿ ಸಭೆ.
3. ರಾತ್ರಿ 11ಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಜತೆ ದ್ವಿಪಕ್ಷೀಯ ಚರ್ಚೆ.
ಶುಕ್ರವಾರ:
• ಮಧ್ಯಾಹ್ನ 12.45- ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್
ಭೇಟಿ
• ಮಧ್ಯಾಹ್ನ 3- ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಜತೆ
ಚರ್ಚೆ
• ರಾತ್ರಿ 8.30- ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜತೆ ದ್ವೀಪಕ್ಷೀಯ ಮಾತುಕತೆ, • ರಾತ್ರಿ 11.30- ಕ್ವಾಡ್ ರಾಷ್ಟ್ರಗಳ ಶೃಂಗ ಸಭೆಯಲ್ಲಿ ಭಾಗಿ.
ಶನಿವಾರ
• ಸಂಜೆ 7.30- ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ 76ನೇ ಮಹಾಧಿವೇಶನದಲ್ಲಿ ಭಾಷಣ
• ರಾತ್ರಿ 9.15- ಭಾರತಕ್ಕೆ ಮರಳಿ ಪಯಣ
.
ಭಾನುವಾರ ಬೆಳಗ್ಗೆ 11.30ಕ್ಕೆ ನವದೆಹಲಿಗೆ ಆಗಮನ
ವಾಷಿಂಗ್ಟನ್(ಅಮೆರಿಕ): ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬುಧವಾರ ಅಮೆರಿಕಕ್ಕೆ ಭೇಟಿ ನೀಡಿದ್ದು, ಅಧ್ಯಕ್ಷ ಜೋ ಬೈಡನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲದೇ, ಕ್ವಾಡ್ ಶೃಂಗಸಭೆ ಮತ್ತು ನ್ಯೂಯಾರ್ಕ್ನಲ್ಲಿ ನಡೆಯಲಿರುವ ಅಮೆರಿಕದ ಜನರಲ್ ಅಸೆಂಬ್ಲಿಯ 76 ನೇ ಅಧಿವೇಶನದಲ್ಲಿಯೂ ನಮೋ ಭಾಗವಹಿಸಿ ಮಾತನಾಡಲಿದ್ದಾರೆ.
ಆಂಡ್ರೂಸ್ ಜಂಟಿ ಏರ್‌ಫೋರ್ಸ್ ಬೇಸ್ನಲ್ಲಿ ಪ್ರಧಾನಿ ಮೋದಿ ಅವರನ್ನು ಬೈಡನ್ ಆಡಳಿತದ ಹಿರಿಯ ಅಧಿಕಾರಿಗಳು ಮತ್ತು ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಸ್ವಾಗತಿಸಿದರು. ಈ ವೇಳೆ ಭಾರಿ ಮಳೆ ಸುರಿಯುತ್ತಿದ್ದರೂ, ಮೋದಿಯನ್ನು ಸ್ವಾಗತಿಸಲು ಭಾರತೀಯ ಅಮೆರಿಕನ್ನರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಎಲ್ಲರತ್ತ ಕೈ ಬೀಸಿ, ಭಾರತೀಯರ ಕೈ ಕುಲುಕಿ ನಮೋ ಮುಂದೆ ಸಾಗಿದರು.2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಏಳನೇ ಬಾರಿಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಭಾರತ – ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಜಪಾನ್ – ಆಸ್ಟ್ರೇಲಿಯಾದೊಂದಿಗಿನ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಎಂದು ಮೋದಿ ಹೇಳಿದ್ದಾರೆ.ಸೆಪ್ಟೆಂಬರ್ 24 ರಂದು ಮೋದಿ-ಬೈಡನ್ ಅವರ ಮೊದಲ ದ್ವಿಪಕ್ಷೀಯ ಸಭೆ ಶ್ವೇತಭವನದಲ್ಲಿ ನಡೆಯಲಿದೆ. ಬಳಿಕ ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಮತ್ತು ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಹಾಗೂ ಮೋದಿ, ಬೈಡನ್ ಸಮ್ಮುಖದಲ್ಲಿ ಕ್ವಾಡ್ ನಾಯಕರ ಶೃಂಗಸಭೆ ಶ್ವೇತಭವನದಲ್ಲಿ ನಡೆಯಲಿದೆ.ಇದನ್ನೂ ಓದಿ: ಇಂದಿನಿಂದ ಮೂರು ದಿನ ಮೋದಿ ಅಮೆರಿಕ ಪ್ರವಾಸ.. ದೆಹಲಿಯಿಂದ ವಿಮಾನವೇರಿದ ಪ್ರಧಾನಿ 2021 ರ ಜನವರಿಯಲ್ಲಿ ಅಮೆರಿಕ ಅಧ್ಯಕ್ಷರಾದ ಬಳಿಕ ಬೈಡನ್ ಹಾಗೂ ಪ್ರಧಾನಿ ಮೋದಿ ಅನೇಕ ಬಾರಿ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಏಪ್ರಿಲ್ 26 ರಂದು ಅವರು ಕೊನೆ ಬಾರಿ ದೂರವಾಣಿ ಸಂಭಾಷಣೆ ನಡೆಸಿದ್ದರು.ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಇಂದು ಪ್ರಧಾನಿ ಮೋದಿ ಜತೆ ಮಾತನಾಡಲಿದ್ದಾರೆ. ಈ ಹಿಂದೆ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ದೂರವಾಣಿ ಮೂಲಕ ಉಭಯ ನಾಯಕರು ಮಾತನಾಡಿದ್ರು.ನನ್ನ ಭೇಟಿಯ ಸಮಯದಲ್ಲಿ, ಬೈಡನ್ರೊಂದಿಗೆ ಭಾರತ- ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ಬಗ್ಗೆ ಪರಿಶೀಲಿಸುತ್ತೇನೆ. ಪರಸ್ಪರ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆ ಅಭಿಪ್ರಾಯ ವಿನಿಮಯ ಮಾಡಿಕೊಳ್ಳುತ್ತೇವೆ ಎಂದು ಅಮೆರಿಕಕ್ಕೆ ತೆರಳುವ ಮುನ್ನ ಪ್ರಧಾನಿ ಮೋದಿ ಹೇಳಿದ್ದರು.
ಕಾಪು ಬಿಜೆಪಿ ವತಿಯಿಂದ ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಕಳೆದ ಏಳು ವರ್ಷಗಳಿಂದ ಒಂದು ದಿನವೂ ವಿಶ್ರಾಂತಿ ಪಡೆಯದೆ ಭಾರತ ಮಾತೆಯನ್ನು ವಿಶ್ವ ವಂದ್ಯ ಮಾಡಲು ಶ್ರಮಿಸುತ್ತಿರುವ ಪ್ರಧಾನಿ ಮೋದೀಜಿಯವರಿಗೆ ಮತ್ತಷ್ಟು ವರ್ಷಗಳ ಕಾಲ ದೇಶ ಸೇವೆ ಮಾಡಲು ಯೋಗ ಭಾಗ್ಯ, ಆಯಸ್ಸು ಆರೋಗ್ಯ ನೀಡಲೆಂದು ವಿಶೇಷ ಪೂಜೆ ನಡೆಸಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಉಪಾಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಕಾರ್ಯದರ್ಶಿಗಳಾದ ಮಾಲಿನಿ ಇನ್ನಂಜೆ, ಲತಾ ಆಚಾರ್ಯ, ಪೂರ್ಣಿಮಾ ಚಂದ್ರಶೇಖರ್,ರಾಜೇಶ್ ಕುಂದರ್, ಮಾಜಿ ಕಾಪು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಆದ ಶಶಿಪ್ರಭಾ ಶೆಟ್ಟಿ, ಶಿರ್ವ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಸುಶಾಂತ್ ಶೆಟ್ಟಿ, ಶಿರ್ವ, ಪ್ರಮುಖರು ಆದ ಪ್ರಕಾಶ್ ಆಚಾರ್ಯ, ಸುರೇಂದ್ರ ನಾಯಕ್, ಶಿರ್ವ ಪಂಚಾಯತ್ ಸದಸ್ಯರಾದ ಶ್ರೀನಿವಾಸ ಶೆಣೈ ಉಪಸ್ಥಿತರಿದ್ದರು.
ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣೆ ಅಭಿಯಾನದ ಪ್ರಯುಕ್ತ ಸೆ.25ರಂದು ನಡೆಯಲಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನದ ಸಲುವಾಗಿ ಪ್ರತಿ ಬೂತ್ ಮಟ್ಟದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ.
ಇದರ ಪ್ರಯುಕ್ತ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ 78 ಬೂತ್ ಗಳಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಭಾವಚಿತ್ರ ನೀಡುವ ಕಾರ್ಯಕ್ರಮಕ್ಕೆ ಬಿಜೆಪಿ ಚೇರ್ಕಾಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚೇರ್ಕಾಡಿ ಶಕ್ತಿಕೇಂದ್ರದಲ್ಲಿ ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲದ ಅಧ್ಯಕ್ಷೆ ವೀಣಾ ವಿ. ನಾಯ್ಕ್ ಅಧ್ಯಕ್ಷತೆಯಲ್ಲಿ ಮಂಡಲದ ಪ್ರಭಾರಿ ಶ್ರೀಶ ನಾಯಕ್ ಪೆರ್ಣಂಕಿಲ ಹಾಗೂ ಸೆ.25ರ ಜಿಲ್ಲಾ ಕಾರ್ಯಕ್ರಮ ಸಂಚಾಲಕ ಕಿಶೋರ್ ಕುಮಾರ್ ಕುಂದಾಪುರ, ಉಡುಪಿ ಗ್ರಾಮಾಂತರ ಸಂಚಾಲಕ ಉಮೇಶ ನಾಯ್ಕ್ ಚೇರ್ಕಾಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮನೋಜ್ ಶೆಟ್ಟಿ ಇವರೆಲ್ಲರೂ ಸೇರಿ ಚಾಲನೆ ನೀಡಿದರು.
ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲದ ಪ್ರತೀ ಬೂತ್ ಮಟ್ಟದಲ್ಲಿ ಸೆ.25ರಂದು ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ಆಶಯದಲ್ಲಿ ಚೇರ್ಕಾಡಿ, ಕರ್ಜೆ, 38ನೇ ಕಳ್ತೂರು, ಕೆಂಜೂರೂ, ಕೊಕ್ಕರ್ಣೆ, ನಾಲ್ಕೂರು ಶಕ್ತಿ ಕೇಂದ್ರದ ಒಟ್ಟು 29 ಬೂತ್ ಗಳಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರ, ಪರಿಚಯ ಪತ್ರ, ಪ್ರತಿಜ್ಞಾ ಪತ್ರ ಹಾಗೂ ಪೋಸ್ಟ್ ಕಾರ್ಡ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಗ್ರಾಮಾಂತರ ಉಪಾಧ್ಯಕ್ಷ ಹಾಗೂ ಕಾರ್ಯಕ್ರಮದ ಮಂಡಲ ಸಂಚಾಲಕ ರಘುಪತಿ ಬ್ರಹ್ಮಾವರ, ಸಹ ಸಂಚಾಲಕ ನಿತ್ಯಾನಂದ ಬಿ. ಆರ್., ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಶಕ್ತಿಕೇಂದ್ರಗಳ ಸಂಚಾಲಕರು, ಸಹ ಸಂಚಾಲಕರು, ಬೂತ್ ಅಧ್ಯಕ್ಷರು, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಶಿರ್ವ ಜೀವನ ಜ್ಯೋತಿ ಆಶ್ರಮಕ್ಕೆ ಹಣ್ಣು ಹಂಪಲು, ಅಕ್ಕಿ ಮತ್ತು ದಿನಸಿ ವಸ್ತುಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಕಾಪು ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಉಪಾಧ್ಯಕ್ಷ ಎಂ.ಚಂದ್ರಶೇಖರ್ ಕೋಟ್ಯಾನ್, ಕಾರ್ಯದರ್ಶಿಗಳಾದ ಮಾಲಿನಿ ಇನ್ನಂಜೆ, ಲತಾ ಆಚಾರ್ಯ, ಪೂರ್ಣಿಮಾ ಚಂದ್ರಶೇಖರ್, ರಾಜೇಶ್ ಕುಂದರ್, ಮಾಜಿ ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಶಿರ್ವ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಸುಶಾಂತ್ ಶೆಟ್ಟಿ, ಶಶಿಕುಮಾರ್ ಶಿರ್ವ, ಪ್ರಮುಖರಾದ ಪ್ರಕಾಶ್ ಆಚಾರ್ಯ, ಸುರೇಂದ್ರ ನಾಯಕ್ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಮತ್ತು ಶಿರ್ವದ ಶ್ರೀನಿವಾಸ್ ಶೆಣೈ ಯವರ ಮನೆಗೆ ಸೌಹಾರ್ದ ಭೇಟಿ ನೀಡಲಾಯಿತು.