ಉಡುಪಿ: ಶತಮಾನಗಳ ಹೋರಾಟ, ತ್ಯಾಗ, ಬಲಿದಾನಗಳ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಗೊಂಡು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ಆಗುವಂತಾಗಿದೆ. ಇದು ದೇಶದ ಶ್ರೇಯಸ್ಸಿನ ಸಂಕೇತವಾಗಿದೆ. ಶ್ರೀ ರಾಮೋತ್ಸವ ಒಂದು ದಿನಕ್ಕೆ ಸೀಮಿತವಾಗಿರದೆ ನಿತ್ಯ ನಿರಂತರ ಮನೆ ಮನಗಳಲ್ಲಿ ಶ್ರೀ ರಾಮನ ಆರಾಧನೆ ಮಾಡುವಂತಾಗಲಿ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಶ್ರೀContinue reading “‘ಶ್ರೀ ರಾಮನ ಆದರ್ಶವನ್ನು ಮೈಗೂಡಿಸಿಕೊಳ್ಳೋಣ’ : ಡಾ! ನಿ.ಬೀ. ವಿಜಯ ಬಲ್ಲಾಳ್ಅಂಬಲಪಾಡಿ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ”
Category Archives: Uncategorized
ಬಿಜೆಪಿಯಿಂದ ಗ್ರಾಮ ಚಲೋ, ಗೋಡೆ ಬರಹ, ಶ್ರೀ ರಾಮ ಮಂದಿರ ದರ್ಶನ ಅಭಿಯಾನ
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ವತಿಯಿಂದ ‘2024 ಮೋದಿ ಮತ್ತೊಮ್ಮೆ’ ಗೋಡೆ ಬರಹ, ಗ್ರಾಮ ಚಲೋ, ಅಯೋಧ್ಯಾ ಶ್ರೀ ರಾಮ ಮಂದಿರ ದರ್ಶನ ಅಭಿಯಾನ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದ ಕುರಿತು ಸಂಬಂಧಪಟ್ಟ ಜವಾಬ್ದಾರಿಗಳ ಪ್ರಮುಖರ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಹಾಗೂ ಪಕ್ಷದ ಪ್ರಮುಖರುContinue reading “ಬಿಜೆಪಿಯಿಂದ ಗ್ರಾಮ ಚಲೋ, ಗೋಡೆ ಬರಹ, ಶ್ರೀ ರಾಮ ಮಂದಿರ ದರ್ಶನ ಅಭಿಯಾನ”
ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಉಡುಪಿಯಲ್ಲಿ ಸಿ.ಟಿ. ರವಿ ಚಾಲನೆ
ಉಡುಪಿ: ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಉಡುಪಿಯ ಕಡಿಯಾಳಿಯಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಉಪಾಧ್ಯಕ್ಷರುಗಳಾದ ರವಿ ಅಮೀನ್ ಬನ್ನಂಜೆ, ಪೆರಣಂಕಿಲ ಶ್ರೀಶ ನಾಯಕ್, ಬಿಜೆಪಿ ದ.ಕ. ಸಹ ಪ್ರಭಾರಿContinue reading “ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಉಡುಪಿಯಲ್ಲಿ ಸಿ.ಟಿ. ರವಿ ಚಾಲನೆ”
ಜ.22, ಸೋಮವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧಿಕಾರ ಸ್ವೀಕಾರ
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ಇದರ ನೂತನ ಜಿಲ್ಲಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಕಿಶೋರ್ ಕುಮಾರ್ ಕುಂದಾಪುರ ಇವರು ಜ.22 ಸೋಮವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಮತ್ತು ಪಕ್ಷದ ಹಿತೈಷಿಗಳು ಉಪಸ್ಥಿತರಿರಬೇಕಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಪತ್ರಿಕಾContinue reading “ಜ.22, ಸೋಮವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧಿಕಾರ ಸ್ವೀಕಾರ”
ಜ.22ರಂದು ಅಂಬಲಪಾಡಿ ದೇವಸ್ಥಾನದಲ್ಲಿ “ಶ್ರೀ ರಾಮೋತ್ಸವ” ಕಾರ್ಯಕ್ರಮ
ಉಡುಪಿ: ಜ.22ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಬೆಳಿಗ್ಗೆ ಗಂಟೆ 9.30ರಿಂದ ಮಧ್ಯಾಹ್ನ 1.00ರ ವರೆಗೆ “ಶ್ರೀ ರಾಮೋತ್ಸವ” ಕಾರ್ಯಕ್ರಮವು ‘ಶ್ರೀ ಭವಾನಿ ಮಂಟಪ’ದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 9.30ಕ್ಕೆ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಜ್ಯೋತಿ ಬೆಳಗಿಸಿ “ಶ್ರೀ ರಾಮೋತ್ಸವ”ಕ್ಕೆ ಚಾಲನೆ ನೀಡಲಿದ್ದಾರೆ. ಭಜನೆ, ಹನುಮಾನ್ ಚಾಲೀಸ್Continue reading “ಜ.22ರಂದು ಅಂಬಲಪಾಡಿ ದೇವಸ್ಥಾನದಲ್ಲಿ “ಶ್ರೀ ರಾಮೋತ್ಸವ” ಕಾರ್ಯಕ್ರಮ”
ಭಗವಂತನಿಗೆ ಪ್ರಿಯವಾದ ಭಜನೆ ಮನೆ ಮನೆಗಳಲ್ಲಿ ಮೊಳಗಲಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ*ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ವತಿಯಿಂದ ಪರ್ಯಾಯೋತ್ಸವದ ಪ್ರಯುಕ್ತ ಭಜನಾ ಸೇವೆ
ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಆರಾಧ್ಯಮೂರ್ತಿ ನಾದ ಬ್ರಹ್ಮ ಪಾಂಡುರಂಗ ವಿಠಲನಿಗೆ ಅತ್ಯಂತ ಪ್ರಿಯವಾದ ಭಜನೆ ಸನ್ನಿದಾನದಲ್ಲಿ ನಿರಂತರವಾಗಿ ನಡೆಯುತ್ತಿದೆ. ಭಜನೆಯಿಂದ ಭಗವಂತನು ಸಂತುಷ್ಟನಾಗಿ ನಮ್ಮೆಲ್ಲರನ್ನು ಅನುಗ್ರಹಿಸಲಿ. ಇಂತಹ ಭಜನಾ ಕಾರ್ಯಕ್ರಮ ಎರಡು ವರ್ಷಗಳ ಸಮಯದಲ್ಲಿ ನಿರಂತರವಾಗಿ ನಡೆಯಲಿ. ಭಜನಾ ಸಂಘಗಳು ಬೆಳೆಯಲಿ. ಎಲ್ಲ ಮನೆಗಳಲ್ಲಿ ನಿರಂತರ ಭಜನೆ ಆಗುವಂತಾಗಲಿ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಅವರು ಹೇಳಿದರು. ಅವರು ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳContinue reading “ಭಗವಂತನಿಗೆ ಪ್ರಿಯವಾದ ಭಜನೆ ಮನೆ ಮನೆಗಳಲ್ಲಿ ಮೊಳಗಲಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ*ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ವತಿಯಿಂದ ಪರ್ಯಾಯೋತ್ಸವದ ಪ್ರಯುಕ್ತ ಭಜನಾ ಸೇವೆ”
ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ರೋಸಿ ಹೋದ ಜನತೆ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ : ಕೆ. ರಾಘವೇಂದ್ರ ಕಿಣಿ
ಉಡುಪಿ: ಪಂಚ ಗ್ಯಾರoಟಿಗಳ ಆಮಿಷವೊಡ್ಡಿ ಅಧಿಕಾರಕ್ಕೇರಿದ ಕಾಂಗ್ರೆಸ್ ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ಜನತೆಯ ಆಕ್ರೋಶಕ್ಕೆ ಗುರಿಯಾಗಿದೆ. ಕಾಂಗ್ರೆಸ್ಸಿನ ಗೋಸುoಬೆತನದ ನಡೆಯಿಂದ ರೋಸಿ ಹೋಗಿರುವ ಜನತೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದೂ ಉಚಿತ ಗ್ಯಾರಂಟಿಗಳನ್ನು ಯಾವುದೇ ಬದಲಾವಣೆ ಇಲ್ಲದೆ ಯಥಾವತ್ತಾಗಿ ಜಾರಿಗೆ ತಂದಲ್ಲಿ ತನ್ನ ತಲೆ ಬೋಳಿಸುವುದಾಗಿ ಹೇಳಿಕೆ ನೀಡಿದ್ದ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ತನ್ನContinue reading “ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ರೋಸಿ ಹೋದ ಜನತೆ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ : ಕೆ. ರಾಘವೇಂದ್ರ ಕಿಣಿ”
ಉಡುಪಿ ನಗರಸಭೆಯ ಭ್ರಷ್ಟಾಚಾರದ ಕುರಿತು ರಮೇಶ್ ಕಾಂಚನ್ ಶಾಸಕರ ಬಹಿರಂಗ ಚರ್ಚೆಯ ಸವಾಲನ್ನು ಸ್ವೀಕರಿಸಲಿ : ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್
ಉಡುಪಿ: ‘ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಕಾಂಗ್ರೆಸ್’ ಎಂಬಂತೆ ಉಡುಪಿ ನಗರಸಭೆಯಲ್ಲಿ ಪ್ರಸಕ್ತ ಆಡಳಿತಾಧಿಕಾರಿ ಮತ್ತು ಪೌರಾಯುಕ್ತರ ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ಭ್ರಷ್ಟಾಚಾರ, ಬ್ರೋಕರ್ ಹಾವಳಿ, ಕಳಪೆ ಕಾಮಗಾರಿ ಮಿತಿ ಮೀರಿದ್ದು, ಈ ಬಗ್ಗೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಯತ್ನದಲ್ಲಿರುವ ಕಾಂಗ್ರೆಸ್ ನಗರಸಭಾ ಸದಸ್ಯ ರಮೇಶ್ ಕಾಂಚನ್ ಭ್ರಷ್ಟಾಚಾರ ಕುರಿತಂತೆ ಶಾಸಕರ ಬಹಿರಂಗ ಚರ್ಚೆಯ ಸವಾಲನ್ನು ಸ್ವೀಕರಿಸಲಿ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ತಿಳಿಸಿದ್ದಾರೆ. ನಗರಸಭೆ ಸಂಬಂಧಿಸಿದ ಖಾತಾ ಬದಲಾವಣೆ, ಇ-ಖಾತಾ, ಬ್ರೋಕರ್ ಹಾವಳಿ,Continue reading “ಉಡುಪಿ ನಗರಸಭೆಯ ಭ್ರಷ್ಟಾಚಾರದ ಕುರಿತು ರಮೇಶ್ ಕಾಂಚನ್ ಶಾಸಕರ ಬಹಿರಂಗ ಚರ್ಚೆಯ ಸವಾಲನ್ನು ಸ್ವೀಕರಿಸಲಿ : ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್”
ಪ್ರಧಾನಿ ಮೋದೀಜಿ ಸರಕಾರದ ವಿವಿಧ ಯೋಜನೆಗಳ ಮಾಹಿತಿಯೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ
ಕಾಪು: ಪ್ರಧಾನಿ ಮೋದೀಜಿ ಸರಕಾರದ ವಿವಿಧ ಯೋಜನೆಗಳ ಮಾಹಿತಿಯೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ ಈ ಕೆಳಗಿನ ದಿನಾಂಕದಂದು ವಿವಿಧ ಪಂಚಾಯತ್ ಗಳಿಗೆ ಆಗಮಿಸಲಿದೆ. ಎಲ್ಲ ಗ್ರಾಮಪಂಚಾಯತ್ ಅಧ್ಯಕ್ಷರು ಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು ವಿಶೇಷ ಮುತುವರ್ಜಿ ವಹಿಸಿ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮಾಡಬೇಕು. ಪಕ್ಷದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಈ ಸಭೆಗೆ ತಪ್ಪದೇ ಹಾಜರಾಗಬೇಕು ಅಲ್ಲದೆ ತಮ್ಮ ತಮ್ಮ ವಾರ್ಡ್ ಗಳಲ್ಲಿ ವ್ಯಾಪಕ ಪ್ರಚಾರ ನೀಡಿ ಯಾವುದೇ ಪಂಚಾಯತ್ ನಲ್ಲಿಯೂ 400-500 ಕ್ಕೆContinue reading “ಪ್ರಧಾನಿ ಮೋದೀಜಿ ಸರಕಾರದ ವಿವಿಧ ಯೋಜನೆಗಳ ಮಾಹಿತಿಯೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ”
ಉಡುಪಿ ಜಿಲ್ಲಾ ಬಿಜೆಪಿಯಿಂದ ಪಕ್ಷದ ಹಿರಿಯ ಮುಖಂಡ ಬಿ.ಸುಧಾಕರ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಮರ್ಪಣೆ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪಕ್ಷದ ಹಿರಿಯ ಮುಖಂಡ ಬಿ.ಸುಧಾಕರ ಶೆಟ್ಟಿಯವರ ಶ್ರದ್ಧಾಂಜಲಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪಕ್ಷದ ಮುಖಂಡರು ಜನಾನುರಾಗಿ ಬಿ.ಸುಧಾಕರ ಶೆಟ್ಟಿಯವರ ತತ್ವಾದರ್ಶಗಳು ಮತ್ತು ಪಕ್ಷ ಸಂಘಟನೆಗೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿ ನುಡಿ ನಮನ ಸಲ್ಲಿಸಿದರು. ಅಗಲಿದ ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಿ ಮೌನ ಪ್ರಾರ್ಥನೆಯ ಜೊತೆಗೆ ಅವರContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ಪಕ್ಷದ ಹಿರಿಯ ಮುಖಂಡ ಬಿ.ಸುಧಾಕರ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಮರ್ಪಣೆ”