ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 167ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ. ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ. ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಮಾಧವ ಪೂಜಾರಿ, ಶಂಕರ ಪೂಜಾರಿ, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಕುಶಲ್ ಕುಮಾರ್ ಎ., ರಮೇಶ್ ಕೋಟ್ಯಾನ್, ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಸುಧಾಕರ ಪೂಜಾರಿ, ನಿತಿನ್ ಕುಮಾರ್, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಕಾರ್ಯದರ್ಶಿ ಜಯಂತಿ ಹರೀಶ್, ಅರ್ಚಕರಾದ ಅವಿನಾಶ್ ಪೂಜಾರಿ, ಅದಿತ್ ಪೂಜಾರಿ, ಸಂಘದ ಮತ್ತು ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಗೆ ಪ್ರಶಸ್ತಿ

75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಗಂಗಾವತಿ ಹಾಗೂ ಗದಗ ಜಿಲ್ಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿದ್ಯಾರ್ಥಿಗಳು ಭಾಗವಹಿಸಿ 46 ಪದಕಗಳನ್ನು ಪಡೆದಿರುತ್ತಾರೆ.

ಅಂಬಲಪಾಡಿ, ಕಡೆಕಾರು, ಅಲೆವೂರು ಹಾಗೂ ಚಿಟ್ಪಾಡಿ ಡೋಜೊ ಇದರ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಧರ್ಮದರ್ಶಿಗಳು ಹಾಗೂ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಗೌರವಾಧ್ಯಕ್ಷರಾದ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಪದಕ ಹಾಗೂ ಪ್ರಮಾಣ ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದೇವಾಡಿಗರ ಸಂಘ ಚಿಟ್ಪಾಡಿ-ಉಡುಪಿ ಅಧ್ಯಕ್ಷರಾದ ರತ್ನಾಕರ ದೇವಾಡಿಗ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲೆವೂರು ಅಧ್ಯಕ್ಷರಾದ ಸಂತೋಷ್ ಪೂಜಾರಿ, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶಿವಕುಮಾರ್ ಅಂಬಲಪಾಡಿ ಹಾಗೂ ಬುಡೋಕಾನ್ ಕರಾಟೆ ಎಂಡ್ ‌ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷರು ಮತ್ತು ಮುಖ್ಯ ಶಿಕ್ಷಕರಾದ ರೆಂಷಿ. ವಾಮನ್ ಪಾಲನ್ ಮತ್ತು ಪ್ರಶಸ್ತಿ ವಿಜೇತ ಕರಾಟೆ ಪಟುಗಳು ಉಪಸ್ಥಿತರಿದ್ದರು.

ರಾಷ್ಟ್ರಮಟ್ಟದ ಕರಾಟೆ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿರುವ 4 ಡೋಜೊಗಳ ವಿದ್ಯಾರ್ಥಿಗಳು 11 ಚಿನ್ನದ ಪದಕ, 8 ಬೆಳ್ಳಿಯ ಪದಕ ಹಾಗೂ 4 ಕಂಚಿನ ಪದಕಗಳನ್ನು ಜಯಿಸಿರುತ್ತಾರೆ.

ಬ್ರಹ್ಮಾವರ ಪಡಿತರ ವಿತರಣಾ ಕೇಂದ್ರಕ್ಕೆ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯ ಸ್ವಾಗತ

ಉಡುಪಿ ಜಿಲ್ಲೆಯ ಜನಾಶೀರ್ವಾದ ಯಾತ್ರೆಯ ಅಂಗವಾಗಿ ಬ್ರಹ್ಮಾವರದ ಪಡಿತರ ವಿತರಣಾ ಕೇಂದ್ರಕ್ಕೆ ಬೇಟಿ ನೀಡಲು ಆಗಮಿಸಿದ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ರವರ ನೇತೃತ್ವದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಸಹಯೋಗದೊಂದಿಗೆ, ಚಂಡೆ-ಕೊಂಬು-ಕಹಳೆ, ಯಕ್ಷಗಾನ ವೇಷದಾರಿಗಳ ಸಹಿತ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರ ಸಮಾಗಮದೊಂದಿಗೆ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರು ಪಡಿತರ ಪಡೆಯಲು ಬಂದಿದ್ದ ಕೆಲವು ಮಹಿಳೆಯರೊಂದಿಗೆ ಕೇಂದ್ರ ಸರಕಾರ ಗರೀಬ್ ಕಲ್ಯಾಣ್ ಯೋಜನೆಯಡಿ ಪ್ರತೀ ಕುಟುಂಬಕ್ಕೆ ಹೆಚ್ಚುವರಿ ಪಡಿತರ ನೀಡುತ್ತಿರುವ ಬಗ್ಗೆ ವಿಚಾರಿಸಿ, ಗೋದಾಮು ಹಾಗೂ ಪಡಿತರ ವಿತರಣಾ ವ್ಯವಸ್ಥೆಯನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.

ಕೇಂದ್ರ ಸಚಿವರನ್ನು ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ತಿರಿಮುಡಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಹಾಗೂ ಇನ್ನಿತರ ಅಭಿಮಾನಿಗಳು ಕೇಂದ್ರ ಸಚಿವರನ್ನು ಸನ್ಮಾನಿಸಿದರು. ಚಾಂತಾರು ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು.

ಬ್ರಹ್ಮಾವರ ಭಾಗದ ಅನೇಕ ಸಮಸ್ಯೆಗಳ ಕುರಿತು ಕೇಂದ್ರ ಸಚಿವರಿಗೆ ಸಾರ್ವಜನಿಕರು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಕೆ.ರಘುಪತಿ ಭಟ್, ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜು ಗೌಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ವೀಣಾ ವಿ. ನಾಯ್ಕ್ , ಮಂಡಲ ಪ್ರಭಾರಿ ಪೆರ್ಣಂಕಿಲ ಶ್ರೀಶ ನಾಯಕ್, ಬಿಜೆಪಿ ಜಿಲ್ಲಾ ಮತ್ತು ಮೋರ್ಚಾ, ಮಂಡಲಗಳ ಪದಾಧಿಕಾರಿಗಳು, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಅಧ್ಯಕ್ಷ ಇರ್ಮಾಡಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷ ವೆಂಕಟ್ರಾಯ ನಾಯಕ್, ನಿರ್ದೇಶಕರು, ಕಾರ್ಯ ನಿರ್ವಹಣಾಧಿಕಾರಿ ಸುಭಾಷ್ ಶೆಟ್ಟಿ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಹಾಗೂ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ: ಹಿಂ.ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಜನ್ಮದಿನಾಚರಣೆ

ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರಾಜ್ಯ ಕಂಡ ಹಿಂದುಳಿದ ವರ್ಗದ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ನಾಯಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷೆ ಲೀಲಾ ಆರ್. ಅಮೀನ್ ರವರ ನಿವಾಸದಲ್ಲಿ ಪುಷ್ಪಾಂಜಲಿ ಕಾರ್ಯಕ್ರಮದೊಂದಿಗೆ ಗೌರವ ನಮನ ಸಲ್ಲಿಸಲಾಯಿತು.

ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷರಾದ ಲೀಲಾ ಆರ್. ಅಮೀನ್, ಮನೋಜ್ ಕರ್ಕೇರ, ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಕಡಿಯಾಳಿ, ಕೋಶಾಧಿಕಾರಿ ಸತೀಶ್ ಪೂಜಾರಿ ಕುಕ್ಕಿಕಟ್ಟೆ, ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ದಯಾನಂದ ದೇವಾಡಿಗ ಮುಂತಾದವರು ಭಾಗವಹಿಸಿದ್ದರು.

ಬಿಜೆಪಿ ಜಿಲ್ಲಾ ರೈತ ಮೋರ್ಚಾ: ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಯವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿಲ್ಲಾ ರೈತ ಮೋರ್ಚಾ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಯವರು ಜ್ಯೋತಿ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈಯುವ ಮೂಲಕ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು.

ರೈತ ಮೋರ್ಚಾ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಕಾರ್ಯಸೂಚಿಯಂತೆ 75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಜಿಲ್ಲೆಯ 75 ಹಿರಿಯ ಕೃಷಿಕರನ್ನು ಸನ್ಮಾನಿಸುವ ಸತ್ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಹಿರಿಯ ಕೃಷಿಕರಾದ ಪದ್ದು ಪೂಜಾರ್ತಿ ಮತ್ತು ರತಿ ಶೆಡ್ತಿ, ವರಂಗ ಮುನಿಯಾಲು ಬೈಲು, ಕಾರ್ಕಳ ಮಂಡಲ, ರಾಜು ಗಾಣಿಗ ತೆಗ್ಗರ್ಸೆ, ಚಂದ್ರಹಾಸ ಸೂಡಾ ಕೆಂಚನೂರು, ಬೈಂದೂರು ಮಂಡಲ ಇವರನ್ನು ಸನ್ಮಾನಿಸಲಾಯಿತು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾದ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎ.ವಿ. ತೀರ್ಥರಾಮ ರವರು ಸಮಾರೋಪ ಭಾಷಣ ಮಾಡಿದರು.

ಎಫ್.ಪಿ.ಒ ರೈತ ಉತ್ಪಾದಕ ಸಂಘದ ಜಿಲ್ಲಾ ಸಂಚಾಲಕ ನಾಗರಾಜ ರಾವ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಹಾಗೂ ಸದಾನಂದ ಉಪ್ಪಿನಕುದ್ರು ರೈತ ಮೋರ್ಚಾ ಕೈಗೊಳ್ಳಬೇಕಾದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಹಾಗೂ ರಾಜ್ಯ ಸಾವಯವ ಕೃಷಿ ನಿರ್ದೇಶಕ ರಾಘವೇಂದ್ರ ರಾವ್ ಉಪ್ಪೂರು, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಸುರೇಂದ್ರ ಬೋಂಟ್ರ ಮುನಿಯಾಲು, ರವಿ ಗಾಣಿಗ ಕೆಂಚನೂರು, ಪ್ರವೀಣ್ ಕುಮಾರ್ ಶೆಟ್ಟಿ, ಐ.ಬಿ. ಅಶೋಕ್ ಶೆಟ್ಟಿ, ಗೋವಿಂದಾಯ ಶೇರಿಗಾರ್, ರೈತ ಮೋರ್ಚಾ ಮಂಡಲ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಕುಂದಾಪುರ, ಸುಧಾಕರ ಕುಲಾಲ್ ಬೈಂದೂರು, ಗುರುನಂದನ್ ನಾಯಕ್ ಕಾಪು, ಜಯಕರ ಪೂಜಾರಿ ಕಾರ್ಕಳ, ಪ್ರವೀಣ್ ಕುಮಾರ್, ಉಡುಪಿ ಗ್ರಾಮಾಂತರ ಉಪಸ್ಥಿತರಿದ್ದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಎಲ್ಲಾ ಆರು ಮಂಡಲಗಳ ರೈತ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಧೀರಜ್ ಕೆ.ಎಸ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕಾಂಚನ್ ಸಿದ್ಧಾಪುರ ವಂದಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಆ.16ರ ಪತ್ರಿಕಾ ಗೋಷ್ಠಿ

ಆಗಸ್ಟ್ 19: ಉಡುಪಿಯಲ್ಲಿ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನಾಶೀರ್ವಾದ ಯಾತ್ರೆ*

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ದೇಶಾದ್ಯಂತ ಕೇಂದ್ರ ಸಚಿವರ ನೇತೃತ್ವದಲ್ಲಿ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ “ಜನಾಶೀರ್ವಾದ ಯಾತ್ರೆ”ಯು ಆಗಸ್ಟ್ 16ರಿಂದ ಪ್ರಾರಂಭಗೊಂಡಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಆಗಸ್ಟ್ 16ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕರ್ನಾಟಕ ರಾಜ್ಯದಾದ್ಯಂತ ನಾಲ್ಕು ಕೇಂದ್ರ ಸಚಿವರ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯು ಉಡುಪಿ ಜಿಲ್ಲೆಗೆ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಆಗಸ್ಟ್ 18ರಂದು ಸಂಜೆ ಜಿಲ್ಲಾ ವ್ಯಾಪ್ತಿಯ ಹೆಬ್ರಿಗೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಜನಾಶೀರ್ವಾದ ಯಾತ್ರೆಯನ್ನು ಸ್ವಾಗತಿಸಲಾಗುವುದು ಎಂದು ಅವರು ಹೇಳಿದರು.

ಆಗಸ್ಟ್ 19ರಂದು ವಿವಿಧ ನಿಯೋಜಿತ ಕಾರ್ಯಕ್ರಮಗಳ ಜೊತೆಗೆ ಬೆಳಿಗ್ಗೆ ಗಂಟೆ 11.00ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿರುವ ಜನಾಶೀರ್ವಾದ ಯಾತ್ರೆಯ ಸಮಾವೇಶ ಮತ್ತು ನೂತನ ಕೇಂದ್ರ ಸಚಿವೆ ಅಭಿನಂದನಾ ಸಮಾರಂಭದಲ್ಲಿ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ನೂತನ ಸಚಿವರು, ಶಾಸಕರು, ಪಕ್ಷದ ಮುಖಂಡರು ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಉಪಸ್ಥಿತರಿದ್ದರು.

ಜನಾಶೀರ್ವಾದ ಯಾತ್ರೆಯ ಅಂಗವಾಗಿ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಆಗಸ್ಟ್ 18 ಮತ್ತು 19ರಂದು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ:

*ಆಗಸ್ಟ್ 18, ಬುಧವಾರ*:
ಸಂಜೆ 7.15ಕ್ಕೆ: ಹೆಬ್ರಿಯಲ್ಲಿ ಸ್ವಾಗತ
ಸಂಜೆ 8.30ಕ್ಕೆ: ಹಿರಿಯಡ್ಕದಲ್ಲಿ ಸ್ವಾಗತ
ಸಂಜೆ 9.30ಕ್ಕೆ: ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಬೇಟಿ
ರಾತ್ರಿ 10.00ಕ್ಕೆ: ಭೋಜನ – ಉಡುಪಿಯಲ್ಲಿ ವಾಸ್ತವ್ಯ

*ಆಗಸ್ಟ್ 19, ಗುರುವಾರ*:
ಬೆಳಿಗ್ಗೆ 8.00ಕ್ಕೆ: ಉಡುಪಿ ಶ್ರೀಕೃಷ್ಣ ಮಠ ಸಂದರ್ಶನ
ಬೆಳಿಗ್ಗೆ 8.30ಕ್ಕೆ: ಸ್ವಾಮೀಜಿಯವರ ದರ್ಶನ
ಬೆಳಿಗ್ಗೆ 9.30ಕ್ಕೆ: ಉಪಹಾರ
ಬೆಳಿಗ್ಗೆ 10.00ಕ್ಕೆ: ಪತ್ರಿಕಾ ಗೋಷ್ಠಿ (ಉಡುಪಿ ಡಯಾನಾ ಹೋಟೆಲ್)
ಬೆಳಿಗ್ಗೆ 10.30ಕ್ಕೆ: ಉಡುಪಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಪುಷ್ಪಾರ್ಚನೆ
ಬೆಳಿಗ್ಗೆ 11.00ಕ್ಕೆ: ಲಸಿಕಾ ಕೇಂದ್ರಕ್ಕೆ ಬೇಟಿ
*ಬೆಳಿಗ್ಗೆ 11.30ಕ್ಕೆ: ಉಡುಪಿ ಪುರಭವನದಲ್ಲಿ ‘ಜನಾಶೀರ್ವಾದ ಯಾತ್ರೆ ಸಮಾವೇಶ’ ಮತ್ತು ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ಅಭಿನಂದನಾ ಸಮಾರಂಭ*
ಮಧ್ಯಾಹ್ನ 1.00ಕ್ಕೆ: ಕೇಂದ್ರ ಸರಕಾರದ ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳೊಂದಿಗೆ ಸಂವಾದ – ಭೋಜನ (ಮಿನಿ ಟೌನ್ ಹಾಲ್, ಉಡುಪಿ)
ಮಧ್ಯಾಹ್ನ 2.00ಕ್ಕೆ: ಬ್ರಹ್ಮಾವರದ ಪಡಿತರ ವಿತರಣಾ ಕೇಂದ್ರಕ್ಕೆ ಬೇಟಿ
ಮಧ್ಯಾಹ್ನ 3.00ಕ್ಕೆ: ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ

*ಮಾಧ್ಯಮ ವಿಭಾಗ*

ಕೆಂಪುಕೋಟೆಯಲ್ಲಿ ಪ್ರಧಾನಿ ಭಾಷಣ – ಒಲಿಂಪಿಕ್ಸ್ ಕ್ರೀಡಾಪಟುಗಳು ಹೃದಯವನ್ನು ಗೆದ್ದಿದ್ದಾರೆ – ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆ, 54 ಕೋಟಿ ಜನರಿಗೆ ಲಸಿಕೆ, ಹಳ್ಳಿಗಳಲ್ಲೂ ಡಿಜಿಟಲ್ ಉದ್ಯಮಿಗಳು ತಯಾರಾಗುತ್ತಿದ್ದಾರೆ: ಮೋದಿ

ನವದೆಹಲಿ: ಇಂದು ಭಾರತದಲ್ಲಿ ಅತಿದೊಡ್ಡ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಇದುವರೆಗೆ 54 ಕೋಟಿಗೂ ಹೆಚ್ಚು ಜನರು ಲಸಿಕೆಯ ಡೋಸ್ ಪಡೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೆಂಪುಕೋಟೆಯಲ್ಲಿ ಪ್ರಧಾನಿ ಭಾಷಣ – ಒಲಿಂಪಿಕ್ಸ್ ಕ್ರೀಡಾಪಟುಗಳು ಹೃದಯವನ್ನು ಗೆದ್ದಿದ್ದಾರೆ – ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆ, 54 ಕೋಟಿ ಜನರಿಗೆ ಲಸಿಕೆ, ಹಳ್ಳಿಗಳಲ್ಲೂ ಡಿಜಿಟಲ್ ಉದ್ಯಮಿಗಳು ತಯಾರಾಗುತ್ತಿದ್ದಾರೆ: ಮೋದಿ
ರಾಜ್ಯದ 13 ಜಿಲ್ಲೆಗಳ 16 ತಾಲೂಕುಗಳು ಪ್ರವಾಹ ಪೀಡಿತ : ರಾಜ್ಯ ಸರ್ಕಾರದಿಂದ ಘೋಷಣೆ!
75 ಸ್ವಾತಂತ್ರ್ಯ ದಿನದಂದು ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ, ನಮ್ಮ ವೈದ್ಯರು, ದಾದಿಯರು, ಪ್ಯಾರಾಮೆಡಿಕಲ್ ಸಿಬ್ಬಂದಿ, ನೈರ್ಮಲ್ಯ ಕೆಲಸಗಾರರು, ವಿಜ್ಞಾನಿಗಳು ಮತ್ತು ಕೋಟ್ಯಂತರ ನಾಗರಿಕರು ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿದ್ದಾರೆ. ಈ ಅವಧಿಯಲ್ಲಿ ಇತರರ ಸೇವೆಗಾಗಿ ಪ್ರತಿ ಕ್ಷಣವನ್ನೂ ಮೀಸಲಿಟ್ಟವರು ನಮ್ಮ ಮೆಚ್ಚುಗೆಗೆ ಅರ್ಹರು ಎಂದು ಹೇಳಿದ ಮೋದಿ ಕೊರೊನಾ ವಾರಿಯರ್ಸ್‍ಗಳ ಸೇವೆಯನ್ನು ಶ್ಲಾಘಿಸಿದರು.

ಮುಂದಿನ ದಿನಗಳಲ್ಲಿ, ನಾವು ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. 100 ಲಕ್ಷ ಕೋಟಿ ರಾಷ್ಟ್ರೀಯ ಮೂಲಸೌಕರ್ಯ ಮಾಸ್ಟರ್ ಪ್ಲಾನ್ ಇದಾಗಿದ್ದು, ಈ ಯೋಜನೆ ಸಮಗ್ರ ಮೂಲಸೌಕರ್ಯಕ್ಕೆ ಅಡಿಪಾಯವನ್ನು ನೀಡುತ್ತದೆ ಎಂದು ತಿಳಿಸಿದರು. ಇದರ ಜೊತೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಮಯದಲ್ಲಿ 75 ವಂದೇ ಭಾರತ್ ರೈಲುಗಳು 75 ವಾರಗಳಲ್ಲಿ ಭಾರತದ ಮೂಲೆ ಮೂಲೆಯನ್ನು ಸಂಪರ್ಕಿಸುತ್ತದೆ ಎಂದು ತಿಳಿಸಿದರು.

ಮೋದಿ ಭಾಷಣದ ಮುಖ್ಯಾಂಶಗಳು: 21 ನೇ ಶತಮಾನದಲ್ಲಿ ಭಾರತದ ಸಾಮರ್ಥ್ಯಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಂಪೂರ್ಣವಾಗಿ ಬಳಸಿಕೊಳ್ಳುವುದು ಅತ್ಯಗತ್ಯ. ಇದಕ್ಕಾಗಿ, ನಾವು ಹಿಂದುಳಿದಿರುವ ವಿಭಾಗ, ಹಿಂದುಳಿದಿರುವ ಪ್ರದೇಶವನ್ನು ಕೈ ಹಿಡಿಯಬೇಕು.

ಜಮ್ಮು ಮತ್ತು ಕಾಶ್ಮೀರದಲ್ಲಿ ಡಿಲಿಮಿಟೇಶನ್ ಕಮಿಷನ್ ಅನ್ನು ರಚಿಸಲಾಗಿದೆ ಮತ್ತು ಭವಿಷ್ಯದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಒಂದೆಡೆ ಲಡಾಖ್ ಆಧುನಿಕ ಮೂಲಸೌಕರ್ಯಗಳ ಸೃಷ್ಟಿಗೆ ಸಾಕ್ಷಿಯಾಗಿದ್ದರೆ, ಮತ್ತೊಂದೆಡೆ ಇಂಡಸ್ ಸೆಂಟ್ರಲ್ ಯೂನಿವರ್ಸಿಟಿ ಲಡಾಖ್ ಅನ್ನು ಉನ್ನತ ಶಿಕ್ಷಣದ ಕೇಂದ್ರವನ್ನಾಗಿಸುತ್ತದೆ.

ಕಳೆದ 7 ವರ್ಷಗಳಲ್ಲಿ ಆರಂಭವಾದ ಅನೇಕ ಯೋಜನೆಗಳ ಪ್ರಯೋಜನಗಳು ಕೋಟ್ಯಂತರ ಬಡವರ ಮನೆಬಾಗಿಲನ್ನು ತಲುಪಿವೆ. ಇಂದು ಸರ್ಕಾರದ ಯೋಜನೆಗಳು ವೇಗವನ್ನು ಪಡೆದುಕೊಂಡಿವೆ ಮತ್ತು ಅವುಗಳ ಗುರಿಗಳನ್ನು ತಲುಪುತ್ತಿವೆ.

ಟೋಕಿಯೋ ಒಲಿಂಪಿಕ್ಸ್ ನಲ್ಲಿ ನಮಗೆ ಹೆಮ್ಮೆ ತಂದ ಕ್ರೀಡಾಪಟುಗಳು ಇಂದು ನಮ್ಮ ನಡುವೆ ಇದ್ದಾರೆ. ಅವರು ನಮ್ಮ ಹೃದಯವನ್ನು ಗೆಲ್ಲುವುದರ ಜೊತೆಗೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ಆಗಿದ್ದಾರೆ.

ಜನೌಷಧಿ ಯೋಜನೆಯಡಿ ಬಡವರು ಮತ್ತು ನಿರ್ಗತಿಕರಿಗೆ ಕೈಗೆಟುಕುವ ದರದಲ್ಲಿ ಔಷಧಗಳು ಸಿಗುತ್ತಿವೆ. ಇಲ್ಲಿಯವರೆಗೆ 75 ಸಾವಿರಕ್ಕೂ ಕ್ಕೂ ಹೆಚ್ಚು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಈಗ ನಾವು ಆಧುನಿಕ ಪ್ರಯೋಗಾಲಯಗಳು ಮತ್ತು ಬ್ಲಾಕ್ ಮಟ್ಟದಲ್ಲಿ ಉತ್ತಮ ಆಸ್ಪತ್ರೆಗಳನ್ನು ನಿರ್ಮಿಸುವ ಕೆಲಸ ಮಾಡುತ್ತಿದ್ದೇವೆ.

ಮುಂದಿನ ತಲೆಮಾರಿನ ಮೂಲಸೌಕರ್ಯ, ವಿಶ್ವ ದರ್ಜೆಯ ತಯಾರಿಕೆ, ಹೊಸತನ ಮತ್ತು ಹೊಸ ಯುಗದ ತಂತ್ರಜ್ಞಾನಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಬೇಕು.

ಇಂದು ನಮ್ಮ ಹಳ್ಳಿಗಳು ವೇಗವಾಗಿ ಬದಲಾಗುತ್ತಿರುವುದನ್ನು ನಾವು ನೋಡುತ್ತೇವೆ. ಕಳೆದ ಕೆಲವು ವರ್ಷಗಳಲ್ಲಿ, ರಸ್ತೆ ಮತ್ತು ವಿದ್ಯುತ್‍ನಂತಹ ಸೌಲಭ್ಯಗಳು ಹಳ್ಳಿಗಳನ್ನು ತಲುಪಿವೆ. ಇಂದು, ಆಪ್ಟಿಕಲ್ ಫೈಬರ್ ನೆಟ್ವರ್ಕ್ ಹಳ್ಳಿಗಳಿಗೆ ಡೇಟಾ ಶಕ್ತಿಯನ್ನು ಒದಗಿಸುತ್ತದೆ, ಇಂಟರ್ನೆಟ್ ಅಲ್ಲಿಗೆ ತಲುಪುತ್ತಿದೆ. ಹಳ್ಳಿಗಳಲ್ಲೂ ಡಿಜಿಟಲ್ ಉದ್ಯಮಿಗಳು ತಯಾರಾಗುತ್ತಿದ್ದಾರೆ.

ಸ್ವಾತಂತ್ರೋತ್ಸವದ ಪ್ರಯುಕ್ತ ಪ್ರತಿ ಸಂಚಾಯತ್ ಮಟ್ಟದಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ

ಸ್ವಾತಂತ್ರೋತ್ಸವದ ಪ್ರಯುಕ್ತ ಪ್ರತಿ ಸಂಚಾಯತ್ ಮಟ್ಟದಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ

ಚಾಲನೆ: ಕೆ. ರಘುಪತಿ ಭಟ್ , ಮಾನ್ಯ ಶಾಸಕರು, ಉಡುಪಿ ವಿಧಾನಸಭಾ ಕ್ಷೇತ್ರ

ದಿನಾಂಕ: 15-08-2021 ಬೆಳಗ್ಗೆ 10 ಗಂಟೆಯಿಂದ ಸಂಜೆ 5ರ ತನಕ ಸ್ಥಳ: ಬಿಜೆಪಿ ಕಛೇರಿ, ಬ್ರಹ್ಮಾವರ

ಆಗಸ್ಟ್ 18-19: ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಗೆ ಹೆಬ್ರಿಯಲ್ಲಿ ಸ್ವಾಗತ, ಉಡುಪಿ ಪುರಭವನದಲ್ಲಿ ಸಮಾಗಮ – ಜಿಲ್ಲಾ ಬಿಜೆಪಿ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಸರಕಾರದ ವಿವಿಧ ಜನಪರ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಜನಾಶೀರ್ವಾದ ಯಾತ್ರೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.

ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ರಾಜ್ಯದಲ್ಲಿ 5 ದಿನಗಳ ಪ್ರವಾಸದಲ್ಲಿ 2,030 ಕಿಮೀ ದೂರವನ್ನು ಕ್ರಮಿಸಲಿವೆ. 24 ಲೋಕಸಭಾ ಕ್ಷೇತ್ರಗಳು, 72 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ 25 ಕಂದಾಯ ಜಿಲ್ಲೆಗಳಲ್ಲಿ 161 ಕಾರ್ಯಕ್ರಮಗಳು ನಡೆಯಲಿವೆ.

ಕೇಂದ್ರ ಸರಕಾರವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅನುಷ್ಠಾನಗೊಳಿಸಿರುವ ಯೋಜನೆಗಳು, ರೈತರ ಆದಾಯ ದ್ವಿಗುಣ, ದೀನದಲಿತರು, ಬಡವರ ಅಭ್ಯುದಯಕ್ಕಾಗಿ ಕೈಗೊಂಡ ಕಾರ್ಯಕ್ರಮಗಳನ್ನು ಪರಿಚಯಿಸಲಾಗುವುದು. ದೇಶದಲ್ಲಿ 55 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ನೀಡಲಾಗಿದೆ. ದೀಪಾವಳಿ ವರೆಗೆ ಬಡವರಿಗೆ ಉಚಿತ ಪಡಿತರ ನೀಡುತ್ತಿದ್ದು, ಲಸಿಕಾ ಕೇಂದ್ರ, ರೇಶನ್ ಅಂಗಡಿಗಳಿಗೆ ಈ ಯಾತ್ರೆ ಭೇಟಿ ನೀಡಲಿದೆ. ರಸಗೊಬ್ಬರದ ಅಂಗಡಿಗೆ ಭೇಟಿ ನೀಡಿ ಗೊಬ್ಬರ ಸರಿಯಾಗಿ ಸಿಗುತ್ತಿದೆಯೇ ಎಂದು ಮಾಹಿತಿ ಪಡೆಯಲಾಗುವುದು. ಸಾಹಿತಿಗಳು, ಗಡಿ ಕಾಯುವ ಯೋಧರ ಮನೆ, ಗಣ್ಯ ವ್ಯಕ್ತಿಗಳ ಮನೆ, ಜನಸಂಘ ಮತ್ತು ಬಿಜೆಪಿಯ ಹಿರಿಯ ನಾಯಕರ ಮನೆಗಳಿಗೆ ಭೇಟಿ ಕೊಟ್ಟು ಅವರ ಆಶೀರ್ವಾದ ಪಡೆಯಲಾಗುವುದು.

ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಕರ್ನಾಟಕ ರಾಜ್ಯದಾದ್ಯಂತ 4 ನೂತನ ಕೇಂದ್ರ ಸಚಿವರ ನೇತೃತ್ವದಲ್ಲಿ ಆಗಸ್ಟ್ 16ರಿಂದ ಜನಾಶೀರ್ವಾದ ಯಾತ್ರೆ ನಡೆಯಲಿದೆ.

ಉಡುಪಿ ಜಿಲ್ಲೆಗೆ ಅಗಸ್ಟ್ 18ರಂದು ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಆಗಮಿಸುವ ಜನಾಶೀರ್ವಾದ ಯಾತ್ರೆಯನ್ನು ಜಿಲ್ಲಾ ಬಿಜೆಪಿ ವತಿಯಿಂದ ಹೆಬ್ರಿಯಲ್ಲಿ ಸ್ವಾಗತಿಸಲಾಗುವುದು. ಆಗಸ್ಟ್ 19ರಂದು ಬೆಳಿಗ್ಗೆ 11.00 ಗಂಟೆಗೆ ಉಡುಪಿ ಪುರಭವನದಲ್ಲಿ ಜನಾಶೀರ್ವಾದ ಯಾತ್ರೆ ಸಮಾವೇಶ ಹಾಗೂ ನೂತನ ಕೇಂದ್ರ ಸಚಿವರಿಗೆ ಅಭಿನಂದನಾ ಸಮಾರಂಭ ಸಂಪನ್ನಗೊಳ್ಳಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನಾಶೀರ್ವಾದ ಯಾತ್ರೆಯ ಅಂಗವಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಆಗಸ್ಟ್ 18 ಮತ್ತು 19ರಂದು ನಡೆಯಲಿರುವ ವಿವಿಧ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ.

ಆಗಸ್ಟ್ 18, ಬುಧವಾರ ಸಂಜೆ 5.30ಕ್ಕೆ: ಹೆಬ್ರಿಯಲ್ಲಿ ಸ್ವಾಗತ, 6.00ಕ್ಕೆ: ಪೆರ್ಡೂರಿನಲ್ಲಿ, 6.15ಕ್ಕೆ: ಹಿರಿಯಡ್ಕದಲ್ಲಿ ಸ್ವಾಗತ, ಸಂಜೆ 7.00ಕ್ಕೆ: ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ. ಸಂಜೆ 7.30ಕ್ಕೆ: ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸಭೆ, ರಾತ್ರಿ 8.30ಕ್ಕೆ: ಭೋಜನ – ಉಡುಪಿಯಲ್ಲಿ ವಾಸ್ತವ್ಯ.

ಆಗಸ್ಟ್ 19, ಗುರುವಾರ ಬೆಳಿಗ್ಗೆ 8.00ಕ್ಕೆ: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ, 8.30ಕ್ಕೆ: ಸ್ವಾಮೀಜಿಯವರ ದರ್ಶನ, 9.00ಕ್ಕೆ: ಉಪಹಾರ, 10.00ಕ್ಕೆ: ಉಡುಪಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಪುಷ್ಪಾರ್ಚನೆ, 10.30ಕ್ಕೆ: ಪತ್ರಿಕಾ ಗೋಷ್ಠಿ (ಉಡುಪಿಯ ಹೋಟೆಲ್ ಡಯಾನಾದಲ್ಲಿ), ಬೆಳಿಗ್ಗೆ 11.00ಕ್ಕೆ: ಉಡುಪಿ ಪುರಭವನದಲ್ಲಿ ‘ಜನಾಶೀರ್ವಾದ ಯಾತ್ರೆ ಸಮಾವೇಶ’ ಮತ್ತು ‘ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಅಭಿನಂದನಾ ಸಮಾರಂಭ’, ಮಧ್ಯಾಹ್ನ 12.30ಕ್ಕೆ: ಕೋವಿಡ್ ಲಸಿಕಾ ಕೇಂದ್ರಕ್ಕೆ ಬೇಟಿ, 1.00ಕ್ಕೆ: ಪಡಿತರ ವಿತರಣಾ ಕೇಂದ್ರಕ್ಕೆ ಬೇಟಿ, 1.30ಕ್ಕೆ: ಕೇಂದ್ರ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ (ಬಿಜೆಪಿ ಜಿಲ್ಲಾ ಕಛೇರಿಯಲ್ಲಿ), ಮಧ್ಯಾಹ್ನ 2.00ಕ್ಕೆ: ಭೋಜನ

ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಅಧ್ಯಕ್ಷರಾಗಿ ವಾಮನ್ ಪಾಲನ್ ಆಯ್ಕೆ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಗೆ ಚೊಚ್ಚಲ ಪ್ರಶಸ್ತಿ

ಉಡುಪಿ: ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಹಿರಿಮೆಗೆ ಇನ್ನೊಂದು ಗರಿ ಸೇರ್ಪಡೆಯಾಗಿದೆ. ವರ್ಲ್ಡ್ ಅಸೋಸಿಯೇಶನ್ ಆಫ್ ಕಿಕ್ ಬಾಕ್ಸಿಂಗ್ ಅರ್ಗನೈಸೇಷನ್ಸ್ (ಡಬ್ಲ್ಯೂಎಕೆಒ) ವಕೊ ಇಂಡಿಯಾ ಇದರ ಅಂಗ ಸಂಸ್ಥೆಯಾದ ವಕೊ ಕರ್ನಾಟಕ ಇದರಿಂದ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಗೆ ಸದಸ್ಯತ್ವದ ಮಾನ್ಯತೆ ದೊರೆತಿದೆ. ಉಡುಪಿ ಜಿಲ್ಲೆಯ ಕಿಕ್ ಬಾಕ್ಸಿಂಗ್ ಸಂಘಟನೆಯ ಅಧ್ಯಕ್ಷರನ್ನಾಗಿ ವಾಮನ್ ಪಾಲನ್ ಇವರನ್ನು ನೇಮಕ ಮಾಡಲಾಗಿದೆ.

ಆಗಸ್ಟ್ 11 ರಂದು ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ವಕೊ ಕರ್ನಾಟಕ ಇದರ ಪ್ರಧಾನ ಕಾರ್ಯದರ್ಶಿ ಪೂಜಾ ಹರ್ಷ ರವರು ವಾಮನ್ ಪಾಲನ್ ರವರಿಗೆ ದೃಢೀಕರಣ ಪತ್ರವನ್ನು ನೀಡಿ ಸನ್ಮಾನಿಸಿದರು.

ಆಗಸ್ಟ್ 11ರಂದು ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧಾ ಕೂಟದಲ್ಲಿ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ಭಾಗವಹಿಸಿದ ಉಡುಪಿ ಜಿಲ್ಲೆಯ ಸೀತಾರಾಮ್ ಪೂಜಾರಿ, ಅಶೋಕ್ ಕುಲಾಲ್, ಗ್ಲೆನ್ ಮೌನಿತ್ ಹಾಗೂ ಪವನ್ ಕುಮಾರ್ ಇವರು ವಿವಿಧ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿ 5 ಚಿನ್ನ, 2 ಬೆಳ್ಳಿ ಹಾಗೂ 1 ಕಂಚಿನ ಪದಕಗಳನ್ನು ಪಡೆದಿದ್ದಾರೆ. ಆ ಮೂಲಕ ಕಿಕ್ ಬಾಕ್ಸಿಂಗ್ ಕ್ರೀಡೆಯಲ್ಲಿ ಉಡುಪಿ ಜಿಲ್ಲೆಗೆ ಚೊಚ್ಚಲ ಪ್ರಶಸ್ತಿ ದೊರೆತಂತಾಗಿದೆ. ಇವರು ಆಗಸ್ಟ್ 26ರಿಂದ ಗೋವಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Design a site like this with WordPress.com
Get started