ಉಡುಪಿ: ಉಡುಪಿ ಪ್ರಗತಿ ಸೌಧದಲ್ಲಿರುವ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ(ರಿ.) ಇದರ ಉಡುಪಿ ಪ್ರಾದೇಶಿಕ ಹಾಗೂ ಜಿಲ್ಲಾ ಕಛೇರಿಯಲ್ಲಿ ಪ್ರಾದೇಶಿಕ ನಿರ್ದೇಶಕರು ಹಾಗೂ ಜಿಲ್ಲಾ ನಿರ್ದೇಶಕರ ಮಾರ್ಗದರ್ಶನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಎ.ಶಿವಕುಮಾರ್ ಅಂಬಲಪಾಡಿ ಧ್ವಜಾರೋಹಣವನ್ನು ನೆರವೇರಿಸಿ, ವೀರ ಯೋಧರು ಹಾಗೂ ಹುತಾತ್ಮರನ್ನು ನೆನೆಸಿಕೊಂಡು, ದೇಶ ನನಗಾಗಿ ಏನು ಕೊಟ್ಟಿದೆ ಎನ್ನುವುದರ ಬದಲು ದೇಶಕ್ಕಾಗಿ ನಾನೇನು ಕೊಟ್ಟಿದ್ದೇನೆ ಎನ್ನುವ ಚಿಂತನೆಯನ್ನು ಜಾಗೃತಗೊಳಿಸಿ ಯಾವುದಾದರೊಂದು ರೀತಿಯಲ್ಲಿ ದೇಶContinue reading “ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಪ್ರಾದೇಶಿಕ/ಜಿಲ್ಲಾ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ”
Category Archives: Uncategorized
ಉಡುಪಿ ಜಿಲ್ಲಾ ಬಿಜೆಪಿ: 77ನೇ ಸ್ವಾತಂತ್ರ್ಯ ದಿನಾಚರಣೆ; ಧ್ವಜಾರೋಹಣ
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಧ್ವಜಾರೋಹಣಗೈದು ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಹಿರಿಯರನ್ನು ಸ್ಮರಿಸಿದರು. ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಸಭೆಯನ್ನುದ್ದೇಶಿಸಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಬಿ.ರವಿ ಅಮೀನ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಆತ್ರಾಡಿ ಸತ್ಯಾನಂದContinue reading “ಉಡುಪಿ ಜಿಲ್ಲಾ ಬಿಜೆಪಿ: 77ನೇ ಸ್ವಾತಂತ್ರ್ಯ ದಿನಾಚರಣೆ; ಧ್ವಜಾರೋಹಣ”
ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2023-25ನೇ ಸಾಲಿನ ಅಧ್ಯಕ್ಷರಾಗಿ ಎ.ಶಿವಕುಮಾರ್ ಅಂಬಲಪಾಡಿ ಆಯ್ಕೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2023-25ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಎ.ಶಿವಕುಮಾರ್ ಅಂಬಲಪಾಡಿ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು, ಉಪಾಧ್ಯಕ್ಷರಾಗಿ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್, ಕೋಶಾಧಿಕಾರಿಯಾಗಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾಗಿ ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಆಡಳಿತ ಸಮಿತಿಯ ಸದಸ್ಯರಾಗಿ ಎ.ಮುದ್ದಣ್ಣ ಪೂಜಾರಿ, ಸುಧಾಕರ್ ಎ., ರಾಜೇಂದ್ರ ಪಂದುಬೆಟ್ಟು, ಭಾಸ್ಕರ ಅಂಚನ್,Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2023-25ನೇ ಸಾಲಿನ ಅಧ್ಯಕ್ಷರಾಗಿ ಎ.ಶಿವಕುಮಾರ್ ಅಂಬಲಪಾಡಿ ಆಯ್ಕೆ”
ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಕುಯಿಲಾಡಿ ಕರೆ
ಉಡುಪಿ: 2024ರ ಲೋಕಸಭಾ ಚುನಾವಣೆಗೆ ಪಕ್ಷವನ್ನು ಮತ್ತು ಕಾರ್ಯಕರ್ತರನ್ನು ಸಜ್ಜುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ನಡೆಯುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಪಕ್ಷ ನೀಡಿರುವ ಪ್ರಮುಖ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸುವ ಮೂಲಕ ಮಗದೊಮ್ಮೆ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಅತ್ಯಂತ ಹೆಚ್ಚಿನ ಅಂತರದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರನ್ನು ಗೆಲ್ಲಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ಮಹತ್ಕಾರ್ಯ ಆಗಬೇಕಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿContinue reading “ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಕುಯಿಲಾಡಿ ಕರೆ”
ಆ.13: ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ, ಬಿಲ್ಲವ ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ‘ಆಟಿಡೊಂಜಿ ಕೂಟ’
ಉಡುಪಿ: ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಇದರ ಸಹಯೋಗದಲ್ಲಿ ಆ.13 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ‘ಆಟಿಡೊಂಜಿ ಕೂಟ’ (ಆಟಿ ತಿಂಗಳ ವೈಶಿಷ್ಟ್ಯ ಮತ್ತು ಆಹಾರ ಪದ್ಧತಿಯ ಪ್ರಾತ್ಯಕ್ಷಿಕೆ) ಕಾರ್ಯಕ್ರಮವು ಸಂಘದ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಲಿದೆ. ಆಟಿ ತಿಂಗಳ ಆಚಾರ ವಿಚಾರ, ಆಹಾರ ಪದ್ಧತಿ ಹಾಗೂ ಕೃಷಿ ಸವಲತ್ತುಗಳ ಬಗ್ಗೆ ಮಾಹಿತಿ,Continue reading “ಆ.13: ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ, ಬಿಲ್ಲವ ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ‘ಆಟಿಡೊಂಜಿ ಕೂಟ’”
ರಾಜ್ಯ ಸರಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ
ಉಡುಪಿ: ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂಪಾಯಿ ಹಣವನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾ ಮತ್ತು ಎಸ್ಟಿ ಮೋರ್ಚಾ ವತಿಯಿಂದ ಉಡುಪಿ-ಅಜ್ಜರಕಾಡು ಸೈನಿಕರ ಹುತಾತ್ಮ ಭವನದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗContinue reading “ರಾಜ್ಯ ಸರಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ”
ಅಲೆವೂರು:ಅಗ್ನಿಪಥ್ ಮೂಲಕ ಸೈನ್ಯಕ್ಕೆ ಆಯ್ಕೆಯಾಗಿ ತರಬೇತಿ ಮುಗಿಸಿ ಬಂದ ಚಿದಾನಂದ್ ಗೆ ಹುಟ್ಟೂರಿನಲ್ಲಿ ಭವ್ಯ ಸ್ವಾಗತ
ಉಡುಪಿ: ಅಗ್ನಿಪಥ್ ಮೂಲಕ ಸೈನ್ಯಕ್ಕೆ ಸೇರ್ಪಡೆಯಾಗಿ ತಾಯಿ ಭಾರತಿಯ ಸೇವೆ ಮಾಡಲು ಅಣಿಯಾಗಿ ತರಭೇತಿ ಮುಗಿಸಿ ಮುಂದೆ ಕಾಶ್ಮೀರಕ್ಕೆ ಕರ್ತವ್ಯ ನಿರ್ವಹಿಸಲಿರುವ ಅಲೆವೂರಿನ ಹೆಮ್ಮೆಯ ಕುವರ ಚಿದಾನಂದ ಇವರನ್ನು ಅತ್ಯಂತ ಗೌರವಯುತವಾಗಿ ಸ್ವಾಗತಿಸಲಾಯಿತು. ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಹಾಗೂ ಕೊರಂಗ್ರಪಾಡಿ ಸಿ ಎ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಸೇರಿಗಾರ್ ರವರು ಹಾರಾರ್ಪಣೆ ಮಾಡಿ ಚಾಲನೆ ಕೊಟ್ಟರೆ ಮಾತೆಯಂದಿರು ಆರತಿ ಬೆಳಗಿಸಿ ಶುಭಾಹಾರೈಸಿದರು. ಬಳಿಕ ತೆರೆದ ವಾಹನದಲ್ಲಿ ರಾಮಪುರದಿಂದ ಗುಡ್ಡೆಂಗಡಿ ಮೂಲಕ ರಾಮಪುರ ಬಂದುContinue reading “ಅಲೆವೂರು:ಅಗ್ನಿಪಥ್ ಮೂಲಕ ಸೈನ್ಯಕ್ಕೆ ಆಯ್ಕೆಯಾಗಿ ತರಬೇತಿ ಮುಗಿಸಿ ಬಂದ ಚಿದಾನಂದ್ ಗೆ ಹುಟ್ಟೂರಿನಲ್ಲಿ ಭವ್ಯ ಸ್ವಾಗತ”
ರಾಜ್ಯವನ್ನು ದಿವಾಳಿಯಂಚಿಗೆ ದೂಡಲು ಹೊರಟ ನಕಲಿ ಗ್ಯಾರಂಟಿಗಳ ಭ್ರಷ್ಟ ಕಾಂಗ್ರೆಸ್ ಸರಕಾರದ ಲಂಚಕೋರ ಕೃಷಿ ಸಚಿವ ಚೆಲುವರಾಯಸ್ವಾಮಿ ರಾಜೀನಾಮೆ ನೀಡಲಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಕಾಂಗ್ರೆಸ್ ಪಕ್ಷದ ನಕಲಿ ಗ್ಯಾರಂಟಿಗಳ ಮೂಲಕ ರಾಜ್ಯದ ಜನತೆಯ ದಾರಿ ತಪ್ಪಿಸಿ, ರಾಜ್ಯವನ್ನು ದಿವಾಳಿಯ ಅಂಚಿಗೆ ಕೊಂಡೊಯ್ಯಲು ಹರಸಾಹಸ ಪಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಲಂಚಾವತಾರ ಮೇಳೈಸಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಸರಕಾರ ತಕ್ಷಣ ಲಂಚಕೋರ ಕೃಷಿ ಸಚಿವ ಚೆಲುವರಾಯಸ್ವಾಮಿಯವರ ರಾಜೀನಾಮೆಯನ್ನು ಪಡೆದು, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ತುಂಬಿದ್ದ ಬೊಕ್ಕಸದ ಹಣದ ಜೊತೆಗೆ ದಲಿತರ ಅಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟ ರೂ.11,000Continue reading “ರಾಜ್ಯವನ್ನು ದಿವಾಳಿಯಂಚಿಗೆ ದೂಡಲು ಹೊರಟ ನಕಲಿ ಗ್ಯಾರಂಟಿಗಳ ಭ್ರಷ್ಟ ಕಾಂಗ್ರೆಸ್ ಸರಕಾರದ ಲಂಚಕೋರ ಕೃಷಿ ಸಚಿವ ಚೆಲುವರಾಯಸ್ವಾಮಿ ರಾಜೀನಾಮೆ ನೀಡಲಿ: ಕುಯಿಲಾಡಿ ಸುರೇಶ್ ನಾಯಕ್”
ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ : ಕೃಷಿ ಮತ್ತು ಹೈನುಗಾರಿಕೆ ಮಾಹಿತಿ ಕಾರ್ಯಾಗಾರ
ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ಮಟ್ಟದ ಉಜ್ವಲ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ಕೃಷಿ ಮತ್ತು ಹೈನುಗಾರಿಕೆ ಮಾಹಿತಿ ಕಾರ್ಯಗಾರವು ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರಗಿತು. ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್ ಮತ್ತು ಆತ್ಮ ಅನುಷ್ಠಾನ ಸಮಿತಿಯ ತಾಲೂಕು ಸಂಯೋಜಕಿ ಸಂಜನಾ ಶೆಟ್ಟಿಯವರು ಹಡಿಲು ಭೂಮಿ ಕೃಷಿ ಹಾಗೂ ಕೃಷಿ ಇಲಾಖೆಯಿಂದ ಲಭ್ಯವಿರುವ ವಿವಿಧ ಸವಲತ್ತುಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಪಶು ಸಂಗೋಪನಾContinue reading “ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ : ಕೃಷಿ ಮತ್ತು ಹೈನುಗಾರಿಕೆ ಮಾಹಿತಿ ಕಾರ್ಯಾಗಾರ”
ಸಂವಿಧಾನಾತ್ಮಕವಾಗಿ ಪ್ರತಿಭಟಿಸಿದವರ ಮೇಲೆ ಪೊಲೀಸ್ ಕೇಸ್ ದಾಖಲಿಸಲು ತೋರಿದ ಆಸಕ್ತಿ ಉಡುಪಿ ಪ್ರಕರಣದ ತನಿಖೆಯ ಬಗ್ಗೆ ಯಾಕಿಲ್ಲ? : ಕುಯಿಲಾಡಿಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ಮತ್ತು ವೀಣಾ ಎಸ್. ಶೆಟ್ಟಿ ಯವರ ಮೇಲೆ ಸುಮೋಟೋ ಕೇಸ್ ದಾಖಲು: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ
ಉಡುಪಿ: ದೇಶದಾದ್ಯಂತ ತೀವ್ರ ಖಂಡನೆಗೆ ಗುರಿಯಾಗಿರುವ ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ನಡೆದ ಹಿಂದೂ ವಿದ್ಯಾರ್ಥಿನಿಯ ಆಕ್ಷೇಪಾರ್ಹ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ಖಂಡಿಸಿ ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಹಾಗೂ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳನ್ನು ಉದ್ದೇಶಿಸಿ ಮಾತನಾಡಿದ್ದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ವಿಹಿಂಪ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾContinue reading “ಸಂವಿಧಾನಾತ್ಮಕವಾಗಿ ಪ್ರತಿಭಟಿಸಿದವರ ಮೇಲೆ ಪೊಲೀಸ್ ಕೇಸ್ ದಾಖಲಿಸಲು ತೋರಿದ ಆಸಕ್ತಿ ಉಡುಪಿ ಪ್ರಕರಣದ ತನಿಖೆಯ ಬಗ್ಗೆ ಯಾಕಿಲ್ಲ? : ಕುಯಿಲಾಡಿಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ಮತ್ತು ವೀಣಾ ಎಸ್. ಶೆಟ್ಟಿ ಯವರ ಮೇಲೆ ಸುಮೋಟೋ ಕೇಸ್ ದಾಖಲು: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ”