ಉಡುಪಿ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣಗೊಂಡು ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ವಿಚಲಿತಗೊಂಡಿರುವ ಕಾಂಗ್ರೆಸ್ ನಾಯಕರ ಶ್ರೀ ರಾಮ ಮಂದಿರ ವಿರೋಧಿ ವರ್ತನೆ ಕಾಂಗ್ರೆಸ್ಸನ್ನು ಪ್ರಪಾತಕ್ಕೆ ತಳ್ಳಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಹಿಂದುತ್ವದ ವಿರುದ್ಧ ಸದಾ ಕೆಂಡ ಕಾರುವ ಕಾಂಗ್ರೆಸ್ಸಿನ ವಿವಾದಿತ ನಾಯಕ ಬಿ.ಕೆ. ಹರಿಪ್ರಸಾದ್ ಮೂಲೆಗುಂಪಾಗುವ ಭಯದಿಂದ ಆಗಾಗ ತನ್ನ ಹರಕುContinue reading “ಅಯೋಧ್ಯೆ ಶ್ರೀರಾಮ ಮಂದಿರದ ವಿರುದ್ಧ ಕಾಂಗ್ರೆಸ್ ನಾಯಕರ ವರ್ತನೆ ಕಾಂಗ್ರೆಸ್ಸನ್ನು ಪ್ರಪಾತಕ್ಕೆ ತಳ್ಳಲಿದೆ : ಕುಯಿಲಾಡಿ”
Category Archives: Uncategorized
ನಾಳೆ ಜ.6 ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ : ರಾಜ್ಯ ವಿಧಾನಸಭಾ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಭಾಗಿ
ಉಡುಪಿ: ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ ನಾಳೆ ಜ.6 ಶನಿವಾರ ಬೆಳಿಗ್ಗೆ ಗಂಟೆ 11.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯ ವಿಧಾನ ಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಬಾಗವಹಿಸಲಿದ್ದಾರೆ. ಮಧ್ಯಾಹ್ನ 3.00 ಗಂಟೆಗೆ ಸಿದ್ದಾಪುರ ಗ್ರಾಮ ಪಂಚಾಯತ್ ಬಳಿContinue reading “ನಾಳೆ ಜ.6 ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ : ರಾಜ್ಯ ವಿಧಾನಸಭಾ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಭಾಗಿ”
ಬಿಜೆಪಿ ಹಿರಿಯ ಮುಖಂಡ ಬಿ.ಸುಧಾಕರ್ ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ
ಉಡುಪಿ: ಜನಸಂಘದ ಕಾಲದಿಂದಲೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದ ಬಿಜೆಪಿ ಹಿರಿಯ ಮುಖಂಡ ಬಿ.ಸುಧಾಕರ್ ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಯಶಸ್ವೀ ಹೋಟೆಲ್ ಉದ್ಯಮಿಯಾಗಿ ಗುರುತಿಸಿಕೊಂಡು ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ನ ಮಾಲಕರಾಗಿ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಬಿ.ಸುಧಾಕರ್ ಶೆಟ್ಟಿಯವರು ಉಡುಪಿ ನಗರಸಭೆಯ ಉಪಾಧ್ಯಕ್ಷರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಮೂರು ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಜನಮಾನಸದಲ್ಲಿ ಅಪಾರ ಪ್ರೀತಿContinue reading “ಬಿಜೆಪಿ ಹಿರಿಯ ಮುಖಂಡ ಬಿ.ಸುಧಾಕರ್ ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ”
ಭಜನೆಯಿಂದ ಸನಾತನ ಸಂಸ್ಕೃತಿಯ ಗತ ವೈಭವ ಅನಾವರಣ : ಯಶ್ಪಾಲ್ ಎ. ಸುವರ್ಣ
ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ನೂತನ ಪದಾಧಿಕಾರಿಗಳ ಪದಗ್ರಹಣ ಉಡುಪಿ: ಭಜನಾ ಮಂಡಳಿಗಳು ಮಾದರಿ ಸಂಘಟನೆಯ ಮೂಲಕ ಏಕತೆಯನ್ನು ಸಾರುವ ಶೃದ್ಧಾ ಕೇಂದ್ರಗಳಾಗಿವೆ. ಭಜನೆಯಲ್ಲಿ ವಿಭಜನೆ ಇಲ್ಲ. ಭಜನೆಯಿಂದ ಸನಾತನ ಸಂಸ್ಕೃತಿಯ ಗತ ವೈಭವ ಅನಾವರಣಗೊಂಡಂತಾಗಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಬಲಪಾಡಿ ‘ಪ್ರಗತಿ ಸೌಧ’ ಸಭಾಂಗಣದಲ್ಲಿ ನಡೆದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರContinue reading “ಭಜನೆಯಿಂದ ಸನಾತನ ಸಂಸ್ಕೃತಿಯ ಗತ ವೈಭವ ಅನಾವರಣ : ಯಶ್ಪಾಲ್ ಎ. ಸುವರ್ಣ”
ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಂಬಲಪಾಡಿ ಸ್ವಯಂ ಸೇವಕರಿಂದ ಸಾಮೂಹಿಕ ಪ್ರಾರ್ಥನೆ, ಮಂತ್ರಾಕ್ಷತೆ ವಿತರಣೆ
ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಹಾಗೂ ಶ್ರೀ ರಾಮ ಮಂದಿರದ ಉದ್ಘಾಟನೆಯ ಪ್ರಯುಕ್ತ ಅಂಬಲಪಾಡಿ ನಗರ ಮತ್ತು ಗ್ರಾಮಾಂತರ ಭಾಗದ ರಾಮ ಭಕ್ತ ಸ್ವಯಂ ಸೇವಕರಿಂದ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. 9 ತಂಡಗಳ ನೇತೃತ್ವದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯನ್ನು ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ 9 ತಂಡಗಳ ಪ್ರಮುಖರು ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ
ಅಜಾತಶತ್ರು ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಛೇರಿಯಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿContinue reading “ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ”
ಬಿ.ಕೆ. ಹರಿಪ್ರಸಾದ್ ಹೇಳಿಕೆ ಅವರ ಹತಾಶ ಮಾನಸಿಕತೆಯ ಪ್ರತಿಬಿಂಬ: ಕೆ.ಉದಯಕುಮಾರ್ ಶೆಟ್ಟಿ
ಉಡುಪಿ:ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆ ಅವರ ಹತಾಶ ಮಾನಸಿಕತೆಯನ್ನು ಬಿಂಬಿಸುತ್ತದೆ. ಬ್ರಿಟಿಷರ ಬೂಟು ನೆಕ್ಕುವ ಸಂಸ್ಕೃತಿ ನಮ್ಮದಲ್ಲ. ಬಿಜೆಪಿ ದೇಶಕ್ಕಾಗಿ ಹೋರಾಟ ಮಾಡಿದ ಸ್ವಾತಂತ್ರ್ಯ ವೀರರ, ಗಡಿಯಲ್ಲಿ ನಮ್ಮನ್ನು ಕಾಯುವ ವೀರ ಯೋಧರ ಹಾಗೂ ಶೋಷಿತ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬೂಟು ಒರೆಸುವ ಕೆಲಸ ಮಾಡುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ. ನೀವು ಇಟಲಿ ಮಹಿಳೆಯ ಸೆರಗಿನ ಹಿಂದೆ ರಾಜಕೀಯ ಮಾಡುತ್ತಾ ಇನ್ನೂ ಅದೇ ಪಳಿಯುಳಿಕೆಗೆ ಜೋತು ಬಿದ್ದವರು. ನಿಮಗೆContinue reading “ಬಿ.ಕೆ. ಹರಿಪ್ರಸಾದ್ ಹೇಳಿಕೆ ಅವರ ಹತಾಶ ಮಾನಸಿಕತೆಯ ಪ್ರತಿಬಿಂಬ: ಕೆ.ಉದಯಕುಮಾರ್ ಶೆಟ್ಟಿ”
ಹಿಜಾಬ್ ಆದೇಶ ಹಿಂಪಡೆತ – ಮುಸಲ್ಮಾನರ ತುಷ್ಠೀಕರಣವೇ ಸಿಧ್ದರಾಮಯ್ಯವರ ಏಕೈಕ ಅಜೆಂಡಾ – ಶ್ರೀಕಾಂತ ನಾಯಕ್
ಉಡುಪಿ:ರಾಜ್ಯ ಸರಕಾರದ ಮುಖ್ಯಮಂತ್ರಿಗಳಾದ ಸಿಧ್ಧರಾಮಯ್ಯರವರು ಹಿಂದಿನ ಸರಕಾರ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಕುರಿತಂತೆ ನೀಡಿದ ಆದೇಶ ಹಿಂಪಡೆಯುವ ಮಾತನ್ನಾಡಿ ತಮ್ಮ ಮುಸ್ಲಿಮರ ತುಷ್ಠೀಕರಣದ ಪರಮಾವಧಿ ತಲುಪುತ್ತಿದ್ದಾರೆ. ಸಿಧ್ಧರಾಮಯ್ಯರವರಿಗೆ ಹಿಂದೂಗಳೆಂದರೆ ಅಸಡ್ಡೆ. ಈ ಹಿಂದೆ ಮುಸಲ್ಮಾನರಿಗೆ ಹತ್ತು ಸಾವಿರ ಕೋಟಿ ಅನುದಾನ ನೀಡುತ್ತೇನೆ, ದೇಶದ ಸಂಪತ್ತನ್ನು ನಿಮಗೆ ಹಂಚುತ್ತೇನೆ ಇತ್ಯಾದಿ ಮಾತುಗಳಿಂದ ತನ್ನ ಮುಸ್ಲಿಂ ಪ್ರೀತಿಯನ್ನು ಬಹಿರಂಗವಾಗಿ ತೋರ್ಪಡಿಸಿದ್ದಾರೆ. ಅವರ ಉಪಮುಖ್ಯಮಂತ್ರಿಗಳಾದ ಡಿಕೆಶಿಯವರು ದೆ ಆರ್ ಆಲ್ ಮೈ ಬ್ರದರ್ಸ್, ಅವರ ಮೇಲಿನ ಕೋಮು ಗಲಭೆ ಕೇಸುಗಳನ್ನುContinue reading “ಹಿಜಾಬ್ ಆದೇಶ ಹಿಂಪಡೆತ – ಮುಸಲ್ಮಾನರ ತುಷ್ಠೀಕರಣವೇ ಸಿಧ್ದರಾಮಯ್ಯವರ ಏಕೈಕ ಅಜೆಂಡಾ – ಶ್ರೀಕಾಂತ ನಾಯಕ್”
ಸಿ.ಎಂ. ಹಿಜಾಬ್ ಹೇಳಿಕೆ ಅತಿರೇಕದ ಪರಮಾವಧಿ : ಕೆ.ಉದಯಕುಮಾರ್ ಶೆಟ್ಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಜಾಬ್ ನಿಷೇಧ ಹಿoಪಡೆಯುತ್ತೇನೆ ಎನ್ನುವ ಹೇಳಿಕೆ ಅತಿರೇಕದ ಪರಮಾವಧಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ. ಸಿದ್ದರಾಮಯ್ಯ ಹಿಂದಿನಿಂದಲೂ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಾ ಬಂದವರು. ಅದು ಶಾಲಾ ವಿದ್ಯಾರ್ಥಿಗಳ ಬಗ್ಗೆ ಇರಬಹುದು ಅಥವಾ ಧರ್ಮದ ಬಗ್ಗೆ ಇರಬಹುದು. ಇದು ಮುಸ್ಲಿಂ ಓಲೈಕೆಯ ಮುಂದುವರಿದ ಭಾಗವಾಗಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲನ್ನು ಕಂಡ ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಗೆ ಬತ್ತಳಿಕೆಯಲ್ಲಿ ಯಾವುದೇ ಅಸ್ತ್ರಗಳಿಲ್ಲ. ನ್ಯಾಯಾಲಯದಲ್ಲಿ ಇತ್ಯರ್ಥಗೊಂಡ ಅಧ್ಯಾಯವನ್ನುContinue reading “ಸಿ.ಎಂ. ಹಿಜಾಬ್ ಹೇಳಿಕೆ ಅತಿರೇಕದ ಪರಮಾವಧಿ : ಕೆ.ಉದಯಕುಮಾರ್ ಶೆಟ್ಟಿ”
ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ನಾಮಪತ್ರ ಸಲ್ಲಿಕೆ
ಉಡುಪಿ: ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿನ ಉಪ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾರವರು ಡಿ.15ರಂದು ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ನಗರಸಭೆಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಬಿಜೆಪಿ ಉಡುಪಿ ನಗರಾಧ್ಯಕ್ಷContinue reading “ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ನಾಮಪತ್ರ ಸಲ್ಲಿಕೆ”