ಸೆ.2ರ ‘ಪ್ರಧಾನಿ ಮಂಗಳೂರು ಬೇಟಿ’ ಕಾರ್ಯಕ್ರಮ ಯಶಸ್ವಿಗೊಳಿಸಿ: ಸಚಿವ ವಿ.ಸುನಿಲ್ ಕುಮಾರ್

ಉಡುಪಿ: ದ.ಕ. ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಪ್ರಥಮ ಕಾರ್ಯಕ್ರಮ ಸೆ.2ರಂದು ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿದೆ. ಚುನಾವಣಾ ಸಂಬಂಧಿತ ಉಭಯ ಜಿಲ್ಲೆಗಳ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿಯವರು ಭಾಗಿಯಾಗಿದ್ದರೂ, ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಚಾಲನೆ ನೀಡುವ ಸರಕಾರಿ ಕಾರ್ಯಕ್ರಮ ಇದಾಗಿದೆ. ದ.ಕ ಜಿಲ್ಲೆಯಿಂದ ಸುಮಾರು 80 ಸಾವಿರ ಮಂದಿ ಹಾಗೂ ಉಡುಪಿ ಜಿಲ್ಲೆಯಿಂದ ಸುಮಾರು 20 ಸಾವಿರ ಮಂದಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಸರಕಾರದContinue reading “ಸೆ.2ರ ‘ಪ್ರಧಾನಿ ಮಂಗಳೂರು ಬೇಟಿ’ ಕಾರ್ಯಕ್ರಮ ಯಶಸ್ವಿಗೊಳಿಸಿ: ಸಚಿವ ವಿ.ಸುನಿಲ್ ಕುಮಾರ್”

ಸಿ.ಸಿ.ಎ.ಆರ್.ಐ. ಗೋವಾ ಇದರ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದಿಂದ ಸನ್ಮಾನ

ಉಡುಪಿ: ಕೇಂದ್ರ ಸರಕಾರದ ಸ್ವಾಮ್ಯದ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ (ಸಿ.ಸಿ.ಎ.ಆರ್.ಐ) ಗೋವಾ ಇದರ ಆಡಳಿತ ಸಮಿತಿಯ ಸದಸ್ಯರಾಗಿ ಭಾರತೀಯ ಕೃಷಿ ಸಂಶೋಧನಾ ಪರಿಷತ್ ನಿಂದ ನಾಮ ನಿರ್ದೇಶನಗೊಂಡಿರುವ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಇವರನ್ನು ಬಿಲ್ಲವಾ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ ಬಂಗೇರ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದContinue reading “ಸಿ.ಸಿ.ಎ.ಆರ್.ಐ. ಗೋವಾ ಇದರ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದಿಂದ ಸನ್ಮಾನ”

ಅಂಬಲಪಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ

ಉಡುಪಿ: ಕ್ಷೇತ್ರದ ಅಭಿವೃದ್ಧಿಗೆ ಸರಕಾರದ ವಿವಿಧ ಮೂಲಗಳಿಂದ ಅನುದಾನ ನೀಡುತ್ತಾ ಬಂದಿರುವ ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ವತಿಯಿಂದ ಅವರ ಗೃಹ ಕಛೇರಿಯಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ದೈವಸ್ಥಾನದ ಹತ್ತು ಸಮಸ್ತರ ಗುರಿಕಾರ ದೇವದಾಸ್, ಆಡಳಿತ ಸಮಿತಿಯ ಕೋಶಾಧಿಕಾರಿ ಭರತ್Continue reading “ಅಂಬಲಪಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ”

ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಕರೆ

ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಪ್ರಸಕ್ತ ಸನ್ನಿವೇಶದಲ್ಲಿ ‘ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಬಿಜೆಪಿಯ ಯೋಜನೆಯಂತೆ ಮುಂಬರುವ ದಿನಗಳಲ್ಲಿ ಹಲವಾರು ಕಾರ್ಯ ಚಟುವಟಿಕೆಗಳು ನಡೆಯಲಿವೆ. ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.Continue reading “ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಕರೆ”

ಕಾಂಗ್ರೆಸ್ ನವರದು ಬಯಲು ನಾಟಕ : ಆರೋಗ್ಯ ಸಚಿವ ಡಾ! ಕೆ.ಸುಧಾಕರ್ ಲೇವಡಿ 75 ವರ್ಷ ರಾಷ್ಟ್ರಧ್ವಜವನ್ನೇ ಮರೆತಿದ್ದವರು ಈಗ ಬೀದಿ ಬೀದಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ

ಚಿಕ್ಕಬಳ್ಳಾಪುರ : ಕಳೆದ 75 ವರ್ಷದಲ್ಲಿ ಭಾವುಟಗಳನ್ನೇ ಮರೆತಿದ್ದವರು, ರಾಷ್ಟ್ರಧ್ವಜವನ್ನೇ ಮರೆತಿದ್ದವರು ಪ್ರಧಾನಿಯವರು ಹರ್ ಘರ್ ತಿರಂಗ ಘೋಷಣೆ ನಂತರ ಬೆಂಗಳೂರಿನ ಬೀದಿಗಳಲ್ಲಿ ಧ್ವಜ ಹಿಡಿದು ಪಾದಯಾತ್ರೆ ಮಾಡಿರುವುದು ಬಯಲು ನಾಟಕವಲ್ಲವೇ ಎಂದು ಆರೋಗ್ಯ ಸಚಿವ ಡಾ! ಕೆ. ಸುಧಾಕರ್ ಪ್ರಶ್ನಿಸಿದ್ದಾರೆ. ಹರ್ ಘರ್ ತಿರಂಗ ಎಂಬುದು ನಾಟಕ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಯಲು ನಾಟಕ ಮಾಡುತ್ತಿರುವ ಕಾಂಗ್ರೆಸ್ ಗೆ ಕಳೆದ 75 ವರ್ಷದಲ್ಲಿ ರಾಷ್ಟ್ರಧ್ವಜ ನೆನಪಿತ್ತೇ? ಈಗContinue reading “ಕಾಂಗ್ರೆಸ್ ನವರದು ಬಯಲು ನಾಟಕ : ಆರೋಗ್ಯ ಸಚಿವ ಡಾ! ಕೆ.ಸುಧಾಕರ್ ಲೇವಡಿ 75 ವರ್ಷ ರಾಷ್ಟ್ರಧ್ವಜವನ್ನೇ ಮರೆತಿದ್ದವರು ಈಗ ಬೀದಿ ಬೀದಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ”

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ತಮ್ಮ ನಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ,ಕೆ. ಸುಧಾಕರ್‌

ಆರ್‌ಎಸ್‌ಎಸ್‌ ಮತ್ತು ಸಾವರ್ಕರ್‌ ಬಗ್ಗೆ ಮಾತನಾಡುವುದು ಕಾಂಗ್ರೆಸ್‌ ದೌರ್ಬಲ್ಯ ಬೆಂಗಳೂರು, ಭಾನುವಾರ, ಆಗಸ್ಟ್‌ 21: ಸತ್ಯಕ್ಕೆ ಎರಡು ಮುಖಗಳಿರುತ್ತವೆ. ಈಗ ಕಾಂಗ್ರೆಸ್‌ ಕಾರ್ಯಕರ್ತರೇ ಅವರ ನಾಯಕರ ಮೇಲೆ ಮುಗಿ ಬಿದ್ದಿದ್ದಾರೆ. *ಕೈ ಪಕ್ಷದ ನಾಯಕರು ಸಮಾಜದಲ್ಲಿ ಹೇಗೆ ಇರಬೇಕು ಅನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು* ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಸಂಖ್ಯಾತರ ಬಗ್ಗೆ ಕಾಂಗ್ರೆಸ್‌ ನಾಯಕರು ಲಘುವಾಗಿ ಮಾತನಾಡಿರುವುದು ಕಾರ್ಯಕರ್ತರಿಗೆ ಕೋಪ ತರಿಸಿದೆ. ಭಾವೋದ್ವೇಗಕ್ಕೆ ಒಳಗಾಗಿ ಮೊಟ್ಟೆContinue reading ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ತಮ್ಮ ನಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ,ಕೆ. ಸುಧಾಕರ್‌

ಸಿದ್ದು ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಮೈಯೆಲ್ಲಾ ಹಿಂದೂ ವಿರೋಧಿ ವಿಷ ತುಂಬಿಕೊಂಡಿರುವ ಮಾಜಿ ಸಿ.ಎಂ. ಸಿದ್ದರಾಮಯ್ಯನವರ ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅಪ್ಪಟ ದೇಶ ಭಕ್ತ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಹೆಸರೆತ್ತಲೂ ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸಮಾಜ ಒಡೆಯುವ ದುಷ್ಕೃತ್ಯದಲ್ಲಿ ತೊಡಗಿರುವುದು ಜಗಜ್ಜಾಹೀರಾಗಿದೆ. ‘ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಬ್ಯಾನರ್ ಯಾಕೆ ಹಾಕಿದ್ದೀರಿ’ ಎಂದಿರುವ ಸಿದ್ದುಗೆ ಹಿಂದೂ ಏರಿಯಾಕ್ಕೆContinue reading “ಸಿದ್ದು ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ: ಕುಯಿಲಾಡಿ ಸುರೇಶ್ ನಾಯಕ್”

ರಾಜಸ್ಥಾನದಲ್ಲಿ ನಡೆದ ದಲಿತ ಬಾಲಕನ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆಯಾಗಲಿ: ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಆಗ್ರಹ

ಉಡುಪಿ: ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ. ಜುಲೈ 25ರಂದು ಶಿಕ್ಷಕನ ಮಡಕೆಯ ನೀರನ್ನು ಮುಟ್ಟಿದ ಕಾರಣಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಹುಡುಗನಿಗೆ ಹೊಡೆಯುತ್ತಾರೆ. ಬಾಲಕನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಮತ್ತು ಆ ಬಳಿಕ ಉದಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗುತ್ತದೆ. ಒಂದು ತಿಂಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ 9 ವರ್ಷದ ಬಾಲಕ ಸಾವಿಗೀಡಾಗುತ್ತಾನೆ. ಬಾಲಕನ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಆಗ್ರಹಿಸುತ್ತದೆ ಎಂದು ಬಿಜೆಪಿ ಜಿಲ್ಲಾContinue reading “ರಾಜಸ್ಥಾನದಲ್ಲಿ ನಡೆದ ದಲಿತ ಬಾಲಕನ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆಯಾಗಲಿ: ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಆಗ್ರಹ”

ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಯು ಸಂಘದ ವಠಾರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸಿಕೊಂಡು, 75ನೇ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ತಿಳಿಸಿದರು. ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಅಸಂಖ್ಯಾತ ದೇಶಭಕ್ತ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮ, ತ್ಯಾಗ ಮತ್ತು ಬಲಿದಾನದಿಂದ ದೊರೆತಿರುವ ಸ್ವಾತಂತ್ರ್ಯದ ಮಹತ್ವವನ್ನು ಅರಿಯುವ ಜೊತೆಗೆ ದೇಶContinue reading “ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ”

ಉಡುಪಿಯಲ್ಲಿ ಸಾವರ್ಕರ್ ಬ್ಯಾನರ್ ತೆರವುಗೊಳಿಸುವ ಎಸ್ಡಿಪಿಐ ಹುನ್ನಾರದ ಪುಂಡಾಟ ನಿಲ್ಲಿಸದಿದ್ದರೆ ತಕ್ಕ ಶಾಸ್ತಿ : ಕುಯಿಲಾಡಿ

ಉಡುಪಿಯ ಬ್ರಹ್ಮಗಿರಿ ವೃತ್ತದ ಬಳಿ ದೇಶ ಭಕ್ತರು ಅಳವಡಿಸಿರುವ ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಾವರ್ಕರ್ ರವರ ಬ್ಯಾನರನ್ನು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನ ಪಾಪದ ಕೂಸು ಎಸ್ಡಿಪಿಐ ಸೇರಿ ತೆರವುಗೊಳಿಸುವ ಹುನ್ನಾರದ ಬಗ್ಗೆ ತಿಳಿದುಬಂದಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಎರಡೆರಡು ಬಾರಿ ಕರಿ ನೀರಿನ ಶಿಕ್ಷೆ ಅನುಭವಿಸಿ ಛಲ ಬಿಡದ ಹೋರಾಟದಿಂದ ದೇಶಕ್ಕಾಗಿ ಹುತಾತ್ಮರಾದ ಅಪ್ಪಟ ದೇಶ ಭಕ್ತ ಸಾವರ್ಕರ್ ರವರ ಹೆಸರೆತ್ತಲೂ ಕಾಂಗ್ರೆಸ್ ಗೆ ಯೋಗ್ಯತೆ ಇಲ್ಲ. ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದContinue reading “ಉಡುಪಿಯಲ್ಲಿ ಸಾವರ್ಕರ್ ಬ್ಯಾನರ್ ತೆರವುಗೊಳಿಸುವ ಎಸ್ಡಿಪಿಐ ಹುನ್ನಾರದ ಪುಂಡಾಟ ನಿಲ್ಲಿಸದಿದ್ದರೆ ತಕ್ಕ ಶಾಸ್ತಿ : ಕುಯಿಲಾಡಿ”

Design a site like this with WordPress.com
Get started