News by: ಜನತಾಲೋಕವಾಣಿನ್ಯೂಸ್ ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಡಾ! ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ ಇದರ ಆಶ್ರಯದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 400ಕ್ಕೂ ಮಿಕ್ಕಿ ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ‘ಹೊಳಪು’ ಕಳೆದ ಐದು ವರ್ಷಗಳಿಂದ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಸಾರಥ್ಯದಲ್ಲಿ ಕೋಟ ವಿವೇಕ ಪ್ರೌಢContinue reading “ಜನಪ್ರತಿನಿಧಿಗಳ ಪ್ರತಿಭಾ ವಿಕಸನಕ್ಕೆ ನಾಂದಿ ಹಾಡಿರುವ ‘ಹೊಳಪು’ ಸ್ಪರ್ಧಾಕೂಟ ದೇಶಕ್ಕೇ ಮಾದರಿ: ಕೆ.ಉದಯ ಕುಮಾರ್ ಶೆಟ್ಟಿಕೋಟದಲ್ಲಿ ನ.26ರ ‘ಹೊಳಪು 2022’ ಸ್ಪರ್ಧಾಕೂಟದ ಟೀ-ಶರ್ಟ್ ಬಿಡುಗಡೆ, ಪ್ರಶಸ್ತಿ ಫಲಕ-ಸ್ಮರಣಿಕೆ ಅನಾವರಣ”
Category Archives: Uncategorized
ಸುರತ್ಕಲ್ ಟೋಲ್ ಗೇಟ್ ತೆರವು ಘೋಷಣೆ ಬೆನ್ನಲ್ಲೇ ಹೆಜಮಾಡಿ ಟೋಲ್ ದರ ದಲ್ಲಿ ಭಾರಿ ಪರಿಷ್ಕರಣೆ
ಮಂಗಳೂರು: ಹಲವು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‌ಗೇಟ್ ತೆರವು ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಇದೀಗ ಹೆಜಮಾಡಿಯಲ್ಲಿ ಟೋಲ್ ಪರಿಷ್ಕರಣೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಭಾರಿ ಪ್ರತಿಭಟನೆಯ, ಹೋರಾಟದ ನಂತರ ಸುರತ್ಕಲ್ ಟೋಲ್ ರದ್ದಾಗಿದ್ದು ಹೇಜಮಾಡಿ ಟೋಲ್ ದರ ಡಬಲ್ ಆಗಿದೆ. ಇದರಿಂದ ನವಯುಗ ಕಂಪೆನಿಗೆ ಪರೋಕ್ಷವಾಗಿ ಪ್ರತಿಭಟನೆ ಸಹಕಾರಿಯಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಪಿಸುಮಾತು ಕೇಳಿ ಬರುತ್ತಿದೆ. ಈ ಹಿಂದೆ ಸುರತ್ಕಲ್ ಟೋಲ್ ನಲ್ಲಿ ನಡೆಸಬೇಕಾಗಿದ್ದ ಮೈಂಟೆನೆನ್ಸ್ ಚಾರ್ಚ್ ನವಯುಗ ಕಂಪೆನಿಗೆ ಸಂಪೂರ್ಣContinue reading “ಸುರತ್ಕಲ್ ಟೋಲ್ ಗೇಟ್ ತೆರವು ಘೋಷಣೆ ಬೆನ್ನಲ್ಲೇ ಹೆಜಮಾಡಿ ಟೋಲ್ ದರ ದಲ್ಲಿ ಭಾರಿ ಪರಿಷ್ಕರಣೆ”
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ 75ನೇ ಜನ್ಮದಿನದ ಸಂಭ್ರಮ
News by: ಜನತಾಲೋಕವಾಣಿನ್ಯೂಸ್ ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡೆ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,Continue reading “ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ 75ನೇ ಜನ್ಮದಿನದ ಸಂಭ್ರಮ”
ಪಿ.ಎಫ್.ಐ ಬ್ಯಾನ್ – ಆರ್ಟಿಕಲ್ 370 ರದ್ದು – ರಾಮ ಮಂದಿರ ಸ್ಥಾಪನೆ ಮಂಗಳೂರು ಬ್ಲಾಸ್ಟ್ ಗೆ ಕಾರಣ : ತೇಜಸ್ವಿಸೂರ್ಯ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಪಿ.ಎಫ್.ಐ ಸಂಘಟನೆಯನ್ನು ದೇಶದಾದ್ಯಂತ ನಿಷೇಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ನಡೆದಿದೆ. ಆರ್ಟಿಕಲ್ 370 ರದ್ದು ಹಾಗು ರಾಮ ಮಂದಿರವನ್ನು ಕಟ್ಟುತ್ತಿರುವುದನ್ನು ಸಹಿಸಿಕೊಳ್ಳಲಾಗದ ಉಗ್ರರು ಈ ರೀತಿ ಭಯೋತ್ಪಾದಕ ಚಟುವಟಿಕೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿಸೂರ್ಯ ಹೇಳಿದರು. ಅವರು ಮಂಗಳವಾರ ಮಣಿಪಾಲದ ಕಂಟ್ರಿ ಇನ್ ಹೋಟೆಲಿನಲ್ಲಿ ಯುವಮೋರ್ಚಾದ ರಾಜ್ಯ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಮಾತನಾಡಿದರು. ಪಿ.ಎಫ್.ಐ ಬ್ಯಾನ್ ವಿಚಾರ: ಈContinue reading “ಪಿ.ಎಫ್.ಐ ಬ್ಯಾನ್ – ಆರ್ಟಿಕಲ್ 370 ರದ್ದು – ರಾಮ ಮಂದಿರ ಸ್ಥಾಪನೆ ಮಂಗಳೂರು ಬ್ಲಾಸ್ಟ್ ಗೆ ಕಾರಣ : ತೇಜಸ್ವಿಸೂರ್ಯ”
ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ; ಸರಕಾರದ ವಿರುದ್ಧ ಪ್ರತೀಕಾರದ ಭಯೋತ್ಪಾದನಾ ಕೃತ್ಯ: ಬಿಜೆಪಿ ರಾಜ್ಯ ಪ್ರ.ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ
News by: ಜನತಾಲೋಕವಾಣಿನ್ಯೂಸ್ ಉಡುಪಿ, ನ.22 : ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ 1,680 ಪಿಎಫ್ಐ ಕಾರ್ಯಕರ್ತರನ್ನು ಜೈಲಿನಿಂದ ಬಿಡುಗಡೆಗೊಳಿಸಿದ್ದರು. ಇದೀಗ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದೆ. ಇದರಿಂದ ಕೆಲಸ ಕಳೆದುಕೊಂಡಿರುವ ಪಿಎಫ್ಐ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ದ ಪ್ರತೀಕಾರ ನಡೆಸಲು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಪ್ರಕರಣವು ಇದೇ ಕಾರಣಕ್ಕೆ ನಡೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಆರೋಪಿಸಿದರು. ಅವರು ನ.22ರಂದು ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿContinue reading “ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ; ಸರಕಾರದ ವಿರುದ್ಧ ಪ್ರತೀಕಾರದ ಭಯೋತ್ಪಾದನಾ ಕೃತ್ಯ: ಬಿಜೆಪಿ ರಾಜ್ಯ ಪ್ರ.ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ”
ನರೇಂದ್ರ ಮೋದಿಯವರ ಮಾರ್ಗದಲ್ಲೇ ಕರ್ನಾಟಕದ ಆಡಳಿತ: ಬಸವರಾಜ ಬೊಮ್ಮಾಯಿ
News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಆದರಣೀಯ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದಲ್ಲೇ ನಾವು ಆಡಳಿತ ನಡೆಸುತ್ತಿದ್ದೇವೆ. ದಲಿತ ಸಮುದಾಯಗಳಿಗೆ ಹೆಚ್ಷು ಸೌಲಭ್ಯ ನೀಡಿದ್ದು ನಮ್ಮ ಸರ್ಕಾರ. ಸ್ವಾತಂತ್ರ್ಯ ಬಂದ ನಂತರ ಎಸ್ಟಿ ಸಮುದಾಯಕ್ಕೆ ಕೇಂದ್ರ ಸರ್ಕಾರ ಮೀಸಲಾತಿ ಹೆಚ್ಚಿಸಿದ್ದು ಮೋದಿ ಸರ್ಕಾರ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬಳ್ಳಾರಿಯಲ್ಲಿ ನ.20ರಂದು ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಾಯಕರೇ ನಿಜವಾದ ನಾಯಕರು, ಅವರು ಸ್ನೇಹಕ್ಕು ಸೈ ಸಮರಕ್ಕೂContinue reading “ನರೇಂದ್ರ ಮೋದಿಯವರ ಮಾರ್ಗದಲ್ಲೇ ಕರ್ನಾಟಕದ ಆಡಳಿತ: ಬಸವರಾಜ ಬೊಮ್ಮಾಯಿ”
ನ.22ರಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಆತಿಥ್ಯದಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆತಿಥ್ಯದಲ್ಲಿ ಯುವ ಮೋರ್ಚಾ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ನ.22ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ನ.21ರಂದು ಸಂಜೆ 6.00 ಗಂಟೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ ಹೇಳಿದರು. ಅವರು ನ.19ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.Continue reading “ನ.22ರಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಆತಿಥ್ಯದಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ”
ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 30ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ಕೆ.ಮಂಜಪ್ಪ ಸುವರ್ಣರಿಗೆ ಸನ್ಮಾನ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವೀಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ 30ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಜರಗಿತು.ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಭಜನಾ ಸಂಚಾಲಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಮತ್ತು ಅವರ ಧರ್ಮಪತ್ನಿ ಗೋದಾವರಿ ಎಮ್. ಸುವರ್ಣರವರನ್ನು ಸಂಘದ ವತಿಯಿಂದ ಸಂಘದ ಅಧ್ಯಕ್ಷContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 30ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ಕೆ.ಮಂಜಪ್ಪ ಸುವರ್ಣರಿಗೆ ಸನ್ಮಾನ”
ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಬಳ್ಳಾರಿಯಲ್ಲಿ ಸಾಧನಾ ಸಮಾವೇಶ; ಎಸ್.ಸಿ., ಎಸ್.ಟಿ. ಸಮುದಾಯಗಳ ವಿಷಯದಲ್ಲಿ ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ : ಬಿ.ಶ್ರೀರಾಮುಲು
News by: ಜನತಾಲೋಕವಾಣಿನ್ಯೂಸ್ ಬೆಂಗಳೂರು, ನ.18: ಕಾಂಗ್ರೆಸ್ ಮುಖಂಡರು ಹಲವು ದಶಕಗಳ ಕಾಲ ಆಳ್ವಿಕೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡಗಳ ಬಗ್ಗೆ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದ್ದರು. ಈ ಸಮುದಾಯಗಳ ಕುರಿತು ಶಕುನಿ ವಾತ್ಸಲ್ಯವನ್ನು ಪ್ರದರ್ಶನ ಮಾಡಿದ್ದವು ಎಂದು ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಟೀಕಿಸಿದರಲ್ಲದೆ, ಬಿಜೆಪಿ ನುಡಿದಂತೆ ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಳ್ಳಾರಿಯಲ್ಲಿ ಇದೇ 20ರಂದು ಬಿಜೆಪಿ ಎಸ್.ಟಿ. ಮೋರ್ಚಾ ನವಶಕ್ತಿ ಸಮಾವೇಶ ನಡೆಯುವContinue reading “ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಬಳ್ಳಾರಿಯಲ್ಲಿ ಸಾಧನಾ ಸಮಾವೇಶ; ಎಸ್.ಸಿ., ಎಸ್.ಟಿ. ಸಮುದಾಯಗಳ ವಿಷಯದಲ್ಲಿ ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ : ಬಿ.ಶ್ರೀರಾಮುಲು”
ಪಕ್ಷದ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣ: ಕೆ.ರಾಘವೇಂದ್ರ ಕಿಣಿ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಪಕ್ಷದ ಸಂಘಟನಾತ್ಮಕ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಾಧ್ಯಮ ವಿಭಾಗದ ‘ಚಿಂತನ ಮಂಥನ’ ವರ್ಗದೊಂದಿಗೆ ಮುಂಬರಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಇನ್ನಷ್ಟು ಕ್ರಿಯಾಶೀಲತೆ ಮತ್ತು ಬದ್ಧತೆಯಿಂದ ಜವಾಬ್ದಾರಿ ನಿರ್ವಹಿಸೋಣ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಮಾಧ್ಯಮ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಾಧ್ಯಮ ತಂಡ ಮಂಡಲಾಧ್ಯಕ್ಷರ ನೇತೃತ್ವದಲ್ಲಿContinue reading “ಪಕ್ಷದ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣ: ಕೆ.ರಾಘವೇಂದ್ರ ಕಿಣಿ”