ಬಿಜೆಪಿ ಹಿರಿಯ ಮುಖಂಡ, ಆರ್. ಎಸ್.ಎಸ್ ಧುರೀಣ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಧುರೀಣ, ಬಿಜೆಪಿ ಹಿರಿಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿಯವರ ನಿಕಟವರ್ತಿ ಹಾಗೂ ಮಾಜಿ ಸಚಿವ ದಿ. ಡಾ! ವಿ.ಎಸ್. ಆಚಾರ್ಯ ಅವರ ಮಾರ್ಗದರ್ಶಕರಾಗಿದ್ದ ಸೋಮಶೇಖರ ಭಟ್ ಅವರು ಜಿಲ್ಲೆಯಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ತುರ್ತು ಪರಿಸ್ಥಿತಿಯContinue reading “ಬಿಜೆಪಿ ಹಿರಿಯ ಮುಖಂಡ, ಆರ್. ಎಸ್.ಎಸ್ ಧುರೀಣ ಸೋಮಶೇಖರ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”

ಬಿಜೆಪಿ ಕಾಪು ಕ್ಷೇತ್ರ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಚಾಲನೆ

ಕಾಪು: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಕಾಪು ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರು. ಜಿಲ್ಲಾ ಸಹಸಂಚಾಲಕರಾದ ವಿಜಯ್ ಕುಮಾರ್ ಉದ್ಯಾವರ ಪ್ರಸ್ತಾವನೆಗೈದರು. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ ಗ್ರಾಮ್ ಚಲೋ ಕಾರ್ಯಕ್ರಮದ ರೂಪುರೇಶೆಗಳನ್ನು ವಿವರಿಸಿದರು. ಕಾಪು ಮಂಡಲ ಸಂಚಾಲಕರಾದ ಮುರಳೀದರ್ ಪೈ ಕಾರ್ಯಕ್ರಮ‌ ನಿರೂಪಿಸಿದರು. ಈContinue reading “ಬಿಜೆಪಿ ಕಾಪು ಕ್ಷೇತ್ರ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಚಾಲನೆ”

ಜಿನ್ನಾ-ನೆಹರೂ ಕಲ್ಪನೆಯ ಭಾರತ ವಿಭಜನೆಯ ಕೂಗು ಕಾಂಗ್ರೆಸ್ಸಿನಿಂದ ಮತ್ತೊಮ್ಮೆ ಮೊಳಕೆಯೊಡೆದಿದೆ : ಕುಯಿಲಾಡಿ

ಅಂದು ಅಧಿಕಾರದ ದುರಾಸೆಯಿಂದ ದೇಶವನ್ನು ಒಡೆಯುವ ಕುಕೃತ್ಯಕ್ಕೆ ನೆಹರೂ-ಜಿನ್ನಾ ನಾoದಿ ಹಾಡಿದ್ದು ಕರಾಳ ಇತಿಹಾಸ. ಇಂದು ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ದಕ್ಷಿಣಕ್ಕೆ ಪ್ರತ್ಯೇಕ ರಾಷ್ಟ್ರದ ಕಲ್ಪನೆಯನ್ನು ತೇಲಿಬಿಟ್ಟಿರುವುದು ದೇಶದ್ರೋಹದ ಸಂಕೇತವಾಗಿದೆ ಎಂದು ನಿಳಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಜನತೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯ ಮತ್ತು ವಿಭಜನಕಾರಿ ಧೋರಣೆಯನ್ನು ಕೂಲಂಕುಷವಾಗಿ ಗಮನಿಸುತ್ತಿರುವುದು ವಾಸ್ತವ. ಕಾಂಗ್ರೆಸ್ಸಿಗರಿಗೆ ಉತ್ತಮ ಆಡಳಿತಕ್ಕಿಂತ ದೇಶವನ್ನು ಒಡೆಯುವ ಕೃತ್ಯವೇ ಮುಖ್ಯ ಎನಿಸಿದೆ. ಇದು ಕಾಂಗ್ರೆಸ್ಸಿನ ಮೂಲContinue reading “ಜಿನ್ನಾ-ನೆಹರೂ ಕಲ್ಪನೆಯ ಭಾರತ ವಿಭಜನೆಯ ಕೂಗು ಕಾಂಗ್ರೆಸ್ಸಿನಿಂದ ಮತ್ತೊಮ್ಮೆ ಮೊಳಕೆಯೊಡೆದಿದೆ : ಕುಯಿಲಾಡಿ”

ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ‘ಪ್ರತ್ಯೇಕ ರಾಷ್ಟ್ರ’ದ ಹೇಳಿಕೆಯಿಂದ ಕಾಂಗ್ರೆಸಿಗರದ್ದು ‘ಭಾರತ್ ತೋಡೋ ಯಾತ್ರೆ’ ಎಂಬುದು ಸಾಬೀತಾಗಿದೆ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಭಾರತ್ ಜೋಡೋ ಎಂದು ಬೊಗಳೆ ಬಿಡುತ್ತಿರುವ ಕಾಂಗ್ರೆಸ್ಸಿನ ನೈಜ ವಿಭಜನಕಾರಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ‘ಭಾರತ್ ಜೋಡೋ ಯಾತ್ರೆ’ ಎಂದು ಹೆಸರಿಟ್ಟುಕೊಂಡು ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂಬುದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ‘ದಕ್ಷಿಣಕ್ಕೆ ಪ್ರತ್ಯೇಕ ರಾಷ್ಟ್ರ’ದ ಹೇಳಿಕೆಯಿಂದ ಸಾಬೀತಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ‘ಏಕ್ ಭಾರತ್ ಶ್ರೇಷ್ಠ ಭಾರತ್’ ಧ್ಯೇಯ ವಾಕ್ಯದಡಿ 2047ಕ್ಕೆ ವಿಕಸಿತContinue reading “ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ‘ಪ್ರತ್ಯೇಕ ರಾಷ್ಟ್ರ’ದ ಹೇಳಿಕೆಯಿಂದ ಕಾಂಗ್ರೆಸಿಗರದ್ದು ‘ಭಾರತ್ ತೋಡೋ ಯಾತ್ರೆ’ ಎಂಬುದು ಸಾಬೀತಾಗಿದೆ : ಕಿಶೋರ್ ಕುಮಾರ್ ಕುಂದಾಪುರ”

ಆಪತ್ಕಾಲದಲ್ಲಿ ಜಗತ್ತಿಗೆ ಭಾರತವೇ ಬೆಳಕು : ಉಡುಪಿ ಜಿಲ್ಲಾ ಬಿಜೆಪಿ

ಕೇಂದ್ರ ವಿತ್ತ ಸಚಿವೆ ಮಂಡಿಸಿದ ಕೇoದ್ರ ಬಜೆಟ್ ನೀರಸ ಜಗತ್ತಿಗೆ ‘ಭಾರತ ಒಂದೇ ಭರವಸೆ’ ಎಂಬ ಮಾತಿನಂತೆ ಉತ್ತರದಾಯಿಯಾಗಿ ಮೂಡಿ ಬಂದಿದೆ. ಯಾವುದೇ ಜನ ಮರುಳು ಕಾರ್ಯಕ್ರಮ ಇಲ್ಲದ ‘ಅಭಿವೃದ್ಧಿ ಒಂದೇ ಮಂತ್ರ’ ಎಂಬ ದೂರದೃಷ್ಠಿಯ ಬಜೆಟ್ ಇದಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಫೆಡರಲ್ ಸಿಸ್ಟಮ್‌ನಲ್ಲಿರುವ ಭಾರತದಂತಹ ದೇಶದಲ್ಲಿ ಇಂತಹ ಬಜೆಟ್ ಮಂಡಿಸಲು ನಿಖರವಾದContinue reading “ಆಪತ್ಕಾಲದಲ್ಲಿ ಜಗತ್ತಿಗೆ ಭಾರತವೇ ಬೆಳಕು : ಉಡುಪಿ ಜಿಲ್ಲಾ ಬಿಜೆಪಿ”

ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡಲಿದೆ : ಕುಯಿಲಾಡಿ

ಉಡುಪಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಇಂದು ಮಂಡನೆ ಮಾಡಿದ ಕೇoದ್ರ ಬಜೆಟ್ ನಿಂದ ದೇಶದ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ, ಸಣ್ಣ ನಗರಗಳಿಗೆ ಮೆಟ್ರೋ ವಿಸ್ತರಣೆ, ಭಾರತೀಯ ರೈಲ್ವೆಗೆ ಹೆಚ್ಚಿನ ಅನುದಾನ, ಹೊಸ ರೈಲ್ವೆ ಕಾರಿಡಾರ್ ನಿರ್ಮಾಣ, ದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ ಮತ್ತು ಬಡವರಿಗೆ 3 ಲಕ್ಷ ಮನೆ ನಿರ್ಮಾಣದಂತಹ ಯೋಜನೆಯಿಂದ ದೇಶದ ಜನತೆಯ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆ ಉನ್ನತೀಕರಣವಾಗಲಿದೆ ಎಂದು ಬಿಜೆಪಿ ಉಡುಪಿContinue reading “ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡಲಿದೆ : ಕುಯಿಲಾಡಿ”

ಸ್ಪಷ್ಟ, ದೃಢ ನಿರ್ಧಾರದ ಅತ್ಯುತ್ತಮ ಬಜೆಟ್ : ಕಿಶೋರ್ ಕುಮಾರ್ ಕುಂದಾಪುರ

ದೇಶದ ವಿತ್ತ ಸಚಿವರು ಮಂಡಿಸಿದ ಕೇoದ್ರ ಬಜೆಟ್ ಸ್ಪಷ್ಟ, ದೂರಗಾಮಿ ಪರಿಣಾಮವುಳ್ಳ ಅತ್ಯುತ್ತಮ ಬಜೆಟ್ ಆಗಿದೆ. ಕೊಟ್ಟ ಮಾತಿನಂತೆ ನಡೆದುಕೊಂಡು ದೇಶವನ್ನು ಮುನ್ನಡೆಸಲು, ದೇಶದ ಆರ್ಥಿಕತೆಯನ್ನು ಪ್ರಪಂಚದ 3ನೇ ಅತಿ ದೊಡ್ಡ ಆರ್ಥಿಕತೆ ಮಾಡಲು ಇಂತಹ ಬಜೆಟ್ ಅತಿ ಮುಖ್ಯವಾಗಿದೆ. ಹತ್ತಿರದಲ್ಲೇ ಚುನಾವಣೆ ಇದ್ದರೂ ಯಾವುದೇ ಜನ ಮರುಳು ಕಾರ್ಯಕ್ರಮ ಮಂಡಿಸದೆ, ಯಾವುದೇ ಪ್ರಾದೇಶಿಕ ಪ್ರಾಮುಖ್ಯತೆ ನೀಡದೇ ದೇಶದ ಅಭಿವೃದ್ಧಿ ಒಂದೇ ಮೂಲ ಮಂತ್ರ ಎಂಬ ಧ್ಯೇಯ ವಾಕ್ಯದೊಂದಿಗೆ ಬಜೆಟ್ ಮಂಡಿಸಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಸ್ಪಷ್ಟ, ದೃಢ ನಿರ್ಧಾರದ ಅತ್ಯುತ್ತಮ ಬಜೆಟ್ : ಕಿಶೋರ್ ಕುಮಾರ್ ಕುಂದಾಪುರ”

ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾದ ಕಿಶೋರ್ ಕುಮಾರ್ ರವರು ಕಾಪು ಬಿಜೆಪಿ ಕಚೇರಿಗೆ ಭೇಟಿ

ಕಾಪು: ಉಡುಪಿ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರು ಇಂದು ಕಾಫು ಬಿಜೆಪಿ ಕಚೇರಿಗೆ ಪ್ರಥಮ‌ ಭೇಟಿ ನೀಡಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆ ಮಾತನಾಡಿ ನೂತನ ಅಧ್ಯಕ್ಷರಿಗೆ ಶುಭಹಾರೈಸಿದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ನೂತನ ಅಧ್ಯಕ್ಷರಿಗೆ ಅಭಿನಂದನಾ ಮಾತುಗಳನ್ನಾಡಿ ಶುಭಹಾರೈಸಿದರು. ನಂತರದಲ್ಲಿ ನೂತನ ಅಧ್ಯಕ್ಷರಿಗೆ ಗೌರವಾರ್ಪಣೆ ಮಾಡಲಾಯಿತು. ಹಾಗೂ ಈ ಸಂದರ್ಭದಲ್ಲಿ ರಾಜ್ಯ ಮಹಿಳಾಮೋರ್ಚದ ಪ್ರಧಾನ‌ಕಾರ್ಯದರ್ಶಿಯಾಗಿ ಆಯ್ಕೆಯಾದ ಶಿಲ್ಪಾ ಜಿ ಸುವರ್ಣ ಇವರಿಗೂContinue reading “ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾದ ಕಿಶೋರ್ ಕುಮಾರ್ ರವರು ಕಾಪು ಬಿಜೆಪಿ ಕಚೇರಿಗೆ ಭೇಟಿ”

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ

ಉಡುಪಿ: ಮುಂಬರಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ ನೇಮಕಗೊಂಡಿರುವ ಕುತ್ಯಾರು ನವೀನ್ ಶೆಟ್ಟಿಯವರು ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಸಂಘದ ಸ್ವಯಂಸೇವಕರಾಗಿ, ಭಾರತೀಯ ಜನತಾ ಪಾರ್ಟಿಯಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯ ಕಾರ್ಯಕರ್ತರಾಗಿರುವ ಕುತ್ಯಾರು ನವೀನ್ ಶೆಟ್ಟಿಯವರು ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ ಅಧ್ಯಕ್ಷರಾಗಿ 2 ಬಾರಿ, ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ 2Continue reading “ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ”

ಉಡುಪಿ ಜಿಲ್ಲಾ ಬಿಜೆಪಿಯಿಂದ 75ನೆೇ ಗಣರಾಜ್ಯೋತ್ಸವ ಆಚರಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 75ನೇ ಗಣರಾಜ್ಯೋತ್ಸವವನ್ನು ಜಿಲ್ಲಾ ಕಛೇರಿಯ ಬಳಿ ಆಚರಿಸಲಾಯಿತು. ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ವಿವರಿಸಿ ಪಕ್ಷದ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಹಾಗೂ ನಾಡಿನ ಸಮಸ್ತ ಜನತೆಗೆ ಶುಭಾಶಯವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ 75ನೆೇ ಗಣರಾಜ್ಯೋತ್ಸವ ಆಚರಣೆ”

Design a site like this with WordPress.com
Get started