ಉಡುಪಿ ಜಿಲ್ಲೆಗೆ ಸಚಿವಧ್ವಯರು: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗುರುವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ರಾಜ್ಯ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಗೆ ಬಿಜೆಪಿ ವರಿಷ್ಠರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನಷ್ಟು ಆದ್ಯತೆ ನೀಡಿದಂತಾಗಿದೆ. ರಾಜ್ಯದಲ್ಲಿ ಯುವಕರು ಹಾಗೂ ಹಿರಿಯರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಅಭಿವೃದ್ಧಿಗೆ ವೇಗ ದೊರೆತಂತಾಗಿದೆ. ನೂತನ ಸಚಿವ ಸಂಪುಟ ಕೋವಿಡ್ ಮತ್ತು ನೆರೆ ಹಾವಳಿಯ ಸಂಕಷ್ಟವನ್ನು ಸಮರ್ಥವಾಗಿ ಎದುರಿಸಲಿದೆ ಎಂದು ವಿಶ್ವಾಸ ವ್ಯಕಪಡಿಸಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಎಮ್. ಅಂಚನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ರಜನಿ ಹೆಬ್ಬಾರ್, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ತಾರಾ ಆಚಾರ್ಯ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್ ಹಾಗೂ ಮಹಿಳಾ ಮೋರ್ಚಾದ ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ: ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಉಡುಪಿ ಜಿಲ್ಲೆಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿ.ಸುನೀಲ್ ಕುಮಾರ್ ಇವರಿಗೆ ಸಚಿವ ಸ್ಥಾನ ದೊರೆತಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಛೇರಿಯ ಬಳಿ ಸಂಭ್ರಮಾಚರಣೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಮಾತನಾಡಿ ಈ ಬಾರಿಯ ರಾಜ್ಯ ಮಂತ್ರಿ ಮಂಡಲದಲ್ಲಿ ಉಡುಪಿ ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ದೊರೆತಿದ್ದು ಸರಳ ಸಜ್ಜನಿಕೆಯ ಅನುಭವಿ ರಾಜಕಾರಿಣಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಘಟನಾ ಚತುರ ವಿ.ಸುನೀಲ್ ಕುಮಾರ್ ಇವರೀರ್ವರು ಸಚಿವರಾಗಿ ಆಯ್ಕೆಯಾಗಿರುವುದು ಜಿಲ್ಲೆಯ ಸಮಸ್ತ ಕಾರ್ಯಕರ್ತರಿಗೆ ಸಂದ ಗೌರವ. ಈ ಆಯ್ಕೆಗೆ ಸಹಕರಿಸಿದ ಎಲ್ಲ ಹಿರಿಯರೂ ಅಭಿನಂದನಾರ್ಹರು ಎಂದರು.

ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು ಮಾತನಾಡಿ, ವಹಿಸಿರುವ ಖಾತೆಯನ್ನು ಸಮರ್ಪಕವಾಗಿ ನಿಭಾಯಿಸಿ ಅನುಭವವನ್ನು ಮೇಳೈಸಿರುವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರು ಮೂರನೇ ಬಾರಿಗೆ ಹಾಗೂ ಸಂಘಟನೆ ಮೂಲಕ ಅಭಿವೃದ್ಧಿಯ ಹೊಸ ಶಕೆಗೆ ಮುನ್ನುಡಿ ಬರೆದು ಸರಕಾರದ ಮುಖ್ಯ ಸಚೇತಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿರುವ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ರವರು ಮೊದಲನೇ ಬಾರಿಗೆ ರಾಜ್ಯ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಸಂತಸ ತಂದಿದೆ. ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆಯಾಗಿ ಶೋಭಾ ಕರಂದ್ಲಾಜೆ ಆಯ್ಕೆ ಸಹಿತ ರಾಜ್ಯದಲ್ಲಿ ಈ ಬೆಳವಣಿಗೆ, ಉಡುಪಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸಿ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ವಿಜಯ ಪತಾಕೆಯನ್ನು ಉತ್ತುಂಗಕ್ಕೇರಿಸಲು ನಾಂದಿ ಹಾಡಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಎಮ್. ಅಂಚನ್, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸುವರ್ದನ್ ನಾಯಕ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ವಿಜೇತ್ ಕುಮಾರ್, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಂಚಾಲಕ ಚಂದ್ರಶೇಖರ ಪ್ರಭು, ಜಿಲ್ಲಾ ಕಾರ್ಮಿಕ ಪ್ರಕೋಷ್ಠ ಸಂಚಾಲಕ ಶೈಲೇಂದ್ರ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಭಾರತಿ ಚಂದ್ರಶೇಖರ್, ನಗರಸಭಾ ಸದಸ್ಯ ಗಿರಿಧರ್ ಆಚಾರ್ಯ, ಉಡುಪಿ ನಗರ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸರೋಜಾ ಶೆಣೈ, ಪ್ರಧಾನ ಕಾರ್ಯದರ್ಶಿ ಸುಜಾಲಾ ಸತೀಶ್, ನಗರ ಯುವ ಮೋರ್ಚಾ ಉಪಾಧ್ಯಕ್ಷ ಪ್ರಜೀತ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಸುಶಾಂತ್, ಪ್ರಮುಖರಾದ ಪ್ರದೀಪ್ ಶೆಟ್ಟಿ, ಆನಂದ್ ಸುವರ್ಣ, ಶಿವರಾಮ್ ಕಾಡಿಮಾರ್ ಮುಂತಾದವರು ಉಪಸ್ಥಿತರಿದ್ದರು.

ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ.

ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control ) ಹಾಗೂ ನೆರೆ ಹಾವಳಿ ( Flood Relief Work ) ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ ಸಚಿವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )

1.ಗೋವಿಂದ ಕಾರಜೋಳ – ಬೆಳಗಾವಿ
2.ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ
3.ಆರ್.ಅಶೋಕ್ – ಬೆಂಗಳೂರು ನಗರ
4.ಬಿ.ಶ್ರೀರಾಮುಲು – ಚಿತ್ರದುರ್ಗ
5.ವಿ.ಸೋಮಣ್ಣ – ರಾಯಚೂರು
6.ಉಮೇಶ್ ಕತ್ತಿ – ಬಾಗಲಕೋಟೆ
7.ಎಸ್ ಅಂಗಾರ – ದಕ್ಷಿಣ ಕನ್ನಡ
8.ಜೆಸಿ ಮಾಧುಸ್ವಾಮಿ – ತುಮಕೂರು
9.ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
10.ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ
11.ಸಿಸಿ ಪಾಟೀಲ್ – ಗದಗ
12.ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ
13.ಕೋಟಾ ಶ್ರೀನಿವಾಸ ಪೂಜಾರಿ – ಕೊಡಗು
14.ಪ್ರಭು ಚೌಹಾಣ್ – ಬೀದರ್
15.ಮರುಗೇಶ್ ನಿರಾಣಿ – ಕಲಬುರ್ಗಿ
16.ಶಿವರಾಂ ಹೆಬ್ಬಾರ್ – ಉತ್ತರ ಕನ್ನಡ
17.ಎಸ್.ಟಿ.ಸೋಮಶೇಖರ್ – ಮೈಸೂರು ಮತ್ತು ಚಾಮರಾಜನಗರ
18.ಬಿ.ಸಿ ಪಾಟೀಲ್ – ಹಾವೇರಿ
19.ಬೈರತಿ ಬಸವರಾಜು – ದಾವಣಗೆರೆ
20.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ – ಹಾಸನ
22.ಶಶಿಕಲಾ ಜೊಲ್ಲೆ – ವಿಜಯಪುರ
23.MTB ನಾಗರಾಜು – ಬೆಂಗಳೂರು ಗ್ರಾಮಾಂತರ
24.ಕೆಸಿ ನಾರಾಯಣ್ ಗೌಡ – ಮಂಡ್ಯ
25.ಬಿಸಿ ನಾಗೇಶ್ – ಯಾದಗಿರಿ
26.ಸುನೀಲ್ ಕುಮಾರ್ – ಉಡುಪಿ
27.ಹಾಲಪ್ಪ ಆಚಾರ್ – ಕೊಪ್ಪಳ
ಶಂಕರ್ ಪಾಟೀಲ್ 28.ಮುನೇನಕೊಪ್ಪ – ಧಾರವಾಡ
29.ವಿ.ಮುನಿರತ್ನ – ಕೋಲಾರ

ಕರ್ನಾಟಕದ ನೂತನ ಸಚಿವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ

ಕರ್ನಾಟಕ ಸರಕಾರದ ನೂತನ ಸಚಿವರಾಗಿ ಆಯ್ಕೆಯಾದ ಉಡುಪಿ ಜಿಲ್ಲೆಯ ಹೆಮ್ಮೆಯ ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಇವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆಗಳು.

ಇವರಿಬ್ಬರ ಸಚಿವ ಸಚಿವ ಸ್ಥಾನದ ಅವಧಿಯಲ್ಲಿ ಉಡುಪಿ ಜಿಲ್ಲೆ ಅಭಿವ್ರಧ್ಧಿಯ ಉತ್ತುಂಗಕ್ಕೇರಲಿ. ಅದರೊಂದಿಗೆ ಪಕ್ಷ ಸಂಘಟನಾತ್ಮಕವಾಗಿ ಮತ್ತಷ್ಟು ಔನ್ನತ್ಯಕ್ಕೇರಲಿ. ಮಾದರಿ ಸಚಿವರಾಗಿ ಉಡುಪಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸುವೆವು ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವರು.

ಆಗಸ್ಟ್ 6, ಶುಕ್ರವಾರ ಮಧ್ಯಾಹ್ನ 3.30ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನೂತನ ಸಚಿವರಿಗೆ ಅಭಿನಂದನೆ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ ಮತ್ತು ವಿ.ಸುನೀಲ್ ಕುಮಾರ್ ರವರ ಅಭಿನಂದನಾ ಸಮಾರಂಭವು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 6 ಶುಕ್ರವಾರ ಮಧ್ಯಾಹ್ನ ಗಂಟೆ 3.30ಕ್ಕೆ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಜರಗಲಿದೆ.

ಈ ಅಭಿನಂದನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಗಳ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಅಭಿನಂದನಾ ಸಮಾರಂಭದ ಪೂರ್ವಭಾವಿಯಾಗಿ ನೂತನ ಸಚಿವರನ್ನು ಮಧ್ಯಾಹ್ನ 2.30ಕ್ಕೆ ಹಿರಿಯಡ್ಕ ಪೇಟೆಯಲ್ಲಿ ಕಾಪು ಮಂಡಲ ವತಿಯಿಂದ ಹಾಗೂ 2.45ಕ್ಕೆ ಪರ್ಕಳ ಪೇಟೆಯಲ್ಲಿ ಉಡುಪಿ ನಗರ ಮಂಡಲ ವತಿಯಿಂದ ಸ್ವಾಗತಿಸಲಾಗುವುದು.

ಸಚಿವರು ಸಂಜೆ 5.30ಕ್ಕೆ ಶ್ರೀ ಕೃಷ್ಣ ಮಠವನ್ನು ಸಂದರ್ಶಿಸಿ, 6.00 ಗಂಟೆಗೆ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏನಿದು ಇ-ರುಪಿ…? ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ

ಡಿಜಿಟಲ್ ಪಾವತಿಗೆ ಇನ್ನಷ್ಟು ಉತ್ತೇಜನ ಕೊಡುವ ಉದ್ದೇಶದಿಂದ ಇ-ರುಪಿ ಸೌಲಭ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಸಂಜೆ 4:30ಕ್ಕೆ ಚಾಲನೆ ಕೊಟ್ಟಿದ್ದಾರೆ.

ಏನಿದು ಇ-ರುಪಿ ?


ನಗದುರಹಿತ ಹಾಗೂ ಸಂಪರ್ಕರಹಿತವಾಗಿ ಡಿಜಿಟಲ್ ಪಾವತಿ ಮಾಡಲು ಇರುವ ವ್ಯವಸ್ಥೆ ಆಗಿರುವ ಇ-ರುಪಿ ಕ್ಯೂಆರ್‌ ಕೋಡ್ ಹಾಗೂ ಎಸ್‌ಎಂಎಸ್‌ ಆಧರಿತ ಇ-ವೌಚರ್‌‌ ಆಗಿದ್ದು, ಫಲಾನುಭವಿಗಳ ಮೊಬೈಲ್‌ಗಳಿಗೆ ಕಳುಹಿಸಲಾಗುವುದು.

ಒಮ್ಮೆ-ಪಾವತಿ ಮಾಡುವ ಈ ಸೌಲಭ್ಯದ ಮುಖಾಂತರ ಕಾರ್ಡ್ ಇಲ್ಲದೆಯೂ ಈ ವೌಚರ್‌ ಅನ್ನು ಯಾವುದೇ ಕಾರ್ಡ್, ಡಿಜಿಟಲ್ ಪೇಮೆಂಟ್ ಅಪ್ಲಿಕೇಶನ್ ಅಥವಾ ಬ್ಯಾಂಕಿಂಗ್ ಇಲ್ಲದೆಯೇ ಬಳಸಬಹುದಾಗಿದೆ.


ತನ್ನ ಯುಪಿಐ ಪ್ಲಾಟ್‌ಫಾರಂನಲ್ಲಿ ರಾಷ್ಟ್ರೀಯ ಪಾವತಿ ಪಾವತಿ ಕಾರ್ಪೋರೇಷನ್ (ಎನ್‌ಪಿಸಿಐ) ಅಭಿವೃದ್ಧಿಪಡಿಸಿರುವ ಇ-ರುಪಿ ಹೊರತರಲು ವಿತ್ತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಷ್ಟೀಯ ಆರೋಗ್ಯ ಪ್ರಾಧಿಕಾರಗಳು ಸಹಹೋಗದಿಂದ ಕೆಲಸ ಮಾಡಿವೆ.

ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ; ಕೋಟ ಶ್ರೀನಿವಾಸ ಪೂಜಾರಿ ಸಹಿತ ನೂತನ 29 ಸಚಿವರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ಹಲವು ಹೊಸ ಮುಖಗಳಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಲಾಗಿದೆ.

ರಾಜಭವನದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಿದರು. ಹಿರಿಯ ಶಾಸಕ ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.


ಒಟ್ಟು 29 ಶಾಸಕರು ಸಚಿವರಾಗಿ ಪ್ರಮಾಣವನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

ಭಾರತೀಯ ಜನತಾ ಪಾರ್ಟಿ ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಾರ್ಡ್ ಸಭೆ

ಭಾರತೀಯ ಜನತಾ ಪಾರ್ಟಿ *ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ* ಗುಜ್ಜಿ ವಾರ್ಡ್, ಜನರಲ್ ಶಾಖೆ, ಅಹಮ್ಮದಿ ಮಾಲ್ ಈ ವಾರ್ಡ್ ಗಳ ವಾರ್ಡ್ ಸಭೆಯು ಇಂದು ಮಲ್ಲಾರು ಮಾರಿಗುಡಿ ಬಳಿ ವಾರ್ಡ್ ಅಧ್ಯಕ್ಷರುಗಳಾದ ಶ್ರೀನಿವಾಸ್, ಬಾಬು, ಮತ್ತು ಹೈದರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ಕಾಪು ಕ್ಷೇತ್ರ ಅಧ್ಯಕ್ಷರು ಆದ ಶ್ರೀಕಾಂತ್ ನಾಯಕ್ ಇವರು ವಾರ್ಡ್ ಅಧ್ಯಕ್ಷರುಗಳ ಜವಾಬ್ದಾರಿ, ಪ್ರಧಾನ ಮಂತ್ರಿಗಳ ಮನ್ ಕೀ ಬಾತ್, ವಾರ್ಡ್ ಸಭೆ ಬಗ್ಗೆ, ಚುನಾವಣೆಯ ಬಗ್ಗೆ, ಪಕ್ಷ ಸಂಘಟನೆ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಕಾಪು ಮಹಾ ಶಕ್ತಿ ಕೇಂದ್ರ ಅಧ್ಯಕ್ಷರು ಆದ ಸಂದೀಪ್ ಶೆಟ್ಟಿ, ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ, ಕಾಪು ಪ್ರಾಧಿಕಾರ ಅಧ್ಯಕ್ಷರು ಆದ ಸುಧಾಮ ಶೆಟ್ಟಿ, ಮಾಜಿ ಪುರ ಸಭಾ ಸದಸ್ಯರು ಅದ ಮೋಹಿನಿ ಶೆಟ್ಟಿ, ಕಾಪು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಯಾದ ಶೈಲೇಶ್ ಅಮೀನ್ ಮತ್ತು ವಾರ್ಡ್ ನ ಪದಾಧಿಕಾರಿಗಳು ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಉಪಸ್ಥಿತರಿದ್ದರು.

ನೂತನ ಮುಖ್ಯಮಂತ್ರಿ ಬೊಮ್ಮಾಯಿ ಚೊಚ್ಚಲ ನಿರ್ಣಯದಿಂದ ಜನ ಸಾಮಾನ್ಯರು, ರೈತಾಪಿ ವರ್ಗದಲ್ಲಿ ಮಂದಹಾಸ: ಕುಯಿಲಾಡಿ ಸುರೇಶ್ ನಾಯಕ್

ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಯವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಹಾರ್ದಿಕ ಅಭಿನಂದನೆಗಳು. ನೂತನ ಮುಖ್ಯಮಂತ್ರಿಗಳು ಕೈಗೊಂಡಿರುವ ಚೊಚ್ಚಲ ಜನಪರ ನಿರ್ಣಯ ಜನ ಸಾಮಾನ್ಯರ ಜೊತೆಗೆ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೊತ್ತಮೊದಲ ನಿರ್ಣಯದಂತೆ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ರೂ.1000 ಕೋಟಿ ಹೆಚ್ಚುವರಿ ವೆಚ್ಚದ ನೂತನ ಶಿಷ್ಯ ವೇತನ ಯೋಜನೆ ಜಾರಿಯಾಗಲಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ ಮಾಸಾಶನ ರೂ.1000ದಿಂದ ರೂ.1200ಕ್ಕೆ ಹೆಚ್ಚಳವಾಗಿದ್ದು, 35.98 ಲಕ್ಷ ಫಲಾನುಭವಿಗಳಿಗೆ ಲಾಭವಾಗಲಿದೆ. ಮಾಸಿಕ ವಿಧವಾ ವೇತನ ರೂ.600ರಿಂದ ರೂ.800ಕ್ಕೆ ಹೆಚ್ಚಳವಾಗಲಿದ್ದು, 17.25 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ. ದಿವ್ಯಾಂಗರ ಮಾಸಿಕ ವೇತನ ರೂ.600 ಗಳಿಂದ ರೂ.800ಕ್ಕೆ ಹೆಚ್ಚಳವಾಗಳಿದ್ದು, 3.66 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ.

ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರಕಾರ ಬಡವರ, ದೀನದಲಿತರ, ರೈತರ ಮಕ್ಕಳ ಶ್ರೇಯೋಭಿವೃದ್ಧಿಯ ಚಿಂತನೆಯಿಂದ ಜಾರಿಗೆ ತರಲಿರುವ ವಿವಿಧ ಜನಕಲ್ಯಾಣ ಯೋಜನೆಗಳಿಗೆ ನಾಂದಿ ಹಾಡಿರುವುದು ಶ್ಲಾಘನೀಯ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ವಿಧವಾ ವೇತನ, ಅಂಗವಿಕಲ ವೇತನ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ರೈತರ ಮಕ್ಕಳಿಗೆ ಅವರ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡಲು ಮತ್ತು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶಕ್ಕೆ ಹೊಸ ಶಿಷ್ಯ ವೇತನ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಇದಕ್ಕಾಗಿ ಸರ್ಕಾರ 1 ಸಾವಿರ ಕೋಟಿ ಹಣ ಮೀಸಲಿಟ್ಟಿದೆ.

ಈಗಾಗಲೇ ಜಾರಿಯಲ್ಲಿರುವ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ತಿಂಗಳಿಗೆ 1200 ರೂಪಾಯಿಗಳಿಗೆ ಏರಿಕೆ ಮಾಡುತ್ತಿದ್ದು ಇದರಿಂದ 35 ಲಕ್ಷ ಫಲಾನುಭವಿಗಳಿಗೆ ಲಾಭ ಉಂಟಾಗಲಿದೆ. ಸರ್ಕಾರಕ್ಕೆ 863 ಕೋಟಿ ರೂಪಾಯಿ ಹೆಚ್ಚು ಖರ್ಚಾಗಲಿದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ವಿಧವಾ ವೇತನವನ್ನೂ ಬೊಮ್ಮಾಯಿ ನೇತೃತ್ವದ ಸರ್ಕಾರ 600 ರಿಂದ 800 ರೂಪಾಯಿಗಳಿಗೆ ಏರಿಕೆ ಮಾಡಲಾಗಿದ್ದು, 17.25 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ ಹಾಗೂ 414 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಶೇ.40-70 ಅಂಗವೈಕಲ್ಯವಿರುವವರಿಗೆ ಮಾಸಿಕವಾಗಿ ಈಗ ನೀಡಲಾಗುತ್ತಿರುವ 600 ರೂಪಾಯಿಗಳ ವೇತನವನ್ನು 800 ರೂಗೆ ಏರಿಕೆ ಮಾಡಲಾಗಿದ್ದು, 3.66 ಸಾವಿರ ಫಲಾನುಭವಿಗಳು ಪ್ರಯೋಜನವಾಗಲಿದ್ದು ಸರ್ಕಾರದ ಬೊಕ್ಕಸಕ್ಕೆ 90 ಕೋಟಿ ಹೆಚ್ಚು ವೆಚ್ಚವಾಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

“ರೈತರ ಮಕ್ಕಳ ಉನ್ನತಿಯ ಬಗ್ಗೆ ಚಿಂತನೆ, ಬಡವರಿಗೆ ಸಹಾಯ ಮಾಡಲು ನನ್ನ ಸರ್ಕಾರದ ಆದ್ಯತೆ, ಈ ನಿಟ್ಟಿನಲ್ಲಿ ನನ್ನ ಚಿಂತನೆಯ ಮೊದಲ ಹೆಜ್ಜೆಯನ್ನು ಸಚಿವ ಸಂಪುಟದ ನಿರ್ಣಯದಲ್ಲಿ ಇಡಲಾಗಿದ್ದು, ಜನಕಲ್ಯಾಣ, ಬಡವ, ದೀನದಲಿತರ ಪರವಾಗಿ ಸರ್ಕಾರ ನಿಲ್ಲಲಿದೆ” ಎಂದು ಸಿಎಂ ಭರವಸೆ ನೀಡಿದ್ದಾರೆ.

Design a site like this with WordPress.com
Get started