ಉಡುಪಿ: ಜಿಲ್ಲಾ ಬಿಜೆಪಿ ಕಛೇರಿಗೆ ಎ.4ರಂದು ಭೇಟಿ ನೀಡಿದ ಕರ್ನಾಟಕ ಸರಕಾರದ ಮಾನ್ಯ ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಡಾ! ಮುರುಗೇಶ್ ನಿರಾಣಿ ಅವರನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಬಿಜೆಪಿContinue reading “ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರಿಗೆ ಜಿಲ್ಲಾ ಬಿಜೆಪಿಯಿಂದ ಸನ್ಮಾನ”
Category Archives: Uncategorized
ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಾಗೂ ಅಂಬೇಡ್ಕರ್ ಜಯಂತಿ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್ ಉಡುಪಿ: ಎ.6ರಂದು ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಪಕ್ಷದ ಧ್ವಜಾರೋಹಣಗೈದು ಬಿಜೆಪಿಯ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಬೇಕು ಹಾಗೂ ಎ.14ರಂದು ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆಯನ್ನು ಸೇವಾ ಕಾರ್ಯಗಳ ಮೂಲಕ ಯಶಸ್ವಿಗೊಳಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆContinue reading
ಬಿಜೆಪಿ ವಿಸ್ತಾರಕ ಅಭಿಯಾನ ಸದೃಢ ಪಕ್ಷ ಸಂಘಟನೆಗೆ ಪೂರಕ: ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ
ಉಡುಪಿ: ರಾಜ್ಯದ 58,000 ಬೂತ್ ಗಳಲ್ಲಿ ನಡೆಯುತ್ತಿರುವ ಬಿಜೆಪಿ ವಿಸ್ತಾರಕ ಅಭಿಯಾನವು ಪಕ್ಷದ ಸಂಘಟನಾತ್ಮಕ ವಿಚಾರದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಪಡೆದಿದೆ. ವಿಸ್ತಾರಕ ಅಭಿಯಾನವು ಸದೃಢ ಪಕ್ಷ ಸಂಘಟನೆಯ ಜೊತೆಗೆ ಸಶಕ್ತ ಬೂತ್ ನಿರ್ಮಾಣಕ್ಕೆ ಪೂರಕವಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆ ಸಂಘಟನಾತ್ಮಕವಾಗಿContinue reading “ಬಿಜೆಪಿ ವಿಸ್ತಾರಕ ಅಭಿಯಾನ ಸದೃಢ ಪಕ್ಷ ಸಂಘಟನೆಗೆ ಪೂರಕ: ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ”
ನಿಮ್ಮವರ್ತನೆಗಳನ್ನು ಸರಿಪಡಿಸಿಕೊಂಡು ಬನ್ನಿ ಮತ್ತೆ ಮಾತಾಡೋಣ…: ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ತಾಕೀತು
ಪ್ರಸ್ತುತ ನಾಡಿನಲ್ಲಿ ಹಿಂದು ಮುಸಲ್ಮಾನ್ ಸಮುದಾಯದ ನಡುವೆ ಉಂಟಾಗಿರುವ ಕಂದಕಕ್ಕೆ ಸಂಬಂಧಿಸಿ ಸಮಸ್ಯೆ ಪರಿಹಾರ ಗೊಳಿಸಬೇಕೆಂದು ಅಪೇಕ್ಷಿಸಿ ತಮ್ಮನ್ನು ಭೇಟಿಯಾದ ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಒಳ್ಳೆಯ ತಿಳುವಳಿಕೆಯ ಮಾತುಗಳನ್ನು ಹೇಳಿ ಕಳುಹಿಸಿದ್ದಾರೆ . ಈಗ ಉಂಟಾಗಿರುವ ಸಮಸ್ಯೆಗಳ ಹಿಂದೆ ಅನೇಕ ವರ್ಷಗಳ ನೋವು ಇದೆ .ಅದಕ್ಕೆ ಕಾರಣ ಯಾರು ಅನ್ನೋದನ್ನು ಆತ್ಮಾವಲೋಕನ ಮಾಡಿಕೊಳ್ಳಿ . ನಿರಂತರ ಗೋ ಸಾಗಾಟ ಗೋಹತ್ಯೆ ಯಾಕೆ ನಿಂತಿಲ್ಲ ? . ಜೀವನೋಪಾಯಕ್ಕೆ ಗೋವುಗಳನ್ನು ಸಾಕಿಕೊಂಡು ಬದುಕುತ್ತಿರುವವರ ಮನೆಗೆContinue reading “ನಿಮ್ಮವರ್ತನೆಗಳನ್ನು ಸರಿಪಡಿಸಿಕೊಂಡು ಬನ್ನಿ ಮತ್ತೆ ಮಾತಾಡೋಣ…: ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ತಾಕೀತು”
ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗದ ಸಭೆ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಾಧ್ಯಮ ವಿಭಾಗದ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಮಾ.28ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ರಾಜ್ಯ ಮಾಧ್ಯಮ ಪ್ರಕೋಷ್ಠದ ಸದಸ್ಯ ರಮೇಶ್ ರತನ್ ಪೂಜಾರಿಯವರು ಮಾತನಾಡಿ ಜಿಲ್ಲಾ ಮಾಧ್ಯಮ ವಿಭಾಗ ಮತ್ತು ಜಿಲ್ಲಾ ವಕ್ತಾರರು, ಸಹ ವಕ್ತಾರರ ಜವಾಬ್ದಾರಿ ಹಾಗೂ ಸಮನ್ವಯತೆಯ ಮಹತ್ವವನ್ನು ವಿವರಿಸಿ, ಮಂಡಲ ಮಾಧ್ಯಮ ವಿಭಾಗದ ಪರಿಣಾಮಕಾರಿ ನಿರ್ವಹಣೆಯ ಔಚಿತ್ಯದ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿContinue reading “ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗದ ಸಭೆ”
ಹೈಕೋರ್ಟ್ ತೀರ್ಪನ್ನು ದಿಕ್ಕರಿಸಿ ಬಂದ್ ನಡೆಸಿರುವುದು ಹಿಜಾಬ್ ವಿವಾದವನ್ನು ಇನ್ನಷ್ಟು ಜೀವಂತವಿರಿಸುವ ಹುನ್ನಾರ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಹಾಗೂ ಸಮವಸ್ತ್ರ ವಿಚಾರದಲ್ಲಿ ಹೈಕೋರ್ಟ್ ಮೆಟ್ಟಲೇರಿದ ಮುಸ್ಲಿಂ ಸಮುದಾಯದ ಕೆಲವು ವಿದ್ಯಾರ್ಥಿನಿಯರು ಇದೀಗ ಉಚ್ಛ ನ್ಯಾಯಾಲಯದ ನ್ಯಾಯಯುತ ತೀರ್ಪನ್ನು ಗೌರವಿಸದೆ ದಿಕ್ಕರಿಸಿರುವುದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಉತ್ತಮ ಬೆಳವಣಿಗೆಯಲ್ಲ. ಸಂವಿಧಾನ ಮತ್ತು ಈ ನೆಲದ ಕಾನೂನಿಗೆ ಗೌರವ ನೀಡದೆ ಕೋರ್ಟ್ ತೀರ್ಪಿನ ವಿರುದ್ಧ ಬಂದ್ ಆಚರಿಸುವುದು ಹಿಜಾಬ್ ವಿವಾದವನ್ನು ಇನ್ನಷ್ಟು ಜೀವಂತವಾಗಿರಿಸುವ ಹುನ್ನಾರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ನ್ಯಾಯಕ್ಕಾಗಿ ಹೈಕೋರ್ಟಿಗೆ ಮೊರೆ ಹೋದವರೇ ಇದೀಗ ಉಚ್ಛContinue reading “ಹೈಕೋರ್ಟ್ ತೀರ್ಪನ್ನು ದಿಕ್ಕರಿಸಿ ಬಂದ್ ನಡೆಸಿರುವುದು ಹಿಜಾಬ್ ವಿವಾದವನ್ನು ಇನ್ನಷ್ಟು ಜೀವಂತವಿರಿಸುವ ಹುನ್ನಾರ: ಕುಯಿಲಾಡಿ ಸುರೇಶ್ ನಾಯಕ್”
ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಮೌಲ್ಯಾಧಾರಿತ ತೀರ್ಪು: ಗುರುಪ್ರಸಾದ್ ಶೆಟ್ಟಿ ಕಟಪಾಡಿ
ಉಡುಪಿ: ಹಿಜಾಬ್ ಗೂ ಶಿಕ್ಷಣಕ್ಕೂ ಹೊಂದಾಣಿಕೆ ಸಲ್ಲದು. ಉಚ್ಚ ನ್ಯಾಯಾಲಯ ಹಿಜಾಬ್ ಪ್ರಕರಣದಲ್ಲಿ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಉತ್ತಮ ಮೌಲ್ಯಾಧಾರಿತ ತೀರ್ಪು ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ತಿಳಿಸಿದ್ದಾರೆ. ಶಿಕ್ಷಣವು ವಿದ್ಯಾರ್ಥಿಗಳ ಜೀವನದ ದಾರಿದೀಪ. ತಮ್ಮ ಭವ್ಯ ಭವಿಷ್ಯವನ್ನು ರೂಪಿಸುವಲ್ಲಿ ಒಂದು ಸುಗಮ ಮಾರ್ಗ. ಸಂವಿಧಾನಾತ್ಮಕ, ದೇಶದ ರಾಷ್ಟ್ರೀಯತೆ ಮತ್ತು ಏಕತೆಯ ಪ್ರತೀಕವಾಗಿರುವ ಶಿಕ್ಷಣವನ್ನು ವಿದ್ಯಾರ್ಥಿ ಸಮುದಾಯ ಹಾಗೂ ದೇಶವಾಸಿಗಳು ಅತೀ ಧನ್ಯತೆಯಿಂದ ಗೌರವಿಸಬೇಕಾಗಿದೆ. ಹಿಜಾಬ್ ಪ್ರಕರಣ ಉಡುಪಿಯಲ್ಲಿContinue reading “ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಮೌಲ್ಯಾಧಾರಿತ ತೀರ್ಪು: ಗುರುಪ್ರಸಾದ್ ಶೆಟ್ಟಿ ಕಟಪಾಡಿ”
ಉಚ್ಛ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಕುಯಿಲಾಡಿ
ಉಡುಪಿ: ರಾಜ್ಯಾದ್ಯಂತ ವಿವಾದ ಸೃಷ್ಠಿಸಿದ್ದ ಹಿಜಾಬ್ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯ ನೀಡಿರುವ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸರಕಾರದ ವಸ್ತ್ರ ಸಂಹಿತೆಯ ಆದೇಶವನ್ನು ಎತ್ತಿಹಿಡಿದ ಉಚ್ಛ ನ್ಯಾಯಾಲಯ, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಪಾಲನೆಯ ಪರವಾಗಿ ನೀಡಿರುವ ತೀರ್ಪು ಸಂವಿಧಾನಕ್ಕೆ ದೊರೆತ ಜಯವಾಗಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಜಾಬ್’ ಇಸ್ಲಾಂ ಅತ್ಯಗತ್ಯ ಭಾಗವಲ್ಲ – ‘ಹೈಕೋರ್ಟ್ ತ್ರಿಸದಸ್ಯ ಪೀಠ’ದಿಂದ ಮಹತ್ವದ ತೀರ್ಪು
ಬೆಂಗಳೂರು: ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ. ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂಬುದಾಗಿ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು ಐತಿಹಾಸಿಕ ತೀರ್ಪು ನೀಡಿ, ಹಿಜಾಬ್ ಧರಿಸಲು ಅನುಮತಿ ಕೋರಿದ್ದಂತಹ ರಿಟ್ ಅರ್ಜಿಗಳನ್ನು ವಜಾಗೊಳಿಸಿದೆ. ಇಂದು ಫೆಬ್ರವರಿ 25ರಿಂದ 11 ದಿನಗಳ ವಾದ-ಪ್ರತಿವಾದ ಆಲಿಸಿದ್ದಂತ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು, ತನ್ನ ತೀರ್ಪನ್ನು ಪ್ರಕಟಿಸಿದೆ. ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್,Continue reading “ಹಿಜಾಬ್’ ಇಸ್ಲಾಂ ಅತ್ಯಗತ್ಯ ಭಾಗವಲ್ಲ – ‘ಹೈಕೋರ್ಟ್ ತ್ರಿಸದಸ್ಯ ಪೀಠ’ದಿಂದ ಮಹತ್ವದ ತೀರ್ಪು”
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿಯವರಿಗೆ ಬಿಜೆಪಿ ಅಭಿನಂದನೆ
ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ನ್ಯಾಯವಾದಿ ಮನೋಹರ್ ಎಸ್. ಕಲ್ಮಾಡಿಯವರಿಗೆ ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಮಾ.14ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಮತ್ತು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನContinue reading “ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿಯವರಿಗೆ ಬಿಜೆಪಿ ಅಭಿನಂದನೆ”