ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ಕ್ಕೆ (NH-66), ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಪ್ರದೇಶದಲ್ಲಿ ಅಂಡರ್ ಪಾಸಿನ ಅವಶ್ಯಕತೆಯಿದೆ ಎಂದು ಕ್ಷೇತ್ರದ ಜನತೆ ಹಲವಾರು ವರುಷಗಳಿಂದ ಬೇಡಿಕೆಯಿಟ್ಟಿದ್ದರು. ಹಲವಾರು ಬಾರಿ ಕೇಂದ್ರ ಭೂ ಸಾರಿಗೆ ಸಚಿವರನ್ನು ಭೇಟಿಯಾಗಿ ಕಟಪಾಡಿ ನಗರ ಪ್ರದೇಶವಾಗಿದ್ದು, ಹೆಚ್ಚಿನ ಜನ ಸಂಚಾರವಿರುವ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಲು ‘ಅಂಡರ್ ಪಾಸಿನ/ಓವರ್ ಪಾಸ್’ ಅನಿವಾರ್ಯತೆಯಿದೆ ಎಂದು ಮನದಟ್ಟು ಮಾಡಲಾಗಿತ್ತು. ಕ್ಷೇತ್ರದ ಜನರ ಅಪೇಕ್ಷೆಯಂತೆ, ಕೇಂದ್ರ ಸರಕಾರ ಕಟಪಾಡಿಯಲ್ಲಿ ಅಂಡರ್ ಪಾಸಿನ ಬದಲು,Continue reading “ರಾಷ್ಟ್ರೀಯ ಹೆದ್ದಾರಿ 66ಗೆ (NH-66) ಕಟಪಾಡಿಯಲ್ಲಿ 22.72 ಕೋಟಿ ರೂಗಳ ವೆಚ್ಚದಲ್ಲಿ ಓವರ್ ಪಾಸ್ (Over Pass) ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಿದ ಕೇಂದ್ರ ಸರಕಾರ. – ಶೋಭಾ ಕರಂದ್ಲಾಜೆ, ಸಂಸದೆ”
Category Archives: Uncategorized
ಕಾಂಗ್ರೆಸ್ ಮುಖಂಡರು ಕಾಶ್ಮೀರಿ ಪಂಡಿತರ ಬಲಿದಾನವನ್ನು ಮರೆತಿದ್ದಾರೆ: ಕುಯಿಲಾಡಿ ಸುರೇಶ್ ನಾಯಕ್ ಖಂಡನೆ
ಕಾಂಗ್ರೆಸ್ ಹಿರಿಯ ನೇತಾರ ದಿಗ್ವಿಜಯ್ ಸಿಂಗ್ ಅವರು, ಕ್ಲಬ್ ಹೌಸ್ ಆಪ್ ಮೂಲಕ ನೀಡಿದ ಸಂದರ್ಶನದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ದೇಶವಿರೋಧಿ ಮನಸ್ಥಿತಿಯ ನಿದರ್ಶನವಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಅದರ ಮುಖಂಡರು ಚೀನಾ ಹಾಗೂ ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿರುವುದು ಇದರಿಂದ ಸ್ಪಷ್ಟಗೊಳ್ಳುತ್ತದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಪ್ರತಿಷ್ಠೆ ಮಣ್ಣು ಪಾಲುContinue reading “ಕಾಂಗ್ರೆಸ್ ಮುಖಂಡರು ಕಾಶ್ಮೀರಿ ಪಂಡಿತರ ಬಲಿದಾನವನ್ನು ಮರೆತಿದ್ದಾರೆ: ಕುಯಿಲಾಡಿ ಸುರೇಶ್ ನಾಯಕ್ ಖಂಡನೆ“
ಸಂಕಷ್ಟಕ್ಕೆ ಸ್ಪಂದಿಸುವ ಉದಾರತೆ ಇಂದಿನ ಅಗತ್ಯತೆ: ಡಾ! ನಿ.ಬೀ. ವಿಜಯ ಬಲ್ಲಾಳ್
ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ವತಿಯಿಂದ ಉಡುಪಿ ಜಿಲ್ಲಾ ವ್ಯಾಪ್ತಿಯ ಕರಾಟೆ ಶಿಕ್ಷಕರಿಗೆ ಕಿಟ್ ವಿತರಣೆ: ಇಡೀ ವಿಶ್ವವೇ ಕೊರೋನಾ ಮಹಾಮಾರಿಯಿಂದ ತತ್ತರಿಸಿರುವ ಈ ಕಾಲ ಘಟ್ಟದಲ್ಲಿ ಅನೇಕ ಸಂಘ- ಸಂಸ್ಥೆಗಳು, ದಾನಿಗಳು ಜನತೆಯ ಸಂಕಷ್ಟಕ್ಕೆ ಸ್ಪಂದಿಸುತ್ತಿರುವುದು ಪ್ರಶಂಸನೀಯ. ಕೋವಿಡ್ ನಿಯಮ ಪಾಲನೆಯ ಜೊತೆಗೆ ಸಂಕಷ್ಟಕ್ಕೆ ಸ್ಪಂದಿಸುವ ಉದಾರತೆ ಇಂದಿನ ಅಗತ್ಯತೆ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಬುಡೋಕಾನ್ ಕರಾಟೆ ಅಂಡ್Continue reading “ಸಂಕಷ್ಟಕ್ಕೆ ಸ್ಪಂದಿಸುವ ಉದಾರತೆ ಇಂದಿನ ಅಗತ್ಯತೆ: ಡಾ! ನಿ.ಬೀ. ವಿಜಯ ಬಲ್ಲಾಳ್”
ಹಡಿಲು ಭೂಮಿ ಕೃಷಿ ಅಭಿಯಾನ ಒಂದು ಆಂದೋಲನವಾಗಿ ಮಾರ್ಪಾಡಾಗಿದೆ : ಶಾಸಕ ಕೆ.ರಘುಪತಿ ಭಟ್
ಅಂಬಲಪಾಡಿ ಗ್ರಾಮದಲ್ಲಿ 20 ಎಕ್ರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಬಿಟ್ಟಿರುವ ಕೃಷಿ ಭೂಮಿಗಳಲ್ಲಿ ಕೃಷಿ ಮಾಡುವ ಸಂಕಲ್ಪದೊಂದಿಗೆ ಆರಂಭಿಸಿರುವ “ಹಡಿಲು ಭೂಮಿ ಕೃಷಿ ಅಭಿಯಾನ” ಇಂದು ಬೃಹತ್ ಆಂದೋಲನವಾಗಿ ಮಾರ್ಪಾಡಾಗಿದೆ. ಕ್ಷೇತ್ರದ ವಾರ್ಡ್ ವಾರ್ಡ್ ಗಳಲ್ಲಿ, ಗ್ರಾಮ ಗ್ರಾಮಗಳಲ್ಲಿ ಜನಪ್ರತಿನಿಧಿಗಳು, ಯುವಕರು, ಕೃಷಿಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಅತ್ಯಂತ ಕ್ರಿಯಾಶೀಲತೆಯಿಂದ ಸಂಪೂರ್ಣವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದು ಈ ಆಂದೋಲನದ ಫಲಶ್ರುತಿ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ರಘುಪತಿ ಭಟ್Continue reading “ಹಡಿಲು ಭೂಮಿ ಕೃಷಿ ಅಭಿಯಾನ ಒಂದು ಆಂದೋಲನವಾಗಿ ಮಾರ್ಪಾಡಾಗಿದೆ : ಶಾಸಕ ಕೆ.ರಘುಪತಿ ಭಟ್”
11 ಜಿಲ್ಲೆಗಳಲ್ಲಿ ‘ಲಾಕ್ ಡೌನ್’ ಮುಂದುವರಿಸಲು ಸಿಎಂ ಯಡಿಯೂರಪ್ಪ ಘೋಷಣೆ
ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಜೂನ್ 14 ರಿಂದ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಮಾತ್ರ ಲಾಕ್ಡೌನ್ ಆದೇಶ ಮುಂದುವರಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ಉಸ್ತುವಾರಿ ಸಚಿವರ ಜೊತೆಗಿನ ಸಭೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಳಗಾವಿ, ದಾವಣಗೆರೆ ಜಿಲ್ಲೆಗಳಲ್ಲಿ ಲಾಕ್ಡೌನ್ ಆದೇಶದಲ್ಲಿ ಯಾವುದೇ ಸಡಿಲಿಕೆ ಇಲ್ಲ ಎಂದು ಹೇಳಿದ್ದಾರೆ.Continue reading “11 ಜಿಲ್ಲೆಗಳಲ್ಲಿ ‘ಲಾಕ್ ಡೌನ್’ ಮುಂದುವರಿಸಲು ಸಿಎಂ ಯಡಿಯೂರಪ್ಪ ಘೋಷಣೆ”
ಕೊರೋನಾ ವಾರಿಯರ್ಸ್ ಗೆ ಸನ್ಮಾನ
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜನತೆಯ ಆರೋಗ್ಯ ಸಂರಕ್ಷಣೆಯ ಸತ್ಕಾರ್ಯದಲ್ಲಿ ಸೇವಾ ನಿರತರಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರಾದ ಉಡುಪಿಯ ಪ್ರವೀಣ, ಮಲ್ಪೆಯ ವಿಶಾಲ ನಾಯ್ಕ್ ಹಾಗೂ ಆಶಾ ಕಾರ್ಯಕರ್ತೆಯರಾದ ಅಂಬಲಪಾಡಿ ನಗರದ ಸರಸ್ವತಿ ಕೆ. ಶ್ರೀಯಾನ್, ಅಂಬಲಪಾಡಿ ಗ್ರಾಮಾಂತರದ ಗಾಯತ್ರಿ, ಕಪ್ಪೆಟ್ಟು ವಾರ್ಡಿನ ನಿಶಾ ಕಿದಿಯೂರು ಮತ್ತು ಉಚಿತ ಆಟೋ ಸೇವೆ ನೀಡುತ್ತಿರುವ ಆಟೋ ಚಾಲಕ ಶ್ರೀನಿವಾಸ್ ಕಪ್ಪೆಟ್ಟು ಇವರನ್ನು ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅಂಬಲಪಾಡಿContinue reading “ಕೊರೋನಾ ವಾರಿಯರ್ಸ್ ಗೆ ಸನ್ಮಾನ”
ದ.ಕ. ಸೇರಿದಂತೆ 8 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರಿಕೆ ಬಗ್ಗೆ ಇಂದು ಸಂಜೆ ತೀರ್ಮಾನ: ಸಿಎಂ
ಬೆಂಗಳೂರು, ಜೂ.10: ಕೋವಿಡ್ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಮುಂದುವರಿಸುವ ಕುರಿತಂತೆ ಇಂದು(ಜೂ.10) ಸಂಜೆ ಸಚಿವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಇಂದು ಕೋವಿಡ್ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಸೋಂಕು ನಿಯಂತ್ರಣ ಕುರಿತಂತೆ ಚರ್ಚಿಸಿದರು. ಈ ವೇಳೆContinue reading “ದ.ಕ. ಸೇರಿದಂತೆ 8 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರಿಕೆ ಬಗ್ಗೆ ಇಂದು ಸಂಜೆ ತೀರ್ಮಾನ: ಸಿಎಂ”
ಎಲ್ಲರಿಗೂ ಉಚಿತ ಲಸಿಕೆ, ದೀಪಾವಳಿ ವರೆಗೆ 80 ಕೋಟಿ ಭಾರತೀಯರಿಗೆ ಉಚಿತ ರೇಷನ್: ಪ್ರಧಾನಿ ಮೋದಿ
ನವದೆಹಲಿ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮಲ್ಲಿ ಅನೇಕರು ಪರಿವಾರದವರನ್ನು ಕಳೆದುಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾದಂತಹ ಮಹಾಮಾರಿಯನ್ನು ಎಂದೂ ನೋಡಿರಲಿಲ್ಲ. ಎರಡನೆಯ ಅಲೆ ವಿರುದ್ಧ ಹೋರಾಡುತ್ತಿದ್ದೇವೆ. ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ವೈದ್ಯಕೀಯ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗಿದೆ. ಸಮರೋಪಾದಿಯಲ್ಲಿ ಆರೋಗ್ಯ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ದೇಶದ ಜನ ಸಂಕಷ್ಟ ಎದುರಿಸಿದ್ದಾರೆ. ಜೊತೆಗೆ ಸೋಂಕು ಹೊಡೆದೋಡಿಸಲು ಹೋರಾಟ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಇಡೀ ಜಗತ್ತನ್ನೇ ಕೊರೋನಾ ಸೋಂಕು ಕಂಗೆಡಿಸಿದೆ. ಭಾರತ ತನ್ನContinue reading “ಎಲ್ಲರಿಗೂ ಉಚಿತ ಲಸಿಕೆ, ದೀಪಾವಳಿ ವರೆಗೆ 80 ಕೋಟಿ ಭಾರತೀಯರಿಗೆ ಉಚಿತ ರೇಷನ್: ಪ್ರಧಾನಿ ಮೋದಿ“
ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್
ಭಾರತದ ಅತ್ಯಂತ ಕುರೂಪಿ ಭಾಷೆ’ ಎಂದು ಗೂಗಲ್‌ನಲ್ಲಿ ಟೈಪಿಸಿ ಸರ್ಚ್ ಮಾಡಿದರೆ ಮೊದಲು ಎದುರಾಗುವುದು ‘ಕನ್ನಡ’. ಕನ್ನಡಿಗರ ಸ್ವಾಭಿಮಾನ, ಭಾಷೆ, ನೆಲ, ಜಲದ ಕುರಿತಂತೆ ಪದೇ ಪದೇ ಕೆಣಕುವ ಪ್ರಯತ್ನಗಳು ನಡೆಯುತ್ತಲೇ ಇದೆ. ಅದಕ್ಕೆ ಇನ್ನೊಂದು ಸೇರ್ಪಡೆ ಇದು. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಕನ್ನಡ ಪ್ರೇಮಿಗಳು ಚರ್ಚೆ ನಡೆಸುತ್ತಿದ್ದರು. Ugliest Language In India (ಭಾರತದ ಅತ್ಯಂತ ಕುರೂಪಿ ಭಾಷೆ) ಎಂದು ಟೈಪ್ ಮಾಡಿದರೆ ಗೂಗಲ್ ಮೊದಲು ಪ್ರದರ್ಶಿಸುವುದು debtconsolidationsquad.com ಎಂಬ ಜಾಲತಾಣವೊಂದರಲ್ಲಿ ಪ್ರಕಟವಾದ ಅಂಶವನ್ನು. ದಕ್ಷಿಣ ಭಾರತದಲ್ಲಿ ಸುಮಾರುContinue reading “ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್”
ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ: ಗುರುಪ್ರಸಾದ್ ಶೆಟ್ಟಿ ಕಟಪಾಡಿ
ಪ್ರಾರಂಭದ ದಿನಗಳಿಂದಲೂ ಕೋವಿಡ್ ಲಸಿಕೆಯ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸಿಗರು ತಾವು ಮಾತ್ರ ಗುಟ್ಟಾಗಿ ಲಸಿಕೆ ಪಡೆದುಕೊಂಡು ಜನಸಾಮಾನ್ಯರ ದಾರಿತಪ್ಪಿಸಿ ವಂಚಿಸುವ ಕಾಯಕದಲ್ಲಿ ನಿರತರಾಗಿರುವ ಜೊತೆಗೆ ಇದೀಗ ಲಸಿಕೆ ಕೊಡಿಸಲು ಒತ್ತಾಯಿಸುವ ನಾಟಕವಾಡುತ್ತಿರುವುದು ಹಾಸ್ಯಾಸ್ಪದ. ಕೇವಲ ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಹೇಳಿದ್ದಾರೆ. ಅವರು ಲಸಿಕೆ ಹೆಸರಲ್ಲಿ ಬಿಜೆಪಿ ಸ್ವಜನ ಹಿತಾಸಕ್ತಿ ಎಂಬ ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್ ನಕ್ರೆಯವರ ಆರೋಪವನ್ನು ಖಂಡಿಸಿ, ಕಾಂಗ್ರೆಸಿಗರಿಗೆContinue reading “ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ: ಗುರುಪ್ರಸಾದ್ ಶೆಟ್ಟಿ ಕಟಪಾಡಿ”