Design a site like this with WordPress.com
Get started

ಮಾ.12 : ಕುಂದಾಪುರದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶ ಯಶಸ್ವಿಗೊಳಿಸಲು ವೀಣಾ ಎಸ್. ಶೆಟ್ಟಿ ಕರೆ

News By: ಜನತಾಲೋಕವಾಣಿನ್ಯೂಸ್ ಉಡುಪಿ:ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷದ ಸೂಚನೆಯಂತೆ ಮಾ.12 ರವಿವಾರ ಮಧ್ಯಾಹ್ನ 3.00 ಗಂಟೆಗೆ ಕುಂದಾಪುರದ ನೆಹರೂ ಮೈದಾನದಲ್ಲಿ ಬೃಹತ್ ಜಿಲ್ಲಾ ಮಹಿಳಾ ಸಮಾವೇಶ ನಡೆಯಲಿದೆ. ಸುಮಾರು 15,000ಕ್ಕೂ ಮಿಕ್ಕಿ ಮಹಿಳೆಯರ ಸಮಾಗಮದೊಂದಿಗೆ ನಡೆಯಲಿರುವ ಈ ಸಮಾವೇಶವನ್ನು ಸಂಘಟಿತ ಪ್ರಯತ್ನದ ಮೂಲಕ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಉಡುಪಿ ನಗರ ಮಹಿಳಾ ಮೋರ್ಚಾದ ಪೂರ್ವಭಾವಿContinue reading “ಮಾ.12 : ಕುಂದಾಪುರದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶ ಯಶಸ್ವಿಗೊಳಿಸಲು ವೀಣಾ ಎಸ್. ಶೆಟ್ಟಿ ಕರೆ”

ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ – ಜನ ಬಿಜೆಪಿ ಪರ ಎಂದು ಮತ್ತೆ ಸಾಬೀತು – ಶ್ರೀಕಾಂತ ನಾಯಕ್

ಕಾಪು: ಈಶಾನ್ಯ ರಾಜ್ಯಗಳ ಫಲಿತಾಂಶ ಬಂದಿದ್ದು ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದ್ದು ನಾಲ್ಕನೆಯ ರಾಜ್ಯದಲ್ಲಿಯೂ ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಬಿಜೆಪಿ ಬಿಟ್ಟರೆ ಬೇರೆ ಕೆಲವು ಪ್ರಾದೇಶಿಕ ಪಕ್ಷಗಳು ಹಲವು ಸ್ಥಾನಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದ್ದರೆ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಮಕಾಡೆ ಮಲಗಿದೆ. ಕೇವಲ‌ ಹತ್ತು ವರ್ಷಗಳ ಹಿಂದೆ ಈಶಾನ್ಯ ಭಾಗದಲ್ಲಿ ದರ್ಪ ಮೆರೆದು ಜನರನ್ನು ಕತ್ತಲೆಯಲ್ಲಿಟ್ಟು ಅಧಿಕಾರದ ಸವಾರಿ‌ ನಡೆಸಿತ್ತೋ ಇಂದು ಅದರ ಅಡ್ರೆಸ್ ಇಲ್ಲದಂತೆ ಜನ ಮನೆಗೆ ಕಳುಹಿಸಿದ್ದಾರೆ. ಈ ಭಾಗದಲ್ಲಿContinue reading “ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ – ಜನ ಬಿಜೆಪಿ ಪರ ಎಂದು ಮತ್ತೆ ಸಾಬೀತು – ಶ್ರೀಕಾಂತ ನಾಯಕ್”

ಈಶಾನ್ಯ ರಾಜ್ಯಗಳ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕುಯಿಲಾಡಿ ಸುರೇಶ್ ನಾಯಕ್

News By: ಜನತಾಲೋಕವಾಣಿನ್ಯೂಸ್ ಉಡುಪಿ: ಈಶಾನ್ಯ ರಾಜ್ಯಗಳ ಚುನಾವಣೆಯ ಪಲಿತಾಂಶ ಬಿಜೆಪಿಗೆ ಹೊಸ ಚೈತನ್ಯ ತುಂಬಿದೆ. ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮಗದೊಮ್ಮೆ ಸರಕಾರ ರಚಿಸಲಿದೆ. ಮೇಘಾಲಯದಲ್ಲೂ ಪಕ್ಷದ ಶಕ್ತಿ ಹೆಚ್ಚಿದೆ. ಈ ಚುನಾವಣಾ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿಗಳಿಸಿದ ಪ್ರಯುಕ್ತ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಸಂಭ್ರಮಾಚರಣೆಯ ಅಧ್ಯಕ್ಷತೆ ವಹಿಸಿContinue reading “ಈಶಾನ್ಯ ರಾಜ್ಯಗಳ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕುಯಿಲಾಡಿ ಸುರೇಶ್ ನಾಯಕ್”

ಕಾಪು ವಿಧಾನಸಭಾ ಕ್ಷೇತ್ರ: ಚುನಾವಣಾ ಪೂರ್ವಭಾವಿ ಸಭೆ

News By: ಜನತಾಲೋಕವಾಣಿನ್ಯೂಸ್ ಕಾಪು: ಚುನಾವಣಾ ಪೂರ್ವಭಾವಿಯಾಗಿ ಕಾಪು ಕ್ಷೇತ್ರದಲ್ಲಿ ಎಲ್ಲ ಪದಾಧಿಕಾರಿಗಳ ಸರಣಿ ಸಭೆ ನಡೆಯಿತು. ಪದಾಧಿಕಾರಿಗಳ, ಮೋರ್ಚಗಳ, ಮಹಾಶಕ್ತಿಕೇಂದ್ರಗಳ, ಹಾಗು ಹಲವು ಅಪೇಕ್ಷಿತ ಪದಾಧಿಕಾರಿಗಳ ಸಭೆಗಳು ಪತ್ಯೇಕವಾದ ಅವಧಿಗಳೊಂದಿಗೆ ನಡೆಯಿತು. ಸುಮಾರು ಮುನ್ನೂರರಷ್ಟು ಸಂಖ್ಯೆ ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸುವ ದ್ರಢ ಸಂಕಲ್ಪ ಹೊತ್ತು ತೆರಳಿದರು. ಈ ಅವಧಿಗಳಲ್ಲಿ ಆಯಾ ಪದಾಧಿಕಾರಿಗಳ ಜವಾಬ್ದಾರಿಗಳು, ಹಾಗೂ ಚುನಾವಣೆ ಗೆಲ್ಲಬೇಕಾದ ಅನಿವಾರ್ಯತೆ ಹಾಗೂ ಕಾರ್ಯಕತಂತ್ರಗಳ ಬಗ್ಗೆ ವಿಮರ್ಶೆ ಹಾಗೂ ಚರ್ಚೆ ನಡೆಯಿತು. ಯಾವುದೇContinue reading “ಕಾಪು ವಿಧಾನಸಭಾ ಕ್ಷೇತ್ರ: ಚುನಾವಣಾ ಪೂರ್ವಭಾವಿ ಸಭೆ”

ಉಡುಪಿ ಚಿಕ್ಕಮಗಳೂರು ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ರೇಲ್ವೆ ಇಲಾಖೆ, ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗದ ಜನರ ಬೇಡಿಕೆಯನ್ನು ಕೇಂದ್ರ ಸರ್ಕಾರದ ರೇಲ್ವೆ ಇಲಾಖೆ ಈಡೇರಿಸಿದೆ. ಈ ಕೆಳಗಿನ ರೈಲುಗಳ ನಿಲುಗಡೆಗೆ ಬಹುದಿನಗಳಿಂದ ಜನರ ಬೇಡಿಕೆಯಿದ್ದು ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ರೇಲ್ವೆ ಸಚಿವರಿಗೆ ಪತ್ರ ಬರೆದು, ಸಭೆ ನಡೆಸಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಉಡುಪಿ ಹಾಗೂContinue reading “ಉಡುಪಿ ಚಿಕ್ಕಮಗಳೂರು ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ರೇಲ್ವೆ ಇಲಾಖೆ,
ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ”

ನಿಧನ : ಶ್ರೀಮತಿ ರಾಧು ಪೂಜಾರ್ತಿ ಅಂಬಲಪಾಡಿ

ಉಡುಪಿ: ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದ ಬಳಿಯ ನಿವಾಸಿ ದಿ! ತೋಮ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ರಾಧು ಪೂಜಾರ್ತಿ(95 ವರ್ಷ) ಇವರು ಫೆ.27ರಂದು ಸ್ವಗೃಹದಲ್ಲಿ ನಿಧನರಾದರು. ಸುಧೀರ್ಘ ಅವಧಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಇವರು ಭಜನಾ ಮಂದಿರದ ವಾರದ ಭಜನಾ ಪೂಜೆಯಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಿದ್ದು ಜನಾನುರಾಗಿಯಾಗಿದ್ದರು. ಇವರು ಪುತ್ರ ಟೈಲರ್ ಶಂಕರ ಪೂಜಾರಿ ಸಹಿತ ಇಬ್ಬರು ಪುತ್ರಿಯರು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ.

ರಾಜ್ಯ ಬಜೆಟ್ ದಿಟ್ಟ ನಿರ್ಧಾರದ ಸಮತೋಲಿತ ಅಭಿವೃದ್ಧಿ ಪರ ಬಜೆಟ್ : ಉಡುಪಿ ಜಿಲ್ಲಾ ಬಿಜೆಪಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ 2023ನೇ ಸಾಲಿನ ರಾಜ್ಯ ಬಜೆಟ್ ಎಲ್ಲಾ ವರ್ಗದ ಜನತೆ ಹಾಗೂ ಎಲ್ಲಾ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ನೀಡಿರುವ ದಿಟ್ಟ ನಿರ್ಧಾರದ, ಸಮತೋಲಿತ, ಅಭಿವೃದ್ಧಿ ಪರ ಬಜೆಟ್ ಆಗಿದೆ ಎಂದು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ. ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ನೇರವಾಗಿContinue reading “ರಾಜ್ಯ ಬಜೆಟ್ ದಿಟ್ಟ ನಿರ್ಧಾರದ ಸಮತೋಲಿತ ಅಭಿವೃದ್ಧಿ ಪರ ಬಜೆಟ್ : ಉಡುಪಿ ಜಿಲ್ಲಾ ಬಿಜೆಪಿ”

ಕಾಂಗ್ರೆಸ್ಸಿನ ಅಪಪ್ರಚಾರಗಳಿಗೆ ಕಡಿವಾಣದ ಜೊತೆಗೆ ಅವಿಭಜಿತ ದ.ಕ. ಜಿಲ್ಲೆಯ ಎಲ್ಲಾ ಸ್ಥಾನದ ಗೆಲುವಿಗೆ ಶ್ರಮಿಸಿ: ಕುಯಿಲಾಡಿಬಿಜೆಪಿ ಮಂಗಳೂರು ವಿಭಾಗ ಮಟ್ಟದ ಮಾಧ್ಯಮ, ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯಾಗಾರ

News By: ಜನತಾಲೋಕವಾಣಿನ್ಯೂಸ್ ಉಡುಪಿ: 2014ರ ಚುನಾವಣೆಯನ್ನು ಅವಲೋಕಿಸಿದರೆ ಸಾಮಾಜಿಕ ಜಾಲತಾಣದ ಅಗತ್ಯತೆ ಮತ್ತು ಅನಿವಾರ್ಯತೆಯ ಮಹತ್ವ ತಿಳಿಯುತ್ತದೆ. ಇಂದು ಸಾಮಾಜಿಕ ಜಾಲತಾಣದ ಮೂಲಕ ಯಾವುದೇ ಕ್ಷಣದ ಘಟನೆಗಳನ್ನು ಗಮನಿಸಿ ಅದೇ ಕ್ಷಣಕ್ಕೆ ಸ್ಪಂದಿಸುವ ಪ್ರಕ್ರಿಯೆ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪ್ರಮುಖರು ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳ ಅಪಪ್ರಚಾರ ಹಾಗೂ ಸುಳ್ಳಿನ ಜಾಲವನ್ನು ಭೇದಿಸಿ ಕಡಿವಾಣ ಹಾಕುವ ಜೊತೆಗೆ ಸರಕಾರದ ಅಭಿವೃದ್ಧಿ ಕೆಲಸ ಕಾರ್ಯಗಳು ಹಾಗೂ ಜನಪರ ಯೋಜನೆಗಳನ್ನು ಪ್ರಚುರಪಡಿಸಿContinue reading “ಕಾಂಗ್ರೆಸ್ಸಿನ ಅಪಪ್ರಚಾರಗಳಿಗೆ ಕಡಿವಾಣದ ಜೊತೆಗೆ ಅವಿಭಜಿತ ದ.ಕ. ಜಿಲ್ಲೆಯ ಎಲ್ಲಾ ಸ್ಥಾನದ ಗೆಲುವಿಗೆ ಶ್ರಮಿಸಿ: ಕುಯಿಲಾಡಿಬಿಜೆಪಿ ಮಂಗಳೂರು ವಿಭಾಗ ಮಟ್ಟದ ಮಾಧ್ಯಮ, ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯಾಗಾರ”

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ ರಾಜ್‌ಕುಮಾರ್‌ ಬಹರೈನ್, ಅಂಬಲಪಾಡಿ ಇವರಿಗೆ ಹುಟ್ಟೂರ ಸನ್ಮಾನ ‘ರಾಜಾಭಿನಂದನೆ’

News By: ಜನತಾಲೋಕವಾಣಿನ್ಯೂಸ್ ಉಡುಪಿ, ಫೆ.21: ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ ರಾಜ್ ಕುಮಾರ್‌ ಬಹರೈನ್, ಅಂಬಲಪಾಡಿ ಇವರಿಗೆ ಹುಟ್ಟೂರ ಸಮ್ಮಾನ ‘ರಾಜಾಭಿನಂದನೆ’ ಉಡುಪಿ ಪುರಭವನದಲ್ಲಿ ನಡೆಯಿತು. ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಂ ಧರ್ಮಸ್ಥಳ ಇದರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರು ಮಾತನಾಡಿ, ಅಂಬಲಪಾಡಿ ನಿವಾಸಿ ದಿ। ಭಾಸ್ಕರ್ ಪಾಲನ್, ಸುಂದರಿ ಪೂಜಾರ್ತಿಯವರ ಜೇಷ್ಠ ಪುತ್ರರಾಗಿ ಸಮಾಜ ಸೇವೆ ಹಾಗೂ ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿಯ ಕಂಪನ್ನು ಅರಬ್ ರಾಷ್ಟ್ರದಲ್ಲಿContinue reading “ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ ರಾಜ್‌ಕುಮಾರ್‌ ಬಹರೈನ್, ಅಂಬಲಪಾಡಿ ಇವರಿಗೆ ಹುಟ್ಟೂರ ಸನ್ಮಾನ ‘ರಾಜಾಭಿನಂದನೆ’”

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪಿಸಿ ಆದೇಶ ಬಿಡುಗಡೆ; ನುಡಿದಂತೆ ನಡೆದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಈಡಿಗ-ಬಿಲ್ಲವ ಸೇರಿ 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಿ ಆದೇಶ ಹೊರಡಿಸುವ ಮೂಲಕ ನುಡಿದಂತೆ ನಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ ಸಲ್ಲಿಸಿದೆ. ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ ಸ್ಥಾಪಿಸಿ ಆದೇಶ ದೊರಕಿರುವ ಹಿನ್ನೆಲೆಯಲ್ಲಿ ಬಿಲ್ಲವ, ಈಡಿಗ ಸಹಿತ 26 ಜಾತಿಗಳ ಶೈಕ್ಷಣಿಕ ಮತ್ತು ಔದ್ಯೋಗಿಕ ಸವಲತ್ತುಗಳ ಜೊತೆಗೆ ಈ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಅನೇಕContinue reading “ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪಿಸಿ ಆದೇಶ ಬಿಡುಗಡೆ; ನುಡಿದಂತೆ ನಡೆದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”