ಉಡುಪಿ: ಕೂಳಿಗಾಗಿ ದುಡಿಯುವ ಕಾರ್ಮಿಕ ವರ್ಗದ ಮೇಲೆ ಕೇಸ್ ದಾಖಲು; ಹೊಟ್ಟೆ ತುಂಬಿದ ಕುಬೇರ ಮೇಲಿನ ಕೇಸ್ ವಾಪಸ್; ಇದು ರಾಜ್ಯ ಕಾಂಗ್ರೆಸ್ ಸರಕಾರದ ದ್ವಿಮುಖ ನೀತಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಟ್ಟಡ ಸಾಮಗ್ರಿ ಸಾಗಾಟದ ಹಳೇ ಲಾರಿಗಳ ಮಾಲಕ, ಚಾಲಕರ ಮೇಲೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಅತ್ತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಡಿ ಸಿಬಿಐContinue reading “ದುಡಿಯುವವರ ಮೇಲೆ ಕೇಸ್ ದಾಖಲು, ಹೊಟ್ಟೆ ತುಂಬಿದವರ ಕೇಸ್ ವಾಪಸ್; ಇದು ಕಾಂಗ್ರೆಸ್ ಸರಕಾರದ ದ್ವಿಮುಖ ನೀತಿ: ಕುಯಿಲಾಡಿ ಸುರೇಶ್ ನಾಯಕ್”
Category Archives: Uncategorized
ಹೊಟ್ಟೆಪಾಡಿಗೆ ದುಡಿಯುವ ಲಾರಿ ಚಾಲಕ, ಕಾರ್ಮಿಕರ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನಡೆ ಖಂಡನೀಯ : ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್
ಉಡುಪಿ: ನ.24ರಂದು ಮಣಿಪಾಲದ ರಜತಾದ್ರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾಜಿ ಸಚಿವ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ರವರು, ಕಟ್ಟಡ ಸಾಮಗ್ರಿ ಸಾಗಾಟದ ಲಾರಿ ಮಾಲಕರು, ಚಾಲಕರು ಮತ್ತು ಕಾರ್ಮಿಕರು ನಡೆಸಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ನೋಟಿಸ್ ನೀಡಿರುವ ಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಬಳಿ ಪ್ರಶ್ನಿಸಿರುವುದು ನ್ಯಾಯಸಮ್ಮತವಾಗಿದೆ. ಆದರೆ ಶಾಸಕರ ಮೇಲಿನ ದ್ವೇಷದಿಂದ ಈ ವಿಚಾರವನ್ನು ರಾಜಕೀಯಗೊಳಿಸಿ ಹೊಟ್ಟೆಪಾಡಿಗೆ ದುಡಿಯುವ ಲಾರಿ ಚಾಲಕ, ಕಾರ್ಮಿಕರ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷContinue reading “ಹೊಟ್ಟೆಪಾಡಿಗೆ ದುಡಿಯುವ ಲಾರಿ ಚಾಲಕ, ಕಾರ್ಮಿಕರ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನಡೆ ಖಂಡನೀಯ : ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್”
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಅಂಬಲಪಾಡಿ ವಲಯ ಕಛೇರಿಯಲ್ಲಿ ಧನಲಕ್ಷ್ಮೀ ಪೂಜೆ
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಇದರ ಅಂಬಲಪಾಡಿ ವಲಯ ಕಛೇರಿಯಲ್ಲಿ ಧನಲಕ್ಷ್ಮೀ ಪೂಜೆಯು ಭಜನಾ ಸೇವೆಯೊಂದಿಗೆ ವಿಜೃಂಭಣೆಯಿoದ ನೆರವೇರಿತು. ಈ ಸಂದರ್ಭದಲ್ಲಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು, ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಮ್., ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ, ತಾಲೂಕು ಸಮಿತಿ ಸದಸ್ಯರಾದ ಗಣೇಶ್ ಕುಮಾರ್ ಸಂಪಿಗೆನಗರ, ಪ್ರತಾಪ್ ಕುಮಾರ್ ಉದ್ಯಾವರ, ವಲಯ ಮೇಲ್ವಿಚಾರಕಿ ಪ್ರೇಮಾ, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಅಧ್ಯಕ್ಷರು, ಕಾರ್ಯದರ್ಶಿಗಳು,Continue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಅಂಬಲಪಾಡಿ ವಲಯ ಕಛೇರಿಯಲ್ಲಿ ಧನಲಕ್ಷ್ಮೀ ಪೂಜೆ”
ನೇಜಾರು ಅಮಾನುಷ ಹತ್ಯೆ ಪ್ರಕರಣ ಭೇದಿಸಿ ಆರೋಪಿಯನ್ನು ಬಂಧಿಸಿದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ: ಕುಯಿಲಾಡಿ
ಉಡುಪಿ: ಉಡುಪಿ ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಸಿಸಿ ಟಿವಿ ಹಾಗೂ ಇನ್ನಿತರ ಮೂಲಗಳ ಜಾಡು ಹಿಡಿದು ಕೊಲೆ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ. ಆರೋಪಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸಿ ಕಾನೂನಾತ್ಮಕ ಶಿಕ್ಷೆಗೆ ಗುರಿಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಉಡುಪಿContinue reading “ನೇಜಾರು ಅಮಾನುಷ ಹತ್ಯೆ ಪ್ರಕರಣ ಭೇದಿಸಿ ಆರೋಪಿಯನ್ನು ಬಂಧಿಸಿದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ: ಕುಯಿಲಾಡಿ”
ಅಂಗನವಾಡಿ ಕೇಂದ್ರ ಬoಕೇರಕಟ್ಟ ಅಂಬಲಪಾಡಿ : ಮಕ್ಕಳ ದಿನಾಚರಣೆ, ಸ್ಟೀಲ್ ಕವಾಟು ಕೊಡುಗೆ ಹಸ್ತಾಂತರ
ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ಬಂಕೇರಕಟ್ಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಪುಟಾಣಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಆಚರಿಸಲಾಯಿತು. ಸ್ಥಳೀಯ ಉದ್ಯಮಿ, ಶ್ರೀ ನಾಗರಾಜ ಸೇವಾ ಸಮಿತಿ ಬಂಕೇರಕಟ್ಟ ಇದರ ಗೌರವಾಧ್ಯಕ್ಷ ಎ.ವಿಶ್ವನಾಥ್ ಹೆಗ್ಡೆಯವರು ಕೊಡುಗೆ ನೀಡಿದ ಸ್ಟೀಲ್ ಕವಾಟನ್ನು ಅಂಗನವಾಡಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸ್ಥಳೀಯ ವಾರ್ಡ್ ಸದಸ್ಯ ರಾಜೇಶ್ ಸುವರ್ಣ, ಮಾಜಿ ಅಧ್ಯಕ್ಷರಾದ ರಾಜೇಂದ್ರ ಪಂದುಬೆಟ್ಟು, ಭಾರತಿ ಭಾಸ್ಕರ್, ಮಾಜಿ ಉಪಾಧ್ಯಕ್ಷರಾದ ಶಿವಕುಮಾರ್ ಅಂಬಲಪಾಡಿ, ಸೋಮನಾಥ್Continue reading “ಅಂಗನವಾಡಿ ಕೇಂದ್ರ ಬoಕೇರಕಟ್ಟ ಅಂಬಲಪಾಡಿ : ಮಕ್ಕಳ ದಿನಾಚರಣೆ, ಸ್ಟೀಲ್ ಕವಾಟು ಕೊಡುಗೆ ಹಸ್ತಾಂತರ”
ಬಿಜೆಪಿ ಹಿರಿಯ ಕಾರ್ಯಕರ್ತ ಕರಾಮತ್ ಆಲಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ
ಉಡುಪಿ: ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯರವರ ನಿಕಟವರ್ತಿ, ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗ ನಿವಾಸಿ ಕರಾಮತ್ ಆಲಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಮೋರ್ಚಾದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಜೊತೆ ಜೋಡಿಸುವ ಜೊತೆಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಸಮುದಾಯಕ್ಕೆ ತಲುಪಿಸುವ ಮೂಲಕ ಪಕ್ಷContinue reading “ಬಿಜೆಪಿ ಹಿರಿಯ ಕಾರ್ಯಕರ್ತ ಕರಾಮತ್ ಆಲಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ”
ಕುಟುಂಬ ರಾಜಕಾರಣದಲ್ಲೇ ಸುದೀರ್ಘ ಆಳ್ವಿಕೆ ನಡೆಸಿದ ಕಾಂಗ್ರೆಸ್ಸಿಗೆ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಮಹೇಶ್ ಠಾಕೂರ್
ಉಡುಪಿ: ಸ್ವಾತಂತ್ರ್ಯಾನಂತರ ನಕಲಿ ಗಾಂಧಿ ಪರಿವಾರದ ಸುಪರ್ದಿಯಲ್ಲೇ ಸುಧೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ ಕುಟುಂಬ ರಾಜಕಾರಣದ ಪಿತಾಮಹ ಎಂಬುದು ಜಗಜ್ಜಾಹೀರಾಗಿದೆ. ಜೀವನ ಪರ್ಯಂತ ಒಂದೇ ಕುಟುಂಬಕ್ಕೆ ಬಹು ಪರಾಕ್ ಹೇಳುವ ಕಾಂಗ್ರೆಸಿಗರಿಗೆ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ರವರ ಕುಟುಂಬ ರಾಜಕಾರಣದ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷ,Continue reading “ಕುಟುಂಬ ರಾಜಕಾರಣದಲ್ಲೇ ಸುದೀರ್ಘ ಆಳ್ವಿಕೆ ನಡೆಸಿದ ಕಾಂಗ್ರೆಸ್ಸಿಗೆ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಮಹೇಶ್ ಠಾಕೂರ್”
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ ನಾಂದಿ : ಕೆ.ಉದಯಕುಮಾರ್ ಶೆಟ್ಟಿ
ಉಡುಪಿ: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆಯನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಸ್ವಾಗತಿಸಿದ್ದಾರೆ. ಬಿ.ವೈ. ವಿಜಯೇಂದ್ರರವರ ಆಯ್ಕೆ ಪಕ್ಷದ ಶಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಯುವ ನಾಯಕರಾಗಿ, ನೀಡಿದ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಉತ್ತಮ ಫಲಿತಾಂಶ ದಾಖಲಿಸಿದ ಹಿರಿಮೆ ಬಿ.ವೈ. ರಾಘವೇಂದ್ರ ಅವರಿಗಿದೆ. ಅವರ ನಾಯಕತ್ವದಲ್ಲಿ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಲು ನಾಂದಿ ಹಾಡಿದಂತಾಗಿದೆ. ಬಿ.ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕೆ.ಉದಯContinue reading “ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ ನಾಂದಿ : ಕೆ.ಉದಯಕುಮಾರ್ ಶೆಟ್ಟಿ”
ಹಿರಿಯ ಪತ್ರಕರ್ತ, ಪರಿಸರ ಪ್ರೇಮಿ ಶಶಿಧರ್ ಹೆಮ್ಮಣ್ಣ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ
ಉಡುಪಿ: ಪತ್ರಿಕಾ ಮತ್ತು ದೃಶ್ಯ ಮಾಧ್ಯಮ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಜಿಲ್ಲೆಯ ಹಿರಿಯ ಪತ್ರಕರ್ತ, ಪರಿಸರ ಪ್ರೇಮಿ ಶಶಿಧರ್ ಹೆಮ್ಮಣ್ಣ ರವರ ಅಕಾಲಿಕ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ್ದ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹೆಮ್ಮಣ್ಣ ರವರು ಕ್ಷಿತಿಜ ಎಂಬ ವಾರ ಪತ್ರಿಕೆ ಆರಂಭಿಸಿ, ಈಟಿವಿ ಕನ್ನಡ, ಡಿಡಿ ನ್ಯೂಸ್ ವರದಿಗಾರರಾಗಿ, ಕನೆಕ್ಟ್ ಮೀಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ, ಪರಿಣಾಮಕಾರಿ ಕೃಷಿContinue reading “ಹಿರಿಯ ಪತ್ರಕರ್ತ, ಪರಿಸರ ಪ್ರೇಮಿ ಶಶಿಧರ್ ಹೆಮ್ಮಣ್ಣ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ”
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಸಂಘಟನಾ ಚತುರ, ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರರವರ ಆಯ್ಕೆಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸಿದೆ. ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯಾದ್ಯಂತ ಸದೃಢವಾಗಿ ಬೆಳೆದು ಇನ್ನಷ್ಟು ಎತ್ತರಕ್ಕೇರಿ ಮುಂದಿನ ಲೋಕಸಭಾ ಚುನಾವಣೆ ಸಹಿತ ಎಲ್ಲ ಚುನಾವಣೆಗಳಲ್ಲಿ ಭರ್ಜರಿ ವಿಜಯ ದಾಖಲಿಸುವುದು ನಿಶ್ಚಿತ. ನೂತನ ರಾಜ್ಯಾಧ್ಯಕ್ಷ ಜವಾಬ್ದಾರಿ ವಹಿಸಿಕೊಂಡಿರುವ ಬಿ.ವೈ. ವಿಜಯೇಂದ್ರರವರಿಗೆ ಹಾರ್ದಿಕ ಅಭಿನಂದನೆಯನ್ನು ಸಲ್ಲಿಸುವ ಜೊತೆಗೆ ಯುವ ನಾಯಕತ್ವದೊಂದಿಗೆ ಯುವ ಶಕ್ತಿಗೆContinue reading “ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ”