ಉಡುಪಿ: ಅಸಂಖ್ಯಾತ ಭಕ್ತರ ಶೃದ್ದಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ನಡೆಯುತ್ತಿರುವ ಅಪಪ್ರಚಾರಗಳು ವ್ಯವಸ್ಥಿತ ಷಡ್ಯಂತ್ರ ಎಂಬ ಅಂಶ ಬಟ್ಟಾಬಯಲಾಗಿದೆ. ಶಬರಿಮಲೆ, ತಿರುಪತಿ, ಇಶಾ ಫೌಂಡೇಶನ್ ಬಳಿಕ ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಹಿಂದೂ ವಿರೋಧಿಗಳ ಸಂಚನ್ನು ವಿಫಲಗೊಳಿಸಿ ಹಿಂದೂಗಳ ಶೃದ್ಧಾ ಕೇಂದ್ರಗಳ ಮೇಲಿನ ದಾಳಿಯನ್ನು ಖಂಡಿಸಿ, ಉಡುಪಿ ಜಿಲ್ಲೆಯಾದ್ಯoತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ‘ಧರ್ಮಸ್ಥಳ ಉಳಿಸಿ’ ಅಭಿಯಾನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ಮಂಡಲಗಳ ವ್ಯಾಪ್ತಿಯಲ್ಲಿContinue reading “ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ನಡೆಯುವ ‘ಧರ್ಮಸ್ಥಳ ಉಳಿಸಿ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ : ಕುತ್ಯಾರು ನವೀನ್ ಶೆಟ್ಟಿ”
Category Archives: Uncategorized
ಭೀಕರ ಸುಂಟರಗಾಳಿಯಿಂದ ಕಾಪು ಮತ್ತು ಕಾರ್ಕಳ ತಾಲೂಕಿನಾದ್ಯಂತ ಆಗಿರುವ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗ್ರಹ
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯ ಪಿಲಾರು ಮತ್ತು ಕಾರ್ಕಳ ತಾಲೂಕಿನ ಬೆಳ್ಮಣ್, ನಂದಳಿಕೆ, ಸೂಡ, ರೆಂಜಾಳ, ಬೈಲೂರು, ಯರ್ಲಪಾಡಿ ಮುಂತಾದ ಪ್ರದೇಶಗಳಲ್ಲಿ ಆ.18ರಂದು ಬೀಸಿದ ಬೀಕರ ಸುಂಟರ ಗಾಳಿಯಿಂದ ಸುಮಾರು ಒಂದೂವರೆ ಕಿ.ಮೀ. ಅಗಲ ಹಾಗೂ ಏಳೆoಟು ಕಿ.ಮೀ. ಉದ್ದಕ್ಕೆ ಸಾಲು ಸಾಲು ಮರಗಳು ಉರುಳಿ ಬಿದ್ದು ಅನೇಕ ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಅಪಾರ ಹಾನಿ ಸಂಭವಿಸಿದ್ದು, ಸದ್ರಿ ಪ್ರಕೃತಿ ವಿಕೋಪವನ್ನು ಜಿಲ್ಲೆಯ ವಿಶೇಷ ಪ್ರಕರಣವೆಂದು ಪರಿಗಣಿಸಿ ಆದ್ಯತೆ ಮೇರೆಗೆContinue reading “ಭೀಕರ ಸುಂಟರಗಾಳಿಯಿಂದ ಕಾಪು ಮತ್ತು ಕಾರ್ಕಳ ತಾಲೂಕಿನಾದ್ಯಂತ ಆಗಿರುವ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗ್ರಹ”
ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ
ಉಡುಪಿ: ಅಸಂಖ್ಯಾತ ಹಿಂದೂಗಳ ಧಾರ್ಮಿಕ ಶೃದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿ, ಹಿಂದೂ ಧಾರ್ಮಿಕ ಕೇಂದ್ರಗಳ ರಕ್ಷಣೆಯ ಪರ ನಿಂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಿತ ಬಿಜೆಪಿ ನಾಯಕರುಗಳನ್ನು ವಾಚಾಮಗೋಚರವಾಗಿ ನಿಂದಿಸಿ ಮಾನ ಹಾನಿಕರ, ಅಸಹ್ಯಕರ ಮಾತುಗಳನ್ನಾಡಿರುವುದು ಸಾಮಾಜಿಕ ಜಾಲತಾಣದ ಮೂಲಕ ಜಗಜ್ಜಾಹೀರಾಗಿದ್ದು, ಗೂoಡಾಗಿರಿ ಪ್ರವೃತ್ತಿಯೊಂದಿಗೆ ಆಧಾರ ರಹಿತ ಸುಳ್ಳು ಆರೋಪಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವ ಮಹೇಶ್ ಶೆಟ್ಟಿContinue reading “ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ”
ಶ್ರೀ ಕ್ಷೇ.ಧ.ಗ್ರಾ. ಯೋಜನೆ ಉಡುಪಿ ತಾಲೂಕು : 79ನೇ ಸ್ವಾತಂತ್ರ್ಯ ದಿನಾಚರಣೆ
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಇದರ ವತಿಯಿಂದ ಅಂಬಲಪಾಡಿ ಪ್ರಗತಿ ಸೌಧ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ವೀರ ಸೇನಾನಿಗಳನ್ನು ಸ್ಮರಿಸಿದರು. ಉಡುಪಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕುContinue reading “ಶ್ರೀ ಕ್ಷೇ.ಧ.ಗ್ರಾ. ಯೋಜನೆ ಉಡುಪಿ ತಾಲೂಕು : 79ನೇ ಸ್ವಾತಂತ್ರ್ಯ ದಿನಾಚರಣೆ”
ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರ್ಯ ದಿನಾಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಕಾಪು ತಾಲ್ಲೂಕು ಮಟ್ಟದ ವತಿಯಿಂದ ಇಂದು ದಿನಾಂಕ 15-08-2025 ರಂದು ನಡೆದ “ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರೋತ್ಸವ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಕಾಪು ತಹಶೀಲ್ದಾರರಾದ ಪ್ರತೀಭಾ ಆರ್ ಅವರು ಧ್ವಜಾರೋಹಣ ನೆರವೇರಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ,Continue reading “ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರ್ಯ ದಿನಾಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ”
‘ಹರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’
79ನೇ ಸ್ವಾತಂತ್ರ್ಯ ದಿನಾಚರಣೆಯ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಆ.14ರಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಡೆಯಿತು. ಉಡುಪಿ ನಿಟ್ಟೂರು-ಅಂಬಾಗಿಲು ಜಂಕ್ಷನ್ ನಲ್ಲಿರುವ ದಿ! ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಪ್ರತಿಮೆಗೆ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾಲಾರ್ಪಣೆಗೈದರು. ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಪ್ರತಿಮೆಗೆ ಪುಷ್ಪಾರ್ಚನೆಗೈಯುವ ಮೂಲಕ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ಕ್ಕೆ ಚಾಲನೆ ನೀಡಿದರು. ಈContinue reading “‘ಹರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’”
ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾ ಕೂಟ’ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ತ್ವಿಷಾ ಕುಂದರ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಶಸ್ತಿ
ಆ.10ರಂದು ಶಿವಮೊಗ್ಗದಲ್ಲಿ ನಡೆದ ‘ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾ ಕೂಟ’ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ತ್ವಿಷಾ ಕುಂದರ್ ಇವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ. ಇವರು ಕೃಷ್ಣ ಕುಂದರ್ ಹಾಗೂ ಗೀತಾ ಕರ್ಕೇರ ದಂಪತಿಗಳ ಪುತ್ರಿ. ಇವರು ಬುಡೋಕಾನ್ ಕರಾಟೆ ಹಾಗೂ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಸಂಸ್ಥೆಯ ಮುಖ್ಯ ಶಿಕ್ಷಕರ ವಾಮನ್ ಪಾಲನ್ ಹಾಗೂ ಮೇಘ ಇವರಿಂದContinue reading “ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾ ಕೂಟ’ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ತ್ವಿಷಾ ಕುಂದರ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಶಸ್ತಿ”
ಆಟಿಡೊಂಜಿ ಕೂಟ’ದಿಂದ ಗ್ರಾಮೀಣ ಸಂಸ್ಕೃತಿಯ ಸೊಬಗು ಅನಾವರಣ
ಉಡುಪಿ: ಆಷಾಢ ಮಾಸದ ಆಚರಣೆಗಳು ಹಾಗೂ ಆಹಾರ ಪದ್ಧತಿಗಳನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುವ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದಿಂದ ಗ್ರಾಮೀಣ ಬದುಕಿನ ಭವ್ಯ ಸಂಸ್ಕೃತಿಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಹೇಳಿದರು. ಅವರು ಆ.10ರಂದು ಸಂಘದ ಆಶ್ರಯದಲ್ಲಿ ಮಹಿಳಾ ಘಟಕದ ವತಿಯಿಂದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪದಾಧಿಕಾರಿಗಳೊಂದಿಗೆ ಜ್ಯೋತಿ ಬೆಳಗಿಸಿ ಮಾತನಾಡಿದರು. ಕೃಷಿ ಪ್ರಧಾನವಾಗಿರುವ ಗ್ರಾಮೀಣ ಪ್ರದೇಶದಲ್ಲಿContinue reading “ಆಟಿಡೊಂಜಿ ಕೂಟ’ದಿಂದ ಗ್ರಾಮೀಣ ಸಂಸ್ಕೃತಿಯ ಸೊಬಗು ಅನಾವರಣ”
ಘಾಸಿ ಉಂಟುಮಾಡುವ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಪರಿಸರದಲ್ಲಿ ಇತ್ತೀಚಿನ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಲಕ್ಷಾಂತರ ಹಿಂದೂಗಳ ಭಾವನೆಗೆ ಘಾಸಿ ಉಂಟು ಮಾಡುತ್ತಿದೆ. ಎಸ್.ಐ.ಟಿ. ತನಿಖೆ ನಡೆಯುತ್ತಿದ್ದಂತೆ ಹಲವಾರು ಸಮಾಜ ವಿದ್ರೋಹಿ ಹಾಗೂ ಎಡಪಂಥೀಯ ಮನಸ್ಥಿತಿಯ ಯು-ಟ್ಯೂಬರ್ ಗಳು ಮತ್ತು ಸ್ವಯಂಘೋಷಿತ ಹೋರಾಟಗಾರರು ಕೋಟ್ಯಾಂತರ ಭಕ್ತರ ಶೃದ್ದಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕರ ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚುರಪಡಿಸಿ, ಅಪಪ್ರಚಾರ ಎಸಗುತ್ತಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಶ್ರೀContinue reading “ಘಾಸಿ ಉಂಟುಮಾಡುವ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ”
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ಶ್ರೀ ಕ್ಷೇತ್ರದಲ್ಲಿ ನಡೆಯುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆ
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಧರ್ಮಸ್ಥಳ ಇದರ ವತಿಯಿಂದ ಸೆ.14 ರಿಂದ ಸೆ.21ರ ವರೆಗೆ ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆಯು ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಉಡುಪಿ-ಅಂಬಲಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ನಡೆಯಿತು. ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಪೂರ್ವಭಾವಿ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ,Continue reading “ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ಶ್ರೀ ಕ್ಷೇತ್ರದಲ್ಲಿ ನಡೆಯುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆ”