ಕೊರೊನಾ ಭೀತಿ : ಆಗಸ್ಟ್ 15 ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗಿದ್ದು, ಶ್ರಾವಣ ಮಾಸದ ಸೋಮವಾರ ಮತ್ತು ಭೀಮನ ಅಮಾವಾಸ್ಯೆ ದಿನ ಜನ ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದರು. ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾದ್ರೆ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ಬಳಿಕ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯದಲ್ಲಿ ಮಹಾಮಾರಿ ಕೊರೋನಾ 3ನೇ ಅಲೆಯ ( Corona 3rd Wave ) ಭೀತಿ ಶುರುವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕೋವಿಡ್-19 3ನೇ ಅಲೆಯ ಹೊಡೆತ ಹೆಚ್ಚಾಗಿದೆ. ಮಕ್ಕಳಲ್ಲಿಯೇ ಹೆಚ್ಚು ಈ ಬಾರಿ ಕೊರೋನಾ ಕೇಸ್ ಪತ್ತೆಯಾಗಿರೋದು ವರದಿಯಿಂದ ತಿಳಿದು ಬಂದಿದೆ. ಈ ಮೂಲಕ ಸಿಲಿಕಾನ್ ಸಿಟಿಯ ಜನರಲ್ಲಿ ಆತಂಕ ಉಂಟು ಮಾಡಿದೆ.
ಕಳೆದ ಆಗಸ್ಟ್ 1 ರಿಂದ 10ರವರೆಗೆ, ಬೆಂಗಳೂರಿನಲ್ಲಿ 10 ದಿನದಲ್ಲಿ 505 ಮಕ್ಕಳಿಗೆ ಕೊರೋನಾ ಸೋಂಕು ( Corona Virus ) ತಗುಲಿದೆ. ಇವರಲ್ಲಿ 246 ಹೆಣ್ಣು ಮಕ್ಕಳು, 259 ಗಂಡು ಮಕ್ಕಳು ಸೇರಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲಾ ಪ್ರವಾಸ

ಕರ್ನಾಟಕ ರಾಜ್ಯ ಸರಕಾರದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಆಗಸ್ಟ್ 12, ಗುರುವಾರ ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದು, ಮಧ್ಯಾಹ್ನ ಗಂಟೆ 3.00ಕ್ಕೆ ಅವರನ್ನು ಉಡುಪಿ ಜಿಲ್ಲಾ ವ್ಯಾಪ್ತಿಯ ಹೆಜಮಾಡಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಗುವುದು.

ಮುಖ್ಯಮಂತ್ರಿಗಳು ಮಧ್ಯಾಹ್ನ 3.30ಕ್ಕೆ ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ, ಸಂಜೆ 4.00ಕ್ಕೆ ಉಡುಪಿ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಕೋವಿಡ್ ಕುರಿತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಬೇಟಿ ನೀಡಲಿರುವ ಮುಖ್ಯ ಮಂತ್ರಿಗಳಿಗೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಗೌರವಾರ್ಪಣೆ ನಡೆಯಲಿದೆ. ಮುಖ್ಯಮಂತ್ರಿ ಬೊಮ್ಮಾಯಿಯವರು ಸಂಜೆ 6.15ಕ್ಕೆ ಉಡುಪಿ ಶ್ರೀ ಕೃಷ್ಣ ಮಠ ಸಂದರ್ಶನಗೈದು ಸ್ವಾಮೀಜಿಯವರ ದರ್ಶನ ಪಡೆದು ರಾತ್ರಿ 7.00ಕ್ಕೆ ನಿರ್ಗಮಿಸಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಬೇಟಿ

ಬಿಜೆಪಿ ನೇತೃತ್ವದ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಚಿವರನ್ನು ಸ್ವಾಗತಿಸಿ ಶಾಲು ಹೊದೆಸಿ ಪುಸ್ತಕ ನೀಡಿ ಗೌರವಿಸಿದರು. ಸಚಿವರು ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು.

ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ದೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಹಾಗೂ ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಉಡುಪಿ ಪುರಭವನದಲ್ಲಿ ಜಿಲ್ಲಾ ಬಿಜೆಪಿಯಿಂದ ಆಶೀರ್ವಾದ ಯಾತ್ರೆ, ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಅಭಿನಂದನೆ.

ಪಕ್ಷ ಸಂಘಟನೆ ಮತ್ತು ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಆಶೀರ್ವಾದ ಯಾತ್ರೆ ಸಮಾವೇಶ’ ಹಾಗೂ ನೂತನ ‘ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ಅಭಿನಂದನಾ ಸಮಾರಂಭ’ವು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 16, ಸೋಮವಾರ ಬೆಳಿಗ್ಗೆ 11.45ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ.

ಈ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಗಳ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಕೇಂದ್ರ ಸಚಿವರನ್ನು ಬೆಳಿಗ್ಗೆ ಗಂಟೆ 11.00ಕ್ಕೆ ಉಡುಪಿ ಜಿಲ್ಲಾ ವ್ಯಾಪ್ತಿಯ ಹೆಜಮಾಡಿಯಲ್ಲಿ ಸ್ವಾಗತಿಸಿ, ಕಾಪು ಮೂಲಕ ಬರಮಾಡಿಕೊಳ್ಳಲಾಗುವುದು.

ಸಚಿವರು ಮಧ್ಯಾಹ್ನ ಗಂಟೆ 1.30ಕ್ಕೆ ಉಡುಪಿ ಶ್ರೀ ಕೃಷ್ಣ ಮಠವನ್ನು ಸಂದರ್ಶಿಸಿ, 2.00 ಗಂಟೆಗೆ ಸ್ವಾಮೀಜಿಯವರ ದರ್ಶನಗೈದು, 2.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಲಿದ್ದಾರೆ.

ಮಧ್ಯಾಹ್ನ 3.00 ಗಂಟೆಗೆ ಪೆರ್ಡೂರಿನಲ್ಲಿ ಮತ್ತು 3.30ಕ್ಕೆ ಹೆಬ್ರಿಯಲ್ಲಿ ಕೇಂದ್ರ ಸಚಿವರನ್ನು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸ್ವಾಗತಿಸಲಿದ್ದಾರೆ. ಸಂಜೆ ಗಂಟೆ 5.00ಕ್ಕೆ ಸಚಿವರು ಶ್ರೀ ಶೃಂಗೇರಿ ಮಠವನ್ನು ಸಂದರ್ಶಿಸಲಿದ್ದಾರೆ.

ಕರಾವಳಿ ಸಚಿವರಿಗೆ ಪ್ರಮುಖ ಖಾತೆ: ಉಡುಪಿ ಜಿಲ್ಲಾ ಬಿಜೆಪಿ ಹರ್ಷ 

ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಉಡುಪಿ ಮತ್ತು ದ.ಕ. ಜಿಲ್ಲೆಗಳ ನೂತನ ಸಚಿವರಿಗೆ ಪ್ರಮುಖ ಖಾತೆಗಳ ಹಂಚಿಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.

ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲೆಯ ಸುಳ್ಯ ಶಾಸಕ ಎಸ್.ಅಂಗಾರ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾಗಿ ನಿಯುಕ್ತಿಗೊಂಡಿರುವುದು ಸಂತಸ ತಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ನೂತನ ಸಚಿವತ್ರಯರಿಗೆ ಅಭಿನಂದನೆ ಸಲ್ಲಿಸಿರುವ ಅವರು, ಸಚಿವರು ತಮ್ಮ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವಿಶ್ವಾಸವಿದೆ ಎಂದಿದ್ದಾರೆ.

ಈ ಆಯ್ಕೆ ಉಡುಪಿ, ದ.ಕ. ಜಿಲ್ಲೆಗಳ ಸಹಿತ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡಲಿ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾಟೆ ಬ್ಲ್ಯಾಕ್ ಬೆಲ್ಟ್ ನಲ್ಲಿ ಆರನೇ ಪದವಿ ಪಡೆದ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ

ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಅಧ್ಯಕ್ಷರು ಹಾಗೂ ಕರಾಟೆ ಮುಖ್ಯ ಶಿಕ್ಷಕರು, ಮುಖ್ಯ ಪರೀಕ್ಷಕರು ಆಗಿರುವ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ ಇವರು ಕರಾಟೆ ಕ್ರೀಡೆಯ ಪ್ರಮುಖ ಘಟ್ಟವಾಗಿರುವ ಬ್ಲ್ಯಾಕ್ ಬೆಲ್ಟ್ ಆರನೇ ಪದವಿಯನ್ನು ಪಡೆಯುವುದರೊಂದಿಗೆ ಶಿಹಾನ್ ಶ್ರೇಣಿಯಿಂದ ರೆಂಷಿ ಶ್ರೇಣಿಗೆ ಪದೋನ್ನತಿ ಹೊಂದಿದ್ದಾರೆ.

ಇವರು ಕರಾಟೆ ಬ್ಲ್ಯಾಕ್ ಬೆಲ್ಟ್ ಆರನೇ ಪದವಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿ, ಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಆಸ್ಟ್ರೇಲಿಯಾ ಇದರ ಏಷ್ಯಾ ಮುಖ್ಯ ಶಿಕ್ಷಕ ಹಂಷಿ ಬಿ. ಪರಮೇಶ್ ಇವರಿಂದ ಬ್ಲ್ಯಾಕ್ ಬೆಲ್ಟ್ ಪಟ್ಟಿ ಆರನೇ ಪದವಿಯ ಬೆಲ್ಟ್ ಹಾಗೂ ಪ್ರಮಾಣ ಪತ್ರವನ್ನು ಹೈದರಾಬಾದ್ ಕೆಬಿಐ ಏಷ್ಯಾ ಮುಖ್ಯ ಕಛೇರಿಯಲ್ಲಿ ಪಡೆದಿದ್ದಾರೆ.

ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ

ದಿನಕ್ಕೆ 3-8 ಸಾವಿರ ರೂ. ಗಳಿಸುವ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 5.61 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಬೆಳ್ತಂಗಡಿಯಲ್ಲಿ ಇದೀಗ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಚರ್ಚ್ ರಸ್ತೆಯ ಕಲ್ಕಣಿಯ ರವಿಶಂಕರ್ ಡಿ.ಕೆ ಅವರ ಪತ್ನಿ ಪೂರ್ಣಿಮಾ ಎಂಬವರೇ ಈ ರೀತಿ ವಂಚನೆಗೊಳಗಾದವರು ಎಂದು ತಿಳಿದುಬಂದಿದೆ.

ಪ್ರತಿದಿನ ಸುಮಾರು 3-8 ಸಾವಿರ ರೂ ಗಳಿಸಬಹುದು ಎಂದು ವಾಟ್ಸ್ ಆಪ್ ಮೂಲಕ ಬಂದ ಸಂದೇಶ ನಂಬಿ ಪೂರ್ಣಿಮಾ ಅವರು 3 ತಿಂಗಳ ಅಂತರದಲ್ಲಿ ಒಟ್ಟು 5.61 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಜೂನ್ ತಿಂಗಳಲ್ಲಿ ಒಂದು ಅಪರಿಚಿತ ನಂಬರಿನಿಂದ ವ್ಯಕ್ತಿಯೋರ್ವ ಮೆಸೇಜ್ ಕಳುಹಿಸಿದ್ದು, ಕಾರ್ತಿಕ್ ಅಮೇಜಾನ್ ಪಾರ್ಟ್ ಟೈಮ್‌ಗೆ ತುರ್ತಾಗಿ ರಿಕ್ರೂಟ್‌ಮೆಂಟ್ ಮಾಡುತ್ತಿದ್ದು, ನೀವು ಪ್ರತಿ ದಿನ 3000-8000 ರೂ. ಗಳಿಸಬಹುದು. ಇದಕ್ಕಾಗಿ ನೀವು ಈ ನಂಬರನ್ನು ಸಂಪರ್ಕಿಸಿ ಎಂದು ತಿಳಿಸಿದ್ದಾನೆ. ಈ ಮೆಸೇಜನ್ನು ನಂಬಿದ ಗ್ರಹಿಣಿ ಅದರ ಪ್ರಕಾರ ಆಕೆ ಸಂಪರ್ಕಿಸಿದಾಗ ಲಿಂಕ್ ಒಂದನ್ನು ಕಳಿಸಿದ್ದಾರೆ.
ಲಿಂಕ್ ಮೂಲಕ ನೊಂದಾವಣೆಗೊಂಡ ತಕ್ಷಣ ಅವರ ಖಾತೆಗೆ 100 ರೂ.ಜಮೆ ಆಗಿದೆ. ನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ ಸೈಟ್‌ನಲ್ಲಿ ಒಂದೊಂದೇ ಟಾಸ್ಕ್ ನೀಡುತ್ತಾ ಹೋಗುತ್ತಿದ್ದರು. 200 ರೂ ಪಾವತಿಸುವಂತೆ ಕೇಳಿಕೊಂಡಿದ್ದು, ಗೃಹಿಣಿ ತನ್ನ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಿದ್ದರು. ಅದಕ್ಕೆ ರೂ 23.12 ಕಮಿಶನ್ ಸೇರಿಸಿ ಇವರಿಗೆ ಮೇಸೆಜ್ ಕಳುಹಿಸಲಾಗಿತ್ತು. ಬಳಿಕ ಹೀಗೆಯೇ ಎಂಟು ಟಾಸ್ಕ್ ಗಳ ಮುಖಾಂತರ ರೂ 1,21,324 ರೂ ತನ್ನ ಸ್ನೇಹಿತರು ಹಾಗೂ ಸಂಬಂಧಿಕರಿಂದ ಪಡೆದು ಪಾವತಿಸಿದ್ದರು.

ಜು. 12ರಂದು 12ಸಾವಿರ ರೂ, ಸ್ನೇಹಿತರ ಕ್ರೆಡಿಟ್ ಕಾರ್ಡ್ ಮೂಲಕ 10ಸಾವಿರ ರೂ. ಪಾವತಿಸಿದ್ದರು. ಬಳಿಕ ಅವರ ಮೇಲೆ ವಿಶ್ವಾಸವಿರಿಸಿ 85,707 ರೂ., 2,54,506 ರೂ., 78,000 ರೂ., ಹೀಗೆ ಒಟ್ಟು 5,61,537 ರೂ. ಗಳನ್ನು ಖಾತೆಗೆ ವರ್ಗಾಯಿಸಿಕೊಂಡು ಯಾವುದೇ ಕಮಿಷನ್ ಕೊಡದೆ ವಂಚಿಸಲಾಗಿರುತ್ತದೆ ಎಂದು ಆಕೆ ಇದೀಗ ದ.ಕ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಂ 419, 420, ಕಲಂ . 66 (ಡಿ ) , 66 (ಸಿ) ಮಾಹಿತಿ ತಂತ್ರಜ್ಞಾನ ಕಾಯ್ದೆಯಂತೆ ಅಪರಿಚಿತ ವಂಚಕನ ವಿರುದ್ಧ ಕೇಸು ದಾಖಲಾಗಿದೆ ಹಾಗೂ ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ!: ಹೊಸ ಮಾರ್ಗಸೂಚಿ ಬಿಡುಗಡೆ

ಕೊರೋನಾವೈರಸ್ ಮೂರನೇ ಅಲೆ ಹತ್ತಿರ ಬರುತ್ತಿರುವಂತೆ ಕಾಣುತ್ತಿದ್ದು ಸೋಂಕಿತರ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು ಗಡಿಭಾಗಗಳಲ್ಲಿ ಎಚ್ಚರಿಕೆ ವಹಿಸಲಾಗುತ್ತಿದೆ.

ಇನ್ನೂ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಾರೆ. ಇಂದು ರಾತ್ರಿ 9ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿದ್ದಾರೆ

ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂವನ್ನು ಜಾರಿ ಮಾಡಲಾಗಿದೆ. ಮತ್ತು ಗಡಿ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿರುವುದಾಗಿ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿದ್ದಾರೆ.

ನಾಳೆ ಆಗಸ್ಟ್ 7ರಂದು ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಅಹವಾಲು ಸ್ವೀಕಾರ

ನಾಳೆ ಆಗಸ್ಟ್ 7, 2021 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ನೂತನ ಸಚಿವರಾದ ಶ್ರೀ ವಿ.ಸುನೀಲ್ ಕುಮಾರ್ ರವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ.

ಸಾರ್ವಜನಿಕ ಬಂಧುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Design a site like this with WordPress.com
Get started