ಅಂಬಲಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ‌ಮತ್ತು ಕನ್ನಡಕ ವಿತರಣೆ ಹಾಗೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ, ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ನೊಂದಾವಣೆ

ಉಡುಪಿ: ಜು.10 : ಬಿಜೆಪಿ ಉಡುಪಿ ನಗರ, ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಮತ್ತು ಬಿಜೆಪಿ ಅಂಬಲಪಾಡಿ ಇದರ ಆಶ್ರಯದಲ್ಲಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಹಾಗೂ ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ’ಯ ಪ್ರಯುಕ್ತ ‘ಮೋದಿ ಆಡಳಿತದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮದ ಅಂಗವಾಗಿ‌ ಉಡುಪಿ ಜಿಲ್ಲಾಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸರ್ವೇಕ್ಷಣ ಘಟಕ ಮತ್ತು ಜಿಲ್ಲಾ ಎನ್.ಸಿ.ಡಿ.Continue reading “ಅಂಬಲಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ‌ಮತ್ತು ಕನ್ನಡಕ ವಿತರಣೆ ಹಾಗೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ, ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ನೊಂದಾವಣೆ”

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಮಾಜಿ ಅಧ್ಯಕ್ಷರಾದ ಜಬ್ಬ ಪೂಜಾರಿ ಬಂಕೇರಕಟ್ಟ ಅಂಬಲಪಾಡಿ ನಿಧನ

ಉಡುಪಿ: ‘ಭಜನೆ ಜಬ್ಬಣ್ಣ’ರೆಂದೇ ಪ್ರಖ್ಯಾತರಾಗಿದ್ದ ಜಬ್ಬ ಪೂಜಾರಿ (90 ವರ್ಷ) ಬಂಕೇರಕಟ್ಟ, ಅಂಬಲಪಾಡಿ ಇವರು ಜು.6ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಪದಾಧಿಕಾರಿಯಾಗಿ, ಭಜನಾ ನಿರ್ವಾಹಕರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿರುವ ಜಬ್ಬ ಪೂಜಾರಿಯವರು ಸಂಘದ ಆಡಳಿತ ಸಮಿತಿಯ ಅಧ್ಯಕ್ಷರಾಗಿ, ಬೆಳ್ಳಿ ಹಬ್ಬ ಆಚರಣಾ ಸಮಿತಿಯ ಅಧ್ಯಕ್ಷರಾಗಿ, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಭಜನಾಸಕ್ತರಾಗಿದ್ದ ಜಬ್ಬ ಪೂಜಾರಿಯವರು ಸ್ವತಃContinue reading ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಮಾಜಿ ಅಧ್ಯಕ್ಷರಾದ ಜಬ್ಬ ಪೂಜಾರಿ ಬಂಕೇರಕಟ್ಟ ಅಂಬಲಪಾಡಿ ನಿಧನ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತ ನಾಲ್ವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಸಾಮಾಜಿಕ ಕ್ಷೇತ್ರದಿಂದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ , ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ , ಸಿನಿಮಾ ಕ್ಷೇತ್ರದಿಂದ ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌ , ಸಂಗೀತ ಕ್ಷೇತ್ರದಿಂದ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಡಾ! ಶ್ಯಾಮಪ್ರಸಾದ್ ಮುಖರ್ಜಿ ಪ್ರೇರಣೆ;‌ ಡಾ! ವಿ. ಎಸ್. ಆಚಾರ್ಯ ಮಾರ್ಗದರ್ಶನ ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಪ್ರೇರಣೆ ಹಾಗೂ ನವ ಉಡುಪಿಯ ನಿರ್ಮಾತೃ ಡಾ! ವಿ.ಎಸ್. ಆಚಾರ್ಯರವರ ಮಾರ್ಗದರ್ಶನ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜು.6ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ಡಾ! ವಿ.ಎಸ್. ಆಚಾರ್ಯ ರವರ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪುಷ್ಪಾರ್ಚನೆಗೈದು ಮಾತನಾಡಿದರು.Continue reading ಡಾ! ಶ್ಯಾಮಪ್ರಸಾದ್ ಮುಖರ್ಜಿ ಪ್ರೇರಣೆ;‌ ಡಾ! ವಿ. ಎಸ್. ಆಚಾರ್ಯ ಮಾರ್ಗದರ್ಶನ ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ: ಕುಯಿಲಾಡಿ ಸುರೇಶ್ ನಾಯಕ್

ಜಿಲ್ಲೆಯಾದ್ಯಂತ ಮುಂದುವರಿದ ವ್ಯಾಪಕ ಮಳೆ: ನಾಳೆ(ಜುಲೈ 06) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜುಲೈ 05 : ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜು.06) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವಡೆ ಕೃತಕ ನೆರೆ ಉಂಟಾಗಿ ಮನೆಗಳಿಗೆ ನೀರು ನುಗ್ಗಿದೆ. ಇನ್ನು ಕೆಲವಡೆ ಹೆದ್ದಾರಿಗಳು, ರಸ್ತೆಗಳು ಜಲಾವೃತಗೊಂಡಿದೆ.ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂContinue reading “ಜಿಲ್ಲೆಯಾದ್ಯಂತ ಮುಂದುವರಿದ ವ್ಯಾಪಕ ಮಳೆ: ನಾಳೆ(ಜುಲೈ 06) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ”

ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಬರ್ಬರ ಕೊಲೆ : ಹಂತಕರು ಪರಾರಿ

ಹುಬ್ಬಳ್ಳಿ: ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಮಾರಾಕಾಸ್ತ್ರಗಳಿಂದ ಇರಿದು ಕೊಲೆಗೈಯ್ಯಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ಒಂದರ ರಿಸೆಪ್ಷನ್ ನಲ್ಲಿ ಕೊಲೆ ನಡೆದಿದ್ದು, ಹಂತಕರು ಪರಾರಿಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದಿದ್ದ ಹಂತಕರು ಗುರೂಜಿ ಜೊತೆ ಮಾತನಾಡುತ್ತಲೇ ಮಾರಾಕಾಸ್ತ್ರಗಳಿಂದ ಮಾರಾಣಾಂತಿಕ ಹಲ್ಲೆ ನಡೆಸಿದ್ದು, ಗುರೂಜಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೆಜಮಾಡಿ ವಿಠ್ಠಲ್ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ

ಉಡುಪಿ: ರಾಷ್ಟೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರು ಹಾಗೂ ಸಮಾಜ ಸೇವಕ ವೇದಮೂರ್ತಿ ವಿಠ್ಠಲ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತ ಪಡಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿ, ಹೆಜಮಾಡಿ ಮಲ್ಯರ ಮಠ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಅರ್ಚರಾಗಿ ಸೇವೆ ಸಲ್ಲಿಸಿರುವ ವೇದಮೂರ್ತಿ ವಿಠಲ್ ಭಟ್ ರವರು ಜು.1ರಂದು ನಿಧನರಾದರು. ಅವಿವಾಹಿತರಾಗಿದ್ದ ಅವರಿಗೆ 89 ವರ್ಷ ವಯಸ್ಸಾಗಿತ್ತು. ಹೆಜಮಾಡಿ ಗ್ರಾಮವೂ ಸೇರಿದಂತೆ ಕಾಪು ತಾಲೂಕಿನಲ್ಲಿ ಸಂಘದContinue reading ಹೆಜಮಾಡಿ ವಿಠ್ಠಲ್ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ

ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಬರ್ಖಾಸ್ತು ಮಾಡಲು ಎನ್. ರವಿಕುಮಾರ್ ಆಗ್ರಹ

ಬೆಂಗಳೂರು: ನೂಪುರ್ ಶರ್ಮರ ಹೇಳಿಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯಲಾಲ್ ಅವರನ್ನು ಅತ್ಯಂತ ಭಯಾನಕ, ಭೀಭತ್ಸ, ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕುರಿ, ಕೋಳಿ ಹತ್ಯೆಗಿಂತ ಭೀಕರವಾಗಿ ಹತ್ಯೆ ನಡೆದಿದೆ. ಇದು ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಬೆಂಗಳೂರಿನ ಬಿಜೆಪಿ ನಗರ ಕಾರ್ಯಾಲಯ “ಭಾವುರಾವ್ ದೇಶಪಾಂಡೆ ಭವನ” ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಡಿಯೋ ಮಾಡಿContinue reading “ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಬರ್ಖಾಸ್ತು ಮಾಡಲು ಎನ್. ರವಿಕುಮಾರ್ ಆಗ್ರಹ”

ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನ ಪ್ರಕರಣಗಳು!!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಏರಿಕೆ ಕಂಡಿದೆ. ಇಂದು ಒಟ್ಟು 1,249 ಪ್ರಕರಣಗಳು ದಾಖಲಾಗುವ ಮೂಲಕ ಆತಂಕ ಮೂಡಿಸಿದ್ದು, 2 ಮರಣ ಪ್ರಕರಣ ಕೂಡ ಇಂದು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 1,109 ಕೇಸ್ ಜೊತೆಗೆ ಏಕೈಕ ಮರಣ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 5,393ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ 31 ಮತ್ತು ದಕ್ಷಿಣ ಕನ್ನಡದಲ್ಲಿ 29 ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕContinue reading “ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನ ಪ್ರಕರಣಗಳು!!”

ಬಹುಮತ ಸಾಬೀತಿಗೂ ಮುನ್ನ ರಾಜಿನಾಮೆ ನೀಡಿದ “ಮಹಾ” ಸಿಎಂ!

ಮುಂಬಯಿ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ವಿಶ್ವಾಸ ಮತಯಾಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಾಳೆ ನಡೆಯಬೇಕಿದ್ದ ವಿಶ್ವಾಸ ಮತ ಯಾಚನೆಗೆ ತಡೆ ನೀಡಲು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಫೇಸ್ಬುಕ್ ಲೈವ್ ನಲ್ಲಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಉದ್ಧವ್ ಠಾಕ್ರೆ ಸಲ್ಲಿಸಿದ ರಾಜೀನಾಮೆ ಪತ್ರಕ್ಕೆ ರಾಜ್ಯಪಾಲರಿಂದ ಅಂಗೀಕಾರ ದೊರೆತಿದ್ದುContinue reading “ಬಹುಮತ ಸಾಬೀತಿಗೂ ಮುನ್ನ ರಾಜಿನಾಮೆ ನೀಡಿದ “ಮಹಾ” ಸಿಎಂ!”

Design a site like this with WordPress.com
Get started