ಜೂ.17: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ

ಯಾವುದೇ ಸಂಪನ್ಮೂಲದ ವ್ಯವಸ್ಥೆ ಇಲ್ಲದೆ ಬೇಕಾಬಿಟ್ಟಿಯಾಗಿ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ವಾಮ ಮಾರ್ಗದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಅನುಷ್ಠಾನಗೊಳಿಸದೆ ರಾಜ್ಯದ ಅಭಿವೃದ್ಧಿಯನ್ನು ಬಲಿಕೊಟ್ಟು ಅಗತ್ಯ ವಸ್ತುಗಳ ದರದ ಜೊತೆಗೆ ಪೆಟ್ರೋಲ್ ಡೀಸೆಲ್ ದರವನ್ನು ದಿಡೀರ್ ಏರಿಕೆ ಮಾಡಿರುವುದು ಖಂಡನೀಯ. ರಾಜ್ಯ ಸರಕಾರದ ಈ ಜನ ವಿರೋಧಿ ನೀತಿಯನ್ನು ಖಂಡಿಸಿ ಜೂ.17 ರಂದು ಬೆಳಿಗ್ಗೆ 11.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಕಿಶೋರ್ ಕುಮಾರ್Continue reading “ಜೂ.17: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ”

ಪೆಟ್ರೋಲ್ ಡೀಸೆಲ್ ದರ ಏರಿಕೆ, ಗಾಯದ ಮೇಲೆ ಬರೆ ಎಳೆದ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ: ಕೆ.ಉದಯ ಕುಮಾರ್ ಶೆಟ್ಟಿ

ಅಧಿಕಾರದ ಹಪಾಹಪಿಯಿಂದ ಪಂಚ ಗ್ಯಾರಂಟಿಗಳ ಆಮಿಷವೊಡ್ಡಿ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಅತ್ತ ಗ್ಯಾರಂಟಿಗಳನ್ನೂ ಸರಿಯಾಗಿ ನಿಭಾಯಿಸದೆ, ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿ ಬೊಕ್ಕಸವನ್ನು ಬರಿದಾಗಿಸಿರುವ ಭ್ರಷ್ಟ ಕಾಂಗ್ರೆಸ್ ಸರಕಾರ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ತನ್ನ ನರಿ ಬುದ್ಧಿಯನ್ನು ಪ್ರದರ್ಶಿಸಿ ರಾಜ್ಯದ ಜನತೆಗೆ ಮಂಕು ಬೂದಿContinue reading “ಪೆಟ್ರೋಲ್ ಡೀಸೆಲ್ ದರ ಏರಿಕೆ, ಗಾಯದ ಮೇಲೆ ಬರೆ ಎಳೆದ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ: ಕೆ.ಉದಯ ಕುಮಾರ್ ಶೆಟ್ಟಿ”

ಜೂ.17: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಕಛೇರಿಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯ ಪೂರ್ವಭಾವಿ ಸಭೆ

ಉಡುಪಿ: ಪ್ರತೀ ವರ್ಷ ಕರ್ಕಾಟಕ ಅಮಾವಾಸ್ಯೆ ದಿನದಂದು ನಡೆಯುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯು ಈ ಬಾರಿ ಆಗಸ್ಟ್ 4 ರಂದು ಕುಂದಾಪುರದಲ್ಲಿ ನಡೆಯಲಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಇದರ ಜೊತೆಗೆ ತೆರೆಯ ಮರೆಗೆ ಸರಿದಿರುವ ಕುಂದಾಪುರ ಭಾಗದ ಗ್ರಾಮ್ಯ ಕ್ರೀಡೆಗಳನ್ನು ಮುಖ್ಯ ವಾಹಿನಿಗೆ ತರುವ ಸದುದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಕೂಡಾ ಜರುಗಿಸುವ ಯೋಜನೆಯನ್ನು ಹೊಂದಲಾಗಿದೆ. ಈ ಎರಡೂ ಕಾರ್ಯಕ್ರಮಗಳ ರೂಪುರೇಷೆಗಳನ್ನು ನಿರ್ಧರಿಸಲು ಹಾಗೂ ಅದ್ದೂರಿಯ ತಯಾರಿಯನ್ನು ನಡೆಸುವContinue reading “ಜೂ.17: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಕಛೇರಿಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯ ಪೂರ್ವಭಾವಿ ಸಭೆ”

ಸತತ 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ:  ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್Continue reading “ಸತತ 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ:  ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ”

ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರಿಂದ ಯಾವುದೇ ಚುನಾವಣೆಯಲ್ಲಿ ನಿರಾಯಾಸ ಗೆಲುವು : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಅವರು ಅತ್ಯದ್ಭುತ ಜಯವನ್ನು ದಾಖಲಿಸಿದ್ದಾರೆ. ಈ ಐತಿಹಾಸಿಕ ಗೆಲುವಿಗೆ ಶ್ರಮಿಸಿದ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮತ್ತು ಮತದಾರರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸದೃಢ ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಶ್ರಮದಿಂದ ಯಾವುದೇ ಚುನಾವಣೆಯಲ್ಲಿ ನಿರಾಯಾಸ ಗೆಲುವು ಸಾಧ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್Continue reading “ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರಿಂದ ಯಾವುದೇ ಚುನಾವಣೆಯಲ್ಲಿ ನಿರಾಯಾಸ ಗೆಲುವು : ಕಿಶೋರ್ ಕುಮಾರ್ ಕುಂದಾಪುರ”

ವ್ಯಕ್ತಿಗಿಂತ ಪಕ್ಷ ದೊಡ್ಡದು: ಕಿಶೋರ್ ಕುಮಾರ್ ಕುಂದಾಪುರವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ಉಡುಪಿ: ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬ ಸಂದೇಶವನ್ನು ಈ ಬಾರಿಯ ಚುನಾವಣೆ ಸಾಬೀತುಪಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಡಾ! ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಅವರ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾನು ಮುಂದಿನ 3 ವರ್ಷದ ಅವಧಿಗೆ ಬಿಜೆಪಿ ಜಿಲ್ಲಾಧ್ಯಕ್ಷನಾಗಿContinue reading “ವ್ಯಕ್ತಿಗಿಂತ ಪಕ್ಷ ದೊಡ್ಡದು: ಕಿಶೋರ್ ಕುಮಾರ್ ಕುಂದಾಪುರವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ”

ಡಾ! ಧನಂಜಯ ಸರ್ಜಿ ಮತ್ತು ಭೋಜೇಗೌಡ ಅವರ ಭರ್ಜರಿ ಗೆಲುವು – ಕರಾವಳಿ-ಮಲೆನಾಡು ಹಿಂದುತ್ವ ಮತ್ತು ಬಿಜೆಪಿಯ ಭದ್ರ ಕೋಟೆ ಎಂದು ಸಾಬೀತು : ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಬೋಜೇಗೌಡ ಅವರ ಭರ್ಜರಿ ಗೆಲುವಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ಉಡುಪಿ, ದ.ಕ. ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗ ಇನ್ನೊಮ್ಮೆ ಹಿಂದುತ್ವ ಮತ್ತು ಬಿಜೆಪಿಯ ಭದ್ರ ಕೋಟೆ ಎನ್ನುವುದು ಈ ಗೆಲುವಿನಿಂದ ಸಾಬೀತಾಗಿದೆ ಎಂದು ಉದಯ ಕುಮಾರ್ ಶೆಟ್ಟಿContinue reading “ಡಾ! ಧನಂಜಯ ಸರ್ಜಿ ಮತ್ತು ಭೋಜೇಗೌಡ ಅವರ ಭರ್ಜರಿ ಗೆಲುವು – ಕರಾವಳಿ-ಮಲೆನಾಡು ಹಿಂದುತ್ವ ಮತ್ತು ಬಿಜೆಪಿಯ ಭದ್ರ ಕೋಟೆ ಎಂದು ಸಾಬೀತು : ಕೆ.ಉದಯ ಕುಮಾರ್ ಶೆಟ್ಟಿ”

ಲೋಕಸಭಾ ಚುನಾವಣಾ ಗೆಲುವು ಪಕ್ಷದ ಕಾರ್ಯಕರ್ತರಿಗೆ ಅರ್ಪಣೆ: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ

ಭಾರತೀಯ ಜನತಾ ಪಾರ್ಟಿಯ ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸಿ ನನ್ನ ಪಾರ್ಟಿ ಅಗಾಧವಾದ ಬಹುಮತದಿಂದ ಗೆಲ್ಲುವ ಅವಕಾಶವನ್ನು ಮಾಡಿಕೊಟ್ಟಿದೆ. ಈ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ಬಳಿ ಮಾಧ್ಯಮ ವರದಿಗಾರರನ್ನುದ್ದೇಶಿಸಿ ಮಾತನಾಡಿದರು. ನಾನು ಚುನಾವಣೆಗೆ ನಿಂತಾಗ ಉಡುಪಿ, ಚಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿ ಎರಡೂ ಜಿಲ್ಲೆಗಳಲ್ಲಿ ಸುಮಾರು 1,900 ಮತಗಟ್ಟೆಯಲ್ಲಿರುವ ಬಿಜೆಪಿ ಹಾಗೂContinue reading “ಲೋಕಸಭಾ ಚುನಾವಣಾ ಗೆಲುವು ಪಕ್ಷದ ಕಾರ್ಯಕರ್ತರಿಗೆ ಅರ್ಪಣೆ: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ”

ಉಡುಪಿ ಜಿಲ್ಲಾಧಿಕಾರಿಗಳಿಂದ ಲೋಕಸಭಾ ಚುನಾವಣೆಯ ಗೆಲುವಿನ ಪತ್ರ ಹಸ್ತಾಂತರ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿಯವರು ಭರ್ಜರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು ಜೂನ್ 4ರಂದು ಉಡುಪಿ ಜಿಲ್ಲಾಧಿಕಾರಿಗಳು ಮಣಿಪಾಲ ರಾಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೆಲುವಿನ ಚುನಾವಣಾ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು, ಬಿಜೆಪಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ ಹಾಗೂ ಅಧಿಕಾರಿ ವರ್ಗ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು. ಬಳಿಕ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್Continue reading “ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ”

Design a site like this with WordPress.com
Get started