ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ : ಕೋಟ ತಿರುಗೇಟು

ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಉಲ್ಲೇಖ ಮಾಡುತ್ತಾ ಕುಚ್ಚಲಕ್ಕಿ ಕೊಡುವುದಾಗಿ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದಿರುವುದು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ವಾಸ್ತವಿಕವಾಗಿ ಕುಚ್ಚಲಕ್ಕಿ ಕೊಡುವ ಪ್ರಕ್ರಿಯೆ ಬರೇ ಒಂದೆರಡು ತಿಂಗಳಲ್ಲಿ ಮುಗಿಯುವContinue reading “ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ : ಕೋಟ ತಿರುಗೇಟು”

ಚುನಾವಣಾ ಗೆಲುವಿನ ಅಂತರ ಹೆಚ್ಚಿಸಿ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಲು ನಳಿನ್ ಕರೆ

ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಚುನಾವಣಾ ಗೆಲುವು ನಿಶ್ಚಿತವಾಗಿದ್ದು ಹೆಚ್ಚಿನ ಮತಗಳ ಅಂತರವನ್ನು ದಾಖಲಿಸುವ ಮೂಲಕ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದರು. ಲೋಕಸಭಾ ಚುನಾವಣೆಯ ಬಳಿಕ ನೈರುತ್ಯContinue reading “ಚುನಾವಣಾ ಗೆಲುವಿನ ಅಂತರ ಹೆಚ್ಚಿಸಿ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಲು ನಳಿನ್ ಕರೆ”

ಬಿಜೆಪಿ ಗೆಲುವಿಗೆ ಮಹಿಳಾ ಕಾರ್ಯಕರ್ತರಿಂದ ‘ಮರಳಿ ಬಂದಿದೆ ಯುಗಾದಿ ಮತ್ತೆ ಬರುವರು ಮೋದಿ’ ಹಾಗೂ ‘ಶಕ್ತಿ ಚೌಪಾಲ್’ ಅಭಿಯಾನ

‘ಸಬ್ ಕೇ ಸಾಥ್ ಸಬ್ ಕಾ ವಿಕಾಸ್’ ತತ್ವದಡಿ ಎಲ್ಲ ವರ್ಗಗಳ ಕಲ್ಯಾಣಕ್ಕೆ ಕಂಕಣಬದ್ಧರಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸಮಸ್ತ ಮಹಿಳೆಯರ ಭರವಸೆಯ ನಾಯಕರಾಗಿದ್ದಾರೆ. ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಯೋಚನೆ-ಯೋಜನೆಗಳಿಂದ ‘ದೇಶಕ್ಕೆ ಮೋದಿಯೇ ಗ್ಯಾರಂಟಿ’ ಎನ್ನುವುದನ್ನು ಈಗಾಗಲೇ ಮಹಿಳಾ ಮತದಾರರು ಅರ್ಥೈಸಿಕೊಂಡಿದ್ದು ಮುoದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ ಕ್ಷೇತ್ರದ ನಾರೀ ಶಕ್ತಿ ಮಹತ್ತರ ಕೊಡುಗೆ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾContinue reading “ಬಿಜೆಪಿ ಗೆಲುವಿಗೆ ಮಹಿಳಾ ಕಾರ್ಯಕರ್ತರಿಂದ ‘ಮರಳಿ ಬಂದಿದೆ ಯುಗಾದಿ ಮತ್ತೆ ಬರುವರು ಮೋದಿ’ ಹಾಗೂ ‘ಶಕ್ತಿ ಚೌಪಾಲ್’ ಅಭಿಯಾನ”

ಖ್ಯಾತ ತಬಲಾ ವಾದಕ, ತರಬೇತುದಾರ ಕೆ.ಮಂಜಪ್ಪ ಸುವರ್ಣರವರಿಗೆ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿ ಪ್ರಧಾನ

ನಿಡಂಬೂರು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ, ಅಂಬಲಪಾಡಿ (ಮೂಡು ಪಾಲು) ಇದರ ವತಿಯಿಂದ ನಡೆದ ಶ್ರೀ ಬಬ್ಬು ಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವದ ಸಂದರ್ಭದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಖ್ಯಾತ ತಬಲಾ ವಾದಕ ಹಾಗೂ ಉಚಿತ ತಬಲಾ ತರಬೇತುದಾರ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ದಿ! ನಿ.ಬೀ. ಅಣ್ಣಾಜಿ ಬಲ್ಲಾಳ್ ಸ್ಮರಣಾರ್ಥ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿContinue reading “ಖ್ಯಾತ ತಬಲಾ ವಾದಕ, ತರಬೇತುದಾರ ಕೆ.ಮಂಜಪ್ಪ ಸುವರ್ಣರವರಿಗೆ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿ ಪ್ರಧಾನ”

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಏ.3ರಂದು ಮಣಿಪಾಲದ ರಜತಾದ್ರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ವಿದ್ಯಾ ಕುಮಾರಿ ಅವರಿಗೆ ಚುನಾವಣಾ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬೋಜೇ ಗೌಡ ಇವರು ಉಪಸ್ಥಿತರಿದ್ದರು.

*ಏ.3 : ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ, ಹಿಂದೂ ಫೈರ್ ಬ್ರಾಂಡ್ ಯತ್ನಾಳ್, ಸಿ.ಟಿ. ರವಿ, ಸುನಿಲ್ ಕುಮಾರ್ ಭಾಗಿ

ಉಡುಪಿ: ಏ.3ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಮಾಜಿ ಕೇoದ್ರ ಸಚಿವ, ಹಿಂದೂ ಫೈರ್ ಬ್ರಾoಡ್ ಬಸವನಗೌಡ ಪಾಟೀಲ್ ಯತ್ನಾಳ್ ದಿಕ್ಸೂಚಿ ಭಾಷಣ ಮಾಡಲಿರುವರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯContinue reading “*ಏ.3 : ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ, ಹಿಂದೂ ಫೈರ್ ಬ್ರಾಂಡ್ ಯತ್ನಾಳ್, ಸಿ.ಟಿ. ರವಿ, ಸುನಿಲ್ ಕುಮಾರ್ ಭಾಗಿ”

ಇಂದು ಮಾ.30 ಮತ್ತು 31 ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ನೇಮೋತ್ಸವ, ಸಾಧಕರಿಗೆ ಸನ್ಮಾನ

ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ನೇಮೋತ್ಸವ ಸಮಿತಿಯ ನೇತೃತ್ವದಲ್ಲಿ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವವು ಇಂದು ಮಾರ್ಚ್ 30 ಶನಿವಾರ ಮತ್ತು ಮಾರ್ಚ್ 31 ರವಿವಾರ ಅಂಬಲಪಾಡಿ ಬಂಕೇರ್ಕಟ್ಟ ಅಂಗನವಾಡಿ ಬಳಿ ನಡೆಯಲಿದೆ. ಇಂದು ಮಾ.30 ಶನಿವಾರ ಬೆಳಿಗ್ಗೆ ಗಂಟೆ 7.30ಕ್ಕೆ ಮಹಾ ಚಪ್ಪರದ ಗಜಕಂಬ ಪ್ರತಿಷ್ಠೆ, ಮಧ್ಯಾಹ್ನ ಗಂಟೆ 12.00ಕ್ಕೆ ಮಹಾ ಚಪ್ಪರದ ಆರೋಹಣ,12.30ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 4.00ಕ್ಕೆ ದೈವಸ್ಥಾನದಲ್ಲಿ ಮಹಾಪೂಜೆContinue reading “ಇಂದು ಮಾ.30 ಮತ್ತು 31 ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ನೇಮೋತ್ಸವ, ಸಾಧಕರಿಗೆ ಸನ್ಮಾನ”

ರಕ್ಷಿತ್ ಕೋಟ್ಯಾನ್ ‘ಮಿಸ್ಟರ್ ಕರಾವಳಿ 2024’, ಧೀರಜ್ ಕುಮಾರ್ ‘ರನ್ನರ್ ಅಪ್’, ಝಾಕಿರ್ ಹುಲ್ಲೂರ್ ಗೆ ‘ಬೆಸ್ಟ್ ಪೋಸರ್’ ಪ್ರಶಸ್ತಿ

ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯ ವಿಜೇತರು ಉಡುಪಿ: ಗೋವಾದಲ್ಲಿ ಏ.6 ಮತ್ತು 7ರಂದು ನಡೆಯಲಿರುವ ‘ಫೆಡರೇಶನ್ ಕಪ್’ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಪೂರ್ವಭಾವಿಯಾಗಿ ‘ಮಿಸ್ಟರ್ ಕರಾವಳಿ ಕ್ಲಾಸಿಕ್ 2024’ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯು ಚಾಂಪಿಯನ್ಶಿಪ್ ನ ಸಂಘಟನಾ ಸಮಿತಿಯ ನೇತೃತ್ವದಲ್ಲಿ ಉಡುಪಿ ಡಿಸ್ಟಿಕ್ ಎಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಇದರ ಸಹಯೋಗದೊಂದಿಗೆ ಕರ್ನಾಟಕ ಎಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಇದರ ಮಾರ್ಗದರ್ಶನದಲ್ಲಿ ಉಡುಪಿ ಬನ್ನಂಜೆಯ ಬಿಲ್ಲವರ ಸೇವಾ ಸಂಘದ ಶಿವಗಿರಿ ಸಭಾಂಗಣದಲ್ಲಿ ನಡೆಯಿತು.Continue reading “ರಕ್ಷಿತ್ ಕೋಟ್ಯಾನ್ ‘ಮಿಸ್ಟರ್ ಕರಾವಳಿ 2024’, ಧೀರಜ್ ಕುಮಾರ್ ‘ರನ್ನರ್ ಅಪ್’, ಝಾಕಿರ್ ಹುಲ್ಲೂರ್ ಗೆ ‘ಬೆಸ್ಟ್ ಪೋಸರ್’ ಪ್ರಶಸ್ತಿ”

ಮಾ.23 : ಉಡುಪಿ-ಬನ್ನಂಜೆ ಶಿವಗಿರಿ ಸಭಾ ಭವನದಲ್ಲಿ ‘ಮಿಸ್ಟರ್ ಕರಾವಳಿ ಕ್ಲಾಸಿಕ್ 2024’ ಮತ್ತು  ‘ಮಿಸ್ಟರ್ ಬಿಲ್ಲವ 2024’ ದೇಹದಾರ್ಢ್ಯ ಸ್ಪರ್ಧೆ

ಕರಾವಳಿ ಕರ್ನಾಟಕ ದೇಹದಾರ್ಢ್ಯ ಪಟುಗಳ ತವರೂರು. ವಿಶೇಷವಾಗಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರತಿಭಾನ್ವಿತ ದೇಹದಾರ್ಢ್ಯ ಪಟುಗಳ ತಾಣ ಎಂದು ಗುರುತಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಈಗಾಗಲೇ  ಜಿಲ್ಲಾ, ಅಂತರ್ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಅನೇಕ ದೇಹದಾರ್ಢ್ಯ ಸ್ಪರ್ಧೆಗಳನ್ನು ಉಡುಪಿ ಪರಿಸರ ಹಾಗೂ ಜಿಲ್ಲೆಯಾದ್ಯoತ ಯಶಸ್ವಿಯಾಗಿ ಆಯೋಜಿಸುತ್ತಾ ಬಂದಿದೆ. ಪ್ರಸ್ತುತ ಕರ್ನಾಟಕ ಎಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಇದರ ಮಾರ್ಗದರ್ಶನದಲ್ಲಿ  ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಇದರ ಸಹಯೋಗದೊಂದಿಗೆ ಸಂಚಾಲನಾContinue reading “ಮಾ.23 : ಉಡುಪಿ-ಬನ್ನಂಜೆ ಶಿವಗಿರಿ ಸಭಾ ಭವನದಲ್ಲಿ ‘ಮಿಸ್ಟರ್ ಕರಾವಳಿ ಕ್ಲಾಸಿಕ್ 2024’ ಮತ್ತು  ‘ಮಿಸ್ಟರ್ ಬಿಲ್ಲವ 2024’ ದೇಹದಾರ್ಢ್ಯ ಸ್ಪರ್ಧೆ”

ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದವರ ಬಗ್ಗೆ ನಿಮ್ಮ ನಿಲುವೇನು? ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಪ್ರಶ್ನೆ

ಉಡುಪಿ: ರಾಜ್ಯ ಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ನ ನಾಸೀರ್ ಹುಸೇನ್‌ ಸಂಭ್ರಮಾಚರಣೆ ಸಂದರ್ಭದಲ್ಲಿ ಅವರ ಬೆಂಬಲಿಗರು ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆ ಕೂಗಿದ ಬಗ್ಗೆ ವರದಿ ಮಾಡಿದ ಪತ್ರಕರ್ತರ ವಿರುದ್ಧ ಮಾತನಾಡಿದ್ದ ಎಂ.ಜಿ‌. ಹೆಗ್ಡೆ ನಡೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕ್ರಮವನ್ನು ಪ್ರಶ್ನಿಸಿ ಪತ್ರಿಕಾ ಹೇಳಿಕೆ ನೀಡಿದ್ದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರಿಗೆ ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆContinue reading “ವಿಧಾನ ಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದವರ ಬಗ್ಗೆ ನಿಮ್ಮ ನಿಲುವೇನು? ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಪ್ರಶ್ನೆ”

Design a site like this with WordPress.com
Get started