Design a site like this with WordPress.com
Get started

ಆನ್ ಲೈನ್ ಶಿಕ್ಷಣ ರದ್ದುಗೊಳಿಸಲು ಆದೇಶ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡುವುದನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಲೇ ನಿಲ್ಲಿಸಬೇಕೆಂದು ಆದೇಶ ನೀಡಿದ್ದಾರೆ. ಚಿಕ್ಕಮಕ್ಕಳಿಗೆ ಆನ್ ಲೈನ್ ಶಿಕ್ಷಣ ಮಾನಸಿಕ ಒತ್ತಡ ಹೇರುತ್ತದೆ. ಇದರಿಂದ ಆರೋಗ್ಯಕ್ಕೂ ಒಳ್ಳೆಯದಲ್ಲ ಎಂದು ಹಲವು ತಜ್ಞರೇ ವರದಿ ನೀಡಿದ್ದರು. ಪೋಷಕರಿಂದಲೂ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು ಈ ಹಿನ್ನಲೆಯಲ್ಲಿ ಸುರೇಶ್ ಕುಮಾರ್ ಇಂದಿನಿಂದಲೇ 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸಿ ಆದೇಶContinue reading “ಆನ್ ಲೈನ್ ಶಿಕ್ಷಣ ರದ್ದುಗೊಳಿಸಲು ಆದೇಶ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್”

ದುಡ್ಡು ಮಾಡಲು ನಿಂತು ಬಿಟ್ಟ್ರಾ ಕೊರೋನಾ ವಾರಿಯರ್ಸ್!!!?

ದುಡ್ಡು ಮಾಡಲು ನಿಂತು ಬಿಟ್ರಾ ಕೊರೋನಾ ವಾರಿಯರ್ಸ್‌!!? ನಿಜಕ್ಕೂ ಇದು ಅಚ್ಚರಿ ಮೂಡಿಸುವ ವಿಚಾರ. KOVID 19 ಇಡೀ ಜಗತ್ತನ್ನೇ ಹಿಂಡಿ ಹಿಪ್ಪೆ ಮಾಡಿದೆ. ಜನತೆಯ ಬದುಕು ನಲುಗಿ ಹೋಗಿದೆ. ಜೀವನವೇ ಸಾಕಾಗಿಬಿಟ್ಟಿದೆ. ಸಾವು ಕಣ್ಣೆದುರಲ್ಲೇ ಇದೆ. ಆದರೂ ಜನರು ಬದಲಾಗಲಿಲ್ಲ!! ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕಾಗಿಬಂದಾಗ ಒಲ್ಲದ ಮನಸ್ಸಿನಿಂದಲೋ, ಸಾವಿನ ಭಯದಿಂದಲೋ ಒಗ್ಗಿಕೊಂಡರು ಒಂದಷ್ಟು ಅನಿಷ್ಟ ಮಂದಿಯ ಹೊರತಾಗಿ!? ಜನರ ಹಿತದೃಷ್ಟಿಯಿಂದ, ಆರ್ಥಿಕ ಚೇತರಿಕೆಗಾಗಿ ಹಂತಹಂತವಾಗಿ ಕಠಿಣ ಹಾಗೂ ಕಡ್ಡಾಯ ನೀತಿಗಳನ್ನು ಸಡಿಲಗೊಳಿಸುತ್ತಾ ಬಂದಂತೆಲ್ಲ ಜನತೆ ತಮ್ಮContinue reading “ದುಡ್ಡು ಮಾಡಲು ನಿಂತು ಬಿಟ್ಟ್ರಾ ಕೊರೋನಾ ವಾರಿಯರ್ಸ್!!!?”

ಇಂದಿನಿಂದ ರಾಜ್ಯದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮುಂಗಾರು ಮಳೆ ಇಂದಿನಿಂದ ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ. 12 ರಿಂದ 15 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ ಶಿವಮೊಗ್ಗದಲ್ಲಿ ಜೂ. 13 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.null ಇನ್ನು ಬುಧವಾರ ದಕ್ಷಿಣ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯಾಗಿದೆ. ಕೊಡಗು,Continue reading “ಇಂದಿನಿಂದ ರಾಜ್ಯದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್”

ಔಷಧೀಯ ಗುಣದ ಆಗರ ದೊಡ್ಡಪತ್ರೆ

ಹಿತ್ತಲಿನಲ್ಲಿ ಹೂವಿನ ಗಿಡಗಳೊಂದಿಗೆ ಔಷಧೀಯ ಸಸ್ಯಗಳನ್ನು ಕೂಡಾ ಬೆಳೆಸುತ್ತಿದ್ದರು. ಅವು ಅಲಂಕಾರ ಸಸ್ಯವಾಗಿ ಕಂಗೊಳಿಸುತ್ತಾ ಔಷಧಿಗೆ ಬಳಕೆಯಾಗುತ್ತಿತ್ತು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನವಿದೆ. ಇದು ಹಿಂದೆ ಕಾಲರಾದಂತಹ ರೋಗವನ್ನೇ ಹತೋಟಿಗೆ ತರುವಂತಹ ಶಕ್ತಿಯನ್ನು ಹೊಂದಿತ್ತು ಎಂದರೆ ಅಚ್ಚರಿಯಾಗಬಹುದು. ಇವತ್ತಿಗೂ ದೊಡ್ಡಪತ್ರೆ ಹೆಚ್ಚಿನ ಮನೆಗಳಲ್ಲಿ ಕಂಡು ಬರುತ್ತದೆ. ಇದನ್ನು ಸಾಂಬಾರ ಬಳ್ಳಿ, ಸಾವಿರ ಸಾಂಬಾರ(ಅಜವನದ ಎಲೆ), ಕರ್ಪೂರವಳ್ಳಿ ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ತೇವವಿರುವ ಮತ್ತು ಜವಳು ಮಣ್ಣಿನಲ್ಲಿ ಚೆನ್ನಾಗಿ ಬೆಳೆಯುತ್ತದೆ. ಮನೆಗಳಲ್ಲಿ ಹೂವಿನ ಕುಂಡದಲ್ಲಿಯೂContinue reading “ಔಷಧೀಯ ಗುಣದ ಆಗರ ದೊಡ್ಡಪತ್ರೆ”

ಜೂನ್ 11, 2020: ಗುರುವಾರ : ಇಂದಿನ ರಾಶಿ ಭವಿಷ್ಯ

ಮೇಷ ನೀವು ನಿಮ್ಮ ಸ್ನೇಹಿತರಿಂದಲೂ ಬೆಂಬಲವನ್ನು ಪಡೆಯುತ್ತೀರಿ. ಇದು ನಿಮ್ಮನ್ನು ಮುಂದುವರಿಯಲು ಪ್ರೇರೇಪಿಸುತ್ತದೆ. ವೃಷಭ ಬಹಳಷ್ಟು ಅನುಕೂಲಕರವಾಗಲಿದೆ. ಮತ್ತು ಹಣದ ಗಳಿಕೆಯ ಮೂಲಗಳು ನಿರಂತರವಾಗಿರುತ್ತವೆ. ಇದರಿಂದ ನೀವು ಸಂತೋಷವಾಗಿರುತ್ತೀರಿ ಕರ್ಕಾಟಕ ವೃತ್ತಿಪರ ಜೀವನದಲ್ಲಿ ಬದಲಾವಣೆಗಳು ಬರುತ್ತವೆ. ಬಹುಶಃ ಸ್ಥಳಾಂತರವು ಇರಬಹುದು. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಈ ವರ್ಷ ಸಾಧನೆಗಳಿಂದ ತುಂಬಿರಬಹುದು. ಮಿಥುನ ನೀವು ತುಂಬಾ ಅದೃಷ್ಟಶಾಲಿಯಾಗುತ್ತೀರಿ ಮತ್ತು ಉತ್ತಮ ಆರೋಗ್ಯವನ್ನು ಆನಂದಿಸುವಿರಿ. ನಿಮ್ಮ ದಿನಚರಿಯನ್ನು ನೀವು ನಿಯಮಿತವಾಗಿ ಇಟ್ಟುಕೊಳ್ಳಬೇಕು. ಸಿಂಹ ಪ್ರೀತಿಯ ಜೀವನವು ಇನ್ನಷ್ಟುContinue reading “ಜೂನ್ 11, 2020: ಗುರುವಾರ : ಇಂದಿನ ರಾಶಿ ಭವಿಷ್ಯ”

ಹೋಂ ಸೀಲ್ ಡೌನ್ ನಿವಾಸಿಗಳು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ ಜೂನ್ 10 : ಜಿಲ್ಲೆಗೆ ಮಹಾರಾಷ್ಠçದಿಂದ ಬರುವವರನ್ನು ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಿ ಆ ಮನೆಯನ್ನು ಸೀಲ್ ಡೌನ್ ಮಾಡುವ ಕುರಿತಂತೆ ಈಗಾಗಲೇ ಸರಕಾರದ ಆಧೇಶವಾಗಿದ್ದು, ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಎಪಿಡಮಿಕ್ ಆಕ್ಟ್ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ, ನೂತನ ಕ್ವಾರಂಟೈನ್ ನಿಯಮದ ಅನುಷ್ಠಾನ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಹಾರಾಷ್ಠçದಿಂದ ಬರುವವರನ್ನು 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಿContinue reading “ಹೋಂ ಸೀಲ್ ಡೌನ್ ನಿವಾಸಿಗಳು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಜಿ. ಜಗದೀಶ್”

ಉಡುಪಿ ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ ಜಾರಿ : ಜಿಲ್ಲಾಧಿಕಾರಿ ಜಿ ಜಗದೀಶ್

ಜಿಲ್ಲಾಧಿಕಾರಿಗಳು ಕ್ವಾರಂಟೈನ್ ವ್ಯವಸ್ಥೆಯಲ್ಲಿ, ಹೋಮ್ ಕ್ವಾರೆಂಟೈನ್ ನಿಂದ ಸಾಂಸ್ಥಿಕ ಕ್ವಾರಂಟೈನ್, ಸಾಂಸ್ಥಿಕ ಕ್ವಾರಂಟೈನ್ ನಿಂದ ಹೋಮ್ ಕ್ವಾರೆಂಟೈನ್‌ಗೆ ಬದಲಾವಣೆ ಮಾಡುವ ಅಧಿಕಾರವನ್ನು ಸರ್ಕಾರ ನೀಡಿದ್ದು, ಅದರಂತೆ , ಉಡುಪಿ ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದರುಅವರು ಬುಧವಾರ ಜಿಲ್ಲಾಪಂಚಾಯತ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ವಾರಂಟೈನ್ ನಿಯಮಗಳನ್ನು ಪಾಲಿಸಲು ಸಿದ್ದತೆ ನಡೆಸಿದ್ದು, ಉಡುಪಿ ಜಿಲ್ಲೆಗೆ ಬೇರೆ ರಾಜ್ಯದಿಂದ ಆಗಮಿಸುವ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಮಾಡಲಾಗುತ್ತಿದ್ದು, ಹೋಮ್ ಕ್ವಾರಂಟೈನ್ ನಲ್ಲಿರುವವರContinue reading “ಉಡುಪಿ ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮ ಜಾರಿ : ಜಿಲ್ಲಾಧಿಕಾರಿ ಜಿ ಜಗದೀಶ್”

ದಿನ ಭವಿಷ್ಯ: 10-06-2020

ಪಂಚಾಂಗ: ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು,ಜೇಷ್ಠ ಮಾಸ,ಕೃಷ್ಣ ಪಕ್ಷ, ಪಂಚಮಿ ತಿಥಿ,ಬುಧವಾರ, ಶ್ರವಣ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:23 ರಿಂದ 1:59ಗುಳಿಕಕಾಲ: ಬೆಳಗ್ಗೆ 10:47 ರಿಂದ 12:23ಯಮಗಂಡಕಾಲ: ಬೆಳಗ್ಗೆ 7:55 ರಿಂದ 9:11 ಮೇಷ: ಸ್ವಂತ ಉದ್ಯಮಸ್ಥರಿಗೆ ಲಾಭ, ವ್ಯವಹಾರಗಳಲ್ಲಿ ಅನುಕೂಲ, ಶುಭ ಕಾರ್ಯಗಳಲ್ಲಿ ಭಾಗಿ, ಬಂಧುಗಳ ಆಗಮನ, ಸುಖ ಭೋಜನ ಪ್ರಾಪ್ತಿ. ವೃಷಭ: ಮೌನವಾಗಿರುವುದು ಉತ್ತಮ, ಬಂಧುಗಳಿಂದ ತೊಂದರೆ, ಸ್ಥಳ ಬದಲಾವಣೆ, ಸ್ಥಿರಾಸ್ತಿ ಗಳಿಕೆ, ಕಾರ್ಯಗಳಲ್ಲಿ ವಿಳಂಬ. ಮಿಥುನ: ಹಿರಿಯರ ಮಾತಿಗೆ ಮನ್ನಣೆ, ಮುಂಗೋಪ ಅಧಿಕ, ಆತುರ ಸ್ವಭಾವದಿಂದ ತೊಂದರೆ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ,Continue reading “ದಿನ ಭವಿಷ್ಯ: 10-06-2020”

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಿಲೆಬಸ್ ಕಡಿಮೆ ಮಾಡಲು ಚಿಂತನೆ : ಸಚಿವ ಸುರೇಶ್ ಕುಮಾರ್

ಕೋವಿಡ್-19 ಕಾರಣದಿಂದ ಈ ವರ್ಷದ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವುದು ವಿಳಂಬವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ಪ್ರಸಕ್ತ ವರ್ಷದ ಶಾಲಾ ಪಠ್ಯವನ್ನು ಕಡಿಮೆ ಮಾಡಲು ಚಿಂತನೆ ಇದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್ ಕುಮಾರ್ ತಿಳಿಸಿದರು.ಅವರು ಮಂಗಳವಾರ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಉಡುಪಿ, ಉತ್ತರ ಕನ್ನಡ ಮತ್ತು ದ.ಕನ್ನಡ ಜಿಲ್ಲೆಗಳ , ಜಿಲ್ಲಾ ಪಂಚಾಯತ್ ಸಿಇಓ ಗಳು, ಡಿಡಿಪಿಐ ಗಳು ಮತ್ತು ಬಿಇಓ ಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆContinue reading “ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಿಲೆಬಸ್ ಕಡಿಮೆ ಮಾಡಲು ಚಿಂತನೆ : ಸಚಿವ ಸುರೇಶ್ ಕುಮಾರ್”

ಜೂ.14ರ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪದಗ್ರಹಣಕ್ಕೆ ಅನುಮತಿ ನಿರಾಕರಿಸಿದ ಸರಕಾರ

ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಿ ಮೂರು ನಾಲ್ಕು ತಿಂಗಳೇ ಕಳೆಯುತ್ತಿದೆ. ಕೊರೋನಾ ಸೋಂಕಿನ ಭೀತಿಯಿಂದ ಲಾಕ್ ಡೌನ್ ಘೋಷಣೆಯಿಂದಾಗಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣಕ್ಕೆ ಸಾದ್ಯವಾಗಿರಲಿಲ್ಲ. ಹೀಗಾಗಿ ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕೋರಿಕೊಂಡಿದ್ದರು. ಇದೀಗ ಡಿಕೆ ಶಿವಕುಮಾರ್ ಪತ್ರಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಸರ್ಕಾರ, ಕೊರೋನಾ ಭೀತಿಯ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲು ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಿಸಿದೆ. ಜೂನ್Continue reading “ಜೂ.14ರ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪದಗ್ರಹಣಕ್ಕೆ ಅನುಮತಿ ನಿರಾಕರಿಸಿದ ಸರಕಾರ”