ಉಡುಪಿ ಹನುಮಾನ್ ಸಂಸ್ಥೆಯ ಹರಿಕಾರ ಪಿ. ರಬೀಂದ್ರ ನಾಯಕ್ ಇನ್ನಿಲ್ಲ.. ಜಿಲ್ಲಾ ಬಿಜೆಪಿ ಸಂತಾಪ
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಶನಿವಾರ(ಅ.2) ರಂದು ಇಹಲೋಕ ತ್ಯಜಿಸಿದ್ದಾರೆ.
ಸಾರಿಗೆ ಉದ್ಯಮಿಯಾಗಿ ಮೊದಲು ಗುರುತಿಸಿಕೊಂಡಿದ್ದ ಅವರು, ಕರಾವಳಿ ಭಾಗದಲ್ಲಿ ಗಜಾನನ ಹಾಗೂ ಹುನುಮಾನ್ ಟ್ರಾನ್ಸ್ ಪೋರ್ಟ್ ಸಂಸ್ಥೆಯನ್ನು ಪ್ರಾರಂಭಿಸಿ ಸಾರಿಗೆ ಉದ್ಯಮಕ್ಕೆ ಕಾಲಿಟ್ಟವರು. ಹತ್ತು ಹಲವು ಸಾಮಾಜಿಕ ಸೇವಾ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಅವರು, ಉಡುಪಿ ಜಿಲ್ಲಾಸ್ಪತ್ರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಜಿಲ್ಲಾಸ್ಪತ್ರೆಯ ಅಭಿವೃದ್ಧಿಗೆ ದೇಣಿಗೆಯನ್ನು ನೀಡಿದ್ದರು. ಉಡುಪಿಯ ಹಿರಿಯ ನಾಗರಿಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಕಾಪು ವಿಧಾನಸಭಾ ಕ್ಷೇತ್ರದ ಕಚೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಖಾದಿ ಮೇಳವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಗಾಂಧಿ ಜಯಂತಿ ಪ್ರಯುಕ್ತ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಗಾಂಧೀಜಿ ಚಿಂತನೆಗಳಾದ ಸ್ವದೇಶಿ ವಸ್ತುಗಳ ಬಳಕೆ, ಸ್ವಚ್ಚತಾ ಕಾರ್ಯಕ್ರಮಗಳು ಎಂದಿಗೂ ಆದರ್ಶಪ್ರಾಯವಾಗಿದ್ದು ಎಲ್ಲರೂ ಸ್ವದೇಶಿ ವಸ್ತುಗಳನ್ನು ಬಳಸಬೇಕು ಮತ್ತು ಕಡ್ಡಾಯವಾಗಿ ಖಾದಿ ವಸ್ತುಗಳನ್ನು ಬಳಸಬೇಕು ಎಂದರು. ಖಾದಿ ಬಟ್ಟೆಗಳು ಎಲ್ಲ ಋತುಮಾನಗಳಿಗೆ ಅನುಕೂಲಕರವಾಗಿದ್ದು ಆರೋಗ್ಯಕ್ಕೂ ಬಹಳ ಉತ್ತಮವಾದುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಗೋಪಾಲಕೃಷ್ಣ ರಾವ್, ಮಂಡಲ ಉಪಾಧ್ಯಕ್ಷರಾದ ಚಂದ್ರಶೇಖರ ಕೋಟ್ಯನ್, ನವೀನ್ ಎಸ್ ಕೆ, ಪವಿತ್ರ ಶೆಟ್ಟಿ, ಜಿಲ್ಲಾ ರೈತ ಮೋರ್ಚ ಅಧ್ಯಕ್ಷರಾದ ಪ್ರವಿಣ್ ಶೆಟ್ಟಿ, ಮಂಡಲ ಕಾರ್ಯದರ್ಶಿಗಳಾದ ಮಾಲಿನಿ ಶೆಟ್ಟಿ, ಪೂರ್ಣಿಮಾ , ರಾಜೇಶ್ ಕುಂದರ್, ಲತಾ ಆಚಾರ್ಯ, ಕಾಪು ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಖಾದಿ ಮತ್ತು ಗ್ರಾಮೋದ್ಯೋಗ ವತಿಯಿಂದ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ : ಮಹಾತ್ಮ ಗಾಂಧಿ ಸ್ವದೇಶಿ ಚಿಂತನೆಗೆ ಒತ್ತು ನೀಡುವ ಮೂಲಕ ಖಾದಿ ನಮ್ಮ ಜೀವನದ ಹಾಸುಹೊಕ್ಕಾಗಬೇಕು ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ನಾಡಿಗೆ ನೀಡುವ ಜೊತೆಗೆ ಖಾದಿಗೆ ವಿಶೇಷ ಒತ್ತು ನೀಡುವ ಮೂಲಕ ಗಾಂಧಿ ತತ್ವದ ಈ ಎರಡೂ ಆಶಯಗಳನ್ನು ಈಡೇರಿಸುತ್ತಿದ್ದಾರೆ. ಗಾಂಧಿ ಚಿಂತನೆಯ ಖಾದಿ ಉತ್ಪನ್ನಗಳನ್ನು ಬಳಸುವ ಮೂಲಕ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಸೆ.17ರಿಂದ ಅ.7ರ ವರೆಗೆ ಹಮ್ಮಿಕೊಂಡಿರುವ ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಸೆ.29ರಿಂದ ಅ.2ರ ವರೆಗೆ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಖಾದಿ ಮತ್ತು ಗ್ರಾಮೋಧ್ಯೋಗ ಸಂಘ ಉಡುಪಿ ಇದರ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಿರುವ ಖಾದಿ ಮೇಳವನ್ನು ಉದ್ಘಾಟಿಸಿ, ಖಾದಿ ಉತ್ಪನ್ನಗಳನ್ನು ಖರೀದಿಸಿ ಮಾತನಾಡಿದರು.
ಖಾದಿ ಬಳಕೆ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು. ಖಾದಿಯತ್ತ ಚಿತ್ತ ಹರಿಸುವ ಮೂಲಕ ನಮ್ಮ ದೈನಂದಿನ ಉಡುಗೆ ತೊಡುಗೆ ಆಚಾರ ವಿಚಾರಗಳು ಸ್ವದೇಶಿ ಚಿಂತನೆಗೆ ಪೂರಕವಾಗಿರಬೇಕು. ಈ ನಿಟ್ಟಿನಲ್ಲಿ ಸರಕಾರದ ಅಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ವಾರದಲ್ಲಿ ಕನಿಷ್ಠ 2 ದಿನ ಖಾದಿಯ ಉಡುಗೆ ತೊಡುವ ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿರುತ್ತೇನೆ. ಈ ಚಿಂತನೆ ಸಾಕಾರಗೊಂಡಲ್ಲಿ ಸ್ವದೇಶಿ ಚಿಂತನೆಯ ಖಾದಿಗೆ ಇನ್ನಷ್ಟು ಉತ್ತೇಜನ ದೊರಕಿದಂತಾಗುತ್ತದೆ ಎಂದು ಕುಯಿಲಾಡಿ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಸೇವೆ ಮತ್ತು ಸಮರ್ಪಣೆ ಅಭಿಯಾನದ ಜಿಲ್ಲಾ ಸಂಚಾಲಕ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಅಭಿಯಾನದ ಜಿಲ್ಲಾ ಸಹ ಸಂಚಾಲಕ ಹಾಗೂ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಅಭಿಯಾನದ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮದ ಜಿಲ್ಲಾ ಸಂಚಾಲಕರು ಹಾಗೂ ಜಿಲ್ಲಾ ಉಪಾಧ್ಯಕರುಗಳಾದ ಸುಪ್ರಸಾದ್ ಶೆಟ್ಟಿ ಬೈಕಾಡಿ, ನಯನಾ ಗಣೇಶ್, ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಸಹ ವಕ್ತಾರ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಹಿಂ. ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕಟಪಾಡಿ ಏಣಗುಡ್ಡೆ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಮೋದೀಜಿ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಯಿತು. ಶಕ್ತಿಕೇಂದ್ರ ಪ್ರಮುಖ್ ಸಂತೋಷ್ ನೇತ್ರತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು,ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗೀತಾಂಜಲಿ ಸುವರ್ಣ, ನಿಕಟಪೂರ್ವ ಬಿಜೆಪಿ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಪವಿತ್ರ ಶೆಟ್ಟಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಗುರುಕ್ರಪಾ ರಾವ್, ಪಕ್ಷದ ಪ್ರಮುಖರಾದ ಮುರಳೀಧರ ಪೈ, ನಿತಿನ್ ಸೇರಿಗಾರ್, ಸುಭಾಷ್ ಬಲ್ಲಾಳ್, ಕವಿತಾ, ಶ್ರೀನಿವಾಸ್ ಕಿಣಿ, ದಿಲೀಪ್ ಮತ್ತಿತರರು ಉಪಸ್ಥಿತರಿದ್ದರು.
ಗಾಂಧಿ ಜಯಂತಿ ಪ್ರಯುಕ್ತ ಪಕ್ಷದ ಸಂಸ್ಥಾಪಕ ಸದಸ್ಯರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಆಶಯವಾದ ಸ್ವದೇಶಿ, ಸ್ವಭೂಷಾ, ಸ್ವಭಾಷಾ ಚಿಂತನೆಯಂತೆ ಸ್ವದೇಶಿ ವಸ್ತುಗಳನ್ನು ಪ್ರೋತ್ಸಾಹಿಸಲು *ಕಾಪು ಬಿಜೆಪಿ ಬಿಜೆಪಿ ಕಚೇರಿಯಲ್ಲಿ* *ಖಾದಿ ಭಂಡಾರ* ಖಾದಿ ಬಟ್ಟೆ, ವಸ್ತುಗಳ ಪ್ರದರ್ಶನ ಹಾಗೂ ಖರೀದಿ ಮೇಳವನ್ನು ಆಯೋಜಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮ ದಿನಾಂಕ 30.09.21 ರಂದು ಬೆಳಿಗ್ಗೆ 9.30 ಕ್ಕೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಲಿದ್ದು ನಡೆಯಲಿದೆ ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ತಿಳಿಸಿರುವರು. ಅಲ್ಲದೆ ಸ್ವದೇಶಿ ವಸ್ತುಗಳನ್ನು ಪ್ರೋತ್ಸಾಹಿಸಲು ಕಡ್ಡಾಯವಾಗಿ ಪ್ರತಿಯೊಬ್ಬರೂ ಏನಾದರೊಂದು ಖಾದಿ ವಸ್ತುವನ್ನು ಖರೀದಿಸಬೇಕಾಗಿ ವಿನಂತಿಸಿರುವರು.
ಬಿಜೆಪಿ ಉಡುಪಿ ಜಿಲ್ಲೆ ಆಶ್ರಯದಲ್ಲಿ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಅಂಗವಾಗಿ ಅ.2ರಂದು ನಡೆಯಲಿರುವ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಾಳೆ ಸೆ.29 ಬುಧವಾರ ಬೆಳಿಗ್ಗೆ 9.30ರಿಂದ ಬಿಜೆಪಿ ಜಿಲ್ಲಾ ಕಛೇರಿ ಕಡಿಯಾಳಿಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಸಂಘ, ಉಡುಪಿ ಇದರ ಸಹಯೋಗದೊಂದಿಗೆ ‘ಖಾದಿ ಮೇಳ’ ನಡೆಯಲಿದೆ.
ಈ ಖಾದಿ ಮೇಳದಲ್ಲಿ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಾದಿ ಮೇಳಕ್ಕೆ ಚಾಲನೆ ನೀಡಲಿದ್ದಾರೆ.
ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ‘ಖಾದಿ ಮೇಳ’ದಲ್ಲಿ ಭಾಗವಹಿಸಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಸೇವೆ ಮತ್ತು ಸಮರ್ಪಣೆ ಅಭಿಯಾನದ ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕಾಗಿ ವಿನಂತಿ.
ಸದಾನಂದ ಉಪ್ಪಿನಕುದ್ರು ಶಿವಕುಮಾರ್ ಅಂಬಲಪಾಡಿ ಅಭಿಯಾನದ ಜಿಲ್ಲಾ ಸಂಚಾಲಕರು
ಸುಪ್ರಸಾದ್ ಶೆಟ್ಟಿ ಬೈಕಾಡಿ ರವೀಂದ್ರ ಕುಮಾರ್ ನಯನಾ ಗಣೇಶ್ ಪ್ರಮೀಳಾ ಹರೀಶ್ ಗಾಂಧಿ ಜಯಂತಿ ಕಾರ್ಯಕ್ರಮದ ಜಿಲ್ಲಾ ಸಂಚಾಲಕರು
ಕಾಪು ವಿಧಾನಸಭಾ ಕ್ಷೇತ್ರದ ಬಡಗುಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಇವರ ಆದ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬೂತ್ ಅಧ್ಯಕ್ಷರಿಗೆ ಪಕ್ಷ ಇಂದು ನಾಮಫಲಕವನ್ನು ನೀಡುವ ಮೂಲಕ ಬೂತ್ ಅಧ್ಯಕ್ಷರ ಮಹತ್ವವನ್ನು ನೆನಪಿಸಿ ಅವರ ಜವಾಬ್ದಾರಿಯನ್ನೂ ನೆನಪಿಸುತ್ತಿದೆ. ಬಿಜೆಪಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಿಗೂ ಬೂತ್ ಅಧ್ಯಕ್ಷರಿಗೂ ಸಮಾನ ಗೌರವ ಇದೆ. ಈ ಗೌರವಯುತ ಜವಾಬ್ದಾರಿ ಹೊಂದಿರುವ ಎಲ್ಲ ಬೂತ್ ಅಧ್ಯಕ್ಷರುಗಳು ತಮ್ಮ ಕರ್ತವ್ಯಗಳನ್ನು ಅರಿತು ಬೂತ್ ನಲ್ಲಿ ಸಂಘಟನಾತ್ಮಕವಾಗಿ ಪಕ್ಷ ಬೆಳೆಸಿ ತಾನೂ ಬೆಳೆಯಬೇಕು ಎಂದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ್ ಹೆಗ್ಡೆ, ರಾಜ್ಯ ಹಿಂದುಳಿಗೆ ಮೋರ್ಚ ಪ್ರಧಾನ ಕಾರ್ಯದರ್ಶಿ ಗಳಾದ ಯಶ್ ಪಾಲ್ ಸುವರ್ಣ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು ಕಾರ್ಯಕರ್ತರು ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ಕೊರಂಗ್ರಪಾಡಿ ಶಕ್ತಿಕೇಂದ್ರದ 4 ಬೂತ್ ಸಂಖ್ಯೆಗಳಾದ – 62, 63,64, 66 ನೇ ವಾರ್ಡ್ ಗಳಲ್ಲಿ ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ ನಡೆಯಿತು. ಒಂದನೇ ಬೂತ್ ನ ಕಾರ್ಯಕ್ರಮ ಪಂಚಾಯತ್ ಸದಸ್ಯರಾದ ಆಶಿಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಕೆಮ್ತೂರಿನಲ್ಲಿ, ಮೂರನೇ ಬೂತ್ ಅಧ್ಯಕ್ಷರಾದ ಕೇಶವ ಶೆಟ್ಟಿಗಾರ್ ಇವರ ಅಧ್ಯಕ್ಷತೆಯಲ್ಲಿ ಕೊರಂಗ್ರಪಾಡಿಯಲ್ಲಿ, ಐದನೆ ಬೂತ್ ಅಧ್ಯಕ್ಷರಾದ ಅಕ್ಷಯ್ ಸೇರಿಗಾರ್ ಇವರ ಅಧ್ಯಕ್ಷತೆಯಲ್ಲಿ ಮಾರ್ಪಳ್ಳಿಯಲ್ಲಿ ನಡೆಯಿತು.
ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ಪಂಡಿತ್ ದೀನದಯಾಳ್ ರವರ ಜೀವನದ ಕುರಿತಂತೆ ಮಾಹಿತಿ ನೀಡಿ ಅವರ ಆದರ್ಶಗಳನ್ನು ನಾವೆಲ್ಲ ಬಿಜೆಪಿ ಕಾರ್ಯಕರ್ತರು ಅಳವಡಿಸಿ ಪಕ್ಷ ಸಂಘಟನೆ ಮಾಡಬೇಕು ಎಂದರು. ಶಕ್ತಿಕೇಂದ್ರ ಪ್ರಮುಖ್ ಆಶಿಶ್ ಶೆಟ್ಟಿ ಉಪಸ್ಥಿತರಿದ್ದರು.
ಕಾಪು: ಅಲೆವೂರು ಶಕ್ತಿಕೇಂದ್ರದ 5 ಬೂತ್ ಸಂಖ್ಯೆಗಳಾದ – 57,58,59,60 ಮತ್ತು 61 ನೇ ವಾರ್ಡ್ ಗಳಲ್ಲಿ ಇಂದು ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ ನಡೆಯಿತು. ಒಂದನೇ ಬೂತ್ ನ ಕಾರ್ಯಕ್ರಮ ಕರ್ವಾಲಿನಲ್ಲಿ ಬೂತ್ ಅಧ್ಯಕ್ಷರಾದ ಸುರೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ವಿಶಿಷ್ಟವಾಗಿ ನಡೆದು 105 ದೀಪ ಬೆಳಗಿಸಿ ಆಚರಿಸಿದೆವು. ಎರಡನೇ ಬೂತ್ ಅಧ್ಯಕ್ಷರಾದ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನೆಹರೂ ನಗರದಲ್ಲಿ, ಮೂರನೇ ಬೂತ್ ಅಧ್ಯಕ್ಷರಾದ ಹನುಮಪ್ಪ ಇವರ ಅಧ್ಯಕ್ಷತೆಯಲ್ಲಿ ಪ್ರಗತಿನಗರದಲ್ಲಿ, ನಾಲ್ಕನೆ ಬೂತ್ ಅಧ್ಯಕ್ಷರಾದ ಅರುಣ್ ಆಚಾರ್ಯ ಇವರ ಅಧ್ಯಕ್ಷತೆಯಲ್ಲಿ ಪಡು ಅಲೆವೂರಿನಲ್ಲಿ, ಐದನೆ ಬೂತ್ ಅಧ್ಯಕ್ಷರಾದ ರಾಜೇಶ್ ಸೇರಿಗಾರ್ ಇವರ ಅಧ್ಯಕ್ಷತೆಯಲ್ಲಿ ರಾಮಪುರದಲ್ಲಿ ನಡೆಯಿತು.
ಎಲ್ಲ ಕಡೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ಪಂಡಿತ್ ದೀನದಯಾಳ್ ರವರ ಜೀವನದ ಕುರಿತಂತೆ ಮಾಹಿತಿ ನೀಡಿದರು. ಅವರ ಆದರ್ಶಗಳನ್ನು ಪಕ್ಷದ ಎಲ್ಲ ಕಾರ್ಯಕರ್ತರು ಅಳವಡಿಸಿಕೊಂಡು ನಿಸ್ವಾರ್ಥವಾಗಿ ಪಕ್ಷ ಬೆಳೆಸಬೇಕೆಂದರು. ಅಲೆವೂರು ಶಕ್ತಿ ಕೇಂದ್ರ ಪ್ರಮಖ್ ಶೇಖರ ಆಚಾರ್ಯ ಉಪಸ್ಥಿತರಿದ್ದರು.
ಉಡುಪಿ: ರಾಜ್ಯದ ಬೇರೆ ಬೇರೆ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ. ಯಥಾ ಸ್ಥಿತಿಯಂತೆ ಬಸ್ ಸಂಚಾರ ಇರುತ್ತದೆ ಎಂದು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಕೊರೋನಾ 1 ಮತ್ತು 2ರ ಬಂದ್ ನಿಂದ ನಮ್ಮ ಬಸ್ ಉದ್ಯಮ ಸೊರಗಿ ಹೋಗಿದೆ. ಯಾವುದೇ ಕಾರಣಕ್ಕೂ ಬಸ್ ಬಂದ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ. ಈಗ ಬಸ್ ಉದ್ಯಮ ಸ್ವಲ್ಪ ಚೇತರಿಸಿಕೊಳ್ಳುತ್ತಾ ಇದೆ. ಈ ಹಂತದಲ್ಲಿ ಪುನಃ ಬಂದ್ ಮಾಡುವ ಪ್ರಶ್ನೆ ನಮ್ಮ ಮುಂದಿಲ್ಲ. ನಮ್ಮನ್ನು ಯಾವುದೇ ಸಂಘಟನೆಗಳು ಇನ್ನು ಮುಂದೆ ಬಂದ್ ಗಾಗಿ ಕೇಳಿಕೊಳ್ಳಬಾರದು ಮತ್ತು ಅದನ್ನು ಬೆಂಬಲಿಸುವ ಪ್ರಶ್ನೆ ನಮ್ಮಲ್ಲಿ ಇಲ್ಲ ಎಂದು ಕುಯಿಲಾಡಿ ತಿಳಿಸಿದ್ದಾರೆ.