ಸೆ.17ರಿಂದ ಅ.2 : ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಸೇವಾ ಪಾಕ್ಷಿಕ ಅಭಿಯಾನ’

ಉಡುಪಿ: ಸೆ.17 ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯಿಂದ ಮೊದಲ್ಗೊಂಡು ಅ.2 ಗಾಂಧಿ ಜಯಂತಿ ಆಚರಣೆಯ ವರೆಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲೆಯಾದ್ಯಂತ ವಿವಿಧ ಸೇವಾ ಚಟುವಟಿಕೆಗಳ ಮೂಲಕ ಸೇವಾ ಪಾಕ್ಷಿಕ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣದ ನಿಟ್ಟಿನಲ್ಲಿ ನಡೆಯುವ ನಡೆಯುವ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿContinue reading “ಸೆ.17ರಿಂದ ಅ.2 : ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಸೇವಾ ಪಾಕ್ಷಿಕ ಅಭಿಯಾನ’”

ಸನಾತನ ಧರ್ಮದ ಬಗ್ಗೆ ಕೀಳಾಗಿ ವರ್ತಿಸುವ ಐಎನ್ಡಿಐಎ ಮೈತ್ರಿಕೂಟ ಹುಚ್ಚರ ಸಂತೆಯಂತಾಗಿದೆ: ಕುಯಿಲಾಡಿ ಆಕ್ರೋಶ

ಉಡುಪಿ: ‘ಸನಾತನ ಧರ್ಮ ನಿರ್ಮೂಲನೆಗಾಗಿಯೇ ಐಎನ್ಡಿಐಎ ಮೈತ್ರಿಕೂಟ’ ಎಂದಿರುವ ತಮಿಳುನಾಡು ಸಚಿವ ಪೊನ್ಮುಡಿಗೆ ಮಾನಸಿಕ ಚಿಕಿತ್ಸೆಯ ಅಗತ್ಯವಿದೆ. ದಿನಕ್ಕೊಂದು ರೀತಿಯ ವಿಲಕ್ಷಣಕಾರಿ ಹೇಳಿಕೆಗಳನ್ನು ನೀಡುತ್ತಿರುವ ವಿಪಕ್ಷಗಳ ಐಎನ್ಡಿಐಎ ಮೈತ್ರಿಕೂಟ ಹುಚ್ಚರ ಸಂತೆಯಂತಾಗಿದೆ. ಕಾಂಗ್ರೆಸ್ ಸಹಿತ ಐಎನ್ಡಿಐಎ ಮೈತ್ರಿಕೂಟಕ್ಕೆ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ನಿರ್ದಿಷ್ಟ ದೂರದರ್ಶಿತ್ವದ ಚಿಂತನೆಗಳಿಲ್ಲದೆ, ಕೇವಲ ಪ್ರಧಾನಿ ಮೋದಿಯವರನ್ನು ಗುರಿಯಾಗಿಸಿಕೊಂಡು 26 ವಿಪಕ್ಷಗಳು ರಚಿಸಿರುವ ಐಎನ್ಡಿಐಎ ಮೈತ್ರಿಕೂಟ, ಪ್ರಧಾನಿ ನರೇಂದ್ರContinue reading “ಸನಾತನ ಧರ್ಮದ ಬಗ್ಗೆ ಕೀಳಾಗಿ ವರ್ತಿಸುವ ಐಎನ್ಡಿಐಎ ಮೈತ್ರಿಕೂಟ ಹುಚ್ಚರ ಸಂತೆಯಂತಾಗಿದೆ: ಕುಯಿಲಾಡಿ ಆಕ್ರೋಶ”

ಉಡುಪಿ ಬ್ರಹ್ಮಗಿರಿಯ ಆದರ್ಶ ಸೊಸೈಟಿಯಿಂದ ಬಿಜೆಪಿ ಮುಖಂಡನ ಮೇಲೆ ಸುಳ್ಳು ದೂರು ದಾಖಲು, ಬ್ಲಾಕ್ಮೇಲ್ ತಂತ್ರ: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ: ಇತ್ತೀಚೆಗೆ ಉಡುಪಿ ಬ್ರಹ್ಮಗಿರಿಯ ಆದರ್ಶ ಸೊಸೈಟಿಯಲ್ಲಿ ನಡೆದಿದೆ ಎನ್ನಲಾದ ನಕಲಿ ಚಿನ್ನ ಅಡಮಾನ ಸಾಲದ ಪ್ರಕರಣದಲ್ಲಿ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬೂಬಕರ್ ಹೆಸರನ್ನು ಉದ್ದೇಶಪೂರ್ವಕವಾಗಿ ಎಳೆದು ತಂದು ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಬ್ಲಾಕ್ಮೇಲ್ ತಂತ್ರ ಅನುಸರಿಸಿರುವ ಕೃತ್ಯ ಖಂಡನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಪ್ರಕರಣ ನಡೆದ ಸಂದರ್ಭ ಸೆ.5ರಂದು ದಾವೂದ್ ಅಬೂಬಕರ್ ಉಡುಪಿಯಲ್ಲಿ ಇಲ್ಲದೇ ಇದ್ದರೂ ಅವರ ಹೆಸರನ್ನು ದುರುದ್ದೇಶದಿಂದ ಪೊಲೀಸ್ ದೂರಿನಲ್ಲಿ ಸೇರಿಸಲಾಗಿದೆ ಎಂದು ತಿಳಿದುContinue reading “ಉಡುಪಿ ಬ್ರಹ್ಮಗಿರಿಯ ಆದರ್ಶ ಸೊಸೈಟಿಯಿಂದ ಬಿಜೆಪಿ ಮುಖಂಡನ ಮೇಲೆ ಸುಳ್ಳು ದೂರು ದಾಖಲು, ಬ್ಲಾಕ್ಮೇಲ್ ತಂತ್ರ: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ”

ವ್ಯವಸ್ಥಿತ ಕಾರ್ಯಾಲಯದ ಮೂಲಕ ಸದೃಢ ಪಕ್ಷ ಸಂಘಟನೆಗೆ ಒತ್ತು : ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಬಿಜೆಪಿ ಕೊಡಗು ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆ

ಉಡುಪಿ: ಬಿಜೆಪಿ ಕೇಂದ್ರ ಸಮಿತಿಯ ನಿರ್ಣಯದಂತೆ, ರಾಜ್ಯಾದ್ಯಂತ ವ್ಯವಸ್ಥಿತ ಕಾರ್ಯಾಲಯವನ್ನು ಸಜ್ಜುಗೊಳಿಸಿ, ವ್ಯಾಪಕ ಜನಸಂಪರ್ಕದೊಂದಿಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡುವ ಕಾರ್ಯ ಚಟುವಟಿಕೆಗೆ ಚಾಲನೆ ನೀಡಲಾಗುತ್ತಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಬಿಜೆಪಿ ಕಾರ್ಯಾಲಯ ನಿರ್ವಹಣಾ ರಾಜ್ಯ ಸಮಿತಿ ಸದಸ್ಯ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಕೊಡಗು ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆಯ ನೇತೃತ್ವ ವಹಿಸಿContinue reading “ವ್ಯವಸ್ಥಿತ ಕಾರ್ಯಾಲಯದ ಮೂಲಕ ಸದೃಢ ಪಕ್ಷ ಸಂಘಟನೆಗೆ ಒತ್ತು : ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಬಿಜೆಪಿ ಕೊಡಗು ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆ”

ಕೊನೆಗೂ ಕಾಂಗ್ರೆಸಿಗರ ಬಾಯಿಯಿಂದ ಸತ್ಯ ಹೊರ ಬಿದ್ದಿದೆ; ಸಿದ್ದು ಜನ್ಮ ಜಾತಕ ಜಾಲಾಡಿಸಿದ ಬಿ.ಕೆ. ಹರಿಪ್ರಸಾದ್ ಗೆ ಧನ್ಯವಾದ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ‘ಕೈಗೆ ಹ್ಯೂಬ್ಲೋಟ್ ವಾಚ್ ಕಟ್ಟಿಕೊಂಡು, ಪಂಚೆಯೊಳಗೆ ಖಾಕಿ ಚಡ್ಡಿ ಧರಿಸುವುದು ಸಮಾಜವಾದವಲ್ಲ’ ಎಂದು ಮಾರ್ಮಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮ ಜಾತಕ ಜಾಲಾಡಿಸಿರುವ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ರವರಿಗೆ ಧನ್ಯವಾದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಅಧಿಕಾರಕ್ಕಾಗಿ ಏನು ಮಾಡಲೂ ಹೇಸದ ಸಿದ್ದರಾಮಯ್ಯ, ‘ಅಧಿಕಾರ ಸಿಕ್ಕಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಅಡ್ವಾಣಿಯವರನ್ನು ಬೇಟಿ ಮಾಡಿ ಬಿಜೆಪಿ ಸೇರಲು ಹೋಗಿದ್ದು, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ಬಿಜೆಪಿ ಮುಖಂಡContinue reading “ಕೊನೆಗೂ ಕಾಂಗ್ರೆಸಿಗರ ಬಾಯಿಯಿಂದ ಸತ್ಯ ಹೊರ ಬಿದ್ದಿದೆ; ಸಿದ್ದು ಜನ್ಮ ಜಾತಕ ಜಾಲಾಡಿಸಿದ ಬಿ.ಕೆ. ಹರಿಪ್ರಸಾದ್ ಗೆ ಧನ್ಯವಾದ : ಕುಯಿಲಾಡಿ ಸುರೇಶ್ ನಾಯಕ್”

ಬಿಜೆಪಿ ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆ; ರಾಜ್ಯ ತಂಡದಿಂದ ಪರಿಶೀಲನೆ

ಉಡುಪಿ: ವ್ಯವಸ್ಥಿತ ಕಾರ್ಯಾಲಯದ ಮೂಲಕ ಕಾರ್ಯ ವಿಸ್ತಾರ ಮಾಡುವ ಬಿಜೆಪಿ ಕೇಂದ್ರ ಸಮಿತಿಯ ನಿರ್ಣಯದಂತೆ, ಉಡುಪಿ ಜಿಲ್ಲಾ ಬಿಜೆಪಿ ಸ್ಥಿರಾಸ್ತಿಯನ್ನು ಖರೀದಿಸಿದ್ದು, ನೂತನ ಕಟ್ಟಡ ನಿರ್ಮಾಣದೊಂದಿಗೆ ಸುಸಜ್ಜಿತ ಕಾರ್ಯಾಲಯವನ್ನು ಹೊಂದಲಿದೆ. ಈ ನೆಲೆಯಲ್ಲಿ ಜಿಲ್ಲಾ ಕಾರ್ಯಾಲಯದ ಸುವ್ಯವಸ್ಥೆಗಳ ಅವಲೋಕನ ಮತ್ತು ಅನುಷ್ಠಾನಕ್ಕಾಗಿ ರಾಜ್ಯ ತಂಡದ ಜೊತೆಗೆ ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಕಾರ್ಯಾಲಯ ನಿರ್ವಹಣೆ ರಾಜ್ಯ ತಂಡದ ಸದಸ್ಯ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರುContinue reading “ಬಿಜೆಪಿ ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆ; ರಾಜ್ಯ ತಂಡದಿಂದ ಪರಿಶೀಲನೆ”

ಕಾಂಗ್ರೆಸ್ ಗೆ ‘ಇಂಡಿಯಾ’ದ ಮೇಲಿರುವ ಮೋಹ ‘ಭಾರತ’ದ ಮೇಲೆ ಯಾಕಿಲ್ಲಾ : ಕುಯಿಲಾಡಿ ಪ್ರಶ್ನೆ

ಉಡುಪಿ: ಸನಾತನ ಸಂಸ್ಕೃತಿ ಹಾಗೂ ವೇದ ಪುರಾಣಗಳ ಕಾಲದಿಂದಲೇ ‘ಭರತ ಖಂಡ’ ‘ಭರತವರ್ಷ’ ಎಂದು ಕರೆಯಲ್ಪಟ್ಟಿರುವ ‘ಪುಣ್ಯ ಭೂಮಿ’, ‘ದೇವ ಭೂಮಿ’ ಭಾರತ. ದೇಶದ ಸಂವಿಧಾನದ ಪರಿಚ್ಛೇದ 1ರಲ್ಲಿ ಉಲ್ಲೇಖಗೊಂಡಿರುವ ನಮ್ಮ ದೇಶದ ಮೂಲ ಹೆಸರು ಭಾರತ. ಆದರೆ ಕಾಂಗ್ರೆಸ್ಸಿಗೆ ಮಾತ್ರ ‘ಭಾರತ’ದ ಮೇಲೆ ದ್ವೇಷ; ‘ಇಂಡಿಯಾ’ದ ಮೇಲೆ ಅತೀವ ಮೋಹ ಯಾಕೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗ ಸಮ್ಮೇಳನದ ನಿಯೋಗಕ್ಕೆ ರಾಷ್ಟ್ರಪತಿ ಭವನದಿಂದ ಕಳುಹಿಸಲಾದContinue reading “ಕಾಂಗ್ರೆಸ್ ಗೆ ‘ಇಂಡಿಯಾ’ದ ಮೇಲಿರುವ ಮೋಹ ‘ಭಾರತ’ದ ಮೇಲೆ ಯಾಕಿಲ್ಲಾ : ಕುಯಿಲಾಡಿ ಪ್ರಶ್ನೆ”

ವಿವಿಧ ಅಭಿಯಾನಗಳ ಜೊತೆಗೆ ಪಕ್ಷದ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡಲು ಕುಯಿಲಾಡಿ ಕರೆಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ

ಉಡುಪಿ: ರಾಜ್ಯ ಬಿಜೆಪಿ ಸೂಚನೆಯಂತೆ ಪ್ರಮುಖ 5 ಅಭಿಯಾನಗಳಾದ ಶಂಖನಾದ, ನನ್ನ ಮಣ್ಣು ನನ್ನ ದೇಶ, ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆ, ನೈಋತ್ಯ ಶಿಕ್ಷಕ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣಾ ಸಿದ್ಧತೆ ಹಾಗೂ ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆ ಇದರ ಯಶಸ್ವೀ ನಿರ್ವಹಣೆಯ ಜೊತೆಗೆ ಪಕ್ಷದ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯContinue reading “ವಿವಿಧ ಅಭಿಯಾನಗಳ ಜೊತೆಗೆ ಪಕ್ಷದ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡಲು ಕುಯಿಲಾಡಿ ಕರೆಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ”

ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಪಕ್ಷಗಳ ಐಎನ್ಡಿಐಎ ಒಕ್ಕೂಟದ ಹಿಂದೂ ವಿರೋಧಿ ಮನಸ್ಥಿತಿಯನ್ನು ಸಾಬೀತುಪಡಿಸಿದೆ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕಾಂಗ್ರೆಸ್ ಸಹಿತ ವಿಪಕ್ಷಗಳು ಸೇರಿ ರಚಿಸುತ್ತಿರುವ ಐಎನ್ಡಿಐಎ ಒಕ್ಕೂಟ ಕೇವಲ ಪ್ರಧಾನಿ ಮೋದಿ ವಿರುದ್ಧ ಮಾತ್ರವಲ್ಲದೆ, ಭಾರತದ ಆತ್ಮದಂತಿರುವ ಸನಾತನ ಹಿಂದೂ ಧರ್ಮದ ವಿರುದ್ಧವಾಗಿದೆ. ಇದಕ್ಕೆ ಪೂರಕವಾಗಿ ತಮಿಳುನಾಡು ಮುಖ್ಯಮಂತ್ರಿ ಎಮ್.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧ ನೀಡಿರುವ ಹೇಳಿಕೆ ಐಎನ್ಡಿಐಎ ಒಕ್ಕೂಟ ಅಕ್ಷರಶಃ ಹಿಂದೂ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ‘ಸನಾತನ ಹಿಂದೂ ಧರ್ಮವು ಡೆಂಗ್ಯೂ, ಮಲೇರಿಯಾ, ಕೊರೊನಾ ವೈರಸ್Continue reading “ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಪಕ್ಷಗಳ ಐಎನ್ಡಿಐಎ ಒಕ್ಕೂಟದ ಹಿಂದೂ ವಿರೋಧಿ ಮನಸ್ಥಿತಿಯನ್ನು ಸಾಬೀತುಪಡಿಸಿದೆ : ಕುಯಿಲಾಡಿ ಸುರೇಶ್ ನಾಯಕ್”

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ

ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಾ ಪೂಜೆ ಮತ್ತು ಸಾಮೂಹಿಕ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು. ಶ್ರೀ ಗುರು ಜಯಂತಿ ಆಚರಣೆ ಪ್ರಯುಕ್ತ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಉತ್ತಮ ಅಂಕ ಗಳಿಸಿ ಉನ್ನತ ವ್ಯಾಸಂಗ ಮಾಡುತ್ತಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನContinue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ”

Design a site like this with WordPress.com
Get started